Tag: ಕರ್ನಲ್ ಸೋಫಿಯಾ ಖುರೇಷಿ

  • ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR

    ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR

    ಬೆಳಗಾವಿ: `ಆಪರೇಷನ್ ಸಿಂಧೂರ’ದ (Operation Sindoor) ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi) ಪತಿ ಮನೆ ಮೇಲೆ ಆರ್‌ಎಸ್‌ಎಸ್ (RSS) ದಾಳಿ ನಡೆಸಿದೆ ಎಂಬ ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಇದೀಗ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

    ವದಂತಿ ಹಬ್ಬಿಸಿದ್ದ ಅನೀಸ್ ಉದ್ದೀನ್ ಮೇಲೆ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರ ಸೂಚನೆ ಮೇರೆಗೆ ಬಿಎನ್‌ಎಸ್ ಕಾಯ್ದೆಯಡಿ 353(2), 192 ಸೆಕ್ಷನ್ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಪ್ರಧಾನಿ ಮೋದಿ, ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್

    ಈ ಕುರಿತು ಬುಧವಾರ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಮಾಧ್ಯಮದವರೊಂದಿಗೆ ಮಾತನಾಡಿ, ಎಕ್ಸ್ ಖಾತೆಯಲ್ಲಿ ಕರ್ನಲ್ ಸೋಫಿಯಾ ಪತಿ ಮನೆಯ ಮೇಲೆ ಆರ್‌ಎಸ್‌ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ, ಮನೆ ದ್ವಂಸ ಮಾಡಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕಲಾಗಿತ್ತು. ಅನೀಸ್ ಉದ್ದಿನ್ ಎಂಬಾತ ಎಕ್ಸ್ ಖಾತೆಯಲ್ಲಿ ಸುಳ್ಳು ಸುದ್ದಿ ಹಾಕಿಕೊಂಡಿದ್ದ ಎಂದು ಹೇಳಿದ್ದರು.

    ಪೋಸ್ಟ್‌ನಲ್ಲಿ ಕರ್ನಲ್ ಸೋಫಿಯಾ ಅವರ ಫೋಟೋ ಹಾಗೂ ಮನೆಯನ್ನು ಧ್ವಂಸ ಮಾಡಿರುವ ಯಾವುದೋ ಒಂದು ಹಳೆಯ ಫೋಟೋವನ್ನು ಹಾಕಿ ಹಂಚಿಕೊಳ್ಳಲಾಗಿತ್ತು. ಈ ವಿಚಾರವಾಗಿ ಜಿಲ್ಲಾ ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಟೀಂ ನಮ್ಮ ಗಮನಕ್ಕೆ ತಂದಿತ್ತು. ನಾನು ಅದಕ್ಕೆ ಇದು ಸುಳ್ಳು ಸುದ್ದಿ ಎಂದು ಕಾಮೆಂಟ್ ಮಾಡಿ, ತಕ್ಷಣವೇ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿದ್ದೆ. ಕೂಡಲೇ ನಾವು ಸೋಫಿಯಾ ಖುರೇಷಿ ಅವರ ಪತಿ ಮನೆಗೆ ನಮ್ಮ ಪೊಲೀಸರನ್ನು ಕಳಿಸಿದ್ದೆವು, ಯಾವುದೇ ದಾಳಿ ನಡೆದಿಲ್ಲ ಎನ್ನುವುದು ಗೊತ್ತಾಗಿದೆ. ಆದರೂ ಸುರಕ್ಷತಾ ದೃಷ್ಟಿಯಿಂದ ಪೊಲೀಸರು ಸೋಫಿಯಾ ಪತಿ ಮನೆಗೆ ಭದ್ರತೆ ಒದಗಿಸಲಾಗಿದೆ ಎಂದು ತಿಳಿಸಿದ್ದರು.

    ಪೋಸ್ಟ್ ಮಾಡಿದ ವ್ಯಕ್ತಿ ಕೊಲಂಬಿಯಾ ಮೂಲದವನು ಎಂದು ಗೊತ್ತಾಗಿದೆ. ಹೊರದೇಶದವನು ಎಂದು ಗೊತ್ತಾಗಿದ್ದಕ್ಕೆ ಎಫ್‌ಐಆರ್ ಮಾಡಿಕೊಂಡಿಲ್ಲ. ಸದ್ಯ ಎಕ್ಸ್ ಲೀಗಲ್ ಟೀಂನಿಂದ ಮಾಹಿತಿ ಪಡೆಯುತ್ತಿದ್ದೇವೆ. ಒಂದು ವೇಳೆ ಆತ ಭಾರತದವನು ಎಂದು ಗೊತ್ತಾದರೆ ಎಫ್‌ಐಆರ್ ಮಾಡಿಕೊಳ್ಳುತ್ತೇವೆ. ಅವಶ್ಯಕತೆ ಬಿದ್ದರೆ ಅವನನ್ನು ಅರೆಸ್ಟ್ ಕೂಡ ಮಾಡುತ್ತೇವೆ. ಒಂದು ಕಮ್ಯೂನಿಟಿಯಿಂದ ಮತ್ತೊಂದು ಕಮ್ಯುನಿಟಿಗೆ ದ್ವೇಷ ಬಿತ್ತುವ ಕೆಲಸ ಮಾಡಬಾರದು. ಹಾಗೆ ಮಾಡಿದರೆ ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ ಎಂದಿದ್ದರು.ಇದನ್ನೂ ಓದಿ: ಬಿಬಿಎಂಪಿ ರದ್ದು, ಇನ್ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

  • ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

    ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

    ಬೆಳಗಾವಿ: `ಆಪರೇಷನ್ ಸಿಂಧೂರ’ದ (Operation Sindoor) ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ (Colonel Sofia Qureshi) ಪತಿ ಮನೆ ಮೇಲೆ ಆರ್‌ಎಸ್‌ಎಸ್ (RSS) ದಾಳಿ ನಡೆಸಿದೆ ಎಂಬ ವದಂತಿ ಬೆನ್ನಲ್ಲೇ ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ್ (Dr. Bheemashankar S. Guled) ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಮಾಧ್ಯಮದವರೊಂದಿಗೆ ಮಾತನಾಡಿ, ಎಕ್ಸ್ (X) ಖಾತೆಯಲ್ಲಿ ಕರ್ನಲ್ ಸೋಫಿಯಾ ಪತಿ ಮನೆಯ ಮೇಲೆ ಆರ್‌ಎಸ್‌ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ, ಮನೆ ದ್ವಂಸ ಮಾಡಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕಲಾಗಿತ್ತು. ಅನೀಸ್ ಉದ್ದಿನ್ ಎಂಬಾತ ಎಕ್ಸ್ ಖಾತೆಯಲ್ಲಿ ಸುಳ್ಳು ಸುದ್ದಿ ಹಾಕಿಕೊಂಡಿದ್ದ. ಪೋಸ್ಟ್ನಲ್ಲಿ ಕರ್ನಲ್ ಸೋಫಿಯಾ ಅವರ ಫೋಟೋ ಹಾಗೂ ಮನೆಯನ್ನು ಧ್ವಂಸ ಮಾಡಿರುವ ಯಾವುದೋ ಒಂದು ಹಳೆಯ ಫೋಟೋವನ್ನು ಹಾಕಿ ಹಂಚಿಕೊಳ್ಳಲಾಗಿತ್ತು. ಈ ವಿಚಾರವಾಗಿ ಜಿಲ್ಲಾ ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಟೀಂ ನಮ್ಮ ಗಮನಕ್ಕೆ ತಂದಿತ್ತು. ನಾನು ಅದಕ್ಕೆ ಇದು ಸುಳ್ಳು ಸುದ್ದಿ ಎಂದು ಕಾಮೆಂಟ್ ಮಾಡಿದೆ. ತಕ್ಷಣ ಆ ವ್ಯಕ್ತಿ ಅದನ್ನು ಡಿಲೀಟ್ ಮಾಡಿದ್ದಾನೆ. ಕೂಡಲೇ ನಾವು ಸೋಫಿಯಾ ಖುರೇಷಿ ಅವರ ಪತಿ ಮನೆಗೆ ನಮ್ಮ ಪೊಲೀಸರನ್ನು ಕಳಿಸಿದ್ದೆವು, ಯಾವುದೇ ದಾಳಿ ನಡೆದಿಲ್ಲ ಎನ್ನುವುದು ಗೊತ್ತಾಗಿದೆ. ಆದರೂ ಸದ್ಯ ಸುರಕ್ಷತಾ ದೃಷ್ಟಿಯಿಂದ ಪೊಲೀಸರು ಸೋಫಿಯಾ ಪತಿ ಮನೆಗೆ ಭದ್ರತೆ ಒದಗಿಸಿದ್ದಾರೆ. ಜೊತೆಗೆ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಆ ವ್ಯಕ್ತಿ ಎಕ್ಸ್ ಖಾತೆಯಿಂದ ಪೋಸ್ಟ್ ಡಿಲೀಟ್ ಮಾಡಿದ್ದಾನೆ ಎಂದು ತಿಳಿಸಿದರು.ಇದನ್ನು ಓದಿ: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು – ಪಾಕ್ ಬಂಧಿಸಿದ್ದ ಬಿಎಸ್‌ಎಫ್ ಯೋಧ ತಾಯ್ನಾಡಿಗೆ ವಾಪಸ್

    ಪೋಸ್ಟ್ ಮಾಡಿದ ವ್ಯಕ್ತಿ ಕೆನಡಾ ಮೂಲದವನು ಎಂದು ಗೊತ್ತಾಗಿದೆ. ಹೊರದೇಶದವನು ಎಂದು ಗೊತ್ತಾಗಿದ್ದಕ್ಕೆ ಎಫ್‌ಐಆರ್ (FIR) ಮಾಡಿಕೊಂಡಿಲ್ಲ. ಎಕ್ಸ್ ಲೀಗಲ್ ಟೀಂನಿಂದ ಮಾಹಿತಿ ಪಡೆಯುತ್ತಿದ್ದೇವೆ. ಒಂದು ವೇಳೆ ಆತ ಭಾರತದವನು ಎಂದು ಗೊತ್ತಾದರೆ ಎಫ್‌ಐಆರ್ ಮಾಡಿಕೊಳ್ಳುತ್ತೇವೆ. ಅವಶ್ಯಕತೆ ಬಿದ್ದರೆ ಅವನನ್ನು ಅರೆಸ್ಟ್ ಕೂಡ ಮಾಡುತ್ತೇವೆ. ಒಂದು ಕಮ್ಯೂನಿಟಿಯಿಂದ ಮತ್ತೊಂದು ಕಮ್ಯುನಿಟಿಗೆ ದ್ವೇಷ ಬಿತ್ತುವ ಕೆಲಸ ಮಾಡಬಾರದು. ಹಾಗೆ ಮಾಡಿದರೆ ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ ಎಂದರು.

    ಸದ್ಯ ಸೈಬರ್ ಪೊಲೀಸ್ ಠಾಣೆಯ ಡಿವೈಎಸ್‌ಪಿಯವರ ನೇತೃತ್ವದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ಕಣ್ಣಿಡಲಾಗಿದೆ. ಬೀಟ್ ಹಂತದಲ್ಲೂ ಸಹ ಅದನ್ನು ಅಬ್ಸರವೇಷನ್ ಮಾಡಲಾಗುತ್ತಿದೆ. ಕಿಡಿಗೇಡಿಗಳು ಗುಂಪು ಘರ್ಷಣೆಗೆ ಕಾರಣವಾದರೆ ಅಂತಹವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಇದನ್ನು ಓದಿ: ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

  • ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

    ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

    – ಪಾಕ್‌ನ ಎಲ್ಲಾ ಮಿಸೈಲ್ ನಾಶ ಮಾಡಿದ್ದೇವೆ

    ನವದೆಹಲಿ: ಭಾರತದ 36 ಕಡೆ 400 ಮಿಸೈಲ್ ಬಳಸಿಕೊಂಡು (Missile Attack) ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ( Colonel Sofiya Qureshi) ಅಧಿಕೃತ ಮಾಹಿತಿ ನೀಡಿದ್ದಾರೆ.

    ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ರಾತ್ರಿ 8ರಿಂದ 9 ಗಂಟೆಗೆ ಆರಂಭವಾಗಿ ಮಧ್ಯರಾತ್ರಿವರೆಗೂ ಭಾರತದ ಮೇಲೆ ಪಾಕಿಸ್ತಾನ ನಿರಂತರ ದಾಳಿ ನಡೆಸಿದೆ. 36 ಕಡೆ 300ರಿಂದ 400 ಪಾಕ್ ಡ್ರೋನ್ ಮಿಸೈಲ್ ದಾಳಿ ಮಾಡಿದೆ. ಪಾಕ್‌ನ ಎಲ್ಲಾ ಮಿಸೈಲ್‌ಗಳನ್ನು ನಾಶ ಮಾಡಲಾಗಿದೆ. ಅಲ್ಲದೇ ಗುಂಡಿನ ದಾಳಿಯನ್ನೂ ಮಾಡಿದೆ. ಪಾಕಿಸ್ತಾನ ಎಲ್‌ಒಸಿಯಲ್ಲಿ ಗುಂಡಿನ ದಾಳಿ ಮಾಡಿದೆ. ಪಂಜಾಬ್, ಭಟಿಂಡಾ ಸೇನಾ ನೆಲೆ ಮೇಲೆ ಪಾಕ್ ದಾಳಿಗೆ ಯತ್ನಿಸಿದೆ ಎಂದರು. ಇದನ್ನೂ ಓದಿ: ಪಾಕ್‌ನಿಂದ ಶೆಲ್ ದಾಳಿ – ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಜಮ್ಮು ಸಿಎಂ

    ಪಾಕಿಸ್ತಾನ ತನ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಸ್ಥಗಿತ ಮಾಡಿಲ್ಲ. ಪಾಕಿಸ್ತಾನ, ಭಾರತದ ಏರ್ ಸ್ಟೇಷನ್‌ಗಳ ಮೇಲೆ ದಾಳಿ ಮಾಡಲು ಯತ್ನಿಸಿದೆ. ತನ್ನ ನಾಗರಿಕ ವಿಮಾನ ಬಳಸಿಕೊಂಡು ಬೇಜವಾಬ್ದಾರಿತನ ತೋರಿದೆ. ಈ ಮೂಲಕ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನ ಉಲ್ಲಘಂನೆ ಮಾಡಿದೆ. ಆದರೆ ಭಾರತ ನಾಗರಿಕರಿಗೆ ಧಕ್ಕೆಯಾಗದಂತೆ ಪ್ರತಿದಾಳಿ ಮಾಡಿದೆ. ಈ ಮೂಲಕ ಭಾರತ ಅಂತಾರಾಷ್ಟ್ರೀಯ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅಗತ್ಯ ಬಿದ್ದರೆ ಮದರಸಾದ ಮಕ್ಕಳನ್ನು ಯುದ್ಧಕ್ಕೆ ಬಳಸಿಕೊಳ್ತೀವಿ: ಪಾಕ್‌ ರಕ್ಷಣಾ ಸಚಿವ

    ಟರ್ಕಿಯ ಡ್ರೋನ್‌ಗಳನ್ನು ಬಳಸಿಕೊಂಡು ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸಿದೆ. ಕೈನೆಟಿಕ್ ಮತ್ತು ನಾನ್ ಕೈನೆಟಿಕ್ ಎರಡೂ ರೀತಿಯಲ್ಲೂ ಪಾಕ್ ಡ್ರೋನ್‌ಗಳನ್ನು ನಾಶಪಡಿಸಲಾಗಿದೆ. ಡ್ರೋನ್‌ನ ಅವಶೇಷಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ವರದಿಯಲ್ಲಿ ಇದು ಟರ್ಕಿ ನಿರ್ಮಿತ ಡ್ರೋನ್‌ಗಳು ಎಂದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಾರತ-ಪಾಕ್ ಯುದ್ಧ ಭೀತಿ – ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