Tag: ಕನಾಟಕ

  • ಹಾರಂಗಿ ಬಹುತೇಕ ಭರ್ತಿ – ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಾಂತ್ಯದಲ್ಲಿ ಹೆಚ್ಚು ಪ್ರಮಾಣದ ನೀರು ಸಂಗ್ರಹ

    ಹಾರಂಗಿ ಬಹುತೇಕ ಭರ್ತಿ – ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಾಂತ್ಯದಲ್ಲಿ ಹೆಚ್ಚು ಪ್ರಮಾಣದ ನೀರು ಸಂಗ್ರಹ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ (Harangi Dam) ಒಳಹರಿವು ಹೆಚ್ಚಾಗಿದ್ದು, ಜಲಾಶಯ ಭರ್ತಿಯಾಗುವತ್ತ ಸಾಗಿದೆ. ಅಣೆಕಟ್ಟು ಭರ್ತಿಯಾಗಲು 13 ಅಡಿಯಷ್ಟು ಬಾಕಿ ಉಳಿದಿದ್ದು, ಇತಿಹಾಸದಲ್ಲಿ ಮೊದಲ ಬಾರಿಗೆ ಮೇ ಅಂತ್ಯದಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.

    ನಿರಂತರ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಎಲ್ಲೆಡೆ ಸಾಧಾರಣ ಮಳೆ ಮುಂದುವರಿದಿದೆ. ಜೊತೆಗೆ ಆಗೊಮ್ಮೆ ಈಗೊಮ್ಮೆ ಧಾರಾಕಾರವಾಗಿ ಮಳೆಯಾ ಗುತ್ತಿದೆ. ಹೀಗಾಗಿ ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆ ಜಲಾಶಯಕ್ಕೆ 2,000 ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. ಸಾಮಾನ್ಯವಾಗಿ ಹಾರಂಗಿ ಜಲಾಶಯ ಭರ್ತಿಯಾಗುವುದು, ನೀರು ಬಿಡುಗಡೆಯಾಗುವುದು ಆಗಸ್ಟ್ ತಿಂಗಳಿನಲ್ಲಿ. ಒಮ್ಮೊಮ್ಮೆ ಹೆಚ್ಚು ಮಳೆಯಿದ್ದಾಗ ಜುಲೈ ತಿಂಗಳಾಂತ್ಯದಲ್ಲಿ ಭರ್ತಿಯಾಗುತ್ತದೆ. ಜೂನ್‌ನಲ್ಲಿ ಜಲಾಶಯ ಭರ್ತಿಯಾಗಿರುವುದೇ ಅಪರೂಪ. ಆದರೆ, ಈ ಬಾರಿ ಮೇ ತಿಂಗಳಾಂತ್ಯದಲ್ಲಿಯೇ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಇನ್ನು 4-5 ಅಡಿಗಳು ತುಂಬುತ್ತಿದ್ದಂತೆ ಜಲಾಶಯದಿಂದ ನೀರು ಬಿಡುಗಡೆ ಮಾಡ ಲಾಗುತ್ತದೆ. ಇದನ್ನೂ ಓದಿ: IPL Final | ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ – ಬಿ.ದಯಾನಂದ್

    ಮಳೆ ಹೀಗೆಯೇ ಮುಂದುವರಿದರೆ ಇಂದು ಅಥವಾ ಬುಧವಾರ ಹಾರಂಗಿ ಜಲಾಶಯದ ಕ್ರಸ್ಟ್ಗೇಟ್‌ಗಳ ಮೂಲಕ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ ನದಿ ಪಾತ್ರದ ಜನರು ತಮ್ಮ ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳಬೇಕು. ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತದೆ ಎಂದು ಹಾರಂಗಿ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್

  • ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ದೌರ್ಜನ್ಯ – ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿಸಿದ ಮರಾಠ ಪುಂಡರು

    ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ದೌರ್ಜನ್ಯ – ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿಸಿದ ಮರಾಠ ಪುಂಡರು

