Tag: ಕರಗ ಉತ್ಸವ

  • ಭಕ್ತಿ-ಸಂಪ್ರದಾಯಗಳ ಸಂಗಮ ಮಡಿಕೇರಿ ದಸರಾ ರೂಢಿಗೆ ಬಂದಿದ್ದು ಹೇಗೆ?

    ಭಕ್ತಿ-ಸಂಪ್ರದಾಯಗಳ ಸಂಗಮ ಮಡಿಕೇರಿ ದಸರಾ ರೂಢಿಗೆ ಬಂದಿದ್ದು ಹೇಗೆ?

    ಮೈಸೂರಿನಲ್ಲಿ ಅದ್ಧೂರಿಯಾಗಿ ದಸರಾ ಆಚರಣೆ ನಡೆಯುವಂತೆ ಕೊಡಗಿನ ಮಡಿಕೇರಿ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿ. ಮೈಸೂರು ದಸರಾ ಬೆಳಗ್ಗೆ ಆರಂಭವಾಗಿ ಸಂಜೆ ಸೂರ್ಯಾಸ್ತದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇತರ ಹಿನ್ನೆಲೆ ಕೂಡ ಅಷ್ಟೇ ವಿಸ್ಮಯ ಮತ್ತು ಕೌತುಕವಾಗಿದೆ. ಈ ಬಗ್ಗೆ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ರೂಢಿಗೆ ಬಂದಿದ್ದು ಹೇಗೆ?
    ನೂರಾರು ವರ್ಷಗಳ ಹಿಂದೆ ಶಿವಮೊಗ್ಗದ ಇಕ್ಕೇರಿಯಿಂದ ಕೊಡಗಿನ ಹಾಲೇರಿಗೆ ಬಂದು ನೆಲೆಸಿದ ಹಾಲೇರಿ ವಂಶಸ್ಥರು ವಿಜಯದಶಮಿ ಆಚರಣೆ ಮಾಡುತ್ತಿದ್ದರು. ಕೊಡಗನ್ನು ಆಳಿದ ದೊಡ್ಡವೀರರಾಜೇಂದ್ರ ಮಹಾರಾಜರು ಸಹಾ ಆಯುಧಪೂಜೆ, ಶ್ರೀದೇವಿಯ ಆರಾಧನೆ ಸೇರಿದಂತೆ ನವರಾತ್ರಿ ಉತ್ಸವ ಆಚರಿಸುತ್ತಿದ್ದರು ಎಂಬುದಕ್ಕೆ ಅನೇಕ ಉಲ್ಲೇಖಗಳಿವೆ.

    Madikeri 2 1

    ಇನ್ನು ಜನಪದ ಉಲ್ಲೇಖದ ಪ್ರಕಾರ, ಸುಮಾರು‌ 300 ವರ್ಷಗಳ ಹಿಂದೆ ಮಡಿಕೇರಿಯ ಸುತ್ತಮುತ್ತ ಭಾರೀ ಸಾಂಕ್ರಾಮಿಕ ರೋಗ ತಲೆದೋರಿ ನೂರಾರು ಮಂದಿ ಸಾವನ್ನಪ್ಪಿದ್ದರಂತೆ, ಆಗ ಊರಿನ ಜನರೆಲ್ಲಾ ಸೇರಿ ತಮ್ಮ ಊರಿನ ಶಕ್ತಿದೇವತೆಗಳ ಮೊರೆ ಹೋದರಂತೆ. ಊರ ಜನರ ಮೊರೆ ಆಲಿಸಿದ ಶಕ್ತಿದೇವತೆಗಳು ರೋಗ ದೂರ ಮಾಡಿದವಂತೆ. ಅಂದಿನಿಂದ ಪ್ರತಿವರ್ಷವೂ ನವರಾತ್ರಿಯ 9 ದಿನಗಳ ಕಾಲ ಈ ಶಕ್ತಿದೇವತೆಗಳ ಕರಗ ಉತ್ಸವ ಆಚರಿಸಲಾಗುತ್ತದೆ. ಆ 9 ದಿನಗಳ ಕಾಲ ನಗರ ಪ್ರದಕ್ಷಿಣೆ ಮಾಡಿ ಭಕ್ತರಿಗೆ ದೇವತೆಗಳು ಆಶೀರ್ವಾದ ಮಾಡುತ್ತವೆ ಅನ್ನೋದು ನಂಬಿಕೆ. ಅದಕ್ಕಾಗಿ ಇಲ್ಲಿ ಪ್ರತಿವರ್ಷವೂ ವಿಜಯದಶಮಿಯ ಮುನ್ನಾ ದಿನ ಶಕ್ತಿದೇವತೆಗಳ ಆರಾಧನೆ ಮಾಡಲಾಗುತ್ತದೆ.

