Tag: ಕರ್ನಾಟಕ ಕಾಂಗ್ರೆಸ್

  • ಫ್ರೀ ಫ್ರೀ ಫ್ರೀ; ಟಿಡಿಪಿ ಗೆದ್ದರೇ ಫ್ರೀ ಸೈಟ್‌, ಮಹಿಳೆಯರಿಗೆ ಫ್ರೀ ಬಸ್‌, 3 ಎಲ್‌ಪಿಜಿ ಸಿಲಿಂಡರ್‌ ಫ್ರೀ – NDA ಗ್ಯಾರಂಟಿ

    ಫ್ರೀ ಫ್ರೀ ಫ್ರೀ; ಟಿಡಿಪಿ ಗೆದ್ದರೇ ಫ್ರೀ ಸೈಟ್‌, ಮಹಿಳೆಯರಿಗೆ ಫ್ರೀ ಬಸ್‌, 3 ಎಲ್‌ಪಿಜಿ ಸಿಲಿಂಡರ್‌ ಫ್ರೀ – NDA ಗ್ಯಾರಂಟಿ

    ಅಮರಾವತಿ: ಲೋಕಸಭಾ ಚುನಾವಣೆ (Lok Sabha Election) ಹತ್ತಿರ ಬರುತ್ತಿದ್ದಂತೆ ಎಲ್ಲಾ ಪಕ್ಷಗಳೂ ಜನರನ್ನ ತಮ್ಮತ್ತಾ ಸೆಳೆಯಲು ಪ್ರಯತ್ನಿಸುತ್ತಿವೆ. ಮನೆ-ಮನೆ ಪ್ರಚಾರ ಕೈಗೊಂಡು ಮತಯಾಚನೆ ಮಾಡುತ್ತಿದ್ದಾರೆ. ಈ ನಡುವೆ ಆಂಧ್ರಪ್ರದೇಶದಲ್ಲಿ (Andhra Pradesh) ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆ ಕೂಡ ನಡೆಯುತ್ತಿದ್ದು, ಆಡಳಿತಾರೂಢ ವೈಎಸ್ಆರ್ ಪಕ್ಷವು ಈಗಾಗಲೇ ತನ್ನ ಪ್ರಣಾಳಿಕೆ ಪ್ರಕಟಿಸಿದೆ.

    ಈ ಬೆನ್ನಲ್ಲೇ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು (Chandrababu Naidu), ಜನಸೇನಾ ಪಕ್ಷದ ನಾಯಕ, ನಟ ಪವನ್‌ ಕಲ್ಯಾಣ್‌ ಮಂಗಳವಾರ ಎನ್‌ಡಿಎ ಮೈತ್ರಿ ಕೂಟದ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಹಲವು ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡಿದ್ದಾರೆ. ಇದನ್ನು ಕೆಲವರು ಕರ್ನಾಟಕ ಕಾಂಗ್ರೆಸ್‌ ಪಕ್ಷದ ಕಾಪಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ ಕಾಂಗ್ರೆಸ್ ಪತನ; ಮೊದಲ ಕಾಂಗ್ರೆಸ್ಸೇತರ ಸರ್ಕಾರ ತಂದ ಚುನಾವಣೆಯಲ್ಲಿ ಏನಾಯ್ತು?

    ಎನ್‌ಡಿಎ ಪ್ರಣಾಳಿಕೆಯಲ್ಲಿ ಏನಿದೆ?
    ಮೈತ್ರಿಕೂಟದ ಪ್ರಣಾಳಿಕೆಯಲ್ಲಿ ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ 20 ಲಕ್ಷ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರೊಂದಿಗೆ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 900 ಚದರ ಅಡಿಯ ನಿವೇಶನವನ್ನು ಉಚಿತವಾಗಿ ನೀಡಲಾಗುತ್ತದೆ, ಮಾಸಿಕ 3,000 ರೂ. ನಿರುದ್ಯೋಗ ಭತ್ಯೆಯನ್ನೂ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಕುಡಿಯುವ ನೀರಿನ ನೆಪದಲ್ಲಿ ನೀರು ಬಿಡುಗಡೆಗೆ ನಿರಾಕರಿಸಬಾರದು – ತಮಿಳುನಾಡು ಕ್ಯಾತೆ

