Tag: ಕಮ್ರಾನ್ ಅಕ್ಮಲ್

  • ಅಯ್ಯರ್‌, ಕಿಶನ್‌ ಕಾಂಟ್ರವರ್ಸಿ; ಸೋಶಿಯಲ್‌ ಮೀಡಿಯಾದಲ್ಲೂ ಟ್ರೆಂಡ್‌ – ಬಿಸಿಸಿಐ ಪರ ಪಾಕ್‌ ಮಾಜಿ ಕ್ರಿಕೆಟಿಗ ಬ್ಯಾಟಿಂಗ್‌

    ಅಯ್ಯರ್‌, ಕಿಶನ್‌ ಕಾಂಟ್ರವರ್ಸಿ; ಸೋಶಿಯಲ್‌ ಮೀಡಿಯಾದಲ್ಲೂ ಟ್ರೆಂಡ್‌ – ಬಿಸಿಸಿಐ ಪರ ಪಾಕ್‌ ಮಾಜಿ ಕ್ರಿಕೆಟಿಗ ಬ್ಯಾಟಿಂಗ್‌

    – ಆಟಗಾರರನ್ನ ಶಿಕ್ಷಿಸಲು ಇಂತಹ ಕ್ರಮದ ಅಗತ್ಯವಿದೆ – ಕಮ್ರಾನ್‌ ಅಕ್ಮಲ್‌

    ಇಸ್ಲಾಮಾಬಾದ್‌: ಸದ್ಯ ಕ್ರಿಕೆಟ್‌ ಲೋಕದಲ್ಲಿ ಶ್ರೇಯಸ್‌ ಅಯ್ಯರ್‌ ಹಾಗೂ ಇಶಾನ್‌ ಕಿಶನ್‌ (hreyas Iyer And Ishan Kishan) ಸುದ್ದಿಯಲ್ಲಿದ್ದಾರೆ. ಬಿಸಿಸಿಐ ಇತ್ತೀಚೆಗೆ ಪ್ರಕಟಿಸಿದ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಇಶಾನ್‌ ಕಿಶನ್‌ ಹಾಗೂ ಶ್ರೇಯಸ್‌ ಅಯ್ಯರ್‌ ಅವರಿಗೆ ಗೇಟ್‌ಪಾಸ್ ‌ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಗುತ್ತಿಗೆ ಪಟ್ಟಿ ಪ್ರಕಟಿಸಿದ ನಂತರ ಬಿಸಿಸಿಐ ತೆಗೆದುಕೊಂಡ ನಿರ್ಧಾರದ ಬಗ್ಗೆ ಪರ ವಿರೋಧ ಚರ್ಚೆಗಳು ವ್ಯಕ್ತವಾಗುತ್ತಿವೆ.

    ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ (Kamran Akmal) ಬಿಸಿಸಿಐ ಬೆಂಬಲಿಸಿ ಮಾತನಾಡಿದ್ದಾರೆ. ಪಾಕಿಸ್ತಾನದ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಕ್ರಿಕೆಟ್‌ ಮಂಡಳಿ ಆದೇಶಗಳನ್ನು ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಆಟಗಾರರನ್ನು ಶಿಕ್ಷಿಸಲು ಇಂತಹ ಕ್ರಮದ ಅಗತ್ಯವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: WTC – ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಭಾರತ – ಹಿಟ್‌ಮ್ಯಾನ್‌ ನಾಯಕತ್ವಕ್ಕೆ ಮೆಚ್ಚುಗೆ