    Madikeri 1

    ಪೌರಾಣಿಕ ಹಿನ್ನೆಲೆಯೂ ಉಂಟು
    ಪೌರಾಣಿಕ ಹಿನ್ನೆಲೆಯ ಪ್ರಕಾರ, ಈ ಹಿಂದೆ ಪಾರ್ವತೀ ದೇವಿ ದುಷ್ಟ ಸಂಹಾರ ಮಾಡಲು ಹೊರಡುವ ಮುನ್ನ ಮಹಾವಿಷ್ಣುವನ್ನ ಭೇಟಿ ಮಾಡಿದಳಂತೆ. ಆಗ ಮಹಾವಿಷ್ಣು ತನ್ನ ಆಯುಧಗಳಾದ ಶಂಖ, ಚಕ್ರ, ಗಧೆ ಮತ್ತು ಪದ್ಮಗಳನ್ನು ಪಾರ್ವತಿದೇವಿಗೆ ಕೊಟ್ಟು ಕಳುಹಿಸಿದನಂತೆ. ಆಗ ಪಾರ್ವತೀ ದೇವಿ ವಿವಿಧ ದೇವತೆಗಳ ರೂಪ ತಾಳಿ, ಅದೇ ಆಯುಧಗಳಿಂದ ಆ ರಾಕ್ಷಸರನ್ನು ಸಂಹರಿಸಿದಳಂತೆ. ಹಾಗಾಗಿ ಅಂದಿನಿಂದ ಪ್ರತೀವರ್ಷವೂ ಆ ಊರಿನ ನಾಲ್ಕು ಶಕ್ತಿ ದೇವತೆಗಳಾದ ಕಂಚಿ ಕಾಮಾಕ್ಷಿ, ಕುಂದುರುಮೊಟ್ಟೆ ಚೌಟಿಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮನ ಕರಗದ ಉತ್ಸವಗಳನ್ನು ಅಚರಿಸುವ ಪದ್ದತಿ ಆರಂಭವಾಯಿತು ಎನ್ನುವುದು ಸ್ಥಳೀಯರ ನಂಬಿಕೆಯಾಗಿದೆ.

  • ಜನರ ಕಣ್ಮನ ಸೆಳೆದ ಚಿಕ್ಕಬಳ್ಳಾಪುರದ ಧರ್ಮರಾಯಸ್ವಾಮಿ ಕರಗ ಉತ್ಸವ

    ಜನರ ಕಣ್ಮನ ಸೆಳೆದ ಚಿಕ್ಕಬಳ್ಳಾಪುರದ ಧರ್ಮರಾಯಸ್ವಾಮಿ ಕರಗ ಉತ್ಸವ

    ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ಚಿಕ್ಕಬಳ್ಳಾಪುರ ನಗರದ ಜಾಲಾರಿ ಗಂಗಮಾಂಭ ದೇವಿಯ ಶ್ರೀ ಧರ್ಮರಾಯ ಸ್ವಾಮಿ ಹೂವಿನ ಕರಗ ಮಹೋತ್ಸವ ಸಂಭ್ರಮ-ಸಡಗರ ಹಾಗೂ ಅದ್ಧೂರಿಯಿಂದ ನಡೆಯಿತು.

    ಕರಗದ ಪೂಜಾರಿ ಮೇಲೂರು ನಿವಾಸಿ ಧಮೇಂದ್ರ ಹೂವಿನ ಕರಗ ಹೊರುತ್ತಿದ್ದಂತೆ, ಹೂವಿನ ಕರಗಕ್ಕೆ ಮತ್ತಷ್ಟು ಕಳೆ ಬಂದು, ಸಾಕ್ಷಾತ್‌ ದೇವರೆ ಬಂದವರಂತೆ ಭಕ್ತರು ಕರಗಕ್ಕೆ ಕೈಮುಗಿದು ನಮಸ್ಕರಿಸುತ್ತಿದ್ದರು. ಇದನ್ನೂ ಓದಿ: PUBLiC TV ವಿದ್ಯಾಪೀಠ | ವಿದ್ಯಾರ್ಥಿಗಳಿಗೆ ಸ್ಪಾಟ್‌ನಲ್ಲೇ ಸಿಗಲಿದೆ ಸರ್ಪ್ರೈಸ್‌ ಗಿಫ್ಟ್‌ – ತಪ್ಪದೇ ಬನ್ನಿ…

