Tag: ಕಮಲನಾಥ್

  • ಕಾಂಗ್ರೆಸ್‌ನಲ್ಲಿ ಅಧಿಕಾರ ಅನುಭವಿಸಿ ಬಿಜೆಪಿ ಸೇರೋದು ಸರಿಯಲ್ಲ: ಪರಮೇಶ್ವರ್

    ಕಾಂಗ್ರೆಸ್‌ನಲ್ಲಿ ಅಧಿಕಾರ ಅನುಭವಿಸಿ ಬಿಜೆಪಿ ಸೇರೋದು ಸರಿಯಲ್ಲ: ಪರಮೇಶ್ವರ್

    – ಇಂತಹ ಕಠಿಣ ಸಮಯದಲ್ಲಿ ಹೀಗೆ ಮಾಡೋದು ತಪ್ಪು

    ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲಾ ಅಧಿಕಾರ ಅನುಭವಿಸಿ ಈಗ ಬಿಜೆಪಿ ‌ಸೇರುತ್ತೇನೆ ಎಂದರೆ ಅದು ಸರಿಯಲ್ಲ ಅಂತ ಮಧ್ಯ ಪ್ರದೇಶದ‌ ಮಾಜಿ ಸಿಎಂ ಕಮಲನಾಥ್ ವಿರುದ್ಧ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಕಿಡಿಕಾರಿದ್ದಾರೆ.

    ಮಧ್ಯಪ್ರದೇಶ ದ ಮಾಜಿ ಸಿಎಂ ಕಮಲನಾಥ್ ಬಿಜೆಪಿ (BJP) ಸೇರ್ಪಡೆ ವಿಚಾರಕ್ಕೆ ‌ಪ್ರತಿಕ್ರಿಯೆ ನೀಡಿದ ಅವರು, ಬಹಳ ಜನ ಕಾಂಗ್ರೆಸ್ ‌ನಲ್ಲಿ ಅಧಿಕಾರ ಅನುಭವಿಸಿ, ಎಲ್ಲಾ ಹಂತದಲ್ಲಿ ಅವರಿಗೆ ಸಹಕಾರ ಕೊಟ್ಟು ಬೆಳೆಸಿರುತ್ತೆ. ಅಧಿಕಾರ ಅನುಭವಿಸಿ ಕ್ಲುಲ್ಲಕ ಕಾರಣಕ್ಕೋ, ನಿಜವಾದ ಕಾರಣಕ್ಕೋ ಪಕ್ಷವನ್ನು ಬಿಡೋದು‌ ಸರಿಯಲ್ಲ ಎಂದರು‌. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    ಪಕ್ಷ ನಮಗೆ ತಾಯಿ ಸಮಾನ. ತಾಯಿ ನಮಗೆ ಊಟ ಹಾಕಿ, ಬೆಳೆಸಿ ದೊಡ್ಡವರು ಮಾಡ್ತಾರೆ. ನಾವು ತಾಯಿಯನ್ನು ತಿರಸ್ಕಾರ ಮಾಡಿದ ಹಾಗೆ ಮಾಡೋದು‌ ಸರಿಯಲ್ಲ. ಕಾಂಗ್ರೆಸ್ ಪಕ್ಷ ಅವರಿಗೆಲ್ಲ ದೊಡ್ಡ ದೊಡ್ಡ ಹುದ್ದೆ ಕೊಟ್ಟು ಅವರನ್ನ ಬೆಳೆಸಿದೆ‌. ಅವರು ಕೂಡಾ ಪಕ್ಷಕ್ಕೆ ದುಡಿದಿರಬಹುದು. ಅವರಿಂದ ಪಕ್ಷಕ್ಕೆ ಅನುಕೂಲ ಆಗಿರಬಹುದು‌. ಇಂತಹ ಕಠಿಣ ಸಮಯದಲ್ಲಿ, ಚುನಾವಣೆ ಬರೋ ಸಮಯದಲ್ಲಿ ಹೀಗೆ ಮಾಡೋದು ಸರಿಯಲ್ಲ ಎಂದರು.

