Tag: ಕಮಿಷ್ನರ್

  • RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

    RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್: ಪೊಲೀಸ್ ಆಯುಕ್ತರಿಗೆ ದೂರು

    ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಫ್ಯಾನ್ಸ್ ವಾರ್ ಶುರುವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಅತ್ಯಂತ ಕೀಳುಮಟ್ಟಕ್ಕೆ ಹೋಗಿ ಅಭಿಮಾನದ ಪರಕಾಷ್ಟೇ ಮೆರೆಯುವಂತೆ ಕೆಲಸ ಆಗಿದೆ. ಆರ್.ಸಿ.ಬಿ ಸೋಲಿಗೆ ದೊಡ್ಮನೆ ಸೊಸೆಯನ್ನು ಟಾರ್ಗೆಟ್ ಮಾಡಿರುವ ಕೆಲವರು, ಪುನೀತ್ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneet Rajkumar) ಅವರನ್ನ ನಿಂದಿಸಿದ್ದಾರೆ ಕೆಲ ಕಿಡಿಗೇಡಿಗಳು.

    ಗಜಪಡೆ (Gajapade) ಹೆಸರಿನ ಪೇಜ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಕೆಟ್ಟದಾಗಿ ನಿಂದನೆ ಮಾಡಲಾಗಿದ್ದು, ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿದೆ ಈ ‘ಗಜಪಡೆ’ ಖಾತೆ. ಅಭಿಮಾನದ ನೆಪದಲ್ಲಿ ಹೆಣ್ಣಿನ ಬಗ್ಗೆ ಕೀಳಾಗಿ ಕಾಮೆಂಟ್ ಮಾಡಿದ್ದರಂತೆ ಅನೇಕರು ಈ ಗಜಪಡೆ ಖಾತೆಯನ್ನು ನಿರ್ವಹಿಸುತ್ತಿರುವವರ ಬಗ್ಗೆ ಗರಂ ಆಗಿದ್ದಾರೆ.

    ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಪೊಲೀಸ್ ಕಮಿಷ್ನರ್ (Commissioner) ಭೇಟಿ ಮಾಡಿ ಈಗಾಗಲೇ ದೂರು (Complaints) ಕೂಡ ನೀಡಲಾಗಿದೆ.

    ಸಾಕಷ್ಟು ಬಾರಿ ಈ ಫ್ಯಾನ್ಸ್ ವಾರ್ ಕನ್ನಡದಲ್ಲಿ ನಡೆದಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವಂತೆ ಸ್ವತಃ ದರ್ಶನ್ ಅವರೇ ಈ ಹಿಂದೆ ವಿಡಿಯೋ ಮೂಲಕ ಮನವಿ ಮಾಡಿದ್ದರು. ತಮ್ಮ ಅಭಿಮಾನಿಗಳು ಯಾವುದೇ ಕಾರಣಕ್ಕೂ ಬೇರೆಯ ನಟರ ಅಥವಾ ಅಭಿಮಾನಿಗಳನ್ನು ನಿಂದಿಸಬಾರದು ಎಂದು ಮನವಿ ಮಾಡಿದ್ದರು. ಆದರೂ, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಲೇ ಇವೆ.

  • ನಟಿ ಉರ್ಫಿ ಜಾವೇದ್ ಪರವಾಗಿ ಮುಂಬೈ ಕಮಿಷನರ್ ಗೆ ಪತ್ರ ಬರೆದ ಮಹಿಳಾ ಆಯೋಗ

    ನಟಿ ಉರ್ಫಿ ಜಾವೇದ್ ಪರವಾಗಿ ಮುಂಬೈ ಕಮಿಷನರ್ ಗೆ ಪತ್ರ ಬರೆದ ಮಹಿಳಾ ಆಯೋಗ

    ವಿಚಿತ್ರ ಫ್ಯಾಷನ್ ಐಕಾನ್ ಅಂತಲೇ ಫೇಮಸ್ ಆಗಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ ಗೆ (Urfi Javed) ಭದ್ರತೆ ಮತ್ತು ಅವರ ಬೇಡಿಕೆಯನ್ನು ಪರಿಶೀಲಿಸುವಂತೆ ಮುಂಬೈ (Mumbai)ಪೊಲೀಸ್ ಕಮಿಷನರ್ ಗೆ (Commissioner) ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ನಿನ್ನೆ ಮುಂಬೈ ಪೊಲೀಸ್ ಕಮಿಷ್ನರ್ ಗೆ ಬರೆದ ಪತ್ರದಲ್ಲಿ ಉರ್ಫಿ ಜಾವೇದ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಚಂಕಕರ್ (Rupali Chankakar) ತಿಳಿಸಿದ್ದಾರೆ.

    ಮೊನ್ನೆಯಷ್ಟೇ ನಟಿ ಉರ್ಫಿ ಜಾವೇದ್ ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿದ್ದರು. ಇವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದರು. ಅಲ್ಲದೇ, ತಮಗೆ ಜೀವ ಬೆದರಿಕೆ ಇರುವ ಕಾರಣದಿಂದಾಗಿ ರಕ್ಷಣೆ ನೀಡುವಂತೆ ಉರ್ಫಿ ಮನವಿ ಮಾಡಿದ್ದರು. ಅದಕ್ಕೂ ಮುನ್ನ ತಮ್ಮಿಂದ ಯಾವುದೇ ತಪ್ಪು ಆಗಿಲ್ಲ ಎಂದು ಮನದಟ್ಟು ಮಾಡಲು ವಿಚಾರಣೆಗೂ ಖುದ್ದಾಗಿ ಹೋಗಿದ್ದರು. ಇದನ್ನೂ ಓದಿ:ದಕ್ಷಿಣದ ಸಿನಿಮಾಗಳತ್ತ ಬಾಲಿವುಡ್ ನಟಿ ಐಶ್ವರ್ಯ ರೈ ಚಿತ್ತ

    ನಟಿ ಉರ್ಫಿ ಜಾವೇದ್ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು. ಅಲ್ಲದೇ, ಅಸಹ್ಯ ಎನ್ನುವಂತಹ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಕ್ಕೆ ಚಿತ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಉರ್ಫಿ ಮಹಿಳಾ ಆಯೋಗಕ್ಕೆ ಮೊರೆ ಹೋಗಿದ್ದರು.

    ತನ್ನ ವಿಚಿತ್ರ ಕಾಸ್ಟ್ಯೂಮ್ ಮೂಲಕ ಬಾಲಿವುಡ್ ಸಿನಿ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಉರ್ಫಿ ಜಾವೇದ್ ಮೇಲೆ ಉರಿದುಕೊಂಡವರೇ ಹೆಚ್ಚು. ಅವಳು ಧರಿಸುವ ಅರೆಬರೆ ಬಟ್ಟೆಯ ಬಗ್ಗೆ ಸಾಕಷ್ಟು ದೂರುಗಳು ಇವೆ. ಈ ವಿಚಾರವಾಗಿ ಅವಳು ಪೊಲೀಸ್ ಸ್ಟೇಶನ್ ಮೆಟ್ಟಿಲೂ ಹತ್ತಿದ್ದಾರೆ. ದುಬೈನಲ್ಲಿ ಪೊಲೀಸ್ ವಿಚಾರಣೆಗೂ ಒಳಗಾಗಿದ್ದಾರೆ. ಸದಾ ವಿವಾದವನ್ನೇ ಬೆನ್ನತ್ತಿ ಹೋಗುವ ಉರ್ಫಿ ಬಗ್ಗೆ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಹೆಮ್ಮೆಯಿಂದ ಮಾತನಾಡಿದ್ದಾರೆ. ಅವರನ್ನು ಮಾದರಿಯಾಗಿ ತಗೆದುಕೊಳ್ಳುವಂತೆ ಕರೆಕೊಟ್ಟಿದ್ದಾರೆ.

    ಬಾಲಿವುಡ್ ಸಿಂಗರ್ ಯೋ ಯೋ ಹನಿ ಸಿಂಗ್, ಸದ್ಯ ತಮ್ಮ ಆಲ್ಬಂವೊಂದರ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಉರ್ಫಿ ಜಾವೇದ್ ಬಗ್ಗೆ ಹಾಡಿಹೊಗಳಿದ್ದಾರೆ. ಉರ್ಫಿ ತನ್ನಿಷ್ಟದಂತೆ ಬದುಕುತ್ತಿರುವ ನಟಿ. ತುಂಬಾ ಧೈರ್ಯವಂತೆ. ಯಾರಿಗೂ ಹೆದರದೇ ತನ್ನ ಬದುಕನ್ನು ಕಟ್ಟಿಕೊಂಡಿದ್ದಾಳೆ. ಹಾಗಾಗಿ ದೇಶದ ಹುಡುಗಿಯರು ಅವಳನ್ನು ನೋಡಿ ಕಲಿತುಕೊಳ್ಳಬೇಕು’ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೀವ ಬೆದರಿಕೆ ಹಿನ್ನೆಲೆ ಮುಂಬೈ ಪೊಲೀಸ್ ಕಮಿಷ್ನರ್ ಭೇಟಿ ಮಾಡಿದ ಸಲ್ಮಾನ್ ಖಾನ್