    ರಾತ್ರಿಯಿಡೀ ನಡೆದ ಕರಗ ಮಹೋತ್ಸವ, ನಗರದ ಗಂಗಮ್ಮ ಗುಡಿ ರಸ್ತೆ, ಎಂ.ಜಿ.ರಸ್ತೆ, ಬಿಬಿ ರಸ್ತೆ, ಬಜಾರ್ ರಸ್ತೆಯ ಮೂಲಕ ಕರಗ ಮೆರವಣಿಗೆ ನಡೆಸಲಾಯಿತು. ಕರಗ ಮಹೋತ್ಸವದಲ್ಲಿ ಸಾವಿರಾರು ಜನ ಭಕ್ತರು ಪಾಲ್ಗೊಂಡು ಮೊಬೈಲ್‌ನಲ್ಲಿ ಸೆಲ್ಫಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂತು. ಇನ್ನೂ ಸಂಸದ ಡಾ ಕೆ.ಸುಧಾಕರ್ ಸಹ ಕರಗ ಕಣ್ತುಂಬಿಕೊಂಡರು. ಇದನ್ನೂ ಓದಿ: PUBLiC TV Impact | ಜನಿವಾರ ಹಾಕಿದ್ದಕ್ಕೆ ಸಿಇಟಿಗೆ ನೋ ಎಂಟ್ರಿ – ಫ್ರೀ ಎಂಜಿನಿಯರಿಂಗ್ ಸೀಟ್ ಆಫರ್ ಕೊಟ್ಟ ಈಶ್ವರ್ ಖಂಡ್ರೆ

  • Photo Gallery | ಸಾಂಸ್ಕೃತಿಕ, ಪರಂಪರೆ ಹೆಗ್ಗುರುತು ಸಾರಿದ ಕರಗ ಶಕ್ತ್ಯೋತ್ಸವ

    Photo Gallery | ಸಾಂಸ್ಕೃತಿಕ, ಪರಂಪರೆ ಹೆಗ್ಗುರುತು ಸಾರಿದ ಕರಗ ಶಕ್ತ್ಯೋತ್ಸವ

    ಸಾಂಸ್ಕೃತಿಕ ಹಾಗೂ ಪರಂಪರೆಯ ಹೆಗ್ಗುರುತು ಸಾರುವ ಬೆಂಗಳೂರು ಕರಗ (Bengaluru Karaga) ಶಕ್ತೋತ್ಸವ ಶನಿವಾರ ಮಧ್ಯರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಕರಗದ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವವು ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ನಡೆಯಿತು. ಮಲ್ಲಿಗೆ ಕಂಪು ಸೂಸುತ್ತ ಹೊರಟ ಕರಗಕ್ಕೆ ಗೋವಿಂದ.. ಗೋವಿಂದ… ನಾಮಸ್ಮರಣೆಯೊಂದಿಗೆ ಮಧ್ಯರಾತ್ರಿ ಸುಮಾರು 12.30 ರಿಂದ 1ರ ಸುಮಾರಿಗೆ ಹೊರಟ ಕರಗ ಮೆರವಣಿಗೆಯ (Karaga Procession) ದರ್ಶನ ಪಡೆದು ಲಕ್ಷಾಂತರ ಭಕ್ತರು ಪುನೀತರಾದರು. ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗ ಹೊತ್ತು ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ವೀರಕುಮಾರರು ಸಾಗಿದರು. ಇಂತಹ ಅದ್ಭುತ ಕ್ಷಣಗಳ ಒಂದಿಷ್ಟು ಫೋಟೋಗಳು ಇಲ್ಲಿವೆ.

