Tag: ಕಬ್ಬನ್ ಪಾರ್ಕ್

  • ಕಬ್ಬನ್ ಪಾರ್ಕ್‌ನಲ್ಲಿ ನಡೆಯಬೇಕಿದ್ದ ಬ್ಲೈಂಡ್ ಡೇಟಿಂಗ್ ಶೋ ಕ್ಯಾನ್ಸಲ್

    ಕಬ್ಬನ್ ಪಾರ್ಕ್‌ನಲ್ಲಿ ನಡೆಯಬೇಕಿದ್ದ ಬ್ಲೈಂಡ್ ಡೇಟಿಂಗ್ ಶೋ ಕ್ಯಾನ್ಸಲ್

    ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ (Cubbon Park) ನಾಳೆಯಿಂದ (ಆ.2) ಆರಂಭವಾಗಬೇಕಿದ್ದ ಬ್ಲೈಂಡ್ ಡೇಟಿಂಗ್ ಕಾರ್ಯಕ್ರಮವೊಂದು ಆರಂಭ ಮಾಡುವುದಕ್ಕೂ ಮುನ್ನವೇ ಕ್ಯಾನ್ಸಲ್ ಆಗಿದೆ.

    ಬುಕ್ ಮೈ ಶೋ ಬ್ಲೈಂಡ್ ಡೇಟಿಂಗ್ (Blind Dating) ಕಾರ್ಯಕ್ರಮದ ಬಗ್ಗೆ ಜಾಹೀರಾತು ಪ್ರಕಟಿಸಿತ್ತು. 199 ರೂ.ಗೆ ಡೇಟಿಂಗ್ ಟಿಕೆಟ್ ನೀಡುವುದಾಗಿ ಹೇಳಿಕೊಂಡಿದ್ದರು. ಅಪರಿಚಿತ ವ್ಯಕ್ತಿಗಳೊಂದಿಗೆ ಡೇಟಿಂಗ್ ಮಾಡಲು ಅವಕಾಶ ಕಲ್ಪಿಸುವ ಶೋ ಇದಾಗಿತ್ತು. ಇದನ್ನೂ ಓದಿ: ಚೀನಾ ಉದ್ಯಮಿಯಿಂದ 100 ಕೋಟಿ ರೂ. ಬಂಡವಾಳ ಹೂಡಿಕೆ

    18 ವರ್ಷ ತುಂಬಿರುವ ಯುವಕ-ಯುವತಿಯರಿಗೆ ಅಹ್ವಾನ ನೀಡಲಾಗಿತ್ತು. ಆಗಸ್ಟ್ 2 ರಿಂದ 31 ರವರೆಗೆ ಈ ಬ್ಲೈಂಡ್ ಡೇಟ್ ಈವೆಂಟ್ ನಡೆಯಲಿದೆ ಎಂದು ಆಯೋಜಕರು ಹೇಳಿಕೊಂಡಿದ್ದರು. ಇದನ್ನೂ ಓದಿ: ರಕ್ಷಕ್‌ ಬುಲೆಟ್‌ ಎಡವಟ್ಟಿನಿಂದ ಯುವಕನ ಕಾಲು ಮುರಿತ

    ಕಾರ್ಯಕ್ರಮದ ಬಗ್ಗೆ ತೋಟಗಾರಿಕೆ ಇಲಾಖೆ ನಿರಾಕರಿಸಿ ಆಯೋಜಕರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ಕಬ್ಬನ್ ಪಾರ್ಕ್ ಪೊಲೀಸರು ಆಯೋಜಕ ವಿನಿತ್‌ನನ್ನ ಕರೆಸಿ ವಿಚಾರಣೆ ಮಾಡಿದ್ದಾರೆ. ಇದನ್ನೂ ಓದಿ: ಕೂಡಲೇ ಒಳಮೀಸಲಾತಿ ಜಾರಿ ಮಾಡದಿದ್ರೆ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ: ಎ.ನಾರಾಯಣಸ್ವಾಮಿ

    ಈ ವೇಳೆ ಆಯೋಜಕ ವಿನಿತ್, ಕಾನೂನಿನ ಅರಿವು ಇಲ್ಲದೆ ಕಾರ್ಯಕ್ರಮ ಆಯೋಜನೆ ಮಾಹಿತಿ ಹಂಚಿಕೊಂಡಿದ್ದೆ. ನನ್ನಿಂದ ತಪ್ಪಾಗಿದೆ. ಇಲ್ಲಿಯವರೆಗೆ ನಾಲ್ವರಷ್ಟೇ ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಯಕ್ರಮ ರದ್ದಾಗಿರುವ ಬಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ಹೇಳಿ ಪೊಲೀಸರ ಮುಂದೆ ಕ್ಷಮೆ ಕೇಳಿಕೊಂಡಿದ್ದರಿಂದ ಕ್ಷಮಾಪಣೆ ಪತ್ರ ಬರೆಸಿ ಕಳುಹಿಸಿದ್ದಾರೆ.

  • ಕಬ್ಬನ್‌ ಪಾರ್ಕ್‌ – ಯಾವುದೇ ಗುಂಪು ಚಟುವಟಿಕೆಗೆ ಅನುಮತಿ ಕಡ್ಡಾಯ

    ಕಬ್ಬನ್‌ ಪಾರ್ಕ್‌ – ಯಾವುದೇ ಗುಂಪು ಚಟುವಟಿಕೆಗೆ ಅನುಮತಿ ಕಡ್ಡಾಯ

    ಬೆಂಗಳೂರು: ಇನ್ನು ಮುಂದೆ ಕಬ್ಬನ್ ಪಾರ್ಕ್‌ನಲ್ಲಿ (Cubbon Park) ನಡೆಯುವ ಯಾವುದೇ ಗುಂಪು ಚಟುವಟಿಕೆಗಳಿಗೆ ತೋಟಗಾರಿಕಾ ಇಲಾಖೆ (Horticulture Department) ಮತ್ತು ಪೊಲೀಸ್‌ ಇಲಾಖೆಯ (Police Department) ಅನುಮತಿ ಅಗತ್ಯ.

