ಬೆಂಗಳೂರು: ಕರಾವಳಿಯಲ್ಲಿ (Coastal Karnataka) ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ (Heavy Rains) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಇಂದು ಭಾರೀ ಮಳೆಯಾಗಲಿದ್ದು ಐಎಂಡಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ. ಮುಂದಿನ 4-5 ದಿನ ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಕೇವಲ 6 ಗಂಟೆಯಲ್ಲಿ 300 ಮಿ.ಮೀ ಮಳೆ – ಮಹಾಮಳೆಗೆ ಮುಳುಗಿದ ಮುಂಬೈ
24 ಗಂಟೆಯಲ್ಲಿ ಎಲ್ಲಿ ಎಷ್ಟು ಮಳೆಯಾಗಿದೆ?
ಉತ್ತರ ಕನ್ನಡ : 264 ಮಿ.ಮೀ.
ಉಡುಪಿ: 210.5 ಮಿ.ಮೀ.
ದಕ್ಷಿಣ ಕನ್ನಡ : 168 ಮಿ.ಮೀ.
ಶಿವಮೊಗ್ಗ : 118.5 ಮಿ.ಮೀ.
ವಿಜಯಪುರ : 89 ಮಿ.ಮೀ.
ಬೆಳಗಾವಿ : 87.5 ಮಿ.ಮೀ.
ಚಿಕ್ಕಮಗಳೂರು: 67.5 ಮಿ.ಮೀ.
ಕೊಡಗು: 58.5 ಮಿ.ಮೀ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು, ನಾಳೆ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದರೆ, ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಉತ್ತರ ಒಳನಾಡಿಗೆ ಇಂದು ಆರೆಂಜ್, ಮುಂದಿನ 4 ದಿನ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಇಂದಿನಿಂದ ಮುಂದಿನ 5 ದಿನ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಬೆಂಗಳೂರಿನಲ್ಲಿ (Bengaluru) ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆ. ಕಳೆದ ಬಾರಿಯಂತೆ ಈ ಬಾರಿ ಸ್ಪರ್ಧೆ ಇದ್ದರೂ ಹಿಂದೂತ್ವದ ಅಲೆ ಇರುವ ಕಾರಣ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಮೂಡ್ ಆಫ್ ಕರ್ನಾಟಕದ ಪ್ರಕಾರ ಕಾಂಗ್ರೆಸ್ ಎರಡನೇ ಸ್ಥಾನ ಪಡೆದರೆ ಜೆಡಿಎಸ್ ಶೂನ್ಯ ಸಾಧನೆ ಮಾಡಲಿದೆ.
ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ.
ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ಇವತ್ತು ಅತೀ ಹೆಚ್ಚು ಎಂದರೆ ಮೂರು ಸೆಂಟಿಮೀಟರ್ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸ್ವಲ್ಪ ಮಳೆ ನಿರೀಕ್ಷಿಸಬಹುದು. ಹಾಗಂತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದಿದ್ದಾರೆ.
ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಿದೆ. ಬೆಂಗಳೂರಲ್ಲಿ ಕೇವಲ 2.5 ಮಿಲಿ ಮೀಟರ್ ಮಳೆಯಾಗಿದೆ. ಇವತ್ತು ಮತ್ತು ನಾಳೆ ಇದೇ ರೀತಿ ಮೋಡ ಕವಿದ ವಾತಾವರಣವೇ ಇರುತ್ತದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕರ್ನಾಟಕದಲ್ಲಿ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಬೆಂಗಳೂರು: ಕರಾವಳಿ ಕರ್ನಾಟಕದ ಜನರ ತುಳು ಭಾಷೆಗೆ ಅಧಿಕೃತವಾಗಿ ಮಾನ್ಯತೆಗಾಗಿ ಟ್ವಿಟ್ಟರ್ ನಲ್ಲಿ #TuluOfficialinKA_KL ಅಭಿಯಾನ ಆರಂಭಿಸಲಾಗಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಒತ್ತಾಯಿಸಲಾಗಿದೆ.
ಈ ಅಭಿಯಾನಕ್ಕೆ ಸ್ಯಾಂಡಲ್‍ವುಡ್ ಪ್ರಮುಖರು, ರಾಜಕೀಯ ಗಣ್ಯರು ಸಾಥ್ ನೀಡುತ್ತಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ, ನಟರಾದ ಜಗ್ಗೇಶ್, ನಿರೂಪ್ ಭಂಡಾರಿ, ರಕ್ಷಿತ್ ಶೆಟ್ಟಿ ಕಲಾವಿದ ವಿಲಾಸ್ ನಾಯಕ್, ರಾಜಕೀಯ ಪ್ರಮುಖರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರಮೋದ್ ಮಧ್ವರಾಜ್ ಸೇರಿದಂತೆ ಕರಾವಳಿ ಭಾಗದ ಜನರು ಟ್ವಿಟ್ಟರ್ ಅಭಿಯಾನದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಜಗ್ಗೇಶ್: #ತುಳು ಸಹೋದರರೆ ಉಸಾರ್ ಉಲ್ಲೇರ, ಬೊಕ್ಕ ತುಳು ಭಾಷೆಯ ವಿಷಯ ಯಾನ್ ಲಾ ನಿಮ್ಮೊಟ್ಟಿಗೆ ಬರ್ಪೇ. ಹೌದು ತುಳು ಭಾಷೆ ಭಾರತದ ಸನಾತನ ಭಾಷೆ. ಸನಾತನ ಕನ್ನಡದ ಸಹೋದರ ಭಾಷೆ ಉಳಿಯಲು ತುಳು ಭಾಷೆಯ ಎಲ್ಲಾಪಕ್ಷದ ನಾಯಕರು ಚಿಂತಕರು ಸಾಹಿತಿಗಳು ಮಾಧ್ಯಮದಲ್ಲಿರುವವರು ನಟ-ನಟಿ ಪ್ರಾಮಾಣಿಕವಾಗಿ ಯತ್ನಿಸಬೇಕು. ಭಾಷೆ ಉಳಿದರೆ ಸನಾತನ ಭಾವನೆ ಉಳಿಯುತ್ತದೆ. ಇದನ್ನೂ ಓದಿ: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ
#ತುಳು ಸಹೋದರರೆ ಉಸಾರ್ ಉಲ್ಲೇರ!ಬೊಕ್ಕ ತುಳು ಭಾಷೆಯ ವಿಷಯ ಯಾನ್ ಲಾ ನಿಮ್ಮೊಟ್ಟಿಗೆ ಬರ್ಪೇ! ಹೌದು ತುಳು ಭಾಷೆ ಭಾರತದ ಸನಾತನ ಭಾಷೆ!ಸನಾತನ ಕನ್ನಡದ ಸಹೋದರ ಭಾಷೆ ಉಳಿಯಲು ತುಳು ಭಾಷೆಯ ಎಲ್ಲಾಪಕ್ಷದ ನಾಯಕರು ಚಿಂತಕರು ಸಾಹಿತಿಗಳು ಮಾಧ್ಯಮದಲ್ಲಿರುವವರು ನಟನಟಿ ಪ್ರಾಮಾಣಿಕವಾಗಿ ಯತ್ನಿಸಬೇಕು! ಭಾಷೆ ಉಳಿದರೆ ಸನಾತನ ಭಾವನೆ ಉಳಿಯುತ್ತದೆ!ಶುಭದಿನ
ಪ್ರಮೋದ್ ಮಧ್ವರಾಜ್: ಪಕ್ಷಾತೀತವಾಗಿ ಕರಾವಳಿ ಭಾಗದ ರಾಜಕೀಯ ಮುಖಂಡರು ಭಾಷೆಗಾಗಿ ಒಂದಾಗಬೇಕಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಭಾಷೆಯ ಶ್ರೀಮಂತಿಕೆಯನ್ನು ತೋರಿಸಬೇಕಿದೆ. ಈ ಕುರಿತು ವಾಟ್ಸಪ್ ಗ್ರೂಪ್ ರಚಿಸಿಕೊಂಡು ಸಲಹೆ ಸೂಚನೆಗಳನ್ನು ಪಡೆದುಕೊಳ್ಳಬೇಕಿದೆ. ಒಂದಾಗಿ ನಮ್ಮ ಬೇಡಿಕೆಗಳನ್ನು ಜನಪ್ರತಿನಿಧಿಗಳ ಮುಂದೆ ತೆಗೆದುಕೊಂಡು ಹೋಗಬೇಕು. ಮೊದಲು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನ ಪಡೆದುಕೊಳ್ಳಬೇಕು.
The first thing we should do is meet Dr Veerendra heggade and seek his guidance in the matter . He has been on the forefront and he has more pull with the powers that be more than anyone and his contribution to Tulu has been tremendous #TuluOfficialinKA_KL
ವಿಲಾಸ ನಾಯಕ್: ಹೃದಯಕ್ಕೆ ಹತ್ತಿರವಾದ ಭಾಷೆ ತುಳು. ನಾನು ಕರ್ನಾಟಕದ ಕರಾವಳಿ ಭಾಗದವನು ಎಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ. ತುಳು ವಿಭಿನ್ನ ಸಂಪ್ರದಾಯ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತಿಕೆಯನ್ನು ಹೊಂದಿದೆ. ಹಾಗಾಗಿ ತುಳು ಭಾಷೆಯನ್ನು ಗುರುತಿಸಿ ವಿಶೇಷ ಸ್ಥಾನಮಾನ ನೀಡಬೇಕು.
ಅಣ್ಣಾಮಲೈ: ತುಳು ದ್ರಾವಿಡ ಭಾಷೆಗಳಲ್ಲಿ ಒಂದು ಎಂಬುದನ್ನು ಇತಿಹಾಸ ಮತ್ತು ಸಂಪ್ರದಾಯ ಹೇಳುತ್ತದೆ. ಆ ಪ್ರದೇಶದಲ್ಲಿ ಸೇವೆಯನ್ನು ಸಲ್ಲಿಸಿದ್ದರಿಂದ ಭಾಷೆಯ ಶ್ರೀಮಂತಿಕೆ ಮತ್ತು ಅದ್ಧೂರಿತನವನ್ನು ಗಮನಿಸಿದ್ದೇನೆ. ಸಿರಿ, ಕೋಟಿ ಮತ್ತು ಚನ್ನಯ್ಯ ಕಥೆಯಿಂದ ತುಳು ಭಾಷೆಯ ಶ್ರೀಮಂತಿಕೆ ಅರ್ಥವಾಗುತ್ತದೆ. ಹಾಗಾಗಿ ತುಳು 8ನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಲು ಅರ್ಹತೆಯನ್ನು ಹೊಂದಿದೆ.
Tulu is one among the highly evolved Dravidian languages with history and tradition. It was my privilege to have served in Tulu land and to have seen the richness of the Epic of Siri & Koti and Chennayya. It richly deserves this inclusion. #TuluOfficialinKA_KL#TuluTo8thSchedule
ರಕ್ಷಿತ್ ಶೆಟ್ಟಿ: ನಮ್ಮ ಭಾಷೆ, ಸಂಪ್ರದಾಯ, ಸಂಸ್ಕೃತಿಗಾಗಿ ನಡೆಯುತ್ತಿರುವ ಅಭಿಯಾನದಲ್ಲಿ ನಾನು ಯಾವಾಗಲೂ ನಿಮ್ಮೊಂದಿಗೆ ಇರುತ್ತೇನೆ. ಕೇವಲ ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ಆರಂಭಿಸಿದ್ರೆ ಭಾಷೆಗೆ ಮಾನ್ಯತೆ ಸಿಗಲಾರದು. ಇದಕ್ಕಾಗಿ ತುಳು ಸಮುದಾಯದ ಎಲ್ಲರು ಜೊತೆಗೂಡಿ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಬೇಕಿದೆ ಎಂದು ತಿಳಿಸಿದ್ದಾರೆ.
I have always been and will always be with you all when it comes to uplifting of our language, culture and age old traditions. Although I believe this just can’t happen through social media alone. Tulu samodaya has to come together and talk to respective officials. https://t.co/pocBMvVOft
ಅನೂಪ್ ಭಂಡಾರಿ: ತುಳು ಭಾಷೆ ಪಂಚ ದ್ರಾವಿಡ ಭಾಷೆಗಳಲ್ಲೊಂದು. ಇದು ಆಧಿಕೃತ ಭಾಷೆಯಾಗಬೇಕೆಂಬುದು ಕವಿ ಕಯ್ಯಾರರ ಆಶಯವೂ ಆಗಿತ್ತು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ತುಳು ಭಾಷೆಗ್ ಅಧಿಕೃತ ಭಾಷೆದ ಸ್ಥಾನ ಮಾನೊನು ಕೊರೊಡುಂದು ಒತ್ತಾಯ ಮಲ್ಪುವೊ ಎಂದು ಬರೆದುಕೊಂಡಿದ್ದಾರೆ.
ನಿರೂಪ್ ಭಂಡಾರಿ: ಪೊರ್ಲುದ ತುಳು ಭಾಷೆಗ್ ಅಧಿಕೃತ ಸ್ಥಾನಮಾನ ಕೂಡಲೇ ತಿಕ್ಕೊಡು. ಪಂಚ ದ್ರಾವಿಡ ಭಾಷೆಯಲ್ಲೊಂದಾದ ತುಳುಭಾಷೆಯನ್ನು ಎಂಟನೆಯ ಪರಿಚ್ಛೇದಕ್ಕೆ ಸೇರಿಸ ಬೇಕೆಂಬ ಬೇಡಿಕೆ ನ್ಯಾಯ ಸಮ್ಮತ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ.
ಸಿಂಪಲ್ ಸುನಿ: ತುಳು ಭಾಷೆ ಒರಿಪಯಾರೆ ಎಂಕ್ಲ್ ನ ಸಹಾಯ ಏಪಲ ಉಂಡು. ನಿಕುಲು ದುಂಬು ಪೊಲೆ, ಬೆರಿ ಸಹಾಯ ಆದ್ ಎಂಕುಲು ಉಲ್ಲ. ಭಾಷೆಗಳು ಆಯಾ ಭಾಗದ ಜೀವ, ಸೊಗಡು, ಸೊಬಗು, ಸಂಪ್ರದಾಯದ ಅಸ್ತಿತ್ವ. ತುಳು ಭಾಷೆ ಉಳಿಸಲು ನಮ್ಮ ಸಹಾಯ ಯಾವಾಗಲೂ ಇದೆ. ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ.
ತುಳು ಭಾಷೆ ಒರಿಪಯಾರೆ ಎಂಕ್ಲ್ನ ಸಹಾಯ ಏಪಲ ಉಂಡು.. ನಿಕುಲು ದುಂಬು ಪೊಲೆ, ಬೆರಿ ಸಹಾಯ ಆದ್ ಎಂಕುಲು ಉಲ್ಲ!
ಭಾಷೆಗಳು..ಆಯಾ ಭಾಗದ ಜೀವ,,ಸೊಗಡು,,ಸೊಬಗು,,ಸಂಪ್ರದಾಯದ ಅಸ್ತಿತ್ವ… ತುಳು ಭಾಷೆ ಉಳಿಸಲು ನಮ್ಮ ಸಹಾಯ ಯಾವಾಗಲೂ ಇದೆ. ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ..#TuluOfficialinKA_KL
ನವದೆಹಲಿ/ಮಂಗಳೂರು/ಬೆಂಗಳೂರು: ಕರಾವಳಿ ಕರ್ನಾಟಕ, ಕೇರಳ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನಾಳೆ (ಜೂ.12) ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಕರಾವಳಿ, ಕೇರಳದ ಕೆಲವು ಪ್ರದೇಶಗಳು, ಛತ್ತೀಸ್‍ಗಢ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಂ ಹಾಗೂ ತ್ರಿಪುರಾದಲ್ಲಿ ಜೂನ್ 12ರಂದು ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗೋವಾ, ಕೇರಳ ಹಾಗೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದ ರಭಸ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಸಿದೆ.