    ಕಮಲನಾಥ್ (Kamalnath) ಅಂತಹವರು ಮಧ್ಯಪ್ರದೇಶದಲ್ಲಿ ಚುನಾವಣೆ ಸರಿಯಾಗಿ ನಡೆಸಿಲ್ಲ ಅಂತ ನಮಗೆಲ್ಲ ಅನ್ನಿಸುತ್ತೆ. ಚುನಾವಣೆ ಮೊದಲು ಕಾಂಗ್ರೆಸ್ ಅಧಿಕಾರ ಬರುತ್ತೆ ಅಂತ ಹೇಳೋರು. ಆದರೆ ಕೆಟ್ಟ ಪರಿಸ್ಥಿತಿ ತಂದು ಸೋತಿದ್ದಾರೆ. ಇದಕ್ಕೆ ಕಮಲನಾಥ್ ಕಾರಣ ಅಂತ ವಿಶ್ಲೇಷಣೆ ‌ಮಾಡ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಪಕ್ಷ ನಮ್ಮನ್ನ ಸರಿಯಾಗಿ ನಡೆಸಿಕೊಂಡಿಲ್ಲ ಅಂತ ಅವರಿಗೆ ಅನ್ನಿಸಿರಬಹುದು. ತಪ್ಪು ಅವರಿಂದ ಆಗಿ ಕಾಂಗ್ರೆಸ್ ದೂಷಣೆ ಮಾಡೋದು ಸರಿಯಲ್ಲ. ಅವರು ಕಾಂಗ್ರೆಸ್ ಬಿಡಬಾರದು ಅಂತ ನಮಗೂ ಅನ್ನಿಸುತ್ತೆ ಎಂದರು.

  • ಮಧ್ಯಪ್ರದೇಶದಲ್ಲಿ ಆಪರೇಷನ್ ‘ಕಮಲ್’ನಾಥ್ – ಬಹುಮತ ಇಲ್ಲವೆಂದ ದಿಗ್ವಿಜಯ್ ಸಿಂಗ್

    ಮಧ್ಯಪ್ರದೇಶದಲ್ಲಿ ಆಪರೇಷನ್ ‘ಕಮಲ್’ನಾಥ್ – ಬಹುಮತ ಇಲ್ಲವೆಂದ ದಿಗ್ವಿಜಯ್ ಸಿಂಗ್

    ಭೋಪಾಲ್: ಮಧ್ಯಪ್ರದೇಶದ ರಾಜಕೀಯ ಹೈಡ್ರಾಮಾಗೆ ಇಂದು ತೆರೆಬೀಳಲಿದ್ದು, ಸಿಎಂ ಕಮಲ್‍ನಾಥ್ ವಿಶ್ವಾಸಮತ ಸಾಬೀತಿಗೂ ಮುನ್ನ ಪದತ್ಯಾಗ ಮಾಡಲಿದ್ದಾರೆ ಎಂಬ ಸುಳಿವನ್ನು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನೀಡಿದ್ದಾರೆ.

    ಸುಪ್ರೀಂಕೋರ್ಟ್ ಇಂದು ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸೂಚನೆ ನೀಡಿತ್ತು. ಮ್ಯಾಜಿಕ್ ನಂಬರ್ ಇಲ್ಲದ ಕಾರಣ ಸಿಎಂ ಕಮಲನಾಥ್ ಪದತ್ಯಾಗ ಮಾಡಿದ್ದಾರೆ. ಈ ಕುರಿತು ಮಾತಾಡಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, 22 ಶಾಸಕರ ರಾಜೀನಾಮೆಯಿಂದಾಗಿ ನಮ್ಮ ಬಳಿ ಬಹುಮತ ಇಲ್ಲ. ಹಣ ಮತ್ತು ಅಧಿಕಾರ ಪ್ರಯೋಗದಿಂದಾಗಿ ಬಹುಮತದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ಸಂಜೆಯೊಳಗೆ ಕಮಲ್‍ನಾಥ್ ಬಹುಮತ ಸಾಬೀತು ಮಾಡದಿದ್ದರೆ ಸರ್ಕಾರ ಪತನವಾಗೋದು ಖಚಿತವಾಗಲಿದೆ. ವಿಶ್ವಾಸಮತ ಸಾಬೀತಿಗೂ ಮುನ್ನವೇ ದಿಗ್ವಿಜಯ್ ಸಿಂಗ್ ತಮ್ಮ ಬಳಿ ಬಹುಮತವಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ ದಿಗ್ವಿಜಯ್ ಸಿಂಗ್ ನಗರದ ಹೊರವಲಯದ ರೆಸಾರ್ಟಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶದ ಶಾಸಕರ ಭೇಟಿಗೆ ಮುಂದಾಗಿದ್ದರು. ಆದ್ರೆ ಪೊಲೀಸರು ಭೇಟಿಗೆ ಅವಕಾಶ ಕಲ್ಪಿಸಲಿಲ್ಲ.