    ಅನುಮತಿ ಇಲ್ಲದೇ ಕಬ್ಬನ್ ಪಾರ್ಕ್‌ನಲ್ಲಿ ಸಂಘಟನೆಗಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದು ಇದು ಅಲ್ಲಿಗೆ ಬರುವ ಜನರಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಕಬ್ಬನ್‌ ಪಾರ್ಕ್‌ ಆಡಳಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    20 ಜನರನ್ನು ಮೀರುವ ಕೂಟಗಳಿಗೆ ಮುಂಗಡ ಅನುಮೋದನೆಯ ಅಗತ್ಯವಿದೆ. ತೋಟಗಾರಿಕೆ ಇಲಾಖೆಯಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆಯ ಅನುಮತಿಯನ್ನು ಪಡೆಯಬೇಕು. ಇದನ್ನೂ ಓದಿ: ಅಮಿತ್ ಶಾ ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ: ಜೋಶಿ ವಿರುದ್ಧ ಹರಿಪ್ರಸಾದ್ ಕಿಡಿ

    ಯಾಕೆ ಈ ಮಾರ್ಗಸೂಚಿ?
    ಶನಿವಾರ ಕಬ್ಬನ್‌ ಪಾರ್ಕ್‌ನಲ್ಲಿ ಪೂರ್ವಾನುಮತಿ ಇಲ್ಲದೆ ಸೀಕ್ರೇಟ್‌ ಸಂತ ಹೆಸರಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ  ಗದ್ದಲ ಉಂಟು ಮಾಡಿದ್ದಾರೆ ಎಂಬ ದೂರು ಬಂದಿತ್ತು.

    ಇತ್ತೀಚಿನ ದಿನಗಳಲ್ಲಿ ಕಬ್ಬನ್‌ ಪಾರ್ಕ್‌ಗೆ ಬರುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ವೀಕೆಂಡ್‌ನಲ್ಲಿ ಇಲ್ಲಿ ಹಲವು ಪುಸ್ತಕ ಪ್ರೇಮಿಗಳು, ಸಾಹಿತ್ಯ ಆಸಕ್ತರು ಸಣ್ಣ ಸಣ್ಣ ಗುಂಪುಗಳೊಂದಿಗೆ ಬರುತ್ತಿದ್ದಾರೆ. ಆದರೆ ಈಗ 20ಕ್ಕೂ ಹೆಚ್ಚು ಜನರು ಇರುವ ಗುಂಪುಗಳು ಹೆಚ್ಚಾಗಿದ್ದು ಗದ್ದಲವನ್ನು ಸೃಷ್ಟಿಸುತ್ತಿದ್ದಾರೆ. ಈ ಕಾರಣಕ್ಕೆ ಈಗ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

     

  • ಕಬ್ಬನ್ ಪಾರ್ಕ್‌ನಲ್ಲಿ ಮಾರ್ಚ್ 11,12 ರಂದು ಮಹಿಳಾ ಕ್ರೀಡಾ ಹಬ್ಬ: ಡಾ. ನಾರಾಯಣಗೌಡ

    ಕಬ್ಬನ್ ಪಾರ್ಕ್‌ನಲ್ಲಿ ಮಾರ್ಚ್ 11,12 ರಂದು ಮಹಿಳಾ ಕ್ರೀಡಾ ಹಬ್ಬ: ಡಾ. ನಾರಾಯಣಗೌಡ

    ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ (International Women’s Day) ಅಂಗವಾಗಿ ಮಾರ್ಚ್ 11 ಮತ್ತು 12 ರಂದು ಮಹಿಳಾ ಕ್ರೀಡಾ ಹಬ್ಬ (Women’s Sports Festival) ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ (Narayana Gowda) ತಿಳಿಸಿದ್ದಾರೆ.

    ಮಹಿಳೆಯರಲ್ಲಿ ಕ್ರೀಡಾ ಉತ್ಸಾಹವನ್ನು ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆಯನ್ನು ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ‘ಮಹಿಳಾ ಕ್ರೀಡಾ ಹಬ್ಬ’ವನ್ನು ಆಯೋಜಿಸಲಾಗುತ್ತಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉದ್ಘಾಟಿಸಲಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಕ್ರೀಡೆಗಳು, ಸಾಹಸ ಕ್ರೀಡೆಗಳು, ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲೆ ಮತ್ತು ಕರಕುಶಲಗಳು, ಮನರಂಜನೆ ಮತ್ತು ಮೋಜಿನ ಆಟಗಳು ನಡೆಯಲಿದ್ದು, ಕಾರ್ನಿವಲ್ ಮಳಿಗೆಗಳು ಮತ್ತು ಆಹಾರದ ಮಳಿಗೆಗಳು ಕೂಡಾ ಇರಲಿವೆ. ಇದನ್ನೂ ಓದಿ: ವಿಧಾನಸಭಾ ಚುನಾವಣೆಗೆ ರಾಯಚೂರು ಜಿಲ್ಲಾಡಳಿತ ಸಿದ್ಧತೆ- ಇವಿಎಂ ಪ್ರಾತ್ಯಕ್ಷಿಕೆ ಕೇಂದ್ರಗಳ ಆರಂಭ

    ಹಾಕಿ, ಕಬ್ಬಡಿ, ಆರ್ಚರಿ ಮತ್ತು ಸ್ಕೇಟಿಂಗ್, ಸಾಹಸ ಕ್ರೀಡೆಗಳಲ್ಲಿ ವಾಲ್ ಕ್ಲೈಂಬಿಗ್, ರಾಪಲಿಂಗ್, ಕಯಾಕಿಂಗ್ ಮತ್ತು ರಾಫ್ಟಿಂಗ್, ಸಾಂಪ್ರದಾಯಿಕ ಕ್ರೀಡೆಗಳಲ್ಲಿ ಕುಂಟೆ ಬಿಲ್ಲೆ, ಅಳಿಗುಳಿಮನೆ ಆಟ, ಲಗೋರಿ, ಹಗ್ಗ ಜಗ್ಗಾಟ, ಕಲೆ ಮತ್ತು ಕರಕುಶಲಗಳಲ್ಲಿ ರಂಗೋಲಿ, ಮುಖ ಚಿತ್ರೀಕರಣ, ಕ್ಯಾಲಿಗ್ರಫಿ, ಮೆಹಂದಿ ಮತ್ತು ಮಡಿಕೆ ತಯಾರಿಕೆ ಮನರಂಜನೆ ಮತ್ತು ಮೋಜಿನ ಆಟಗಳಲ್ಲಿ ಮ್ಯೂಸಿಕಲ್ ಪಜಲ್‌ಗಳು, ಡಮ್ಸರೇಡ್ಸ್, ಮೆಮೊರಿ ಆಟಗಳು, ಮ್ಯೂಸಿಕಲ್ ಚೇರ್, ಕೆರೆ ದಡ, ಬಕೆಟ್ ಬಾಲ್ ಮತ್ತಷ್ಟು ಹಲವಾರು ಆಟಗಳು, ಮತ್ತಿತರ ಚಟುವಟಿಕೆಗಳು ನಡೆಯಲಿವೆ.

    ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾ ಹಬ್ಬವನ್ನು ಯಶಸ್ವಿಗೊಳಿಸುವಂತೆ ಸಚಿವ ಡಾ. ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಲೆನಾಡಿಗೂ ಕಾಲಿಟ್ಟ ಕುಕ್ಕರ್ ಪಾಲಿಟಿಕ್ಸ್- ಕಾಂಗ್ರೆಸ್ ಶಾಸಕರ ನಡೆಗೆ ತೀವ್ರ ಆಕ್ರೋಶ

  • Valentine’s Day: `ಹೃದಯವೆ ಬಯಸಿದೆ ನಿನ್ನನೇ…’

    Valentine’s Day: `ಹೃದಯವೆ ಬಯಸಿದೆ ನಿನ್ನನೇ…’

    ಲಕ್ಷಾಂತರ ಹೃದಯಗಳ ನಡುವೆಯೂ ಜೀವದ ಗೆಳತಿಯನ್ನೇ ಅರಸುವ ಹೃದಯ, ಎಂದೂ ತುಟಿಗೆ ತಾಕಿಸದೇ ಇರುವ ಟೀ ಯನ್ನೇ ಬೈಟು ಮಾಡಿಕೊಂಡು ಕುಡಿಯಬೇಕೆನ್ನಿಸುತ್ತದೆ. ಮುಂಜಾನೆ ತಿಳಿಬಿಸಿಲಿನ ಕಿರಣ ಮೈತಾಕುತ್ತಿದ್ದಂತೆ ಉಂಟಾಗುವ ಬೆಚ್ಚನೆಯ ಅನುಭವಕ್ಕೆ ಗೆಳತಿಯ ಗಟ್ಟಿ ಅಪ್ಪುಗೆ ಬೇಕೆಂದು ಮನ ಬಯಸುತ್ತದೆ. ಪ್ರೀತಿಯ (Love) ಕಾಲದಲ್ಲಿ ಕಳೆದ ತುಂಟತನಗಳನ್ನು ನೆನಪಿಸಿಕೊಂಡರೆ, ಮತ್ತೆ ಸಂಗಾತಿಯ ತೋಳಿನಲ್ಲಿ ಕಳೆದುಹೋಗಬೇಕೆನ್ನಿಸುತ್ತದೆ ಇಂತಹ ಸಂದರ್ಭಗಳನ್ನು ಕೂಡಿಡಲೇಬೇಕಾಗುತ್ತದೆ. ಅದಕ್ಕೆಂದೇ ಒಂದು ದಿನವೂ ಬಂದಿದೆ. ಫೆ.14ರ ಪ್ರೇಮಿಗಳ ದಿನ (Valentine’s Day)- ಪ್ರೀತಿ ಹಂಚಿದ ವ್ಯಾಲಂಟೈನ್ಸ್ ದಿನ.

    `ಹೇ ಹೃದಯ
    ಅವಳ ಕಿರುನಗೆ ನೆನಪಿದೆಯ
    ಧರೆಯ ಮೇಲೆ ಅಂತಹ ಹೆಣ್ಣಿರುವಳೇ
    ಹೇ ಹೃದಯ
    ಅವಳ ಸಿಹಿ ನುಡಿ ಕೇಳಿದೆಯ
    ಶೃತಿಯಲ್ಲಿರೊ ಹೆಣ್ಣು ಹುಟ್ಟಿರುವಳೇ
    ಅವಳ ನಾನು ಪ್ರೀತಿಸಬೇಕು, ಹೇ ಹೃದಯ…’

    ಎಂಬ ಎಸ್‌ಪಿಬಿ ಅವರ ಧನಿಯಲ್ಲಿ ಮೂಡಿದ ಹಂಸಲೇಖ ಅವರ ಗೀತೆಯನ್ನು ಪ್ರೇಮಿಗಳು ಯಾರೂ ಮರೆಯುವಂತಿಲ್ಲ. ಏಕೆಂದರೆ ಈ ಗೀತೆಯ ಪ್ರತಿ ಸಾಲಿನಲ್ಲಿ ಮನಸ್ಸು ಮತ್ತು ಹೃದಯದ ಸಂಬಂಧವನ್ನು ನೆನಪಿಸುತ್ತದೆ. ಪ್ರೇಮಿಗಳ ದಿನಾಚರಣೆಯಲ್ಲಿಯಂತೂ ಎಷ್ಟೋ ಜೀವ ಜೋಡಿಗಳ ಕಾಲರ್ ಟ್ಯೂನ್ ಸಹ ಇದೇ ಆಗಿರುತ್ತದೆ. ಅಷ್ಟೇ ಅಲ್ಲದೇ `ಜಗವೇ ನೀನು ಗೆಳತಿಯೇ…., ಸುಮ್ಮನೆ ಹೀಗೆ ನಿನ್ನನೇ ನೋಡುತಾ ಪ್ರೇಮಿಯಾದೆನೆ..’ ಮತ್ತಿತರ ಗೀತೆಗಳು ಪ್ರೇಮಿಗಳ ಮನಸ್ಸನ್ನು ಆಹ್ಲಾದಗೊಳಿಸುತ್ತವೆ.

