Tag: ಕರ್ನಾಟಕ ಬಂದ್

  • ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು!

    ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು!

    ಬೆಂಗಳೂರು: ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ.

    ವಿಧಾನ ಸಭಾ ಕಲಾಪದಲ್ಲಿ ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡುವ ವೇಳೆ ಯಡಿಯೂರಪ್ಪ ಭಾಷಣ ಮಾಡುತ್ತಿದ್ದರು. ಭಾಷಣದ ಕೊನೆಯಲ್ಲಿ ಕೋಪಗೊಂಡ ಅವರು ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಕರೆ ಕೊಟ್ಟಿದ್ದರು. ಆದರೆ ಇಂದು ಅವರೇ ಉಲ್ಟಾ ಹೊಡೆದು ರೈತರೇ ಪ್ರತಿಭಟನೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡ್ತಾರೆ- ಬಿಎಸ್‍ವೈ

    ಈ ಸಂಬಂಧ ಯಡಿಯೂರಪ್ಪ ಬಂದ್ ಗೆ ಕರೆ ಕೊಟ್ಟಿರುವುದು ಅಕ್ರಮ ಎಂದು ವಕೀಲ ಸೂರ್ಯ ಮುಕುಂದ್ ರಾಜ್ ಅವರು ಡಿಜಿಪಿಗೆ ದೂರು ನೀಡಿದ್ದಾರೆ.

    ಈ ಹಿಂದೆ ಬಂದ್ ಮಾಡಿದಾಗ ಸುಪ್ರೀಂ ಕೋರ್ಟ್, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಬಂದ್ ಅಕ್ರಮ ಎಂದು ತೀರ್ಪು ಕೊಟ್ಟಿತ್ತು. ಈಗ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ಯಡಿಯೂರಪ್ಪ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಾರೆ. ಬಂದ್ ಮೂಲಕ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ ಎಂದು ದೂರನಲ್ಲಿ ಉಲ್ಲೇಖಿಸಿದ್ದಾರೆ.

  • ಬಂದ್‍ಗೆ ಬೆಂಬಲಿಸಿ ಎಂದು ಬಿಎಸ್‍ವೈ ಫೋನ್ ಮಾಡ್ಲಿ, ಆವಾಗ ಉತ್ತರ ಕೊಡ್ತೀನಿ: ವಾಟಾಳ್ ನಾಗರಾಜ್

    ಬಂದ್‍ಗೆ ಬೆಂಬಲಿಸಿ ಎಂದು ಬಿಎಸ್‍ವೈ ಫೋನ್ ಮಾಡ್ಲಿ, ಆವಾಗ ಉತ್ತರ ಕೊಡ್ತೀನಿ: ವಾಟಾಳ್ ನಾಗರಾಜ್

    ಬೆಂಗಳೂರು: ಕರ್ನಾಟಕ ಬಂದ್‍ಗೆ ಹೇಗ್ರಿ ಕರೆ ಕೊಟ್ರಿ, ಬಂದ್‍ಗೆ ಬೆಂಬಲ ಸೂಚಿಸಿ ಅಂತಾ ನಂಗೆ ಫೋನ್ ಮಾಡ್ಲಿ ಸರಿಯಾಗಿ ಉತ್ತರ ಕೊಡ್ತೀನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಗುಡುಗಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಂದ್‍ಗೆ ಕರೆ ನೀಡಿದಾಗ ಬಿಎಸ್‍ವೈ ಬೆಂಬಲಿಸಲಿಲ್ಲ. ನನ್ನ ಬಗ್ಗೆ ಅಪಪ್ರಚಾರ ಮಾಡಿ, ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಮಹದಾಯಿ ಹೋರಾಟಕ್ಕೆ ಬೆಂಬಲ ನೀಡಿಲ್ಲ, ಹೀಗಾಗಿ ಅವರು ಹಸಿರು ಶಾಲ್ ಹಾಕಿಕೊಳ್ಳಬಾರದು ಎಂದು ವಾಟಾಳ್ ಒತ್ತಾಯಿಸಿದ್ದಾರೆ.

    ಈ ಹಿಂದೆ ಯಡಿಯೂರಪ್ಪವರು ಮಾಜಿ ಸಿಎಂ ಸಿದ್ದರಾಮಯ್ಯರನ್ನ ಜೈಲಿಗೆ ಕಳುಹಿಸುತ್ತೇನೆ ಅಂದಿದ್ದರು. ಆದರೆ ಈಗ ಅವರನ್ನು ಮೆಚ್ಚಿಸಲು ಮುಂದಾಗುತ್ತಿದ್ದಾರೆ. ಬಿಜೆಪಿ ಕರೆಕೊಟ್ಟಿರುವ ಕರ್ನಾಟಕ ಬಂದ್‍ಗೆ ನಾವು ಬೆಂಬಲ ನೀಡುವುದಿಲ್ಲ. ಯಡಿಯೂರಪ್ಪಗಿಂತ ನಮಗೆ ರೈತರ ಬಗ್ಗೆ ಹೆಚ್ಚು ಕಾಳಜಿಯಿದೆ ಎಂದು ಅವರು ಹೇಳಿದ್ದಾರೆ.

