Tag: ಕಬ್ಬಿನ ಗದ್ದೆ

  • ಪ್ರೇಯಸಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತಾಕಿದ ಪ್ರಿಯಕರ – 15 ದಿನದ ಬಳಿಕ ಪ್ರಕರಣ ಬೆಳಕಿಗೆ

    ಪ್ರೇಯಸಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತಾಕಿದ ಪ್ರಿಯಕರ – 15 ದಿನದ ಬಳಿಕ ಪ್ರಕರಣ ಬೆಳಕಿಗೆ

    ಹಾಸನ: ಪ್ರೇಯಸಿಯ (Girlfriend) ಶವವನ್ನು ಯಾರಿಗೂ ತಿಳಿಯದಂತೆ ಪ್ರೀಯಕರನೇ ಕಬ್ಬಿನ ಗದ್ದೆಯಲ್ಲಿ (Sugarcane Field) ಹೂತು ಹಾಕಿರುವ (Buried) ಘಟನೆ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕಾವ್ಯ (25) ಮೃತಪಟ್ಟ ಯುವತಿಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆ ಎಂದು ಪ್ರಿಯಕರ ಅವಿನಾಶ್ ವಿರುದ್ಧ ಕಾವ್ಯ ಪೋಷಕರು ಆರೋಪಿಸಿದ್ದಾರೆ.

    ಅರಕಲಗೂಡು ತಾಲೂಕಿನ, ಮುದ್ಲಾಪುರ ಗ್ರಾಮದ ಕಲ್ಪನಾ ಅವರ ಪುತ್ರಿ ಕಾವ್ಯ ಒಂದುವರೆ ವರ್ಷವಿರುವಾಗಲೇ ತಂದೆಯನ್ನು ಕಳೆದುಕೊಂಡಿದ್ದಳು. ನಂತರ ದೊಡ್ಡಮ್ಮನ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡಿದ್ದಳು. ಬಿಬಿಎಂ ಓದಿದ್ದ ಕಾವ್ಯ ಅಕ್ಷಯ್‌ನನ್ನು ಪ್ರೀತಿಸಿ ವಿವಾಹವಾಗಿದ್ದಳು. ಈ ವಿಷಯವನ್ನು ತಾಯಿಯ ಬಳಿವೂ ಹೇಳಿರಲಿಲ್ಲ. ಮದುವೆಯಾದ ಕೆಲವೇ ತಿಂಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ ಬಾರದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿ ಅಕ್ಷಯ್ ಜೊತೆ ವಿವಾಹ ಸಂಬಂಧ ಮುರಿದುಕೊಂಡಿದ್ದಳು. ಈ ವಿಚಾರವನ್ನು ಕೂಡ ತನ್ನ ತಾಯಿಯಿಂದ ಮುಚ್ಚಿಟ್ಟಿದ್ದಳು. ನಂತರ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದಳು.

    ಬೆಂಗಳೂರಿನಲ್ಲಿ ಕೆಲ ತಿಂಗಳುಗಳ ಕಾಲ ಕೆಲಸ ಮಾಡಿದ ಕಾವ್ಯ ನಂತರ ಹಾಸನಕ್ಕೆ ವಾಪಾಸಾಗಿದ್ದಳು. ಬಳಿಕ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದ ಅವಿನಾಶ್‌ನನ್ನು ಪ್ರೀತಿಸುತ್ತಿದ್ದಳು. ಕಳೆದ 2 ವರ್ಷಗಳಿಂದ ಅವಿನಾಶ್ ಮನೆಯಲ್ಲಿಯೇ ವಾಸವಿದ್ದ ಕಾವ್ಯ ತಾಯಿಯ ಬಳಿ ಬೆಂಗಳೂರಿನಲ್ಲೇ ಇರುವುದಾಗಿ ಹೇಳಿದ್ದಳು.

