ಕರ್ನಾಟಕದಲ್ಲಿ ಕಮಲ್ ಹಾಸನ್ (Kamal Haasan) ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ `ಕನ್ನಡತಿ’ (Kannadathi) ಧಾರವಾಹಿ ಖ್ಯಾತಿಯ ರಂಜನಿ ರಾಘವನ್ (Ranjani Raghavan), ಕಮಲ್ ಹಾಸನ್ ಅವರಿಗೆ ತಾವು ಬರೆದ ಕನ್ನಡದ ಪುಸ್ತಕವನ್ನು ನೀಡಿರುವ ಪೋಸ್ಟ್ ಅನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಇದೀಗ ರಂಜನಿ ರಾಘವನ್ ತಮ್ಮ ಖಾತೆಯಲ್ಲಿ ಕಮಲ್ ಸರ್‌ಗೆ `ಕನ್ನಡ’ ಪುಸ್ತಕ ಎಂದು ಬರೆದುಕೊಂಡು ಕಮಲ್ ಹಾಸನ್ ಅವರಿಗೆ ತಾವು ಬರೆದಿರುವ `ಸ್ಟೈಲ್ ರೈಟ್’ ಮತ್ತು `ಕಥೆ ಡಬ್ಬಿ’ ಎಂಬ ಪುಸ್ತಕಗಳನ್ನು ನೀಡಿದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: I’m Loving It – ಕೊನೆಗೂ ಬ್ರೇಕಪ್ ಬಗ್ಗೆ ಮೌನಮುರಿದ ಸಿಡ್ನಿ ಸ್ವೀನಿ!
ಆದರೆ ಅವರು ಈ ಪುಸ್ತಕವನ್ನು ಯಾವಾಗ ನೀಡಿದ್ದಾರೆ ಎಂಬುದರ ಬಗ್ಗೆ ಉಲ್ಲೇಖಿಸಿಲ್ಲ. ಕನ್ನಡ ಮೇಷ್ಟ್ರಮ್ಮ ಅವರ ಈ ಪೋಸ್ಟ್‌ಗೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜೈ ಕನ್ನಡಾಂಬೆ, ಕಮಲ್‌ಗೆ ಕನ್ನಡ ಪಾಠ ಕಲಿಸಿದ ಕನ್ನಡತಿ ಎಂಬೆಲ್ಲಾ ಕಾಮೆಂಟ್ ಸುರಿಮಳೆಗಳನ್ನೇ ಹರಿಸಿದ್ದಾರೆ. ಇದನ್ನೂ ಓದಿ: ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್ ಅಯ್ಯರ್ ಅರ್ಹರು – ರಾಜಮೌಳಿ
ರಂಜನಿ ರಾಘವನ್ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕನ್ನಡತಿ ಧಾರವಾಹಿಯಲ್ಲಿ ಕನ್ನಡ ಉಪನ್ಯಾಸಕಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನದಲ್ಲಿ ಕನ್ನಡದ ಮೇಷ್ಟ್ರಾಗಿ ಅಚ್ಚೆ ಹಾಕಿದ್ದರು. ಈ ಧಾರವಾಹಿಯ ಬಳಿಕ ಅವರು ನಟನೆಯಿಂದ ದೂರ ಉಳಿದು ನಿರ್ದೇಶದತ್ತ ಹೆಜ್ಜೆ ಇಟ್ಟಿದ್ದಾರೆ. `ಡಿ ಡಿ ಡಿಕ್ಕಿ’ ಚಿತ್ರವನ್ನು ನಿರ್ದೇಶಿದ್ದು, ಸದ್ಯ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.
ಮತ್ತೊಬ್ಬ ನಟಿ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ. ಸಾಗರ್ ಭಾರಧ್ವಜ್ (Sagar Bharadwaj) ಎಂಬುವವರ ಜೊತೆ ರಂಜನಿ ರಾಘವನ್ ಎಂಗೇಜ್ ಆಗಿದ್ದಾರೆ. ಜೀವನ ಸಂಗಾತಿ, ನನ್ನ ಹುಡುಗ ಎಂದು ಹ್ಯಾಶ್ ಟ್ಯಾಗ್ ಕೊಟ್ಟು ಫೋಟೋ ಶೇರ್ ಮಾಡಿ ನಟಿ ಸಂಭ್ರಮಿಸಿದ್ದಾರೆ.
ಅಂತೂ ಇಂತೂ ನಟಿ ಬಾಯ್‌ಫ್ರೆಂಡ್ ಪರಿಚಯ ಮಾಡಿಕೊಟ್ಟಿದಕ್ಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇಬ್ಬರಿಗೂ ಶುಭಕೋರುತ್ತಿದ್ದಾರೆ. ಮದುವೆ ಯಾವಾಗ? ಎಂಬ ವಿವರ ಇನ್ನಷ್ಟೇ ರಿವೀಲ್ ಆಗಬೇಕಿದೆ.
