ಬೆಂಗಳೂರು: ಮಾರ್ಚ್ 22 ರಂದು ಕನ್ನಡ ಸಂಘಟನೆಗಳು (Kannada Organisations) ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bundh) ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ವಿಧಾನ ಪರಿಷತ್ ಕಲಾಪದ ವೇಳೆ ವಿಪಕ್ಷ ನಾಯಕ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಮಾರ್ಚ್ 22ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಮಾರ್ಚ್ 22ರಂದು ಎಸ್‌ಎಸ್‌ಎಲ್‌ಸಿ ಸೇರಿ ಅನೇಕ ಪರೀಕ್ಷೆಗಳು ನಡೆಯಲಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಮಕ್ಕಳಿಗಳು ಭಯ ಭೀತರಾಗಿದ್ದರು. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್
ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿ ಸದ್ಯಕ್ಕೆ ಈ ಬಂದ್ ಅವಶ್ಯಕತೆ ಇರಲಿಲ್ಲ. ಸಂಘಟನೆಗಳು ಸರ್ಕಾರದ ಜೊತೆ ಮಾತಾಡಬೇಕಿತ್ತು. ನಾನು ಕೂಡಾ ಮಾರ್ಚ್ 22ರಂದು ವರ್ಲ್ಡ್ ವಾಟರ್ ಡೇ ಮಾಡಬೇಕು ಅಂತ ಇದ್ದೆ. ಬಂದ್‌ಗೆ ನಾವು ಬೆಂಬಲ ಕೊಡಲ್ಲ. ನಾವು ಬಂದ್ ಮಾಡೋರಿಗೆ ತಿಳುವಳಿಕೆ ಕೊಡುತ್ತೇವೆ. ಮಕ್ಕಳಿಗೆ ಎಕ್ಸಾಂ ಶುರುವಾಗಿದೆ. ಅಧಿಕಾರಿಗಳ ಜೊತೆ ಮಾತಾಡಿ ಮತ್ತೊಮ್ಮೆ ಹೇಳಿಕೆ ಕೊಡೋದಾಗಿ ತಿಳಿಸಿದರು. ಇದನ್ನೂ ಓದಿ: ಯುಜಿಸಿಇಟಿ ಪರೀಕ್ಷೆ ನಂತರ ತಿದ್ದುಪಡಿಗೆ ಅವಕಾಶ: ಕೆಇಎ
ಬೆಳಗಾವಿ: ಗಡಿ ಹೋರಾಟದಲ್ಲಿ (Border Dispute) ಗಲಭೆ ಸೃಷ್ಟಿಸಿದವರನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ (Freedom Fighters) ಹೋಲಿಸಿದ ಮಹಾರಾಷ್ಟ್ರ (Maharashtra) ಸಿಎಂ ಏಕನಾಥ್ ಶಿಂಧೆ (Eknath Shinde) ವಿರುದ್ಧ ಕನ್ನಡಪರ ಹೋರಾಟಗಾರರಾದ ಅಶೋಕ್ ಚಂದರಗಿ ಆಕ್ರೋಶ ವ್ಯಕ್ತಪಡಿಸಿದರು.
ಗಡಿ ಹೋರಾಟದಲ್ಲಿ ಮೃತಪಟ್ಟ ಮರಾಠಿಗರಿಗೆ ಸ್ವಾತಂತ್ರ್ಯ ಹೋರಾಟಗಾರರ ರೀತಿ ಪಿಂಚಣಿ ನೀಡುವುದಾಗಿ ಏಕನಾಥ ಶಿಂಧೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಏಕನಾಥ್ ಶಿಂಧೆ ಹೇಳಿಕೆ ಪ್ರಚೋದನಾತ್ಮಕವಾಗಿದೆ. ಬೆಳಗಾವಿಯಲ್ಲಿ (Belagavi) ಏನು ನಡೆದಿತ್ತು ಎಂದು ಇಡೀ ಜಗತ್ತಿಗೆ ಗೊತ್ತಿದೆ. 1956 ರಿಂದ 1986ರವರೆಗೆ ಕನ್ನಡಿಗರ ವಿರುದ್ಧ ಹಿಂಸಾಚಾರ ಮಾಡಿ ಗೋಲಿಬಾರ್‌ನಲ್ಲಿ ಸತ್ತಿದ್ದಾರೆ. ಗೂಂಡಾಗಳ ಕುಟುಂಬಗಳಿಗೆ ನೀವು ಪೆನ್ಷನ್ ಕೊಡುತ್ತಿದ್ದೀರಿ. ಮತ್ತೊಂದು ರಾಜ್ಯದ ವಿರುದ್ಧ ಚಳವಳಿ ಮಾಡೋರಿಗೆ ಪ್ರಚೋದನೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇದನ್ನು ಕರ್ನಾಟಕ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕರ್ನಾಟಕದ ಉದ್ಯಮಿಗಳು ಪುದುಚೇರಿಯಲ್ಲಿ ಉದ್ಯಮ ಮಾಡಲು ಸಕಲ ನೆರವು: ಪುದುಚೇರಿ ಗೃಹಸಚಿವ