    ಕಾವ್ಯ ಕಳೆದ 1 ತಿಂಗಳಿನಿಂದ ತಾಯಿಗೆ ಫೋನ್ ಮಾಡದೇ ವಾಯ್ಸ್ ಮೆಸೇಜ್ ಕಳುಹಿಸುತ್ತಿದ್ದಳು. ಮೊಬೈಲ್, ಲ್ಯಾಪ್‌ಟ್ಯಾಪ್ ತೆಗೆದುಕೊಳ್ಳಬೇಕೆಂದು 25 ಸಾವಿರ ಹಣವನ್ನು ಹಾಕಿಸಿಕೊಂಡಿದ್ದಳು. ಕಳೆದ 20 ದಿನಗಳಿಂದ ಕಾವ್ಯ ತನ್ನ ತಾಯಿಗೆ ಫೋನ್ ಮಾಡಿರಲಿಲ್ಲ. ಅವಳ ಫೋನ್ ಕೂಡಾ ಸ್ವಿಚ್ ಆಫ್ ಆಗಿತ್ತು. ಇದರಿಂದ ಕಾವ್ಯಳ ತಾಯಿ ಆತಂಕಗೊಂಡಿದ್ದರು. ನಂತರ ಕಲ್ಪನಾ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರು ಫೋನ್ ಮಾಡಿ, ನಿಮ್ಮ ಮಗಳನ್ನು ಹೂತು ಹಾಕಿದ್ದಾರೆ ಎಂದು ಗ್ರಾಮದಲ್ಲಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದರು.

    ಇದಾದ ಬಳಿಕ ಮಗಳು ಕಾಣೆಯಾಗಿರುವ ಬಗ್ಗೆ ಕಲ್ಪನಾ ಹೊಳೆನರಸೀಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವಿನಾಶ್‌ನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾವ್ಯಳ ಶವವನ್ನು ಕಬ್ಬಿನಗದ್ದೆಯಲ್ಲಿ ಹೂತು ಹಾಕಿರುವುದು ಬೆಳಕಿಗೆ ಬಂದಿದೆ. ಅವಿನಾಶ್ ಹಾಗೂ ಆತನ ಪೋಷಕರೇ ನನ್ನ ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾರೆ ಎಂದು ಕಲ್ಪನಾ ಆರೋಪಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ 13ರ ಬಾಲಕಿ ಗರ್ಭಿಣಿ – ಅತ್ಯಾಚಾರ ಎಸಗಿದ್ದ ಮೂವರು ಅರೆಸ್ಟ್

    ನವೆಂಬರ್ 25 ರಂದು ಕಾವ್ಯಳ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಪೊಲೀಸರು ಅವಿನಾಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳೆದ 18 ದಿನಗಳ ಹಿಂದೆ ರಾತ್ರಿ 12 ಗಂಟೆ ವೇಳೆಗೆ ಕಾವ್ಯಳ ಶವವನ್ನು ಹೊತ್ತೊಯ್ದು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿ ತಿಳಿಸಿದ್ದಾನೆ.

    ಕಾವ್ಯ ಶವವನ್ನು ಹೂತು ಹಾಕಿದ್ದ ಜಾಗವನ್ನು ಅವಿನಾಶ್ ತೋರಿಸಿದ್ದಾನೆ. ತಹಶೀಲ್ದಾರ್ ಕೃಷ್ಣಮೂರ್ತಿ ಸಮ್ಮುಖದಲ್ಲಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಕಾವ್ಯಳದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದುಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ತಂದೆಯನ್ನ ಕೊಂದು 20 ತುಂಡು ಮಾಡಿ ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ

    Live Tv
    [brid partner=56869869 player=32851 video=960834 autoplay=true]

  • ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಶಾಲಾ ಬಾಲಕಿ ಸಾವು

    ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಶಾಲಾ ಬಾಲಕಿ ಸಾವು

    ಬೆಳಗಾವಿ: ಪಕ್ಕದ ಮನೆಗ ಓದಲು ಹೋಗಿ ವಾಪಸ್ ಮನೆಗೆ ಬರುವಾಗ ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಶಾಲಾ ಬಾಲಕಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕಿನ ಹುಲಿಕಟ್ಟಿ ಗ್ರಾಮದ ಚೂನವ್ವ ಸರ್ವಿ(8) ಮೃತ ದುರ್ದೈವಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ವಿದ್ಯುತ್ ಸ್ಪರ್ಶಿಸಿ ಚೂನವ್ವ ಸರ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆ ಜೂ.24ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೇಯಸಿ ದೂರಾಗಿದ್ದಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದು ಪ್ರಾಣ ಬಿಟ್ಟ!

    ಇದೀಗ ಬಾಲಕಿ ಸಾವಿಗೆ ಕಾರಣರಾದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಡೀಸೆಲ್ ಕೊರತೆ- ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ: BMTC ಎಂಡಿ ಸ್ಪಷ್ಟನೆ

    Live Tv

  • ಮಧ್ಯಪ್ರದೇಶ ಕಾರ್ಮಿಕರ ಅಕ್ರಮ ಬಂಧನ – ರಕ್ಷಣೆಗಾಗಿ ಎಂಪಿ ಡಿಸಿಗೆ ಕರೆ

    ಮಧ್ಯಪ್ರದೇಶ ಕಾರ್ಮಿಕರ ಅಕ್ರಮ ಬಂಧನ – ರಕ್ಷಣೆಗಾಗಿ ಎಂಪಿ ಡಿಸಿಗೆ ಕರೆ

    ವಿಜಯಪುರ: ಜಿಲ್ಲೆಯ ಇಂಡಿ ತಾಲೂಕು ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಮಧ್ಯಪ್ರದೇಶದ ಕಾರ್ಮಿಕರನ್ನು ಅಕ್ರಮ ಬಂಧನದಲ್ಲಿಡಲಾಗಿದ್ದು, ರಕ್ಷಣೆಗಾಗಿ ಕಾರ್ಮಿಕರು ಮಧ್ಯಪ್ರದೇಶ ಡಿಸಿಗೆ ಕರೆ ಮಾಡಿದ್ದಾರೆ.

    ಕಾರ್ಮಿಕರನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿದ್ದ ಗುಬ್ಬೇವಾಡ ಗ್ರಾಮದ ಜಮೀನು ಮಾಲಿಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಎನ್ನುವ ವ್ಯಕ್ತಿ. ಕಾರ್ಮಿಕರು ರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದರು. ಈ ಹಿನ್ನೆಲೆ ರಾತ್ರೋರಾತ್ರಿ ಇಂಡಿ ಪೊಲೀಸರಿಂದ ಅಕ್ರಮ ಬಂಧನದಲ್ಲಿದ್ದ ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರಿಗೆ ಬಂಧನದಿಂದ ಮುಕ್ತಿ ನೀಡಿದ್ದಾರೆ. ಇದನ್ನೂ ಓದಿ: ಬಾಲಕನ ಕಣ್ಣಿಗೆ ಮೊಳೆ ಹೊಡೆದು ವಿಚಿತ್ರವಾಗಿ ಸಾಯಿಸಿದ ಕ್ರೂರಿಗಳು!

    ತಡರಾತ್ರಿ ಜಮೀನಿಗೆ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಜಮೀನು ಮಾಲಿಕ ಬಿರಾದಾರ್ ಕಾರ್ಮಿಕರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು ಕಬ್ಬು ಕಟಾವು ಮಾಡಿಸಿಕೊಳ್ಳುತ್ತಿದ್ದನು. ರೋಹಿತ್ ಎಂಬ ವಕ್ತಿಯು ಕಾರ್ಮಿಕರನ್ನು ಮಧ್ಯಪ್ರದೇಶದಿಂದ ಕರೆತಂದಿದ್ದನು. ಈ ವೇಳೆ ಕಾರ್ಮಿಕರು 100 ಟನ್ ಕಬ್ಬು ಕಟಾವು ಮಾಡಿದ್ದರು, ಸಹಿತ ಇನ್ನೂ 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

