Tag: ಕನ್ಹಯ್ಯಾ ಕುಮಾರ್

  • ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

    ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

    ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ (Congress) ಅಭ್ಯರ್ಥಿ ಕನ್ಹಯ್ಯಾ ಕುಮಾರ್ (Kanhaiya Kumar) ಮೇಲೆ ಹಲ್ಲೆ ಮಾಡಲಾಗಿದೆ. ಹೂ ಮಾಲೆ ಹಾಕುವ ನೆಪದಲ್ಲಿ ಬಂದು ದುಷ್ಕರ್ಮಿಗಳು ಸುತ್ತುವರಿದು ಕಪ್ಪು ಮಸಿ ಎರಚುವುದಲ್ಲದೇ ಕಪಾಳಕ್ಕೆ ಹೊಡೆದಿದ್ದಾರೆ ಎಂದು ವರದಿಯಾಗಿದೆ.

    ಕರ್ತಾರ್ ನಗರದ (Kartar Nagar) ಎಎಪಿ ಕಚೇರಿ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಆಪ್ ಕಚೇರಿಯಿಂದ ಕನ್ಹಯ್ಯಾ ಅವರಿಗೆ ಬೀಳ್ಕೊಡಲು ಬಂದಾಗ ಮಸಿ ಎರಚಲಾಗಿದೆ. ದುಷ್ಕರ್ಮಿಗಳಿಂದ ಕನ್ಹಯ್ಯಾ ಅವರನ್ನು ರಕ್ಷಿಸಲು ಮಧ್ಯಪ್ರವೇಶ ಮಾಡಿದ ಎಎಪಿ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮಾ ಅವರೊಂದಿಗೂ ದುಷ್ಕರ್ಮಿಗಳು ಅನುಚಿತ ವರ್ತನೆ ಮಾಡಿದ್ದಾರೆ. ಇದನ್ನೂ ಓದಿ: ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿ

    ಈ ಬಗ್ಗೆ ದೂರು ದಾಖಲಿಸಿರುವ ಛಾಯಾ ಗೌರವ್ ಶರ್ಮಾ, ತಮ್ಮ ಪತಿಯನ್ನು ಪಕ್ಕಕ್ಕೆ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಜನರ ಮೇಲೆ ಕಪ್ಪು ಮಸಿ ಎಸೆದಿದ್ದು, ಘಟನೆಯಲ್ಲಿ 3-4 ಮಹಿಳೆಯರು ಸೇರಿ ಕೆಲವರು ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಅರೆಸ್ಟ್‌

    ಈ ನಡುವೆ ದಾಳಿಕೋರರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡಿರುವ ದುಷ್ಕರ್ಮಿಗಳ ಪೈಕಿ ಇಬ್ಬರು ವ್ಯಕ್ತಿಗಳು ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ಅವರು ದೇಶವನ್ನು ವಿಭಜಿಸುವ ಬಗ್ಗೆ, ಭಾರತೀಯ ಸೇನೆಯ ವಿರುದ್ಧ ಮಾತನಾಡುತ್ತಾರೆ. ಅವರಿಗೆ ಇಂದು ನಾವು ಚಿಕಿತ್ಸೆ ನೀಡಿದ್ದೇವೆ ಎಂದು ದುಷ್ಕರ್ಮಿಗಳು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಭಕ್ತರು ಸಜೀವ ದಹನ!

  • ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್

    ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್

    ನವದೆಹಲಿ: ಸಿಪಿಎಂ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯಾ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ನಾನು ಬಿಜೆಪಿಯನ್ನು ತುಕ್ಡೆ-ತುಕ್ಡೆ( Tukde-Tukde) ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

    ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂದು ದೃಢವಾಗಿ ನಂಬಿದ್ದೇನೆ. ಆ ಪಕ್ಷದ ಸೋಲನ್ನು ನಾನು ನೋಡುತ್ತೇನೆ. ಬಿಜೆಪಿ ನನ್ನನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಕರೆಯುತ್ತದೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಬಿಜೆಪಿ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಎಂದು ಪರಿಗಣಿಸುತ್ತದೆ ಹೊರತು, ಗಾಂಧೀಜಿಯನ್ನಲ್ಲ ಎಂದು ಕಿಡಿ ಕಾರಿದ್ದಾರೆ.

    ಮಹಾತ್ಮ ಗಾಂಧೀಯವರ ಹಂತಕ ನಾಥೂರಾಮ್ ಗೋಡ್ಸೆಯನ್ನು ಉಲ್ಲೇಖಿಸಿದ ಕನ್ಹಯ್ಯ ಕುಮಾರ್, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತಾ ಶಾ ಅವರನ್ನು ನಾಥೂರಾಮ್- ಬನಾಯಿ ಜೋಡಿ ಎಂದು ಕರೆದಿದ್ದಾರೆ. ಬಿಜೆಪಿ ಪಕ್ಷದ ಸಿದ್ಧಾಂತ ರಾಷ್ಟ್ರಪಿತನ ವಿರುದ್ಧ ಸಂಪೂರ್ಣ ವಿರುದ್ಧವಾಗಿದೆ ಎಂದಿದ್ದಾರೆ.

    ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಕನ್ನಯ್ಯ ಕುಮಾರ್ ಈ ಹಿಂದೆ ಹೇಳಿದ್ದರು.