1986ರಲ್ಲಿ ಶರದ್ ಪವಾರ್ ಚಳವಳಿ ಮಾಡಿದಾಗ ಛಗನ್ ಭುಜಬಲ್ ಸಹ ಬಂದಿದ್ರು. ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದ ಶಿವಸೇನೆಯವರು ಎಂಇಎಸ್ ಜೊತೆಗೂಡಿ ಗಲಭೆ ಮಾಡಿದ್ದರು. ಗೂಂಡಾಗಿರಿ ಮಾಡಿ ಕನ್ನಡ ಪತ್ರಿಕಾಲಯಗಳಿಗೆ ಬೆಂಕಿ ಹಚ್ಚಿದ್ರು. ಬೆಳಗಾವಿ ನಗರಕ್ಕೆ ನೀರು ಪೂರೈಸುವ ಘಟಕಕ್ಕೆ ವಿಷ ಹಾಕಲು ಯತ್ನಿಸಿದರು. ಬೆಳಗಾವಿ ನಗರಕ್ಕೆ ನೀರು ಪೂರೈಸುವ ಹಿಂಡಲಗಾ ಬಳಿಯ ಪಂಪಿಂಗ್ ಸ್ಟೇಷನ್ ಸುಡಲು ಯತ್ನಿಸಿದ್ರು. ಅಂದಿನ ಬೆಳಗಾವಿ SP ಕೆ.ನಾರಾಯಣ್ ಗೋಲಿಬಾರ್‌ಗೆ ಆದೇಶಿಸಿದಾಗ 9 ಜನ ಮೃತಪಟ್ಟಿದ್ದರು. ಇಂತಹ ಅನೇಕ ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಗಳು ಬೆಳಗಾವಿಯಲ್ಲಿವೆ. ಅವರೇನೂ ಸ್ವಾತಂತ್ರ್ಯ ಚಳವಳಿ ಮಾಡಿದವರಲ್ಲ. ಸ್ವಾತಂತ್ರ್ಯ ಚಳವಳಿ ಮಾಡಿದ ಕುಟುಂಬಗಳಲ್ಲ. ಹಿಂಸಾಚಾರ, ಗೂಂಡಾಗಿರಿ ಮಾಡಿ ಗೋಲಿಬಾರ್‌ನಲ್ಲಿ ಸತ್ತವರ ಕುಟುಂಬಕ್ಕೆ ಪೆನ್ಷನ್ ಕೊಡ್ತಿದ್ದಾರೆ. ಇದು ಮತ್ತೊಂದು ರಾಜ್ಯದ ವಿರುದ್ಧ ಪ್ರಚೋದನೆ, ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಿಎಂ ಏಕನಾಥ್ ಶಿಂಧೆ ಹೇಳಿಕೆಯನ್ನು ವಿರೋಧಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಅಶೋಕ್ ಚಂದರಗಿ ಒತ್ತಾಯಿಸಿದರು. ಇದನ್ನೂ ಓದಿ: ಜಿಲ್ಲೆಗಳಲ್ಲಿ ಸರ್ಕಾರಿ ಗೋಶಾಲೆ ಆರಂಭಕ್ಕೆ ಡಿಸೆಂಬರ್ ಡೆಡ್‌ಲೈನ್: ಪ್ರಭು ಚೌಹಾಣ್
ನಿನ್ನೆ ಮಹಾರಾಷ್ಟ್ರದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರನ್ನು ನಾಡದ್ರೋಹಿ ಬೆಳಗಾವಿಯ ಎಂಇಎಸ್ ನಾಯಕರ ನಿಯೋಗ ಭೇಟಿಯಾಗಿದ್ದರು. ಈ ವೇಳೆ ಗಡಿ ಹೋರಾಟ ವೇಳೆ ಗಲಭೆ ಸೃಷ್ಟಿಸಿ ಗೋಲಿಬಾರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯಲ್ಲಿ 20 ಸಾವಿರ ಪಿಂಚಣಿ ನೀಡುವುದಾಗಿ ಮಹಾರಾಷ್ಟ್ರ ಸಿಎಂ ಹೇಳಿಕೆ ನೀಡಿದ್ದರು. ರಾಜ್ಯ ಸರ್ಕಾರದ ವತಿಯಿಂದ ಗಡಿಭಾಗದ ಮರಾಠಿಗರಿಗೆ ಸರ್ಕಾರಿ ಯೋಜನೆಯ ಲಾಭ ಒದಗಿಸುವ ಭರವಸೆ ವ್ಯಕ್ತಪಡಿಸಿದರು. ಗಡಿ ಹೋರಾಟದಲ್ಲಿ ಮಡಿದ ಕುಟುಂಬಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಮಾದರಿಯಲ್ಲಿ ಪಿಂಚಣಿ. ಗಡಿಭಾಗದ ಮರಾಠಿಗರಿಗೆ ಮಹಾತ್ಮ ಜ್ಯೋತಿಬಾ ಫುಲೆ ಆರೋಗ್ಯ ವಿಮೆ ಕಾರ್ಡ್ ನೀಡುವುದಾಗಿ ಏಕನಾಥ್ ಶಿಂಧೆ ಹೇಳಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮಹದಾಯಿ ನೀರನ್ನು ಗೋವಾಗೆ ಹರಿಸುವ ಭರವಸೆಯನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳು ಕಾಂಗ್ರೆಸ್ ನಾಯಕರ ಮನೆಗಳಿಗೆ ಮುತ್ತಿಗೆ ಹಾಕಿವೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಮನೆಗೆ ಮುತ್ತಿಗೆ ಹಾಕಿರುವ ಕನ್ನಡ ಪರ ಸಂಘಟನೆಗಳು ಕಾಂಗ್ರೆಸ್ ಇಬ್ಬಗೆ ನೀತಿ ಅನುಸರಿಸುತ್ತಿದೆ. ಇಲ್ಲಿ ಕಾಂಗ್ರೆಸ್ ಕಾವೇರಿಗಾಗಿ ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡುತ್ತದೆ. ಗೋವಾದಲ್ಲಿ ಮಹದಾಯಿಯನ್ನು ಅವರಿಗೆ ನೀಡುವ ಭರವಸೆ ನೀಡಿದೆ ಎಂದು ಕಿಡಿಕಾರಿದೆ.
ಸಿದ್ದರಾಮಯ್ಯ ಮನೆ ಮುಂದೆ ಹೈಡ್ರಾಮಾ: ಸಿದ್ದರಾಮಯ್ಯನ ಮನೆ ಮುಂದೆ ಮುತ್ತಿಗೆ ಹಾಕಿದ ಪ್ರತಿಭಟನಾ ಮುಖಂಡರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಈ ವೇಳೆ ಹೊಯ್ಸಳ ವಾಹನಕ್ಕೆ ಪ್ರತಿಭಟನಾಕಾರರು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಹಿಳಾ ಕಾರ್ಯಕರ್ತರು ಹೊಯ್ಸಳ ಕಾರಿಗೆ ಅಡ್ಡ ನಿಂತಿರು.