    ಕಾರ್ಮಿಕರು ಹೀಗಾಗಿ ಮಧ್ಯಪ್ರದೇಶದ ಜಿಲ್ಲಾಧಿಕಾರಿಗೆ ಕರೆ ಮಾಡಿ ಸಂಕಷ್ಟ ಹೇಳಿಕೊಂಡಿದ್ದರು. ಬಳಿಕ ಮಧ್ಯಪ್ರದೇಶ ಡಿಸಿ ಈ ಬಗ್ಗೆ ವಿಜಯಪುರ ಎಸ್ಪಿ ಆನಂದ ಕುಮಾರ್‌ಗೆ ಮಾಹಿತಿ ನೀಡಿದ್ದಾರೆ. ಬಳಿಕ ಎಸ್ಪಿ ಆನಂದ ಕುಮಾರ್ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿಗೆ ಕಾರ್ಮಿಕರ ರಕ್ಷಣೆಗೆ ಆದೇಶಿಸಿದ್ದಾರೆ. ಈ ವೇಳೆ ಡಿವೈಎಸ್ಪಿ ರಾತ್ರೋರಾತ್ರಿ ಕಾರ್ಯಾಚರಣೆ ಮಾಡಿ 35 ಕಾರ್ಮಿಕರು, 10 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸರು ಅವರನ್ನು ಅಕ್ರಮ ಬಂಧನದಿಂದ ರಕ್ಷಿಸುವುದಲ್ಲದೆ ರಾತ್ರಿಯೇ ಸೊಲ್ಲಾಪುರ ರೈಲು ನಿಲ್ದಾಣಕ್ಕೆ ಬಿಟ್ಟು ಬಂದಿದ್ದಾರೆ. ಕಾರ್ಮಿಕರನ್ನು ಅಲ್ಲಿಂದ ರೈಲು ಮೂಲಕ ಮಧ್ಯಪ್ರದೇಶಕ್ಕೆ ರವಾನೆ ಮಾಡಲಾಗಿದೆ.

  • 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮ

    5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮ

    ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ.

    ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರು ಸಮಯಪ್ರಜ್ಞೆಯಿಂದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬನ್ನು ಬಚಾವ್ ಮಾಡಿದ್ದಾರೆ. ಇದನ್ನೂ ಓದಿ: ಗುತ್ತಿಗೆ ಕಾರ್ಮಿಕರ ಪ್ರತಿಭಟನೆಯಲ್ಲಿ ಹಿಂಸಾಚಾರ – 20 ಪೊಲೀಸರಿಗೆ ಗಾಯ

    ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ರೈತರು ಆರೋಪಿಸಿದ್ದು, ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಬೈಕ್‌ಗೆ ನಕಲಿ ನಂಬರ್ ಪ್ಲೇಟ್ – ವಿಕ್ಕಿ ಕೌಶಲ್ ವಿರುದ್ಧ ಕೇಸ್

  • ಕಾಡು ಹಂದಿ ಅಂತ ತಿಳಿದು ಯುವಕನ ಮೇಲೆ ಫೈರಿಂಗ್

    ಕಾಡು ಹಂದಿ ಅಂತ ತಿಳಿದು ಯುವಕನ ಮೇಲೆ ಫೈರಿಂಗ್

    ಮಂಡ್ಯ: ಕಾಡು ಹಂದಿ ಎಂದು ತಿಳಿದು ಯುವಕನ ಮೇಲೆ ಗಂಡು ಹಾರಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರದಲ್ಲಿ ಹೊರವಲಯದಲ್ಲಿ ನಡೆದಿದೆ. ಮಾದೇಶ್ (25) ಗುಂಡೇಟಿನಿಂದ ಗಾಯಗೊಂಡಿರುವ ಯುವಕ.

