Tag: ಕರಣ್ ಜೋಹಾರ್

  • ಕರಣ್ ಬರ್ತ್‌ಡೇ ಪಾರ್ಟಿಯಲ್ಲಿ ರಶ್ಮಿಕಾ ಮಂದಣ್ಣ ಕಾಸ್ಟ್ಯೂಮ್‌ಗೆ ಬಾಲಿವುಡ್ ಫಿದಾ

    ಕರಣ್ ಬರ್ತ್‌ಡೇ ಪಾರ್ಟಿಯಲ್ಲಿ ರಶ್ಮಿಕಾ ಮಂದಣ್ಣ ಕಾಸ್ಟ್ಯೂಮ್‌ಗೆ ಬಾಲಿವುಡ್ ಫಿದಾ

    ನಿನ್ನೆಯಷ್ಟೇ ಬಾಲಿವುಡ್‌ನಲ್ಲಿ ಬಹುದೊಡ್ಡ ಬರ್ತ್‌ಡೇ ಪಾರ್ಟಿ ನಡೆದಿದೆ. ನಿರ್ದೇಶಕ, ನಟ, ನಿರ್ಮಾಪಕ ಕರಣ್ ಜೋಹಾರ್ ಅವರಿಗೆ 50 ತುಂಬಿದ ಸಂದರ್ಭದಲ್ಲಿ ಇಡೀ ಭಾರತೀಯ ಸಿನಿಮಾ ರಂಗವನ್ನೇ ಪಾರ್ಟಿಯ ನೆಪದಲ್ಲಿ ಒಂದಾಗಿಸಿದ್ದರು ಕರಣ್. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ಈ ಬಾರಿ ಬಾಲಿವುಡ್ ನಟ ನಟಿಯರಿಗೆ ಮಾತ್ರವಲ್ಲ, ದಕ್ಷಿಣದ ಅನೇಕ ತಾರೆಯರಿಗೆ ಕರಣ್ ಆಹ್ವಾನ ನೀಡಿದ್ದರು. ಹಾಗಾಗಿ ಸಮಂತಾ, ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ದಕ್ಷಿಣದ ಕಲಾವಿದರು ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ತಡರಾತ್ರಿವರೆಗೂ ನಡೆದ ಪಾರ್ಟಿಯಲ್ಲಿ ಸಖತ್ ಮಿಂಚಿದ್ದು ಅಂದರೆ, ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ. ಕರಿ ಬಣ್ಣದ ಕಾಸ್ಟ್ಯೂಮ್‌ನಲ್ಲಿ ರಶ್ಮಿಕಾ ಮಂದಣ್ಣ ಆಧುನಿಕ ದೇವತೆಯಂತೆ ಮಿಂಚಿದ್ದಾರೆ ಎಂದು ಬಾಲಿವುಡ್ ಸಿನಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಈ ಪಾರ್ಟಿಯಲ್ಲಿ ವಿಜಯ್ ದೇವರಕೊಂಡ ಭಾಗಿಯಾಗಿದ್ದರೂ ಕೂಡ, ರಶ್ಮಿಕಾ ಮತ್ತು ವಿಜಯ್ ಅಂತರವನ್ನು ಕಾಪಾಡಿಕೊಂಡಿದ್ದರು ಎನ್ನುವ ಸುದ್ದಿಯು ಕೂಡ ಇದೆ. ಒಟ್ಟಿಗೆ ಅನೇಕ ಪಾರ್ಟಿಗಳಲ್ಲಿ ಜೊತೆಯಾಗಿಯೇ ಕಾಣಿಸಿಕೊಳ್ಳುತ್ತಿದ್ದ ವಿಜಯ್ ಮತ್ತು ರಶ್ಮಿಕಾ ಇತ್ತೀಚಿನ ದಿನಗಳಲ್ಲಿ ದೂರ ದೂರ ಓಡಾಡುತ್ತಿದ್ದಾರೆ. ಈ ಪಾರ್ಟಿಯಲ್ಲೂ ಅವರಿಬ್ಬರೂ ಬೇರೆ ಬೇರೆಯಾಗಿಯೇ ಬಂದರು ಎನ್ನುತ್ತಿವೆ ಮೂಲಗಳು. ಹಾಗಾಗಿ ಇಬ್ಬರ ಮಧ್ಯ ಮನಸ್ತಾಪ ಆಗಿರುವುದು ನಿಜ ಎನ್ನಲಾಗುತ್ತಿದೆ.