  • ಹಂದಿ ಜ್ವರದಿಂದ ಬಳಲ್ತಿದ್ದಾರಂತೆ ಜ್ಯೋತಿರಾದಿತ್ಯ ಸಿಂಧಿಯಾ!

    ಹಂದಿ ಜ್ವರದಿಂದ ಬಳಲ್ತಿದ್ದಾರಂತೆ ಜ್ಯೋತಿರಾದಿತ್ಯ ಸಿಂಧಿಯಾ!

    ಭೋಪಾಲ್: ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಮುಂದಾಳತ್ವ ವಹಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಹಂದಿಜ್ವರದಿಂದ ಬಳಲುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

    ನಾವು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ಹಂದಿ ಜ್ವರದಿಂದ ಬಳಲುತ್ತಿದ್ದಾರಂತೆ. ಹೀಗಾಗಿ ನಾವು ಅವರೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ ಎಂದು ನಾಯಕರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿರುವುದಕ್ಕೆ ಅಸಮಾಧಾನವನ್ನು ಹೊರ ಹಾಕಿದ್ದಾರೆ.

    ಮಧ್ಯಪ್ರದೇಶದಲ್ಲಿ ಮತದಾರರ ಆದೇಶವನ್ನು ಅಗೌರವಗೊಳಿಸಲು ಪ್ರಯತ್ನಿಸಿದರೆ ಅವರಿಗೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ವಿರುದ್ಧ ದಿಗ್ವಿಜಯ್ ಸಿಂಗ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

    ಮಧ್ಯಪ್ರದೇಶದ 6 ಸಚಿವರು, 12 ಕಾಂಗ್ರೆಸ್ ಶಾಸಕರು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

    ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

  • ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

    ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

    ಭೋಪಾಲ್: ಮಧ್ಯಪ್ರದೇಶದಲ್ಲಿ ಸರ್ಕಾರ ಉಳಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಸಿಎಂ ಕಮಲನಾಥ್ ಅವರು ಎಲ್ಲ ಸಂಪುಟದ ಎಲ್ಲ ಸಚಿವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ.

    ಈಗಾಗಲೇ 18 ಮಂದಿ ಕೈ ಶಾಸಕರು ಬೆಂಗಳೂರು ತಲುಪಿದ್ದಾರೆ. ಈ ಶಾಸಕರಿಗೆ ಮಂತ್ರಿ ಸ್ಥಾನ ನೀಡಲು ಕೊನೆಯ ಪ್ರಯತ್ನವಾಗಿ  ಕಮಲನಾಥ್ ಈ ದಾಳ ಉರುಳಿಸಿದ್ದಾರೆ ಎಂದು ವರದಿಯಾಗಿದೆ.

    ಒಂದು ವೇಳೆ ಕಮಲನಾಥ ಸರ್ಕಾರ ಪತನಗೊಂಡರೆ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಿಎಂ ಹುದ್ದೆಯ ಆಫರ್ ಅನ್ನು ಬಿಜೆಪಿ ನೀಡಿದೆ ಎನ್ನಲಾಗುತ್ತಿದೆ. ಈ ವಿದ್ಯಮಾನಗಳ ನಡುವೆ  ರಾಜೀನಾಮೆ ಪಡೆದುಕೊಂಡಿದ್ದು ರಾತ್ರಿ ಭಾರೀ ಬೆಳವಣಿಗೆ ನಡೆಯುತ್ತಿದೆ.

    ಮಧ್ಯಪ್ರದೇಶದ 6 ಸಚಿವರು, 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

    ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

     

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

    ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸಿದ್ದಾರೆ.

    ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಕಮಲನಾಥ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ರಾಜ್ಯಸಭಾ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ ಕಮಲನಾಥ್ ಚರ್ಚೆ ನಡೆಸಿದ್ದರೆ ಸಂಜೆಯ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

    ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಕಮಲನಾಥ್ ಮತ್ತು ಸಿಂಧಿಯಾ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿತ್ತು. ಚುನವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಈಡೇರಿಸದೇ ಇದ್ದಲ್ಲಿ ಬೀದಿಯಲ್ಲಿ ನಿಂತು ಹೋರಾಟ ಮಾಡುವುದಾಗಿ ಸಿಂಧಿಯಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರವನ್ನು ಸಿಂಧಿಯಾ ಶ್ಲಾಘಿಸಿ ಬೆಂಬಲಿಸಿ ಟ್ವೀಟ್ ಮಾಡಿದ್ದು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

    https://twitter.com/JM_Scindia/status/1158729410507182080?

    2019ರ ಅಕ್ಟೋಬರ್ ನಲ್ಲಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್ ಹಾಕಿತ್ತು. ಸಿಂಧಿಯಾ ಅವರ ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.

  • ಪತನದತ್ತ ಕಮಲ್ ಸರ್ಕಾರ- ಬೆಂಗಳೂರಿನಲ್ಲಿ 18 ಕಾಂಗ್ರೆಸ್ ಶಾಸಕರು

    ಪತನದತ್ತ ಕಮಲ್ ಸರ್ಕಾರ- ಬೆಂಗಳೂರಿನಲ್ಲಿ 18 ಕಾಂಗ್ರೆಸ್ ಶಾಸಕರು

    – ಬಂದವರೆಲ್ಲ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರು
    – ಬಿಜೆಪಿಯಿಂದ ಆಪರೇಷನ್ ಕಮಲ

    ಬೆಂಗಳೂರು/ನವದೆಹಲಿ: ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನದಂಚಿಗೆ ಬಂದು ನಿಂತಿದೆ. ಕರ್ನಾಟಕ ಮಾದರಿಯಲ್ಲೇ ಆಪರೇಷನ್ ಕಮಲದ ವಾಸನೆ ಬಡಿದಿದೆ.

    6 ಸಚಿವರು, 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

    ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

    ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸುತ್ತಿದ್ದಾರೆ.

    ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಕಮಲನಾಥ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ರಾಜ್ಯಸಭಾ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ ಕಮಲನಾಥ್ ಚರ್ಚೆ ನಡೆಸಿದ್ದರೆ ಸಂಜೆಯ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದಾರೆ.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

    ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಕಮಲನಾಥ್ ಮತ್ತು ಸಿಂಧಿಯಾ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿತ್ತು. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಈಡೇರಿಸದೇ ಇದ್ದಲ್ಲಿ ಬೀದಿಯಲ್ಲಿ ನಿಂತು ಹೋರಾಟ ಮಾಡುವುದಾಗಿ ಸಿಂಧಿಯಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

    https://twitter.com/JM_Scindia/status/1158729410507182080?

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರವನ್ನು ಸಿಂಧಿಯಾ ಶ್ಲಾಘಿಸಿ ಬೆಂಬಲಿಸಿ ಟ್ವೀಟ್ ಮಾಡಿದ್ದು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

    2019ರ ಅಕ್ಟೋಬರ್ ನಲ್ಲಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್ ಹಾಕಿತ್ತು. ಸಿಂಧಿಯಾ ಅವರ ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.

