Tag: ಕರ್ನಾಟಕ ಆರೋಗ್ಯ ಇಲಾಖೆ

  • ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ, ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗೆ ಅನುದಾನದ ಕೊರತೆಯಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

    ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ, ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗೆ ಅನುದಾನದ ಕೊರತೆಯಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

    ಬೆಂಗಳೂರು: ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ (CT Scan) ಹಾಗೂ ಎಂಆರ್‌ಐ ಸ್ಕ್ಯಾನಿಂಗ್‌ (MRI Scan) ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ (Health Department) ಸ್ಪಷ್ಟನೆ ನೀಡಿದೆ.

    ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ.ಇದನ್ನೂ ಓದಿ: ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ – ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚನೆ

    ರಾಜ್ಯದಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳಿಗೆ ಅನುದಾನದ ಕೊರತೆಯಿದೆ ಎಂಬ ಮಾಧ್ಯಮ ವರದಿಗಳು ಆಧಾರ ರಹಿತವಾಗಿದೆ. ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳಿಗೆ ಅಗತ್ಯವಿರುವ 63.49 ಕೋಟಿ ರೂ. ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು, ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ.

    ರಾಜ್ಯದಲ್ಲಿ ಒಟ್ಟು 3 ಸಂಸ್ಥೆಗಳು ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳನ್ನು ಒದಗಿಸುತ್ತಿವೆ. ಅದರಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯು ಬಿಲ್ ಪಾವತಿಗಾಗಿ ನೀಡಿದ ದಾಖಲಾತಿಗಳಲ್ಲಿ ಮಾಹಿತಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ವಿವರಣೆ ಕೇಳಲಾಗಿದೆ. ಜೂನ್ & ಜುಲೈ 2 ತಿಂಗಳುಗಳ ಬಿಲ್ ಪಾವತಿಯಲ್ಲಿ ಮಾತ್ರವೇ ವಿಳಂಬವಾಗಿದೆ. ಉಳಿದ ಸಂಸ್ಥೆಗಳ ಬಿಲ್ ಪಾವತಿಯಲ್ಲಿ ಯಾವುದೇ ಬಾಕಿ ಇರುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

    ಇಲಾಖೆ ಕೇಳಿರುವ ಪೂರಕ ಮಾಹಿತಿಯನ್ನ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆ (Krsnaa Diagnostics) ಒದಗಿಸಿದ ತಕ್ಷಣ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಸ್ಥೆಯಿಂದ ಆಗಿರುವ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳ ವ್ಯತ್ಯಯವನ್ನು ಸರಿಪಡಿಸಲು ಬದಲಿ ಕ್ರಮವನ್ನೂ ಈಗಾಗಲೇ ಕೈಗೊಳ್ಳಲಾಗಿದೆ. ಈ ಕೂಡಲೇ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳನ್ನು ಪುನರಾರಂಭಿಸಲು ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವ್ಯತ್ಯಯ ಕಂಡುಬಂದಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯ ವಿರುದ್ಧ ಇಲಾಖೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ಮಗುವಿನ ಜನನದ ಬಗ್ಗೆ ಅನುಮಾನ – 5 ವರ್ಷದ ಮಗುವನ್ನೇ ಕೊಂದ ಪಾಪಿ ತಂದೆ!

  • ರಾಜ್ಯದಲ್ಲಿಂದು 1,191 ಮಂದಿಗೆ ಕೊರೊನಾ ಸೋಂಕು – ಎರಡು ದಿನದಲ್ಲಿ 6 ಮಂದಿ ಸಾವು

    ರಾಜ್ಯದಲ್ಲಿಂದು 1,191 ಮಂದಿಗೆ ಕೊರೊನಾ ಸೋಂಕು – ಎರಡು ದಿನದಲ್ಲಿ 6 ಮಂದಿ ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಇಳಿಕೆಯಾಗುತ್ತಿದ್ದರೂ ಸಾವಿನ ಪ್ರಕರಣ ಮಾತ್ರ ದಿನವೂ ಪತ್ತೆಯಾಗುತ್ತಿದೆ. ರಾಜ್ಯದಲ್ಲಿಂದು 1,191 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಇಂದೂ ಸಹ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 2,032 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,99,213 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 29,104 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,85,20,201 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಸುಪ್ರೀಂಕೋರ್ಟ್ ಕ್ಲಾಸ್ ಬೆನ್ನಲ್ಲೇ BDA ಆಯುಕ್ತ ರಾಜೇಶ್‌ಗೌಡ ಎತ್ತಂಗಡಿ