    ಹೌದು….. ಯುವ ಸಮುದಾಯಕ್ಕೆ ಫೆ.14ರ ಪ್ರೇಮಿಗಳ ದಿನ ಎಂಬುದೇ ವಿಶೇಷ ಅದರಲ್ಲೂ ಬೆಂಗಳೂರಿನಂತಹ (Bengaluru) ಮಹಾನಗರಗಳಲ್ಲಿ ಪ್ರೇಮಿಗಳ ಅಡ್ಡಗಳಿಗೇನು ಕಮ್ಮಿಯಿಲ್ಲ. ಚಿತ್ತಾಕರ್ಷಕ ಉದ್ಯಾನ, ನಂದಿಬೆಟ್ಟ ಕಬ್ಬನ್ ಪಾರ್ಕ್, ಲಾಲ್‌ಬಾಗ್ ಸೇರಿದಂತೆ ಪ್ರತಿಷ್ಟಿತ ಹೋಟೆಲ್‌ಗಳೂ ಪ್ರೇಮಿಗಳ ಪ್ರಮುಖ ಅಡ್ಡಗಳೇ ಆಗಿರುತ್ತವೆ. ಪ್ರೇಮಿಗಳ ದಿನ ಬಂತೆಂದರೆ ಸಾಕು ಇವಿಷ್ಟೂ ತಾಣಗಳಲ್ಲಿ ಯುವ ಪ್ರೇಮಿಗಳ ಕಲರವ ಶುರುವಾಗುತ್ತದೆ. ಕಾಫಿ-ಡೇ ಶಾಫ್‌ಗಳು ಹಾಗೂ ಡಾಲ್ಛಿನ್ ಸೆಂಟರ್‌ಗಳಲ್ಲಿ ಚಳಿ ಬಿಡಿಸುವ ಬಿಸಿ ಕಾಫಿಯೊಂದಿಗೆ ಮನದ ಮಾತನ್ನೂ ಹಂಚಿಕೊಳ್ಳುತ್ತಾರೆ. ಇನ್ನೂ ಕೆಲವರು ಕಿ.ಲೋ ಮೀಟರ್‌ಗಳವರೆಗೆ ಜಾಲಿರೈಡ್ ಮಾಡಿ ಪ್ರಕೃತಿ ಸೌಂದರ್ಯದಲ್ಲೇ ಲೀನವಾಗಿಬಿಡುತ್ತಾರೆ. ಇದನ್ನ ಯಾರಾದ್ರೂ ಪ್ರಶ್ನೆ ಮಾಡಿದ್ರೆ ಪ್ರೇಮವನ್ನೂ ಹೀಗೂ ಅರ್ಥಮಾಡಿಕೊಳ್ಳಬಹುದು ಅಂತಾ ಹೇಳಿಬಿಡ್ತಾರೆ. ಇನ್ನೂ ಕೆಲ ಯುವಕರಂತೂ ತೀರಾ ಅತಿರೇಖಕ್ಕೆ ಹೋಗಿ ರಕ್ತದಲ್ಲೇ ತಮ್ಮ ಪ್ರೇಯಸಿಗೆ ಕವಿತೆ ಬರೆದುಕೊಡುತ್ತಾರೆ. ಈ ಹುಚ್ಚಾಟಗಳಿಂದ ಕೆಲವರು ಆಸ್ಪತ್ರೆ ಸೇರಿದ್ದೂ ಉಂಟೂ..

    ಹಿಂದೆಲ್ಲಾ ಪ್ರೇಮಕ್ಕಾಗಿ ಹಂಬಲಿಸುತ್ತಿದ್ದ ಯುವ ಸಮೂಹದಲ್ಲಿ ಕೆಲವರು ಪತ್ರಗಳನ್ನು ಬರೆದು ತಿಂಗಳಾನುಗಟ್ಟಲೇ ಅವರ ಮನೆಯ ಬಳಿಯೆಲ್ಲಾ ಅಲೆದು ಸರ್ಕಸ್ ಮಾಡಿ ಸುಸ್ತಾಗುತ್ತಿದ್ದರು. ಕೊನೆಯಲ್ಲಿ `ಅವಳು ನಮ್ಮಂಥವರಿಗೆಲ್ಲ ಸಿಗಲ್ಲ ಬಿಡು’ ಎಂದು ಬೈದುಕೊಂಡು ಸಮಾಧಾನ ಮಾಡಿಕೊಳ್ತಿದ್ರು. ಆದರೀಗ ಆಧುನಿಕತೆ ಬದಲಾಗಿದ್ದು, ಪ್ರೀತಿ ಹೇಳುವುದು ಕ್ಷಣಮಾತ್ರ ಸುಖವಾಗಿದೆ. ವಾಟ್ಸಾಪ್, ಇ-ಮೇಲ್ ಸಂದೇಶಗಳನ್ನು ಕಳುಹಿಸಿ ಪ್ರೀತಿ ಹಂಚಿಕೊಳ್ಳುತ್ತಾರೆ. ಕೆಲವರು ಮದುವೆಗೆ ಮುನ್ನ ಒಂದಷ್ಟು ದಿನಗಳು ಮಾತ್ರವೇ ಪ್ರೇಮಕಾಲವೆಂದು ಭಾವಿಸುತ್ತಾರೆ. ಆ ದಿನಗಳಲ್ಲಂತೂ ತಾವೂ ಪ್ರೇಮಿಗಳಾಗಿ ಕೈ-ಕೈ ಹಿಡಿದು ಸುತ್ತಾಡುವುದೇನು? ಭವಿಷ್ಯದ ಬಗ್ಗೆ ವಿಚಾರವನ್ನೂ ವಿನಿಮಯವೇನು ಅಬ್ಬಾ! ಹೇಳಲಸಾಧ್ಯ ನಮ್ಮ ಪಡ್ಡೆ ಹುಡುಗರಂತೂ `ಪ್ರಿಯೆ ನಿನಗಾಗಿ ಚಂದ್ರನನ್ನೇ ತಂದುಕೊಡುವೆ’ ಎಂದೂ ಹೇಳಿ ಮರ ಹತ್ತಿಸುವುದು ಉಂಟೂ.. ಈ ದಿನಗಳು ಮನಸ್ಸುಗಳಲ್ಲಿ ತುಂಬುವ ಮರೆಯದ ಕ್ಷಣಗಳೆಂದರೆ ತಪ್ಪಾಗಲಾರದು.