    ಇಶಾನ್‌ ಕಿಶನ್‌ ಮತ್ತು ಅಯ್ಯರ್‌ ಅವರನ್ನು ಕೇಂದ್ರ ಒಪ್ಪಂದದಿಂದ ಬಿಸಿಸಿಐ (BCCI) ಕೈಬಿಟ್ಟ ನಿರ್ಧಾರ ಸರಿಯಾಗಿದೆ. ಯಾವೊಬ್ಬ ಆಟಗಾರನೂ ರಾಷ್ಟ್ರೀಯ ತಂಡಕ್ಕೆ ಪ್ರವೇಶಿಸಲು ಕಾರಣವಾದ ಆಟಕ್ಕೆ ಬೆಲೆ ಕೊಡದೇ ಇದ್ದರೆ, ಅದು ಇತರರಿಗೆ ಏನು ಸಂದೇಶ ನೀಡುತ್ತದೆ ಹೇಳಿ? ಮುಂದೆ ಆಗುವ ದೊಡ್ಡ ಹಾನಿಯನ್ನು ತಡೆಯಲು ಬಿಸಿಸಿಐ ಈಗಲೇ ಕ್ರಮ ತೆಗೆದುಕೊಂಡಿದ್ದು ಉತ್ತಮ. ಇಲ್ಲದಿದ್ದರೆ ಭವಿಷ್ಯದ ಆಟಗಾರರೂ ಈ ರೀತಿ ಮಾಡೋದಕ್ಕೆ ಹಿಂದೆ-ಮುಂದೆ ಯೋಚಿಸಲ್ಲ. ದೇಶಕ್ಕಾಗಿ ಆಡುವ ಆಟಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ.

    ರಣಜಿಯಲ್ಲೂ ಅಯ್ಯರ್‌ ಫ್ಲಾಪ್‌ ‌ಪ್ರದರ್ಶನ:
    ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ತಂಡದಿಂದ ಹೊರಗುಳಿದ ಶ್ರೇಯಸ್‌ ಅಯ್ಯರ್‌ ಸದ್ಯ ತಮಿಳುನಾಡು ವಿರುದ್ಧ ನಡೆಯುತ್ತಿರುವ ರಣಜಿ ಕ್ವಾರ್ಟರ್‌ಫೈನಲ್‌ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಅಯ್ಯರ್‌ ಫ್ಲಾಪ್‌ ಪ್ರದರ್ಶನ ನೀಡಿದ್ದಾರೆ. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಯ್ಯರ್‌ ಕೇವಲ 8 ಎಸೆತಗಳಲ್ಲಿ 3 ರನ್‌ ಗಳಿಸಿ ಔಟಾಗಿದ್ದಾರೆ. ಇದನ್ನೂ ಓದಿ: PublicTV Explainer: ಬಿಸಿಸಿಐ ಕೇಂದ್ರ ಗುತ್ತಿಗೆ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಸಿಸಿಐ ಪರ ಕಪಿಲ್‌ ದೇವ್‌ ಬ್ಯಾಟಿಂಗ್:
    ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಕೂಡ ಕೇಂದ್ರಗುತ್ತಿಗೆ ವಿಚಾರದಲ್ಲಿ ಬಿಸಿಸಿಐ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೆಲೆಯೂರಿದ ನಂತರ ಆಟಗಾರರು ದೇಶಿ ಕ್ರಿಕೆಟ್‌ನಿಂದ ಹೊರಬರುತ್ತಿರುವುದು ನನಗೆ ಬೇಸರ ತಂದಿದೆ. ಕೆಲವು ಆಟಗಾರರು ನರಳಿದರೆ ನರಳಲಿ, ಆದರೆ ದೇಶಕ್ಕಿಂತ ಯಾವುದೂ ಮುಖ್ಯವಾಗಬಾರದು. ದೇಶಿ ಕ್ರಿಕೆಟ್‌ನ ಪ್ರಾಮುಖ್ಯತೆಯನ್ನು ಕಾಪಾಡಿಕೊಳ್ಳಲು ಬಿಸಿಸಿಐನ ಈ ಹೆಜ್ಜೆ ಅಗತ್ಯ ಎಂದು ಬಣ್ಣಿಸಿದ್ದಾರೆ.

