Tag: ಕರ್ನಾಟ

  • ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ – ದಕ್ಷಿಣ ಕನ್ನಡ, ಕೊಡಗಿನಲ್ಲೂ ವರ್ಷಧಾರೆ!

    ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ – ದಕ್ಷಿಣ ಕನ್ನಡ, ಕೊಡಗಿನಲ್ಲೂ ವರ್ಷಧಾರೆ!

    ಬೆಂಗಳೂರು: ಉತ್ತರ ಕನ್ನಡದಲ್ಲಿ (UttaraKannada) ವರುಣಾರ್ಭಟಕ್ಕೆ ಜನರು ನಲುಗಿ ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರವಾರ (Karwar) ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ರಸ್ತೆ ಜಲಾವೃತವಾಗಿದೆ. ನಿರೀಕ್ಷೆಗೂ ಮೀರಿ ಮಳೆ (Heavy Rain) ಬಂದಿದ್ರಿಂದ ಸಂಕಷ್ಟದಲ್ಲಿದ್ದ 5 ಮನೆಯಲ್ಲಿನ ಜನರನ್ನು ಗ್ರಾಮಸ್ಥರು ಬೋಟ್ ಮೂಲಕ ರಕ್ಷಿಸಲಾಗಿದೆ.

    ಇಡೂರು ಗ್ರಾಮದಲ್ಲಿ 10ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ನೂರಾರು ಹೆಕ್ಟೇರ್ ಕೃಷಿ ಭೂಮಿ ನೀರಲ್ಲಿ ಮುಳುಗಿ ಹೋಗಿದೆ. ಜಿಲ್ಲಾಡಳಿತದ ರಕ್ಷಣಾ ತಂಡ ಬಾರದ ಹಿನ್ನೆಲೆಯಲ್ಲಿ ಮಕ್ಕಳು, ಮಹಿಳೆಯರನ್ನ ಬೋಟ್ ಮೂಲಕ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕದಂಬ ನೌಕಾನೆಲೆಯ ಪಕ್ಕದಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್‌. ಅಶೋಕ್‌ ಬೆಂಬಲ!  

    ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಮನೆ, ರಸ್ತೆಗಳು ಜಲಾವೃತವಾಗಿದೆ. ಕುಮಟಾ ತಾಲೂಕಿನ ಗೋಕರ್ಣದ ತಾರಮಕ್ಕಿ ಸರ್ಕಾರಿ ಶಾಲೆ ಬಳಿ ಗುಡ್ಡ ಕುಸಿತಗೊಂಡಿದೆ. ರಸ್ತೆಯಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸ್ಥಳೀಯ ಆಡಳಿತದಿಂದ ಮಣ್ಣು ತೆರವು ಕಾರ್ಯ ಮುಂದುವರಿದಿದೆ. ಅಂಕೋಲ ತಾಲೂಕಿನ ಗುಳಿಹಳ್ಳ ತುಂಬಿ ಹೊಸದೇವನ ಫಾಲ್ಸ್‌ಗೆ ಜೀವಕಳೆ ಬಂದಿದ್ದು ಪ್ರವಾಸಿಗರನ್ನು ಸೆಳೆಯುತ್ತಿದೆ. ಈ ಮಧ್ಯೆ, ರಾಜ್ಯದಲ್ಲಿ ಮತ್ತೆ 7 ದಿನ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಅನುಮಾನಸ್ಪದ ಸಾವು – ಪೋಷಕರಿಂದ ಕೊಲೆ ಆರೋಪ!

    ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ:
    ಪಶ್ಚಿಮ ಘಟ್ಟಗಳಲ್ಲೂ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಜೀವ ನದಿಗಳು ತುಂಬಿ ಹರಿಯುತ್ತಿದೆ. ಬಂಟ್ವಾಳದ ಪಾಣೆ ಮಂಗಳೂರು ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಸದ್ಯ ನದಿಯ ನೀರಿನ ಮಟ್ಟ 6.1 ಮೀಟರ್ ಏರಿಕೆಯಾಗಿದೆ. ಇದು ಈ ವರ್ಷದ ಗರಿಷ್ಠ ಪ್ರಮಾಣವಾಗಿದೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