    ಪ್ರೇಮಿಗಳ ದಿನ ಆಚರಿಸುವುದೇಕೆ?
    ಪ್ರೇಮಿಗಳ ದಿನಾಚರಣೆಯು ಕ್ರಿ.ಶ.270ರಲ್ಲಿ 2ನೇ ಕ್ಲಾಡಿಯಸ್‌ನ ಅವಧಿಯಲ್ಲಿ ಜಾರಿಗೆ ಬಂದಿತು. ಕ್ಲಾಡಿಯಸ್‌ಗೆ ತಮ್ಮ ಯುವಕರು ಯುದ್ಧದ ಸಂದರ್ಭದಲ್ಲಿ ಮದುವೆಯಾಗುವುದು ಇಷ್ಟವಿರಲಿಲ್ಲ. ಏಕೆಂದರೆ ಆತನ ಪ್ರಕಾರ ಯುವಕರು ಮದುವೆಯಾಗದೇ ಒಂಟಿಯಾಗಿದ್ದಷ್ಟೂ ಯುದ್ಧದಲ್ಲಿ ಉತ್ತಮ ರೀತಿಯಲ್ಲಿ ಹೋರಾಡುತ್ತಾರೆ ಎಂಬ ಭಾವನೆಯಾಗಿತ್ತು. ಹೀಗಿದ್ದಾಗ ಬಿಷಪ್ ವ್ಯಾಲೇಂಟಿನ್ ಕ್ಲಾಡಿಯಸ್‌ನ ಈ ನಿರ್ಧಾರದ ಬಗ್ಗೆ ಅಸಮಾಧಾನ ಹೊಂದಿದ್ದನು. ಆತನು ಮದುವೆಯಾಗಲು ಇಚ್ಛಿಸುವವರನ್ನು ರಹಸ್ಯವಾಗಿ ಮದುವೆ ಮಾಡಿಸುತ್ತಿದ್ದ. ಈ ಅಪರಾಧಕ್ಕಾಗಿ ಅವನನ್ನು ಫೆ.14ರಂದು ಸೆರೆಮನೆಗೆ ತಳ್ಳಲಾಯಿತು. ಈ ಬಿಷಪ್ ತನ್ನ ಸಾವಿಗೆ ಮೊದಲು `ಇಂತಿ ನಿಮ್ಮ ವ್ಯಾಲೇಂಟಿನ್’ ಎಂದು ಸಹಿ ಮಾಡಿದ ಪ್ರೇಮ ಪತ್ರವನ್ನು ಬರೆದು ಮೃತಪಟ್ಟರು. ಅಂದಿನಿಂದ ಪ್ರತಿ ವರ್ಷದ ಫೆ.14ರ ದಿನವನ್ನು `ವ್ಯಾಲೇಂಟಿನ್ಸ್ ಡೇ’ (ಪ್ರೇಮಿಗಳ ದಿನ) ಎಂದು ಆಚರಣೆ ಮಾಡುತ್ತಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಕಬ್ಬನ್ ಪಾರ್ಕ್ ಉಳಿಸಿ’ ಸಿಎಂಗೆ ಪತ್ರ ಬರೆದು ಮನವಿ

    `ಕಬ್ಬನ್ ಪಾರ್ಕ್ ಉಳಿಸಿ’ ಸಿಎಂಗೆ ಪತ್ರ ಬರೆದು ಮನವಿ

    ಬೆಂಗಳೂರು: ಕಬ್ಬನ್ ಪಾರ್ಕ್ (Cubbon Park) ಹಾಗೂ ಲಾಲ್ ಬಾಗ್ (Lalbagh) ಬೆಂಗಳೂರು (Bengaluru) ಹಸಿರಿನ ಹಾಟ್ ಸ್ಪಾಟ್. ಆದ್ರೆ ಈಗ ಕಬ್ಬನ್ ಪಾರ್ಕ್ ವೈಶಿಷ್ಟ್ಯಕ್ಕೆ ಧಕ್ಕೆ ತರುವ ಕೆಲಸ ಸರ್ಕಾರದ ಇಲಾಖೆಯೊಂದರಿಂದ ಆಗುತ್ತಿದೆ. ಹೀಗಾಗಿ ಖುದ್ದು ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಪತ್ರ ಬರೆಯಲಾಗಿದೆ.

    ಕಬ್ಬನ್ ಪಾರ್ಕ್ ಬೆಂಗಳೂರಿನ ವಾಯುವಿಹಾರಿಗಳ ಪಾಲಿಗೆ ಸ್ವರ್ಗ. ಹಸಿರ ರಾಶಿಯನ್ನೇ ಹೊದ್ದಿರುವ ಕಬ್ಬನ್ ಪಾರ್ಕ್ ಬೆಂಗಳೂರಿನ ಸೌಂದರ್ಯಕ್ಕೆ ಕಲಶವಿದ್ದಂತೆ. ಅಂದ ಹಾಗೆ ಇದೇ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ಇದೆ. ಈಗ ಈ ಇಲಾಖೆಯವರು, ಇಲ್ಲಿ ಶಾಪ್, ಹೋಟೆಲ್, ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದಾರೆ. ಇದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಾಡಿಗೆ ಮನೆಗೆ ಅಡ್ವಾನ್ಸ್ ಕೊಡೋ ಮುನ್ನ ಹುಷಾರ್ – ಹಣದ ಜೊತೆಗೆ ಓನರ್ ಎಸ್ಕೇಪ್