  • ಮಧ್ಯಪ್ರದೇಶದಲ್ಲಿ ತಡರಾತ್ರಿ ಆಪರೇಷನ್ ಕಮಲ – ಚಿಕ್ಕಮಗಳೂರು ರೆಸಾರ್ಟಿಗೆ ಶಾಸಕರು ಶಿಫ್ಟ್

    ಮಧ್ಯಪ್ರದೇಶದಲ್ಲಿ ತಡರಾತ್ರಿ ಆಪರೇಷನ್ ಕಮಲ – ಚಿಕ್ಕಮಗಳೂರು ರೆಸಾರ್ಟಿಗೆ ಶಾಸಕರು ಶಿಫ್ಟ್

    – ಕರ್ನಾಟಕ ಮಾದರಿಯಲ್ಲಿ ಆಪರೇಷನ್
    – ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ ಶಾಸಕರು
    – ತಡರಾತ್ರಿ ಚಿಕ್ಕಮಗಳೂರಿಗೆ ಶಿಫ್ಟ್

    ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ನಡೆದ ಆಪರೇಷನ್ ಕಮಲ ಮಾದರಿಯಲ್ಲಿ ತಡರಾತ್ರಿ ಮಧ್ಯಪ್ರದೇಶದಲ್ಲಿ ಆಪರೇಷನ್ ಆರಂಭಗೊಂಡಿದ್ದು 12 ಮಂದಿ ಶಾಸರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ 8 ಮಂದಿ ಶಾಸಕರು ದೆಹಲಿಗೆ ಶಿಫ್ಟ್ ಆಗಿದ್ದರೆ ರಾತ್ರೋರಾತ್ರಿ 4 ಮಂದಿ ಶಾಸಕರು ಕರ್ನಾಟಕಕ್ಕೆ ಶಿಫ್ಟ್ ಆಗಿದ್ದಾರೆ.

    ತಡರಾತ್ರಿ 4 ಶಾಸಕರು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದು ಅವರು ಈಗ ಚಿಕ್ಕಮಗಳೂರಿನ ರೆಸಾರ್ಟಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ರಾಜ್ಯದ ಡಿಸಿಎಂ ಒಬ್ಬರ ಕಣ್ಗಾವಲಿನಲ್ಲಿ ಚಿಕ್ಕಮಗಳೂರಿನಲ್ಲಿ ನಾಲ್ವರು ಕೈ ಶಾಸಕರು ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಹರಿಯಾಣದ ಗುರುಗ್ರಾಮದಲ್ಲಿರುವ ಐಟಿಸಿ ರೆಸಾರ್ಟ್‍ನಲ್ಲಿ ಬಿಜೆಪಿ ಬಲವಂತವಾಗಿ ಶಾಸಕರನ್ನು ಹಿಡಿದಿಟ್ಟುಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮಧ್ಯ ಪ್ರದೇಶದ ಸಚಿವ, ಕಾಂಗ್ರೆಸ್ ನಾಯಕರಾದ ಜಿತು ಪಟ್‍ವಾರಿ ಮತ್ತು ಜೈವರ್ಧನ್ ಸಿಂಗ್ ಅವರು ಐಟಿಸಿ ರೆಸಾರ್ಟ್‍ಗೆ ತೆರಳಿ ಉಚ್ಚಾಟಿತ ಬಿಎಸ್‍ಪಿ ಶಾಸಕಿ ರಮಾಬಾಯಿ ಅವರ ಜತೆ ತೆರಳುತ್ತಿರುವ ವಿಡಿಯೋ ಲಭ್ಯವಾಗಿದೆ.

