Tag: ಕಮ್ಯೂನಿಸ್ಟ್

  • ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ಹಿಂದೇಟು ಹಾಕಿದ ಥಿಯೇಟರ್ಸ್ ಮಾಲೀಕರು

    ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ಹಿಂದೇಟು ಹಾಕಿದ ಥಿಯೇಟರ್ಸ್ ಮಾಲೀಕರು

    ದೇಶದಾದ್ಯಂತ ಇಂದು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲಿ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದಾರೆ. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.

    ಈಗಾಗಲೇ ವಿವಾದಕ್ಕೆ (Controversy) ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ (Communist)ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಇದನ್ನೂ ಓದಿ:ರಾಜಕೀಯಕ್ಕೆ ಅಖಾಡಕ್ಕೆ ರಮೇಶ್ ಅರವಿಂದ್? ಸ್ಪಷ್ಟನೆ ನೀಡಿದ ನಟ

    ಕಳೆದ ಮೂರು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.

    ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.

  • ನಾಳೆ ‘ದಿ ಕೇರಳ ಸ್ಟೋರಿ’ ರಿಲೀಸ್ : ತಮಿಳುನಾಡು ಗುಪ್ತಚರ ಇಲಾಖೆ ಹೇಳಿದ್ದೇನು?

    ನಾಳೆ ‘ದಿ ಕೇರಳ ಸ್ಟೋರಿ’ ರಿಲೀಸ್ : ತಮಿಳುನಾಡು ಗುಪ್ತಚರ ಇಲಾಖೆ ಹೇಳಿದ್ದೇನು?

    ನಾಳೆ ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ರಿಲೀಸ್ ಆಗುತ್ತಿದೆ. ಭಾರೀ ಪ್ರತಿಭಟನೆಯ ಮಧ್ಯಯೂ ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಸಿನಿಮಾ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಹೋರಾಟಕ್ಕಿಳಿದಿವೆ. ಈ ಎಲ್ಲ ಘಟನೆಗಳ ಬೆನ್ನಲ್ಲೇ ತಮಿಳುನಾಡು (Tamil Nadu) ಸರಕಾರಕ್ಕೆ ಗುಪ್ತಚರ ಇಲಾಖೆ (Intelligence) ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

    ನಾಳೆ ತಮಿಳುನಾಡಿನಾದ್ಯಂತ ಚಿತ್ರವು ತೆರೆ ಕಾಣುವುದರಿಂದ ಕೇರಳದ ಮಾದರಿಯಲ್ಲೇ ತಮಿಳುನಾಡಿನಲ್ಲೂ ಪ್ರತಿಭಟನೆ ನಡೆಯಬಹುದು. ಹಾಗಾಗಿ ಅಲರ್ಟ್ ಆಗಿ ಇರುವಂತೆ ಸೂಚಿಸಲಾಗಿದೆಯಂತೆ. ಭಾರೀ ಪ್ರತಿಭಟನೆ ಮಾಡುವ ಸೂಚನೆಗಳು ಕೂಡ ಸಿಕ್ಕಿವೆ ಎಂದು ವರದಿ ನೀಡಿದೆಯಂತೆ. ಇದನ್ನೂ ಓದಿ:ಪವಿತ್ರಾ ಲೋಕೇಶ್- ನರೇಶ್ ‘ಮತ್ತೆ ಮದುವೆ’ ಡೇಟ್ ಫಿಕ್ಸ್

    ಈಗಾಗಲೇ ವಿವಾದಕ್ಕೆ(, Controversy) ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.

    ಕಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.

    ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.

