Tag: ಕನ್ನಡ ಭವನ

  • ಪ್ರೇಮಿಗಳ ಹಾಟ್ ಸ್ಪಾಟ್ ಆದ ರಾಯಚೂರಿನ ಕನ್ನಡ ಭವನದ ಕಾಂಪೌಂಡ್

    ಪ್ರೇಮಿಗಳ ಹಾಟ್ ಸ್ಪಾಟ್ ಆದ ರಾಯಚೂರಿನ ಕನ್ನಡ ಭವನದ ಕಾಂಪೌಂಡ್

    ರಾಯಚೂರು: ನಗರದ ಕನ್ನಡ ಭವನ ಕಾಂಪೌಂಡ್ ಹಾಗೂ ಸುತ್ತಲ ಪ್ರದೇಶ ಲವ್ವರ್ಸ್‌ ಳಿಗೆ ಹಾಟ್ ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಸಾರ್ವಜನಿಕ ಸ್ಥಳದಲ್ಲಿ ಯಾವ ಮುಜುಗರವಿಲ್ಲದೆ ಕಾಲೇಜು ವಿದ್ಯಾರ್ಥಿಗಳು ಲವ್ವಿಡವ್ವಿ ಶುರುಮಾಡಿದ್ದಾರೆ.

    ಜನರು ಓಡಾಡುವ ಸ್ಥಳದಲ್ಲೇ ಯುವ ಪ್ರೇಮಿಗಳು ಕಿಸ್ಸಿಂಗ್, ಹಗ್ಗಿಂಗ್, ರೊಮ್ಯಾನ್ಸ್ ನಡೆಸಿದ್ದಾರೆ. ಪ್ರೇಮಿಗಳ ಈ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರು ಬೇಸತ್ತು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಯುವಕ-ಯುವತಿಯರು ಸ್ಥಳದಿಂದ ಓಡಿ ಹೋಗುತ್ತಾರೆ. ನಿತ್ಯ ಹೊಸ ಹೊಸ ಜೋಡಿಗಳು ಇಲ್ಲಿ ಕಾಣಿಸಿಕೊಳ್ಳುತ್ತಿವೆ.

    ಲರ್ವಸ್ ಗಳ ಈ ವರ್ತನೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಜಾಗದಲ್ಲಿ ಇದೇ ಗೋಳು ಅಂತ ಸ್ಥಳೀಯರು ಬೇಸರ ಹೊರಹಾಕಿದ್ದಾರೆ. ಪಕ್ಕದಲ್ಲಿ ದೇವಾಲಯಗಳು, ಕಲ್ಯಾಣ ಮಂಟಪ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಇದ್ದರೂ ಯುವಕ-ಯುವತಿಯರು ಯಾವುದಕ್ಕೂ ಕೇರ್ ಮಾಡುತ್ತಿಲ್ಲ. ಹೀಗಾಗಿ ಇದಕ್ಕೆ ಕಡಿವಾಣ ಹಾಕಬೇಕು ಅಂತ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ – ಐವರ ಮೃತದೇಹ ಪತ್ತೆ, ಕಾರ್ಯಾಚರಣೆ ಮುಕ್ತಾಯ

  • ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ಆಕ್ಷೇಪ – ಕರ್ನಾಟಕದ ಹೆಸರು ಕಿತ್ತು ಹಾಕುವ ಎಚ್ಚರಿಕೆ

    ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ಆಕ್ಷೇಪ – ಕರ್ನಾಟಕದ ಹೆಸರು ಕಿತ್ತು ಹಾಕುವ ಎಚ್ಚರಿಕೆ

    ಬೆಳಗಾವಿ: ಮಹಾರಾಷ್ಟ್ರದಲ್ಲಿ (Maharashtra)  ಕನ್ನಡ ಭವನ (Kannada Bhavan) ನಿರ್ಮಾಣಕ್ಕೆ ಶಿವಸೇನೆಯ ಠಾಕ್ರೆ ಬಣ ಆಕ್ಷೇಪ ವ್ಯಕ್ತಪಡಿಸಿದ್ದು, ಮೊದಲು ಕರ್ನಾಟಕದಲ್ಲಿ (Karnataka) ನೀವು ನಮಗೆ ಮರಾಠಿ ಭವನ ಕಟ್ಟಲು ಅವಕಾಶ ನೀಡಬೇಕು. ಆಮೇಲೆ ಕರ್ನಾಟಕ ಭವನ ನಿರ್ಮಾಣ ಮಾಡಿಕೊಳ್ಳುವಂತೆ ಕ್ಯಾತೆ ತೆಗೆದಿದ್ದಾರೆ.

    ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಸೇನೆಯ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ರವಿಕಿರಣ ಇಂಗವಳ್ಳಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟದಲ್ಲಿ ಸಾಕಷ್ಟು ನಮ್ಮ ಜನರು ಮೃತರಾಗಿದ್ದಾರೆ. ಆದ್ರೆ, ಅವರಿಗೆ ನ್ಯಾಯ ಕೊಡಿಸುವಂತಹ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಿಲ್ಲ. ಈಗ ಕರ್ನಾಟಕದ ಸಿಎಂ (CM) ಮಹಾರಾಷ್ಟ್ರದಲ್ಲಿ ಬಂದು ಕರ್ನಾಟಕ ಭವನ ಕಟ್ಟಿದ್ರೆ, ನಮಗೂ ಕರ್ನಾಟಕದಲ್ಲಿ ಮಹಾರಾಷ್ಟ್ರ ಭವನ ಕಟ್ಟಲು ಅವಕಾಶ ನೀಡಬೇಕು. ಮೊದಲು ನೀವು ನಮಗೆ ಭವನ ಕಟ್ಟಲು ಅವಕಾಶ ನೀಡಿ. ಆಮೇಲೆ ನಿಮ್ಮ ಭವನ ಇಲ್ಲಿ ನಿರ್ಮಾಣ ಮಾಡಿಕೊಳ್ಳಿ. ಒಂದು ವೇಳೆ ನೀವು ಕರ್ನಾಟಕ ಭವನ ಕಟ್ಟಿದ್ದೆ ಆದ್ರೆ ನಾವು ಕರ್ನಾಟಕದ ಹೆಸರು ತೆಗೆದು ಹಾಕುತ್ತೇವೆ ಎಂದು ಕರ್ನಾಟಕದ ಸಿಎಂಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ: ಅರುಣ್‌ ಸಿಂಗ್

    ಕಳೆದ ಅ.10ರಂದು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕನ್ನೇರಿಮಠದಲ್ಲಿ ನಡೆದಿದ್ದ ಸಂತ ಸಮಾವೇಶದಲ್ಲಿ ಭಾಗಿಯಾಗಿದ್ದ ಬಸವರಾಜ ಬೊಮ್ಮಾಯಿ (Basavaraj Bommai) ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮೂರು ಕೋಟಿ ನೀಡುತ್ತೇನೆ. ಈಗಾಗಲೇ ಒಂದು ಕೋಟಿ ಅನುದಾನ ಕರ್ನಾಟಕ ಭವನ ನಿರ್ಮಾಣಕ್ಕೆ ನೀಡಲಾಗುತ್ತಿದ್ದು, ಕೆಲಸವನ್ನು ಪ್ರಾರಂಭ ಮಾಡಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಹಲಾಲ್ ಮುಕ್ತ ದೀಪಾವಳಿ ಅಭಿಯಾನಕ್ಕೆ ಮುತಾಲಿಕ್ ಕರೆ

    Live Tv
    [brid partner=56869869 player=32851 video=960834 autoplay=true]

  • ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ

    ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ

    ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳು ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ಈ ವೇಳೆ ಬೊಮ್ಮಾಯಿ ಅವರು ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಭಾರತ ಆಯೋಜಿಸಿದ್ದ, ಅಫ್ಘಾನಿಸ್ತಾನದ ಸಭೆಯಿಂದ ಹೊರಗುಳಿದ ಪಾಕಿಸ್ತಾನ, ಚೀನಾ 

    ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಗೋವಾ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಅವರು ಕನ್ನಡ ಸಂಸ್ಕøತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಬೊಮ್ಮಾಯಿ ಅವರ ಈ ನಿರ್ಧಾರಕ್ಕೆ ಗೋವಾ ಕನ್ನಡ ಮಹಾಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ ಹಾಗೂ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು. ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬಾದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‍ಗೆ ಕೊಡುತ್ತೇನೆ: ಸಿದ್ದರಾಮಯ್ಯ