    ಚಿಕ್ಕೋಡಿ: ಕರ್ನಾಟಕದಲ್ಲಿಯೇ (Karnataka) ಕನ್ನಡಿಗರ ಮೇಲೆ ದೌರ್ಜನ್ಯ ನಡೆದಿದೆ. ಕನ್ನಡ ಧ್ವಜ (Kannada Flag) ಅಳವಡಿಸಿದ್ದಕ್ಕೆ ಕನ್ನಡಿಗ (Kannadiga) ಯುವಕರಿಗೆ ಮರಾಠ (Marathas) ಪುಂಡರು ಥಳಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿ ಅಳವಡಿಸಿದ್ದ ಕನ್ನಡ ಧ್ವಜವನ್ನು ತೆರವು ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿತ್ತು. ಅಳವಡಿಸಿದ್ದ ಧ್ವಜವನ್ನು ತೆರವು ಮಾಡುವಂತೆ ಮರಾಠ ಪುಂಡರು ಕನ್ನಡಿಗರಿಗೆ ಥಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಕೆಲ ಮರಾಠ ಸಮುದಾಯದವರು ಕನ್ನಡಿಗರ ಮೇಲೆ ಹಲ್ಲೆ ಮಾಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದಾರೆ. ಇದನ್ನೂ ಓದಿ: ಕರ್ತವ್ಯ ಲೋಪ ಆರೋಪ – ಮೂವರು ಪಿಎಸ್‌ಐ ಸೇರಿ ಐವರು ಪೊಲೀಸರ ಅಮಾನತು

    ಈ ಬಗ್ಗೆ 5 ಮರಾಠ ಪುಂಡರ ವಿರುದ್ಧ ಸಂಕೇಶ್ವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು

  • ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

    ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

    ಬೆಂಗಳೂರು: ತೆಲಂಗಾಣದಲ್ಲಿ (Telangana) ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ (Zameer Ahmed Khan) ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ (UT Khader) ಈಗ ಬಿಜೆಪಿಯವರೂ (BJP) ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.

    ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.

    ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ: ಮಧು ಬಂಗಾರಪ್ಪ

    ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು. ಇದನ್ನೂ ಓದಿ: ನಾಲ್ವರ ಕೊಂದ ಆರೋಪಿ ಮೇಲೆ ಜನಾಕ್ರೋಶ; ರಸ್ತೆ ತಡೆದು ಸಾರ್ವಜನಿಕರ ಪ್ರತಿಭಟನೆ, ಲಾಠಿ ಪ್ರಹಾರ – ಉಡುಪಿ ಉದ್ವಿಗ್ನ

  • ಅಂಧರ ವಿಶ್ವಕಪ್ – ಭಾರತ ತಂಡದಲ್ಲಿರುವ ಕರ್ನಾಟಕದ ಆಟಗಾರರನ್ನು ಅಭಿನಂದಿಸಿದ ಸಿಎಂ, ರಾಜ್ಯಪಾಲರು

    ಅಂಧರ ವಿಶ್ವಕಪ್ – ಭಾರತ ತಂಡದಲ್ಲಿರುವ ಕರ್ನಾಟಕದ ಆಟಗಾರರನ್ನು ಅಭಿನಂದಿಸಿದ ಸಿಎಂ, ರಾಜ್ಯಪಾಲರು

    – ಕರ್ನಾಟಕದ 6 ಆಟಗಾರರಿಗೆ ನಗದು ಪುರಸ್ಕಾರ ಘೋಷಿಸಿದ ಗೆಹ್ಲೋಟ್
    – ಆಟಗಾರರೊಂದಿಗೆ ಸಿಎಂ ಸ್ವಾರಸ್ಯಕರ ಚರ್ಚೆ

    ಬೆಂಗಳೂರು: ಐಬಿಎಸ್‌ಎ ವಿಶ್ವ ಕ್ರಿಕೆಟ್ ಪಂದ್ಯಾವಳಿಗಳಲ್ಲಿ (Cricket for Blind) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರು ಅಭಿನಂದಿಸಿದ್ದಾರೆ.

    ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮಹಿಳಾ ಅಂಧ ಕ್ರಿಕೆಟ್ ತಂಡಲ್ಲಿರುವ ಕರ್ನಾಟಕದ ಮೂವರು ಆಟಗಾರರನ್ನು ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಮೂವರು ಆಟಗಾರರನ್ನು ಅಭಿನಂದಿಸಿದರು.

    ವಿಶ್ವಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸಿದ ಭಾರತದ ಅಂಧರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ರಾಜ್ಯಪಾಲರು, ಈ ಗೌರವ ಹೆಚ್ಚಿಸುವಲ್ಲಿ ಕರ್ನಾಟಕದ ಆಟಗಾರರು ಪಾಲುದಾರರಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

    ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು. ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಅವರಿಗೆ ತಲಾ 51,000 ರೂ. ಮತ್ತು ಪುರುಷರ ತಂಡದ ಪ್ರಕಾಶ್ ಜೆ., ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಆಟಗಾರರಿಗೆ ತಲಾ 41,000 ರೂ. ನಗದು ಪ್ರೋತ್ಸಾಹವನ್ನು ನೀಡಲಾಗುವುದು ಎಂದು ರಾಜ್ಯಪಾಲರು ಘೋಷಿಸಿದರು.