  • ಕರಗ ಶಕ್ತೋತ್ಸವಕ್ಕೆ ರಾತ್ರಿ 12:30ಕ್ಕೆ ಚಾಲನೆ, ಸಿಎಂ-ಡಿಸಿಎಂ ಬರ್ತಾರೆ: ರಾಮಲಿಂಗಾರೆಡ್ಡಿ

    ಕರಗ ಶಕ್ತೋತ್ಸವಕ್ಕೆ ರಾತ್ರಿ 12:30ಕ್ಕೆ ಚಾಲನೆ, ಸಿಎಂ-ಡಿಸಿಎಂ ಬರ್ತಾರೆ: ರಾಮಲಿಂಗಾರೆಡ್ಡಿ

    – ಬೆಂಗಳೂರು ಕರಗಕ್ಕೆ ಹಣ ಬಿಡುಗಡೆ ಗೊಂದಲಕ್ಕೆ ತೆರೆ ಎಳೆದ ಸಚಿವ

    ಬೆಂಗಳೂರು: ಕರಗ (Bengaluru Karaga) ಶಕ್ತೋತ್ಸವಕ್ಕೆ ಮಧ್ಯರಾತ್ರಿ 12:30ಕ್ಕೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬರ್ತಾರೆ ಎಂದು ಗೊಂದಲಗಳಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತೆರೆ ಎಳೆದರು.

    ಬೆಂಗಳೂರು ಕರಗ ಉತ್ಸವಕ್ಕೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಆರೋಪ ಕೇಳಿಬಂತು. ಈ ಹಿನ್ನೆಲೆಯಲ್ಲಿ ಕರಗ ನಡೆಯುತ್ತದೆಯೋ ಅಥವಾ ಇಲ್ಲವೋ ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಸಂಬಂಧ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಧರ್ಮರಾಯ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಇದನ್ನೂ ಓದಿ: ಕುಲಗೋಡ ಆಂಜನೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಹ್ಲಾದ್ ಜೋಶಿ

    ಬಳಿಕ ಮಾತನಾಡಿದ ಅವರು, ಕರಗ ಶಕ್ತೋತ್ಸವಕ್ಕೆ ಮಧ್ಯರಾತ್ರಿ 12:30ಕ್ಕೆ ಚಾಲನೆ ಸಿಗಲಿದೆ. ರಾಜ್ಯದ ಮುಖ್ಯಮಂತ್ರಿಗಳು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬರ್ತಾರೆ. ನಾನೇ ಬಂದು ಎಲ್ಲ ವ್ಯವಸ್ಥೆ ನೋಡಿದ್ದೀನಿ. ಬಹಳ ಚೆನ್ನಾಗಿ ಮಾಡಿದ್ದಾರೆ. ಎಲ್ಲರೂ ಕೂಡ ಕರಗದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ಕರಗ ಅಂದ್ರೆ ಬಹಳ ಫೇಮಸ್. ಪುಟ್ಟ ನಗರವಾದಾಗಿನಿಂದಲೂ ಕರಗ ನಡೀತಾ ಬರ್ತಾ ಇದೆ. ಲಕ್ಷಾಂತರ ಜನರು ಕರಗ ನೋಡಲು ಬರ್ತಾರೆ. ಶಾಸಕರು, ಪೊಲೀಸ್, ಬಿಬಿಎಂಪಿ ಎಲ್ಲಾ ಅಧಿಕಾರಿ ವರ್ಗದವರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

