Tag: ಕಮೀಷನ್

  • ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

    ಸಿಸಿ ರೋಡ್ ಕಮಿಷನ್ ವಿಚಾರ – ಇಬ್ಬರು ಅಧಿಕಾರಿಗಳ ಅಮಾನತು: ಪ್ರಿಯಾಂಕ್ ಖರ್ಗೆ

    ಕಲಬುರಗಿ: ಸಿಸಿ ರೋಡ್ ವಿಚಾರವಾಗಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಕಮಿಷನ್ ಪಡೆದ ಬೆನ್ನಲ್ಲೇ ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

    ಸಿಸಿ ರೋಡ್ ವಿಚಾರವಾಗಿ ಅಧಿಕಾರಿಗಳು ಕಮೀಷನ್‌ಗೆ ಬೇಡಿಕೆಯಿಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ನಂಗೆ 5 ಪರ್ಸೆಂಟ್ ಪಿಡಿಓಗೆ 3 ಪರ್ಸೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್‌ಗೆ 5 ಪರ್ಸೆಂಟ್ ಕಮಿಷನ್ ಕೊಡಬೇಕು ಎಂದು ಜೆಇ ಹೇಳುತ್ತಿರುವುದು ಕಂಡು ಬಂದಿದೆ. ಈ ಮೂಲಕ ಗ್ರಾಮ ಪಂಚಾಯತ್‌ನ 15ನೇ ಹಣಕಾಸಿನ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಯ ಸಿಸಿ ರಸ್ತೆ ಮಾಡಿ, ಅದರ ಬಿಲ್ ರಿಲೀಸ್ ಗುತ್ತಿಗೆದಾರರಿಂದ ಪಂಚಾಯತ್ ರಾಜ್ ಜೆಇ 13% ಕಮಿಷನ್ ಕೇಳಿರುವುದು ಬಯಲಾಗಿದೆ.ಇದನ್ನೂ ಓದಿ: ಅಂತರಿಕ್ಷದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರುಕಾಳು – ಭಾರತದ ಶುಭಾಂಶು ಶುಕ್ಲಾ ಪ್ರಯೋಗ ಸಕ್ಸಸ್

    ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಇಬ್ಬರು ಅಧಿಕಾರಿಗಳಾದ ಜೆಇ ಶ್ರೀಪಾದ್ ಕುಲಕರ್ಣಿ ಹಾಗೂ ಗುಂಡಗುರ್ತಿ ಗ್ರಾಮ ಪಂಚಾಯತ್ ಪಿಡಿಓ ಮಂಜುಶ್ರೀಯನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಸಿಸಿ ರೋಡ್ ಕಮಿಷನ್ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಬಂದಿತ್ತು. ಈಗಾಗಲೇ ಅವರನ್ನ ಅಮಾನತು ಮಾಡಲಾಗಿದೆ. ಜೊತೆಗೆ ತನಿಖೆಗೆ ವಹಿಸಲಾಗಿದೆ. ನಮ್ಮ ಕ್ಷೇತ್ರದಲ್ಲಿ ಹೀಗೆ ಆದ್ರೆ ನಮಗೂ ಮುಜುಗರ ಆಗುತ್ತದೆ. ಅದಕ್ಕೆ ತನಿಖೆಗೆ ಆದೇಶ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸೈಕಲ್‌ನಲ್ಲಿ ತಾಯತ ಮಾರುತ್ತಿದ್ದ ಧಾರ್ಮಿಕ ಮತಾಂತರ ಗ್ಯಾಂಗ್‌ನ ಜಮಾಲುದ್ದೀನ್‌ ಈಗ 106 ಕೋಟಿ ರೂ. ಒಡೆಯ

  • ಸಾಲ ಕೊಡಿಸೋದಾಗಿ ಲಕ್ಷಾಂತರ ದೋಖಾ – ಎಸ್‍ಎಂಎಸ್ ಅಸೋಸಿಯೆಟ್ಸ್ ವಿರುದ್ಧ ದೂರು

    ಸಾಲ ಕೊಡಿಸೋದಾಗಿ ಲಕ್ಷಾಂತರ ದೋಖಾ – ಎಸ್‍ಎಂಎಸ್ ಅಸೋಸಿಯೆಟ್ಸ್ ವಿರುದ್ಧ ದೂರು

    ಚಾಮರಾಜನಗರ: ಸುಲಭವಾಗಿ ಸಾಲ ಸಿಗುತ್ತದೆ ಎಂಬ ಆಸೆಗೆ ಬಿದ್ದ ಜನರಿಗೆ ಅನಧಿಕೃತ ಖಾಸಗಿ ಸಂಸ್ಥೆಯೊಂದು ಲಕ್ಷಾಂತರ ರೂಪಾಯಿ ಟೋಪಿ ಹಾಕಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