    ಬೆಟ್ಟದಷ್ಟು ಭರವಸೆ:
    * ವಾರ್ಷಿಕ ಮೂರು ಉಚಿತ ಎಲ್‌ಪಿಜಿ ಸಿಲಿಂಡರ್
    * ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್‌ ಪ್ರಯಾಣ
    * ʻತಲ್ಲಿಕಿ ವಂದನಂʼ ಯೋಜನೆಯಡಿ ಎಲ್ಲಾ ಶಾಲಾ ಮಕ್ಕಳಿಗೆ ವಾರ್ಷಿಕ 15,000 ರೂ.
    * ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಜಾರಿ
    * 18 ವರ್ಷ ತುಂಬಿದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1,500 ರೂ.ನಂತೆ ವಾರ್ಷಿಕ 18,000 ಸಾವಿರ ರೂ. ಭತ್ಯೆ
    * 50 ವರ್ಷ ತುಂಬಿದ ಬಿಸಿ ಸಮುದಾಯದವರಿಗೆ ಪಿಂಚಣಿ ಮತ್ತು ಬಿ.ಸಿ.ಗಳ ಸ್ವಯಂ ಉದ್ಯೋಗಕ್ಕೆ 10,000 ಕೋಟಿ ರೂ. ಮಂಜೂರು
    * ಪ್ರತಿ ಮನೆಗೆ ಉಚಿತ ನೀರು ಸೌಲಭ್ಯ, ವೃದ್ದಾಪ್ಯ ವೇತನವನ್ನ 4,000 ರೂ.ಗಳಿಗೆ ಹೆಚ್ಚಳ
    * ಅಂಗವಿಕಲರ ವೇತನವನ್ನ 6,000 ರೂ.ಗೆ ಹೆಚ್ಚಳ, ಮೀನುಗಾರರಿಗೆ ವಾರ್ಷಿಕ 20,000 ರೂ. ನೆರವು

  • `ಕೈ’ಗೆ ಶಾಕ್ – ಚುನಾವಣಾ ರಾಜಕೀಯದಿಂದ ಶಾಸಕ ತನ್ವೀರ್ ಸೇಠ್ ನಿವೃತ್ತಿ

    `ಕೈ’ಗೆ ಶಾಕ್ – ಚುನಾವಣಾ ರಾಜಕೀಯದಿಂದ ಶಾಸಕ ತನ್ವೀರ್ ಸೇಠ್ ನಿವೃತ್ತಿ

    ಮೈಸೂರು: 2023ರ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ (Congress) ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ.

    ಮೈಸೂರಿನ (Mysuru) ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ (Tanveer Sait) ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ (AICC ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸದ್ಯಕ್ಕೆ ಟೋಲ್‌ ಸಂಗ್ರಹ ಇಲ್ಲ

    `ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: BJP ಕಾರ್ಯಕರ್ತರು ಮೈ ಮರೆತ್ರೆ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಪ್ರತಾಪ್ ಸಿಂಹ

    ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    2019ರ ನವೆಂಬರ್ 17ರ ರಾತ್ರಿ ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

  • 2005ರಲ್ಲೇ ನಾನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷನಾಗಬೇಕೆಂದು ಸೋನಿಯಾ ಬಯಸಿದ್ದರು: ಮಲ್ಲಿಕಾರ್ಜುನ ಖರ್ಗೆ

    2005ರಲ್ಲೇ ನಾನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷನಾಗಬೇಕೆಂದು ಸೋನಿಯಾ ಬಯಸಿದ್ದರು: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು 2005ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥರಾಗುವಂತೆ ನನ್ನನ್ನು ಕೇಳಿದ್ದರು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge)  ಹೇಳಿದ್ದಾರೆ.

    ಈಶಾನ್ಯ ಭಾಗದ ಕಾಂಗ್ರೆಸ್ (Congress) ಸದಸ್ಯರನ್ನುದ್ದೇಶಿಸಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2005ರಲ್ಲಿ ಸೋನಿಯಾ ಗಾಂಧಿಯವರು ತಮ್ಮನ್ನು ಸಭೆಗೆ ಕರೆದು, ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವಂತೆ ಕೇಳಿಕೊಂಡಿದ್ದರು. ಅಲ್ಲದೇ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥರಾಗಲು ಅವರು ನನ್ನ ಹೆಸರನ್ನು ಮೂರು ಬಾರಿ ಸೂಚಿಸಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ದಿನವೂ ಒತ್ತುವರಿ ತೆರವು- ಕೆಆರ್‌ಪುರ, ಮಹದೇವಪುರದಲ್ಲಿ ಆಪರೇಷನ್

    ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಇರುವ ಬೆನ್ನೆಲೆ ತಮ್ಮ ರಾಜಕೀಯ ಪಯಣದ ಬಗ್ಗೆ ಖರ್ಗೆ ಈ ರೀತಿಯೆಲ್ಲಾ ಮಾತನಾಡುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದೆ. ಇದನ್ನೂ ಓದಿ: ಕಾಶಿ ಮಾದರಿಯಲ್ಲೇ ಉಜ್ಜೈನಿ ಮಹಾಕಾಲೇಶ್ವರ ಅಭಿವೃದ್ಧಿ- ಜ್ಯೋತಿರ್ಲಿಂಗಕ್ಕೆ ಮೋದಿ ಪೂಜೆ

    Live Tv
    [brid partner=56869869 player=32851 video=960834 autoplay=true]

  • PFI ನಿಷೇಧವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌

    PFI ನಿಷೇಧವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌

    ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾವನ್ನು(PFI) ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್‌(Karnataka Congress) ಸ್ವಾಗತಿಸಿದೆ.

    ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ. ಇದನ್ನೂ ಓದಿ: PFI ಮಾತ್ರ ಯಾಕೆ? RSS ನಿಷೇಧವಾಗಲಿ: ಕಾಂಗ್ರೆಸ್‌ ಸಂಸದ ಕೋಡಿಕುನ್ನಿಲ್ ಸುರೇಶ್‌ ಆಗ್ರಹ

    ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕಕ್ಕೆ 55 ಸಾವಿರ ಕೋಟಿ ಅನುದಾನ ನೀಡಲು ಚಿಂತನೆ – ಸ್ಮೃತಿ ಇರಾನಿ

    ಕರ್ನಾಟಕಕ್ಕೆ 55 ಸಾವಿರ ಕೋಟಿ ಅನುದಾನ ನೀಡಲು ಚಿಂತನೆ – ಸ್ಮೃತಿ ಇರಾನಿ

    ಬೆಂಗಳೂರು: ಕರ್ನಾಟಕಕ್ಕೆ ಭಾರತ್ ಮಾಲಾ (Bharat Mala) ಯೋಜನೆ ಮೂಲಕ 55 ಸಾವಿರ ಕೋಟಿ ಅನುದಾನ ಕೊಡುವ ಉದ್ದೇಶವಿದೆ ಎಂದು ಕೇಂದ್ರ ಸಚಿವರಾದ ಸ್ಮೃತಿ ಇರಾನಿ (Smriti Irani) ಹೇಳಿದ್ದಾರೆ.

    ರಾಜ್ಯ ಬಿಜೆಪಿ (BJP) ಘಟಕದಿಂದ ನಡೆದ ಜನಸ್ಪಂದನಾ (Janaspandana) ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ, ಭೋಗನಂದೀಶ್ವರ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿಶ್ವೇಶ್ವರಯ್ಯ, ಪ್ರವೀಣ್ ನೆಟ್ಟಾರು ಮುಂತಾದವರನ್ನು ಸ್ಮರಿಸಿದರು. ಈ ಸಮಾವೇಶ ಈ ಪುಣ್ಯ ಭೂಮಿಯಲ್ಲಿ ನಡೆಯುತ್ತಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ಏಕೆಂದರೆ ಇದು ಸಂಗ್ರಾಮದ ವೇದಿಕೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರಿಗೆ ತಾಕತ್, ಧಮ್ ಇದ್ದರೇ ನಮ್ಮನ್ನು ತಡೆಯಲಿ: ಬೊಮ್ಮಾಯಿ ಸವಾಲು

    ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ ಸಚಿವೆ, ಕಾಂಗ್ರೆಸ್ ಪಕ್ಷಪಾತದ ಸರ್ಕಾರ ಆಗಿತ್ತು. ಹಾಗಾಗಿ ಕಾಂಗ್ರೆಸ್ ಇದ್ದಾಗ ಜನರಿಗೆ ತಾರತಮ್ಯ ಮಾಡಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಕರ್ನಾಟಕಕ್ಕೆ (Karnataka) ಹಣಕಾಸು ಆಯೋಗದ ಮೂಲಕ ಕೊಟ್ಟಿದ್ದು ಕೇವಲ 2 ಸಾವಿರ ಕೋಟಿ. ಆದರೆ ಬಿಜೆಪಿ ಡಬಲ್ ಇಂಜಿನ್ ಸರ್ಕಾರ. ನಮ್ಮ ಕೇಂದ್ರ ಸರ್ಕಾರ (Central Government) ಈಗ ರಾಜ್ಯಕ್ಕೆ ಹಣಕಾಸು ಆಯೋಗದಿಂದ 5 ಸಾವಿರ ಕೋಟಿ ಅನುದಾನ ಕೊಟ್ಟಿದೆ. ಕರ್ನಾಟಕದಲ್ಲಿ ರಸ್ತೆ ಅಭಿವೃದ್ಧಿಗೆ 9,700 ಕೋಟಿ ರೂ. ಅನುದಾನ ಕೊಟ್ಟಿದೆ. ಪ್ರಧಾನಿ ಮೋದಿ (NarendraModi) ಸಬರ್ಬನ್ ರೈಲು (Railway) ಯೋಜನೆಗೆ 15 ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಹೆದ್ದಾರಿಗಳ ಅಭಿವೃದ್ಧಿಗಾಗಿಯೇ 37 ಸಾವಿರ ಕೋಟಿ ರೂ. ಕೊಡಲಾಗಿದೆ. ಮುಂದೆಯೂ ಭಾರತ್ ಮಾಲಾ ಯೋಜನೆ ಮೂಲಕ 55 ಸಾವಿರ ಕೋಟಿ ಕೊಡುವ ಉದ್ದೇಶ ಇದೆ ಎಂದು ಹೇಳಿದ್ದಾರೆ.

    ನಮ್ಮ ಸರ್ಕಾರ ಬಂದ ನಂತರ 1,600 ಕಿ.ಮೀ ರೈಲ್ವೆ ಮಾರ್ಗ ನಿರ್ಮಾಣ ಮಾಡಲಾಗಿದೆ. 30 ವರ್ಷಗಳ ಬಳಿಕ ಶಿಕ್ಷಣ ನೀತಿ ಬದಲಾಗಿದೆ. ಎನ್‌ಇಪಿ ಜಾರಿಯಲ್ಲಿ ಕರ್ನಾಟಕವೇ ಮೊದಲ ರಾಜ್ಯವಾಗಿದ್ದು, ಇದಕ್ಕಾಗಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಲ್ಲಿ ಟ್ಯಾಲೆಂಟ್ ಇರುವಂಥ ನಟರೇ ಇಲ್ಲವೆಂದು ಬಿಟೌನ್ ನಲ್ಲಿ ಬೆಂಕಿ ಹಚ್ಚಿದ ಕರಣ್ ಜೋಹಾರ್

    ರೇಷ್ಮೆ ಉತ್ಪಾದನೆಯಲ್ಲಿ ಹೆಚ್ಚಳ: ರೇಷ್ಮೆ ವಲಯಕ್ಕೆ ಕೇಂದ್ರ ಕೊಟ್ಟ ಪ್ರೋತ್ಸಾಹದಿಂದ ರೇಷ್ಮೆ ಉತ್ಪಾದನೆ ಹೆಚ್ಚಳವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಕರ್ನಾಟಕಕ್ಕೆ ತಾರತಮ್ಯ ಮಾಡಲಾಗಿತ್ತು ಎಂದಿದ್ದಾರೆ.

    ಭಾರತ್ ಜೋಡೋ ಭಾರತ ಮುರಿಯುವ ಯಾತ್ರೆ: ರಾಹುಲ್ ಗಾಂಧಿ ಭಾರತ್ ಜೋಡಿಸ್ತಿಲ್ಲ, ಭಾರತವನ್ನು ಮುರಿಯುವ ಯಾತ್ರೆ ಮಾಡ್ತಿದ್ದಾರೆ. ಯಾತ್ರೆಯಲ್ಲಿ ಸರ್ದಾರ್ ಪಟೇಲ್‌ರ ಭಾವಚಿತ್ರವನ್ನೂ ಹಾಕಿಲ್ಲ. ಕನ್ಯಾಕುಮಾರಿಯಿಂದ ಭಾರತ್ ಜೋಡೋ ಮಾಡಿದ್ರು, ವಿವೇಕಾನಂದರಿಗೆ ಕನಿಷ್ಠ ಸ್ಮರಿಸುವ ಕೆಲಸವನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಭಾರತದ ವಿರುದ್ಧ ಘೋಷಣೆ ಕೂಗಿದವರನ್ನ ಭಾರತ್ ಜೋಡೋ (Bharaj Jodo) ಯಾತ್ರೆಯಲ್ಲಿ ಸೇರಿಸಿಕೊಂಡಿದ್ದಾರೆ. ಇದು ರಾಷ್ಟçದ್ರೋಹಕ್ಕೆ ಸಮನಾದ ಕೆಲಸ. ಭಾರತ ವಿಭಜಿಸುವ ಹೇಳಿಕೆ ಕೊಟ್ಟವರಿಗೆ ಬೆಂಬಲ ಕೊಡೋದು ರಾಷ್ಟ್ರದ್ರೋಹ. ಇದನ್ನು ಕರ್ನಾಟಕದ ಕಾಂಗ್ರೆಸ್ ಕಾರ್ಯಕರ್ತರು ಅವರ ನಾಯಕರಿಗೆ ಪ್ರಶ್ನಿಸಬೇಕಿದೆ ಎಂದು ಕುಟುಕಿದ್ದಾರೆ.

    ಆತಂಕವಾದಿ ಯಾಕೂಬ್ ಮೈಮುನ್‌ನ ಸಮಾಧಿಯನ್ನು ಕಾಂಗ್ರೆಸ್ ಸರ್ಕಾರ ಇರೋ ರಾಜ್ಯದಲ್ಲಿ ಸೌಂದರ್ಯೀಕರಣ ಮಾಡಲಾಗಿದೆ. ಇದನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ (Rahul Gandhi) ಧೈರ್ಯವಿಲ್ಲ. ಭಯೋತ್ಪಾದನೆ ವಿರೋಧಿಸೋರಾಗಿದ್ದರೆ ರಾಹುಲ್ ಗಾಂಧಿ ಇದನ್ನ ಯಾಕೆ ವಿರೋಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ: ಗಾಂಧಿ ಕುಟುಂಬದ ಚಮಚಾಗಳು ಮಹಿಳಾ ರಾಷ್ಟ್ರಪತಿ ವಿರುದ್ಧ ಟೀಕೆ, ನಿಂದನೆ ಮಾಡಿದ್ದರು. ಆದರೆ ಮಹಿಳೆಯೊಬ್ಬರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ ಎಂದು ಬೀಗಿದ್ದಾರೆ.

    ಚೂರಿ ಹಾಕಿದವರು ರಣ ಹೇಡಿಗಳು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬೆನ್ನಿಗೆ ಚೂರಿಗೆ ಹಾಕಿದವರು ರಣ ಹೇಡಿಗಳು. ಪ್ರವೀಣ್ ಅವರನ್ನ ಸಾಯಿಸಿದವರ ಉದ್ದೇಶ ಆತಂಕ ಸೃಷ್ಟಿಸೋದೇ ಆಗಿದೆ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಹತ್ಯೆಗೆ ಯತ್ನಿಸಿದ್ದು ಸತ್ಯ; ನಾನೇ ಅದಕ್ಕೆ ಪ್ರತ್ಯಕ್ಷ ಸಾಕ್ಷಿ – ಎಂ.ಲಕ್ಷ್ಮಣ್‌

    ಸಿದ್ದರಾಮಯ್ಯ ಹತ್ಯೆಗೆ ಯತ್ನಿಸಿದ್ದು ಸತ್ಯ; ನಾನೇ ಅದಕ್ಕೆ ಪ್ರತ್ಯಕ್ಷ ಸಾಕ್ಷಿ – ಎಂ.ಲಕ್ಷ್ಮಣ್‌

    ಮೈಸೂರು: ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಯತ್ನಿಸಿದ್ದು ನಿಜ. ನಾನೇ ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

    ಸಿದ್ದರಾಮಯ್ಯ ಹತ್ಯೆಗೆ ಮಡಿಕೇರಿಯಲ್ಲಿ ಪ್ಲ್ಯಾನ್‌ ಆಗಿತ್ತು. ಸಿದ್ದರಾಮಯ್ಯ ಅವರ ಮೇಲೆ ಬಟನ್ ಚಾಕು ಎಸೆದಿದ್ದರು. ಬಟನ್ ಚಾಕು ಎಸೆದಾಗ ಕಾರಿನ ಗ್ಲಾಸ್ ಮುಚ್ಚಿತ್ತು. ಇಲ್ಲದೇ ಇದ್ದಿದ್ರೆ ಸಿದ್ದರಾಮಯ್ಯ ಕುತ್ತಿಗೆಗೇ ಚಾಕು ತಗಲುತ್ತಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸೆ. 8ಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ: ಸುಧಾಕರ್