    ನೀರಿನ ಮಟ್ಟ 7.5 ಮೀಟರ್ ಏರಿದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಇದೆ. ನೇತ್ರಾವತಿ ನದಿಯ ಅಪಾಯದ ಮಟ್ಟ 8 ಮೀಟರ್ ಆಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದ ಶಾಲೆಯ ಹಂಚುಗಳು ಹಾರಿ ಹೋಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸ್ತಿದ್ದಾನೆ. ಭಾರಿ ಗಾಳಿ ಸಹಿತ ಮಳೆಗೆ ಮಡಿಕೇರಿ ನಗರದ ಎಫ್‌ಎಂಸಿ ಕಾಲೇಜು ಹಿಂಭಾಗದಲ್ಲಿ ಹಲವು ವಿದ್ಯುತ್ ಕಂಬಗಳು ಧರೆಗುರುಳಿದೆ.

    ಮಡಿಕೇರಿ – ಗಾಳೀಬೀಡು ನಡುವಿನ ರಸ್ತೆ ಸಂಪರ್ಕ ಕಟ್ ಆಗಿದೆ. ಶಿವಮೊಗ್ಗದ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತಗೊಂಡಿದೆ. ಹೀಗಾಗಿ ಭಾರೀ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧ ಮಾಡಿದೆ. ಸಾಗರದ-ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಬಿದ್ದಿದ್ದು. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

  • ಉಮೇಶ್‌ ಕತ್ತಿ ಬಿಪಿಎಲ್‌ ಕಾರ್ಡ್‌ ನಿಯಮ ಹೇಳಿಕೆಗೆ ಬಿಜೆಪಿಯಲ್ಲೇ ಅಪಸ್ವರ

    ಉಮೇಶ್‌ ಕತ್ತಿ ಬಿಪಿಎಲ್‌ ಕಾರ್ಡ್‌ ನಿಯಮ ಹೇಳಿಕೆಗೆ ಬಿಜೆಪಿಯಲ್ಲೇ ಅಪಸ್ವರ

    ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಉಮೇಶ್‌ ಕತ್ತಿ ಅವರು ಬಿಪಿಎಲ್ ಕಾರ್ಡ್‌ ವಿಚಾರವಾಗಿ ಮಾತನಾಡಿರುವ ಹೇಳಿಕೆಯ ಬಗ್ಗೆ ರಾಜ್ಯ ಬಿಜೆಪಿಯಲ್ಲೇ ಅಪಸ್ವರ ಕೇಳಿ ಬಂದಿದೆ.

    ಯಡಿಯೂರಪ್ಪ ಅವರ ಕ್ಯಾಬಿನೆಟ್ ಸಚಿವರಲ್ಲೇ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಕ್ಯಾಬಿನೆಟ್‌ನಲ್ಲಿ ಎಲ್ಲಿಯೂ ಚರ್ಚೆ ನಡೆದಿಲ್ಲ. ಹೀಗಿದ್ದರೂ ಈ ರೀತಿ ಹೇಳಿಕೆ ನೀಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಬೈಕ್‌, ಟಿವಿ, ಫ್ರಿಡ್ಜ್‌ ಇದ್ದರೆ ಬಿಪಿಎಲ್ ಪಡಿತರ ರದ್ದು – ಉಮೇಶ್‌ ಕತ್ತಿ

     

    ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗದ ಹೊರತು ಈ ನಿಯಮ ಜಾರಿಯಾಗುವುದಿಲ್ಲ. ಉಮೇಶ್ ಕತ್ತಿಯ ನಿಯಮಕ್ಕೆ ಕ್ಯಾಬಿನೆಟ್ ನಲ್ಲಿ ಬೆಂಬಲ ಸಿಗುವ ಸಾಧ್ಯತೆ ಕಡಿಮೆ. ಇನ್ನೆರಡು ದಿನಗಳಲ್ಲಿ ಉಮೇಶ್ ಕತ್ತಿ ಈ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.

    ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸಭೆಯನ್ನುಉಮೇಶ್ ಕತ್ತಿ‌ ಕರೆದಿದ್ದಾರೆ. ಬಳಿಕ ಮಹತ್ವದ ಸುದ್ದಿಗೋಷ್ಠಿ ನಡೆಸಿ ವಿವರ ನೀಡುವ ಸಾಧ್ಯತೆಯಿದೆ.

    ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್‌ ಕತ್ತಿ, 5 ಎಕ್ರೆಗಿಂತದ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್‌, ಟಿವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಇವುಗಳಲ್ಲಿ ಯಾವುದಾದರು ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದವರೆಗೆ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದರು.

    ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಅವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

    ಉಮೇಶ್‌ ಕತ್ತಿ ಹೇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್‌ ಮಾಡಿ ತಿಳಿಸಿ

  • ರಾಜರಾಜೇಶ್ವರಿ ನಗರದಲ್ಲಿ ಕುಸುಮಾಗೆ ಸೋಲು – ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು?

    ರಾಜರಾಜೇಶ್ವರಿ ನಗರದಲ್ಲಿ ಕುಸುಮಾಗೆ ಸೋಲು – ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು?

    ಬೆಂಗಳೂರು: ಮೊದಲ ಬಾರಿಗೆ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಕುಸುಮಾ ಅವರಿಗೆ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಸೋಲಾಗಿದೆ. ಬಿಜೆಪಿಯ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

    ಕಾಂಗ್ರೆಸ್ ಸೋತಿದ್ದು ಎಲ್ಲಿ?
    ಕುಸುಮಾ ಹೊಸ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಅಷ್ಟೇ ಅಲ್ಲದೇ ಕ್ಷೇತ್ರ ಪರಿಚಯ ಇರಲಿಲ್ಲ. ಒಕ್ಕಲಿಗ ಜಾತಿ ಸಮೀಕರಣದ ನಿರೀಕ್ಷೆ ಮಟ್ಟದಲ್ಲಿ ಕೈ ಹಿಡಿಯದಿರುವುದು.

    ಡಿಕೆ ಸಹೋದರರು ಮಾತ್ರ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡು, ಉಳಿದವರು ನಾಮಕಾವಸ್ಥೆ ಪ್ರಚಾರ ಮಾಡಿದ್ದರು. ಜಾತಿ ರಾಜಕಾರಣವನ್ನೇ ಹೆಚ್ಚಾಗಿ ಬಿಂಬಿಸಿ ಪ್ರಚಾರ ಮಾಡಿದ್ದರು.

    ಮುನಿರತ್ನ ಅಭಿವೃದ್ಧಿ ಅಸ್ತ್ರಕ್ಕೆ ಕುಸುಮಾ ಬಳಿ ಅನುಕಂಪದ ಪ್ರತ್ಯಾಸ್ತ್ರ ಕೆಲಸ ಮಾಡಲಿಲ್ಲ. ಮುನಿರತ್ನ ಪಕ್ಷ ತೊರೆಯುತ್ತಿದ್ದಂತೆ ಕಾರ್ಯಕರ್ತರು, ಕಾರ್ಪೋರೇಟರ್ ಗಳು ಜೊತೆಯಲ್ಲೇ ಹೋಗಿದ್ದು ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆ ಆಯಿತು.

    ಸ್ಥಳಿಯರಿಗಿಂತ ಹೆಚ್ಚಾಗಿ ಹೊರಗಿನವರನ್ನೆ ಕರೆತಂದು ಪ್ರಚಾರ ನಡೆಸಿದ್ದಾರೆ ಎಂಬ ಬಿಜೆಪಿಯವರ ಆರೋಪ. ಬಿಜೆಪಿಯಂತೆ ಕೇಡರ್ ಬೇಸ್ ಸ್ಟ್ರಾಂಗ್ ಇಲ್ಲದೆ ಪರದಾಡಿದ್ದರಿಂದ ಸೋಲಾಗಿದೆ.

     

     

     

  • ಟಾಲಿವುಡ್ ನಲ್ಲಿ ಯೋಧಳಾಗಿ ಸನ್ನಿ ಲಿಯೋನ್ ಮಿಂಚಿಂಗ್!

    ಟಾಲಿವುಡ್ ನಲ್ಲಿ ಯೋಧಳಾಗಿ ಸನ್ನಿ ಲಿಯೋನ್ ಮಿಂಚಿಂಗ್!

