Tag: ಕನಿಷ್ಕ್

  • ಲಾ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

    ಲಾ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

    ಬೆಂಗಳೂರು: ಕಾಲೇಜಿನ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

    ಕನಿಷ್ಕ್ (22) ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರಿನ ನ್ಯಾಷನಲ್ ಕಾನೂನು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಮೂಲತಃ ಉತ್ತರಪ್ರದೇಶದವನಾದ ಕನಿಷ್ಕ್ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರೊ ಇಂಡಿಯನ್ ಲಾ ಸ್ಕೂಲ್‍ನ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದನು.

    ಕಳೆದ ಮೂರು ದಿನಗಳಿಂದ ಸ್ನೇಹಿತರು ಕರೆದ್ರೂ ಕನಿಷ್ಕ್ ಹೊರಗೆ ಬಂದಿರಲಿಲ್ಲ. ಹೀಗಾಗಿ ಭಾನುವಾರ ಸ್ನೇಹಿತರು ಬಾಗಿಲು ಒಡೆದು ನೋಡಿದಾಗ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ.

    ಕಳೆದ ಗುರುವಾರವೇ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕನಿಷ್ಕ್ ಕಳೆದ ವರ್ಷದ ವಿಷಯ (ಸಬ್ಜೆಕ್ಟ್)ಗಳನ್ನು ಕ್ಲಿಯರ್ ಮಾಡಿಕೊಂಡಿರಲಿಲ್ಲ. ಅಲ್ಲದೆ ಆರೋಗ್ಯದ ಸಮಸ್ಯೆಯಿಂದ ಕೂಡ ಬಳಲುತ್ತಿದ್ದನು. ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೋಷಕರು ಶಂಕಿಸಿದ್ದಾರೆ.

    ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.