ಈ ಬಗ್ಗೆ ಕನ್ನಡಪರ ಸಂಘಟನೆಯ ರವಿಶೆಟ್ಟಿ ಮಾತನಾಡಿ, ಇವತ್ತು ಕಾಂಗ್ರೆಸ್ ಇಬ್ಬಗೆ ನೀತಿ ಪಾಲಿಸುತ್ತಿದೆ. ಗೋವಾ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಲ್ಲ ಎಂದು ಉಲ್ಲೇಖಿಸಿದೆ. ಇಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀರಿಗಾಗಿ ಹೈಟೆಕ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಕರ್ನಾಟಕ ವೋಟು ಬ್ಯಾಂಕ್ ನಿಮಗೆ ಆಗಿದೆ. ಗೋವಾ, ಕರ್ನಾಟಕದಲ್ಲಿ ಬೇರೆ ಬೇರೆ ಕಾಂಗ್ರೆಸ್ ಇದ್ಯಾ ಎಂದು ಪ್ರಶ್ನಿಸಿದ ಅವರು, ವೋಟಿಗಾಗಿ ಬೇರೆ ಬೇರೆ ನೀತಿ ಅನುಸರಿಸುತ್ತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ:ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ
ಕಾಂಗ್ರೆಸ್‍ನವರು ಮೇಕೆದಾಟು, ಮಹಾದಾಯಿ ವಿಚಾರ ಬಾಯಿ ಬಿಡುವ ನೈತಿಕತೆ ಕಳೆದುಕೊಂಡಿದ್ದೀರಿ. ನೀವು ಯಾವ ಕಾರ್ಯಕ್ರಮಕ್ಕೆ ಹೋದರೂ ಕಪ್ಪು ಬಟ್ಟೆ ಧರಿಸಿ ಧರಣಿ ಮುಂದುವರಿಸುತ್ತೇವೆ. ಕಾಂಗ್ರೆಸ್ ಪಾದಯಾತ್ರೆ ಇನ್ನು ಮುಂದೆ ಮಾಡಿದರೆ ನಾವು ತಡೆಯುವ ಪಾದಯಾತ್ರೆ ಹೋರಾಟ ಇನ್ನು ಮುಂದೆ ಮಾಡುತ್ತೇವೆ ಎಂದು ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ:ಅಗತ್ಯ ಬಿದ್ದರೆ ಬೊಗಳುತ್ತೇನೆ, ಇಲ್ಲವೇ ಕಚ್ಚುತ್ತೇನೆ: ಹರೀಶ್ ರಾವತ್
ಬೇರೆ ಬೇರೆ ಕಾಂಗ್ರೆಸ್ ನಾಯಕರ ಮನೆ ಮುಂದೆ ಧರಣಿ ತಡೆಯಲು ಪೊಲೀಸರು ಮುಂದಾಗಿದ್ದು, ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಸ್ತುತ ಬಿಜೆಪಿ ಸರ್ಕಾರವು ಮಹದಾಯಿ ನದಿಯನ್ನು ಕರ್ನಾಟಕಕ್ಕೆ ಕೊಡುಗೆಯಾಗಿ ನೀಡಿದೆ. ನದಿ ನೀರನ್ನು ಮರಳಿ ಪಡೆಯುತ್ತೇವೆ. ಕರ್ನಾಟಕಕ್ಕೆ ನೀರನ್ನು ಹರಿಸಲು ಬಿಡುವುದಿಲ್ಲ. ಮಹಾದಾಯಿ ಹೋರಾಟಕ್ಕಾಗಿ ಖ್ಯಾತ ವಕೀಲರ ದಂಡೇ ತೊಡಗಿಕೊಳ್ಳಲಿದೆ ಎಂದು ಶುಕ್ರವಾರ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿದೆ.
ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
150ಕ್ಕೂ ಹೆಚ್ಚು ಕನ್ನಡ ಸಂಘಟನೆಗಳ ಮುಖಂಡರು ಕುಮಾರಸ್ವಾಮಿ ಅವರ ಬಿಡದಿ ತೋಟದಲ್ಲಿ ಭೇಟಿಯಾಗಿ ಅವರ ಜೊತೆ ಮಾತುಕತೆ ನಡೆಸಿದರು. ಸಭೆಯ ನಂತರ ಕುಮಾರಸ್ವಾಮಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ ಎಂದರು. ಇದನ್ನೂ ಓದಿ: ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ್ದ ಬಿಜೆಪಿ ಮುಖಂಡನ ಮೇಲೆ ಪ್ರಕರಣ ದಾಖಲು
ರಾಜ್ಯದಲ್ಲಿ ಕನ್ನಡ ಸಂಘಟನೆಗಳ ಜೊತೆಗೆ ರೈತಪರ, ನೀರಾವರಿ ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಅನೇಕ ಸಂಘಟನೆಗಳಿವೆ. ಅವೆಲ್ಲವನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ವಿಶ್ವಾಸದ ಮಾತುಗಳನ್ನು ಆಡಿದರು.
ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಹೋರಾಟ ನಡೆಸಿ ಸಾಧಿಸಿಕೊಳ್ಳಬೇಕಿದೆ. ಆ ಗುರಿ ಸಾಧನೆಗಾಗಿ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ. ಈ ದಿಕ್ಕಿನಲ್ಲಿ ಜೆಡಿಎಸ್ ಪಕ್ಷ ಇಂಥ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಬೆಂಗಳೂರಿನಲ್ಲಿ ಸಭೆ:
ಇಂದು ಸುಮಾರು ನೂರೈವತ್ತಕ್ಕೂ ಹೆಚ್ಚು ಕನ್ನಡ ಮುಖಂಡರ ಜೊತೆ ಚರ್ಚೆ ನಡೆಸಿದ್ದೇನೆ. ಮುಂದಿನ ವಾರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಇವರೆಲ್ಲರ ಜೊತೆ ಮುಕ್ತವಾಗಿ ಮಾತುಕತೆ ನಡೆಸಲಿದ್ದೇನೆ. ಕನ್ನಡಿಗರ ನಿರುದ್ಯೋಗ ಸಮಸ್ಯೆ, ಖಾಸಗಿ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಇತ್ಯಾದಿ ವಿಷಯಗಳ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತದೆ. ಪ್ರಾದೇಶಿಕ ಪಕ್ಷದ ಸರ್ಕಾರ ತರುವ ದಿಸೆಯಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.
ರಾಷ್ಟ್ರೀಯ ಪಕ್ಷಗಳು ತಿರಸ್ಕೃತ:
ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚೆಚ್ಚು ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ. ಆದರೆ, ಅಧಿಕಾರದಲ್ಲಿದ್ದ ಅಲ್ಪಸ್ವಲ್ಪ ಅವಧಿಯಲ್ಲೇ ಜೆಡಿಎಸ್ ಪಕ್ಷವು ಜನರ ಆಶೋತ್ತರಗಳನ್ನು ಈಡೇರಿಸಿದೆ. ಈ ಬಗ್ಗೆ ಸರ್ಕಾರದ ಬಳಿ ನೈಜ ದಾಖಲೆಗಳೇ ಇವೆ. ಹಾಗೆಯೇ ಭಾಷೆಗೆ ಸಂಬಂಧಿಸಿದಂತೆ ಕನ್ನಡವು ದೆಹಲಿಯಿಂದ ನಾನಾ ರೀತಿಯ ಕಿರುಕುಳ ಅನುಭವಿಸುತ್ತಿದೆ. ಇದನ್ನು ತಪ್ಪಿಸಬೇಕಿದೆ ಎಂದು ಕರೆ ನೀಡಿದರು.