  • ‘ದಿ ಕೇರಳ ಸ್ಟೋರಿ’ ನಿಷೇಧಕ್ಕೆ ಹೆಚ್ಚಿದ ಒತ್ತಡ: ನಾಳೆ ಸಿನಿಮಾ ರಿಲೀಸ್

    ‘ದಿ ಕೇರಳ ಸ್ಟೋರಿ’ ನಿಷೇಧಕ್ಕೆ ಹೆಚ್ಚಿದ ಒತ್ತಡ: ನಾಳೆ ಸಿನಿಮಾ ರಿಲೀಸ್

    ಕೇರಳ ಚಿತ್ರೋದ್ಯಮದಲ್ಲಿ ಭಾರೀ ವಿವಾದಕ್ಕೆ (Controversy) ಕಾರಣವಾಗಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾವನ್ನು ನಿಷೇಧ ಮಾಡಲೇಬೇಕು ಎಂದು ಅನೇಕ ಸಂಘಟನೆಗಳು ಸರಕಾರದ ಮೇಲೆ ಒತ್ತಡ ಹೇರಿವೆ. ಕಾನೂನಾತ್ಮಕವಾಗಿ ತಡೆಹಿಡಿಯಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸರಕಾರ ಮಧ್ಯ ಪ್ರವೇಶಿಸಿ ಕೋಮುಗಲಭೆ ಸೃಷ್ಟಿಸುವ ಇಂತಹ ಚಿತ್ರವನ್ನು ತಡೆಯಬೇಕು ಎಂದು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮುತ್ತು ಮುಸ್ಲಿಂ (Muslim) ಸಂಘಟನೆಗಳು ಸರಕಾರಕ್ಕೆ ಒತ್ತಡ ಹಾಕಿವೆ.

    ಈ ನಡುವೆಯೇ ನಾಳೆ ದೇಶಾದ್ಯಂತ ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆಗುತ್ತಿದ್ದು, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಚಿತ್ರ ಬಿಡುಗಡೆಗೆ ಸರ್ವರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಲ್ಲದೇ ನಿನ್ನೆಯಷ್ಟೇ ಜೆ.ಎನ್.ಯುನಲ್ಲಿ ಚಿತ್ರದ ಪ್ರದರ್ಶನ ಕೂಡ ನಡೆದಿದೆ. ಇದರ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿದೆ. ಇದನ್ನೂ ಓದಿ:ಫ್ಯಾಷನ್ ಡಿಸೈನರ್ ಅಪರ್ಣಾ ಸಮಂತಾ ಜೊತೆ ಜೆಕೆ ಎಂಗೇಜ್

    ಈಗಾಗಲೇ ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.

    ಕಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.

    ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.

  • ‘ದಿ ಕೇರಳ ಸ್ಟೋರಿ’ ಸಿನಿಮಾ ಪರ ಬ್ಯಾಟ್ ಬೀಸಿದ ನಟಿ ತಾರಾ

    ‘ದಿ ಕೇರಳ ಸ್ಟೋರಿ’ ಸಿನಿಮಾ ಪರ ಬ್ಯಾಟ್ ಬೀಸಿದ ನಟಿ ತಾರಾ

    ದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರವನ್ನು ಬ್ಯಾನ್ ಮಾಡಬೇಕು ಎಂಬ ಕೂಗು ಜೋರಾಗುತ್ತಿದೆ. ಕಾನೂನು ಪರಿಧಿಯಲ್ಲಿ ಕಟ್ಟಿ ಹಾಕುವ ಪ್ರಯತ್ನ ವಿಫಲವಾಗಿದ್ದರಿಂದ ಕೆಲ ಕಡೆ ಪ್ರತಿಭಟನೆ ಕೂಡ ನಡೆದಿದೆ. ಈ ನಡುವೆಯೇ ಮೇ 05 ರಂದು ಸಿನಿಮಾ ದೇಶದಾದ್ಯಂತ ಬಿಡುಗಡೆ ಆಗುತ್ತಿದೆ. ಈ ಕುರಿತು ಕನ್ನಡದ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ತಾರಾ (Taara) ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿರುವ ತಾರಾ, ‘ಸಿನಿಮಾ ಸತ್ಯದ ದರ್ಶನ ಮಾಡಿಸುತ್ತದೆ ಅಂತಾದರೆ ಯಾಕೆ ಬ್ಯಾನ್ ಮಾಡಬೇಕು? ಸಿನಿಮಾದಲ್ಲಿ ಇರುವ ವಿಷಯವು ತಪ್ಪಾಗಿದ್ದರೆ ಅದನ್ನು ಸೆನ್ಸಾರ್ ಮಂಡಳಿಯು ನೋಡಿಕೊಳ್ಳುತ್ತದೆ. ಸತ್ಯ ಯಾವುದು, ಸುಳ್ಳು ಯಾವುದು ಎನ್ನುವುದನ್ನು ನೋಡುಗರು ತೀರ್ಮಾನಿಸುತ್ತಾರೆ’ ಎಂದಿದ್ದಾರೆ. ಇದನ್ನೂ ಓದಿ:ಪಾಲಕ್ ಜೊತೆ ಕಿಸ್ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ರಾಹಿಂ ಅಲಿ ಖಾನ್

    ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ (Censor) ಮಂಡಳಿಯು ಈಗಾಗಲೇ ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್  (Communist)ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ.

    ಕಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.

    ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ (Muslim) ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.

  • ದಿ ಕೇರಳ ಸ್ಟೋರಿ ಚಿತ್ರಕ್ಕೆ ಸೆನ್ಸಾರ್ ಶಾಕ್ : 10 ದೃಶ್ಯಗಳಿಗೆ ಕತ್ತರಿ

    ದಿ ಕೇರಳ ಸ್ಟೋರಿ ಚಿತ್ರಕ್ಕೆ ಸೆನ್ಸಾರ್ ಶಾಕ್ : 10 ದೃಶ್ಯಗಳಿಗೆ ಕತ್ತರಿ

    ಸಾಕಷ್ಟು ವಿವಾದಕ್ಕೆ (Controversy) ಕಾರಣವಾಗಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಇದೇ ಮೇ 5ರಂದು ದೇಶದಾದ್ಯಂತ ರಿಲೀಸ್ ಆಗುತ್ತಿದೆ. ಈ ಸಿನಿಮಾ ಕುರಿತಂತೆ ಹಲವು ಆರೋಪಗಳು ಕೇಳಿ ಬಂದಿದ್ದವು. ಒಂದು ಧರ್ಮಕ್ಕೆ ಅಪಮಾನ ಮಾಡುವಂತಹ ಹಾಗೂ ಆಕ್ಷೇಪಾರ್ಹ ಹಲವು ವಿಚಾರಗಳು ಈ ಸಿನಿಮಾದಲ್ಲಿ ಇರುವುದರಿಂದ ಚಿತ್ರವನ್ನು ನಿಷೇಧಿಸಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಚಿತ್ರಕ್ಕೆ ಸೆನ್ಸಾರ್ (ಸಿಬಿಎಫ್ ಸಿ) (Censor) ಮಂಡಳಿಯು ಶಾಕ್ ನೀಡಿದೆ.

    ವಿವಾದಕ್ಕೆ ಕಾರಣವಾಗುವಂತಹ ಮತ್ತು ಆಕ್ಷೇಪಕ್ಕೆ ಗುರಿಯಾಗಿರುವ ಹಲವು ದೃಶ್ಯಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಬರೋಬ್ಬರಿ 10 ದೃಶ್ಯಗಳಿಗೆ ಕತ್ತರಿ ಹಾಕುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಿದೆ. ಅಲ್ಲದೇ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ನೀಡಿದೆ. ಮಾಜಿ ಸಿಎಂ ಒಬ್ಬರ ಸಂದರ್ಶನ, ಕೆಲ ಸಂಭಾಷಣೆಗಳು ಹಾಗೂ ಕಮ್ಯುನಿಸ್ಟ್ (Communist) ಪಕ್ಷದವರ ಬಗ್ಗೆ ಆಡಿದ ಮಾತುಗಳಿಗೆ ಸೆನ್ಸಾರ್ ಮಂಡಳಿಯು ಕತ್ತರಿ ಹಾಕಿದೆ. ಇದನ್ನೂ ಓದಿ:Met Gala ಕಾರ್ಯಕ್ರಮದಲ್ಲಿ 204 ಕೋಟಿ ಮೌಲ್ಯದ ಡೈಮಂಡ್ ನೆಕ್ಲೇಸ್ ಧರಿಸಿ ಬಂದ ಪ್ರಿಯಾಂಕಾ

    ಕಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.

    ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ ಕೊಡುವುದಾಗಿ ಮುಸ್ಲಿಂ (Muslim) ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ.