    ಮೈಸೂರು ಜಿಲ್ಲೆಯ 6 ಮಂದಿ ಯುವಕರ ಹವ್ಯಾಸಿ ತಂಡವೊಂದು ಕಾಡುಹಂದಿ ಭೇಟೆಯಾಡಲು ಮೇಳಾಪುರ ಗ್ರಾಮದ ಹೊರವಲಯಕ್ಕೆ ಬಂದಿದ್ದು, ಕಾಡುಹಂದಿಗಾಗಿ ಮಾದೇಶ್ ಅವರ ಕಬ್ಬಿನ ಗದ್ದೆಯಲ್ಲಿ ಶೋಧ ನಡೆಸಿದ್ದಾರೆ. ಅದೇ ಕಬ್ಬಿನ ಗದ್ದೆಯ ಬದುವಿನಲ್ಲಿ ಮಾದೇಶ್ ಹುಲ್ಲು ಕುಯ್ಯುತ್ತಿದ್ದು, ಕಬ್ಬಿನ ಗರಿಗಳು ಅಲುಗಾಡಿವೆ. ಇದನ್ನು ಗಮನಿಸಿದ ಬೇಟೆಗಾರರ ಗುಂಪು, ಕಾಂಡುಹಂದಿ ಎಂದು ತಿಳಿದು ನಾಡ ಬಂದೂಕಿನಿಂದ ಮಾದೇಶ್ ಅವರ ಮೇಲೆ ಗುಂಡು ಹಾರಿಸಿದ್ದಾರೆ.  ಇದನ್ನೂ ಓದಿ: ನಿಂತ ಲಾರಿಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು

    ಗುಂಡೇಟಿಗೆ ಮಾದೇಶ್ ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಗಾಯಾಳು ಮಾದೇಶ್‍ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಭೇಟೆಯಾಡಲು ಬಂದಿದ್ದ ಆರು ಮಂದಿ ಯುವಕರಲ್ಲಿ 3 ಜನರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ದೋಚಲು ಹಣವಿಲ್ಲದಾಗ ಹಲ್ಲೆಗೈದು ರೇಪ್ ಮಾಡಿದೆವು – ಸತ್ಯ ಬಿಚ್ಚಿಟ್ಟ 7ನೇ ಆರೋಪಿ

  • ಕಬ್ಬಿನ ಗದ್ದೆಯಲ್ಲಿ ಶವವಾದ ಅಪ್ರಾಪ್ತ ಬಾಲಕಿ – ನ್ಯಾಯಕ್ಕಾಗಿ ಕಿಚ್ಚನ ಆಗ್ರಹ

    ಕಬ್ಬಿನ ಗದ್ದೆಯಲ್ಲಿ ಶವವಾದ ಅಪ್ರಾಪ್ತ ಬಾಲಕಿ – ನ್ಯಾಯಕ್ಕಾಗಿ ಕಿಚ್ಚನ ಆಗ್ರಹ

    ಬೆಂಗಳೂರು: ಮಂಡ್ಯದ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಿಚ್ಚ, ಈ ಪ್ರಕರಣದಲ್ಲಿ ಬಾಲಕಿಗೆ ನ್ಯಾಯ ಸಿಗುತ್ತದೆ ಮತ್ತು ತಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ ರೀತಿ ಮಾಡುವವರಿಗೆ ತೀವ್ರ ತರಹದ ಸಂದೇಶ ರವಾನೆಯಾಗಲಿದೆ ಎಂದು ಭಾವಿಸಿದ್ದೇನೆ. ಈ ಮೂಲಕ ಮುಂದೆ ಈ ರೀತಿ ಕ್ರೂರ ಕೃತ್ಯ ಮಾಡಲು ಯೋಚಿಸುವವರಿಗೆ ಒಂದು ಎಚ್ಚರಿಕೆ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಏನಿದು ಪ್ರಕರಣ?: ಬಾಲಕಿ ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಿವಾಸಿ. ಬಾಲಕಿ ಕುಟುಂಬಸ್ಥರ ಜೊತೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗ್ರಾಮಕ್ಕೆ ಬಂದಿದ್ದಳು. ಬುಧವಾರ ಕಬ್ಬು ಕಟಾವಿಗೆ ಬಾಲಕಿ ಗದ್ದೆಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನ ಎಳೆದೊಯ್ದ ಕಾಮುಕ ಕಿರಾತಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಬಾಲಕಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದು ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿದ್ದರು.

    ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿ ಕೊಲೆಯಾದ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮೊದಲಿಗೆ ಯಾರೋ ಇಬ್ಬರು ಬಾಲಕಿಯನ್ನು ಎಳೆದುಕೊಂಡು ಹೋಗುತ್ತಿದ್ದಾಗ ನಾನು ಆಕೆಯನ್ನ ಬಿಡಿಸಲು ಹೋಗಿದ್ದೆ. ನಂತರ ಭಯವಾಗಿ ಗದ್ದೆಯಲ್ಲಿ ಅವಿತು ಕುಳಿತಿದ್ದೆ ಎಂದು ಹೇಳಿದ್ದನು. ಅಪ್ರಾಪ್ತನ ನಡವಳಿಕೆ ಬಗ್ಗೆ ಮೃತ ಬಾಲಕಿಯ ಸಂಬಂಧಿಕರು ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

  • ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ- ಓರ್ವನ ಬಂಧನ

    ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ- ಓರ್ವನ ಬಂಧನ

    ಮಂಡ್ಯ: ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ.

    ಕೊಲೆಯಾದಬ ಅಪ್ರಾಪ್ತ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮೊದಲಿಗೆ ಯಾರೋ ಇಬ್ಬರು ಬಾಲಕಿಯನ್ನ ಎಳೆದುಕೊಂಡು ಹೋಗುತ್ತಿದ್ದಾಗ ನಾನು ಆಕೆಯನ್ನ ಬಿಡಿಸಲು ಹೋಗಿದ್ದೆ. ನಂತರ ಭಯವಾಗಿ ಗದ್ದೆಯಲ್ಲಿ ಅವಿತು ಕುಳಿತಿದ್ದೆ ಎಂದು ಹೇಳಿದ್ದನು. ಅಪ್ರಾಪ್ತನ ನಡವಳಿಕೆ ಬಗ್ಗೆ ಮೃತ ಬಾಲಕಿಯ ಸಂಬಂಧಿಕರು ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಏನಿದು ಪ್ರಕರಣ?: ಬಾಲಕಿ ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಿವಾಸಿ. ಬಾಲಕಿ ಕುಟುಂಬಸ್ಥರ ಜೊತೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗ್ರಾಮಕ್ಕೆ ಬಂದಿದ್ದಳು. ಬುಧವಾರ ಕಬ್ಬು ಕಟಾವಿಗೆ ಬಾಲಕಿ ಗದ್ದೆಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನ ಎಳೆದೊಯ್ದ ಕಾಮುಕ ಕಿರಾತಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಬಾಲಕಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದು ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿದ್ದರು.

  • ಕಬ್ಬು ಕಟಾವಿಗೆ ಬಂದಿದ್ದ ಬಾಲಕಿಯ ಅತ್ಯಾಚಾರಕ್ಕೆ ಯತ್ನ, ಕತ್ತು ಕೊಯ್ದು ಕೊಲೆ!

    ಕಬ್ಬು ಕಟಾವಿಗೆ ಬಂದಿದ್ದ ಬಾಲಕಿಯ ಅತ್ಯಾಚಾರಕ್ಕೆ ಯತ್ನ, ಕತ್ತು ಕೊಯ್ದು ಕೊಲೆ!