ಅಂದಹಾಗೆ, ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್, ಕಾಂಗರೂ ಸಿನಿಮಾ, ರಾಜಹಂಸ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಕನ್ನಡತಿ, ನಮ್ಮ ಲಚ್ಚಿ, ಅಮೃತಧಾರೆ (Amruthadaare) ಸೀರಿಯಲ್ ಮೂಲಕ ಗಮನ ಸೆಳೆದ ಸಾರಾ ಅಣ್ಣಯ್ಯ (Sara Annaiah) ಅವರು ಸದ್ಯ ಹಾಟ್ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಎದೆಯ ಗೀಟು ಕಾಣುವಂತೆ ಸಖತ್ ಬೋಲ್ಡ್ ಆಗಿ ಸಾರಾ ಕಾಣಿಸಿಕೊಂಡಿದ್ದಾರೆ.
ಸಾರಾ ಸದ್ಯ ವೆಕೇಷನ್ ಮೂಡ್‌ನಲ್ಲಿದ್ದಾರೆ. ಕಡಲ ತೀರದ ರೆಸಾರ್ಟ್‌ವೊಂದರಲ್ಲಿ ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ‘ನಾನು ದಾಲ್ಚಿನ್ನಿಯಂತೆ ಸ್ವೀಟ್’ ಅಂತ ಕ್ಯಾಪ್ಷನ್ ನೀಡಿ, ಸಾರಾ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಸಾರಾ ಲುಕ್ ನೋಡಿ ಹಾಟ್, ಕ್ಯೂಟ್, ಸೆಕ್ಸಿ ಅಂತೆಲ್ಲಾ ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಹಾಕಿದ್ದಾರೆ.
‘ನಮ್ಮೂರ ಹೈಕ್ಳು’ ಚಿತ್ರದ ಮೂಲಕ ನಾಯಕಿಯಾಗಿ ಸಾರಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಆದರೆ ಮೊದಲ ಸಿನಿಮಾ ಅವರ ಕೈಹಿಡಿಯಲಿಲ್ಲ. ಚಿತ್ರರಂಗದಿಂದ ಈಗ ಹೇಳಿಕೊಳ್ಳುವಂತಹ ಅವಕಾಶ ಕೂಡ ಸಿಗುತ್ತಿಲ್ಲ. ಹಾಗಾಗಿ ಕಿರುತೆರೆಯಲ್ಲಿ ನಟಿ ಗುರುತಿಸಿಕೊಳ್ತಿದ್ದಾರೆ.
ಈಗ ಜನಪ್ರಿಯ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಹೀರೋ ಗೌತಮ್ ತಂಗಿ ಮಹಿಮಾ ಪಾತ್ರದ ಮೂಲಕ ಸಾರಾ ಗುರುತಿಸಿಕೊಳ್ತಿದ್ದಾರೆ. ಸಾರಾ ಪಾತ್ರಕ್ಕೆ ಪ್ರಾಮುಖ್ಯತೆ ಇದ್ದು, ಸೀರಿಯಲ್‌ನಲ್ಲಿ ಹಲವು ಟ್ವಿಸ್ಟ್‌ಗಳನ್ನು ಪಡೆದು ಮುನ್ನುಗ್ಗುತ್ತಿದೆ. ಇದನ್ನೂ ಓದಿ:ಸಕ್ಸಸ್‌ಗಾಗಿ ಮತ್ತೆ ಮರಾಠಿ ಸಿನಿಮಾಗಳತ್ತ ರಿತೇಶ್ ದೇಶ್‌ಮುಖ್
ಅಂದಹಾಗೆ, ಅಮೃತಧಾರೆ ಸೀರಿಯಲ್‌ಗೆ ಎಂಟ್ರಿ ಕೊಡುವ ಮೂಲಕ ‘ನಮ್ಮ ಲಚ್ಚಿ’ ಸೀರಿಯಲ್‌ನಲ್ಲಿ ಸಾರಾ ನಟಿಸುತ್ತಿದ್ದರು. ನೆಗೆಟಿವ್ ಶೇಡ್‌ನಲ್ಲಿದ್ದ ಈ ಪಾತ್ರವನ್ನು ಕೆಲ ತಿಂಗಳುಗಳ ಹಿಂದೆ ಬಿಟ್ಟು `ಅಮೃತಧಾರೆ’ ತಂಡ ಸೇರಿಕೊಂಡರು ನಟಿ ಸಾರಾ.