  • ಕಮ್ಯುನಿಸ್ಟ್ ಕೋಟೆಯಲ್ಲಿ ಅರಳಿತು ಕಮಲ- ನಾಗಾಲ್ಯಾಂಡ್‍ನಲ್ಲಿ ಬಿಜೆಪಿ ಮೈತ್ರಿ ಕಮಾಲ್ – ಮೇಘಾಲಯದಲ್ಲಿ `ಹಸ್ತ’ವ್ಯಸ್ತ

    ಕಮ್ಯುನಿಸ್ಟ್ ಕೋಟೆಯಲ್ಲಿ ಅರಳಿತು ಕಮಲ- ನಾಗಾಲ್ಯಾಂಡ್‍ನಲ್ಲಿ ಬಿಜೆಪಿ ಮೈತ್ರಿ ಕಮಾಲ್ – ಮೇಘಾಲಯದಲ್ಲಿ `ಹಸ್ತ’ವ್ಯಸ್ತ

    ನವದೆಹಲಿ: ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ದಂಡಯಾತ್ರೆ ಹೊರಟಿರೋ ಪ್ರಧಾನಿ ನರೇಂದ್ರ ಮೋದಿ, ಈಗ ಎಡಪಕ್ಷಗಳ ಬೆನ್ನುಮೂಳೆ ಕೂಡ ಮುರಿದಿದ್ದಾರೆ. ತ್ರಿಪುರಾದಲ್ಲಿ 25 ವರ್ಷಗಳ ಕಮ್ಯುನಿಸ್ಟರ ಪಾರುಪತ್ಯ ಅಂತ್ಯಗೊಂಡಿದ್ದು, ಎಡಪಕ್ಷಗಳ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ.

    65 ವರ್ಷಗಳ ರಾಜಕೀಯ ಇತಿಹಾಸದಲ್ಲಿ, ಇದೇ ಮೊದಲ ಬಾರಿಗೆ ಸಿಪಿಎಂ ಜೊತೆಗಿನ ನೇರ ಹಣಾಹಣಿಯಲ್ಲಿ ಬಿಜೆಪಿ ಗೆದ್ದು ಬೀಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ 50 ಅಭ್ಯರ್ಥಿಗಳ ಪೈಕಿ, 49 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರೂ, ಬೇರು ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ದೇಶದ ಅತ್ಯಂತ ಬಡ ಸಿಎಂ ಎಂದೇ ಪ್ರಖ್ಯಾತರಾಗಿರೋ ಮಾಣಿಕ್ ಸರ್ಕಾರ್ ಆಡಳಿತ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮೋದಿ ಗೆದ್ದಿದ್ದಾರೆ. ಹೀಗಾಗಿ, ತ್ರಿಪುರದಲ್ಲಿ ಮಾಣಿಕ್ ಸರ್ಕಾರ್ ಹೋಗಿ ಮೋದಿ ಸರ್ಕಾರ್ ಬಂದಿದೆ.

    ಕೊನೆ ಕ್ಷಣದಲ್ಲಿ ಬಿಜೆಪಿ ತನ್ನ ರಣತಂತ್ರ ಬದಲಿಸಿದರೂ, ತತ್ವ-ಸಿದ್ಧಾಂತ ಹಾಗೂ ಮಡಿವಂತಿಕೆಯಿಂದಾಗಿ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟರು ಸೋತು ಸುಣ್ಣವಾಗಿದ್ದಾರೆ. 60 ಕ್ಷೇತ್ರಗಳ ಪೈಕಿ ಓರ್ವ ಅಭ್ಯರ್ಥಿ ಅಕಾಲಿಕ ನಿಧನವಾಗಿದ್ದ ಕಾರಣ 59 ಕ್ಷೇತ್ರಗಳಿಗೆ ಫೆಬ್ರವರಿ 18ಕ್ಕೆ ಎಲೆಕ್ಷನ್ ನಡೆದಿತ್ತು. ತ್ರಿಪುರ ಬಿಜೆಪಿ ಅಧ್ಯಕ್ಷ ಬಿಪ್ಲಬ್ ದೇಬ್ ಸಿಎಂ ಆಗೋ ಸಾಧ್ಯತೆ ಇದೆ. ಇದನ್ನೂ ಓದಿ: 2013ರಲ್ಲಿ ಠೇವಣಿ ಕಳೆದುಕೊಂಡಿದ್ದ ಬಿಜೆಪಿ ಈ ಬಾರಿ ತ್ರಿಪುರಾ ಗೆದ್ದಿದ್ದು ಹೇಗೆ?

    ನಾಗಾಲ್ಯಾಂಡ್ ನಲ್ಲೂ ಕಮಲ
    ನಾಗಾಲ್ಯಾಂಡ್‍ನ 60 ಸ್ಥಾನ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ನ್ಯಾಷನಲಿಸ್ಟ್ ಡೆಮಾಕ್ರೆಟಿಕ್ ಪ್ರೊಗ್ರೆಸಿವ್ ಪಾರ್ಟಿ(ಎನ್‍ಡಿಪಿಪಿ) 30 ಸ್ಥಾನ ಗಳಿಸಿದೆ. ಎನ್‍ಪಿಎಫ್ (ನಾಗಾಲ್ಯಾಂಡ್ ಪೀಪಲ್ ಫ್ರಂಟ್) 22 ಸ್ಥಾನಗಳನ್ನು ಗಳಿಸಿದ್ದರೆ, ಇತರರಿಗೆ 6 ಸ್ಥಾನಗಳು ಲಭಿಸಿವೆ. 59 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಎನ್‍ಡಿಪಿಪಿಯಿಂದ ಮಾಜಿ ಮುಖ್ಯಮಂತ್ರಿ ನೆಪಿಯು ರಿಯೊ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನು, ಬಿಜೆಪಿ ಮೈತ್ರಿ ಕಡಿದು ಕೊಂಡಿದ್ದರೂ ಸರ್ಕಾರದ ಜೊತೆ ಕೈ ಜೋಡಿಸುವುದಾಗಿ ಎನ್‍ಸಿಎಫ್ ಮುಂದಾಗಿದೆ. ನಾಗಾಲ್ಯಾಂಡ್‍ಗೆ ಫೆಬ್ರವರಿ 27ರಂದು ಎಲೆಕ್ಷನ್ ನಡೆದಿತ್ತು.

    ಕಾಂಗ್ರೆಸ್ಸಿಗೆ ಆಘಾತ:
    ಮೇಘಾಲಯದಲ್ಲಿ ಕಾಂಗ್ರೆಸ್‍ಗೆ ಆಘಾತವಾಗಿದೆ. ಆಡಳಿತರೂಢ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸಹ ಸರ್ಕಾರ ರಚನೆ ಕಷ್ಟ ಕಷ್ಟ. ಸಿಎಂ ಮುಕುಲ್ ಸಂಗ್ಮಾ ಅವರು ಅಂಪತಿ ಮತ್ತು ಸೊಂಗ್‍ಸಾಕ್ ಎರಡೂ ಕ್ಷೇತ್ರಗಳಲ್ಲಿ ಜಯಿಸಿದ್ದು, ಪತ್ನಿ ಡಿಕ್ಕಂಚಿ ಡಿ ಶಿರಾ ಅವರು ಮಹೇಂದ್ರಗಂಜ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿರೋದೇ ಸಮಾಧಾನ. ಇನ್ನು, ಸರ್ಕಾರ ರಚನೆಗೆ ಎನ್‍ಪಿಪಿ ಹಾಗೂ ಇತರೆ 17 ಕ್ಷೇತ್ರ ಗೆದ್ದಿರುವ ಪಕ್ಷೇತರರಿಗೆ ಬಿಜೆಪಿಯವರು ಬೆಂಬಲ ನೀಡೋದು ಖಚಿತ. ಫೆಬ್ರವರಿ 27ಕ್ಕೆ ಎಲೆಕ್ಷನ್ ನಡೆದಿತ್ತು.

    ಬಿಜೆಪಿ ಆಡಳಿತ ಇರೋ 19 ರಾಜ್ಯಗಳು
    ಜಮ್ಮುಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಹರ್ಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‍ಗಡ, ಆಂಧ್ರ ಪ್ರದೇಶ, ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್, ಮೇಘಾಲಯ.

    ಕಾಂಗ್ರೆಸ್ ಆಡಳಿತ ಇರೋ 4 ರಾಜ್ಯಗಳು:
    ಕರ್ನಾಟಕ, ಪಂಜಾಬ್, ಮಿಝೋರಾಂ, ಪಾಂಡಿಚೆರಿ

    ಇತರೆ ಪಕ್ಷಗಳ ಆಡಳಿತ: ದೆಹಲಿ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ತಮಿಳುನಾಡು, ಕೇರಳ