    – ಕುತ್ತಿಗೆಯಲ್ಲಿ ಸಿಲುಕಿದ ಚಾಕು

    ಮಂಡ್ಯ: ಕಬ್ಬು ಕಟಾವಿಗೆ ಬಂದಿದ್ದ 12 ವರ್ಷದ ಬಾಲಕಿಯ ಅತ್ಯಚಾರಕ್ಕೆ ಯತ್ನಿಸಿ, ಕತ್ತು ಕೊಯ್ದು ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಾಲಕಿ ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಿವಾಸಿ. ಕುಟುಂಬಸ್ಥರ ಜೊತೆ ಕಬ್ಬು ಕಟಾವಿಗೆ ಬಾಲಕಿ ಗದ್ದೆಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನ ಎಳೆದೊಯ್ದ ಕಾಮುಕ ಕಿರಾತಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ನಂತರ ಆಕೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದು ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿದ್ದಾರೆ.

    ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಮದ್ದೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ತುತ್ತಿನ ಚೀಲ ತುಂಬಿಸಿಕೊಳ್ಳಲು ಬಂದಿದ್ದ ಕುಟುಂಬ ಮಗಳನ್ನ ಕಳೆದುಕೊಂಡು ಕಣ್ಣೀರು ಹಾಕುತ್ತಿದೆ.

  • ಕಬ್ಬಿನ ಗದ್ದೆಯಲ್ಲಿ ಸಿಕ್ಕ ಚಿರತೆ ಮರಿ- ಮುದ್ದಾಡಿದ ಗ್ರಾಮಸ್ಥರು

    ಕಬ್ಬಿನ ಗದ್ದೆಯಲ್ಲಿ ಸಿಕ್ಕ ಚಿರತೆ ಮರಿ- ಮುದ್ದಾಡಿದ ಗ್ರಾಮಸ್ಥರು

    ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿದೆ. ಕಬ್ಬಿನ ಗದ್ದೆಯಲ್ಲಿ ಸಿಕ್ಕಿದ ಮುದ್ದು ಮುದ್ದಾದ ಚಿರತೆ ಮರಿಯನ್ನು ಗ್ರಾಮಸ್ಥರು ಎತ್ತಿ ಮುದ್ದಾಡಿದ್ದಾರೆ.

    ಕೆ.ಆರ್.ನಗರ ತಾಲೂಕಿನ ಮಿರ್ಲೆ ಗ್ರಾಮದ ಜಮೀನಿನಲ್ಲಿ ಕಬ್ಬು ಕಟಾವು ವೇಳೆ ಚಿರತೆ ಮರಿ ಸಿಕ್ಕಿದೆ. ಒಂದು ತಿಂಗಳ ಗಂಡು ಮರಿ ಇದ್ದಾಗಿದ್ದು, ಸಂತೋಷ್ ಎಂಬವರು ತಮ್ಮ ಕಬ್ಬಿನ ಗದ್ದೆಯಲ್ಲಿ ಕಟಾವು ಮಾಡುವಾಗ ಈ ಮರಿಯನ್ನು ನೋಡಿದ್ದಾರೆ. ತಕ್ಷಣ ಮರಿಯನ್ನು ತೆಗೆದುಕೊಂಡು ಗ್ರಾಮಕ್ಕೆ ಬಂದಿದ್ದಾರೆ. ಗ್ರಾಮದಲ್ಲಿ ಚಿರತೆ ಮರಿಯನ್ನು ನೋಡಲು ಬಂದವರೆಲ್ಲಾ ಅದನ್ನು ಕೈಯಲ್ಲಿ ಎತ್ತಿಕೊಂಡು ಮುದ್ದಾಡಿದ್ದಾರೆ.

    ಸಂತೋಷ್ ಅರಣ್ಯ ಇಲಾಖೆಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಮರಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

    ತಾಯಿ ಚಿರತೆ ಕಬ್ಬಿನ ಗದ್ದೆಯೊಳಗೆ ಮರಿ ಹಾಕಿ ಮರಿಗಳನ್ನು ಕಾಡಿಗೆ ತೆಗೆದುಕೊಂಡು ಭರದಲ್ಲಿ ಈ ಮರಿಯನ್ನು ಇಲ್ಲೆ ಬಿಟ್ಟು ಹೋಗಿರುವ ಸಾಧ್ಯತೆ ಇದೆ. ಅಥವಾ ಮರಿಯನ್ನು ಇಲ್ಲೆ ಬಿಟ್ಟು ಬೇರೆಡೆಗೆ ಬೇಟೆಗೆ ತೆರಳಿರೋ ಸಾಧ್ಯತೆಯೂ ಇದೆ.