ಕಿರುತೆರೆಯ ಜನಪ್ರಿಯ ‘ಕನ್ನಡತಿ’ (Kannadati) ಸೀರಿಯಲ್ ಮೂಲಕ ಗಮನ ಸೆಳೆದ ನಟಿ ಸಾರಾ ಅಣ್ಣಯ್ಯ (Sara Annaiah) ಅವರು ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:ಮೈಸೂರಿಗೆ ಬಂದಿಳಿದ ನಟ ಉಸ್ತಾದ್ ರಾಮ್ ಪೋತಿನೇನಿ
‘ಕನ್ನಡತಿ’ ಸೀರಿಯಲ್‌ನ ವರುಧಿನಿ ಆಗಿ ಸೈ ಎನಿಸಿಕೊಂಡಿದ್ದ ನಟಿ ಸಾರಾ ಅವರು ಇತ್ತೀಚಿಗೆ ‘ನಮ್ಮ ಲಚ್ಚಿ’ (Namma Lacchi) ಎಂಬ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ನಟಿಸುತ್ತಿದ್ದರು. ಆದರೆ ಸಡನ್ ಆಗಿ ಈ ಸೀರಿಯಲ್‌ನಿಂದ ಹೊರಬಂದರು. ಈ ಬೆನ್ನಲ್ಲೇ ಹೊಸ ಧಾರಾವಾಹಿ ‘ಅಮೃತಧಾರೆ’ಯ (Amruthadaare) ಮಹಿಮ ಪಾತ್ರಕ್ಕೆ ಸಾರಾ ಜೀವ ತುಂಬುತ್ತಿದ್ದಾರೆ.
ಸದ್ಯ ವೆಸ್ಟರ್ನ್ ಉಡುಗೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೂರ್ಗ್ ಬ್ಯೂಟಿ ಸಾರಾ ಅಣ್ಣಯ್ಯ ಅವರು ಇದೀಗ ಟ್ರೆಡಿಷನಲ್ ಆಗಿ ಸೀರೆಯುಟ್ಟು ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸದಾ ತುಂಡು ಬಟ್ಟೆಗಳನ್ನ ತೊಡುತ್ತಿದ್ದ ನಟಿ ಸಾರಾ ಈಗೀನ ಲುಕ್‌ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಹೀಗೆ ಟ್ರೆಡಿಷನಲ್ ಬಟ್ಟೆಗಳನ್ನ ಧರಿಸಿ ಎಷ್ಟು ಚೆಂದ ಕಾಣ್ತೀರಾ ಅಂತಾ ಮನವಿ ಮಾಡಿದ್ದಾರೆ.
ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಜೇನುಗೂಡಿʼನಿಂದ (Jenugudu) ನಟಿ ನಿತ್ಯಾ ಗೌಡ (Nithya Gowda), ದಿಯಾ ಪಾತ್ರಧಾರಿ ಹೊರ ಬಂದಿದ್ದಾರೆ. ದಿಯಾ ರೋಲ್‌ಗೆ ‘ಕನ್ನಡತಿ’ ನಟಿಯ ಎಂಟ್ರಿಯಾಗಿದೆ.
ಶಶಾಂಕ್- ದಿಯಾ ಕ್ಯೂಟ್ ಲವ್ ಸ್ಟೋರಿ, ಕುಟುಂಬ ಮಹತ್ವ ಸಾರುವ ಕಥೆಯೇ ಜೇನುಗೂಡು ಸೀರಿಯಲ್. ಸದಾ ಹಾವು ಮುಂಗುಸಿಯಂತೆ ಕಿತ್ತಾಡುತ್ತಿದ್ದ ಶಶಾಂಕ್- ದಿಯಾ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಆದರೆ ನಾಯಕಿ ನಟಿ ಈಗ ದಿಯಾ ಪಾತ್ರದಿಂದ ಹೊರ ಬರುವ ಮೂಲಕ ಪ್ರೇಕ್ಷಕರಿಗೆ ಶಾಕ್ ಕೊಟ್ಟಿದ್ದಾರೆ.
‘ಜೇನುಗೂಡು’ ಸೀರಿಯಲ್‌ನ ಕಥಾ ನಾಯಕಿಯ ಬದಲಾವಣೆ ಆಗಿದೆ.ಈಗಾಗಲೇ ಸೀರಿಯಲ್‌ಗೆ ಗುಡ್ ಬೈ ಹೇಳಿದ್ದಾರಂತೆ ದಿಯಾ ಅಲಿಯಾಸ್ ನಿತ್ಯಾ. ಅವರ ಪಾತ್ರಕ್ಕೆ ‘ಕನ್ನಡತಿ’ ಖ್ಯಾತಿಯ ಅಮೃತಾ ಮೂರ್ತಿ (Amrutha Murthy) ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಅಣ್ಣ ತಂಗಿ ಸೀರಿಯಲ್‌ಗೆ ‘ಟಗರು’ ನಟಿ ಮಾನ್ವಿತಾ ಸಾಥ್
ಜನಪ್ರಿಯ ಸೀರಿಯಲ್ ‘ಕನ್ನಡತಿʼ ಹೀರೋ ಹರ್ಷನ ತಂಗಿಯಾಗಿ ನಟಿಸಿದ್ದ ಅಮೃತಾ ಬಳಿಕ ‘ಜೊತೆ ಜೊತೆಯಲಿ’ ಕೂಡ ನಟಿಸಿದರು. ಈಗ ದಿಯಾ ಪಾತ್ರಕ್ಕೆ ಜೀವತುಂಬಲು ಅಮೃತಾ ಸಜ್ಜಾಗಿದ್ದಾರೆ.