    ಈ ಸಂದರ್ಭದಲ್ಲಿ ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

    ಆಟಗಾರರೊಂದಿಗೆ ಸಿದ್ದರಾಮಯ್ಯ ಸಂವಾದ:
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಕರ್ನಾಟಕದ ವರ್ಷಾ ಯು. ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಮತ್ತು ಪುರುಷರ ತಂಡದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಅಭಿನಂದಿಸಿದರು.

    ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಗೋವಿಂದ ರಾಜು ಅವರ ನೇತೃತ್ವದಲ್ಲಿ ಪದಕ ವಿಜೇತ ಆಟಗಾರರ ತಂಡ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿತು. ಗೋವಿಂದರಾಜು ಅವರ ಜತೆ ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಂಡು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಇದನ್ನೂ ಓದಿ: CWRC, CWMA, ಸುಪ್ರೀಂ ಕೋರ್ಟ್‌ ಮುಂದೆ ವಾಸ್ತವಾಂಶ ಇಟ್ಟರೂ ನ್ಯಾಯ ಸಿಗ್ತಿಲ್ಲ: ಸಿಎಂ

    ಕ್ರಿಕೆಟ್‌ಗೆ ಹೇಗೆ ತರಬೇತಿ ಪಡೆಯುತ್ತೀರಿ, ಬಾಲನ್ನು ಹೇಗೆ ಗುರುತಿಸುತ್ತೀರಿ, ಎಷ್ಟು ಪಂದ್ಯಗಳನ್ನು ಆಡಿದ್ದೀರಿ ಎನ್ನುವುದೂ ಸೇರಿದಂತೆ ಹಲವು ಕುತೂಹಲಕಾರಿ ಪ್ರಶ್ನೆಗಳ ಮೂಲಕ ಆಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ ಕಾಲ ಸಂವಾದ ನಡೆಸಿದರು.

    ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್, ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷ ಮಹಾಂತೇಶ್, ಕ್ಯಾಬಿ ಅಧ್ಯಕ್ಷ ಬೂಸಾಗೌಡ ಸಮರ್ಥನಮ್ ಟ್ರಸ್ಟ್ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್‌ ನೀರು ಹರಿಸಿ – ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಬಂದ್ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

    ಕರ್ನಾಟಕ ಬಂದ್ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

    ಮಂಗಳೂರು: ಕಾವೇರಿ (Cauvery) ನೀರನ್ನು ತಮಿಳುನಾಡಿಗೆ (Tamil Nadu) ಬಿಡುತ್ತಿರುವ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಸೇರಿದಂತೆ ರಾಜ್ಯಾದ್ಯಂದ ಶುಕ್ರವಾರ ಬಂದ್ (Karnataka Bandh) ನಡೆಸುತ್ತಿವೆ. ಆದರೆ ಕರಾವಳಿ ಭಾಗ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಮಂಗಳೂರಿನಲ್ಲಿ (Mangaluru) ಎಲ್ಲಾ ಹೋಟೆಲ್, ಪೆಟ್ರೋಲ್ ಬಂಕ್‌ಗಳು ತೆರೆದಿದ್ದು, ಎಲ್ಲಾ ಉದ್ಯಮಗಳೂ ಎಂದಿನಂತೆ ನಡೆಯುತ್ತಿವೆ. ಕರ್ನಾಟಕ ಬಂದ್ ಇದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರಿ ಕಚೇರಿಗಳು ಕೂಡಾ ಎಂದಿನಂತೆ ನಿರ್ವಹಿಸುತ್ತಿವೆ. ಜನರ ನಿತ್ಯದ ವಹಿವಾಟುಗಳು ಮುಂಜಾನೆಯಿಂದಲೇ ಆರಂಭವಾಗಿವೆ. ಇದನ್ನೂ ಓದಿ: ಕನ್ನಡ ಹೋರಾಟಗಾರರು ಗೂಂಡಾಗಳಲ್ಲ, ಬಸ್‍ಗಳಿಗೆ ಬೆಂಕಿ ಹಾಕಿಲ್ಲ: ಪ್ರವೀಣ್ ಶೆಟ್ಟಿ ಕಿಡಿ

    ಜೀವನದಿ ಕಾವೇರಿಗಾಗಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಇದಕ್ಕೆ ರಾಜ್ಯಾದ್ಯಂತ 1,600ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ-ಜೆಡಿಎಸ್ ಕೂಡಾ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿ ಸಂಜೆ 6 ಗಂಟೆ ವರೆಗೂ ನಡೆಯಲಿದೆ. ಇದನ್ನೂ ಓದಿ: ಕರ್ನಾಟಕ ಬಂದ್: ಬೆಳಗ್ಗೆಯಿಂದಲೇ ಬೀದಿಗಿಳಿಯಲಿದೆ ಸ್ಯಾಂಡಲ್ ವುಡ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]