ಉಡುಪಿ: ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ (DGP Pranab Mohanty) ಅವರು ಕಾಡಿನಲ್ಲಿ ಅವಿತಿರುವ ನಕ್ಸಲರಿಗೆ ರವಾನಿಸಿದ್ದಾರೆ.
ಡಿಜಿಪಿ ಭೇಟಿ ಬೆನ್ನಲ್ಲೇ ಕೂಂಬಿಂಗ್ ಚುರುಕುಗೊಂಡಿದೆ. ಪೀತಬೈಲ್, ಕಬ್ಬಿನಾಲೆ ಬಚ್ಚಪ್ಪು ಪರಿಸರದಲ್ಲಿ ಓಡಾಟ ನಡೆಸಿ ಎಎನ್‌ಎಫ್ ಕ್ಯಾಂಪ್‌ಗೆ ಭೇಟಿಕೊಟ್ಟು ಕೆಲ ಸೂಚನೆ ನೀಡಿರುವ ನೀಡಿದ್ದಾರೆ.
ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ (Vikram Gowda) ಎನ್‌ಕೌಂಟರ್ ಪ್ರಕರಣಣಕ್ಕೆ ಸಂಬಂಧಿಸಿದಂತೆ ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯ ಪೀತಬೈಲು ಘಟನಾ ಸ್ಥಳದಲ್ಲಿ ದಾಖಲೆ ಸಂಗ್ರಹ ಮಾಡುವ ಸಲುವಾಗಿ ಎಎನ್‌ಎಫ್ ಬೆಂಗಳೂರಿನಿಂದ ತಜ್ಞ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್) ಅಧಿಕಾರಿಗಳನ್ನು ಕರೆಸಿಕೊಂಡಿದೆ. ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ | ಮೈತ್ರಿ ಕೂಟಕ್ಕೆ ಮುನ್ನಡೆ, ಕಾಂಗ್ರೆಸ್‌ಗೆ ಬಿಗ್ ಶಾಕ್!
ಉಡುಪಿ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ನಡೆದ ರಣರೋಚಕ ಕಾರ್ಯಚರಣೆಯಲ್ಲಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂಗೌಡ (Vikram Gowda) ಹತನಾಗಿದ್ದಾನೆ. ಈ ರೋಚಕ ಕಾರ್ಯಾಚರಣೆಗೆ ಪೊಲೀಸರು ಸುಮಾರು ಒಂದು ತಿಂಗಳ ಹೋಂವರ್ಕ್ ಮಾಡಿದ್ದರು. ಕಂಪ್ಲೀಟ್ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ನಿಗ್ರಹದಳ, ಆತ ಬರುವ ಮೊದಲೇ ಮನೆಯನ್ನು ಹೊಕ್ಕಿ ಕುಳಿತಿತ್ತು.
ಸೋಮವಾರ ರಾತ್ರಿ ಉಡುಪಿ (Udupi) ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ (Kabbinale) ಪೇಟೆಯಿಂದ ಸುಮಾರು 10 ಕಿ.ಮೀ ದೂರದ ಉಡುಪಿ-ಚಿಕ್ಕಮಗಳೂರು ಜಿಲ್ಲೆಗಳ ಗಡಿಯಾಗಿರುವ ಪೀತಬೈಲು ದಟ್ಟ ಕಾಡಂಚಿನಲ್ಲಿ ಈ ಕಾರ್ಯಾಚರಣೆ ನಡೆದಿದೆ. ನಕ್ಸಲ್ ಹಾಗೂ ಪೊಲೀಸರ ನಡುವಿನ ಗುಂಡಿನ ಚಕಮಕಿಯಲ್ಲಿ 61 ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ನಾಯಕ ವಿಕ್ರಂಗೌಡನನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಈತನ ತಲೆಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಇದನ್ನೂ ಓದಿ: ನಕ್ಸಲ್ ನಾಯಕ ವಿಕ್ರಂ ಗೌಡ ಮೃತದೇಹ ಮಣಿಪಾಲಕ್ಕೆ – ಕೆಎಂಸಿಯ ಫೊರೆನ್ಸಿಕ್ ಮೆಡಿಸಿನ್‌ನಲ್ಲಿ ಮರಣೋತ್ತರ ಪರೀಕ್ಷೆ