  • ಕರ್ನಾಟಕ ಬಂದ್ ಕರೆ ನೀಡಿರೋದು ಬಿಜೆಪಿಗೆ ಶೋಭೆ ತರುವಂತದ್ದಲ್ಲ: ಯು.ಟಿ.ಖಾದರ್

    ಕರ್ನಾಟಕ ಬಂದ್ ಕರೆ ನೀಡಿರೋದು ಬಿಜೆಪಿಗೆ ಶೋಭೆ ತರುವಂತದ್ದಲ್ಲ: ಯು.ಟಿ.ಖಾದರ್

    ಮಂಗಳೂರು: ಮೇ28 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವುದು ಬಿಜೆಪಿ ಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಸಚಿವ ಸಂಪುಟ ರಚನೆ ಆದ ನಂತರವೇ ಸಾಲ ಮನ್ನಾ ಕುರಿತು ನಿರ್ಧರಿಸಲು ಸಾಧ್ಯವಾಗುವುದು. ಇದು ರಾಜಕೀಯ ಪ್ರೇರಿತ ಬಂದ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರುತ್ತದೆ. ಯಾವುದೇ ಭಿನ್ನಾಭಿಪ್ರಾಯಗಳು ಎರಡೂ ಪಕ್ಷದಲ್ಲಿ ಇಲ್ಲ ಅಂತಾ ಸ್ಪಷ್ಟಪಡಿಸಿದ್ರು.

    ಜೆಡಿಎಸ್ ಜನತೆಗೆ ನೀಡಿದ ಆಶ್ವಾಸನೆಯಂತೆ ಮುಂದಿನ 24 ಗಂಟೆಯೊಳಗೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲವನ್ನು ಮನ್ನಾ ಮಾಡಬೇಕು ಇಲ್ಲದಿದ್ದಲ್ಲಿ ಮೇ 28, ಸೋಮವಾರದಂದು ಕರ್ನಾಟಕ ಬಂದ್ ಗೆ ಕರೆ ಕೊಡಲಾಗುವುದು ಎಂದು ಬಿಜೆಪಿ ಪ್ರಕಟಿಸಿದೆ.

    ಶುಕ್ರವಾರ ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರ ಕರ್ನಾಟಕ ಬಂದ್ ಕರೆ ನೀಡಿ ಹೊರ ಬಂದಿದ್ದರು. ವಿಧಾನಸೌಧದ ಹೊರಗೆ ಬಂದ ನಂತರವೂ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಅಂತಾ ತಿಳಿಸಿದ್ದರು. ಆದ್ರೆ ಇಂದು ಬೆಳಗ್ಗೆ ಬಂದ್ ಗೆ ಕರೆ ನೀಡಿರೋದು ಬಿಜೆಪಿ ಅಲ್ಲ, ರೈತರು. ನಾಡಿನ ರೈತರಿಗೆ ನಾವೆಲ್ಲ ಬೆಂಬಲ ನೀಡುತ್ತಿದ್ದೇವೆ ಅಂತಾ ಮಾತು ಬದಲಿಸಿದ್ದಾರೆ.

  • ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡ್ತಾರೆ- ಬಿಎಸ್‍ವೈ

    ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡ್ತಾರೆ- ಬಿಎಸ್‍ವೈ

    ಬೆಂಗಳೂರು: ರೈತರ ಸಾಲಮನ್ನಾ ಮಾಡದಿದ್ದರೇ ಸೋಮವಾರ ಕರ್ನಾಟಕ ಬಂದ್ ಮಾಡುವ ವಿಚಾರದ ಬಗ್ಗೆ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

    ಇಡೀ ರಾಜ್ಯದಲ್ಲಿ ಬಂದ್ ಮಾಡಬೇಕು ಎಂದು ರೈತ ಮುಖಂಡರು ಹೊರಟಿದ್ದಾರೆ. ರೈತರೇ ಸ್ವಯಂಪ್ರೇರಿತರಾಗಿ ಆಗಿ ಬಂದ್ ಮಾಡುತ್ತಿದ್ದಾರೆ. ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡುತ್ತಾರೆ ಎಂದು ಬಿಎಸ್‍ವೈ ತಿಳಿಸಿದ್ದಾರೆ.

    ಶುಕ್ರವಾರ ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕರೆ ನೀಡಿದ್ದರು.

    ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸ ಮತಯಾಚನೆ ವೇಳೆ ಮಾತನಾಡಿದ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭಾಷಣ ಮಾಡಿದರು. ಅಲ್ಲದೇ ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಿಎಸ್‍ವೈ ಜೊತೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

    ನಮಗೆ ಎಲ್ಲಾ ಕಡೆಯಿಂದ ಒತ್ತಡ ಬರುತ್ತಿದೆ. ಆದ್ದರಿಂದ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡಬೇಕು. ಇಲ್ಲವಾದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದ್ದರು.

    ಹಿರಿಯರು ಮತ್ತು ಗರ್ಭಿಣಿಯರಿಗೂ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ. ನೀರಾವರಿಗೆ 1 ಲಕ್ಷ ಕೋಟಿ ಮೀಸಲು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದೆಲ್ಲಾ ನೀವು ಯಾವಾಗ ಈಡೇರಿಸುತ್ತೀರಿ ಎಂದು ಬಿಎಸ್‍ವೈ ಪ್ರಶ್ನಿಸಿದ್ದರು.

  • ಇಂದು ಸಂಜೆಯೊಳಗಡೆ ಸಾಲಮನ್ನಾ ಆಗದಿದ್ರೆ ಬಿಜೆಪಿಯಿಂದ ಸೋಮವಾರ ಕರ್ನಾಟಕ ಬಂದ್

    ಇಂದು ಸಂಜೆಯೊಳಗಡೆ ಸಾಲಮನ್ನಾ ಆಗದಿದ್ರೆ ಬಿಜೆಪಿಯಿಂದ ಸೋಮವಾರ ಕರ್ನಾಟಕ ಬಂದ್

    ಬೆಂಗಳೂರು: ಇಂದು ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕರೆ ಕೊಟ್ಟಿದ್ದಾರೆ.

    ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸ ಮತಯಾಚನೆ ವೇಳೆ ಮಾತನಾಡಿದ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭಾಷಣ ಮಾಡಿದ್ರು. ಅಷ್ಟೇ ಅಲ್ಲದೇ ಇಂದು ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಿಎಸ್‍ವೈ ಜೊತೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

    ಹಿರಿಯರು ಮತ್ತು ಗರ್ಭಿಣಿಯರಿಗೂ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ. ನೀರಾವರಿಗೆ 1 ಲಕ್ಷ ಕೋಟಿ ಮೀಸಲು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದೆಲ್ಲಾ ನೀವು ಯಾವಾಗ ಈಡೇರಿಸುತ್ತೀರಿ ಎಂದು ಬಿಎಸ್‍ವೈ ಪ್ರಶ್ನಿಸಿದರು.

    ನಮಗೆ ಎಲ್ಲಾ ಕಡೆಯಿಂದ ಒತ್ತಡ ಬರುತ್ತಿದೆ. ಆದ್ದರಿಂದ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡಬೇಕು. ಇಲ್ಲವಾರದೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದರು.

  • ಗಮನಿಸಿ, ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್ ಇಲ್ಲ

    ಗಮನಿಸಿ, ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್ ಇಲ್ಲ

    ಬೆಂಗಳೂರು: ಏಪ್ರಿಲ್ 12 ರಂದು ಕರೆ ನೀಡಲಾಗಿದ್ದ `ಕರ್ನಾಟಕ ಬಂದ್’ ನಿರ್ಧಾರದಿಂದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಿಂದೆ ಸರಿದಿದ್ದಾರೆ. ಬಂದ್ ಮಾಡುವುದರ ಬದಲಿಗೆ ಅಂದು ರಾಜಭವನ ಮುತ್ತಿಗೆ ಹಾಕಿ, ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ಹೇಳಿದ್ದಾರೆ.

    ಈ ಕುರಿತು ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ನಾವು ಎಂದು ಕಾವೇರಿ ನಿರ್ವಹಣಾ ಮಂಡಳಿಯನ್ನು ಒಪ್ಪುವುದಿಲ್ಲ. ಸುಪ್ರೀ ಕೋರ್ಟ್ ನಿರ್ವಹಣಾ ಮಂಡಳಿಯನ್ನು ರಚನೆಯನ್ನು ಪ್ರಸ್ತಾಪ ಮಾಡಿಲ್ಲ. ನಟರದ ರಜನಿಕಾಂತ್, ಕಮಲ್‍ಹಾಸನ್ ಅವರು ರಾಜಕೀಯಕ್ಕಾಗಿ ಕಾವೇರಿ ವಿಷಯವನ್ನ ಕೆದಕಬಾರದು ಎಂದು ಹೇಳಿದ್ದಾರೆ.

    ನೀತಿ ಸಂಹಿತೆ ಉಲ್ಲಂಘಟನೆ ಆರೋಪ: ವಾಟಾಳ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮಾಡಲಾಗಿದ್ದು, ಚುನಾವಣಾ ಆಯೋಗಕ್ಕೆ ಆರ್ ಟಿಐ ಕಾರ್ಯಕರ್ತ ಉಮೇಶ್ ಎಂಬವರು ದೂರು ನೀಡಿದ್ದಾರೆ. ವಾಟಾಳ್ ನಾಗರಾಜ್ ಚಾಮರಾಜನಗರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದರ ನಡುವೆಯೇ ಬಂದ್ ಗೆ ಕರೆ ನೀಡಿದ್ದಾರೆ. ಈ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

    ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

    -ಏ.12ರಂದು ಕರ್ನಾಟಕ ಬಂದ್

    ಬೆಂಗಳೂರು: ನನಗೂ ಕೆಲಸವಿದೆ ರಾಜ್ಯದ ಕಳಕಳಿಯಿಂದ ಕೆಲಸ ಮಾಡುತ್ತಾ ಇದ್ದೀನಿ. ನಾನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ. ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ ಎಂದು ಮಾಧ್ಯಮದವರ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು.

