Tag: ಕಮಿಷನರೇಟ್

  • ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ಕಮಿಷನರೇಟ್ ಖಡಕ್ ಎಚ್ಚರಿಕೆ

    ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಕಾನೂನು ಕ್ರಮ: ಕಮಿಷನರೇಟ್ ಖಡಕ್ ಎಚ್ಚರಿಕೆ

    ಹುಬ್ಬಳ್ಳಿ: ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ, ಧಾರವಾಡ ಪೊಲೀಸ್ ಕಮಿಷನರೇಟ್ ಲಾಬೂರಾಮ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ನಡೆಯುವ ಹಲ್ಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ನಗರದ ಖ್ಯಾತ ಮನೋರೋಗ ತಜ್ಞ ಡಾ. ವಿನೋದ್ ಕುಲಕರ್ಣಿ (ಪಿಐಎಲ್) ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವೈದ್ಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಇದನ್ನೂ ಓದಿ: ವೈದ್ಯರ ಮೇಲೆ ಹಲ್ಲೆ ಮಾಡಿದರೆ 10 ವರ್ಷ ಜೈಲು, 10 ಲಕ್ಷ ದಂಡ

    ನಗರದ ಕಿಮ್ಸ್ ಸೇರಿ ಎಲ್ಲಾ ಆಸ್ಪತ್ರೆಗಳಲ್ಲಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ, ಕಂಟ್ರೋಲ್ ರೂಮ್ ನಂಬರ್ ಕಡ್ಡಾಯವಾಗಿ ಪ್ರಚಾರ ಪಡಿಸುವಂತೆ ನ್ಯಾಯಾಲಯ ಹೇಳಿತ್ತು. ಈ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಕಮಿಷನರೇಟ್, ಡಾ. ವಿನೋದ ಕುಲಕರ್ಣಿ ಅವರಿಗೆ ಪತ್ರ ಬರೆದು ವೈದ್ಯರಿಗೆ ತೊಂದರೆಯಾದಲ್ಲಿ ದೂರವಾಣಿ ಸಂಖ್ಯೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದರೆ ಕೂಡಲೇ ಸ್ಥಳಕ್ಕೆ ಆಗಮಿಸಿ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ತೀರ್ಥದಲ್ಲಿ ಕೈ ತೊಳೆದ ಕೇರಳದ ದೇವಸ್ವಂ ಸಚಿವ

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ವಶಪಡಿಸಿದ್ದ 50 ಲಕ್ಷ ಮೌಲ್ಯದ ಮಾದಕ ವಸ್ತುಗಳ ನಾಶ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ವಶಪಡಿಸಿದ್ದ 50 ಲಕ್ಷ ಮೌಲ್ಯದ ಮಾದಕ ವಸ್ತುಗಳ ನಾಶ

    ಮಂಗಳೂರು: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಪೊಲೀಸರು ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ನಾಡು ಕೈಗಾರಿಕಾ ಪ್ರದೇಶದ ರಾಮ್ ಕಿ ಬಯೋ ಮೆಡಿಕಲ್ ವೆಸ್ಟ್ ಟ್ರೀಟ್ಮೆಂಟ್ ಕಂಪನಿಯಲ್ಲಿ ನಡೆಯಿತು.

    ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಗ್ರಾಮಾಂತರ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ ಪತ್ತೆಯಾದ ಸುಮಾರು ಐವತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಸುಮಾರು 50 ಪ್ರಕರಣಕ್ಕೆ ಸಂಬಂಧಪಟ್ಟಂತೆ 130ಕೆಜಿಗೂ ಹೆಚ್ಚು ಗಾಂಜಾ, ಕೋಕೆನ್, ಚರಸ್ ಸಹಿತ ಹತ್ತು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಲಾಕ್‍ಡೌನ್ ಇದ್ರೂ ಮಾದಕ ವಸ್ತುಗಳ ಜಾಲ ಪತ್ತೆ

    ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ 5 ಪ್ರಕರಣಕ್ಕೆ ಸಂಬಂಧಪಟ್ಟಂತೆ 224 ಕೆಜಿ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ 89 ಮಾದಕ ವಸ್ತುಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ 153 ಜನರನ್ನು ದಸ್ತಗಿರಿ ಮಾಡಲಾಗಿದೆ. 383 ಕೆಜಿ ಮಾದಕ ವಸ್ತುಗಳನ್ನು ಆಗಾಗ ನಾಶಪಡಿಸಲಾಗಿದೆ.