ಈ ಸಂಘಟನೆಯಲ್ಲಿ ರೈತ ಮುಖಂಡರನ್ನೂ ಒಗ್ಗೂಡಿಲಾಗುವುದು. ಜಾತಿ, ಮತ ಮತ್ತು ಧರ್ಮವನ್ನು ಮೀರಿ ಎಲ್ಲರನ್ನೂ ಒಂದು ವೇದಿಕೆಗೆ ತಂದು ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲ ಮುಖಂಡರ ಜತೆ ಮುಕ್ತವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಎರಡನೇ ಬಾರಿ ನಾನು ಮುಖ್ಯಮಂತ್ರಿಯಾದಾಗ ನನ್ನ 14 ತಿಂಗಳ ಆಡಳಿತಾವಧಿಯಲ್ಲಿ ನಾಲ್ಕೈದು ಬಾರಿ ವಿಧಾನಸಭೆಯಲ್ಲೇ ರೈತರ ಸಭೆ ಮಾಡಿದ್ದೇನೆ. ಆದರೆ ಸರ್ಕಾರ ಅಂಥ ಒಂದು ಸಭೆಯನ್ನೂ ಮಾಡಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ‘ನಿಮಗಾಗಿ ಆಸ್ತಿ ಮಾಡಿಲ್ಲ’ – ಹೆಂಡತಿಗೆ ಮರಣಪತ್ರ ಬರೆದು ಕಂದಾಯ ನೌಕರ ಆತ್ಮಹತ್ಯೆ
ಉತ್ತಮ ನಡವಳಿಕೆ ಅಲ್ಲ!
ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಬಗ್ಗೆ ಹಾದಿಬೀದಿಯಲ್ಲಿ ಲಘುವಾಗಿ ಮಾತನಾಡುವುದು, ಮಂತ್ರಿಗಳ ಬಗ್ಗೆ ಹೇಳಿಕೆಗಳನ್ನು ನೀಡುವುದು ಉತ್ತಮ ನಡವಳಿಕೆ ಅಲ್ಲ ಎಂದು ಅಭಿಪ್ರಾಯಪಟ್ಟರು.
ಸಮಸ್ಯೆಗಳಿದ್ದರೆ ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು. ಆದು ಬಿಟ್ಟು ಶಿಸ್ತಿನ ಪಕ್ಷ ಎಂದು ‘ಟ್ಯಾಗ್‍ಲೈನ್’ ಹಾಕಿಕೊಂಡ ಪಕ್ಷದಲ್ಲಿ ದಿನನಿತ್ಯ ಶಾಸಕರು ಸರ್ಕಾರ, ಮಂತ್ರಿಗಳ ಬಗ್ಗೆ ಮಾತನಾಡುವುದು ಉತ್ತಮ ಬೆಳವಣಿಗೆ ಅಲ್ಲ ಎಂದರು.
ಬೆಂಗಳೂರು: ಸದ್ಯಕ್ಕೆ ಕರ್ನಾಟಕ ಬಂದ್ ಮುಂದೂಡಿದ್ದೇವೆ. ಲಾಕ್‍ಡೌನ್ ಇಲ್ಲದಿದ್ದರೆ ಜನವರಿ 22ಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡಲು ತೀರ್ಮಾನಿಸಲಾಗಿತ್ತು. ಇಂದಿನ ಕನ್ನಡ ಸಂಘಟನೆಗಳ ಸಭೆಯ ನಿರ್ಣಯದಂತೆ ಬಂದ್ ಬದಲು ಮೆರವಣಿಗೆ ಮಾಡುತ್ತೇವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಬಂದ್ ಹಿಂಪಡೆದ ಬಳಿಕ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಕನ್ನಡ ಪರ ಹೋರಾಟಗಾರರ ಸಭೆ ಕರೆಯಲಾಗಿತ್ತು. ಕನ್ನಡ ಒಕ್ಕೂಟದ ರಾಜ್ಯಾದ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವುಡ್‍ಲ್ಯಾಂಡ್ಸ್ ಹೊಟೇಲ್‍ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಾಟಳ್ ನಾಗರಾಜ್ ಮಾತನಾಡಿ, ಕೊರೊನಾ ಮತ್ತು ಸರ್ಕಾರದ ಟಫ್ ರೂಲ್ಸ್ ಜಾರಿ ಹಿನ್ನೆಲೆ, ಜ.22 ರಂದು ಕರೆ ನೀಡಿದ್ದ ರಾಜ್ಯ ಬಂದ್ ಹಿಂಪಡೆದಿದ್ದೇವೆ. ಮುಂದಿನ ದಿನದಲ್ಲಿ ಲಾಕ್ ಡೌನ್ ಇಲ್ಲದಿದ್ದರೆ ಜ. 22 ರಂದೇ ಬೆಂಗಳೂರಲ್ಲಿ ಹಿಂದೆಂದು ನಡೆಯದ ರೀತಿಯಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ: ಭದ್ರತಾ ಲೋಪ – ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ
ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಹೋರಾಟದ ಕುರಿತು ಒಗ್ಗೂಡಿಸುತ್ತೇವೆ. 22ರ ಶನಿವಾರ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್‍ನಿಂದ ಬೃಹತ್ ಮೆರವಣಿಗೆ ಆರಂಭವಾಗುತ್ತದೆ, ಮೇಕೆದಾಟು, ಮಹದಾಯಿ, ಎಂಇಎಸ್ ಮೂರು ವಿಚಾರಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತೇವೆ. ಟೌನ್‍ಹಾಲ್‍ನಿಂದ ಸ್ವಾತಂತ್ರ್ಯ ಉದ್ಯಾನವನದ ವರೆಗೆ ದೊಡ್ಡ ಮೆರವಣಿಗೆ ಮಾಡುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನೆಡೆಸುವಂತೆ ಸಂಘಟನೆಗಳಿಗೆ ಕರೆ ನೀಡುತ್ತೇವೆ ಎಂದರು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು
ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯ ಮುಖಂಡರು ಭಾಗಿಯಾಗಿದ್ದರು.
