Tag: ಕಪ್ಪು ಬಾವುಟ

  • ಚಾಮರಾಜನಗರ ದಸರಾ ಉದ್ಘಾಟನೆಯಲ್ಲಿ ಕಪ್ಪು ಬಾವುಟ ಪ್ರದರ್ಶನ: ವಿ. ಸೋಮಣ್ಣ ಕೆಂಡಾಮಂಡಲ

    ಚಾಮರಾಜನಗರ ದಸರಾ ಉದ್ಘಾಟನೆಯಲ್ಲಿ ಕಪ್ಪು ಬಾವುಟ ಪ್ರದರ್ಶನ: ವಿ. ಸೋಮಣ್ಣ ಕೆಂಡಾಮಂಡಲ

    ಚಾಮರಾಜನಗರ: ಜಿಲ್ಲೆಯ ದಸರಾ (Dasara) ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ವೇಳೆ ಕಾಂಗ್ರೆಸ್ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ (R.P. Nanjundaswamy)ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಸಚಿವ ವಿ. ಸೋಮಣ್ಣನವರು (V. Somanna) ಕೆಂಡಾಮಂಡಲವಾಗಿದ್ದಾರೆ.

    ಚಾಮರಾಜೇಶ್ವರ ದೇವಾಲಯದ (Chamarajeshwara Temple) ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲು ವಿ. ಸೋಮಣ್ಣನವರು ವೇದಿಕೆ ಏರಿ ಕುಳಿತಂತೆ ಅಲ್ಲೇ ಇದ್ದ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ದೀಪಾಲಂಕಾರದ ಅವ್ಯವಸ್ಥೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ ನೀಡಿದ ವೈದ್ಯ – ಆಸ್ಪತ್ರೆಯಲ್ಲಿ ಮಗು ಸಾವು

    ಬಳಿಕ ಅಲ್ಲಿಯೇ ಇದ್ದ ಪೊಲೀಸರು ನಂಜುಂಡಸ್ವಾಮಿ ಅವರನ್ನು ಹೊರಕ್ಕೆ ಎಳೆದೊಯ್ದರು. ಈ ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸೋಮಣ್ಣ ಅವರು, ಪೊಲೀಸರು ಏನು ಮಾಡುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದ್ದಾರೆ.  ಇದನ್ನೂ ಓದಿ: ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಕ್ಕಿಲ್ಲ ಅನ್ನೋ ನೋವಿದೆ, ಆದ್ರೆ ನಾನು ಹಿಂದೆ ಸರಿಯಲ್ಲ: ಶ್ರೀರಾಮುಲು

    Live Tv
    [brid partner=56869869 player=32851 video=960834 autoplay=true]

  • ಸುವೆಂದು ಅಧಿಕಾರಿಗೆ ಕಪ್ಪು ಬಾವುಟ ಪ್ರದರ್ಶನ – ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

    ಸುವೆಂದು ಅಧಿಕಾರಿಗೆ ಕಪ್ಪು ಬಾವುಟ ಪ್ರದರ್ಶನ – ಟಿಎಂಸಿ, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

    ಕೋಲ್ಕತ್ತಾ: ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆದ ರ್‍ಯಾಲಿ ವೇಳೆ ಬಂಗಾಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರಿಗೆ ಕಪ್ಪು ಬಾವುಟವನ್ನು ತೋರಿಸಿದ ಹಿನ್ನೆಲೆ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ.

    ಘಟನೆ ವೇಳೆ ಸುಮಾರು 10 ಮಂದಿ ಗಾಯಗೊಂಡಿದ್ದು, ಈ ಪೈಕಿ ಮೂವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ತಾರಕೇಶ್ವರ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಏಳು ಮಂದಿಗೆ ಪ್ರಥಮ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ಸಮಸ್ತ್ರದಲ್ಲೇ ಮಲ ವಿಸರ್ಜನೆ ಮಾಡಿದ್ದಕ್ಕೆ ಬಾಲಕನ ಮೇಲೆ ಬಿಸಿನೀರು ಸುರಿದ ಶಿಕ್ಷಕ

    ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಾರಕೇಶ್ವರಕ್ಕೆ ರಾಜಕೀಯ ಸಭೆಯನ್ನುದ್ದೇಶಿಸಿ ಮಾತನಾಡಲು ಮುಂದಾದಾಗ ಟಿಎಂಸಿ ವ್ಯಕ್ತಿಗಳು ಕಪ್ಪು ಬಾವುಟವನ್ನು ತೋರಿಸಿದ್ದು, ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಕೋಡಿ ಬಿದ್ದ ಬೃಹತ್ ಕೆರೆ – ರೈತರ ಮೊಗದಲ್ಲಿ ಮಂದಹಾಸ

    ಈ ಕುರಿತಂತೆ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿಯೊಬ್ಬರು, ಕಪ್ಪು ಬಾವುಟ ತೋರಿಸಿ ಗಲಾಟೆ ಹಬ್ಬಿಸಿದ್ದರು. ಇದರಿಂದ ಗುಂಪು ಚದುರಿಸಿ ಪರಿಸ್ಥಿತಿ ಹತೋಟಿಗೆ ತರಲು ಹರಸಾಹಸ ಪಡುವಂತಾಯಿತು. ಅಲ್ಲದೇ ಘಟನೆಯಲ್ಲಿ ಹಿರಿಯ ನಾಯಕ ರಾಹುಲ್ ಸಿನ್ಹಾ ಅವರು ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ? : ಸಿದ್ದರಾಮಯ್ಯ

    ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ? : ಸಿದ್ದರಾಮಯ್ಯ

    ಚಿಕ್ಕಮಗಳೂರು: ಮಹಾತ್ಮ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ ಎಂದು ಬಿಜೆಪಿ ಪ್ರತಿಭಟನಾಕಾರರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಫಿನಾಡು ಚಿಕ್ಕಮಗಳೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯನವರು ಮಾತನಾಡಿ, ಮಹಾತ್ಮ ಗಾಂಧಿಯನ್ನೇ ಕೊಂದವರು, ನನ್ನನ್ನು ಬಿಡುತ್ತಾರಾ? ಮಹಾತ್ಮಾ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಅವರ ಫೋಟೋವನ್ನು ಇಟ್ಟು ಬಿಜೆಪಿ ಯವರು ಪೂಜೆ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ಮತ್ತೊಂದೆಡೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಅಲ್ಲದೇ ಪ್ರತಿಭಟನೆ ವೇಳೆ ಸಾವರ್ಕರ್ ಫೋಟೋ ಹಿಡಿದು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು ಮಾಡಿದೆ: ಶಿವರಾಮ್ ಗಂಭೀರ ಆರೋಪ

    ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಗುರುವಾರ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ವೇಳೆ `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ ಎಂಬಿತ್ಯಾದಿ ಘೋಷಣೆಗಳ ಮೂಲಕ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅಲ್ಲದೇ ಅಲ್ಲಿನ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ವಾತಾವರಣ ಉದ್ವಿಗ್ನಗೊಂಡಿತ್ತು. ಇದೇ ವೇಳೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಈ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ.

    Live Tv
    [brid partner=56869869 player=32851 video=960834 autoplay=true]