Tag: ಕರ್ನಾಟಕ ಅಧಿವೇಶನ

  • ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ – ಕೃಷ್ಣಬೈರೇಗೌಡ

    ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ – ಕೃಷ್ಣಬೈರೇಗೌಡ

    ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ (Disabled Monthly Pension) ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸತೀಶ್, ವಿಕಲಚೇತನರ ಪಿಂಚಣಿ ಹೆಚ್ಚಳ ಮಾಡುವಂತೆ ಒತ್ತಾಯ ಮಾಡಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಮಾಸಿಕ ಪಿಂಚಣಿ ಹೆಚ್ಚಳ ಸಾಧ್ಯವಿಲ್ಲ ಎಂದು ನುಡಿದರು. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ

    ಸಾಮಾಜಿಕ ಭದ್ರತೆ ಯೋಜನೆ (Social Security Scheme) ಅಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ. ಹಣ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

    ಮುಂದುವರಿದು, ಕೇಂದ್ರ ಸರ್ಕಾರ 14 ವರ್ಷಗಳಿಂದ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇಂದ್ರ ಸರ್ಕಾರ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡ್ತಿದೆ. ಉಳಿದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹಣ ಕೊಡ್ತಿದೆ. ಕೇಂದ್ರ ಸರ್ಕಾರ 200-300 ರೂ ಮಾತ್ರ ಪ್ರತಿಯೊಬ್ಬರಿಗೆ ಕೊಡ್ತಿದೆ. ಆದ್ರೆ ನಮ್ಮ ಸರ್ಕಾರ 800 ರೂ, 2,000 ರೂ. ಕೊಡ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದ್ರೆ ನಾವು ಮಾಡುವ ಬಗ್ಗೆ ಪರಿಶೀಲನೆ ಮಾಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: Nepal Plane Crash; ಟೇಕಾಫ್‌ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು

  • ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ – ಅಶೋಕ್‌ ಗುಡುಗು

    ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ – ಅಶೋಕ್‌ ಗುಡುಗು

    ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki Corporation Scam) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಗುಡುಗಿದ್ದಾರೆ.

    ವಿಧಾನಸೌಧದಲ್ಲಿಂದು (Vidhana Soudha) ಮಾತನಾಡಿದ ಅವರು, ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಇಡೀ ಅಧಿವೇಶನದ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣದ ಬಗ್ಗೆ ಇಡಿ ವರದಿ ಬಿಡುಗಡೆ ಮಾಡಿದೆ. ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಮಂತ್ರಿ ಹೆಸರು ಇದೆ. ನಿಗಮದ ಅಧ್ಯಕ್ಷ ದದ್ದಲ್ ಹೆಸರೂ ಇದೆ. ಎರಡೂ ಹೆಸರು ಡೆತ್ ನೋಟ್‌ನಲ್ಲಿ ಇದೆ. ಆದ್ರೆ ಸಿಎಂ ಎರಡೂ ಪದ ಬಿಟ್ಟು, ಅವರಿಗೆ ಬೇಕಾದದ್ದನ್ನು ಓದಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಪ್ರಕರಣ ಮುಚ್ಚಿ ಹಾಕ್ತಿದ್ದಾರೆ. ಅವರಿಂದ ತನಿಖೆಗೆ ಸಹಕಾರ ಇಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮದ್ಯದ ಅಂಗಡಿಗೆ ಪರವಾನಗಿ ನೀಡಲು ಅಧಿಕಾರಿಗಳು ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದಾರೆ – ಕಾಂಗ್ರೆಸ್‌ ಸದಸ್ಯ ಬಾಂಬ್‌!

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಉಪನಾಯಕ ಬೆಲ್ಲದ್, ಜೆಡಿಎಸ್‌ ನಾಯಕ ಸುರೇಶ್ ಬಾಬು ಎಲ್ಲರೂ ಚರ್ಚೆ ಮಾಡಿದ್ದೇವೆ. ಬ್ಯಾಂಕ್ ಡೆಪಾಸಿಟ್, ಆಡಿಯೋ, ಫೋನ್‌ ಕಾಲ್ ಎಲ್ಲಾ ದಾಖಲೆ ನೀಡಿದ್ದೇವೆ. ಇದೆಲ್ಲಾ ಇದ್ದರೂ ಸಿಎಂ ಡೆತ್ ನೋಟ್ ತಿರುಚುವ ಪ್ರಯತ್ನ ಮಾಡ್ತಿದ್ದಾರೆ. ನಮಗೆ ಅವರ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೈತನಿಗೆ ಅಪಮಾನ ಪ್ರಕರಣ – ಬೆಂಗಳೂರಿನ ಜಿ.ಟಿ ಮಾಲ್ ಬಂದ್!

    ಎಸ್ಸಿ – ಎಸ್ಟಿ ಜನಾಂಗದ ಹಣ ದುರ್ಬಳಕೆ ಮಾಡಿಕೊಂಡಿದ್ದು, ಅವರಿಗೆ ದ್ರೋಹ ಬಗೆದಿದ್ದಾರೆ, ಹರಿ ಕಥೆ ಹೇಳ್ತಿದ್ದಾರೆ. ಭ್ರಷ್ಟಾಚಾರ ಆಗಿರೋದು ನಿಜ. ಯಾರು ಭಾಗಿಯಾಗಿದ್ದಾರೆ ಅಂತ ಉಲ್ಲೇಖ ಮಾಡಿಲ್ಲ. ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲ್ಲ ಅಂದಿದ್ದಾರೆ. ಪಾಪ ಆ ಜನಾಂಗದವರು ನಮಗೆ ಹಣ ಬರುತ್ತೆ ಅಂತ ಕಾಯ್ತಿದ್ದಾರೆ. ಹಾಗಾಗಿ ರಾಜೀನಾಮೆ ಕೊಡುವವರೆಗೂ ನಾವು ವಿರಮಿಸಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ತುಘಲಕ್ ಆಡಳಿತ ಇಲ್ಲ, ಸಿದ್ದರಾಮಯ್ಯ ಸರ್ಕಾರವೇ ಇರೋದು: ಬಿಜೆಪಿಗೆ ಸಿಎಂ ತಿರುಗೇಟು