    ಹಣ ಬಿಡುಗಡೆ ಗೊಂದಲ ವಿಚಾರವಾಗಿ ಮಾತನಾಡಿ, ಸಮಿತಿ ಅವಧಿ ಮುಗಿದಿದೆ. ಸಮಿತಿ ಅಧ್ಯಕ್ಷರು ಕೋರ್ಟ್‌ಗೆ ಹೋಗಿ ಪರ್ಮಿಷನ್ ತಂದಿದ್ದಾರೆ. ಸರ್ಕಾರದ ನಿಯಮದ ಪ್ರಕಾರ ಅವರಿಗೆ ಹಣ ಕಳಿಸುವಂತಿರಲಿಲ್ಲ. ಹೀಗಾಗಿ, ಎಡಿಸಿ ಜಗದೀಶ್ ನಾಯ್ಕ್ಗೆ ಖಾತೆಗೆ ಹಣ ಹಾಕಿದ್ದೀವಿ. ಕೋರ್ಟ್ ಆದೇಶದ ಪ್ರಕಾರವೇ ಮಾಡಿದ್ದೇವೆ. ಎ ಗ್ರೇಡ್ ದೇವಾಸ್ಥಾನದ ಉಸ್ತುವಾರಿ ನಾನು ನೋಡ್ಕೋತೀನಿ. ಈ ದೇವಸ್ಥಾನ ಬಿ ಗ್ರೂಪ್‌ಗೆ ಬರುತ್ತಾರೆ. ಹೀಗಾಗಿ ಬಿ ಗ್ರೇಡ್ ದೇವಸ್ಥಾನದ ಉಸ್ತುವಾರಿ ಜಿಲ್ಲಾಧಿಕಾರಿಗಳು ನೋಡಿಕೊಳ್ತಾರೆ. ಈಗ ಎಲ್ಲ ಗೊಂದಲ ಬಗೆಹರಿದಿದೆ. ಎಲ್ಲ ಒಗ್ಗಟ್ಟಾಗಿ ಕೆಲಸ ಮಾಡ್ತಾ ಇದ್ದಾರೆ ಎಂದರು. ಇದನ್ನೂ ಓದಿ: ಕೆಎಲ್‌ ರಾಹುಲ್‌ ಬ್ಯಾಟಿಂಗ್‌ ಅಂದ್ರೆ ತುಂಬಾನೇ ಇಷ್ಟ: ಶಿವಣ್ಣ

  • ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ

    ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ

    ಬೆಂಗಳೂರು: ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಉತ್ಸವ ನಾಳೆಯಿಂದ ಜರುಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರ ವರೆಗೂ ಕರಗ ಉತ್ಸವ ನಡೆಯಲಿದೆ.

    ನಾಳೆ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಶುರುವಾಗಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಕರಗ ಹೊರುತ್ತಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಯಡವಟ್ಟು – ಕರಗ ಸಂಭ್ರಮಕ್ಕೆ ಅಡ್ಡಿ!

    ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ. ಏ.9 ರಂದು ಆರತಿ ದೀಪಗಳು, ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ.

    ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಧರ್ಮರಾಯ ದೇವಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಬೆಳಗ್ಗೆಯಿಂದಲೇ ದೇವಾಲಯದ ಸ್ವಚ್ಛತಾ ಕಾರ್ಯ ನಡೆದಿದೆ. ಸಿಬ್ಬಂದಿಯು ದೇವಾಲಯ, ರಥ ಸೇರಿದಂತೆ ಸಂಪೂರ್ಣ ಶುಚಿಗೊಳಿಸುತ್ತಿದ್ದಾರೆ. ಕರಗ ಆಚರಣೆಗಳು ನಾಳೆ ರಾತ್ರಿ 10 ಗಂಟೆಗೆ ಶುರುವಾಗಲಿವೆ. ಹೀಗಾಗಿ ರಸ್ತೆ ತುಂಬೆಲ್ಲಾ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಏ.4ರಿಂದ 14ರವರೆಗೆ ಬೆಂಗಳೂರು ಕರಗ – 20 ಲಕ್ಷ ಜನ ಭಾಗಿ ನಿರೀಕ್ಷೆ

  • ಇಂದು ಕರಗೋತ್ಸವ- ಕರ್ಪೂರ ಪೂಜೆ ವೇಳೆ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ

    ಇಂದು ಕರಗೋತ್ಸವ- ಕರ್ಪೂರ ಪೂಜೆ ವೇಳೆ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿಶ್ವ ವಿಖ್ಯಾತ ಕರಗ ಶಕ್ತ್ಯುತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರ್ಪೂರ ಪೂಜೆ ವೇಳೆ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿಗಾಹುತಿಯಾಗಿದೆ.

    ಇಂದು ರಾತ್ರಿ ಕರಗೋತ್ಸವ (Karaga Utsav) ಹಿನ್ನೆಲೆಯಲ್ಲಿ ಪೂಜೆ, ವಿಧಿ-ವಿಧಾನಗಳು ಆರಂಭಗೊಂಡಿದೆ. ಎನ್ ಆರ್ ಸಿಂಗ್ನಲ್ ನಿಂದ ಧರ್ಮರಾಯ ದೇವಸ್ಥಾನದವರೆಗೂ ಕರ್ಪೂರ ಹಚ್ಚಿ ಸೇವೆ ಸಲ್ಲಿಸಲಾಗುತ್ತಿದೆ. ಸುಮಾರು 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ. ಈ ವೇಳೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ

    ಮಾರ್ಚ್ 29 ರಿಂದ ಆರಂಭವಾದ ಕರಗ ಉತ್ಸವದಲ್ಲಿ ಇಂದು ದೌಪದಿಗ ಹೂವಿನ ಕರಗವನ್ನ ಕರಗ ಪೂಜಾರಿ ಜ್ಞಾನೇಂದ್ರ ಹೊತ್ತುಕೊಂಡು ಕರಗ ಬೀದಿಗಳಲ್ಲಿ ಮೆರವಣಿಗೆ ಮಾಡಲಿದ್ದಾರೆ. ಇಂದು ರಾತ್ರಿ 12:30ಕ್ಕೆ ಕರಗ ಶಕ್ತೋತ್ಸವ ಆರಂಭವಾಗಲಿದ್ದು, ಕರಗ ಸಾಗುವ ಮಾರ್ಗದ್ದುದ್ದಕ್ಕೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿ ಕರಗದ ದರ್ಶನ ಪಡೆಯಲಿದ್ದಾರೆ.

    ಕರಗ ಮಹೋತ್ಸವವು ಮಾರ್ಚ್ 29ರಿಂದ ಪ್ರಾರಂಭವಾಗಿದೆ. ಒಟ್ಟು 11 ದಿನಗಳ ಕಾಲ ಈ ಕರಗ ನಡೆಯುತ್ತದೆ. ರಾತ್ರಿ 12ರಿಂದ ಕರಗ ಶಕ್ತ್ಯೋತ್ಸವ ಹಾಗೂ ಧರ್ಮರಾಯಸ್ವಾಮಿ ಮಹಾರಥೋತ್ಸವ ನಡೆಯಲಿದೆ. ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ. ಜ್ಞಾನೇಂದ್ರ ಹೊರಲಿದ್ದಾರೆ. ಇನ್ನೂ ಎರಡು ದಿನ ಕರಗ ಉತ್ಸವ ನಡೆಯಲಿದೆ. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!

    ಮಸ್ತಾನ್ ಸಾಬ್ ದರ್ಗಾಕ್ಕೆ ಭೇಟಿ ನೀಡಿ, ಅಲ್ಲಿಂದ ಬಳೇಪೇಟೆ, ಕಿಲಾರಿ ರಸ್ತೆ, ಯಲಹಂಕ ಗೇಟ್, ಅವೆನ್ಯೂ ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರ ಪೇಟೆಗಳಲ್ಲಿ ಭಕ್ತರಿಂದ ಪೂಜೆ ಸ್ವೀಕರಿಸಲಾಗುತ್ತದೆ. ಹಾಲುಬೀದಿ, ಕಬ್ಬನ್‍ಪೇಟೆ, ಸುಣ್ಣಕಲ್ ಪೇಟೆ ಮಾರ್ಗವಾಗಿ ಕುಲ ಪುರೋಹಿತರ ಮನೆಗಳಲ್ಲಿ ಪೂಜೆ ಸ್ವೀಕರಿಸಿ ನಂತರ ನರಸಿಂಹ ಜೋಯಿಸ್ ಗಲ್ಲಿ ಮಾರ್ಗವಾಗಿ ಸೂರ್ಯೋದಯದ ವೇಳೆಗೆ ದೇವಾಲಯವನ್ನು ತಲುಪಲಿದೆ.

    ಕರಗ ಶಕ್ತ್ಯೋತ್ಸವ ಹಿನ್ನೆಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ದೇವಸ್ಥಾನದ ಸುತ್ತಮುತ್ತ 32 ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಚಿತ್ತ ಹುಣ್ಣಿಮೆಯ ದಿನ ಈ ಕರಗ ನಡೆಯುತ್ತದೆ. ದುಂಡು ಮಲ್ಲಿಗೆಯ ಹೂಗಳಿಂದ ಕರಗವನ್ನು ಅಲಂಕೃತಗೊಳಿಸಲಾಗುತ್ತದೆ.