ಹೆಬ್ರಿ ತಾಲೂಕು ಬಚ್ಚಪ್ಪು ಪೀತಬೈಲ್‌ನಲ್ಲಿ ನಾರಾಯಣ, ಜಯಂತ, ಸುಧಾಕರ ಎಂಬವರ ಮನೆಯಿದೆ. ನವೆಂಬರ್ 11ರಂದು ಬಂದು ರೇಷನ್ ತೆಗೆದಿರಿಸುವಂತೆ ನಕ್ಸಲ್ ಟೀಂ ತಾಕೀತು ಮಾಡಿತ್ತು. ರೇಷನ್ ಪಡೆಯಲು ಸೋಮವಾರ ಬರುವುದಾಗಿ ನಕ್ಸಲ್ ಟೀಂ ತಿಳಿಸಿತ್ತು. ವಾರದ ಹಿಂದೆಯೂ ಪೀತಬೈಲು ಮಲೆಕುಡಿಯರಿಂದ ಅಕ್ಕಿ, ಬೇಳೆ ಸಂಗ್ರಹಿಸಿತ್ತು ಎಂಬ ಮಾಹಿತಿ ದೊರೆತಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಎಎನ್‌ಎಫ್ ಯೋಧರು ಆ ಮನೆಯವರನ್ನು ತೆರವುಗೊಳಿಸಿ ಆ ಪ್ರದೇಶದಲ್ಲಿ ಕಾದು ಕುಳಿತಿದ್ದರು. ವಿಕ್ರಂಗೌಡ ಮತ್ತು ತಂಡ ಮನೆಯ ಅಂಗಳಕ್ಕೆ ಬರುತ್ತಿದ್ದಂತೆ ಪೊಲೀಸರು ಶರಣಾಗುವಂತೆ ಕೇಳಿದ್ದಾರೆ. ಪೊಲೀಸರನ್ನು ಕಂಡು ವಿಕ್ರಂ ಬಂದೂಕು ತೆಗೆದಿದ್ದಾನೆ. ಈ ವೇಳೆ ವಿಕ್ರಂ ತಂಡ ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ವಿಕ್ರಂಗೌಡನ ಎದೆಗೆ 3 ಗುಂಡುಗಳು ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ತಂಡದ ಸದಸ್ಯರು ಕತ್ತಲಲ್ಲಿ ಕಾಡಿನೊಳಗೆ ಪರಾರಿಯಾಗಿದ್ದಾರೆ. ಮಂಗಳವಾರ ಇಡೀ ರಾತ್ರಿ ಕೂಂಬಿಂಗ್ ನಡೆಸಿದರೂ ತಪ್ಪಿಸಿಕೊಂಡ ನಕ್ಸಲರ ಸುಳಿವು ಪತ್ತೆಯಾಗಿಲ್ಲ. ಇದನ್ನೂ ಓದಿ: ಮೋದಿ ಉದ್ಯೋಗ ಸೃಷ್ಟಿಸುವ ಕೆಲಸ ಮಾಡ್ಲಿ, ನಾನೇ ನಿಂತು ಜಾಗ ಕೊಡಿಸ್ತೀನಿ: ಡಿಕೆಶಿ
ಸುಮಾರು 20 ಗಂಟೆಗಳ ಪೊಲೀಸರ ಮಹಜರು ಪ್ರಕ್ರಿಯೆ ಮತ್ತಿತರ ದಾಖಲೆಗಳ ಸಂಗ್ರಹದ ಬಳಿಕ ವಿಕ್ರಂಗೌಡ ಮೃತ ದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಯಿತು. ನ್ಯಾಯಾಧೀಶರ ಸಮ್ಮುಖದಲ್ಲಿ ಮಹಜರು ನಡೆಸಿ, ಕುಟುಂಬಕ್ಕೆ ಇಂದು ಮೃತದೇಹ ಹಸ್ತಾಂತರ ಆಗಲಿದೆ. ಘಟನಾ ಸ್ಥಳಕ್ಕೆ ಬೆಂಗಳೂರಿನಿಂದ ಎಫ್‌ಎಸ್‌ಎಲ್ ತಂಡ ಬಂದು ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡಲಿದೆ. ಮರಣೋತ್ತರ ಪರೀಕ್ಷೆ ನಡೆದ ನಂತರ ಪ್ರಕರಣದ ಖಚಿತ ಮಾಹಿತಿಗಳು ಲಭ್ಯವಾಗಲಿದೆ. ಇದನ್ನೂ ಓದಿ: MUDA Scam| ನೋಟಿಸ್ ಇಲ್ಲದೇ ರಾತ್ರಿ ದಿಢೀರ್ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ಕೊಟ್ಟ ಸಿಎಂ ಬಾಮೈದ!