  • ಕರಣ್ ಜೋಹಾರ್ @50; ಅದ್ಧೂರಿ ಹುಟ್ಟುಹಬ್ಬಕ್ಕೆ ಯಶ್‌ಗೆ ಆಹ್ವಾನ

    ಕರಣ್ ಜೋಹಾರ್ @50; ಅದ್ಧೂರಿ ಹುಟ್ಟುಹಬ್ಬಕ್ಕೆ ಯಶ್‌ಗೆ ಆಹ್ವಾನ

    ಬಾಲಿವುಡ್‌ನ ಖ್ಯಾತ ನಿರೂಪಕ, ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ ಇದೇ ತಿಂಗಳು ಮೇ 25ಕ್ಕೆ ಅವರಿಗೆ 50 ವರ್ಷ. ಈ ಬಾರಿಯ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲೇ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ದಕ್ಷಿಣದ ಅನೇಕ ಸ್ಟಾರ್ ನಟರನ್ನು ಮತ್ತು ನಿರ್ದೇಶಕರನ್ನು ತಮ್ಮ ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸುತ್ತಿದ್ದಾರೆ ಎನ್ನುವ ಸುದ್ದಿ ಸಿಕ್ಕಿದೆ. ಇದನ್ನೂ ಓದಿ:  ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

    ಕರಣ್ ಜೋಹಾರ್ ಹುಟ್ಟುಹಬ್ಬವೆಂದರೆ ಬಿಟೌನ್‌ನಲ್ಲಿ ವಿಶೇಷತೆ ಇದ್ದೇ ಇರುತ್ತದೆ. ಬಹುತೇಕ ಬಾಲಿವುಡ್ ಸಿಲೆಬ್ರಿಟಿಗಳು ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುತ್ತಾರೆ. ಈ ಬಾರಿಯ ಸ್ಪೆಷಲ್ ಅಂದರೆ, ಕನ್ನಡದ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ತೆಲುಗಿನ ಜೂನಿಯರ್ ಎನ್‌ಟಿಆರ್‌ ಹಾಗೂ ರಾಜಮೌಳಿ ಸೇರಿದಂತೆ ಹಲವು ಸಿಲೆಬ್ರಿಟಿಗಳನ್ನು ಆಹ್ವಾನಿಸಿದ್ದಾರಂತೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

    ಕರಣ್ ಜೋಹಾರ್ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಹೋಸ್ಟ್ ಮಾಡಿದ್ದರು. ಆ ಮೂಲಕ ದಕ್ಷಿಣದ ಮೊದಲ ಕಾರ್ಯಕ್ರಮದಲ್ಲಿ ಅವರು ನಿರೂಪಕರಾಗಿ ಕಾಣಿಸಿಕೊಂಡಿದ್ದರು. ಅಲ್ಲಿಂದ ಯಶ್ ಮತ್ತು ಅವರ ಮಧ್ಯ ಒಂದೊಳ್ಳೆ ಬಾಂಧವ್ಯವೂ ಏರ್ಪಟ್ಟಿದೆ. ಇದೆಲ್ಲ ಕಾರಣಕ್ಕಾಗಿ ಈ ಬಾರಿ ಯಶ್ ಅವರು ಕರಣ್ ಜೋಹಾರ್ ಅವರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ.