ಟಿವಿ ಪರದೆಯಲ್ಲಿ `ಕನ್ನಡತಿ’ಯ (Kannadathi) ಹರ್ಷ ಕುಮಾರ್ ಆಗಿ ಮಿಂಚಿದ್ದ ಕಿರಣ್ ರಾಜ್ (Kiran Raj) ಇದೀಗ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಿರುತೆರೆಯ `ಕನ್ನಡತಿ’ ಸೀರಿಯಲ್ ಅಂತ್ಯವಾದ ಬೆನ್ನಲ್ಲೇ ಕಿರಣ್ ರಾಜ್ ಮುಂದೇನು ಮಾಡ್ತಾರೆ ಅನ್ನೋದಕ್ಕೆ ಇಲ್ಲಿದೆ ಡಿಟೈಲ್ಸ್.
ಕಿನ್ನರಿ, ದೇವತೆ, ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಗಮನ ಸೆಳೆದಿದ್ದ ಕಿರಣ್ ರಾಜ್ ಮತ್ತಷ್ಟು ಜನಪ್ರಿಯತೆ ತಂದು ಕೊಟ್ಟಿದ್ದು ಕನ್ನಡತಿ ಸೀರಿಯಲ್, ಕಿರಣ್ ರಾಜ್ ಮತ್ತು ರಂಜನಿ ರಾಘವನ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಕನ್ನಡತಿಯ ಕನ್ನಡ ಅಭಿಮಾನಕ್ಕೆ ಕಥೆಗೆ ಟಿವಿ ಪ್ರೇಕ್ಷಕರು ಫಿದಾ ಆಗಿದ್ದರು. ಈಗ ಈ ಧಾರಾವಾಹಿಗೆ ಬ್ರೇಕ್ ಬಿದ್ದಿದೆ. ಇದನ್ನೂ ಓದಿ: ಬಾತ್‌ಟಬ್‌ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ
`ಕನ್ನಡತಿ’ ಧಾರಾವಾಹಿಯನ್ನ ಅದೆಷ್ಟು ಅಚ್ಚುಕಟ್ಟಾಗಿ ಟಿವಿಪರದೆಯಲ್ಲಿ ತೋರಿಸಿದ್ದರೋ ಹಾಗೆಯೇ ಕನ್ನಡತಿಯ ಅಂತಿಮ ಅಧ್ಯಾಯ ಕೂಡ ಅರ್ಥಪೂರ್ಣವಾಗಿ ತೋರಿಸಿ ಸೀರಿಯಲ್‌ಗೆ ಅಂತ್ಯ ಹಾಡಿದ್ದಾರೆ.
ನಟ ಕಿರಣ್ ರಾಜ್ ಅವರು ಕನ್ನಡತಿ ಸೀರಿಯಲ್ ಮಾಡುವಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರು. ತಮ್ಮದೇ ಬಟ್ಟೆ ಬ್ರ್ಯಾಂಡ್ ಜೊತೆಗೆ ಬಿರಿಯಾನಿ ರೆಸ್ಟೋರೆಂಟ್ ಕೂಡ ಹೊಂದಿದ್ದಾರೆ. ಕಿರಣ್ ರಾಜ್ ಫೌಂಡೇಶನ್ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ನಟ ಕಿರಣ್ ಸಾಕಷ್ಟು ಜನರಿಗೆ ಸಹಾಯ ಹಸ್ತ ನೀಡಿದ್ದಾರೆ.
ಇನ್ನೂ ಕಿರಣ್ ನಟಿಸಿರುವ `ಭರ್ಜರಿ ಗಂಡು’ (Bharjari Gandu), `ಶೇರ್’ (Sher) ಸಿನಿಮಾಗಳು ತೆರೆಗೆ ಬರಲಿದೆ. ಇದೇ ಫೆಬ್ರವರಿಯಲ್ಲಿ ಹೊಸ ಸಿನಿಮಾ ಕೂಡ ಅನೌನ್ಸ್ ಮಾಡುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಪ್ರತಿ ವರ್ಷವೂ ಬಿಗ್ ಬಾಸ್ (Bigg Boss Season 9) ಮನೆಯಲ್ಲಿರುವ ಸದಸ್ಯರಲ್ಲಿ ಅತೀ ಹೆಚ್ಚು ಕಿರುತೆರೆಯ ಲೋಕದವರೇ ಇರುತ್ತಾರೆ. ಈ ಬಾರಿಯೂ ಅದಕ್ಕೆ ಹೊರತಾಗಿಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲೇ ಪ್ರಸಾರವಾದ ನಾನಾ ಧಾರಾವಾಹಿಗಳ ಫೇಮಸ್ ಕಲಾವಿದರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ತಾರೆಯರು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದೂ ಹೇಳಲಾಗಿತ್ತು. ಯಾರೆಲ್ಲ ಕಲಾವಿದರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎನ್ನುವುದು ಇವತ್ತಷ್ಟೇ ಗೊತ್ತಾಗಲಿದೆ. ಅದಕ್ಕೂ ಮುನ್ನ ಕೆಲವು ಹೆಸರುಗಳು ಹರಿದಾಡುತ್ತಿವೆ.
ನೇಹಾ ಗೌಡ (ಲಕ್ಷ್ಮಿ ಬಾರಮ್ಮ)
ಆರು ವರ್ಷಗಳ ಅಧಿಕ ಕಾಲ ಪ್ರಸಾರವಾದ ಲಕ್ಷ್ಮಿ ಬಾರಮ್ಮ (Lakshmi Baramma) ಧಾರಾವಾಹಿಯಲ್ಲಿ ಗೊಂಬೆ ಅಂತಾನೇ ಫೇಮಸ್ ಆಗಿರುವ ನಟಿ ನೇಹಾ ಗೌಡ (Neha Gowda). ಈ ಬಾರಿ ಅವರು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕನ್ನಡದ ಹೆಸರಾಂತ ನಟಿ ಸೋನು ಗೌಡ ಅವರ ಸಹೋದರಿ ಕೂಡ ಇವರಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆಯೇ ಮದುವೆ ಆಗಿರುವ ನೇಹಾ ಗೌಡ, ಇದೀಗ ಧಾರಾವಾಹಿ ಲೋಕದಲ್ಲಿ ಅಷ್ಟೇನೂ ಸಕ್ರಿಯರಾಗಿಲ್ಲವಾದರೂ, ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರಿಂದ, ಅವರ ಅಭಿಮಾನಿಗಳ ಸಂಖ್ಯೆ ಕಡಿಮೆಯೇನೂ ಇಲ್ಲ. ಇದನ್ನೂ ಓದಿ :ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವ ಎಕ್ಸ್‌ಕ್ಲೂಸಿವ್ ಸೆಲೆಬ್ರಿಟಿಗಳು
ರಮೋಲಾ (ಕನ್ನಡತಿ)
ಕಲರ್ಸ್ ಕನ್ನಡದಲ್ಲೇ ಪ್ರಸಾರವಾಗುತ್ತಿರುವ ಕನ್ನಡತಿ (Kannadathi)ಧಾರಾವಾಹಿಯ ಸಾನಿಯಾ ಪಾತ್ರದ ಮೂಲಕ ಫೇಮಸ್ ಆದವರು ರಮೋಲಾ. ಈ ಧಾರಾವಾಹಿಯು ಇವರಿಗೆ ಸಾಕಷ್ಟು ಹೆಸರು ತಂದು ಕೊಟ್ಟಿದೆ. ಅದೊಂದು ನೆಗೆಟಿವ್ ಪಾತ್ರವಾದರೂ, ರಮೋಲಾ (Ramola) ಒಪ್ಪಿಕೊಂಡು ಪಾತ್ರ ನಿರ್ವಹಿಸಿದ ರೀತಿ ಮೆಚ್ಚುವಂಥದ್ದು. ಈಗಾಗಲೇ ಮೂರ್ನಾಲ್ಕು ಸಿನಿಮಾಗಳಲ್ಲಿ ಅವರು ನಟಿಸಿದ್ದರೂ, ಈವರೆಗೂ ಒಂದೂ ಸಿನಿಮಾ ಬಿಡುಗಡೆ ಆಗಿಲ್ಲ. ಮೊನ್ನೆಯಷ್ಟೇ ಕನ್ನಡತಿ ಧಾರಾವಾಹಿಯಿಂದ ಈ ನಟಿ ಹೊರ ನಡೆದಿದ್ದರು. ಇದು ಬಿಗ್ ಬಾಸ್ ಮನೆಗೆ ಹೋಗುವ ಕಾರಣಕ್ಕಾಗಿಯೇ ಆದ ಘಟನೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗಿದೆ. ಸದ್ಯ ಫ್ಯಾಷನ್ ಡಿಸೈನ್ ಕೋರ್ಸ್ ಕೂಡ ಮಾಡುತ್ತಿದ್ದಾರೆ ರಮೋಲಾ.