     

  • ಒಡೆದು ಆಳುವ ನೀತಿಗೆ ಕಿವಿಗೊಡದೆ ಕರಗ ಸೌಹಾರ್ದತೆ ಮೆರೆಯುತ್ತಿರುವುದು ಸಂತಸ ತಂದಿದೆ: ಜಮೀರ್

    ಒಡೆದು ಆಳುವ ನೀತಿಗೆ ಕಿವಿಗೊಡದೆ ಕರಗ ಸೌಹಾರ್ದತೆ ಮೆರೆಯುತ್ತಿರುವುದು ಸಂತಸ ತಂದಿದೆ: ಜಮೀರ್

    ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಸಮಿತಿ ತೆಗೆದುಕೊಂಡಿರುವ ತೀರ್ಮಾನ ಸ್ವಾಗತಾರ್ಹ. ಸಮಾಜದಲ್ಲಿ ಕಿಡಿಗೇಡಿಗಳ ಒಡೆದು ಆಳುವ ನೀತಿಗೆ ಕಿವಿಗೊಡದೆ, ಸೌಹಾರ್ದತೆ ಮೆರೆಯಲು ಮುಂದಾಗಿರುವುದು ಸಂತಸ ತಂದಿದೆ ಎಂದು ಶಾಸಕ ಜಮೀರ್ ಅಹ್ಮದ್ ಕರಗ ಉತ್ಸವ ಸಮಿತಿಯ ನಿರ್ಧಾರದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

    ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಹೇಳಿರುವ ಜಮೀರ್ ಅಹ್ಮದ್, ಹಿಂದೂಪರ ಸಂಘಟನೆಗಳಿಂದ ಎಷ್ಟೇ ವಿರೋಧ ವ್ಯಕ್ತವಾದರೂ, ಕರಗ ಉತ್ಸವ ಸಮಿತಿ ಹಿಂದಿನ ರೀತಿ, ನೀತಿಗಳನ್ನು ಪಾಲಿಸುವುದಾಗಿ ತಿಳಿಸಿದೆ. ಆ ಮೂಲಕ ಈ ನೆಲದ ಸೌಹಾರ್ದತೆಯನ್ನು ಎತ್ತಿಹಿಡಿದಿದೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ, ಯಾವುದೇ ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

    ಐತಿಹಾಸಿಕ ಬೆಂಗಳೂರು ಕರಗದ ಸಂದರ್ಭದಲ್ಲಿ ತಾಯಿಯನ್ನು ದರ್ಗಾಕ್ಕೆ ಕರೆದುಕೊಂಡು ಹೋಗುವುದು ವಾಡಿಕೆ. ಆದರೆ ಉತ್ಸವದ ವೇಳೆ ಕರಗವು ದರ್ಗಾಗೆ ಪ್ರವೇಶ ಮಾಡಬಾರದು ಎಂದು ಹಿಂದೂಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಆದರೆ ಇವೆಲ್ಲದಕ್ಕೂ ಡೋಂಟ್ ಕೇರ್ ಎಂದಿರುವ ಕರಗ ಉತ್ಸವ ಸಮಿತಿ ಮುಸ್ಲಿಮರ ಸಹಭಾಗಿತ್ವದಿಂದಲೇ ಉತ್ಸವ ನಡೆಸುವ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿರುವ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಏಪ್ರಿಲ್ 21ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ: ಕೋಡಿಹಳ್ಳಿ

     

  • ಮಡಿಕೇರಿ ದಸರಾ: ನಾಲ್ಕು ಶಕ್ತಿ ದೇವತೆಗಳ ಕರಗಕ್ಕೆ ಚಾಲನೆ

    ಮಡಿಕೇರಿ ದಸರಾ: ನಾಲ್ಕು ಶಕ್ತಿ ದೇವತೆಗಳ ಕರಗಕ್ಕೆ ಚಾಲನೆ

    ಮಡಿಕೇರಿ: ಐತಿಹಾಸಿಕ ಹಿನ್ನೆಲೆಯ ಮಡಿಕೇರಿಯ ನಾಲ್ಕು ಶಕ್ತಿ ದೇವತೆಗಳ ‘ಕರಗ ಉತ್ಸವ’ಕ್ಕೆ ಮಂಜಿನ ನಗರಿ ಮಡಿಕೇರಿ ನಗರದ ಪಂಪಿನ ಕೆರೆಯ ಬನ್ನಿಮಂಟಪದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸುವ ಮೂಲಕ ಇಂದು ಸಂಜೆ ಚಾಲನೆ ನೀಡಲಾಯಿತು.

