ದಾವಣಗೆರೆ: ತೆರಿಗೆಯಲ್ಲಿ (Tax) ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ, ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದ್ದಾರೆ.
ದಾವಣಗೆರೆ (Davanagere) ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮಾನ ಮರ್ಯಾದೆ ತೆಗೆದಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಾನೂ ಅವರಂತೆ ಹೇಳಿದ್ದಕ್ಕೆಲ್ಲಾ ತಲೆ ಅಲ್ಲಾಡಿಸಬೇಕಾ? ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೃಹಿಣಿ ಸಾವು ಕೇಸ್‌ಗೆ ಟ್ವಿಸ್ಟ್ – ಪತಿಯೇ ಮಾಸ್ಟರ್ ಮೈಂಡ್, ಸ್ನೇಹಿತನ ಪತ್ನಿಯ ಕೊಲೆ ರಹಸ್ಯವೂ ಬಯಲು
ಇದುವರೆಗೂ ಕೆಂದ್ರ ಸರ್ಕಾರದಿಂದ (Union Government) ಒಂದೇ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ರಾಜ್ಯ ಬಿಜೆಪಿ ಲೀಡರ್‌ಗಳು ಅಮಿತ್ ಶಾ (Amit Shah) ಜೊತೆ ಮಾತನಾಡಿ ಅನುದಾನ ಬಿಡುಗಡೆ ಮಾಡಿಸಿಲ್ಲ. ಯಡಿಯೂರಪ್ಪ, ಅಶೋಕ್, ಬೊಮ್ಮಾಯಿ, ವಿಜಯೇಂದ್ರ ಈಗಲಾದ್ರೂ ಹೋಗಿ ಕೇಳಲಿ ಎಂದಿರುವ ಸಿಎಂ, ನಮಗೆ ಅನ್ಯಾಯ ಆದ್ರೆ ಪ್ರತಿಭಟಿಸಬಾರದಾ? ಯಡಿಯೂರಪ್ಪ ಅವರಂತೆ ಬಾಯಿ ಮುಚ್ಚಿಕೊಂಡು ಇರಬೇಕಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೊಂಡುವಾದ ಬಿಟ್ಟು ರಾಜ್ಯಕ್ಕೆ ಅನ್ಯಾಯವಾಗುತ್ತಿರೋದನ್ನ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು: ದಿನೇಶ್ ಗುಂಡೂರಾವ್
ರಾಜ್ಯದಿಂದ 100 ರೂಪಾಯಿ ತೆರಿಗೆ ನೀಡಿದ್ರೆ ನಮಗೆ ಬರೋದು 12 ರೂಪಾಯಿ ಮಾತ್ರ. ತೆರಿಗೆ ಕೊಡೋದ್ರಲ್ಲಿ ದೇಶದಲ್ಲೇ ನಾವು 2ನೇ ಸ್ಥಾನದಲ್ಲಿದ್ದೇವೆ. ಆದರೂ ನಮಗೆ ಕೊಡಬೇಕಾದ ಅನುದಾನ ಸಿಗುತ್ತಿಲ್ಲ. ಬರವನ್ನ ನಾವು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆ ಆಗಲ್ಲ. ಇದರೊಂದಿಗೆ ಜಾನುವಾರುಗಳಿಗೆ ಮೇವು ಸಿಗುವ ವ್ಯವಸ್ಥೆ ಮಾಡಿದ್ದೇವೆ. ಜನರಿಗೆ ಉದ್ಯೋಗ ಕೊಡ್ತಾ ಇದೀವಿ, ಅದಕ್ಕಾಗಿ 850 ಕೋಟಿ ರೂ. ನಿಧಿ ಇಡಲಾಗಿದೆ. ಯಾರೂ ಸಹ ಗುಳೆ ಹೋಗದ ರೀತಿ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಶ್ರೀದೇವಿ ಪುತ್ರಿ ಜಾನ್ವಿಗೆ ಅವಕಾಶ ಕೊಟ್ಟ ಕರಣ್ ಜೋಹಾರ್
ನವದೆಹಲಿ: ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಲ್ಲಿಂದು (Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ (Congress) ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಜಿಎಸ್‌ಟಿಯ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ. ಕರ್ನಾಟಕದ ಜನತೆ ಈ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ. ತೆರಿಗೆ ಕಟ್ಟುತ್ತಿರುವುದಕ್ಕೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ
#WATCH | Union Finance Minister Nirmala Sitharaman says, “Using taxpayers’ money, the Government of Karnataka has given full-page national newspaper advertisements…Six claims…but two are outrageously false claims…One, zero has been given as drought, disaster relief by the… pic.twitter.com/NEDJb13HXN
ಕರ್ನಾಟಕ ಸರ್ಕಾರ (Karnataka Government) ಮಾತನಾಡುತ್ತಿರುವ ಭಾಷೆ ಜನವಿರೋಧಿಯಾಗಿದೆ, ಕುಟುಂಬವಾದದಲ್ಲೇ ಮುಳುಗಿರುವ ಕಾಂಗ್ರೆಸ್ ಭಾಷೆ ದೇಶವನ್ನು ದಾರಿ ತಪ್ಪಿಸುತ್ತಿದೆ. ಕರ್ನಾಟಕಕ್ಕೆ ಕೇಂದ್ರ ತಾರತಮ್ಯ ಮಾಡಿದೆ ಎಂಬುದು ತಪ್ಪು. ಕಾಂಗ್ರೆಸ್ ನಾಯಕರ ಹೇಳಿಕೆ ಕುಚೇಷ್ಟೆಯಿಂದ ಕೂಡಿದೆ. ವಾಸ್ತವಾಂಶಗಳನ್ನ ಮುಚ್ಚಿಟ್ಟು ವಿತ್ತೀಯ ಹಕ್ಕುಗಳ ಬಗ್ಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ICC ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್ ಬೂಮ್ ಬುಮ್ರಾ
ಕರ್ನಾಟಕ 1,29,854 ಕೋಟಿ ರೂ. ಸ್ವೀಕರಿಸಿದೆ:
15ನೇ ಹಣಕಾಸು ಆಯೋಗದ (Finance Commission) ಅವಧಿಯಲ್ಲಿ ರಾಜ್ಯಕ್ಕೆ ಆದ ಲಾಭಗಳನ್ನು ಉಲ್ಲೇಖಿಸಿಲ್ಲ. ಕೆಲವು ಕಾಲ್ಪನಿಕ ನಷ್ಟಗಳನ್ನು ಮಾತ್ರ ಹೇಳುತ್ತಿದ್ದಾರೆ. ಕೇಂದ್ರ ಹಂಚುವ ಪ್ರತಿ ರಾಜ್ಯದ ಪಾಲು ಆಯೋಗದಿಂದ ಆಯೋಗಕ್ಕೆ ವ್ಯತ್ಯಾಸವಾಗುತ್ತದೆ. ರಾಜ್ಯಗಳ ಮೇಲೆ ಬೀರುವ ಎಲ್ಲಾ ಅಂಶಗಳನ್ನು ಪರಿಗಣಿಸಿ ಆಯೋಗ ಶಿಫಾರಸ್ಸುಗಳನ್ನು ಮಾಡುತ್ತದೆ. 14ನೇ ಆಯೋಗದ 5 ವರ್ಷಗಳ ನಿಗದಿತ ಅವಧಿಯಲ್ಲಿ ಕರ್ನಾಟಕವು 1,51,309 ಕೋಟಿ ರೂ.ಗಳ ತೆರಿಗೆ ಹಂಚಿಕೆ ಪಡೆದಿದೆ. ಪ್ರಸ್ತುತ 15ನೇ ಹಣಕಾಸು ಅವಧಿಯ ಮೊದಲ 4 ವರ್ಷಗಳಲ್ಲಿ, ಅಂದರೆ 2024ರ ಮಾರ್ಚ್ ವೇಳೆಗೆ ಕರ್ನಾಟಕವು 1,29,854 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಇದಲ್ಲದೇ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್‌ನಲ್ಲಿ 44,485 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಯೋಜಿಸಿದೆ. ಇದರಿಂದ ಕರ್ನಾಟಕ ಸರ್ಕಾರ 2024-25 ಹಣಕಾಸು ವರ್ಷ ಸೇರಿ 5 ವರ್ಷಗಳಲ್ಲಿ ಒಟ್ಟು 1,74,339 ಕೋಟಿ ರೂ.ಗಳನ್ನು ಪಡೆದಂತಾಗಲಿದೆ ಎಂದು ಮಾಹಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
6,280 ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಿದ್ದೇವೆ:
15ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಕೇರಳ ರಾಜ್ಯ ಸಹ ಕೇಂದ್ರದಿಂದ ಅನುದಾನ ಪಡೆದುಕೊಂಡಿದೆ. ಅದೇ ರೀತಿ ಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ಬಿಹಾರ ಯಾವುದೇ ರಾಜ್ಯಗಳಲ್ಲೂ ಅನುದಾನ ಕೊರತೆ ಕಂಡುಬಂದಿಲ್ಲ. ಏಕೆಂದರೆ ಕೇಂದ್ರ ಸರ್ಕಾರ ಯಾವುದೇ ರಾಜ್ಯಕ್ಕೂ ತಾರತಮ್ಯ ಮಾಡಿಲ್ಲ. 50 ವರ್ಷಗಳ ಬಡ್ಡಿ ರಹಿತ ಸಾಲವನ್ನು ಕಲ್ಪಿಸುವ ಯೋಜನೆಯನ್ನೂ ಕೇಂದ್ರ ತಂದಿದೆ. ಹಾಗಾಗಿಯೇ ಕರ್ನಾಟಕ ಸರ್ಕಾರಕ್ಕೆ ಕೇಂದ್ರ 6,280 ಕೋಟಿ ರೂ.ಗಳಷ್ಟು ಬಡ್ಡಿ ರಹಿತ ಸಾಲ ನೀಡಿದೆ. 15ನೇ ಹಣಕಾಸು ಅವಧಿಯಲ್ಲಿ ಇದುವರೆಗಿನ ವಿಪತ್ತು ನಿರ್ವಹಣೆಗೆ 6,196 ಕೋಟಿ ಕೇಂದ್ರದಿಂದ ಪಡೆದುಕೊಂಡಿದೆ ಎಂದು ವಿವರಿಸಿದ್ದಾರೆ.
ಬರ ಪರಿಹಾರಕ್ಕೆ 6,196 ಕೋಟಿ ರೂ. ಕೊಟ್ಟಿದ್ದೇವೆ:
ಬರಪರಿಹಾರಕ್ಕೆ ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ 6,196 ಕೋಟಿ ರೂ. ಕರ್ನಾಟಕ ಸರ್ಕಾರ ಪಡೆದಿದೆ. ಇಲ್ಲಿಯವರೆಗೆ ಒಟ್ಟು 12,476 ರೂ. ಕರ್ನಾಟಕಕ್ಕೆ ನೀಡಲಾಗಿದೆ. ಆದ್ರೆ ಕಾಂಗ್ರೆಸ್ ಮಾತ್ರ ಒಂದೇ ಒಂದು ರೂಪಾಯಿ ನೀಡಿಲ್ಲ ಎಂದು ಪ್ರಕಟಣೆ ಬಿಡುಗಡೆ ಮಾಡಿದೆ. ತೆರಿಗೆ ನೀಡಿಲ್ಲ ಎಂದು ಜಾಹೀರಾತು ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ. ವಿಶೇಷ ಅನುದಾನ ನೀಡಲು ಹಣಕಾಸು ಆಯೋಗ ಶಿಫಾರಸು ಮಾಡಿಲ್ಲ. ಆದಾಗ್ಯೂ ಕರ್ನಾಟಕ ಸರ್ಕಾರ ಅನುದಾನವೇ ನೀಡಿಲ್ಲ ಎಂದು ಸುಳ್ಳು ಬಿತ್ತರಿಸಿದೆ ಎಂದು ಕೆಂಡಕಾರಿದ್ದಾರೆ.