ಇದೇ ವಿಚಾರದಲ್ಲಿ ಬೆಂಗಳೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿ, ಜೂನ್ 1 ರಿಂದ ರಾಜ್ಯದ ಹಲವು ಕಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಸೆಪ್ಟೆಂಬರ್ ವರೆಗೂ ಮಳೆ ಮುಂದುವರೆಯಲಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿ ಮಳೆಯಾಗುತ್ತಿದೆ, ಹೆಚ್ಚು ಮಳೆಯನ್ನು ನಿರೀಕ್ಷೆ ಮಾಡಲಾಗಿದೆ. ಪ್ರಮುಖವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಇನ್ನೂ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ 125 ಮಿ.ಮೀ. ಮಳೆಯಾಗಬೇಕಿತ್ತು. ಅದ್ರೆ ನಿರೀಕ್ಷೆಗಿಂತ ಈ ಬಾರಿ ಮಳೆಯ ಪ್ರಮಾಣ ಹೆಚ್ಚಾಗಿದ್ದು 193 ಮಿ.ಮೀ. ಮಳೆಯಾಗಿದೆ. ರಾಜ್ಯದ 24 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದೆ. ಇನ್ನುಳಿದಂತೆ 5 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಲ್ಲಿ ರಾಯಚೂರು ಜಿಲ್ಲೆಯಲ್ಲಿ ಮಾತ್ರ ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ 64 ಮಿ.ಮೀ. ಮಳೆಯಾಗಬೇಕಿತ್ತು. ಆದ್ರೆ ಕೇವಲ 38 ಮಿ.ಮೀ. ಮಳೆಯಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆರಾಯನ ಅಬ್ಬರ ಕಡಿಮೆಯಾಗಿತ್ತು. ಆದರೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹರಿದು ಬಂದ ನೀರಿನಿಂದಾಗಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಹೊಸ್ಮಠ ಸೇತುವೆ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿದ್ದು, ನೀರಿನ ಮಟ್ಟ ಹೆಚ್ಚಾಗಿದೆ. ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಭಕ್ತರಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರು ಸ್ನಾನಘಟ್ಟಕ್ಕೆ ಹೋಗಲಾಗದೆ ಮೇಲ್ಭಾಗದ ನೆರೆ ನೀರಿನಲ್ಲೇ ಸ್ನಾನ ಮಾಡಬೇಕಾಗಿದೆ. ಸ್ನಾನಘಟ್ಟದ ಹೊರಗೆ ಬಂದಂತಹ ನೀರಿನಲ್ಲೇ ಭಕ್ತಾಧಿಗಳು ತೀರ್ಥಸ್ನಾನ ಮಾಡುತ್ತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾದಲ್ಲಿ ನೀರಿನ ಮಟ್ಟ ಹೆಚ್ಚಿದ್ದು ಈ ಮಳೆಗಾಲದಲ್ಲಿ ಮೊದಲ ಬಾರಿಗೆ ಮೈದುಂಬಿಕೊಂಡು ಹರಿಯುತ್ತಿದೆ.
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಇದ್ದ ವರುಣನ ಆರ್ಭಟ ಇಂದು ಸ್ವಲ್ಪಮಟ್ಟಿಗೆ ಕಮ್ಮಿಯಾಗಿದೆ. ಜಿಲ್ಲೆಯ ಕರಾವಳಿ ಭಾಗವಾದ ಕಾರವಾರ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ಬಿಸಿಲು ಮಳೆ ಕಣ್ಣಾಮುಚ್ಚಾಲೆ ಆಡುತ್ತಿತ್ತು. ಇನ್ನು ಮಲೆನಾಡಿನ ಭಾಗವಾದ ಜೋಯಿಡಾ, ಹಳಿಯಾಳದಲ್ಲಿ ಮಳೆಯಾಗುತ್ತಿದ್ದರೆ ಶಿರಸಿ, ಸಿದ್ದಾಪುರ, ಮುಂಡಗೋಡು ಭಾಗದಲ್ಲಿ ವರುಣ ಸ್ವಲ್ಪ ಮಟ್ಟಿಗೆ ಬಿಡುವು ನೀಡಿದ್ದ. ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಲ್ಲಿ 376.8 ಮಿಲಿಮೀಟರ್ ಮಳೆಯಾಗಿದೆ. ಇದರಲ್ಲಿ ಭಟ್ಕಳ- 24.2 ಮಿಮೀ, ಹೊನ್ನಾವರ-3.00 ಮಿಮೀ, ಕುಮಟಾ-0.6 ಮಿಮೀ, ಕಾರವಾರ- 1.4 ಮಿಮೀ, ಶಿರಸಿ- 52.0 ಮಿಮೀ, ಸಿದ್ದಾಪುರ – 75.2 ಮಿಮೀ, ಮುಂಡಗೋಡು – 10.2ಮಿಮೀ, ಹಳಿಯಾಳ- 82.4, ಅಂಕೋಲ – 12.4, ಜೋಯಿಡಾ-52.0, ಯಲ್ಲಾಪುರದಲ್ಲಿ 63.4 ಮಿಲಿಮೀಟರ್ ಮಳೆಯಾಗಿದೆ.