    ಕೋವಿಡ್‌ನಿಂದ ಇಂದು ಎರಡು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,185 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.09 ಇದೆ. 7,856 ಸಕ್ರಿಯ ಪ್ರಕರಣಗಳಿವೆ. ಇಂದು 29,104 (ರ‍್ಯಾಪಿಡ್ ಆಂಟಿಜನ್‌ 7,236, ಆರ್‌ಟಿಪಿಸಿಆರ್‌ 21,868) ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 42,928 ಮಂದಿ ರಾಜ್ಯಾದ್ಯಂತ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: BMTCಗೆ ನಷ್ಟದ ಮೇಲೆ ನಷ್ಟ- ಬೆಂಗ್ಳೂರಿನಲ್ಲಿ ವೋಲ್ವೊಗಿಂತ ಎಲೆಕ್ಟ್ರಿಕ್‌ ಬಸ್ಸುಗಳಿಗೇ ಡಿಮ್ಯಾಂಡ್

    ಬೆಂಗಳೂರು ನಗರದಲ್ಲೇ 668 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 10, ಬಾಗಲಕೋಟೆ 1, ಬಳ್ಳಾರಿ 21, ಬೆಳಗಾವಿ 16, ಬೀದರ್ 1, ಚಾಮರಾಜನಗರ 15, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 28, ಚಿತ್ರದುರ್ಗ 8, ದಕ್ಷಿಣ ಕನ್ನಡ 19, ದಾವಣಗೆರೆ 8, ಧಾರವಾಡ 12, ಗದಗ 0, ಹಾಸನ 48, ಹಾವೇರಿ 3, ಕಲಬುರಗಿ 9, ಕೊಡಗು 10, ಕೋಲಾರ 24, ಕೊಪ್ಪಳ 4, ಮಂಡ್ಯ 16, ಮೈಸೂರು 93, ರಾಯಚೂರು 18, ರಾಮನಗರ 70, ಶಿವಮೊಗ್ಗ 33, ತುಮಕೂರು 17, ಉಡುಪಿ 15, ಉತ್ತರ ಕನ್ನಡ 10, ವಿಜಯಪುರದಲ್ಲಿ 2 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ 500, ಗುಣಮುಖರು 600

    ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ 500, ಗುಣಮುಖರು 600

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 530 ಪಾಸಿಟಿವ್ ಕೇಸ್ ವರದಿಯಾಗಿದೆ. ಇಂದು ಹೊಸ ಪ್ರಕರಣಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಗುಣಮುಖರಾಗಿರುವುದರಿಂದ ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 4,928ಕ್ಕೆ (ನಿನ್ನೆ 5,035) ಇಳಿದಿದೆ.

    ಬೆಂಗಳೂರು ನಗರದಲ್ಲೇ 494 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,723ಕ್ಕೆ ಏರಿಕೆ ಕಂಡಿದೆ. ಆದರೆ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,071 ಮರಣ ಪ್ರಕರಣ ಪತ್ತೆಯಾಗಿದೆ. ಇಂದು 637 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಪಾಸಿಟಿವಿಟಿ ದರ ಶೇ.3.59 ಆಗಿದೆ.

    ಈವರೆಗೆ ರಾಜ್ಯದಲ್ಲಿ ಒಟ್ಟು 39,61,361 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,16,320 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 51,925 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

    ಒಟ್ಟು 14,753 ಸ್ಯಾಂಪಲ್ (ಆರ್‌ಟಿಪಿಸಿಆರ್ 11,759 + 2,994 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಬೆಂಗಳೂರು ನಗರ ಒಂದರಲ್ಲೇ 494 ಪ್ರಕರಣಗಳು ಪತ್ತೆಯಾಗಿದ್ದು, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ರಾಮನಗರ ಜಿಲ್ಲೆಗಳಲ್ಲಿ ತಲಾ 3 ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ, ಕಲಬುರಗಿ ಜಿಲ್ಲೆಗಳಲ್ಲಿ ತಲಾ 5 ಪ್ರಕರಣಗಳು, ಮೈಸೂರಿನಲ್ಲಿ 6, ಉಡುಪಿಯಲ್ಲಿ 2 ಹಾಗೂ ವಿಜಯಪುರ, ತುಮಕೂರು, ಶಿವಮೊಗ್ಗ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv

  • ರಾಜ್ಯದಲ್ಲಿಂದು 129 ಮಂದಿಗೆ ಕೊರೊನಾ ಸೋಂಕು – 128 ಮಂದಿ ಗುಣಮುಖ

    ರಾಜ್ಯದಲ್ಲಿಂದು 129 ಮಂದಿಗೆ ಕೊರೊನಾ ಸೋಂಕು – 128 ಮಂದಿ ಗುಣಮುಖ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಳಿತವಾಗುತ್ತಿದ್ದು, ಇಂದು ಸೋಂಕಿತರ ಸಂಖ್ಯೆ ಹಾಗೂ ಗುಣಮುಖರ ಸಂಖ್ಯೆ ಎರಡರಲ್ಲೂ ಸಮಬಲ ಸಾಧಿಸಿದೆ. ಕಳೆದ 24 ಗಂಟೆಯಲ್ಲಿ 129 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, 128 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಒಬ್ಬರೂ ಮೃತಪಟ್ಟಿಲ್ಲ ಎನ್ನುವುದು ಆರೋಗ್ಯಾಧಿಕಾರಿಗಳಲ್ಲಿ ಸಮಾಧಾನ ತರಿಸಿದೆ.