    ಬಿಜೆಪಿಯ ರಾಂಪಾಲ್ ಸಿಂಗ್, ನರೋತ್ತಮ್ ಮಿಶ್ರಾ, ಅರವಿಂದ ಬದೌರಿಯಾ ಮತ್ತು ಸಂಜಯ್ ಪಾಠಕ್ ಶಾಸಕರಿಗೆ ಹಣ ನೀಡಿದ್ದಾರೆ. ಈ ಎಲ್ಲ ಶಾಸಕರು ಕಾಂಗ್ರೆಸ್ಸಿಗೆ ಮರಳಲಿದ್ದಾರೆ ಎಂದು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಮುಖ್ಯಮಂತ್ರಿ ಕಮಲನಾಥ್ ಪ್ರತಿಕ್ರಿಯಿಸಿ, ನಮ್ಮ ಸರ್ಕಾರಕ್ಕೆ ಏನು ಆಗುವುದಿಲ್ಲ. ಎಲ್ಲ ಶಾಸಕರು ವಾಪಸ್ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಎರಡು ದಿನಗಳ ದಿಗ್ವಿಜಯ್ ಸಿಂಗ್ ಮಾತನಾಡಿ, ಕರ್ನಾಟಕದಲ್ಲಿ ನಡೆದಂತೆ ಮಧ್ಯಪ್ರದೇಶದಲ್ಲಿ ಸರ್ಕಾರ ಬೀಳಿಸಲು ನಾವು ಬಿಡುವುದಿಲ್ಲ. 25-30 ಕೋಟಿ ರೂ. ನೀಡಿ ಬಿಜೆಪಿ ಶಾಸಕರನ್ನು ಖರೀದಿಸಲು ಮುಂದಾಗುತ್ತಿದೆ. ಮೊದಲ ಕಂತಿನಲ್ಲಿ 5 ಕೋಟಿ ನಂತರ ರಾಜ್ಯಸಭಾಗೆ ಆಯ್ಕೆ ಮಾಡುವುದು, ಕೊನೆಗೆ ಉಳಿದ ಹಣ ಹಂಚಿಕೆ ಸಂಬಂಧ ಒಪ್ಪಂದ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು.

    ಈ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಗೋಪಾಲ್ ಭಾರ್ಗವ್, ಬಿಜೆಪಿ ಯಾರನ್ನು ಸಂಪರ್ಕಿಸಿಲ್ಲ. ಅಧಿಕಾರದಲ್ಲಿರುವ ಶಾಸಕರ ತಾವಾಗಿಯೇ ಬಿಜೆಪಿಗೆ ಬಂದರೆ ಸ್ವಾಗತ ಎಂದಿದ್ದರು. ಪ್ರಸ್ತುತ 230 ಸದಸ್ಯರನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಪರ ಸ್ಪೀಕರ್ ಸೇರಿ 121 ಶಾಸಕರ ಬಲವನ್ನು ಹೊಂದಿದೆ.

    ಕಳೆದ ಜುಲೈನಲ್ಲಿ ಪ್ರತಿಕ್ರಿಯೆ ನೀಡಿದ್ದ ವಿಪಕ್ಷ ನಾಯಕ ಗೋಪಾಲ್ ಭಾರ್ಗವ್ ಅವರು, ಪಕ್ಷದ ನಂಬರ್ 1 ಮತ್ತು ನಂಬರ್ 2 ವ್ಯಕ್ತಿಗಳಿಂದ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಆದೇಶ ಬಂದಲ್ಲಿ 24 ಗಂಟೆಯ ಒಳಗಡೆ ಕಮಲ್‍ನಾಥ್ ಸರ್ಕಾರ ಬೀಳಲಿದೆ ಎಂದು ಹೇಳಿದ್ದರು.

    ಕಮಲ್‍ನಾಥ್ ಸರ್ಕಾರವನ್ನು ಬೀಳಿಸಲು ನಾವು ಕಾಯುತ್ತಿದ್ದೇವೆ. ಮಧ್ಯಪ್ರದೇಶದ ಪರಿಸ್ಥಿತಿ ಕರ್ನಾಟಕಕ್ಕಿಂತ ಅತ್ಯಂತ ಕೆಟ್ಟದಾಗಿದೆ. ಇಲ್ಲಿನ ಸರ್ಕಾರವು ಏಳು ತಿಂಗಳು ಪೂರ್ಣಗೊಳಿಸಿದ್ದೆ ಆಶ್ಚರ್ಯಕರ ಹಾಗೂ ಇಲ್ಲಿಗೆ ಕಮಲ್‍ನಾಥ್ ಆಡಳಿತವನ್ನು ನಿಲ್ಲಿಸಬೇಕಿದೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ನಾವು ಸರ್ಕಾರ ರಚನೆಯ ಆತುರದಲ್ಲಿ ಇರಲಿಲ್ಲ. ಆದರೆ ಇಂದಿನ ಪರಿಸ್ಥಿತಿ ನಮಗೆ ಅನುಕೂಲವಾಗಿದೆ ಎಂದು ತಿಳಿಸಿದ್ದರು.

    ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಚಿಂದ್ವಾರಾ ಕ್ಷೇತ್ರದಿಂದ ಸಿಎಂ ಕಮಲ್‍ನಾಥ್ ಪುತ್ರ ನಕುಲ್ ನಾಥ್ ಜಯಗಳಿಸಿದ್ದರು.

  • ಕಾಂಗ್ರೆಸ್ ಸರ್ಕಾರ ಬೀಳಿಸಲು ಇದು ಕರ್ನಾಟಕ ಅಲ್ಲ: ಕಮಲ್‍ನಾಥ್

    ಕಾಂಗ್ರೆಸ್ ಸರ್ಕಾರ ಬೀಳಿಸಲು ಇದು ಕರ್ನಾಟಕ ಅಲ್ಲ: ಕಮಲ್‍ನಾಥ್

    ಭೋಪಾಲ್: ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಇದು ಕರ್ನಾಟಕ ಅಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‍ನಾಥ್ ಹೇಳಿದ್ದಾರೆ.

    ನಮ್ಮ ಶಾಸಕರಿಗೆ ಬಿಜೆಪಿಯವರು ಆಮಿಷಗಳನ್ನು ಒಡ್ಡುತ್ತಿರುವುದು ನಿಜ. ಬಿಜೆಪಿಯ ಮೊದಲ ಟಾರ್ಗೆಟ್ ಇದ್ದಿದ್ದು ಮಧ್ಯಪ್ರದೇಶ, ಕರ್ನಾಟಕ ಅಲ್ಲ. ಆದರೆ ಅವರಿಗೆ ಮಧ್ಯಪ್ರದೇಶದಲ್ಲಿ ಏನೂ ಮಾಡಲು ಆಗಲಿಲ್ಲ. ಆಗ ಅವರು ಕರ್ನಾಟಕಕ್ಕೆ ಹೋದರು ಎಂದು ಆಪರೇಷನ್ ಕಮಲ ಮೂಲಕ ಸರ್ಕಾರ ಬೀಳಿಸುವ ಬಿಜೆಪಿಯ ಯತ್ನಕ್ಕೆ ತಿರುಗೇಟು ನೀಡಿದ್ದಾರೆ.

    ಮಸೂದೆವೊಂದರ ಮೇಲೆ ಮತದಾನದ ಸಂದರ್ಭದಲ್ಲಿ ನನ್ನ ಪಕ್ಷದ ಶಾಸಕರು ನನ್ನ ಬಳಿಗೆ ಬಂದು, ಬಿಜೆಪಿ ನಮಗೆ ದುಡ್ಡಿನ ಆಮಿಷ ಒಡ್ಡಿದೆ ಎಂದು ಹೇಳಿದ್ದರು. ಬಿಜೆಪಿಯಿಂದ ದುಡ್ಡು ತಗೊಳ್ಳಿ ಅಂತ ನಾನು ಹೇಳಿದೆ. ನನ್ನ ಪಕ್ಷದ ಶಾಸಕರೆಲ್ಲ ನನ್ನ ಜೊತೆಗಿದ್ದಾರೆ,.ಅಷ್ಟೇ ಅಲ್ಲದೇ ಬಿಜೆಪಿ ಇಬ್ಬರು ಶಾಸಕರೂ ಸರ್ಕಾರದ ಪರವಾಗಿ ವೋಟ್ ಹಾಕುವಂತೆ ನೋಡಿಕೊಂಡೆ ಎಂದು ಹೇಳುವ ಮೂಲಕ ಮಧ್ಯಪ್ರದೇಶ ಸಿಎಂ ಕಮಲ್‍ನಾಥ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 115 ಬಿಜೆಪಿ 108 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‍ಪಿಯ ಇಬ್ಬರು, ಎಸ್‍ಪಿ ಒಬ್ಬರು, 4 ಮಂದಿ ಪಕ್ಷೇತರ ಶಾಸಕರು ಬೆಂಬಲ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ಕಮಲನಾಥ್ ಸರ್ಕಾರ ರಚನೆಯಾಗಿದೆ.