    ಐವತ್ತು ವರ್ಷ ತುಂಬಿದ ಸಂದರ್ಭದಲ್ಲಿ ವಿಭಿನ್ನ ರೀತಿಯಲ್ಲೇ ಕರಣ್ ಜೋಹಾರ್ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರಂತೆ. ಅಲ್ಲದೇ ಈವರೆಗೂ ತಮ್ಮ ಸಿನಿಮಾದಲ್ಲಿ ಕೆಲಸ ಮಾಡಿದ ಬಹುತೇಕ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಆಹ್ವಾನ ಹೋಗಿದೆಯಂತೆ. ಇದೊಂದು ರೀತಿಯಲ್ಲಿ ಬರ್ತ್‌ಡೇ ಪಾರ್ಟಿ ಅನ್ನುವುದಕ್ಕಿಂತ ಧನ್ಯವಾಗಳನ್ನು ಹೇಳುವ ಕಾರ್ಯಕ್ರಮವಾಗಿ ರೂಪುಗೊಂಡಿದೆ ಎನ್ನುತ್ತಿದೆ ಬಿಟೌನ್.

  • ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

    ಅತಿಥಿಗಳು ಯಾರು?

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ

    7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್

    ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ.

  • ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ, ಬರಹಗಾರ, ಕಲಾವಿದ ಕರಣ್ ಜೋಹಾರ್ ರವಿವಾರ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕನ್ನಡ ಸಿನಿಮಾವೊಂದರ ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಸಾಕಷ್ಟು ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿರುವ ಅವರು ಇದೇ ಮೊದಲ ಬಾರಿಗೆ ಕನ್ನಡದ ಪ್ಯಾನ್ ಇಂಡಿಯಾ ಚಿತ್ರವೊಂದಕ್ಕೆ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು. ಇದನ್ನೂ ಓದಿ : RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾದ ಟ್ರೈಲರ್ ಇದೇ ರವಿವಾರ ಮಾರ್ಚ್ 27ರಂದು ಬಿಡುಗಡೆ ಆಗುತ್ತಿದ್ದು, ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಕರಣ್ ಜೋಹಾರ್ ಹೊತ್ತುಕೊಂಡಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ.

  • ರೋಹಿತ್ ಶೆಟ್ಟಿ, ಕರಣ್, ರಣ್‍ವೀರ್ ಸಿಂಗ್‍ಗೆ ದೀಪಿಕಾ ಆಶೀರ್ವಾದ!

    ರೋಹಿತ್ ಶೆಟ್ಟಿ, ಕರಣ್, ರಣ್‍ವೀರ್ ಸಿಂಗ್‍ಗೆ ದೀಪಿಕಾ ಆಶೀರ್ವಾದ!

    ಮುಂಬೈ: ಬಾಲಿವುಡ್ ಅಂಗಳದಲ್ಲಿ ಧೂಳೆಬ್ಬಿಸುತ್ತಿರುವ ಸಿಂಭಾ ಚಿತ್ರದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ನಟಿ ದೀಪಿಕಾ ಪಡುಕೋಣೆ ನಿರ್ದೇಶಕ ರೋಹಿತ್ ಶೆಟ್ಟಿ, ಕರಣ್ ಜೋಹರ್ ಹಾಗೂ ರಣ್‍ವೀರ್ ಸಿಂಗ್‍ಗೆ ಆಶೀರ್ವಾದ ಮಾಡುತ್ತಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.