    ಕಬ್ಬನ್ ಪಾರ್ಕ್‍ಗೆ ಹೊಂದಿಕೊಂಡಂತೆ ಇರುವ ಲೋಕೋಪಯೋಗಿ ಇಲಾಖೆ ಈ ರೀತಿ ವಾಣಿಜ್ಯ ಚಟುವಟಿಕೆಗಳನ್ನು ಅರಂಭಿಸಲು ಮುಂದಾಗಿದೆ. ಆದ್ರೆ ಇದ್ರಿಂದ ಪಾರ್ಕ್ ಸೌಂದರ್ಯಕ್ಕೆ ಧಕ್ಕೆಯಾಗುತ್ತೆ. ಹೀಗಾಗಿ ಈ ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಬೇಕು. ಕಬ್ಬನ್ ಪಾರ್ಕ್‍ಗೆ ಇದ್ರಿಂದ ತೊಂದರೆಯಾಗುತ್ತೆ ಎಂದು ಸಿಎಂ ಬೊಮ್ಮಾಯಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಾಕ್ಷ್ಯಚಿತ್ರ ಭಾರತದಲ್ಲಿ ಬ್ಯಾನ್‌ – ಬಿಬಿಸಿ ವಿರುದ್ಧ 302 ಅಧಿಕಾರಿಗಳು ಆಕ್ರೋಶ

    ಈ ಹಿಂದೆ ಕಬ್ಬನ್ ಪಾರ್ಕ್ ಆವರಣದೊಳಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡೋ ವಿಚಾರದಲ್ಲಿ ದೊಡ್ಡ ಮಟ್ಟದ ಗಲಾಟೆ ಸೃಷ್ಟಿಯಾಗಿತ್ತು. ಈಗ ವಾಣಿಜ್ಯ ಮಳಿಗೆಗಳ ನಿರ್ಮಾಣ ವಿಚಾರ ಸಿಎಂ ಅಂಗಳಕ್ಕೆ ತಲುಪಿದ್ದು, ಏನಾಗುತ್ತೆ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಾಂಜಾ ಮತ್ತಿನಲ್ಲಿ ಗಲಾಟೆ- ಕಿಡಿಗೇಡಿಗಳು ಪೊಲೀಸರ ವಶಕ್ಕೆ

    ಗಾಂಜಾ ಮತ್ತಿನಲ್ಲಿ ಗಲಾಟೆ- ಕಿಡಿಗೇಡಿಗಳು ಪೊಲೀಸರ ವಶಕ್ಕೆ

    ಬೆಂಗಳೂರು: ಗಾಂಜಾ ಸೇವಿಸಿ ಗಲಾಟೆ ಮಾಡುತ್ತಿದ್ದ ಕಿಡಿಗೇಡಿಗಳನ್ನು ಬೆಂಗಳೂರಿನ (Bengaluru) ಕಬ್ಬನ್ ಪಾರ್ಕ್ ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

    ಹೊಸ ವರ್ಷದ (New Year) ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ರಂಗು ರಂಗಾಗಿದೆ. ಎಂಜಿ ರೋಡ್, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್‍ಗಳಲ್ಲಿ ಕಿಕ್ಕಿರಿದು ಜನರು ಸೇರಿದ್ದು, 2023ರನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈ ವೇಳೆ ಬ್ರಿಗೇಡ್ ರೋಡ್ (Brigade Road) ಎಂಟ್ರಿಯಲ್ಲಿ ಕೆಲವರು ಗಾಂಜಾ ಸೇದುತ್ತಿದ್ದರು. ಅಷ್ಟೇ ಅಲ್ಲದೇ ಗಾಂಜಾ ಮತ್ತಿನಲ್ಲಿ ಗಲಾಟೆ ನಡೆಸಿದ್ದಾರೆ. ಇದನ್ನೂ ಓದಿ: ಚರ್ಚ್ ಸ್ಟ್ರೀಟ್‌ನಲ್ಲಿ ಮಾರಾಮಾರಿ – ಲವರ್ ಮುಟ್ಟಿದ್ದಕ್ಕೆ ಬಿತ್ತು ಗೂಸಾ

    ಘಟನೆಗೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ (Police Station) ಪೊಲೀಸರು ಗಾಂಜಾ ಸೇವಿಸಿ ಗಲಾಟೆ ಮಾಡುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್ – ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ವಾಹನ ಸವಾರರು

    Live Tv
    [brid partner=56869869 player=32851 video=960834 autoplay=true]

  • ಐಷಾರಾಮಿ ಕಾರು ಖರೀದಿ ನೆಪದಲ್ಲಿ ವಂಚಿಸಿದವ ಅರೆಸ್ಟ್- 10 ಕೋಟಿ ಮೌಲ್ಯದ 9 ಕಾರು ಜಪ್ತಿ

    ಐಷಾರಾಮಿ ಕಾರು ಖರೀದಿ ನೆಪದಲ್ಲಿ ವಂಚಿಸಿದವ ಅರೆಸ್ಟ್- 10 ಕೋಟಿ ಮೌಲ್ಯದ 9 ಕಾರು ಜಪ್ತಿ

    ಬೆಂಗಳೂರು: ಹೈ ಎಂಡ್ ಕಾರುಗಳನ್ನ ಖರೀದಿ ನೆಪದಲ್ಲಿ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕಬ್ಬನ್ ಪಾರ್ಕ್ ಪೊಲೀಸ (Cubbon Park Police Station) ರು ಬಂಧಿಸಿದ್ದಾರೆ.

    ಬಂಧಿತನನ್ನು ಸೈಯಾದ್ ಜಿಮ್ರಾನ್ ಎಂದು ಗುರುತಿಸಲಾಗಿದೆ. ಬಂಧಿತನಿಂದ 10 ಕೋಟಿ ಮೌಲ್ಯದ 9 ಹೈ ಎಂಡ್ ಕಾರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಕಾರುಗಳನ್ನ ಒಳ್ಳೆಯ ಬೆಲೆಗೆ ಮಾರಾಟ ಮಾಡುವುದಾಗಿ ಹೇಳುತ್ತಿದ್ದನು. ಉದ್ಯಮಿಗಳು, ವ್ಯಾಪಾರಸ್ಥರ ಬಳಿ ಕಾರುಗಳನ್ನು ಪಡೆದು ವಂಚನೆ ಮಾಡುತ್ತಿದ್ದನು. ಆಡಿ, ಬೆನ್ಜ್, ಮಹೀಂದ್ರ ಥಾರ್, ರೇಂಜ್ ರೋವರ್, ಇನೋವಾ ಸೇರಿ ದುಬಾರಿ ಬೆಲೆಯ ಕಾರುಗಳನ್ನ ಪಡೆದು ವಂಚಿಸುತ್ತಿದ್ದನು.  ಇದನ್ನೂ ಓದಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು

    ಉದ್ಯಮಿ ರಾಜು ಎಂಬಾತನ ರೇಂಜ್ ರೋವರ್ (Range Rover) 18 ಲಕ್ಷಕ್ಕೆ ಖರೀದಿ ಮಾಡಿ ನಂತರ ಉಳಿದ ಹಣ ನೀಡದೆ ಆರೋಪಿ ಸತಾಯಿಸುತ್ತಿದ್ದ. ಅಲ್ಲದೆ ಹಣ (Money) ನೀಡುವಂತೆ ಕೇಳಿದಕ್ಕೆ ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಉದ್ಯಮಿ ರಾಜು ದೂರು ನೀಡಿದ್ದರು. ಇದೀಗ ಕಬ್ಬನ್ ಪಾರ್ಕ್ ಪೊಲೀಸರಿಂದ ಸೈಯ್ಯದ್ ಜಿಬ್ರಾನ್‍ನನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ನೇಹಿತನಿಗೆ ಕಾರು ನೀಡದೇ ಕಿರಿಕ್‌- ನಲಪಾಡ್‌ ವಿರುದ್ಧ ದೂರು

    ಸ್ನೇಹಿತನಿಗೆ ಕಾರು ನೀಡದೇ ಕಿರಿಕ್‌- ನಲಪಾಡ್‌ ವಿರುದ್ಧ ದೂರು

    ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್(Mohammed Nalapad) ವಿರುದ್ದ ಸ್ನೇಹಿತನೇ ದೂರು ದಾಖಲಿಸಿದ್ದಾರೆ.

    ಉದ್ಯಮಿ ನಜೀರ್‌ ದೂರು ನೀಡಿದ್ದು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪವಲ್ಲದ ಪ್ರಕರಣ(NCR) ದಾಖಲಾಗಿದೆ. ಇದನ್ನೂ ಓದಿ: ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸಿ ವಿವಿಗೆ ಬರುತ್ತಾರೆ: ತಾಲಿಬಾನ್ ಸಮರ್ಥನೆ

     

     

    ಏನಿದು ಪ್ರಕರಣ?
    ಯೂತ್ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ(Youth Congress Election) ನಲಪಾಡ್ ಸ್ನೇಹಿತ ನಜೀರ್‌ ಅವರಿಂದ ಫಾರ್ಚೂನರ್ ಕಾರು ಪಡೆದಿದ್ದರು. ಸ್ನೇಹಿತ ಎಂಬ ಕಾರಣಕ್ಕೆ ನಜೀರ್‌ ಕಾರು ನೀಡಿದ್ದರು.

    ಚುನಾವಣೆ ನಡೆದ ಬಳಿಕ ತನ್ನ ಕಾರನ್ನು ಮರಳಿ ಹಿಂದಿರುಗಿಸುವಂತೆ ನಜೀರ್‌ ಕೇಳಿದ್ದಾರೆ. ಆದರೆ ನಲಪಾಡ್‌ ಕಾರು ನೀಡುವ ಮನಸ್ಸನ್ನು ಮಾಡಿರಲಿಲ್ಲ. ಕಾರು ನೀಡದ ನಲಪಾಡ್‌ ಈಗ ಧಮ್ಕಿ ಹಾಕಿದ್ದಾರೆ.

    ಈಗ ಕಾರು ಕೇಳಿದರೆ ಕೊಡಲ್ಲ. ಏನು ಬೇಕಾದರೂ ಮಾಡಿಕೋ ಹೋಗು. ನನ್ನ ಬಳಿ ಯೂತ್‌ ಹುಡುಗರು ಇದ್ದಾರೆ. ನಿನ್ನನ್ನು ನೋಡಿಕೊಳ್ಳುತ್ತಾರೆ. ಮತ್ತೆ ಕಾರು ಕೇಳಿದರೆ ನಿನ್ನನ್ನು ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.

    ಕಾರು ಕೊಡದೇ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಲಪಾಡ್‌ ವಿರುದ್ಧ ನಜೀರ್‌ ದೂರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಬ್ಬನ್ ಪಾರ್ಕ್‍ನಲ್ಲಿ ಇನ್ಮುಂದೆ ಹೊಸ ರೂಲ್ಸ್ – ವಾಹನ ಸವಾರರು ಹಾರ್ನ್ ಹೊಡೆದರೆ ದಂಡ

    ಕಬ್ಬನ್ ಪಾರ್ಕ್‍ನಲ್ಲಿ ಇನ್ಮುಂದೆ ಹೊಸ ರೂಲ್ಸ್ – ವಾಹನ ಸವಾರರು ಹಾರ್ನ್ ಹೊಡೆದರೆ ದಂಡ

    ಬೆಂಗಳೂರು: ನಗರದಲ್ಲಿರುವ ಕಬ್ಬನ್ ಪಾರ್ಕ್ (Cubbon Park) ಒಳಭಾಗದಲ್ಲಿ ವಾಹನ ಸಂಚಾರ ಮಾಡುವವರು ಇನ್ನು ಮುಂದೆ ಎಚ್ಚರಿಕೆ ವಹಿಸಲೇಬೇಕು. ಕಾರಣ ಕಬ್ಬನ್ ಪಾರ್ಕ್‍ನಲ್ಲಿ ಸಂಚಾರ ಮಾಡುವ ವಾಹನ ಸವಾರರಿಗೆ ಹೊಸ ರೂಲ್ಸ್ ಒಂದು ಜಾರಿಯಾಗಿದ್ದು, ನೀವು ಅಪ್ಪಿ, ತಪ್ಪಿ ಈ ರೂಲ್ಸ್ ಬ್ರೇಕ್ ಮಾಡಿ ಪೊಲೀಸರಿಗೆ (Police) ಸಿಕ್ಕಿಹಾಕಿಕೊಂಡರೆ ದಂಡ ಕಟ್ಟಬೇಕಾಗಿದೆ.