    ಜೀವ ಬೆದರಿಕೆ ಹಿನ್ನೆಲೆ ಮುಂಬೈ ಪೊಲೀಸ್ ಕಮಿಷ್ನರ್ ಭೇಟಿ ಮಾಡಿದ ಸಲ್ಮಾನ್ ಖಾನ್

    ಮುಂಬೈನ ಪೊಲೀಸ್ ಕಮಿಷ್ನರ್ ಭೇಟಿ ಮಾಡಿದ್ದಾರೆ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್. ಅವರಿಗೆ ಜೀವ ಬೆದರಿಕೆ ಇರುವ ಕಾರಣಕ್ಕಾಗಿ ಈ ಭೇಟಿ ನಡೆದಿದೆ ಎಂದು ಹೇಳಲಾಗಿತ್ತು. ತಮಗೆ ಮತ್ತು ತಮ್ಮ ತಂದೆಗೆ ಜೀವ ಬೆದರಿಕೆ ಇರುವ ಕಾರಣಕ್ಕಾಗಿ ಗನ್ ಇಟ್ಟುಕೊಳ್ಳಲು ಪರವಾನಿಗೆ ನೀಡುವಂತೆ ಅವರು ಮನವಿ ಸಲ್ಲಿಸಿದ್ದಾರಂತೆ. ನಿನ್ನೆ ಸಂಜೆ ಈ ಭೇಟಿ ನಡೆದಿದ್ದು, ಸಲ್ಮಾನ್ ಬೇಡಿಕೆಯನ್ನು ಪರಿಶೀಲಿಸುವುದಾಗಿ ಕಮಿಷ್ನರ್ ಹೇಳಿದ್ದಾರೆ ಎನ್ನಲಾಗುತ್ತಿದೆ.

    ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಮಾಡಿದ ಹಂತಕರೇ ಸಲ್ಮಾನ್ ಖಾನ್ ಮತ್ತು ಅವರ ತಂದೆಗೆ ಜೀವ ಬೆದರಿಕೆಯ ಪತ್ರವನ್ನು ಬರೆದಿದ್ದರು. ಈ ಬೆದರಿಕೆ ಪತ್ರವನ್ನು ಬರೆದವರು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕಡೆಯವರು ಎಂದು ಹೇಳಲಾಗಿತ್ತು. ಅಲ್ಲದೇ, ಮೊನ್ನೆಯಷ್ಟೇ ಈ ಗ್ಯಾಂಗ್ ನ ಕೆಲವು ಸದಸ್ಯರನ್ನು ಎನ್ ಕೌಂಟರ್ ಮಾಡಿ ಕೊಲ್ಲಲಾಗಿದೆ. ಹಾಗಾಗಿ ಮತ್ತಷ್ಟು ದ್ವೇಷ ಹೆಚ್ಚಾಗಬಹುದು ಎನ್ನುವ ಆತಂಕ ಸಲ್ಮಾನ್ ಖಾನ್ ಅವರದ್ದು. ಇದನ್ನೂ ಓದಿ:ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

    ಲಾರೆನ್ಸ್ ಬಿಷ್ಣೋಯ್ ಟೀಮ್ ತುಂಬಾ ಸ್ಟ್ರಾಂಗ್ ಆಗಿದ್ದು, ಈಗಾಗಲೇ ಸಲ್ಮಾನ್ ಕೊಲ್ಲಲು ಹಲವು ರೀತಿಯ ಸಂಚುಗಳನ್ನು ರೂಪಿಸಿದ್ದರು ಎಂದು ಹೇಳಲಾಗಿತ್ತು. ಈಗಾಗಲೇ ಅರೆಸ್ಟ್ ಆದ ಕೆಲವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು ಅವರು ಆತಂಕದ ಹೇಳಿಕೆಗಳನ್ನು ನೀಡಿದ್ದಾರಂತೆ. ಈ ಹಿನ್ನೆಲೆಯಾಗಿಟ್ಟುಕೊಂಡು ಸಲ್ಮಾನ್, ಕಮಿಷ್ನರ್ ಜೊತೆ ಮಾತುಕತೆ ಆಡಿದ್ದಾರೆ ಎಂದು ಹೇಳಲಾಗುತ್ತಿದೆ. ಬೆದರಿಕೆ ನೆಪವಿಟ್ಟುಕೊಂಡು ಗನ್ ಲೈಸನ್ಸ್ ಕೊಡ್ತಾರಾ ಅಥವಾ ಇಲ್ಲವಾ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]