Tag: ಕನ್ನಡ ಸಿನಿ ರಂಗ

  • ಕ್ರೇಜಿಸ್ಟಾರ್ ರವಿಚಂದ್ರನ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಕ್ರೇಜಿಸ್ಟಾರ್ ರವಿಚಂದ್ರನ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಕ್ರೇಜಿಸ್ಟಾರ್ ರವಿಚಂದ್ರನ್ ಕಲಾವಿದನಾಗಿ ಸಾಕಷ್ಟು ವರ್ಷಗಳಿಂದ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಹಲವಾರು ಪಾತ್ರಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಟ ರವಿಚಂದ್ರನ್ ಅವರ ಸಾಧನೆಯನ್ನು ಗುರುತಿಸಿ ಇಂದು ಬೆಂಗಳೂರು ವಿಶ್ವವಿದ್ಯಾನಿಲಯದ ಚೊಚ್ಚಲ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

    ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನಟ ರವಿಚಂದ್ರನ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು. ಇನ್ನು 85ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಟ ರವಿಚಂದ್ರನ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಇದನ್ನು ಓದಿ:ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್

    ಇನ್ನು ಕಾರ್ಯಕ್ರಮದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿ. ರವಿಚಂದ್ರನ್, ಸಮಾಜ ಸೇವೆಗಾಗಿ ಎಂ. ಆರ್ ಜೈ ಶಂಕರ್, ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸತ್ಯನಾರಾಯಣ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಇನ್ನು ಈ ವೇಳೆ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್ ಪತ್ನಿ ಸುಮತಿ, ಮಕ್ಕಳಾದ ವಿಕ್ರಮ್, ಮನೋರಂಜನ್, ಗೀತಾಂಜಲಿ, ಅಳಿಯ ಅಜಯ್ ಭಾಗಿಯಾಗಿದ್ದರು. ಈ ಸುದ್ದಿ ಕೇಳಿ ಕ್ರೇಜಿಸ್ಟಾರ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಯಾವ ಅಕ್ಷರದಿಂದ ನೊಂದವರ ಮನಸ್ಸಿಗೆ ಸಾಂತ್ವನ ಹೇಳಲಿ: ಜಗ್ಗೇಶ್

    ಯಾವ ಅಕ್ಷರದಿಂದ ನೊಂದವರ ಮನಸ್ಸಿಗೆ ಸಾಂತ್ವನ ಹೇಳಲಿ: ಜಗ್ಗೇಶ್

    ಬೆಂಗಳೂರು: ಹಿರಿಯ ನಟ ಶಂಖನಾದ ಅರವಿಂದ್ ಹಾಗೂ ನಿರ್ದೇಶಕ ರೇಣುಕಾ ಶರ್ಮಾ ಅವರ ಅಗಲಿಕೆಗೆ ಯಾವ ಅಕ್ಷರದಿಂದ ನೊಂದವರ ಮನಸ್ಸಿಗೆ ಸಾಂತ್ವನ ಹೇಳಲಿ ಎಂದು ನಟ ಜಗ್ಗೇಶ್ ಕಂಬನಿ ಮಿಡಿದು ಸಾಮಾಜಿಕ ಜಾಲತಾಣದಲ್ಲಿ ನೋವಿನಿಂದ ಪೋಸ್ಟ್ ಮಾಡಿದ್ದಾರೆ.

     

    ಏನೆಂದು ಬರೆಯಲಿ, ಯಾವ ಅಕ್ಷರದಲ್ಲಿ ಸಾಂತ್ವನ ಹೇಳಲಿ ಯಾವ ಅಕ್ಷರದಿಂದ ಇವರ ಮನೆಯ ನೊಂದವರನ್ನು ಸಮಾಧಾನ ಪಡಿಸಲಿ? ಒಂದಂತೂ ಹೇಳುವೆ ನಿಮ್ಮಗಳ ಜೊತೆ ನಾನು ಕಳೆದ ಸಮಯ ಮಾತ್ರ ಅವಿಸ್ಮರಣೀಯ. ನಿಮ್ಮ ಆತ್ಮ ರಾಯರಲ್ಲಿ ಲೀನವಾಗಲಿ. ನಿಮ್ಮ ಮನೆಯವರಿಗೆ ಧೈರ್ಯ ಆ ರಾಯರೆ ತುಂಬಲಿ. ಓಂ ಶಾಂತಿ….ಸದ್ಗತಿ ಎಂದು ಬರೆದುಕೊಂಡಿದ್ದಾರೆ.

    ಜ.23ರಂದು ಶಂಖನಾದ ಅರವಿಂದ್ ಅವರ ಪತ್ನಿ ರಮಾ ಅವರೂ ಸಹ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದರು. ರಮಾ ಅವರೂ ಕನ್ನಡ ಸಿನಿ ರಂಗದಲ್ಲಿ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ನಿನ್ನೆಯಷ್ಟೆ ಕವಿರತ್ನ ಕಾಳಿದಾಸ ಸಿನಿಮಾದ ನಿರ್ದೇಶಕ ರೇಣುಕಾ ಶರ್ಮಾ ಅವರೂ ಸಹ ಕೊರೊನಾದಿಂದ ಕೊನೆಯುಸಿರೆಳೆದಿದ್ದರು. ಅದಕ್ಕೂ ಹಿಂದೆ ನಿರ್ಮಾಪಕ ರಾಮು, ಎಂ. ಚಂದ್ರಶೇಖರ್, ನಿರ್ದೇಶಕ ನವೀನ್ ಕುಮಾರ್ ಸೇರಿದಂತೆ ಇನ್ನೂ ಹಲವಾರು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದನ್ನು ಓದಿ: ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ ಕೊರೊನಾ ವೈರಸ್‍ಗೆ ಬಲಿ