ಬೆಂಗಳೂರು: ಜನ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಜನತೆಗೆ ಬಂದ್ ಮೂಲಕ ತೊಂದರೆ ಕೊಡುವುದು ಬೇಡ. ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು. ಸರ್ಕಾರ ನಿಮ್ಮ ಜೊತೆಗಿದೆ. ಹೀಗಿರುವಾಗ ಬಂದ್ ಕೈಬಿಟ್ಟು ಸಹಕರಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮನವಿ ಮಾಡಿದರು.
ಎಂಇಎಸ್ ವಿಚಾರದಲ್ಲಿ ಸದನದಲ್ಲಿಯೇ ಸಿಎಂ ಸ್ಪಷ್ಟವಾಗಿ ಸಂದೇಶ ಕೊಟ್ಟಿದ್ದಾರೆ. ನಾಡಿನ ವಿಚಾರದಲ್ಲಿ ನಮ್ಮ ಭಾಷೆ, ನೆಲ, ಜಲ ಎಲ್ಲ ವಿಚಾರದಲ್ಲಿ ಕಾಂಪ್ರಮೈಸ್ ಆಗುವ ಪ್ರಶ್ನೆಯೇ ಇಲ್ಲ. ಯಾರೇ ಕಿಡಿಗೇಡಿಗಳು ಸಣ್ಣ ಕೃತ್ಯ ಮಾಡಿದರೂ ಅವರನ್ನು ಬಗ್ಗು ಬಡಿಯುತ್ತೇವೆ. ನಾಡಿನ ಹಿತರಕ್ಷಣೆ ಮಾಡುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡಪರ ಸಂಘಟನೆ ಬಂದ್ ಉಚಿತವೂ ಅಲ್ಲ, ಸೂಕ್ತವೂ ಅಲ್ಲ ಎಂದ ಹೇಳಿದರು
ಸರ್ಕಾರಕ್ಕೆ ಸಲಹೆ ಸೂಚನೆ ಕೊಡಲಿ, ಅವುಗಳನ್ನು ಪರಿಗಣಿಸುತ್ತೇವೆ. ಬಂದ್ ನಿಂದ ಜನ ಸಮಸ್ಯೆಗೆ ಸಿಲುಕುತ್ತಾರೆ. ಹೀಗಾಗಿ ಬಂದ್ ಬೇಕಿಲ್ಲ. ಸರ್ಕಾರ ಕನ್ನಡ ಸಂಘಟನೆಗಳ ಸಲಹೆಗಳಿಗೆ ಕಣ್ಣು ಕಿವಿಯಾಗಿದೆ. ಹೀಗಾಗಿ ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ:ಬಟ್ಟೆ ಮಾಸ್ಕ್ ಬೇಡ.. ಎನ್95, ಕೆ95 ಮಾಸ್ಕ್‌ಗಳನ್ನೇ ಬಳಸಿ – ತಜ್ಞರ ಸಲಹೆ
ಸಿಎಂ ಜೊತೆ ಬಂದು ಮಾತನಾಡಿ, ನಿಮ್ಮ ಸಲಹೆಗಳಿಗೆ ಗೌರವಿಸುತ್ತೇವೆ. ಬಂದ್‍ಗೆ ಕರೆ ಕೊಟ್ಟಿದ್ದನ್ನು ಹಿಂಪಡೆಯಿರಿ. ಸರ್ಕಾರ ಕನ್ನಡ ಪರ ಸಂಘಟನೆ ಜೊತೆಗೆ ಮಾತುಕತೆಗೆ ಸಿದ್ಧವಿದೆ. ಈಗಾಗಲೇ ಬೆಳಗಾವಿ ಕೃತ್ಯದಲ್ಲಿ ಬಂಧಿಸಿದ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ. ಯಾವುದೇ ಸಂಘಟನೆ ಸಮಾಜಕ್ಕೆ ಕಂಟಕ ಆದರೂ ಅದಕ್ಕೆ ಅವಕಾಶ ಇಲ್ಲ ಎಂದರು.
ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ವಿಶ್ವ ಮೀನುಗಾರಿಕಾ ದಿನಾಚರಣೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ನಾನು ಸಿದ್ಧನಿದ್ದೇನೆ. ಬಂದ್ ಕರೆ ನೀಡುವುದು ಸೂಕ್ತ ಅಲ್ಲ. ಜನರು ಸಹ ಈ ನಡೆಯಲ್ಲ ಮೆಚ್ಚುವದಿಲ್ಲ. ಬಲವಂತದಿಂದ ಬಂದ್ ಮಾಡಲು ಎಲ್ಲಿಯೂ ನಾನು ಅವಕಾಶ ಕೊಡಲ್ಲ. ಪ್ರತಿಕೃತಿ ದಹನ ಮಾಡೋದು, ಕೆಟ್ಟದಾಗಿ ನಡೆದುಕೊಳ್ಳುತ್ತಿರುವುದನ್ನ ಗಮನಿಸಿದ್ದೇನೆ. ಬಹಳ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನ ರವಾನಿಸಿದರು.
ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ. ಆದರೆ ಪ್ರತಿಭಟನೆಗೆ ಬೇರೆ ಸ್ವರೂಪ ಕೊಡೋದು ಬೇಡ. ಎಲ್ಲ ವರ್ಗಗಳಿಗೂ ಸರ್ಕಾರ ನ್ಯಾಯ ಒದಗಿಸೋ ಕೆಲಸ ಸರ್ಕಾರ ಮಾಡುತ್ತಿದೆ. ಸರ್ಕಾರ ಯಾರಿಗೂ ಭೇದ ಭಾವ ಮಾಡುತ್ತಿಲ್ಲ. ಸರ್ಕಾರದ ಉದ್ದೇಶ ಅರ್ಥ ಮಾಡಿಕೊಂಡು ಸಹಕಾರ ಕೊಡಲಿ ಎಂದು ಸಿಎಂ ಹೇಳಿದರು.