ಉಡುಪಿ: ವಿಕ್ರಂ ಗೌಡ (Vikram Gowda) ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು ಎಂದು ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಹೇಳಿದ್ದಾರೆ.
ವಿಕ್ರಂಗೌಡನ ಬಗ್ಗೆ ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ನಕ್ಸಲ್‌ರ (Naxal) ಚಲನವಲನಗಳು ನಮ್ಮೂರಲ್ಲಿ ಇರಲಿಲ್ಲ. ವಿಕ್ರಂಗೌಡ ನಮ್ಮ ಊರಿನವನಾದ್ದರಿಂದ ಆತ ಹೆಚ್ಚಾಗಿ ಬರುತ್ತಿದ್ದಾನೆ ಅನ್ನುವುದು ಬಿಟ್ಟರೆ, ಬಂದ ಬಗ್ಗೆ ಖಚಿತ ಮಾಹಿತಿ ಇರಲಿಲ್ಲ. ಆತನ ತಂದೆ ತಾಯಿ ತೀರಿಕೊಂಡಿದ್ದರಿಂದ ನಮಗೆ ಆತ ಬರುವ ಹೋಗುವ ಬಗ್ಗೆ ಸುಳಿವು ಇರಲಿಲ್ಲ. ಅವನ ದೊಡ್ಡಪ್ಪ ನಮ್ಮ ಊರಿನಲ್ಲಿದ್ದಾರೆ. ಅವರು ಮಲೆಕುಡಿಯ ಸಮಾಜದಿಂದ ಬಂದವರು ಎಂದು ಹೇಳಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕ ವಿಕ್ರಂ ಗೌಡ ಯಾರು?
ಸುಮಾರು 2002-03ರಲ್ಲಿ ಈ ಆತ ಇಂತಹ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾನೆ. ‘ಕರ್ನಾಟಕ ವಿಮೋಚನಾ ಸಂಘ’ ಎನ್ನುವಂತಹ ತಂಡವನ್ನು ಆರಂಭಿಸಿದಾಗ ಆತ ಅದರಲ್ಲಿ ಸೇರಿಕೊಂಡ. ಆ ನಂತರ ಸಾಕೇತ್ ರಾಜನ್ ಬಂದ ನಂತರ ಅದು ನಕ್ಸಲ್‌ರ ಸಂಘ ಎನ್ನುವಂತದ್ದು ಗೊತ್ತಾಯಿತು. ಆರಂಭದಲ್ಲಿ ಅವರು ಲಾವಣಿ ಪದಗಳನ್ನು ಹಾಡುತ್ತಾ ಮನೆ ಮನೆಗೆ ಬರುತ್ತಿದ್ದರು. ತದನಂತರ ನಮ್ಮ ಊರಿನಲ್ಲಿ ಜನಾಭಿಪ್ರಾಯವನ್ನು ಸಂಗ್ರಹಿಸುತ್ತಿದ್ದರು. ನನ್ನನ್ನು ಒಮ್ಮೆ ಅವರ ಪ್ರತಿಭಟನೆಗೆ ಕರೆದಿದ್ದ ನಾನು ಹೋಗಿರಲಿಲ್ಲ. ಅದಕ್ಕಾಗಿ ನನ್ನ ಮೇಲೆ ದ್ವೇಷ ಇಟ್ಟಕೊಂಡು 2-3 ಬಾರಿ ನನ್ನ ಮನೆ ಮೇಲೆ ಪ್ರತಿಕಾರವನ್ನು ತೀರಿಸಲು ಮುಂದಾಗಿದ್ದ. 3-4 ಜನರ ತಂಡವನ್ನು ನಮ್ಮ ಮನೆಗೆ ದಾಳಿ ಮಾಡಲು ಕಳುಹಿಸುತ್ತಿದ್ದ. 2-3 ಬಾರಿ ನಮ್ಮ ಮನೆ ಮೇಲೆ ದಾಳಿ ಕೂಡ ಮಾಡಿದ್ದ ಎಂದು ತಿಳಿಸಿದರು. ಇದನ್ನೂ ಓದಿ: ಉಡುಪಿಯ ಕಬ್ಬಿನಾಲೆಯಲ್ಲಿ ಎನ್‌ಕೌಂಟರ್ – ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ
ವಿಕ್ರಂಗೌಡ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು. ಅವರು ಆತನ ಮೆಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದರು. ಇದರಿಂದಾಗಿ ಆತ ಈ ತಂಡದಲ್ಲಿ ತೊಡಗಿಕೊಂಡು ಅಲ್ಲಿಂದ ಆತ ಆ ತಂಡದ ಜೊತೆಗೆ ಬೆಳೆದ. ವಿಕ್ರಂ ಸಾಧು ಸ್ವಭಾವದ ಹುಡುಗ. ಈ ಮಟ್ಟಕ್ಕೆ ನಕ್ಸಲ್ ನಾಯಕನಾಗುತ್ತಾನೆ ಎನ್ನುವುದು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ. 5ನೇ ತರಗತಿ ತನಕ ಮಾತ್ರ ಓದಿದ್ದ. ಆಮೇಲೆ ಮುಂಬೈಗೆ ಹೋಗಿ ಹೊಟೇಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ನಂತರ ಊರಿಗೆ ಬಂದು ಇಂತಹ ಕೆಲಸದಲ್ಲಿ ತೊಡಗಿಕೊಂಡ. ಆತನಿಗೆ ಅನೇಕ ಬಾರಿ ನಾನು ಬುದ್ಧಿವಾದ ಹೇಳಿದ್ದೆ ಆದರೂ ಆತ ಕೇಳಲಿಲ್ಲ ಎಂದರು.
13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್‌ಕೌಂಟರ್ (Naxal Encounter) ನಡೆದಿದೆ. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಎನ್‌ಕೌಂಟರ್ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ಸೋಮವಾರ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್- ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ
ಯಾರು ಈ ವಿಕ್ರಂ ಗೌಡ?
ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ (Kerala Police) ಚಳ್ಳೆಹಣ್ಣು ತಿನ್ನಿಸಿದ್ದ.
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ. ಇದನ್ನೂ ಓದಿ: ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್
ಬೆಂಗಳೂರು/ ಉಡುಪಿ: 13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್‌ಕೌಂಟರ್ (Naxal Encounter) ನಡೆದಿದೆ. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ (Vikram Gowda) ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.
ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್ ನಿಗ್ರಹ ಪಡೆ (ANF) ಎನ್‌ಕೌಂಟರ್ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ಸೋಮವಾರ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ (Forest) ಶೋಧ ಕಾರ್ಯ ನಡೆಯುತ್ತಿದೆ.
ಯಾರು ಈ ವಿಕ್ರಂ ಗೌಡ?
ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು.
20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ.
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ.
ಉಡುಪಿ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್ ಕಾರ್ಯಕರ್ತ ವಿಕ್ರಂ ಗೌಡನನ್ನು (Vikram Gowda) ಎನ್‌ಕೌಂಟರ್ (Encounter) ಮಾಡಿ ಹತ್ಯೆ ಮಾಡಲಾಗಿದೆ.
ನಕ್ಸಲ್ ನಿಗ್ರಹ ದಳ (ANF) ಮತ್ತು ನಕ್ಸಲರ (Naxal) ಮಧ್ಯೆ ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿದೆ. ಈ ಘಟನೆಯಲ್ಲಿ ಓರ್ವ ಹತನಾಗಿದ್ದಾನೆ ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್ ಕೂಂಬಿಂಗ್ ನಡೆಸುತ್ತಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಎಎನ್‌ಎಫ್ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಮನೆಗಳಿಗೆ ನಕ್ಸಲರು ಭೇಟಿ ನೀಡಿದ್ದರು. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ, ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಚರ್ಚಿಸಿದ್ದರು.
ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ (Kadaba) ಮನೆಗೆ ನಕ್ಸಲರು ಬಂದಿದ್ದ ಶಂಕೆ ವ್ಯಕ್ತವಾಗಿತ್ತು. ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ತಡರಾತ್ರಿ ಬಂದ 6 ಮಂದಿ ಎರಡು ಗಂಟೆಗಳ ಕಾಲ ಇದ್ದು ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಮಾಹಿತಿ ಲಭ್ಯವಾಗಿತ್ತು. ಈ ವಿಚಾರ ತಿಳಿದ ಬೆನ್ನಲ್ಲೇ ನಕ್ಸಲ್ ನಿಗ್ರಹ ದಳಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿತ್ತು.