  • ಬೆಂಗ್ಳೂರಿನ 50-60 ಕಿಮೀ ವ್ಯಾಪ್ತಿಯಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ಎಂ.ಬಿ ಪಾಟೀಲ್ ಘೋಷಣೆ

    ಬೆಂಗ್ಳೂರಿನ 50-60 ಕಿಮೀ ವ್ಯಾಪ್ತಿಯಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ಎಂ.ಬಿ ಪಾಟೀಲ್ ಘೋಷಣೆ

    ಬೆಂಗಳೂರು: ನಗರ ಅಥವಾ ಬೆಂಗಳೂರು ಸುತ್ತಮುತ್ತ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (International Airport) ನಿರ್ಮಾಣ ಮಾಡಲಾಗುತ್ತದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಸಚಿವ ಎಂಬಿ ಪಾಟೀಲ್ ಘೋಷಣೆ ಮಾಡಿದರು. ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ನವೀನ್ ಪ್ರಶ್ನೆಗೆ ಸಚಿವ ಎಂ.ಬಿ ಪಾಟೀಲ್ (MB Patil) ಉತ್ತರ ನೀಡಿದರು.

    ತುಮಕೂರು ಹಾಗೂ ಚಿತ್ರದುರ್ಗದ ಮಧ್ಯೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪ ಇಲ್ಲ. ಆದರೆ ಬೆಂಗಳೂರಿನಲ್ಲಿ (Bengaluru) 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಪ್ರಸ್ತಾಪ ಇದೆ. ಈಗಾಗಲೇ ಏರ್‌ಪೋರ್ಟ್‌ ನಿರ್ಮಾಣಕ್ಕೆ 7-8 ಸ್ಥಳಗಳನ್ನ ಗುರುತಿಸಲಾಗಿದೆ. ಈಗ ಇರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಕೂಲ ಅಗುವಂತೆ ಹಾಗೂ ರಾಜ್ಯದ ಜನರಿಗೆ ಅನುಕೂಲ ಆಗುವಂತೆ ಹೊಸ ಏರ್‌ಪೋರ್ಟ್‌ (Airport) ನಿರ್ಮಾಣ ಮಾಡ್ತೀವಿ. ಬೆಂಗಳೂರಿನ 50-60 ಕಿಲೋಮೀಟರ್ ಸುತ್ತಮುತ್ತ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಚಿಂತನೆ ಇದೆ ಅಂತ ತಿಳಿಸಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ 

    7-8 ಲೊಕೇಶನ್ ಗಳಲ್ಲಿ ಮೆರಿಟ್ ಆಧಾರದಲ್ಲಿ ಜಾಗ ಫೈನಲ್ ಮಾಡಿ ಏರ್‌ಪೋರ್ಟ್‌ ಮಾಡ್ತೀವಿ‌. ತುಮಕೂರು, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಏರ್‌ಪೋರ್ಟ್‌ ಮಾಡೊಕೆ ಒತ್ತಡ ಬರ್ತಿದೆ. ಬೆಂಗಳೂರು ಮತ್ತು ರಾಜ್ಯಕ್ಕೆ ಅನುಕೂಲ ಆಗೋ ರೀತಿ ಜಾಗದ ಬಗ್ಗೆ ನಿರ್ಧಾರ ನಾವು ತೆಗೆದುಕೊಳ್ಳಬೇಕು. ಈಗ ಇರುವ ಏರ್‌ಪೋರ್ಟ್‌ 2035ರ ವೇಳೆಗೆ ತನ್ನ ಸಾಮರ್ಥ್ಯದ ಪೀಕ್‌ಗೆ ಹೋಗುತ್ತದೆ‌ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: Trump Assassination Attempt | 48 ಗಂಟೆಯ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡ ಟ್ರಂಪ್‌

    ಅಷ್ಟರಲ್ಲಿ ಹೊಸ ವಿಮಾನ ನಿಲ್ದಾಣ ಮಾಡುವ ಪ್ಲ್ಯಾನ್ ನಾವು ಮಾಡಿಕೊಳ್ಳಬೇಕು. ಹೊಸ ಅಂತಾರಾಷ್ಟ್ರೀಯ ವಿಮಾನ ನಿರ್ಮಾಣ ಪ್ರಾರಂಭ ಮಾಡುವ ಬಗ್ಗೆ ಪ್ರಕ್ರಿಯೆ ಶುರು ಮಾಡಲಾಗಿದೆ. ಏರ್‌ಪೋರ್ಟ್‌ ನಿರ್ಮಾಣ ಮಾಡುವ ಏಜೆನ್ಸಿ (ಹೈಡಕ್) ಜೊತೆಗೂ ಚರ್ಚೆ ಆಗಿದೆ. ಎಲ್ಲಿ ಮಾಡಬೇಕು ಅಂತ ಮೆರಿಟ್ ಆಧಾರದಲ್ಲಿ ಚರ್ಚೆ ನಡೆಸಿ, ಕೇಂದ್ರದ ಜೊತೆಗೂ ಮಾತನಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Valmiki Scam | ಕೋಟ್ಯಂತರ ರೂ. ಬೆಲೆ ಬಾಳುವ ಐಷಾರಾಮಿ ಕಾರು ವಶಕ್ಕೆ