    ಬಿಸಿಸಿಐ ಕಾಂಟ್ರ್ಯಾಕ್ಟ್ ಕಳೆದುಕೊಂಡ ಅಯ್ಯರ್-ಕಿಶನ್‌:
    ರಾಷ್ಟ್ರೀಯ ತಂಡದಲ್ಲಿ ಇಲ್ಲದಿದ್ದರೂ ಇಶಾನ್ ಕಿಶನ್ ರಣಜಿ ಟ್ರೋಫಿಯಿಂದ ಹೊರಗುಳಿದಿದ್ದಾರೆ ಮತ್ತು ಅವರ ತವರು ತಂಡ ಜಾರ್ಖಂಡ್‌ ಪರ ಆಡಲು ಮನಸು ಮಾಡಲಿಲ್ಲ. ರಣಜಿ ಟ್ರೋಫಿಯಲ್ಲಿ ಆಡುವ ಬದಲು ಇಶಾನ್, ಮಾರ್ಚ್ 22 ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ತಯಾರಿ ಆರಂಭಿಸಿದ್ದರು. ಇಶಾನ್ ಕಿಶನ್ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ಇಶಾನ್ ಕಿಶನ್ ಅವರ ಈ ಧೋರಣೆಯಿಂದಾಗಿ ಕೇಂದ್ರ ಒಪ್ಪಂದದಿಂದ ಅವರನ್ನು ಹೊರ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು: ಕಮ್ರಾನ್ ಅಕ್ಮಲ್

    ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು: ಕಮ್ರಾನ್ ಅಕ್ಮಲ್

    ಮುಂಬೈ: ಜಮ್ಮು ಮತ್ತು ಕಾಶ್ಮೀರ್‌ದ ಕ್ರಿಕೆಟಿಗ ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವಿಕೆಟ್-ಕೀಪರ್ ಬ್ಯಾಟ್ಸ್‍ಮ್ಯಾನ್ ಕಮ್ರಾನ್ ಅಕ್ಮಲ್ ಅಭಿಪ್ರಾಯಪಟ್ಟಿದ್ದಾರೆ.

    ಉಮ್ರಾನ್ ಮಲಿಕ್ ತಮ್ಮ ವೇಗದ ಬೌಲಿಂಗ್‍ನಿಂದಲೇ ಈ ವರ್ಷದ ಐಪಿಎಲ್‍ನಲ್ಲಿ ಎಲ್ಲರ ಗಮನಸೆಳೆದಿದ್ದಾರೆ. ಪ್ರಸ್ತುತ ಸನ್‍ರೈಸರ್ಸ್ ಹೈದರಾಬಾದ್ ತಂಡದ ಪರ ಆಟವಾಡುತ್ತಿರುವ ಈ ಯುವ ಆಟಗಾರನ ಪ್ರತಿಭೆಗೆ ಕ್ರಿಕೆಟ್ ಲೋಕದ ಅನೇಕ ದಂತಕಥೆಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಈ ಕುರಿತು ಯೂಟ್ಯೂಬ್ ಚಾನೆಲ್‍ವೊಂದರ ಸಂದರ್ಶನದಲ್ಲಿ ಮಾತನಾಡಿದ ಅಕ್ಮಲ್, ಉಮ್ರಾನ್, ಪಾಕಿಸ್ತಾನದಲ್ಲಿದ್ದರೆ ಬಹುಶಃ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದರು. ಅವರ ಆರ್ಥಿಕತೆಯು ಉನ್ನತ ಮಟ್ಟದಲ್ಲಿದೆ. ಇದೀಗ ಐಪಿಎಲ್‍ನಲ್ಲಿ ವಿಕೆಟ್‍ಗಳನ್ನು ಪಡೆಯುತ್ತಿರುವುದರಿಂದ ಎಸ್‍ಆರ್‌ಹೆಚ್ ತಂಡದ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದ್ದಾರೆ ಎಂದರು. ಇದನ್ನೂ ಓದಿ: ಮಹಿಳಾ T20 ಚಾಲೆಂಜ್‍ಗೆ ದೀಪ್ತಿ, ಹರ್ಮನ್‍ಪ್ರೀತ್, ಮಂದಾನ ನಾಯಕಿಯರು – 3 ತಂಡ ಪ್ರಕಟಿಸಿದ ಬಿಸಿಸಿಐ