    ಏಪ್ರಿಲ್ 12 ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಮಾಡಿದಾಗ ಮಾಧ್ಯಮದಲ್ಲಿ ನನ್ನ ಬಗ್ಗೆ ನೆಗೆಟಿವ್ ಸುದ್ದಿಯಾಗುತ್ತದೆ. ಆದ್ರೆ ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ. ಬಂದ್ ದಿನ ಟೌನ್ ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೆ ಮೆರವಣಿಗೆ ಇರುತ್ತದೆ. ಹೀಗಾಗಿ ಬಸ್ ಸಂಚಾರ ಮಾಡದಂತೆ ಎಚ್ಚರಿಕೆ ನೀಡಿದರು. ನೀತಿ ಸಂಹಿತೆಗೂ ಬಂದ್‍ಗೂ ಸಂಬಂಧವಿಲ್ಲ. ಅನ್ಯಾಯವಾಗಿದೆ ಬಂದ್ ಮಾಡುತ್ತಿದ್ದೇವೆ. ಮೊನ್ನೆ ಗಡಿ ಬಂದ್ ಮಾಡಲಿಲ್ಲವಾ ಚುನಾವಣೆ ನಿಲ್ಲುವವರಿಗೆ ತೊಂದರೆಯಾಗಬಹುದು. ಚುನಾವಣೆ ನೀತಿ ಸಂಹಿತೆ ಅಂತಾ ಬಾಯಿಗೆ ಬಟ್ಟೆ ಹಾಕಿಕೊಂಡು ಇರುವುದಕ್ಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದರು.

    ಕಮಲ ಹಾಸನ್, ರಜನೀಕಾಂತ್ ಯಾರು ನೀವು? ಕನ್ನಡಿಗರ ಋಣ ನಿಮ್ಮ ಮೇಲಿದೆ. ಕನ್ನಡದ ನೆಲದಲ್ಲಿ ಕೋಟಿ ಕೋಟಿ ಸಂಪಾದನೆ ಮಾಡಿದ್ದೀರಾ. ರಜನೀಕಾಂತ್, ಕಮಲ್ ಹಾಸನ್ ಕನ್ನಡದ ನೆಲಕ್ಕೆ ಇನ್ನು ಮುಂದೆ ಕಾಲಿಡಬಾರದು ಎಂದು ನೇರ ಎಚ್ಚರಿಕೆ ನೀಡಿದ ಅವರು, ಕಮಲ್ ಹಾಸನ್ ಮರಾಠಿಯವನು. ಅಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಆದರೆ ಕನ್ನಡದಲ್ಲಿ ಮಾತ್ರ ಯಾರಿಲ್ಲ, ಯಾರು ಧ್ವನಿಯೆತ್ತುವುದಿಲ್ಲ. ನಾರಾಯಣ ಗೌಡರಿಗೂ ಮನವಿ ಮಾಡುತ್ತೇನೆ, ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ ಬಂದ್‍ಗೆ ಬೆಂಬಲ ಕೊಡಿ ಎಂದು ಕೇಳಿಕೊಂಡರು.

    ಸ್ಟಾಲಿನ್ ಬಂಧನ ಮಾಡಬೇಕಾಗಿತ್ತು. ನರೇಂದ್ರ ಮೋದಿಗೆ ಮರ್ಯಾದೆ ಇಲ್ಲ, ಅವರಿಗೆ ತಮಿಳುನಾಡಿನಲ್ಲಿ ರಾಜಕೀಯ ಮಾಡಬೇಕಾಗಿದೆ. ರಾಜ್ಯದಲ್ಲಿ ಬಿಜೆಪಿ ಇಲ್ಲವೇ ಇಲ್ಲ ಎಂದು ಸಂಸದರನ್ನು ಹಾಗೂ ಕೇಂದ್ರ ಸರ್ಕಾರವನ್ನು ದೂರಿದ ಅವರು, ಹೈಕೋರ್ಟ್ ಗೆ ಹೋಗಿ ಕಿತಾಪತಿ ಮಾಡುವವರು. ಮೋಸ ಮಾಡುವವರು ಕರ್ನಾಟಕದಲ್ಲಿ ಮಾತ್ರ. ಬಂದ್ ಬೇಡ ಅಂತಾ ಕೋರ್ಟ್ ಗೆ ಹೋಗುವವರು ಕನ್ನಡ ದ್ರೋಹಿಗಳು ಅಂತ ಗರಂ ಆದ್ರು.

    ಇದೇ ವೇಳೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದ್ ಮಾತನಾಡಿ, ನಮಗೆ ಬಂದ್ ಕರೆಯುವ ಉದ್ದೇಶವಿರಲಿಲ್ಲ, ಆದರೆ ತಮಿಳುನಾಡು ಇದಕ್ಕೆ ದಾರಿ ಮಾಡಿಕೊಟ್ಟಿದೆ. ತಮಿಳುನಾಡು ರಾಜಕೀಯ ನಾಯಕರಿಗೆ, ಅಲ್ಲಿನ ಸಿನಿಮಾ ರಂಗದ ರಜನೀಕಾಂತ್, ಕಮಲ್ ಹಾಸನ್ ಯಾರಿಗೂ ಸೌಹಾರ್ದಯುತವಾಗಿ ಕರ್ನಾಟಕದ ಜೊತೆ ಮಾತುಕತೆ ಮಾಡುವ ಉದ್ದೇಶವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಮಗೆ ಈ ಬಾರಿಯೂ ಜೂನ್ ಜುಲೈ ತಿಂಗಳ ಬೆಳಗ್ಗೆ ಹೋಗ್ಲಿ ಕುಡಿಯೋದಕ್ಕೆ ನೀರು ಇರುವುದಿಲ್ಲ. ರಾಜ್ಯದ ರಾಜಕೀಯ ಪಕ್ಷಗಳು ಒಂದಾಗಬೇಕು. ತಮಿಳುನಾಡು ಕೇಂದ್ರದ ಮೇಲೆ ಒತ್ತಡ ಹೇರುತ್ತಿದೆ. ತಮಿಳುನಾಡಿನ ನಿಲುವಿಗೆ ವಿರೋಧ ವ್ಯಕ್ತಪಡಿಸಬೇಕಾಗಿದೆ ಎಂದರು.

    ನಮ್ಮ ಸಂಸದರು ರಾಜೀನಾಮೆ ಹೋಗಲಿ, ಬಾಯಿಬಿಡುವುದು ಇಲ್ಲ. ತಮಿಳುನಾಡು ಕರೆ ಕೊಟ್ಟ ಬಂದ್‍ಗೆ ವಿರೋಧಿಸಿ ನಾವು ಪ್ರತಿಯಾಗಿ ಕರ್ನಾಟಕ ಬಂದ್ ಕರೆ ಕೊಡುತ್ತೇವೆ. ಏಪ್ರಿಲ್ 12 ರಂದು ಕರ್ನಾಟಕ ಬಂದ್. ಇದರಿಂದ ನಾವು ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆದ್ರೆ ಏ.9ರಂದು ತೀರ್ಪು ನೋಡುತ್ತೇವೆ. ಅದರಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಹೇಳಿದರು.

    ಕೆಎಸ್‍ಆರ್ ಟಿಸಿ ನೌಕರರ ಸಂಘ, ಲಾರಿ ಮಾಲೀಕರ ಸಂಘ, ಆಟೋ ಚಾಲಕರ ಸಂಘ ನಮ್ಮ ಬಂದ್‍ಗೆ ಬೆಂಬಲ ಕೊಡುವುದಾಗಿ ಘೋಷಿಸಿದ್ದಾರೆ ಎಂದು ತಿಳಿಸಿದರು. ಕರವೇ ಅಧ್ಯಕ್ಷ ಗಿರೀಶ್ ಗೌಡ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.

  • KSRTC, BMTC ಬಸ್‍ಗಳ ಓಡಾಟ ಶುರು – ಸಹಜ ಸ್ಥಿತಿಯತ್ತ ಕರ್ನಾಟಕ

    KSRTC, BMTC ಬಸ್‍ಗಳ ಓಡಾಟ ಶುರು – ಸಹಜ ಸ್ಥಿತಿಯತ್ತ ಕರ್ನಾಟಕ

    ಬೆಂಗಳೂರು: ಕರ್ನಾಟಕ ಬಂದ್ ಬಹುತೇಕ ಅಂತ್ಯಗೊಂಡಿದೆ. ಬಂದ್‍ನ ಪರಿಣಾಮ ನಿನ್ನೆ ರಾತ್ರಿಯಿಂದ ನಿಂತಿದ್ದ ಬಸ್ಸುಗಳ ಸಂಚಾರ ಪ್ರಾರಂಭವಾಗಿದೆ. ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳ ಓಡಾಟ ಶುರುವಾಗಿರೋ ಹಿನ್ನೆಲೆಯಲ್ಲಿ ಕರ್ನಾಟಕ ಸಹಜ ಸ್ಥಿತಿಯತ್ತ ತೆರಳುತ್ತಿದೆ.

    ಬೆಳಗ್ಗೆ 6 ಗಂಟೆಯಿಂದ ಸ್ಥಗಿತಗೊಂಡಿದ್ದ ಬಸ್‍ಗಳ ಸಂಚಾರ ಇದೀಗ ಆರಂಭವಾಗಿದೆ. ಮೆಜೆಸ್ಟಿಕ್ ಸೇರಿದಂತೆ ವಿವಿಧ ಡಿಪೋಗಳಿಂದ ಬಸ್‍ಗಳು ಹೊರಡುತ್ತಿವೆ. ಡಿಪೋ ಗಳಿಂದ ಈಗಾಗಲೇ ಕೆಲವು ಬಿಎಂಟಿಸಿ ಬಸ್‍ಗಳು ಹೊರಟಿದ್ದು, ಪರಿಸ್ಥಿತಿ ನೋಡಿಕೊಂಡು ಎಂದಿನಂತೆ ಬಸ್ ಸಂಚಾರ ಆರಂಭಿಸಲು ಬಿಎಂಟಿಸಿ ನಿರ್ಧಾರ ಮಾಡಿದೆ.

    ಬಸ್‍ಗಳನ್ನು ಡಿಪೋನಿಂದ ಹೊರಬಿಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಬಿಎಂಟಿಸಿ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ 44 ಡಿಪೋ ಗಳಲ್ಲಿ ಬಸ್ ಸಂಚಾರ ಆರಂಭವಾಗಿದೆ. ಯಶವಂತಪುರ ಬಿಎಂಟಿಸಿ ನಿಲ್ದಾಣದಿಂದ ಬಸ್ ಸಂಚಾರ ಆರಂಭವಾಗಿ ನೆಲಮಂಗಲ ಕಡೆ ಮೊದಲ ಬಸ್ ಹೊರಟಿತು.

    ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಕೂಡ ಸಹಜ ಸ್ಥಿತಿಗೆ ಬಂದಿದೆ. 852 ಬಸ್ ಗಳ ಸಂಚಾರ ಆರಂಭವಾಗಿದ್ದು, ರಾಜ್ಯದ ವಿವಿಧ ಮೂಲೆ ಮೂಲೆಗಳಿಗೆ ಸರ್ಕಾರಿ ಬಸ್‍ಗಳು ತೆರಳುತ್ತಿವೆ.

     

  • ಭ್ರಷ್ಟಾಚಾರ ಅಂದ್ರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದ್ರೆ ಭ್ರಷ್ಟಾಚಾರ: ಅಮಿತ್ ಶಾ

    ಭ್ರಷ್ಟಾಚಾರ ಅಂದ್ರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದ್ರೆ ಭ್ರಷ್ಟಾಚಾರ: ಅಮಿತ್ ಶಾ

    ಮೈಸೂರು: ಭ್ರಷ್ಟಾಚಾರ ಅಂದರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಂದರೆ ಭ್ರಷ್ಟಾಚಾರ. ಭ್ರಷ್ಟಾಚಾರ ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, ಜನರೇ ನಿಮ್ಮ ಬಳಿ 70 ಲಕ್ಷದ ವಾಚ್ ಇದೆಯಾ? ಸಮಾಜವಾದಿ ಸಿದ್ದರಾಮಯ್ಯ ಕೈಯಲ್ಲಿ 70 ಲಕ್ಷದ ವಾಚಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಅರ್ಕಾವತಿ ಡಿ ನೋಟಿಫಿಕೇಷನ್, ಗಣಿ ವಿಚಾರದಲ್ಲಿ ಭ್ರಷ್ಟಾಚಾರ ದೊಡ್ಡದಾಗಿದೆ ಎಂದು ಟೀಕಿಸಿದರು.

    ಸಿಎಂ ಆಪ್ತ ಗೋವಿಂದರಾಜು ಡೈರಿ ದೆಹಲಿ ತಲುಪಿದ ಮೇಲೆ ಸಿದ್ದರಾಮಯ್ಯ ನಿದ್ದೆ ಹಾರಿ ಹೋಗಿದೆ. ಬಡವರಿಗೆ ಕೊಡುವ ಹಾಸಿಗೆ, ಕೇಂದ್ರ ಕೊಡುವ ಅಕ್ಕಿಯಲ್ಲಿ ಹಣ ತಿನ್ನುವ ಸಚಿವರು ಇದ್ದಾರೆ. ಎರಡು ದಿನ ಹೇಳುವಷ್ಟು ಭ್ರಷ್ಟಾಚಾರದ ಮಾಹಿತಿ ನನ್ನ ಬಳಿ ಇದೆ ಎಂದರು.

    ಕರ್ನಾಟಕ ಬಂದ್ ನಡುವೆ ಇಷ್ಟು ಜನ ಬಂದಿದ್ದಕ್ಕೆ ನಿಮಗೆ ಕೃತಜ್ಞತೆಗಳು. ಕಾಂಗ್ರೆಸ್ ತನ್ನ ತುರ್ತು ಪರಿಸ್ಥಿತಿಯ ಸಂಸ್ಕೃತಿ ಬಿಟ್ಟಿಲ್ಲ. ನಾನು ಕಾಂಗ್ರೆಸ್ ಗೆ ಸವಾಲು ಹಾಕುತ್ತೇನೆ. ಬಿಜೆಪಿ ಯನ್ನು ಇಲ್ಲಿ ಸೋಲಿಸುವುದಕ್ಕೆ ಕಾಂಗ್ರೆಸ್ ಗೆ ಆಗಲ್ಲ. ಚಾಮುಂಡೇಶ್ವರಿ ದೇವಿ ಮಹಿಷಾಸುರನ ಮರ್ದನ ಮಾಡಿದ ಭೂಮಿ ಇದು. ಸಿದ್ದರಾಮಯ್ಯ ಅವರ ಭ್ರಷ್ಟಾಚಾರ ಸರಕಾರವನ್ನು ಈ ನಾಡಿನ ಜನ ಕಿತ್ತೊಗೆಯುತ್ತಾರೆ ಎಂಬ ವಿಶ್ವಾಸ ನನಗಿದೆ. ಇದು ಸರ್ಕಾರ ಬದಲಾಯಿಸಲು ನಡೆದ ಪರಿವರ್ತನಾ ಯಾತ್ರೆ ಅಲ್ಲ. ಇದು ನಾಡಿನ ಅಭಿವೃದ್ಧಿಗಾಗಿ ನಡೆದ ಯಾತ್ರೆ. ರಾಜ್ಯದ ಅಭಿವೃದ್ಧಿಗೆ ಅನೇಕರು ದುಡಿದಿದ್ದಾರೆ. ಅವರನ್ನು ಬಿಟ್ಟು ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸಿದೆ ಎಂದರು.

    ರಾಜ್ಯದಲ್ಲಿ ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಂಘಟನೆಯ ಕಾರ್ಯಕರ್ತರ ಕೊಲೆ ಆಗಿದೆ. ಇದು ಸರ್ಕಾರದ ತಾರತಮ್ಯದಿಂದ ನಡೆದಿರುವುದು. ಎಸ್‍ಡಿಪಿ ಮೇಲಿನ ಎಲ್ಲಾ ಕೇಸ್ ಸರ್ಕಾರ ವಾಪಸ್ ಪಡೆದಿದೆ. ಹಾಗದರೆ ಸಿದ್ದರಾಮಯ್ಯ ಅವರೇ ನೀವು ಎಸ್‍ಡಿಪಿಐ ಸಂಘಟನೆ ಬೆಂಬಲಿಸುತ್ತೀರಾ? ಗಣೇಶ ಚರ್ತುರ್ಥಿ ಮೆರವಣಿಗೆಗೆ ನೀವು ಅವಕಾಶ ಕೊಡಲ್ಲ. ಆದರೆ, ಬೇರೆ ಮೆರವಣಿಗೆಗೆ ಅವಕಾಶ ಕೊಡುತ್ತೀರಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ರು.

    ಕರ್ನಾಟಕ ಬಂದ್ ಅಮಿತ್ ಶಾ ಯಾತ್ರೆಗೂ ತಟ್ಟಿತ್ತು. ಕೊನೆ ಕ್ಷಣದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿತ್ತು. ಅಮಿತ್ ಶಾ ಮೈಸೂರಿಗೆ ಆಗಮಿಸಿ ವಿಮಾನ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಬೇಕಿತ್ತು. ನಂತರ ಸುತ್ತೂರು ಮಠಕ್ಕೂ ಭೇಟಿ ನೀಡಿ ಅಂತಿಮವಾಗಿ ಮಹಾರಾಜ ಕಾಲೇಜು ಮೈದಾನದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದ್ರೆ ಕಾರ್ಯಕ್ರಮದ ಪಟ್ಟಿಯನ್ನ ಪರಿಷ್ಕೃತಗೊಳಿಸಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ಭಾಷಣ ಮಾಡಿದರು.

    ಆರಂಭದಲ್ಲಿ ಬಂದ್ ನಿಂದಾಗಿ ಪರಿವರ್ತನಾ ಯಾತ್ರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಕರ್ತರು ಬಂದಿರಲಿಲ್ಲ. ಆದರೆ ಶಾ ವೇದಿಕೆಗೆ ಆಗಮಿಸಿದ ಮೇಲೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು.

    ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿದಂತೆ ಇತರೆ ಬಿಜೆಪಿ ನಾಯಕರು ಹೂ ಗುಚ್ಛ ನೀಡಿ ಸ್ವಾಗತ ಕೋರಿದ್ರು.

  • ರಾಜ್ಯ ಸರ್ಕಾರಕ್ಕೆ ಉಡುಪಿಯ ನರ್ಮ್ ಬಸ್ ಪ್ರಯಾಣಿಕರಿಂದ ಹಿಡಿಶಾಪ

    ರಾಜ್ಯ ಸರ್ಕಾರಕ್ಕೆ ಉಡುಪಿಯ ನರ್ಮ್ ಬಸ್ ಪ್ರಯಾಣಿಕರಿಂದ ಹಿಡಿಶಾಪ

    ಉಡುಪಿ: ಮಹಾದಾಯಿ ವಿಚಾರದಲ್ಲಿ ಕರ್ನಾಟಕ ಬಂದ್ ರಾಜ್ಯ ಸರ್ಕಾರಿ ಪ್ರೇರಿತ ಎಂಬುದು ಸಾಬೀತಾಗಿದೆ. ಉಡುಪಿ ಜಿಲ್ಲೆಯಲ್ಲಿ ಇಂದು ಬಂದ್ ಮಾಡುವಂತೆ ಕನ್ನಡಪರ ಅಥವಾ ರೈತ ಸಂಘಟನೆಗಳು ಕರೆ ನೀಡಿಲ್ಲ. ಜಿಲ್ಲೆಯಲ್ಲಿ ಯಾವುದೇ ಪ್ರತಿಭಟನೆ, ಅಹಿತಕರ ಘಟನೆ ನಡೆದಿಲ್ಲ. ಆದ್ರೆ ಸರ್ಕಾರಿ ನರ್ಮ್ ಬಸ್ಸನ್ನು ಏಕಾಏಕಿ ಬಂದ್ ಮಾಡಲಾಗಿದ್ದು, ಇದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು ಬಸ್ ಇಲ್ಲದೆ ಪರದಾಡುವಂತಾಯ್ತು.

    ಉಡುಪಿ ನಗರದಲ್ಲಿ ಬೆಳಗ್ಗೆ ಒಂದು ಟ್ರಿಪ್ ಮಾಡಿದ ನರ್ಮ್ ಬಸ್ಸುಗಳು 11 ಗಂಟೆಯಾಗುತ್ತಿದ್ದಂತೆ ಸೇವೆ ನಿಲ್ಲಿಸಿವೆ. ಇದರಿಂದ ನರ್ಮ್ ಬಸ್ ನೆಚ್ಚಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಬಸ್ ಓಡಾಟ ಸ್ಥಗಿತ ಮಾಡುವಂತೆ ಆರ್‍ಟಿಸಿ ಮಂಗಳೂರು ವಿಭಾಗದಿಂದ ಆದೇಶ ಬಂದಿದೆ ಎನ್ನಲಾಗಿದೆ. ಸರ್ಕಾರಿ ಬಸ್ಸನ್ನು ಅವಲಂಬಿಸಿದ್ದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಇದರಿಂದ ಸಮಸ್ಯೆಯಾಗಿದೆ.

    ಉಡುಪಿಯಲ್ಲಿ ಖಾಸಗಿ ಬಸ್ ಗಳ ಅಟ್ಟಹಾಸ ಜೋರಾದಾಗ ಸಚಿವ ಪ್ರಮೋದ್ ಮಧ್ವರಾಜ್ ವಿಶೇಷ ಮುತುವರ್ಜಿಯಿಂದ ನರ್ಮ್ ಬಸ್ ಗಳು ರಸ್ತೆಗೆ ಇಳಿದಿದ್ದವು. ಖಾಸಗಿ ಬಸ್ ಗಳ ವಿರುದ್ಧ ಸಚಿವರೇ ಸಮರ ಸಾರಿದ್ದರು. ಆದ್ರೆ ಇದೀಗ ಉಡುಪಿ ಬಂದ್ ಇಲ್ಲದಿದ್ದರೂ ಸರ್ಕಾರಿ ಬಸ್ ಬಂದ್ ಮಾಡಿರುವುದು ರಾಜ್ಯ ಸರ್ಕಾರ ತನ್ನ ಅಭಿಪ್ರಾಯ ಹೇರಿದೆ ಎಂಬುದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.

    ನರ್ಮ್ ಬಸ್ ಉಡುಪಿಯಲ್ಲಿ ಓಡಾಡಿದ್ದರಿಂದ ಹಿರಿಯ ನಾಗರೀಕರಿಗೆ, ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿತ್ತು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಹಿರಿಯ ನಾಗರೀಕ ಗೋವಿಂದ, ಖಾಸಗಿ ಸಿಟಿ ಬಸ್ ಕಂಡಕ್ಟರ್ ಗಳು ಪ್ರಯಾಣಿಕರ ಬಗ್ಗೆ ಅಗೌರವವಾಗಿ ವರ್ತಿಸುತ್ತಾರೆ. ನಾನು ಯಾವಾಗಲೂ ನರ್ಮ್ ಬಸ್ಸಲ್ಲೇ ಪ್ರಯಾಣ ಮಾಡುವುದು. ಇವತ್ತು ಬಸ್ ಇಲ್ಲ ಅಂತ ಮುನ್ಸೂಚನೆ ಇರಲಿಲ್ಲ. ಮೊದಲೇ ಗೊತ್ತಿದ್ದರೆ ನಾನು ಮನೆಯಿಂದ ಹೊರಗೆ ಬರ್ತಾಯಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.