ಕಾವ್ಯಶ್ರೀ ಗೌಡ (ಮಂಗಳಗೌರಿ ಮದುವೆ)
ಮಂಗಳಗೌರಿ ಮದುವೆ ಧಾರಾವಾಹಿಯಲ್ಲಿ ಮಂಗಳಗೌರಿಯಾಗಿ ನಟಿಸಿದವರು ಕಾವ್ಯಶ್ರೀ ಗೌಡ (Kavyashree Gowda). ಕಥಾನಾಯಕಿಯ ಪಾತ್ರವೇ ಅದಾಗಿದ್ದರಿಂದ ಅತೀ ಬೇಗ ಜನರಿಗೆ ಹತ್ತಿರವಾದರು. ನಿರೂಪಕಿಯಾಗಿಯೂ ಕೆಲಸ ಮಾಡಿರುವ ಕಾವ್ಯಶ್ರೀ, ಮೂಲತಃ ಚನ್ನಪಟ್ಟಣದವರು. ಮನೆಯೇ ಮಂತ್ರಾಲಯ ಧಾರಾವಾಹಿ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಕಾವ್ಯಶ್ರೀ, ಇದೀಗ ಬಿಗ್ ಬಾಸ್ ಮನೆಯನ್ನೂ ಪ್ರವೇಶ ಮಾಡಿದ್ದಾರೆ. ಈ ಹಿಂದೆ ಪುನೀತ್ ರಾಜ್ ಕುಮಾರ್ ಜೊತೆ ನಟಿಸುವ ಆಸೆಯನ್ನೂ ಅವರು ವ್ಯಕ್ತಪಡಿಸಿದ್ದರು. ಆದರೆ ಅದು ಕನಸಾಗಿಯೇ ಉಳಿಯಿತು.
ಅಮೂಲ್ಯ ಗೌಡ (ಕಮಲಿ)
ಕನ್ನಡ ಮತ್ತು ತೆಲುಗು ಧಾರಾವಾಹಿಯಲ್ಲಿ ಚಿರಪರಿಚಿತ ಹೆಸರು ಅಮೂಲ್ಯ ಗೌಡ (Amulya Gowda) ಅವರದ್ದು. ಕನ್ನಡದ ಪ್ರೇಕ್ಷಕರಿಗೆ ಕಮಲಿ (Kamali) ಆಗಿಯೇ ಪರಿಚಯವಾದವರು. ಅದೊಂದು ಸಾಂಪ್ರದಾಯಿಕ ಹುಡುಗಿಯ ಪಾತ್ರವಾಗಿದ್ದರಿಂದ ನೋಡುಗರಿಗೆ ಬೇಗನೇ ಹತ್ತಿರವಾದ ನಟಿ. ಸ್ವಾತಿ ಮುತ್ತು, ಪುನರ್ ವಿವಾಹ, ಅರಮನೆ ಸೇರಿದಂತೆ ಹಲವು ಕನ್ನಡ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ತೆಲುಗಿನ ಕಾರ್ತಿಕ ದೀಪಂ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಇವರ ಪೂರ್ತಿ ಹೆಸರು ಅಮೂಲ್ಯ ಓಂಕಾರ ಗೌಡ. ಇದೀಗ ಅಮೂಲ್ಯ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
“ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, “ಬಡ್ಡೀಸ್” ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ “ಭರ್ಜರಿ ಗಂಡು” ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ “ಶೇರ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ ಡಾ||ಸುದರ್ಶನ್ ಸುಂದರರಾಜ್ (ಬೀದರ್) ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮರಂಭಕ್ಕೆ ಆಗಮಿಸಿ ಶುಭ ಕೋರಿದರು.
“ಶೇರ್” ಪಕ್ಕಾ ಆಕ್ಷನ್ ಥ್ರಿಲ್ಲರ್ ಚಿತ್ರ. ಅನಾಥಾಶ್ರಮದಲ್ಲಿ ಹೆಚ್ಚಿನ ಕಥೆ ನಡೆಯುತ್ತದೆ. ಅಲ್ಲೊಬ್ಬ ರಾಜಕಾರಣಿ ಇರುತ್ತಾನೆ. ಎರಡು ಗುಂಪುಗಳೂ ಇರುತ್ತದೆ. ಒಂದು ಗುಂಪಿನವರು ಅನಾಥಾಶ್ರಮವನ್ನೇ ಅಡ್ಡ ಮಾಡಿಕೊಂಡಿರುತ್ತಾರೆ. ಅಲ್ಲಿ ಒಳ್ಳೆಯ ಗುಂಪು ಸಹ ಇರುತ್ತದೆ. ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ. “ಕಿರಣ್ ರಾಜ್ ಚಾಕೊಲೇಟ್ ಹೀರೋ ಅಂತ ಪ್ರಸಿದ್ದಿ. ಅವರಿಗೆ ರಗಡ್ ಲುಕ್ ಸರಿ ಹೊಂದುವುದೆ?” ಅಂತ ಅನೇಕರು ಕೇಳಿದರು. ಆದರೆ ಮಾಸ್ ಪಾತ್ರಕ್ಕೆ ಬೇಕಾದ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದವುಗಳನ್ನು ಕಿರಣ್ ರಾಜ್ ಅಭ್ಯಾಸ ಮಾಡಿದ್ದಾರೆ. ನನ್ನ ಹಾಗೂ ಕಿರಣ್ ರಾಜ್ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ಭರ್ಜರಿ ಗಂಡು” ಚಿತ್ರ ಸಹ ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ಆ ಚಿತ್ರದಲ್ಲಿ ಭಾಗಿಯಾಗಿರುವ ಬಹುತೇಕ ತಂಡವೇ ಈ ಚಿತ್ರದಲ್ಲಿ ಮುಂದುವರೆಯಲಿದೆ. ಬೀದರ್ ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದೇ 22 ರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರಸಿದ್ಧ್ “ಶೇರ್” ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆರ್ಯವರ್ಧನ್ ಗುರೂಜಿ
ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಲು ಖುಷಿಯಾಗಿದೆ. ಇದಕ್ಕಾಗಿ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದ ಕಲೆಗಳನ್ನು ಅಭ್ಯಾಸ ಮಾಡಿದ್ದೀನಿ. “ಭರ್ಜರಿ ಗಂಡು” ಚಿತ್ರದಲ್ಲೂ ಸಾಹಸ ಸನ್ನಿವೇಶಗಳು ಭರ್ಜರಿಯಾಗಿ ಮೂಡಿಬಂದಿದೆ ಎಂದು ನಾಯಕ ಕಿರಣ್ ರಾಜ್ ತಿಳಿಸಿದರು. ನಾನು ಮೂಲತಃ ಬೀದರ್ ನವನು. ಅಲ್ಲೇ ವಕೀಲನಾಗಿ ಕಾರ್ಯ ನಿರ್ವಿಸುತ್ತಿದ್ದೇನೆ. ರಾಜಕೀಯದಲ್ಲೂ ಇದ್ದೀನಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕ ಸುದರ್ಶನ್ ಸುಂದರರಾಜ್.ಚಿತ್ರದ ನಾಯಕಿ ಸುರೇಖ ಹಾಗೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತರುವ ತನೀಶಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಕಿಟ್ಟಿ ಕೌಶಿಕ್ ಛಾಯಾಗ್ರಹಣದ ಬಗ್ಗೆ ಹಾಗೂ ಗುಮ್ಮಿನೇನಿ ವಿಜಯ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.
Live Tv
[brid partner=56869869 player=32851 video=960834 autoplay=true]
ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಸಕ್ರಿಯರಾಗಿರುವ ರಂಜನಿ ರಾಘವನ್ ಇದೀಗ ವಿಭಿನ್ನ ಫೋಟೋಶೂಟ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಈ ಭಿನ್ನ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ.
ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್ ಮೂಲಕ ಮನೆಮಾತಾಗಿರುವ ನಟಿ ರಂಜನಿ ರಾಘವನ್, ದೊಡ್ಡಪರದೆಯಲ್ಲಿ ಕೂಡ ಕಮಾಲ್ ಮಾಡ್ತಿದ್ದಾರೆ. ಇದೀಗ ಗೂಗಲ್ ಎಂದು ಬರೆದುಕೊಂಡಿರುವ ಸೀರೆ ಉಟ್ಟು ಮಿರ ಮಿರ ಅಂತಾ ಮಿಂಚ್ತಿದ್ದಾರೆ. ಭುವಿಯ ನಯಾ ಲುಕ್‌ಗೆ ನೆಟ್ಟಿಗರ ಗಮನ ಸೆಳೆದಿದೆ. ಇದನ್ನೂ ಓದಿ:ಮಾಲಿವುಡ್ ನಟ ಶರತ್ ಚಂದ್ರನ್ ನಿಧನ
ನಟಿ ಮಾತ್ರವಲ್ಲ ಬರಹಗಾರ್ತಿಯಾಗಿ ಗುರುತಿಸಿಕೊಂಡಿರುವ ಮೈಸೂರು ಸಾಹಿತ್ಯ ಸಂಭ್ರಮದಲ್ಲಿ ಇತ್ತೀಚೆಗೆ ರಂಜನಿ ಭಾಗಿಯಾಗಿದ್ದರು. ಈ ಸಮಾರಂಭದಲ್ಲಿ ಗೂಗಲ್ ಸೀರೆ ಉಟ್ಟು ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಕುರಿತ ಫೋಟೋ ಶೇರ್ ಮಾಡಿ, ಚೆಂದದ ಅಡಿಬರಹ ನೀಡಿದ್ದಾರೆ. `ಹೆಣ್ಮಕ್ಕಳ ಮನಸ್ಸು ಅರ್ಥ ಆಗಲ್ಲ ಅನ್ನೋರು ಗೂಗಲ್ ಮಿ’ ಎಂದು ಪೋಸ್ಟ್ ಮಾಡಿದ್ದಾರೆ. ಒಟ್ನಲ್ಲಿ ನಟಿಯ ಸೀರೆ ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದೆ.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್‌ವುಡ್ ನಿರೀಕ್ಷಿತ ಸಿನಿಮಾ `ಬಡ್ಡೀಸ್’ ರಿಲೀಸ್‌ಗೆ ರೆಡಿಯಿದೆ. ಈ ಬೆನ್ನಲ್ಲೇ `ಬಡ್ಡೀಸ್’ ಚಿತ್ರ ಪ್ರಚಾರದ ವೇಳೆ ರ್ಧುಘಟನೆಯೊಂದು ಸಂಭವಿಸಿದೆ. ʻಬಡ್ಡೀಸ್’ ಸಿನಿಮಾ ಪ್ರಚಾರದ ವಾಹನ ಜಖಂಯಾಗಿದೆ. ಅಪಾಯದಿಂದ ಕಿರಣ್ ರಾಜ್ ಮತ್ತು ತಂಡ ಸೇಫ್ ಆಗಿದ್ದಾರೆ.