ಬೆಂಗಳೂರು: ಉಪ ಚುನಾವಣೆ ಗೆಲ್ಲಲು ಬಿಜೆಪಿ ಮರಾಠಿ ಮಂತ್ರ ಜಪಿಸುತ್ತಿದ್ದು, ರಾಜ್ಯದಲ್ಲಿ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ಕರುನಾಡಿನಲ್ಲಿ ಕಿಚ್ಚು ಹೊತ್ತಿಸಿದೆ.
ಬಿಎಸ್‍ವೈ ಸರ್ಕಾರ ಶಿರಾ ಬೈ ಎಲೆಕ್ಷನ್ ಗೆಲ್ಲಲು ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮ ರಚಿಸಿ, 50 ಕೋಟಿ ಮೀಸಲಿರಿಸಿತ್ತು. ಎರಡು ದಿನಗಳ ಹಿಂದೆ ಮಠ ಮಾನ್ಯಗಳಿಗೆ 88 ಕೋಟಿ ರೂಪಾಯಿಯ ಹೊಳೆ ಹರಿಸಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಗೆಲ್ಲುವ ಸಲುವಾಗಿ ನಿನ್ನೆಯಷ್ಟೇ ಮರಾಠ ಅಭಿವೃದ್ಧಿ ನಿಗಮ ರಚಿಸಿ, ಅದಕ್ಕೂ 50 ಕೋಟಿ ಮೀಸಲಿರಿಸಿದೆ. ಮರಾಠ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚೌಹಾಣ್ ಬಹಿರಂಗವಾಗಿ ಘೋಷಿಸಿದ್ದಾರೆ.
ಈ ಮೂಲಕ ಸಮುದಾಯಗಳ ಓಲೈಕೆ ಪಾಲಿಟಿಕ್ಸ್ ನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ. ಕಾರಣ ಬಸವ ಕಲ್ಯಾಣದಲ್ಲಿ ಮರಾಠ ಸಮುದಾಯದ 40 ಸಾವಿರ ಮತಗಳು ಇವೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕೂಡ ಯಾರೇ ಗೆಲ್ಲಬೇಕಿದ್ರೂ ಮರಾಠ ಸಮುದಾಯದ ಬೆಂಬಲ ಬೇಕೇಬೇಕು. ಅಲ್ಲಿ ಅಂದಾಜು 6 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಈ ಮತಗಳನ್ನು ಗುರಿಯಾಗಿಸಿಕೊಂಡೇ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಅಸ್ತ್ರವನ್ನು ಬಿಎಸ್‍ವೈ ಸರ್ಕಾರ ಪ್ರಯೋಗಿಸಿದೆ. ಇದನ್ನೂ ಓದಿ:ದುರ್ದೈವದಿಂದ KSRTC, BMTC ನೌಕರರ ಸಂಬಳ ನೀಡಲು ಆಗಿಲ್ಲ: ಲಕ್ಷ್ಮಣ ಸವದಿ
ಕೇವಲ ಮತಕ್ಕಾಗಿ ನಾಡದ್ರೋಹಿಗಳು ಎನಿಸಿಕೊಂಡ ಮರಾಠ ಸಮುದಾಯವನ್ನು ಈ ರೀತಿ ಓಲೈಸುವುದು ಎಷ್ಟು ಸರಿ ಅನ್ನೋದು ಕನ್ನಡ ಪರ ಹೋರಾಟಗಾರರ ಪ್ರಶ್ನೆ. ಸರ್ಕಾರ ಕೂಡಲೇ ಅಭಿವೃದ್ಧಿ ನಿಗಮ ರಚನೆಯ ಆದೇಶವನ್ನು ಹಿಂಪಡೆಯಬೇಕು. ಇಲ್ಲದೇ ಇದ್ರೇ ನಾಡಿದ್ದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರರು ಎಚ್ಚರಿಸ್ತಿದ್ದಾರೆ.
ಬೆಳಗಾವಿ- ಮರಾಠ ಸಮುದಾಯದ ಓಲೈಕೆ ಏಕೆ?
ಬೆಳಗಾವಿಯ 17 ಲಕ್ಷ ಮತಗಳ ಪೈಕಿ 6.5 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಮರಾಠ ಸಮುದಾಯದ ಬೆಂಬಲ ಗಿಟ್ಟಿಸಿದ್ದ ಬಿಜೆಪಿಯ ಸುರೇಶ್ ಅಂಗಡಿ ಈಗಿಲ್ಲ. ಸುರೇಶ್ ಅಂಗಡಿ ಅನುಪಸ್ಥಿತಿಯಲ್ಲಿ ಮರಾಠ ವೋಟ್ ಬ್ಯಾಂಕ್ ಛಿದ್ರವಾಗುವ ಭೀತಿ ಬಿಜೆಪಿಗೆ ಕಾಡುತ್ತಿದೆ. ಮಹಾರಾಷ್ಟ್ರದ ರಾಜಕೀಯ ಉಪ ಲೋಕಸಮರದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್ ಜೊತೆ ಶಿವಸೇನೆ ಇರುವ ಕಾರಣ, ಮರಾಠ ಮತಗಳು ಕೈಗೆ ಹೋಗುವ ಸಂಭವ ಹೆಚ್ಚು ಎನ್ನಲಾಗಿದೆ. ಹೀಗಾಗಿಯೇ ಮರಾಠ ಸಮುದಾಯದ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ನಿಗಮ ರಚಿಸಿದೆ ಎಂದು ಹೇಳಲಾಗುತ್ತಿದೆ.
ಬಸವಕಲ್ಯಾಣ- ಮರಾಠ ಸಮುದಾಯದ ಓಲೈಕೆ ಏಕೆ?
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ 2.40 ಲಕ್ಷ ಮತಗಳನ್ನು ಹೊಂದಿದೆ. ಇದರಲ್ಲಿ ಮರಾಠ ಸಮುದಾಯದ ಅಂದಾಜು 45,000 ಮತಗಳಿವೆ. ಇಲ್ಲಿ ಯಾರೇ ಗೆಲ್ಲಬೇಕಿದ್ದರೂ ಮರಾಠ ಮತಗಳು ಬೇಕೇಬೇಕು. ಬಸವಕಲ್ಯಾಣದ ಮೇಲೆಯೂ ‘ಮಹಾ’ ಪಾಲಿಟಿಕ್ಸ್ ಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚು. ಹೀಗಾಗಿಯೇ, ಸಮುದಾಯದ ಓಲೈಕೆಗಾಗಿ ಮರಾಠ ಅಭಿವೃದ್ಧಿ ನಿಗಮದ ಅಸ್ತ್ರ ಪ್ರಯೋಗಿಸಿದೆ ಎಂಬುವುದು ರಾಜಕೀಯ ಅಂಗಳದ ಮಾತು.
ವಿರೋಧ ಏಕೆ?: ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದಿಂದ ಕಡಿಮೆ ಅನುದಾನ ನೀಡಲಾಗಿದೆ. ಈ ವರ್ಷ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೇವಲ 2 ಕೋಟಿ ರೂ. ನೀಡಲಾಗಿದೆ. ಈ ಮೊದಲು ವಾರ್ಷಿಕ 5 ಕೋಟಿ ರೂ. ನೀಡಲಾಗಗುತ್ತಿತ್ತು. 2 ಕೋಟಿ ಎಲ್ಲಿ?50 ಕೋಟಿ ಎಲ್ಲಿ? ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ ಎಂದು ಕನ್ನಡ ಪರ ಹೋರಾಟಗಾರರು ಪ್ರಶ್ನೆ ಮಾಡುತ್ತಿದ್ದಾರೆ.
ಪ್ರತಿ ವರ್ಷ ನ.1ರಂದು ಮರಾಠಿಗರಿಂದ ಕರಾಳ ದಿನ ಆಚರಣೆ ಮಾಡುತ್ತಾರೆ. ಹೀಗಿದ್ದರೂ ಮರಾಠಿ ಸಮುದಾಯದ ಮೇಲೆ ಸರ್ಕಾರಕ್ಕೆ ಪ್ರೀತಿ ಏಕೆ?. ಹೀಗಾಗಿಯೇ ಕನ್ನಡ ಪರ ಹೋರಾಟಗಾರರಿಂದ ಮರಾಠ ನಿಗಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಬೊಕ್ಕಸದಲ್ಲಿ ದುಡ್ಡಿಲ್ಲ ಎಂಬ ನೆಪ ಹೆಳಿ, ವಿವಿಧ ಪ್ರಶಸ್ತಿಗಳು, ಪಿಹೆಚ್‍ಡಿ, ಎಂಫಿಲ್ ಮಾಡೋರ ವಿದ್ಯಾರ್ಥಿ ವೇತನಕ್ಕೂ ಕತ್ತರಿ ಹಾಕಿರೋದು ಕನ್ನಡ ಪರ ಹೋರಾಟಗಾರರನ್ನು ಸಿಟ್ಟಿಗೆಬ್ಬಿಸಿದೆ.
ಬೆಂಗಳೂರು: ಕನ್ನಡಪರ ಸಂಘಟನೆಯವರು ಎಂದು ಹೇಳಿಕೊಂಡು ಬಂದವರಿಗೆ ಸರೋಜಿನಿ ಮಹಿಷಿ ವರದಿ ಬಗ್ಗೆ ಗೊತ್ತಿಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಸರೋಜಿನಿ ಮಹಿಷಿ ವರದಿ ಸಂಬಂಧ ಚರ್ಚೆಗೆ ಸಿಎಂ ಯಡಿಯೂರಪ್ಪನವರು ಕನ್ನಡಪರ ಸಂಘಟನೆಗಳ ಮುಖಂಡರಿಗೆ ಮಾತುಕತೆಗೆ ಆಹ್ವಾನ ಕೊಟ್ಟಿದ್ದರು. ಆದರೆ ಬಂದ್ ಗೆ ಕರೆಕೊಟ್ಟ ಯಾವ ಸಂಘಟನೆಗಳ ಪ್ರತಿನಿಧಿಗಳೂ ಸಿಎಂ ಜೊತೆ ಮಾತುಕತೆಗೆ ಬರಲಿಲ್ಲ. ಬದಲಾಗಿ ಬಂದ್ ಗೆ ಬೆಂಬಲ ಇಲ್ಲದ ಕನ್ನಡಪರ ಸಂಘಟನೆಯೊಂದರ ಬೆರಳೆಣಿಕೆಯಷ್ಟು ಕಾರ್ಯಕರ್ತರು ಇವತ್ತು ಸಿಎಂ ಭೇಟಿಗೆ ಡಾಲರ್ಸ್ ಕಾಲೋನಿ ನಿವಾಸದ ಬಳಿ ಬಂದಿದ್ದರು. ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.85 ಮೀಸಲಾತಿ ಕುರಿತು ಮುಂಬರುವ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಅನ್ನೋದು ಈ ಕನ್ನಡ ಸಂಘಟನೆ ಕಾರ್ಯಕರ್ತರ ಒತ್ತಾಯ ಆಗಿತ್ತು.
ಕೆಲ ಹೊತ್ತಿನ ಬಳಿಕ ಮುಖ್ಯಮಂತ್ರಿಗಳು ವಿಧಾನಸೌಧಕ್ಕೆ ಹೋಗಲು ಧವಳಗಿರಿ ನಿವಾಸದಿಂದ ಹೊರಬಂದರು. ಈ ವೇಳೆ ಕನ್ನಡಪರ ಕಾರ್ಯಕರ್ತರು ಎಂದು ಹೇಳಿಕೊಂಡವರು ಸಿಎಂಗೆ ತಮ್ಮ ಮನವಿ ಪತ್ರ ಕೊಟ್ಟು ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.85 ರಷ್ಟು ಮೀಸಲಾತಿಗೆ ಒತ್ತಾಯಿಸಿದರು. ಅಲ್ಲದೇ ಬಜೆಟ್ ನಲ್ಲಿ ಘೋಷಣೆ ಮಾಡಲಿಲ್ಲ ಅಂದ್ರೆ ವಿಧಾನಸೌಧದ ಮುಂದೆ ವಿಷ ಕುಡಿಯಬೇಕಾಗುತ್ತೆ ಎಂದೂ ಈ ಕನ್ನಡ ಪರ ಕಾರ್ಯಕರ್ತರು ಸಿಎಂ ಗೆ ಎಚ್ಚರಿಕೆ ನೀಡಿದರು. ಇವರ ಈ ಎಚ್ಚರಿಕೆಗೆ ಸಿಎಂ ಯಡಿಯೂರಪ್ಪ, ಹಾಗೆಲ್ಲ ಎಚ್ಚರಿಕೆ ಕೊಡೋಕೆ ಬರಬೇಡಿ ಎಂದು ಸಿಟ್ಟಾದ್ರು. ಸಿಟ್ಟಲ್ಲೇ ಸಿಎಂ ವಿಧಾನಸೌಧಕ್ಕೆ ತೆರಳಿದರು.
