Tag: ಕನಿಷ್ಠ ಬೆಂಬಲ ಬೆಲೆ

  • 3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ – ಟಿಬಿ ಜಯಚಂದ್ರ

    3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ – ಟಿಬಿ ಜಯಚಂದ್ರ

    ನವದೆಹಲಿ: ರಾಜ್ಯದಲ್ಲಿ 2023-24ರ ಕೃಷಿ ಹಂಗಾಮಿನ ಹಿಂಗಾರಿನಲ್ಲಿ ಬೆಳೆದ 3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು (Safflower Crop) ಬೆಂಬಲ ಬೆಲೆ (MSP) ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ (TB Jayachandra) ಹೇಳಿದ್ದಾರೆ.

    ರಾಜ್ಯದ ಮಧ್ಯ ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 21,000 ಹೆಕ್ಟೇರ್ ಪ್ರದೇಶದಲ್ಲಿ ಕುಸುಬೆ ಬೆಳೆ ಕೃಷಿ ನಡೆಯುತ್ತಿದ್ದು, ರೈತರು (Farmers) ಸರಿಯಾದ ಬೆಲೆ ಇಲ್ಲದೇ ತೊಂದರೆ ಎದುರಿಸುತ್ತಿದ್ದರು. ಇದನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಅಪರ ಕಾರ್ಯದರ್ಶಿಯವರು ಕೇಂದ್ರ ಸಹಕಾರ ಇಲಾಖೆ ಕಾರ್ಯದರ್ಶಿಯವರಿಗೆ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ವ್ಯಾಪ್ತಿಗೆ ತರಲು ಕೋರಿದ್ದರು. ಇದನ್ನೂ ಓದಿ: ಮದ್ದೂರು ಶಾಸಕ ಉದಯ್‌ ಮನೆಯಲ್ಲೇ ಗನ್‌ಮ್ಯಾನ್‌ ಮೇಲೆ ಹಲ್ಲೆ ನಡೆಸಿತ್ತು ದರ್ಶನ್‌ ಗ್ಯಾಂಗ್‌!

    ಬಳಿಕ ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಮನವಿಯನ್ನು ಮುತುವರ್ಜಿ ವಹಿಸಿ ಸಂಬಂಧಿಸಿದ ಇಲಾಖೆಗಳೊಡನೆ ಪತ್ರ ವ್ಯವಹಾರ ಹಾಗೂ ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರದಿಂದ ಅಂತಿಮವಾಗಿ ಅನುಮತಿ ಪಡೆದಿದೆ. ರಾಜ್ಯ ಸರ್ಕಾರವು ಸಂಬಂಧಿಸಿದ ನೋಡಲ್ ಏಜೆನ್ಸಿಗಳ ಸಮನ್ವಯತೆಯೊಂದಿಗೆ ಮುಂಬರುವ ದಿನಗಳಲ್ಲಿ ಬೆಂಬಲ ಬೆಲೆಯಲ್ಲಿ ಕುಸುಬೆ ಬೆಳೆ ಖರೀದಿಗೆ ಕ್ರಮ ವಹಿಸಲಿದೆ ಎಂದು ಜಯಚಂದ್ರ ವಿವರಿಸಿದರು. ಇದನ್ನೂ ಓದಿ: ವಿಧಾನಸೌಧ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ

    ಕಳೆದ ಒಂದು ದಿನದ ಹಿಂದೆಯಷ್ಟೇ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ, ರಾಗಿ, ತೊಗರಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50 ರಷ್ಟು ಎಂಎಸ್‌ಪಿ ಹೆಚ್ಚಿಸಿದೆ. ಭತ್ತದ ಮೇಲಿನ ಎಂಎಸ್‌ಪಿಯನ್ನು 143 ರೂಪಾಯಿ ಹೆಚ್ಚಿಸಿದ್ದು, ಭತ್ತದ ಕನಿಷ್ಠ ಬೆಲೆ ಈಗ 2,300 ರೂಪಾಯಿ ಆಗಿದೆ. ಅದೇ ರೀತಿ ರಾಗಿಗೆ 268 ರೂ., ಗೋಧಿ 150 ರೂ., ಮೆಕ್ಕೆ ಜೋಳ 128 ರೂ., ಜೋಳ 210 ರೂ., ಸಜ್ಜೆ 150 ರೂ., ತೊಗರಿ 400 ರೂ., ಹೆಸರುಬೇಳೆ 803 ರೂ., ಉದ್ದಿನ ಬೇಳೆ 350 ರೂ., ಕಡಲೆಕಾಯಿ 527 ರೂ., ಸೂರ್ಯಕಾಂತಿ 360 ರೂ., ಸೋಯಾಬೀನ್ 300 ರೂ., ಹತ್ತಿ 400 ರೂ., ಎಳ್ಳಿ 632 ರೂ., ಹುಚ್ಚೆಳ್ಳಿ 983 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ 2 ಲಕ್ಷ ರೈತರಿಗೆ ಲಾಭವಾಗಲಿದೆ. ಸರ್ಕಾರಕ್ಕೆ 35,000 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದೀಗ ಕುಸುಬೆ ಬೆಳೆಯನ್ನೂ ಎಂಎಸ್‌ಪಿ ಯೋಜನೆ ಅಡಿಗೆ ತಂದಿರುವುದು ರೈತರರಲ್ಲಿ ಸಂತಸ ತಂದಿದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಹೃದಯಾಘಾತದಿಂದ ಸಾವು

  • ಕೇಂದ್ರದಲ್ಲಿ ʻಕೈʼ ಹಿಡಿದರೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ – ರೈತರಿಗೆ ಸಿಎಂ ಹೊಸ ಗ್ಯಾರಂಟಿ

    ಕೇಂದ್ರದಲ್ಲಿ ʻಕೈʼ ಹಿಡಿದರೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ – ರೈತರಿಗೆ ಸಿಎಂ ಹೊಸ ಗ್ಯಾರಂಟಿ

    ಬೆಳಗಾವಿ: ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್‌ಪಿಪಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆಯ (Agriculture Department) ಆಶ್ರಯದಲ್ಲಿ ಸುವರ್ಣಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಫಲಾನುಭವಿ ರೈತರಿಗೆ ವಿವಿಧ ಕೃಷಿ ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಲ್ಲಿ 196 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಒಟ್ಟಾರೆ 18,171 ಕೋಟಿ ಬೆಳೆ ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದ್ರೆ ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ರೈತರಿಗೆ (Farmers) ತಲಾ 2 ಸಾವಿರ ರೂ.ಗಳಂತೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ 631 ಕೋಟಿ ರೂ. ನೆರವು ನೀಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೃಷಿಹೊಂಡ ಯೋಜನೆಯನ್ನು ಕೂಡ ಇದಕ್ಕೂ ಮುಂಚಿನ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಬಾರಿ 200 ಕೋಟಿ ರೂ. ಒದಗಿಸುವ ಮೂಲಕ ಕೃಷಿಭಾಗ್ಯ ಯೋಜನೆಗೆ (Krushi Bhagya Scheme) ಮರುಚಾಲನೆ ನೀಡಲಾಗಿದೆ.