    ಇನ್ಮುಂದೆ ಕಬ್ಬನ್ ಪಾರ್ಕ್ ಒಳಭಾಗದಲ್ಲಿ ವಾಹನ ಓಡಿಸುವಾಗ ಹಾರ್ನ್ (Horn) ಮಾಡುವಂತಿಲ್ಲ. ಕಾರಣ ರಾಜಧಾನಿ ಬೆಂಗಳೂರಿನ (Bengaluru) ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ನೋಡಲೆಂದೇ ಲಕ್ಷಾಂತರ ಮಂದಿ ಬಂದು ಹೋಗ್ತಾರೆ. ಇದರ ನಡುವೆ ಬೆಂಗಳೂರು ಮಂದಿ ಕೂಡ ಇದರ ನಡುವೆ ಓಡಾಟ ಮಾಡ್ತಾರೆ. ಈ ವೇಳೆ ವಾಹನಗಳು ಉಂಟು ಮಾಡುವ ಹಾರ್ನ್‍ನಿಂದಾಗಿ ಬರುವ ಜನರಿಗೆ ತೊಂದರೆ ಉಂಟುಮಾಡಿದೆ. ಕಬ್ಬನ್ ಪಾರ್ಕ್ ಒಳ ಭಾಗದಲ್ಲಿ ಶಬ್ಧ ಉಂಟು ಮಾಡಿ ಸಾರ್ವಜನಿಕರಿಗೆ ಹಾಗೂ ಪಕ್ಷಿ, ಪ್ರಾಣಿಗಳಿಗೆ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ನಗರ ಸಂಚಾರಿ ಪೊಲೀಸರ ಜೊತೆ ಸಭೆ ನಡೆಸಿ ತೋಟಗಾರಿಕೆ ಇಲಾಖೆ (Horticulture Department) ಹೊಸದೊಂದು ಆದೇಶ ಹೊರಡಿಸಿದೆ. ವಾಹನಗಳು ಕಬ್ಬನ್ ಪಾರ್ಕ್ ಬಳಿ ಹಾರ್ನ್ ಹೊಡೆದರೆ ದಂಡ ಪ್ರಯೋಗಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಕೆಂಪೇಗೌಡ ಪೇಟದಲ್ಲಿ ಕಂಗೊಳಿಸಿದ ಪ್ರಧಾನಿ ಮೋದಿ

    ಈ ಸಂಬಂಧ ಕಬ್ಬನ್ ಪಾರ್ಕ್ ಒಳಭಾಗದಲ್ಲಿ ಒಟ್ಟು 16 ಕಡೆ ನಿಶ್ಯಬ್ಧ ವಲಯ ಅನ್ನೋ ಎಚ್ಚರಿಕೆ ನಾಮಫಲಕ ಕೂಡ ಹಾಕಲಾಗಿದೆ. ಈ ವಿಚಾರ ಸಂಬಂಧ ಸವಾರರ ಅರಿವಿಗೆ ತರುವ ನಿಟ್ಟಿನಲ್ಲಿ ಓಡಾಟ ಮಾಡುವವರಿಗೆ ಒಂದು ತಿಂಗಳು ಕಾಲಾವಕಾಶ ನೀಡಿದ್ದು, ಬಳಿಕ ಪೊಲೀಸರೇ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಹಾಕಲಿದ್ದಾರೆ. ಇನ್ನೂ ನಿಯಮ ಉಲ್ಲಂಘನೆ ಮಾಡುವವರಿಗೆ ಟ್ರಾಫಿಕ್ ಪೊಲೀಸರೇ ದಂಡ ಹಾಕಲಿದ್ದು, ತಿಂಗಳ ಬಳಿಕ ರೂಲ್ಸ್ ಜಾರಿಗೆ ಬರಲಿದೆ. ಇದನ್ನೂ ಓದಿ: ದೇವೇಗೌಡರಿಗೆ ಆಹ್ವಾನ ನೀಡದ್ದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಬಿಜೆಪಿ ವಿರುದ್ಧ ಜೆಡಿಎಸ್‌ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಭೇಟಿಗೆಂದು ಕಬ್ಬನ್ ಪಾರ್ಕ್‍ಗೆ ಕರೆಸಿ ಸಂಬಂಧಿ ಯುವತಿ ಮೇಲೆ ಅತ್ಯಾಚಾರ!

    ಭೇಟಿಗೆಂದು ಕಬ್ಬನ್ ಪಾರ್ಕ್‍ಗೆ ಕರೆಸಿ ಸಂಬಂಧಿ ಯುವತಿ ಮೇಲೆ ಅತ್ಯಾಚಾರ!

    ಬೆಂಗಳೂರು: ನಿನ್ನನ್ನು ಭೇಟಿಯಾಗಬೇಕು ಎಂದು ಸಂಬಂಧಿ ಯುವತಿಯನ್ನು ಕರೆಸಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ರಮೇಶ್ ಎಂದು ಗುರುತಿಸಲಾಗಿದೆ.

    ಈತ ಆಗಸ್ಟ್ 6 ರಂದು ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದಾನೆ. ಈ ವೇಳೆ ಸಂಬಂಧಿ ಯುವತಿಗೆ ಕರೆ ಮಾಡಿ ತನ್ನನ್ನು ಭೇಟಿಯಾಗುವಂತೆ ತಿಳಿಸಿದ್ದಾನೆ. ಇತ್ತ ದೂರದ ಸಂಬಂಧಿ ಅಪರೂಪಕ್ಕೆ ಬೆಂಗಳೂರಿಗೆ ಬಂದಿದ್ದಾನೆ ಅಂತಾ ತಿಳಿದು ಯುವತಿ ಕಬ್ಬನ್ ಪಾರ್ಕ್ ಗೆ ಬಂದಿದ್ದಳು.

    ಈ ಸಮಯಯವನ್ನ ದುರುಪಯೋಗಪಡಿಸಿಕೊಂಡ ರಮೇಶ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆಯಿಂದ ಶಾಕ್ ಗೆ ಒಳಗಾಗಿದ್ದ ಯುವತಿ ಮೂರು ದಿನಗಳ ಬಳಿಕ ಪೊಲಿಸರಿಗೆ ದೂರು ನೀಡಿದ್ದಾಳೆ.

    ಸದ್ಯ ಆರೋಪಿ ರಮೇಶ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ಬಳಿಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ರಮೆಶ್‍ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]