ಕಿರುತೆರೆಯ `ಕನ್ನಡತಿ’ ಸೀರಿಯಲ್ ಮೂಲಕ ಮನೆ ಮಾತಾಗಿರುವ ನಟ ಕಿರಣ್ ರಾಜ್ ಅವರು ಜೂನ್ 24ಕ್ಕೆ ರಿಲೀಸ್ ಆಗಲಿರುವ ‘ಬಡ್ಡೀಸ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಬೆಳಗಾವಿಯ ಕಾಲೇಜ್‌ವೊಂದರಲ್ಲಿ ಭೇಟಿ ನೀಡುವ ವೇಳೆ ಪ್ರಚಾರಕ್ಕಾಗಿ ರೆಡಿ ಮಾಡಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಬಿದ್ದು, ವಾಹನ ಜಖಂ ಆಗಿದೆ. ಸಿನಿಮಾ ಪ್ರಚಾರಕ್ಕೆ ಹೋಗುವಾಗ ಸಿನಿಮಾದ ಪ್ರಚಾರ ವಾಹನ ಜಖಂ `ಬಡ್ಡೀಸ್’ ಸಿನಿಮಾ ತಂಡದ ಯಾರಿಗೂ ಏನೂ ಆಗಿಲ್ಲ ಎಂದು ಕಿರಣ್ ರಾಜ್ ಸ್ಪಷ್ಟನೆ ನೀಡಿದ್ದಾರೆ.
ಕಿರಣ್ ರಾಜ್ ಅವರು ಪ್ರಚಾರಕ್ಕೆಂದೇ ಸಿದ್ಧಗೊಳಿಸಿರುವ ವಾಹನದಲ್ಲಿ ಸುಮಾರು ಕಾಲ ಟ್ರಾವೆಲ್ ಮಾಡಿದ್ದರು. ಬೆಳಗಾವಿಯಲ್ಲಿ ಒಂದು ಕಾಲೇಜ್‌ಗೆ ಭೇಟಿ ನೀಡಿದ ನಂತರ ಇನ್ನೊಂದು ಕಾಲೇಜಿಗೆ ಭೇಟಿ ಕೊಡಬೇಕಿತ್ತು. ಹೀಗಾಗಿ ಆ ಪ್ರಚಾರದ ವಾಹನ ಮೊದಲಿಗೆ ಹೋಯಿತು. ಆಗ ಕಿರಣ್ ರಾಜ್ ಅವರು ಪ್ರಚಾರದ ವಾಹನದಿಂದ ಇಳಿದು, ಅವರ ಕಾರ್‌ನಲ್ಲಿ ಬರುತ್ತಿದ್ದರು. ಇದನ್ನೂ ಓದಿ:ಬಾಮೈದನಿಂದಲೇ ಸ್ಯಾಂಡಲ್‌ವುಡ್ ನಟ ಸತೀಶ್ ಬರ್ಬರ ಹತ್ಯೆ?
ಬಳಿಕ ಪ್ರಚಾರದ ವಾಹನದವರು ಟೀ ಕುಡಿಯುವ ಸಲುವಾಗಿ ವಾಹನವನ್ನು ನಿಲ್ಲಿಸಿ ಅದರಿಂದ ಇಳಿದಿದ್ದಾರೆ. ಆ ವೇಳೆ ಆ ವಾಹನದ ಮೇಲೆ ಕಂಬ ಬಿದ್ದಿದೆ. ವಾಹನದ ಮುಂಭಾಗ ಫುಲ್ ಜಖಂ ಆಗಿದೆ. ಕಂಬ ಬೀಳುವ ವೇಳೆ ವಾಹನದ ಒಳಗಡೆ ಯಾರೂ ಇರಲಿಲ್ಲ. ಹೀಗಾಗಿ ಯಾವ ಅಪಾಯವೂ ಆಗಿಲ್ಲ. ಆ ವಾಹನಕ್ಕೆ ಅಪಾಯ ಆಗುವ ಅರ್ಧ ಗಂಟೆ ಮುಂಚೆ ನಾನು ಅದರಿಂದ ಇಳಿದಿದ್ದೆ. ಯಾರಿಗೂ ಯಾವ ಹಾನಿಯೂ ಆಗಿಲ್ಲ ಇದೀಗ ಚಿತ್ರತಂಡ ಬೆಂಗಳೂರಿಗೆ ಹಿಂದಿರುಗಿದ್ದಾರೆ ಎಂದು ನಟ ಕಿರಣ್ ರಾಜ್ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.