    900 ಕೋಟಿ ಮೊತ್ತದ ಕೃಷಿ ಸಲಕರಣೆ ವಿತರಣೆ:
    ಬೆಳಗಾವಿ ವಿಭಾಗೀಯ ಮಟ್ಟದಲ್ಲಿ 2,700 ರೈತರಿಗೆ 13.12 ಕೋಟಿ ರೂ. ಮೊತ್ತದ ವಿವಿಧ ಬಗೆಯ ಕೃಷಿ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ರಾಜ್ಯದಾದ್ಯಂತ ಒಟ್ಟಾರೆ 900 ಕೋಟಿ ರೂ.ಗಿಂತಲೂ ಅಧಿಕ ಮೊತ್ತದ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ಗೆ ಈಗ ಮೆಟ್ರೋ ಸವಾರಿ; ಆಗ್ರಾ ಮೆಟ್ರೋ ಕಾರಿಡಾರ್ ಉದ್ಘಾಟಿಸಿದ ಮೋದಿ

    ಆಧುನಿಕ ಯಂತ್ರೋಪಕರಣಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಸಹಾಯಧನದ ಮೂಲಕ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ರೈತರಿಗೆ ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವೆಲ್ಲ ಕುರ್ಚಿಗಾಗಿ ಹೊಡೆದಾಡ್ತೀವಿ, ನೀವು ಕುರ್ಚಿ ಇದ್ರೂ ಯಾಕೆ ಕೂರಲ್ಲ: ಡಿಕೆಶಿ ಪ್ರಶ್ನೆ

    ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಿರುವ ರೈತರಿಗೂ ಸಹಾಯಧನ ಆಧಾರಿತ ಯಂತ್ರೋಪಕರಣ ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿ ಅಭಿವೃದ್ಧಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ನೀರಾವರಿ, ಕೃಷಿ ಪದ್ಧತಿ, ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ಸೇರಿದಂತೆ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

  • ಭತ್ತ, ಬೇಳೆ ಕಾಳು, ರಾಗಿಗಳ ಎಂಎಸ್‍ಪಿ ಹೆಚ್ಚಳ – ಹಿಂದೆ ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

    ಭತ್ತ, ಬೇಳೆ ಕಾಳು, ರಾಗಿಗಳ ಎಂಎಸ್‍ಪಿ ಹೆಚ್ಚಳ – ಹಿಂದೆ ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

    ನವದೆಹಲಿ: ಗ್ರಾಮೀಣ ಪ್ರದೇಶದ ರೈತರ (Farmers) ಆದಾಯವನ್ನು ಹೆಚ್ಚಿಸುವ ಹಾಗೂ ಬೆಳೆ ವೈವಿಧ್ಯತೆಯನ್ನು ಉತ್ತೇಜಿಸುವ ಉದ್ದೇಶದಿಂದ ಖಾರಿಫ್ ಕಾಲದ ಬೆಳೆಗಳಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (Minimum Support Prices) ಹೆಚ್ಚಳ ಮಾಡಿದೆ.

    ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. 2023-24ರ ಮಾರುಕಟ್ಟೆಯ ಎಲ್ಲಾ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸುವುದಾಗಿ ಕೇಂದ್ರ ಘೋಷಿಸಿದೆ. ಇದನ್ನೂ ಓದಿ: ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

    ಭಾರತದ ಅತ್ಯಂತ ವ್ಯಾಪಕವಾಗಿ ಬೆಳೆಯುವ ಬೆಳೆಯಾದ ಭತ್ತವು ಅದರ ಕನಿಷ್ಠ ಬೆಂಬಲ ಬೆಲೆಯಲ್ಲಿ 100 ಕೆಜಿಗೆ (ಕ್ವಿಂಟಲ್) 2040 ರೂ. ರಿಂದ ಸಾಮಾನ್ಯ ತಳಿಗೆ 2183 ರೂ., ಗ್ರೇಡ್ ಎ ತಳಿಗೆ 2060 ರೂ. ನಿಂದ 2203 ರೂ. ಏರಿಕೆ ಮಾಡಲಾಗಿದೆ.