    ಸಾಲ ಕೊಡಿಸುವುದಾಗಿ ಆಮಿಷ ಒಡ್ಡಿದ ಅನಧಿಕೃತ ಖಾಸಗಿ ಸಂಸ್ಥೆಯ ಮಾಲೀಕ ನೂರಾರು ಜನರಿಂದ ಕಮಿಷನ್ ಹಾಗೂ ನೊಂದಣಿ ಶುಲ್ಕದ ರೂಪದಲ್ಲಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದು ಮೋಸ ಹೋದ ಜನ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ವಂಚನೆ ಹೇಗೆ?
    ಎಸ್.ಎಂ.ಎಸ್. ಅಸೋಸಿಯೆಟ್ಸ್ ಹೆಸರಿನ ಸಂಸ್ಥೆ, ಉದ್ಯೋಗಿ ಶಶಿಕಲಾ ಎಂಬವರ ಹೆಸರಿನಲ್ಲಿ ಜಿ.ಎಸ್.ಟಿ. ನಂಬರ್ ಪಡೆದಿರುವುದನ್ನು ಬಿಟ್ಟರೆ ಇನ್ನೂ ಯಾವುದೇ ರೀತಿಯ ಸರ್ಕಾರಿ ಸಂಸ್ಥೆಗಳಿಂದ ಪರವಾನಗಿ ಪಡೆದಿಲ್ಲ. ಅಲ್ಲದೆ ನೊಂದವಣಿಯು ಆಗಿಲ್ಲ. ಆದರೂ ಚಾಮರಾಜನಗರ ಕೊಳ್ಳೇಗಾಲ, ಮಳವಳ್ಳಿ, ಟಿ.ನರಸೀಪುರ, ಮೈಸೂರು ಸೇರಿದಂತೆ 15 ಕಡೆ ಬ್ರ್ಯಾಂಚ್ ತೆರೆದು ಖಾಸಗಿ ಬ್ಯಾಂಕುಗಳಿಂದ ವ್ಯಾಪಾರ, ಕೈಗಾರಿಕೆ, ಮನೆ, ವಾಹನ, ಕೃಷಿ ಮತ್ತಿತರ ಸಾಲ ಸೌಲಭ್ಯ ಕೊಡಿಸುವುದಾಗಿ ಜನರನ್ನು ನಂಬಿಸಿದೆ. ಸಂಸ್ಥೆಯ ಬಿಸಿನೆಸ್ ಹೆಡ್ ಎಂದು ಹೇಳಿಕೊಂಡ ಮೋಹನಸುಂದರಂ ಎಂಬಾತ ನೂರಾರು ಮಂದಿಯಿಂದ ತಲಾ 2000 ರೂಪಾಯಿಯಂತೆ ನೊಂದಣಿ ಶುಲ್ಕ ವಸೂಲಿ ಮಾಡಿದ್ದಾನೆ. ಅಲ್ಲದೆ ಕೋಟಿಗಟ್ಟಲೆ ಸಾಲ ಕೊಡಿಸುವುದಾಗಿ ಮುಂಗಡವಾಗಿ ಶೇಕಡಾ ಮೂರರಂತೆ ಲಕ್ಷಾಂತರ ರೂಪಾಯಿ ಕಮಿಷನ್ ವಸೂಲಿ ಮಾಡಿದ್ದಾನೆ.

    ಚಾಮರಾಜನಗರ ಹಾಗು ಕೊಳ್ಳೇಗಾಲ ಪೊಲೀಸ್ ಠಾಣೆಗಳಲ್ಲಿ ಈ ಅನಧಿಕೃತ ಖಾಸಗಿ ಸಂಸ್ಥೆಯ ವಿರುದ್ದ ದೂರು ದಾಖಲಿಸಿದ್ದಾರೆ. ಇದೀಗ ಕೊಳ್ಳೇಗಾಲ ಪೊಲೀಸರು ಈ ಸಂಸ್ಥೆಯ ಬಿಸಿನೆಸ್ ಹೆಡ್ ಮೋಹನ ಸುಂದರಂ ಹಾಗು ಉದ್ಯೋಗಿ ಶಶಿಕಲಾ ಎಂಬುವರನ್ನು ಬಂಧಿಸಿದ್ದಾರೆ.

    ವಿಷಯ ತಿಳಿದು ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಠಾಣೆಗೆ ಧಾವಿಸಿ, ಈ ಬಗ್ಗೆ ಪ್ರಕರಣ ದಾಖಲಿಸಿ ನೊಂದ ಜನರಿಗೆ ನ್ಯಾಯ ಒದಗಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಕೊಳ್ಳೇಗಾಲ ಪೊಲೀಸರು, ಬಿಸಿನೆಸ್ ಹೆಡ್ ಮೋಹನಸುಂದರಂ ಹಾಗು ಸಂಸ್ಥೆಯ ಉದ್ಯೋಗಿ ಶಶಿಕಲಾ ಎಂಬುವರನ್ನು ಬಂಧಿಸಿ ಇವರ ವಿರುದ್ದ ಮೋಸ ಹಾಗು ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದಾರೆ.

  • ರಫೇಲ್ ಡೀಲ್‍ನಲ್ಲಿ ನಿಮಗೆ ಎಷ್ಟು ಕಮೀಷನ್ ಸಿಕ್ಕಿದೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

    ರಫೇಲ್ ಡೀಲ್‍ನಲ್ಲಿ ನಿಮಗೆ ಎಷ್ಟು ಕಮೀಷನ್ ಸಿಕ್ಕಿದೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

    ಬೆಂಗಳೂರು: ಕಳೆದ ಬಾರಿಯ ಕಾಂಗ್ರೆಸ್ ಸರ್ಕಾರವನ್ನು ಕಮೀಷನ್ ಸರ್ಕಾರವೆಂದಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಖಾರವಾದ ಪ್ರಶ್ನೆ ಕೇಳಿದ್ದಾರೆ.

    ಸಿದ್ದರಾಮಯ್ಯನವರ ಅಧಿಕಾರವಿದ್ದಾಗ ಪ್ರಧಾನಿ ಮೋದಿಯವರು ರಾಜ್ಯ ಸರ್ಕಾರವನ್ನು ಕಮೀಷನ್ ಸರ್ಕಾರ ಎಂದು ಆರೋಪ ಮಾಡಿತ್ತು. ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಪ್ರಧಾನಿ ಕಾಲೆಳೆದಿರುವ ಅವರು, ಹಿಂದೊಮ್ಮೆ ನಮ್ಮ ರಾಜ್ಯ ಸರ್ಕಾರವನ್ನು 10% ಕಮಿಷನ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದೀರಿ. ಆದರೆ ಈಗ ರಫೇಲ್ ಡೀಲ್‍ನಲ್ಲಿ ನಿಮಗೆಷ್ಟು ಪ್ರತಿಶತ ಕಮಿಷನ್ ಸಿಕ್ಕಿದೆ. ಇದರ ಬಗ್ಗೆ ದೇಶದ ಜನತೆಗೆ ಉತ್ತರಿಸುವ ಸಮಯ ನಿಮಗೆ ಬಂದಿದೆ. ನಿಮ್ಮಂತಹ ಮಹಾನ್ ಭಾಷಣಕಾರರು ಹೀಗೆ ಮೌನವಾದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

    ದೇಶದ ಪ್ರಧಾನಿಯೊಬ್ಬರು ಬಂಡವಾಳಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? ನೀವು ದೇಶದ ಪ್ರಧಾನ ಸೇವಕರಾಗಿ ಜನ ಸೇವೆಯನ್ನು ಮಾಡಲಿಲ್ಲ. ಚೌಕಿದಾರರಾಗಿ ಕಣ್ಣ ಮುಂದೆಯೇ ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ ಎಂದು ಕಿಡಿಕಾರಿದ್ದಾರೆ.

    ನೀವು ಈಗಲಾದರೂ ರಫೇಲ್ ಡೀಲ್ ಬಗ್ಗೆ ಮಾತನಾಡಿ. ಅಲ್ಲದೇ ರಫೇಲ್ ಡೀಲ್‍ನಲ್ಲಿ ತಾವು ಅಂಬಾನಿಯವರಿಗೆ ತೋರುತ್ತಿರುವ ನಿಷ್ಠೆಯನ್ನು ದೇಶದ ಕಡೆ ತೋರಿದ್ದರೇ, ಡಾಲರ್ ಮೌಲ್ಯ ಇಂದು 74 ರೂಪಾಯಿಯ ಗಡಿ ದಾಟುತ್ತಿರಲಿಲ್ಲ ಎಂದು ಟ್ವಿಟ್ಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv