Tag: ಕರ್ನಾಟಕ ಚುನಾವಣಾ ಫಲಿತಾಂಶ 2023

  • ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್

    ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ ವ್ಯಂಗ್ಯವಾಡಿದ ಕಾಂಗ್ರೆಸ್ ನವರಿಗೆ ತಿರುಗೇಟು ನೀಡುವ ಮೂಲಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಸವಾಲೆಸೆದಿದ್ದಾರೆ.

    ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ. ಇದನ್ನೂ ಓದಿ: ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

    ಫೇಸ್‌ಬುಕ್‌ ನಲ್ಲೇನಿದೆ..?: ಕಲಿಯುತ್ತೇವೆ, ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಉತ್ತರಿಸುತ್ತೇವೆ. ಟೀಕೆಗಳಿಗೆ, ಕುಹಕಗಳಿಗೆ, ಒಡಕು ಮಾತುಗಳಿಗೆ ನಮ್ಮ ಗತಿಶೀಲತೆಯಿಂದ ನಾವು ಇರಲಿಕ್ಕೇ ಬಂದವರು, ಗೆಲ್ಲಲಿಕ್ಕೇ ಬಂದವರು. ನಮಗೆ ಸೋಲು ಕ್ಷಣಿಕ, ಮುನ್ನಡೆ ಸತತ. ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ.

  • ರಸ್ತೆಯಲ್ಲೇ ಜನತೆಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಕೈ ಅಭ್ಯರ್ಥಿ

    ರಸ್ತೆಯಲ್ಲೇ ಜನತೆಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಕೈ ಅಭ್ಯರ್ಥಿ

    ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಗೆಲ್ಲಿಸಿದ ಕ್ಷೇತ್ರದ ಜನತೆಗೆ ಸಾಷ್ಟಾಂಗ ನಮಸ್ಕಾರ ಮಾಡಿದ ಪ್ರಸಂಗ ನಡೆದಿದೆ.

    ಶಿವಗಂಗಾ ಬಸವರಾಜ್ (Shivaganga Basavaraj) ಅವರು ಚನ್ನಗಿರಿಯ ಗಡಿಯಲ್ಲಿ ರಸ್ತೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಇವರು ಬಿಜೆಪಿ (BJP) ಹಾಗೂ ಪಕ್ಷೇತರ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದರು.

    ಇದೇ ಮೊದಲ ಬಾರಿಗೆ ಚುನಾವಣೆಗೆ ನಿಂತು ಶಿವಗಂಗಾ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಗಿರಿ ಪಟ್ಟಣ ತಲುಪುವ ದಾರಿಯಲ್ಲಿ ರಸ್ತೆ ಮೇಲೆ ಸಾಷ್ಟಾಂಗ ನಮಸ್ಕಾರ ಮಾಡಿದ್ದಾರೆ. ಬಳಿಕ ಕಾರ್ಯಕರ್ತರ ಜೊತೆ ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ 8ರಲ್ಲಿ 6 ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಹೀನಾಯ ಸೋಲು

    ದಾವಣಗೆರೆ (Davanagere) ಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವನ್ನು ಪಡೆದುಕೊಂಡಿದ್ದು, ಕೇವಲ ಒಂದು ಕ್ಷೇತ್ರ ಮಾತ್ರ ಬಿಜೆಪಿ ಪಾಲಿಗೆ ಒದಗಿ ಬಂದಿದೆ.

     

  • ಹೈಡ್ರಾಮಾ ಬಳಿಕ ಜಯನಗರದಲ್ಲಿ ಬಿಜೆಪಿ ಗೆಲುವು- ಸೌಮ್ಯಾ ರೆಡ್ಡಿ ಕಣ್ಣೀರು

    ಹೈಡ್ರಾಮಾ ಬಳಿಕ ಜಯನಗರದಲ್ಲಿ ಬಿಜೆಪಿ ಗೆಲುವು- ಸೌಮ್ಯಾ ರೆಡ್ಡಿ ಕಣ್ಣೀರು

    ಬೆಂಗಳೂರು: ಭಾರೀ ಹೈಡ್ರಾಮಾದ ಬಳಿಕ ಜಯನಗರ ಗೊಂದಲಕ್ಕೆ ತೆರೆ ಬಿದ್ದಿದೆ. ಜಯನಗರ (Jayanagar Constituency) ದಲ್ಲಿ ಬಿಜೆಪಿ (BJP) ಅಭ್ಯರ್ಥಿ ರಾಮಮೂರ್ತಿ (Ramamurthy) ಗೆಲುವು ತನ್ನದಾಗಿಸಿಕೊಂಡಿದ್ದಾರೆ.

    ಕೇವಲ 16 ಮತಗಳ ಅಂತರದಿಂದ ರಾಮಮೂರ್ತಿಗೆ ಜಯ ದೊರೆತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯೇ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಜಯನಗರದಲ್ಲಿ ಯಾರಿಗೆ ಜಯ? – ಪರಿಸ್ಥಿತಿ ಉದ್ವಿಗ್ನ, ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ

    ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ (Congress) ಕಾರ್ಯಕರ್ತರು ಘೋಷಣೆ ಕೂಗಿದ ಪ್ರಸಂಗವೂ ನಡೆದಿದೆ. ಮೋಸ.. ಮೋಸ ಬಿಜೆಪಿ ಅಂತ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇನ್ನು ಕೌಂಟಿಂಗ್ ಸೆಂಟರ್ ಮುಂಭಾಗ ಸೌಮ್ಯಾ ರೆಡ್ಡಿ (Sowmya Reddy) ಕಣ್ಣೀರು ಹಾಕಿದ್ದಾರೆ. ಅಲ್ಲದೆ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ; 1 ಮತದ ಅಂತರದಿಂದ ಸೋತಿದ್ದ ಅಭ್ಯರ್ಥಿ 59 ಸಾವಿರ ದಾಖಲೆ ಮತಗಳಲ್ಲಿ ಗೆಲುವು

    ರೀಕೌಂಟಿಂಗ್‍ನಲ್ಲಿ ಬಿಜೆಪಿಗೆ ಮುನ್ನಡೆ ಹಿನ್ನೆಲೆಯಲ್ಲಿ ಜಯನಗರ ಕೌಂಟಿಂಗ್ ಸೆಂಟರ್ ಬಳಿ ಹೈಡ್ರಾಮಾ ನಡೆದಿತ್ತು. ಕೌಂಟಿಂಗ್ ಸೆಂಟರ್ ಬಳಿ ಡಿಕೆ ಬ್ರದರ್ಸ್ ಕೂಡ ದೌಡಾಯಿಸಿದ್ದರು. ಈ ವೇಳೆ ಪೊಲೀಸರ ಜೊತೆ ಕಾಂಗ್ರೆಸ್ ಮುಖಂಡರು ವಾಗ್ವಾದ ಕೂಡ ನಡೆಸಿದ್ದಾರೆ. ಗೇಟ್ ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದರು.

    1989 ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಜಯನಗರ, 2008, 2013 ರಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿತ್ತು. 2018 ರ ಚುನಾವಣೆಯಲ್ಲಿ ಜಯನಗರ ಕ್ಷೇತ್ರಕ್ಕೆ ಸೌಮ್ಯರೆಡ್ಡಿ ಎಂಟ್ರಿ ಕೊಟ್ಟರು. ಚುನಾವಣೆಯಲ್ಲಿ ಗೆದ್ದು ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. 2018 ಚುನಾವಣೆಯಲ್ಲಿ ಗೆದ್ದು, ಮತ್ತೆ 2023 ರ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಈ ಬಾರಿ ಸೋಲು ಕಂಡರು.

     

  • ಸಚಿವ ಸೋಮಣ್ಣಗೆ ಎರಡೂ ಕ್ಷೇತ್ರದಲ್ಲೂ ಹಿನ್ನಡೆ

    ಸಚಿವ ಸೋಮಣ್ಣಗೆ ಎರಡೂ ಕ್ಷೇತ್ರದಲ್ಲೂ ಹಿನ್ನಡೆ

    ಬೆಂಗಳೂರು: ಸಚಿವ ಸೋಮಣ್ಣ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಹಿನ್ನಡೆಯಲ್ಲಿದ್ದಾರೆ.

    ವರುಣಾದಲ್ಲಿ ಕಾಂಗ್ರೆಸ್‍ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿ (puttaranga shetty) ಕಾಂಗ್ರೆಸ್‍ನಿಂದ (Congress) ಎದುರಾಳಿಯಾಗಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 115, ಬಿಜೆಪಿ 77, ಜೆಡಿಎಸ್‌ 27 ಮುನ್ನಡೆ LIVE Updates

    ಹಿಂದಿನ ಚುನಾವಣೆಯಲ್ಲಿ (Election) ಗೋವಿಂದರಾಜನಗರದಿಂದ ಸ್ಪರ್ಧಿಸಿದ್ದ ಸೋಮಣ್ಣ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ಹೈಕಮಾಂಡ್ ನಿರ್ಧಾರದಂತೆ ಕ್ಷೇತ್ರವನ್ನು ಬದಲಾಯಿಸಿ ಎರಡು ಕಡೆಗಳಿಂದ ಸ್ಪರ್ಧಿಸಿದ್ದರು. ಇದನ್ನೂ ಓದಿ: ನನ್ನದು ಸಣ್ಣ ಪಕ್ಷ, ಈವರೆಗೆ ನನ್ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್‍ಡಿಕೆ