    ಬೇಳೆಕಾಳುಗಳು, ಎಣ್ಣೆಕಾಳುಗಳು, ಹತ್ತಿ ಮತ್ತು ರಾಗಿಯಂತಹ ಇತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯಲ್ಲಿ 4% ರಿಂದ 12% ವರೆಗೆ ಹೆಚ್ಚಳ ಆಗಿದೆ. ಈ ಹೆಚ್ಚಳವು ರೈತರಿಗೆ ಅವರ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ 50% ಲಾಭಾಂಶವನ್ನು ಖಾತರಿಪಡಿಸುವ ನೀತಿ ಇದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

    ಸರ್ಕಾರ ಕೈಗೊಂಡಿರುವ ಈ ಕ್ರಮವು ರೈತರನ್ನು ತಮ್ಮ ಬೆಳೆಗಳನ್ನು ವೈವಿಧ್ಯಗೊಳಿಸಲು ಮತ್ತು ಹೆಚ್ಚಿನ ಇಳುವರಿ ನೀಡುವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ. ಇದು ದ್ವಿದಳ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಪೌಷ್ಠಿಕ-ಧಾನ್ಯಗಳಿಗೆ ಉತ್ತೇಜಕವಾಗಿದೆ ಎಂದು ಸಚಿವಾಲಯ ತಿಳಿಸಿದೆ.

    2022-23 ರ ಒಟ್ಟು ಆಹಾರ ಧಾನ್ಯ ಉತ್ಪಾದನೆಯನ್ನು 330.5 ಮಿಲಿಯನ್ ಟನ್‍ಗಳಿಗೆ ನಿರೀಕ್ಷಿಸಲಾಗಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 14.9 ಮಿಲಿಯನ್ ಟನ್‍ಗಳ ಹೆಚ್ಚಳವಾಗಿದೆ. ಇದು ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಏರಿಕೆಯಾಗಿದೆ ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

    ಕನಿಷ್ಠ ಬೆಂಬಲ ಬೆಲೆ ಎನ್ನುವುದು ರೈತರಿಂದ ಬೆಳೆಗಳನ್ನು ಖರೀದಿಸಲು ಸರ್ಕಾರ ನಿಗದಿಪಡಿಸಿದ ದರವಾಗಿದೆ. ಇದು ಮಾರುಕಟ್ಟೆಯ ಬೆಲೆ ಏರಿಳಿತಗಳ ವಿರುದ್ಧ ಸುರಕ್ಷತಾ ಬೆಲೆಯಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ

  • ಕನಿಷ್ಠ ಬೆಂಬಲ ಬೆಲೆ ಘೋಷಣೆ ಗಿಮಿಕ್, ಈ ವಿಚಾರದಲ್ಲಿ ಮೋದಿ ನಿಸ್ಸೀಮ: ಪರಮೇಶ್ವರ್

    ಕನಿಷ್ಠ ಬೆಂಬಲ ಬೆಲೆ ಘೋಷಣೆ ಗಿಮಿಕ್, ಈ ವಿಚಾರದಲ್ಲಿ ಮೋದಿ ನಿಸ್ಸೀಮ: ಪರಮೇಶ್ವರ್

    ಬೆಂಗಳೂರು: ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ನಡೆ ಲೋಕಸಭಾ ಚುನಾವಣೆ ಗಿಮಿಕ್, ಪ್ರಧಾನಿ ನರೇಂದ್ರ ಮೋದಿ ಅವರು ಇಂತಹದಕ್ಕೆ ನಿಸ್ಸೀಮರು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ವ್ಯಂಗ್ಯವಾಡಿದ್ದಾರೆ.

    ನಾಲ್ಕು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಬಹುದಿತ್ತು. ಆದರೆ ಹಾಗೇ ಮಾಡಲಿಲ್ಲ. ಈಗ ಕೇಂದ್ರದ ಬಿಜೆಪಿ ಸರ್ಕಾರದ ಅಧಿಕಾರ ಅವಧಿ ಪೂರ್ಣಗೊಳ್ಳಲು ಒಂದು ವರ್ಷ ಮಾತ್ರ ಬಾಕಿ ಇದೆ. ನಾಲ್ಕು ವರ್ಷ ಏರಿಕೆ ಮಾಡದೇ ಈಗ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಲೋಕಸಭಾ ಚುನಾವಣೆ ಉದ್ದೇಶದಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೈತರಿಗೆ ಮೋದಿಯಿಂದ ಬಂಪರ್ ಗಿಫ್ಟ್: ಯಾವ ಬೆಳೆಗೆ ಎಷ್ಟು ಕನಿಷ್ಠ ಬೆಂಬಲ ಬೆಲೆ? ಇಲ್ಲಿದೆ ಪೂರ್ಣ ಮಾಹಿತಿ

    ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಲು ನನಗೆ ಅವಕಾಶ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಯೂತ್ ಅಧ್ಯಕ್ಷರಾಗಿದ್ದರು. ಅಲ್ಲದೇ ನಾಲ್ಕು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿದ್ದವರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸಾರಥ್ಯ ಅವರಿಗೆ ದೊರೆತಿದೆ ಎಂದು ಹೇಳಿದರು.

  • ರೈತರಿಗೆ ಮೋದಿಯಿಂದ ಬಂಪರ್ ಗಿಫ್ಟ್: ಯಾವ ಬೆಳೆಗೆ ಎಷ್ಟು ಕನಿಷ್ಠ ಬೆಂಬಲ ಬೆಲೆ? ಇಲ್ಲಿದೆ ಪೂರ್ಣ ಮಾಹಿತಿ

    ರೈತರಿಗೆ ಮೋದಿಯಿಂದ ಬಂಪರ್ ಗಿಫ್ಟ್: ಯಾವ ಬೆಳೆಗೆ ಎಷ್ಟು ಕನಿಷ್ಠ ಬೆಂಬಲ ಬೆಲೆ? ಇಲ್ಲಿದೆ ಪೂರ್ಣ ಮಾಹಿತಿ

    ನವದೆಹಲಿ: ಭತ್ತ, ಕಬ್ಬು, ತೊಗರಿ ಸೇರಿದಂತೆ 17 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

    ಇತ್ತೀಚೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ರೈತ ಪ್ರತಿನಿಧಿಗಳು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಭತ್ತ, ಕಬ್ಬು ಸೇರಿದಂತೆ ಮತ್ತಿತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಳೆಗಳ ಉತ್ಪಾದನಾ ವೆಚ್ಚಕ್ಕಿಂತ ಒಂದೂವರೆ ಪಟ್ಟು ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದಾಗಿ ಭರವಸೆ ನೀಡಿದ್ದರು.

    ಯಾವ ಬೆಳೆ, ಎಷ್ಟು ಏರಿಕೆ?
    ದೇಶದ ಪ್ರಮುಖ ಬೆಳೆಯಾಗಿರುವ ಭತ್ತದ ಬೆಲೆ ಪ್ರತಿ ಕ್ವಿಂಟಲ್‍ಗೆ 200 ರೂ. ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಏರಿಸುವ ನಿರ್ಧಾರ ಕೈಗೊಂಡಿದೆ. ಹೀಗಾಗಿ ಸಾಮಾನ್ಯ ಭತ್ತದ ಸದ್ಯದ ಬೆಲೆ 1,550 ರೂ. ಇದ್ದು, ಅದನ್ನು 1,750 ರೂ.ಗೆ ಹೆಚ್ಚಳ ಮಾಡಿದೆ. ಅಲ್ಲದೇ ಎ ಗ್ರೇಡ್ ಭತ್ತದ ಬೆಲೆಯನ್ನು 1,590 ರೂ. ದಿಂದ 1,770 ರೂ., ಸೋಯಾಬೀನ್ ಬೆಲೆ 3,050 ರೂ. ದಿಂದ 3,399 ರೂ., ಶೇಂಗಾ ಬೆಲೆ 4,450 ರೂ. ದಿಂದ 4,890 ರೂ. ಹೆಚ್ಚಳ ಮಾಡಿದೆ.

    ರಾಗಿಯ ಬೆಲೆ ಸದ್ಯ ಪ್ರತಿ ಕ್ವಿಂಟಾಲ್‍ಗೆ 1,900 ರೂ. ಇದ್ದು, 2,897 ರೂ.ಗೆ ಏರಿಕೆ ಸೇರಿದಂತೆ, ನೈಗರ್ ಸೀಡ್ (ಗುರೆಳ್ಳು) ಬೆಲೆ 4,050 ರೂ. ನಿಂದ 5,877 ರೂ., ಹೈಬ್ರೀಡ್ ಜೋಳದ ಬೆಲೆ 1,700 ರೂ. ದಿಂದ 2,430 ರೂ., ಜವಾರಿ ಜೋಳದ ಬೆಲೆ 1,725 ರೂ. ದಿಂದ 2450 ರೂ., ಸಜ್ಜೆಯ ಬೆಲೆ 1,425 ರೂ. ರಿಂದ 1,950 ರೂ., ಸೂರ್ಯಕಾಂತಿ ಬೀಜದ ಬೆಲೆ 4,100 ರೂ. ದಿಂದ 5,388 ರೂ., ಹತ್ತಿ (ಮಧ್ಯಮ ಎಳೆ) ಬೆಲೆ 4,020 ರೂ. ದಿಂದ 5,150 ರೂ., ಹತ್ತಿ (ಉದ್ದ ಏಳೆ) ಬೆಲೆ 4320 ರೂ. ದಿಂದ 5,450 ರೂ. ಏರಿಕೆಗೆ ಕ್ಯಾಬಿನೇಟ್‍ನಲ್ಲಿ ಅನುಮೋದನೆ ದೊರೆತಿದೆ.

    ಹೆಸರು ಕಾಳು ಬೆಲೆ ಪ್ರತಿ ಕ್ವಿಂಟಲ್‍ಗೆ 5,575 ರೂ. ದಿಂದ 6,249 ರೂ. ಏರಿಕೆ ಸೇರಿದಂತೆ, ಗೋವಿನ ಜೋಳ 1425 ರೂ. ದಿಂದ 1700 ರೂ., ಎಳ್ಳು ಬೆಲೆ 5,300 ರೂ. ದಿಂದ 6249 ರೂ., ತೊಗರೆ ಬೆಳೆ 5,450 ರೂ. ದಿಂದ 5,675 ರೂ., ಉದ್ದು 5,400 ರೂ. ದಿಂದ 5,600 ರೂ. ನಿಗದಿ.

    ಕಬ್ಬಿಗೆ ನೀಡುವ `ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ (ಎಫ್‍ಆರ್‍ಪಿ)’ ಮುಂದಿನ ಎರಡು ವಾರಗಳಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ. ಉತ್ತರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ಪಂಜಾಬ್ ಸೇರಿದಂತೆ ವಿವಿಧ ರಾಜ್ಯದ ಹೆಚ್ಚು ಇಳುವರಿ ಪಡೆಯುವ 140 ಕಬ್ಬು ಬೆಳೆಗಾರರ ಜೊತೆಗೆ ಪ್ರಧಾನಿ ಚರ್ಚೆ ನಡೆಸಿದ್ದರು.

    2019ರ ಲೋಕಸಭಾ ಚುನಾವಣೆ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡುತ್ತಿದ್ದಾರೆ. ಕೃಷಿ ಕ್ಷೇತ್ರ ಅಷ್ಟೇ ಅಲ್ಲದೆ ಸಕ್ಕರೆ ಉತ್ಪಾದನೆಗೂ 8,500 ಕೋಟಿ ರೂ. ಪ್ಯಾಕೇಜ್ ಸೇರಿದಂತೆ ಹಲವು ಘೋಷಣೆಗಳನ್ನು ಪ್ರಧಾನಿ ಮಾಡುವ ಸಾಧ್ಯತೆಯಿದೆ.