    COVID 1

    ಕೊರೊನಾ ಸೋಂಕು ಸುಧಾರಿಸುತ್ತಿರುವ ವೇಳೆ ಈ ವಾರದಲ್ಲಿ ಸೋಂಕಿನಿಂದ ಜನರು ಮೃತಪಡುತ್ತಿದ್ದಾರೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಕೊರೊನಾ ಮುನ್ನೆಚರಿಕೆ ಕ್ರಮಗಳ ಕಡೆ ಹೆಚ್ಚು ಗಮನ ಹರಿಸಿದೆ. ಇಂದು 13,542 ಜನರು ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ.

    COVID 1

    ಇಲ್ಲಿವರೆಗೂ 40,063 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ. 0.95% ಸೋಂಕು ಪ್ರಮಾಣ ಇದೆ. 1.15% ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದಲ್ಲಿ ಇಂದು 54,652 ಜನರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಒಟ್ಟು 13,542 ಸ್ಯಾಂಪಲ್ (ಆರ್‌ಟಿಪಿಸಿಆರ್ 8747, 4,795 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

    ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ ಒಂದರಲ್ಲೇ 121 ಪ್ರಕರಣಗಳು ವರದಿಯಾಗಿದ್ದು, ಮೈಸೂರು ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 2 ಹಾಗೂ ಬಾಗಲಕೋಟೆ, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿದೆ.

  • ಇಂದು 63 ಹೊಸ ಕೊರೊನಾ ಪ್ರಕರಣಗಳು-ಸೋಂಕಿತರ ಸಂಖ್ಯೆ 1458ಕ್ಕೇರಿಕೆ

    ಇಂದು 63 ಹೊಸ ಕೊರೊನಾ ಪ್ರಕರಣಗಳು-ಸೋಂಕಿತರ ಸಂಖ್ಯೆ 1458ಕ್ಕೇರಿಕೆ

    -ಆರೋಗ್ಯ ಇಲಾಖೆಯ ಅನುಮಾನದ ನಡೆ

    ಬೆಂಗಳೂರು: ಇಂದು ರಾಜ್ಯದಲ್ಲಿ 63 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆಯಾಗಿದೆ.

    ಇಷ್ಟು ದಿನ ಸೋಂಕಿತರ ವಿವರವನ್ನು ಪ್ರಕಟಿಸುತ್ತಿದ್ದ ಆರೋಗ್ಯ ಇಲಾಖೆ ಇಂದು ಕೇವಲ ಒಟ್ಟು ಸಂಖ್ಯೆಯನ್ನು ಬಹಿರಂಗಪಡಿಸಿದೆ. ಇವತ್ತು ಕೊರೊನಾದಿಂದ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1458 ಸೋಂಕಿರ ಪೈಕಿ ಇದುವರೆಗೂ 553 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 864 ಸಕ್ರಿಯ ಕೊರೊನಾ ಪ್ರಕರಣಗಳಿವೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು 4, ಮಂಡ್ಯ 8, ಕಲಬುರಗಿ 7, ಬೀದರ್ 10, ಉತ್ತರ ಕನ್ನಡ 1, ಹಾಸನ 21, ತುಮಕೂರು 4, ಯಾದಗಿರಿ ಒಂದು ಪ್ರಕರಣಗಳು ಬೆಳಕಿಗೆ ಬಂದಿದೆ. ಸೋಂಕಿತರಿಗೆ ಕೊರೊನಾ ಸೋಂಕು ಹೇಗೆ ತಗುಲಿತು ಎಂಬ ಮಾಹಿತಿಯನ್ನು ಆರೋಗ್ಯ ಇಲಾಖೆ ಮುಚ್ಚಿಟ್ಟಿದೆ. ಬಹುತೇಕ ಸೋಂಕಿತರು ಮುಂಬೈ ಮೂಲದವರಾಗಿದ್ದು, ಸರ್ಕಾರ ತನ್ನ ತಪ್ಪನ್ನು ಮರೆ ಮಾಡಲು ಈ ನಿರ್ಧಾರ ಕೈಗೊಂಡಿದೆಯಾ ಅನುಮಾನಗಳು ಮೂಡಿವೆ.