ಇವರಿಗೆ ಮಹಿಷಿ ವರದಿ ಬಗ್ಗೆ ಗೊತ್ತೇ ಇಲ್ಲವಾ?:
ಅಸಲಿ ವಿಷಯ ಈಗ ಇರೋದು. ಅಷ್ಟಕ್ಕೂ ಈ ಸಂಘಟನೆಯ ರಾಜ್ಯಾಧ್ಯಕ್ಷ ಅಂತ ಹೇಳಿಕೊಂಡಿರುವ ವ್ಯಕ್ತಿಗೇ ಸರೋಜಿನಿ ಮಹಿಷಿ ವರದಿ ಬಗ್ಗೆ ಮಾಹಿತಿ ಗೊತ್ತಿರಲಿಲ್ಲ. ಈ ಕನ್ನಡಪರ ಸಂಘಟನೆ ಮುಖಂಡರಿಗೆ ಮಹಿಷಿ ವರದಿ ಬಗ್ಗೆ ಮಾಹಿತಿ ಗೊತ್ತಿಲ್ಲದೇ ಸಿಎಂಗೆ ಮನವಿ ಕೊಡಲು ಬಂದು ಪೇಚಿಗೆ ಸಿಲುಕಿದ ಪ್ರಸಂಗ ನಡೆಯಿತು. ಸಿಎಂ ಭೇಟಿ ಬಳಿಕ ಈ ಕನ್ನಡಪರ ಸಂಘಟನೆಯ ಅಧ್ಯಕ್ಷರಿಗೆ ಮಾಧ್ಯಮದವರು ಸರೋಜಿನಿ ಮಹಿಷಿ ವರದಿ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಆದರೆ ಸಂಘಟನೆಯ ಅಧ್ಯಕ್ಷರಿಗೇ ಸರೋಜಿನಿ ಮಹಿಷಿ ಯಾರು, ಅವರ ವರದಿ ಯಾವಾಗ ಬಂತು ಅನ್ನೋ ಮಾಹಿತಿ ಗೊತ್ತಿಲ್ಲ. ಇನ್ನು ಮಹಿಷಿ ವರದಿ ಪರಿಷ್ಕರಣೆ ಯಾವಾಗಾಯ್ತು ಎಂಬುದೂ ಗೊತ್ತಿಲ್ಲ.
ಸರೋಜಿನಿ ಮಹಿಷಿ ವರದಿಯಲ್ಲಿರೋ ಶಿಫಾರಸ್ಸು ಅಂಶಗಳೂ ಈ ಸಂಘಟನೆ ಅಧ್ಯಕ್ಷರಿಗೆ ಗೊತ್ತಿಲ್ಲ. ವರದಿ ಅನುಷ್ಠಾನ ಯಾವಾಗಾಯ್ತು ಎಂದರೆ ಒಬ್ಬಬ್ಬರದ್ದೂ ಒಂದೊಂದು ಮಾತು. ಅಧ್ಯಕ್ಷ ಮಾಧ್ಯಮಗಳಿಗೆ ವರದಿ ಯಾವಾಗ ಆಯ್ತು ಅಂತ ತಪ್ಪು ಹೇಳ್ತಿದ್ರೆ, ಹಿಂದೆ ನಿಂತಿದ್ದ ಸಂಘಟನೆಯ ಇತರೇ ಕಾರ್ಯಕರ್ತರು ತಲೆ ತಲೆ ಚಚ್ಚಿಕೊಂಡ ಪ್ರಸಂಗವೂ ಸಹ ನಡೆಯಿತು.
ಬೆಂಗಳೂರು: ಸಂಕ್ರಾಂತಿ ಹಬ್ಬ ಅಂದರೆ ಸಡಗರ ಸಂಭ್ರಮ ಜೋರಾಗಿರುತ್ತೆ. ಮನೆಯ ಮುಂದೆ ಬಣ್ಣದ ರಂಗೋಲಿ ಹಾಕಿ, ಎಳ್ಳು ಬೆಲ್ಲ ಬೀರಿ, ಕಬ್ಬು ಸವಿದು ಹಬ್ಬದೂಟ ಮಾಡುವ ಖುಷಿ ಇರುತ್ತೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಕನ್ನಡ ಸಂಘಟನೆ ಕಾರ್ಯಕರ್ತರು, ಮಹಿಳೆಯರು ರಸ್ತೆಯಲ್ಲೇ ಸಂಕ್ರಾಂತಿ ಆಚರಿಸಿದರು.
ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಮೌರ್ಯ ಸರ್ಕಲ್‍ನಲ್ಲಿ ಸಾಕಷ್ಟು ದಿನದಿಂದ ಕನ್ನಡ ಸಂಘಟನೆಯವರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ರಸ್ತೆಯಲ್ಲಿಯೇ ರಂಗೋಲಿ ಹಾಕಿ, ರಸ್ತೆಯಲ್ಲಿ ಓಡಾಡೋ ಜನರಿಗೆ ಎಳ್ಳು ಬೆಲ್ಲ ಕೊಟ್ಟು, ಹಬ್ಬದ ಖಾದ್ಯವನ್ನು ಅಲ್ಲಿಯೇ ತಯಾರಿಸಿ ಭಿನ್ನವಾಗಿ ಕನ್ನಡ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.
ರಸ್ತೆಯಲ್ಲಿ ಹಬ್ಬ ಆಚರಿಸಿದ ಬಗ್ಗೆ ಮಾತನಾಡಿದ ಕಾರ್ಯಕರ್ತರು, ಹಬ್ಬ ಅಂದರೆ ಸಂಭ್ರಮವಿರುತ್ತದೆ. ಆದರೆ ನಾವು ಕನ್ನಡಕ್ಕಾಗಿ, ಕನ್ನಡಿಗರ ಅಭಿವೃದ್ಧಿಗಾಗಿ ಸಂಕ್ರಾಂತಿಯನ್ನು ಇಲ್ಲೇ ಆಚರಣೆ ಮಾಡುತ್ತಿದ್ದೇವೆ. ಮುಂದೆ ಸರೋಜಿನಿ ಮಹಿಷಿ ವರದಿ ಜಾರಿಯಾಗದೇ ಇದ್ದರೆ ತಿಥಿನೂ ಇಲ್ಲೇ ಮಾಡುತ್ತೇವೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.