ಹಾಸನ: ಹಾಸನ ಜಿಲ್ಲೆಯಲ್ಲೂ ಮಳೆ ಆರ್ಭಟಿಸುತ್ತಿದ್ದು ಒಂದೆಡೆ ಹಾನಿ ಜೊತೆಗೆ ಮತ್ತೊಂದೆಡೆ ಗುಡ್ಡ ಕುಸಿತದಿಂದಾಗಿ ಹಾಸನ-ಬೆಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಇಂದು ಮಧ್ಯಾಹ್ನ ಯಶವಂತಪುರದಿಂದ ಕಾರವಾರಕ್ಕೆ ಹೊರಟಿದ್ದ ರೈಲು ಹಾಸನದಲ್ಲೇ ನಿಂತಿದ್ದರಿಂದ ಸಾವಿರಾರು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಸಂಜೆ ವೇಳೆಗೆ ದುರಸ್ತಿ ಕಾರ್ಯ ಮುಗಿಯುವ ನಿರೀಕ್ಷೆ ಇದ್ದರೂ, ಮಳೆಯ ಆರ್ಭಟ ಹಾಗೂ ಬೆಳಕಿನ ಅಭಾವದಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ನಾಳೆ ಬೆಳಗ್ಗೆ ದುರಸ್ತಿ ಕಾರ್ಯ ಮುಂದುವರೆಸೋದಾಗಿ ಅಧಿಕಾರಿಗಳು ಹೇಳಿದ್ದಾರೆ. ಮಳೆ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಇನ್ನೊಂದೆಡೆ ಜೋರು ಮಳೆಯಿಂದ ಹೇಮಾವತಿ ಒಳ ಹರಿವು ಗಣನೀಯವಾಗಿ ಏರಿಕೆಯಾಗಿರುವುದು ಅಪಾರ ಮಂದಿಯಲ್ಲಿ ಹರ್ಷ ತರಿಸಿದೆ.
ಮಳೆಯಿಂದಾಗಿ ಸಕಲೇಶಪುರ ತಾಲೂಕು ಯಡಕುಮೇರಿ-ಕರಗರಹಳ್ಳಿ ನಡುವೆ ನಾಲ್ಕು ಕಡೆ ಗುಡ್ಡ ಕುಸಿದಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ರೈಲು ಸಂಪರ್ಕ ಕಡಿತಗೊಂಡಿರುವುದರಿಂದ ಯಶವಂತಪುರದಿಂದ ಕಾರವಾರಕ್ಕೆ ಹೋಗುತ್ತಿದ್ದ ರೈಲು ಹಾಸನ ರೈಲ್ವೆ ನಿಲ್ದಾಣದಲ್ಲೇ ನಿಂತಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಡಬೇಕಾಯಿತು. ಕೂಡಲೇ ಎಚ್ಚೆತ್ತ ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿ ರೈಲ್ವೆ ಟಿಕೆಟ್ ಹಣವನ್ನು ಮರುಪಾವತಿ ಮಾಡಿ, ಸಾರಿಗೆ ಬಸ್ ಮೂಲಕ ಪ್ರಯಾಣಿಕರನ್ನು ಕಳಿಸಿಕೊಟ್ಟರು.
ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯಲ್ಲಿ ಭಾಗಮಂಡಲಕ್ಕಿಂತಲೂ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನದಿ ಹೇಮಾವತಿಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮಳೆಗೆ ಸಕಲೇಶಪುರ ತಾಲೂಕಿನ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹಾನುಬಾಳು ಸೇತುವೆ ಮುಳುಗಡೆಯಾಗಿದೆ. ಹೊಳೆನರಸೀಪುರ ಪಟ್ಟಣದಲ್ಲಿ ಮಳೆಯಿಂದಾಗಿ ರಸ್ತೆ ಗುಂಡಿ ಬಿದ್ದಿದ್ದರಿಂದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಾಳೆ ಮಂಡಿಗೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.