    ಹೈದರಾಬಾದ್: ಸನ್ನಿ ಲಿಯೋನ್ ಈಗ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದು, ಯೋಧಳಾಗಿ ವಿರೋಧಿ ಪಡೆಯ ವಿರುದ್ಧ ಹೋರಾಟ ಮಾಡಲಿದ್ದಾರೆ.

    ಹೌದು. ಈ ವರ್ಷ ಸನ್ನಿಲಿಯೋನ್ ತೆಲುಗು ಭಾಷೆಯ `ವೀರಮಾದೇವಿ’ ಸಿನಿಮಾವೊಂದರಲ್ಲಿ ಅಭಿನಯಿಸಲಿದ್ದಾರೆ. ತೆಲುಗು ಭಾಷೆಯಲ್ಲಿ ಇದು ಇವರ ಮೊದಲ ಚಿತ್ರವಾಗಿದ್ದು, ಇದರಲ್ಲಿ ಸನ್ನಿ ಯೋಧಳಾಗಿ ಹೋರಾಟ ಮಾಡಲಿದ್ದಾರೆ. ಒಟ್ಟಿನಲ್ಲಿ ಈ ಚಿತ್ರದಲ್ಲಿ ಸನ್ನಿ ಪಾತ್ರ ಅದ್ಭುತವಾಗಿದ್ದು, ಪ್ರತಿಯೊಬ್ಬರನ್ನು ತಲೆಬಾಗಿಸುವಂತೆ ಮಾಡುತ್ತದೆ.

    ಸನ್ನಿ ಈಗಾಗಲೇ ಈ ಚಿತ್ರಕ್ಕೆ ಸಹಿ ಮಾಡಿದ್ದು, ಸದ್ಯ ಚೆನ್ನೈ ನಲ್ಲಿ ಈ ಚಿತ್ರ ಚಿತ್ರೀಕರಣ ನಡೆಯುತ್ತಿದೆ. ವಿಸಿ ವಾಡಿವುದೈಯಾನ್ ಈ ಚಿತ್ರದ ನಿರ್ದೇಶಕರಾಗಿದ್ದಾರೆ. ಈ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬುದರ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಆದ್ರೆ ಸಿನಿಮಾ ನಿರ್ಮಾಪಕರು ಈ ಚಿತ್ರತಮಿಳು ಹಾಗೂ ಮಲೆಯಾಳಂನಲ್ಲೂ ಬಿಡುಗಡೆಯಾಗಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಒಟ್ಟಿನಲ್ಲಿ ತೆಲುಗು ಭಾಷೆಯಲ್ಲಿ ಮೊದಲ ಬಾರಿಗೆ ಅಭಿನಯಿಸುತ್ತಿರುವ ಸನ್ನಿ ಅವರು, ಸಿನಿ ಜೀವನದಲ್ಲಿ ಒಂದಷ್ಟು ಬದಲಾವಣೆಗಳನ್ನು ಬಯಸಿದ್ದಾರೆ.

    2018ರ ಹೊಸ ವರ್ಷಾಚರಣೆಗೆ ನಟಿ ಸನ್ನಿ ಲಿಯೋನ್ ಅವರನ್ನು ಬೆಂಗಳೂರಿಗೆ ಆಹ್ವಾನ ಮಾಡಲಾಗಿತ್ತು. ಆದ್ರೆ ಇದಕ್ಕೆ ಕನ್ನಡ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಹೊಸ ವರ್ಷದ ಹಿನ್ನೆಲೆಯಲ್ಲಿ ಭದ್ರತೆಯ ಕಾರಣ ನೀಡಿ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನೀಡಿರಲಿಲ್ಲ.

    ಇದರಿಂದ ಬೇಸರಗೊಂಡು ಟ್ವೀಟ್ ಮಾಡಿದ್ದ ಸನ್ನಿ, ನನ್ನಿಂದ ತೊಂದರೆಯಾಗುತ್ತಿದೆ ಅಂತಂದ್ರೆ ಬರಲ್ಲ. ನನಗಿಂತಲೂ ನನ್ನ ಅಭಿಮಾನಿಗಳ ರಕ್ಷಣೆ ಮುಖ್ಯ. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಬರಲ್ಲ ಅಂತ ಟ್ವೀಟ್ ನಲ್ಲಿ ಹೇಳಿದ್ದರು.