    ಮಡಿಕೇರಿ ನಗರ ದಸರಾ ಸಮಿತಿ, ದಶಮಂಟಪ ಸಮಿತಿಯ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಜನಪ್ರತಿನಿಧಿಗಳು, ಅಧಿಕಾರಿಗಳು ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ಸಂಜೆ ಪೂಜೆ ಸಲ್ಲಿಸಿ, ನಾಡಿನ ಒಳಿತಿಗೆ ಪ್ರಾರ್ಥಿಸುವ ಮೂಲಕ ಕರಗ ಮೆರವಣಿಗೆ ಆರಂಭಗೊಂಡಿತು. ಮಡಿಕೇರಿ ನಗರ ನಾಲ್ಕು ಶಕ್ತಿ ದೇವತೆಗಳದ ರಾಜಾಸೀಟು ಬಳಿಯ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಗೌಳಿಬೀದಿಯ ಶ್ರೀ ಕಂಚಿಕಾಮಾಕ್ಷಿ, ನಗರಸಭೆ ಬಳಿಯ ಶ್ರೀ ದಂಡಿನ ಮಾರಿಯಮ್ಮ, ಪೆನ್ಶನ್ ಲೇನ್‍ನ ಶ್ರೀ ಕೋಟೆ ಮಾರಿಯಮ್ಮ ಕರಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು.

    ಮಧ್ಯಾಹ್ನ ನಾಲ್ಕು ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಸಿದ ವ್ರತಧಾರಿಗಳು ಹಾಗೂ ದೇವಾಲಯ ಸಮಿತಿಯ ಪ್ರಮುಖರು ಕರಗ ಅಲಂಕಾರಕ್ಕೆ ಅಗತ್ಯವಿರುವ ಫಲ, ಪುಷ್ಪಗಳೊಂದಿಗೆ ಪಂಪಿನ ಕೆರೆಗೆ ತೆರಳಿದರು. ವಿವಿಧ ಪೂಜಾ, ಕೈಂಕರ್ಯಗಳ ಮೂಲಕ ಕರಗಗಳನ್ನು ಕಟ್ಟಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಚಾಲನೆ ನೀಡಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಗಣ್ಯರು ಪೂಜೆಯಲ್ಲಿ ಭಾಗಿಯಾಗಿದ್ದರು.

    ಪಂಪಿನಕೆರೆ ಬಳಿಯಿಂದ ಹೊರಟ ನಾಲ್ಕು ಕರಗಗಳು ಮಹದೇವಪೇಟೆಯ ಶ್ರೀಚೌಡೇಶ್ವರಿ ದೇವಾಲಯ, ಕನ್ನಿಕಾ ಪರಮೇಶ್ವರಿ ದೇಗುಲದಲ್ಲಿ ಪೂಜೆ ಸ್ವೀಕರಿಸಿದವು. ಸಂಪ್ರದಾಯದಂತೆ ಪೇಟೆ ಶ್ರೀರಾಮಮಂದಿರಕ್ಕೆ ತೆರಳಿದ ಕರಗಗಳು ಅಲ್ಲಿಯೂ ವಿಶೇಷ ಪೂಜೆ ಸ್ವೀಕರಿಸಿ ನಂತರ ತಮ್ಮ ತಮ್ಮ ದೇವಾಲಯಗಳಿಗೆ ತೆರಳಿದವು. ಕೊರೊನಾ ವೈರಸ್ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಡಳಿತ ಸರಳ ದಸರಾಗೆ ಮುಂದಾಗಿದ್ದು, ಕರಗ ಮಹೋತ್ಸವವನ್ನು ಈ ಬಾರಿ ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ.

    ಜಿಲ್ಲಾಡಳಿತದ ನಿರ್ಧಾರಕ್ಕೆ ದಸರಾ ಸಮಿತಿಯವರು ಸಹ ಸಮ್ಮತಿಸಿದ್ದಾರೆ. ಹೀಗಾಗಿ ಪ್ರತಿವರ್ಷ ಕೋಟ್ಯಂತರ ರೂ. ಖರ್ಚು ಮಾಡಿ, ವಿಜೃಂಭಣೆಯಿಂದ ನಡೆಸಲಾಗುತ್ತಿದ್ದ ಮಂಜಿನನಗರಿ ಮಡಿಕೇರಿಯ ದಸರಾ ಈ ಬಾರಿ ನಿರಾಡಂಬರವಾಗಿ ನಡೆಯಲಿದೆ.