  • ಕಬ್ಬು ಕಟಾವು ಮಾಡುವಾಗ ಕಾಲು ಹಿಡಿದ ಚಿರತೆ ಮರಿಗಳು – ರೈತನಿಗೆ ಸಂಕಟ

    ಕಬ್ಬು ಕಟಾವು ಮಾಡುವಾಗ ಕಾಲು ಹಿಡಿದ ಚಿರತೆ ಮರಿಗಳು – ರೈತನಿಗೆ ಸಂಕಟ

    ಚಾಮರಾಜನಗರ: ಕಬ್ಬು ಕಟಾವು ಮಾಡುವಾಗ ಎರಡು ಚಿರತೆ ಮರಿಗಳ ಚಿನ್ನಾಟಕ್ಕೆ ರೈತರು ಬೆಸ್ತು ಬಿದ್ದಿರುವ ಘಟನೆ ಗಡಿಭಾಗವಾದ ತಾಳವಾಡಿಯ ದೊಡ್ಡಮುತ್ತಿನಕೆರೆಯಲ್ಲಿ ನಡೆದಿದೆ.

    ಗ್ರಾಮದ ತಂಗರಾಜು ಅವರು ಜಮೀನಿನಲ್ಲಿ ಚಿರತೆಯೊಂದು ಮರಿ ಹಾಕಿರುವುದು ಇಂದು ಕಟಾವು ಮಾಡುತ್ತಿರುವಾಗ ಬೆಳಕಿಗೆ ಬಂದಿದೆ. ಕಬ್ಬು ಕಟಾವು ಮಾಡುವ ವೇಳೆ ಕೆಲಸ ಮಾಡುತ್ತಿದ್ದ ಓರ್ವನ ಕಾಲನ್ನು ಚಿರತೆ ಮರಿಯೊಂದು ಹಿಡಿದು ದಂಗು ಬೀಳಿಸಿದೆ. ಬಳಿಕ ಶಾಕ್‍ನಿಂದ ಎಚ್ಚೆತ್ತ ಕೆಲಸಗಾರರು ತಾಯಿ ಇಲ್ಲದಿದ್ದನ್ನು ಖಚಿತ ಪಡಿಸಿಕೊಂಡು ಸತ್ಯಮಂಗಲಂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

    ಎರಡು ಚಿರತೆ ಮರಿಗಳನ್ನು ಇದ್ದ ಸ್ಥಳದಲ್ಲೇ ಇರಿಸಿದ್ದು, ರಾತ್ರಿ ವೇಳೆ ತಾಯಿ ಚಿರತೆ ಬಂದು ಹೊತ್ತೊಯ್ಯಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ರೈತರಿಗೆ ತಿಳಿಸಿದ್ದಾರೆ. ಅವುಗಳ ಚಲನವಲನ ಗಮನಿಸಲು 3 ಕ್ಯಾಮೆರಾಗಳನ್ನು ಕೂಡ ಅರಣ್ಯ ಇಲಾಖೆ, ಸ್ಥಳದಲ್ಲಿ ಅಳವಡಿಸಿದೆ.

    ಈ 2 ಚಿರತೆ ಮರಿಗಳು ಜನಿಸಿ 20 ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಕಬ್ಬು ಕಟಾವು ಮಾಡುತ್ತಿದ್ದ ಸದ್ದಿಗೆ ಎಚ್ಚೆತ್ತು ಹೊರಬಂದಿವೆ ಎನ್ನಲಾಗಿದೆ.