    ಪ್ರತಿ ಪಂದ್ಯದ ಬಳಿಕ, ಉಮ್ರಾನ್‍ರ ಬೌಲಿಂಗ್ ಸ್ಪೀಡ್ ಚಾರ್ಟ್‍ನಲ್ಲಿ ಪ್ರತಿಗಂಟೆಗೆ 155 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿರುವುದು ಕಾಣುತ್ತದೆ. ಇದು ಕಡಿಮೆಯಾಗುವುದೇ ಇಲ್ಲ. ಭಾರತ ಕ್ರಿಕೆಟ್‍ನಲ್ಲಿರುವ ಅತ್ಯುತ್ತಮವಾದ ಪೈಪೋಟಿ ಇದು. ಈ ಮೊದಲು ಭಾರತ ಕ್ರಿಕೆಟ್ ಗುಣಮಟ್ಟದ ವೇಗಿಗಳ ಕೊರತೆ ಎದುರಿಸುತ್ತಿತ್ತು. ಆದರೆ, ಈಗ ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಜಸ್‍ಪ್ರೀತ್ ಬೂಮ್ರಾ ಅವರಂತಹ ಸಾಕಷ್ಟು ವೇಗಿಗಳನ್ನು ಹೊಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ಸದ್ಯ ಈ ಬಾರಿಯ ಐಪಿಎಲ್‍ನಲ್ಲಿ 157 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿರುವ ಉಮ್ರಾನ್, ಅತ್ಯಂತ ವೇಗದ ಎಸೆತದ ಬೌಲರ್ ಎನಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ಅವರು 12 ಪಂದ್ಯಗಳಿಂದ 18 ವಿಕೆಟ್ ಉರುಳಿಸಿದ್ದಾರೆ.

  • ಗಂಭೀರ್ ನಾನು ಉತ್ತಮ ಸ್ನೇಹಿತರು, ಒಟ್ಟಿಗೆ ಊಟ ಮಾಡುತ್ತಿದ್ದೆವು- ಪಾಕ್ ಕ್ರಿಕೆಟಿಗ

    ಗಂಭೀರ್ ನಾನು ಉತ್ತಮ ಸ್ನೇಹಿತರು, ಒಟ್ಟಿಗೆ ಊಟ ಮಾಡುತ್ತಿದ್ದೆವು- ಪಾಕ್ ಕ್ರಿಕೆಟಿಗ

    ಇಸ್ಲಾಮಾಬಾದ್: ಭಾರತ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹಾಗೂ ನಾನು ಉತ್ತಮ ಸ್ನೇಹಿತರು. ಇಬ್ಬರು ಒಟ್ಟಿಗೆ ಕುಳಿತು ಊಟ ಮಾಡುತ್ತಿದ್ದೆವು ಎಂದು ಪಾಕಿಸ್ತಾನ ಅನುಭವಿ ವಿಕೆಟ್ ಕೀಪರ್ ಕಮ್ರಾನ್ ಅಕ್ಮಲ್ ಹೇಳಿದ್ದಾರೆ.

    ಶ್ರೀಲಂಕಾದಲ್ಲಿ 2010ರಲ್ಲಿ ನಡೆದಿದ್ದ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಪರಸ್ಪರ ಮುಖಾಮಖಿಯಾಗಿ ಅಕ್ಮಲ್, ಗಂಭೀರ್ ಜಗಳವಾಡಿದ್ದ ಘಟನೆ ಸಾಕಷ್ಟು ಮಂದಿಗೆ ನೆನಪಿರುತ್ತದೆ. ಅಂದು ಗಂಭೀರ್ ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ವಿಕೆಟ್ ಕೀಪರ್ ಆಗಿದ್ದ ಅಕ್ಮಲ್ ಅನಗತ್ಯವಾಗಿ ಅಂಪೈರ್ ಗೆ ಮನವಿ ಮಾಡುತ್ತಿದ್ದರು. ಪರಿಣಾಮ ತಾಳ್ಮೆ ಕಳೆದುಕೊಂಡ ಗಂಭೀರ್ ಅಕ್ಮಲ್‍ಗೆ ಎಚ್ಚರಿಕೆ ನೀಡಿದ್ದರು. ಇದೇ ವೇಳೆ ಅಕ್ಮಲ್ ಕೂಡ ಕೋಪಗೊಂಡ ಹಿನ್ನೆಲೆಯಲ್ಲಿ ಆನ್‍ಫೀಲ್ಡ್ ನಲ್ಲೇ ಜಗಳ ವಾಡಿದ್ದರು. ಇದೇ ಪಂದ್ಯದಲ್ಲಿ ಡ್ರಿಂಕ್ಸ್ ವೇಳೆ ಮತ್ತೊಮ್ಮೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇತ್ತ ಮತ್ತೊಂದು ಬದಿಯಲ್ಲಿದ್ದ ನಾಯಕ ಧೋನಿ, ಗಂಭೀರ್ ಅವರಿಗೆ ಸಮಾಧಾನ ಹೇಳಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದರು. ಈ ಘಟನೆ ಕ್ರಿಕೆಟ್ ಇತಿಹಾಸದಲ್ಲಿ ಗಮನರ್ಹವಾಗಿ ಎಲ್ಲರ ನೆನಪಿನಲ್ಲಿದೆ.

    ಬಳಿಕ 2012-13ರ ಭಾರತ, ಪಾಕ್ ನಡುವೆ ಬೆಂಗಳೂರಿನಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ ಇಶಾಂತ್ ಶರ್ಮಾ, ಕಮ್ರಾನ್ ಅಕ್ಮಲ್ ವಾಗ್ವಾದ ನಡೆಸಿದ್ದರು. ಈ ಎರಡು ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮ್ರಾನ್ ಅಕ್ಮಲ್, ಈ ಘಟನೆಗಳನ್ನು ಕ್ರೀಡಾಂಗಣದಲ್ಲೇ ಮರೆತು ಹೋಗಿದ್ದೇನೆ. ನನ್ನ ಹಾಗೂ ಗಂಭೀರ್, ಇಶಾಂತ್ ನಡುವೆ ಉತ್ತಮ ಸ್ನೇಹವಿದೆ. ಪಂದ್ಯದ ಸಂದರ್ಭದಲ್ಲಿ ಉಂಟಾದ ಗೊಂದಲಗಳ ಕಾರಣದಿಂದ ಜಗಳ ನಡೆದಿತ್ತು. ಗಂಭೀರ್ ನನಗೆ ಕ್ರೀಡಾಂಗಣದಲ್ಲಿ ಏನು ಹೇಳಿದರು ಎಂಬುವುದು ಅರ್ಥವಾಗದ ಕಾರಣ ಜಗಳ ನಡೆದಿತ್ತು. ಗಂಭೀರ್ ನಾನು ಉತ್ತಮ ಸ್ನೇಹಿತರಾದ ಕಾರಣ ಕ್ರಿಕೆಟ್ ಟೂರ್ನಿಗಳ ವೇಳೆ ಭೇಟಿ ಮಾಡಿ ಒಟ್ಟಿಗೆ ಊಟ ಮಾಡುತ್ತಿದ್ದೆವು. ಇಶಾಂತ್ ಜೊತೆಗಿನ ಘಟನೆಯೂ ಕೂಡ ಇಂತಹದ್ದೆ. ಇಂದಿಗೂ ನಾವು ಪರಸ್ಪರ ಗೌರವದಿಂದ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

    ಕಮ್ರಾನ್ ಅಕ್ಮಲ್ ಪಾಕಿಸ್ತಾನದ ಪರ 53 ಟೆಸ್ಟ್, 157 ಏಕದಿನ ಹಾಗೂ 58 ಟಿ20 ಪಂದ್ಯಗಳನ್ನು ಆಡಿದ್ದು, ಇತ್ತೀಚೆಗೆ ಕಮ್ರಾನ್ ಅಕ್ಮಲ್ ಸಹೋದರ ಉಮರ್ ಅಕ್ಮಲ್ ವಿರುದ್ಧ ಪಿಸಿಬಿ ಮೂರು ವರ್ಷ ನಿಷೇಧ ವಿಧಿಸಿತ್ತು. ಫಿಕ್ಸಿಂಗ್ ನಡೆಸಲು ಬುಕ್ಕಿಗಳು ಸಂಪರ್ಕ ನಡೆಸಿದ ವಿಚಾರವನ್ನು ಕ್ರಿಕೆಟ್ ಬೋರ್ಡಿಗೆ ತಿಳಿಸದ ಕಾರಣ ಪಿಸಿಬಿ ನಿಷೇಧ ವಿಧಿಸಿತ್ತು.