    ಬಟನ್ ಚಾಕು ಎಸೆದ ವಿಚಾರವನ್ನು ಕೊಡಗಿನ ಎಸ್‌ಪಿ ಗಮನಕ್ಕೆ ತಂದಿದ್ದೇನೆ. ಅವರು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ಪರಿಶೀಲಿಸಲು ಕೊಡಗು ಜಿಲ್ಲೆಗೆ ತೆರಳಿದ್ದರು. ಇದೇ ವೇಳೆ ತಿತಿಮತಿ ಮಾರ್ಗಮಧ್ಯೆ ಅವರ ಕಾರನ್ನು ಅಡ್ಡಗಟ್ಟಿದ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿ, ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಎಸೆದಿದ್ದರು. ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟ ನಂತರ ಸಿದ್ದರಾಮಯ್ಯ ಅವರು ತೆರಳುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ನಡೆದಿತ್ತು. ಇದನ್ನೂ ಓದಿ: ಮೊಟ್ಟೆ ಎಸೆದವ ಕಾಂಗ್ರೆಸ್‌ ಕಾರ್ಯಕರ್ತ ಅಲ್ಲ; ನಾವು ಸಾಕ್ಷ್ಯ ಬಿಡುಗಡೆ ಮಾಡಿದ್ದೇವೆ – ಮಿಥುನ್‌ ಗೌಡ

    ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯರನ್ನು ಹತ್ಯೆ ಮಾಡಲು ಬಟನ್ ಚಾಕು ಅನ್ನೂ ಎಸೆಯಲಾಗಿದೆ ಎಂದು ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ.

    Live Tv

    [brid partner=56869869 player=32851 video=960834 autoplay=true]

  • ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

    ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

    ಮಡಿಕೇರಿ: ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. `ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ’ ಎಂಬಿತ್ಯಾದಿ ಘೋಷಣೆಗಳ ಮೂಲಕ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಇಲ್ಲಿನ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು ವಾತಾವರಣ ಉದ್ವಿಗ್ನಗೊಂಡಿದೆ. ಇದೇ ವೇಳೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ – `ಗೋ ಬ್ಯಾಕ್ ಸಿದ್ದುಖಾನ್’ ಎಂದು ಆಕ್ರೋಶ

    ಸಿದ್ದರಾಮಯ್ಯ ಶಾಂತಿ ಪ್ರಿಯ ಕೊಡಗಿಗೆ ಬರೋದು ಬೇಡ, ಶಾಂತಿಪ್ರಿಯ ನಾಡಿನಲ್ಲಿ ಕೋಮುಗಲಭೆ ಬೆಳೆಸಿದ್ದಾರೆ. ಕೊಡವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿದ್ದಾರೆ. 7 ವರ್ಷಗಳ ಹಿಂದೆ ಟಿಪ್ಪು ಜಯಂತಿಯನ್ನು ಬಲವಂತವಾಗಿ ಆಚರಿಸಿದ್ದರು. ಇದರಿಂದ ಜಿಲ್ಲೆಯಲ್ಲಿ ಎರಡು ಜನರ ಪ್ರಾಣ ಹೋದವು. ಅಂತಹವರು ಕೊಡಗಿಗೆ ಬರೋದು ಬೇಡ ಎಂದು ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಮಾಡಿಕೊಂಡಿದ್ದಾರೆ.

    ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿದ್ದರು. ಇದನ್ನೂ ಓದಿ: ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ

    ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದ್ದರು.

    ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ – `ಗೋ ಬ್ಯಾಕ್ ಸಿದ್ದುಖಾನ್’ ಎಂದು ಆಕ್ರೋಶ

    ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ – `ಗೋ ಬ್ಯಾಕ್ ಸಿದ್ದುಖಾನ್’ ಎಂದು ಆಕ್ರೋಶ

    ಮಡಿಕೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಕೂಗಿದ್ದಾರೆ

    ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿದರು.

    ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದರು. ಇದನ್ನೂ ಓದಿ: Exclusive: ಮುಖಕ್ಕೆ ಮಾಸ್ಕ್ ಧರಿಸಿ ಕಲ್ಲು ಹೊಡೆಯಿರಿ – ಶಿವಮೊಗ್ಗ ಗಲಾಟೆಯ ಪ್ಲ್ಯಾನ್ ವೀಡಿಯೋ ಔಟ್

    ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಆರ್ಡರ್ ಮಾಡಿದ್ದ ಆಹಾರದಲ್ಲಿ ಹುಳಗಳು – ರೆಸ್ಟೋರೆಂಟ್ ವಿರುದ್ಧ ಮಹಿಳೆ ದೂರು

    ಈ ಸಂದರ್ಭ ಪೋಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ ಸಿದ್ದರಾಮಯ್ಯರ ವಾಹನ ಮುಂದೆ ಚಲಿಸಲು ಅನುವುಮಾಡಿಕೊಟ್ಟರು.

    Live Tv
    [brid partner=56869869 player=32851 video=960834 autoplay=true]

  • ನಾನು ಸತ್ತ ನಂತರವೇ ಬಾಯಿ ಮುಚ್ಚೋದು – ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್

    ನಾನು ಸತ್ತ ನಂತರವೇ ಬಾಯಿ ಮುಚ್ಚೋದು – ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್

    ಬೆಂಗಳೂರು: ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನಾನು ಸತ್ತ ಬಳಿಕವೇ ಬಾಯಿ ಮುಚ್ಚೋದು ಎಂದು ಶಾಸಕ ಜಮೀರ್ ಅಹ್ಮದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಟಾಂಗ್ ನೀಡಿದ್ದಾರೆ.

    ಕಾಂಗ್ರೆಸ್‌ನಲ್ಲಿ ನಡೀತಿರೋ `ಮುಖ್ಯಮಂತ್ರಿ ಕುರ್ಚಿ’ ಕದನಕ್ಕೆ ವಿರಾಮ ಬೀಳೋ ಲಕ್ಷಣಗಳು ಕಾಣಿಸುತ್ತಿಲ್ಲ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅತ್ಯಾಪ್ತ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಂದುವರಿದಿದೆ. ಇದನ್ನೂ ಓದಿ: ಜಮೀರ್ Vs ಡಿಕೆಶಿ ಟಾಕ್‌ ವಾರ್‌ – ಶೋಕಾಸ್ ನೋಟಿಸ್‍ಗೆ ಪಟ್ಟು

    ಬಾಯಿಮುಚ್ಚಿಕೊಂಡು ಕೆಲಸ ಮಾಡಬೇಕು, ವ್ಯಕ್ತಿ ಪೂಜೆ ಬಿಡ್ಬೇಕು ಅಂತ ನಿನ್ನೆಯಷ್ಟೇ ಜಮೀರ್‌ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾರ್ನಿಂಗ್ ಕೊಟ್ಟಿದ್ದರು. ಇದಕ್ಕೆ ಉತ್ತರಿಸಿರುವ ಶಾಸಕ ಜಮೀರ್, ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನಾನು ಸತ್ತ ಬಳಿಕವೇ ಬಾಯಿ ಮುಚ್ಚೋದು ಅಂದಿದ್ದಾರೆ ಎಂದು ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಸಿದ್ದರಾಮೋತ್ಸವ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಡಿಕೆಶಿ ನಮ್ಮ ಅಧ್ಯಕ್ಷರು, ನಮ್ಮ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಾರ್ನ್ ಮಾಡಿದರೂ ಸ್ಕೂಟರ್‌ಗೆ ಅಡ್ಡ ಬಂದನೆಂದು ಕಿವುಡನನ್ನು ಚಾಕುವಿನಿಂದ ಇರಿದು ಕೊಂದ ಬಾಲಕಿ

    ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ನಮ್ಮ ಜಾತಿಯವರಿಗಿಂತ ಒಕ್ಕಲಿಗರು ಬಹಳ ಆತ್ಮೀಯರಿದ್ದಾರೆ. ಚಲುರಾಯಸ್ವಾಮಿ ನನಗೆ ಏನನ್ನೂ ಹೇಳಿಲ್ಲ. ಎಐಸಿಸಿಯಿಂದಲೂ ನನಗೆ ಯಾವುದೇ ಸೂಚನೆ ಬಂದಿಲ್ಲ. ನಾನು ಪಕ್ಷ ಪೂಜೆನೂ ಮಾಡ್ತೀನಿ, ವ್ಯಕ್ತಿ ಪೂಜೆನೂ ಮಾಡ್ತೀನಿ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಅಂದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

    ರಾಜಕೀಯದಲ್ಲಿ ಲೆವೆಲ್ ಗುರುತಿಸೋದು ಜನ. ನಮ್ಮ ಲೆವೆಲ್ ಜನ ಹೇಳಬೇಕು. ಪದೇ ಪದೇ ಇದನ್ನ ಮುಂದುವರಿಸೋದು ಬೇಡ ಎಂದು ಡಿಕೆಶಿಗೆ ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ: ಸಿದ್ದರಾಮಯ್ಯ

    ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ: ಸಿದ್ದರಾಮಯ್ಯ

    ಬೆಂಗಳೂರು: ಜನರು ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದಾರೆ. ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದರು.

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಜನರು ಬಿಜೆಪಿ ಸರ್ಕಾರದಿಂದ ಬೇಸತ್ತಿದ್ದಾರೆ. ಆಡಳಿತ ಪಕ್ಷವನ್ನು ತೊಲಗಿಸಬೇಕು ಅಂತ ಜನ ಭಾವಿಸಿದ್ದಾರೆ. ಆದ್ದರಿಂದ ಮುಂದಿನ ಚುನಾವಣೆಯ ಸಂದರ್ಭದಲ್ಲಿ ನಮಗೆ ಸ್ಪಷ್ಟ ಬಹುಮತವನ್ನು ರಾಜ್ಯದ ಜನತೆ ನೀಡುತ್ತಾರೆ. ಈ ಫಲಿತಾಂಶದ ಮೂಲಕ ಜನರ ಭಾವನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

    ಈ ಚುನಾವಣೆಯಲ್ಲಿ 1,187 ಸ್ಥಾನಗಳಲ್ಲಿ ನಾವು 500ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ ಮತ್ತು ಬಿಜೆಪಿಯವರು 430 ಸ್ಥಾನಗಳನ್ನು ಗೆದ್ದಿದ್ದಾರೆ. ನಾವು ಹೆಚ್ಚು ಸಂಸ್ಥೆಗಳಲ್ಲಿ ಕೂಡ ಗೆದ್ದಿರುವ ಕಾರಣ ನಮಗೆ ಗ್ರಾಮೀಣ ಭಾಗದಲ್ಲಿ ಇನ್ನೂ ಹೆಚ್ಚು ಬೆಂಬವಿದೆ. ಈಗ ಪಟ್ಟಣ ಪ್ರದೇಶದಲ್ಲಿ ಕೂಡ ಕಾಂಗ್ರೆಸ್‍ಗೆ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯದ 58 ಪುರಸಭೆ, 57 ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು

    ಈ ಬಾರಿ ಬಿಜೆಪಿ, ಜೆಡಿಎಸ್ ಸೋಲಿಸಿ 2023ಕ್ಕೆ ಕಾಂಗ್ರೆಸ್ ಅಧಿಕಾರ ಬರುತ್ತದೆ. ಸದ್ಯ ಈ ಫಲಿತಾಂಶ ಬಂದಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗುತ್ತದೆ ಮತ್ತು ಮತದಾರರಲ್ಲೂ ಬದಲಾವಣೆ ಗಾಳಿ ಬೀಸುತ್ತದೆ. ಬಿಜೆಪಿಯಲ್ಲಿ ಗುಂಪುಗಳಿವೆ. ಸಿಎಂ ತೆಗೆಯಬೇಕು ಅಂತ ಒಂದು ಗುಂಪು, ಉಳಿಸಬೇಕು ಅಂತ ಒಂದು ಗುಂಪು ಇದೆ. ಆದರೆ ಹೈಕಮಾಂಡ್ ಇದಕ್ಕೆ ತೇಪೆ ಹಚ್ಚುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಅಧಿಕಾರಕ್ಕೆ ಬರಲ್ಲ ಅಂತ ಗೊತ್ತಿದೆ ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್‍ನಲ್ಲಿ ಎರಡು ದೋಣಿ ಇದೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಯಾವುದೇ ಎರಡು ದೋಣಿ ಇಲ್ಲ. ಕಾಂಗ್ರೆಸ್ ನಲ್ಲಿ ಇರುವುದು ಒಂದೇ ದೋಣಿ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯದ ಜನತೆಯ ಭಾವನೆ ಹೇಗಿದೆ ಅನ್ನೋದಕ್ಕೆ ಇದು ಸಾಕ್ಷಿ : ಡಿ.ಕೆ ಶಿವಕುಮಾರ್

    ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿ.27ರಂದು ಚುನಾವಣೆ ನಡೆದಿತ್ತು. 58 ಪುರಸಭೆ, 57 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಹಲವು ಕಡೆ ಇನ್ನೂ ಮತ ಎಣಿಕೆ ನಡೆಯುತ್ತಿದೆ.