    ನಟ ರಣ್‍ವೀರ್ ಸಿಂಗ್ ಹಾಗೂ ಸಾರಾ ಅಲಿಖಾನ್ ಅಭಿನಯದ ಸಿಂಭಾ ಚಿತ್ರ ಸಿನಿ ಪ್ರೀಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪ್ರೇಕ್ಷಕರು ಚಿತ್ರ ನೋಡಿ ಬಹಳ ಒಳ್ಳೆಯ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಚಿತ್ರವನ್ನು ಸ್ಟಾರ್ ನಿರ್ದೇಶಕ ರೋಹಿತ್ ಶೆಟ್ಟಿ ನಿರ್ದೇಶಿಸಿದ್ದು, ಕರಣ್ ಜೋಹರ್ ನಿರ್ಮಿಸಿದ್ದಾರೆ. ಈ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಜೋರಾಗಿದ್ದು, ಈವರೆಗೆ ಸರಿಸುಮಾರು 190 ಕೋಟಿ ರೂ. ಕಲೆಕ್ಷನ್ ಮಾಡಿದೆ.

    ಅದ್ಭುತವಾಗಿ ಪ್ರದರ್ಶನ ಕಾಣುತ್ತಿರುವ ಸಿಂಭಾ ಚಿತ್ರದ ಯಶಸ್ಸಿನ ಖುಷಿಯನ್ನು ಸಂಭ್ರಮಿಸಲು, ನಿರ್ಮಾಪಕ ಕರಣ್ ಜೋಹರ್ ತಮ್ಮ ಮುಂಬೈ ನಿವಾಸದಲ್ಲಿ ಚಿತ್ರ ತಂಡಕ್ಕೆ ಪಾರ್ಟಿಯನ್ನು ಆಯೋಜಿಸಿದ್ದರು. ಈ ವೇಳೆ ತೆಗೆದ ಸಂಭ್ರಮಾಚರಣೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ದೀಪಿಕಾ ಪಡುಕೋಣೆ ಅವರು ನಿರ್ದೇಶಕ ರೋಹಿತ್ ಶೆಟ್ಟಿ, ಕರಣ್ ಜೋಹರ್ ಹಾಗೂ ರಣ್‍ವೀರ್ ಸಿಂಗ್‍ಗೆ ಆರ್ಶಿವಾದ ಮಾಡುತ್ತಿರುವ ಕ್ಯೂಟ್ ಫೋಟೋ ಅಭಿಮಾನಿಗಳ ಮನ ಗೆದ್ದಿದೆ.

    ನಿರ್ದೇಶಕ ರೋಹಿತ್ ಶೆಟ್ಟಿ ಅವರು ತಮ್ಮ ಮುಂದಿನ ಚಿತ್ರದ ಬಗ್ಗೆ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಿಂದ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅಕ್ಷಯ್ ಕುಮಾರ್, ರಣ್‍ವೀರ್ ಸಿಂಗ್, ಅಜಯ್ ದೇವಗನ್, ಕರಣ್ ಜೋಹರ್ ಜೊತೆ ತಾವು ಇರುವ ಫೋಟೋವನ್ನು ಹಾಕಿ, ನಿಮಗೆ ಗೊತ್ತಿರದ ಗುಟ್ಟೊಂದನ್ನು ನಾನು ಹೇಳಲಾ, ಸಿಂಗಂ ಸಿಂಭಾ ಸೂರ್ಯವಂಶಿ ಬರುತ್ತಿದೆ ಅಂತ ಬರೆದು ಪೋಸ್ಟ್ ಮಾಡಿದ್ದಾರೆ.

    ಸಿಂಭಾ ಚಿತ್ರ ತೆರೆಕಂಡ ಎರಡನೇ ವಾರಕ್ಕೆ ಸುಮಾರು 190 ಕೋಟಿ ರೂ. ತನ್ನದಾಗಿಸಿಕೊಂಡಿದೆ. ಅಲ್ಲದೆ 2018ರಲ್ಲಿ ಅತೀ ಹೆಚ್ಚು ಗಳಿಸಿದ ಸಿನಿಮಾಗಳಲ್ಲಿ ಸದ್ಯ ಸಿಂಭಾ ಚಿತ್ರ ಮೂರನೇ ಸ್ಥಾನದಲ್ಲಿದೆ.

    https://www.instagram.com/p/BsV98rqhB3j/?utm_source=ig_embed

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv