Tag: ಕರ್ನಾಟಕ ಬಂದ್

  • ಕನ್ನಡ ಹೋರಾಟಗಾರರು ಗೂಂಡಾಗಳಲ್ಲ, ಬಸ್‍ಗಳಿಗೆ ಬೆಂಕಿ ಹಾಕಿಲ್ಲ: ಪ್ರವೀಣ್ ಶೆಟ್ಟಿ ಕಿಡಿ

    ಕನ್ನಡ ಹೋರಾಟಗಾರರು ಗೂಂಡಾಗಳಲ್ಲ, ಬಸ್‍ಗಳಿಗೆ ಬೆಂಕಿ ಹಾಕಿಲ್ಲ: ಪ್ರವೀಣ್ ಶೆಟ್ಟಿ ಕಿಡಿ

    ಬೆಂಗಳೂರು: I.N.D.I.A ಒಕ್ಕೂಟಕ್ಕೆ ಮಾತುಕತೆ ಮಾಡಲು ಆಗುತ್ತದೆ. ಆದರೆ ಕಾವೇರಿ ವಿಚಾರಕ್ಕೆ (Cauvery River water) ಮಾತಾಡಲು ಸಾಧ್ಯವಿಲ್ಲವೇ ಎಂದು ಸರ್ಕಾರದ ವಿರುದ್ಧ ಕರವೇ ಸಂಘಟನೆಯ ಪ್ರವೀಣ್ ಶೆಟ್ಟಿಯವರು (Praveen Shetty) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಕನ್ನಡಪರ ಹೋರಾಟಗಾರರಿಗೆ ನೋಟಿಸ್ ನೀಡಿದ ಹಿನ್ನೆಲೆ ಬೆಂಗಳೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು ಸರ್ಕಾರ ಪೊಲೀಸರ ಮೂಲಕ ನೋಟಿಸ್ ಕೊಡುವ ಕೆಲಸ ಮಾಡುತ್ತಿದೆ. ಕನ್ನಡ ಹೋರಾಟಗಾರು ಗೂಂಡಗಳಲ್ಲ, ಅವರು ಯಾವುದೇ ಬಸ್‍ಗಳಿಗೆ ಬೆಂಕಿ ಹಾಕಿಲ್ಲ. ಅಂಗಡಿಗಳ ಮೇಲೆ ದಾಳಿ ಮಾಡಿಲ್ಲ. ಆದರೂ ಸರ್ಕಾರ ನೋಟಿಸ್ ನೀಡಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ. ಇದನ್ನೂ ಓದಿ: Karnataka Bandh : ಸರ್ಕಾರಿ ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲ

    ಕಾವೇರಿ ನಮ್ಮ ಮಹಾರಾಜರ ಶ್ರಮದಿಂದ ಕಟ್ಟಿದ್ದು, ಕಾವೇರಿ ಕೊಳ್ಳದಲ್ಲೇ ಅನೇಕ ತಾಲೂಕುಗಳು ಬರದಲ್ಲಿ ಬಳಲುತ್ತಿವೆ. ಆದರೆ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡಲಾಗುತ್ತಿದೆ. ನಮಗೆ ಕುಡಿಯಲು ನೀರಿಲ್ಲ. ತಮಿಳರು ಸಮುದ್ರಕ್ಕೆ ನೀರು ಹರಿಸುತ್ತಿದ್ದಾರೆ. ಈ ವೇಳೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ನಾನು ಮನವಿ ಮಾಡುತ್ತಿದ್ದೇನೆ. ಬಣ ರಾಜಕೀಯದಿಂದ ಈ ವಿಚಾರ ಮುನ್ನೆಲೆಗೆ ಬರುತ್ತಿಲ್ಲ. ಶೀಘ್ರ ಸುಗ್ರವಾಜ್ಞೆ ಜಾರಿಗೆ ತಂದು, ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಬೇಕು ಎಂದಿದ್ದಾರೆ.

    ನಾವು ನಿಯಮ ಮೀರಿ ಬಂದ್ ಮಾಡುತ್ತಿಲ್ಲ. ಕೊವೀಡ್ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಈಗ ನಾವು ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಮಾಡಿದ್ದು ಗೊತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಇದರ ಬೆಲೆ ತೆರಬೇಕಾಗುತ್ತದೆ. ಏನೇ ಆದರೂ ಹೋರಾಟವನ್ನು ಕೈಬಿಡುವುದಿಲ್ಲ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಶುಕ್ರವಾರ ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Bandh : ಸರ್ಕಾರಿ ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲ

    Karnataka Bandh : ಸರ್ಕಾರಿ ಬಸ್‌ಗಳಿದ್ದರೂ ಪ್ರಯಾಣಿಕರು ಇಲ್ಲ

    ಬೆಂಗಳೂರು: ಕರ್ನಾಟಕ ಬಂದ್‌ಗೆ (Karnataka Bandh) ಸರ್ಕಾರಿ ಸಾರಿಗೆ ಬೆಂಬಲ ನೀಡದೇ ಇದ್ದರೂ ಜನ ಬಾರದ ಕಾರಣ ಕಡಿಮೆ ಪ್ರಮಾಣದಲ್ಲಿ ಬಸ್ಸುಗಳು ರಸ್ತೆಗೆ ಇಳಿದಿದೆ.

    ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ (Majestic Bus Stand) ಬಸ್ಸುಗಳಿದ್ದರೂ ಪ್ರಯಾಣಿಕರು ಬರುತ್ತಿಲ್ಲ. ಪ್ಲಾಟ್ ಫಾರ್ಮ್ ಕೂಡಾ ಬಿಕೋ ಎನ್ನುತ್ತಿದ್ದು, ಕಡಿಮೆ ಸಂಖ್ಯೆಯ ಪ್ರಯಾಣಿಕರು ಬಸ್ಸು ಹತ್ತಿದ್ದಾರೆ. ಇದನ್ನೂ ಓದಿ: ಇಂದು ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ?

    ಉತ್ತರ ಕರ್ನಾಟಕ ಭಾಗ, ಮಲೆನಾಡು, ಕರಾವಳಿ ಭಾಗಕ್ಕೆ ತೆರಳುವ ಬಸ್ಸುಗಳ ಪ್ರಯಾಣಿಕರ ಸಂಖ್ಯೆ ಭಾರೀ ಇಳಿಕೆಯಾಗಿದೆ. ಬಂದ್‌ ಹಿನ್ನೆಲೆಯಲ್ಲಿ 50% ಕೆಎಸ್‌ಆರ್‌ಟಿಸಿ ಬಸ್ಸುಗಳು ಮಾತ್ರ ರಸ್ತೆಗೆ ಇಳಿದಿದೆ.

    ಘಟಕ ನಿರ್ವಾಹಕರು ಅಗತ್ಯ ಇರುವ ಜಿಲ್ಲೆಗಳಿಗೆ ಪ್ರಯಾಣಿಕರ ವ್ಯವಸ್ಥೆ ನೋಡಿಕೊಂಡು ಬಸ್ ಸಂಚಾರ ಮಾಡಲು ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.

    ಗುರುವಾರ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಿಮಾನ ನಿಲ್ದಾಣ (Airport) ಸೇರಿದಂತೆ ಎಲ್ಲಾ ಎಲ್ಲಾ ಭಾಗಕ್ಕೂ ಕಡಿಮೆ ಪ್ರಮಾಣದಲ್ಲಿ ಬಸ್ ಸಂಚಾರ ಇರಲಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಸ್ ನಿರ್ವಹಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶುಕ್ರವಾರ ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ?

    ಶುಕ್ರವಾರ ಕರ್ನಾಟಕ ಬಂದ್ – ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಜೀವನದಿ ಕಾವೇರಿಗಾಗಿ (Cauvery River) ಶುಕ್ರವಾರ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಬಂದ್‌ಗೆ 1,600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ-ಜೆಡಿಎಸ್ ಕೂಡ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಜೀವಜಲಕ್ಕಾಗಿ ತಮ್ಮ ಒಗ್ಗಟ್ಟು ಪ್ರದರ್ಶನ ಮಾಡಲಿವೆ.

    ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ನಡೆಯಲಿದೆ. ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಬಂದ್ (National Highway) ಆಗುವ ಸಾಧ್ಯತೆಗಳಿವೆ. ರಾಜಧಾನಿಯಲ್ಲಿ  ಕನ್ನಡ ಒಕ್ಕೂಟ ಬೃಹತ್ ಮೆರವಣಿಗೆಗೆ ಪ್ಲಾನ್ ಮಾಡಿದೆ. ಬಂದ್‌ಗೆ ಬೆಂಬಲ ನೀಡುವಂತೆ  ಕನ್ನಡ ಹೋರಾಟಗಾರರು ಬೆಂಗಳೂರು ಜನತೆಯಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: Karnataka Bandh : ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಡಿಸಿಗಳಿಗೆ ಬಿಟ್ಟ ಶಿಕ್ಷಣ ಇಲಾಖೆ

    ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದಲೇ ಪೊಲೀಸ್ ಇಲಾಖೆ ನಿಷೇಧಾಜ್ಞೆ ಜಾರಿ ಮಾಡಿದೆ. ಫ್ರೀಡಂ ಪಾರ್ಕ್ ಬಿಟ್ಟು ಬೇರೆಡೆ ಯಾವುದೇ ಪ್ರತಿಭಟನೆ, ರ‍್ಯಾಲಿಗಳಿಗೆ ಅವಕಾಶ ಇರುವುದಿಲ್ಲ. ಬಂದ್ ವೇಳೆ ಸಾವು ನೋವು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾದರೆ ಬಂದ್‌ಗೆ ಕರೆ ನೀಡಿರುವ ಸಂಘಟನೆಗಳೇ ಹೊಣೆ ಆಗುತ್ತವೆ ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

    ಬಲವಂತವಾಗಿ ವಾಹನ ತಡೆ, ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ. ಒಂದೊಮ್ಮೆ ಬಲವಂತದ ಕ್ರಮಗಳಿಗೆ ಮುಂದಾದ್ರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದು ತಾಕೀತು ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಹ ಬಂದ್‌ಗೆ ಅವಕಾಶ ಇಲ್ಲವೆಂದು ಹೇಳಿದ್ದಾರೆ. ಆದ್ರೆ ಕನ್ನಡ ಒಕ್ಕೂಟಗಳು ಮಾತ್ರ ಇದಕ್ಕೆ ಡೋಂಟ್‌ಕೇರ್ ಎಂದಿವೆ. ಇದನ್ನೂ ಓದಿ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ – ಹಸುಗೂಸಿನೊಂದಿಗೆ ಬೀದಿಗೆ ಬಿದ್ದ ದಂಪತಿ

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಧಾರವಾಡ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರದ 2 ತಾಲೂಕಲ್ಲಿ ಮಾತ್ರ ಬಂದ್) ಜಿಲ್ಲೆಗಳು ಸಂಪೂರ್ಣ ಸ್ಥಬ್ಧವಾಗುವ ಸಾಧ್ಯತೆಗಳಿವೆ. ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಯಾದಗಿರಿ, ಕೊಡಗು, ಗದಗ, ಕಲಬುರಗಿ, ರಾಯಚೂರು, ಶಿವಮೊಗ್ಗ, ಕೊಪ್ಪಳ, ಹಾವೇರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಬಂದ್‌ಗೆ ಕರೆ ನೀಡದಿರುವುದರಿಂದ ಎಂದಿನಂತೆ ಈ ಜಿಲ್ಲೆಗಳಲ್ಲಿ ಕೆಲ ನಡೆಯಲಿದೆ.

    ಏನೆಲ್ಲಾ ಸೇವೆ ಬಂದ್?
    ಓಲಾ ಊಬರ್, ಆಟೋ, ಗೂಡ್ಸ್ ವಾಹನ, ಹೋಟೆಲ್, ಚಿತ್ರಮಂದಿರ, ಜಿಮ್, ಹೋಟೆಲ್, ಮಾಲ್, ಬೀದಿ ಬದಿ ವ್ಯಾಪಾರ, ಕೆ.ಆರ್ ಮಾರ್ಕೆಟ್, ಶಾಲಾ ವಾಹನಗಳು, ಸಿನಿಮಾ ಶೂಟಿಂಗ್, ಆಭರಣ ಮಳಿಗೆಗಳು ಬಂದ್ ಆಗಿರಲಿವೆ.

    ಏನಿರುತ್ತೆ?
    ಆಸ್ಪತ್ರೆ, ಮೆಡಿಕಲ್ ಸ್ಟೋರ್, ಅಂಬುಲೆನ್ಸ್, ನಮ್ಮ ಮೆಟ್ರೋ, ರೈಲು, ವಿಮಾನ, ಹಾಲು, ತರಕಾರಿ, ಬ್ಯಾಂಕ್, ಪೋಸ್ಟ್ ಆಫೀಸ್ ಸೇವೆ ಇರಲಿವೆ.

    ಇರುತ್ತಾ? ಇರಲ್ವಾ?
    ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ಇರುತ್ತೆ ಎಂದು ಹೇಳಲಾಗಿದೆ. ಆದ್ರೆ, ನೌಕರರು ಕರ್ತವ್ಯಕ್ಕೆ ಹಾಜರಾಗ್ತಾರಾ ಅನ್ನುವ ಬಗ್ಗೆ ಸ್ಪಷ್ಟವಾಗಿಲ್ಲ.

    ಎಲ್ಲೆಲ್ಲೆ ಶಾಲಾ ಕಾಲೇಜುಗಳು ರಜೆ?
    ಬೆಂಗಳೂರು, ಕೋಲಾರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಬೇರೆಡೆಗೆ ರಜೆ ಘೋಷಿಸುವ ನಿರ್ಧಾರವನ್ನು ಬಿಇಓಗಳ ವಿವೇಚನೆಗೆ ಬಿಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರತಿದಿನ KRSಗೆ 1,300 ಕ್ಯೂಸೆಕ್ ನೀರು – ಹೇಮಾವತಿಯಲ್ಲೂ ನೀರಿನ ಮಟ್ಟ ಕುಸಿತ

    ಪ್ರತಿದಿನ KRSಗೆ 1,300 ಕ್ಯೂಸೆಕ್ ನೀರು – ಹೇಮಾವತಿಯಲ್ಲೂ ನೀರಿನ ಮಟ್ಟ ಕುಸಿತ

    ಹಾಸನ: ಜಿಲ್ಲೆಯ ಜೀವನದಿ ಹಾಗೂ ಕಾವೇರಿ ಕೊಳ್ಳದ ಪ್ರಮುಖ ಜಲಾಶಯವೂ ಆಗಿರುವ  ಹೇಮಾವತಿಯಲ್ಲಿ (Hemavati Reservoir) ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದು, ರೈತರಿಗೆ ಹಾಗೂ ಹಾಸನ ನಗರವಾಸಿಗಳಿಗೆ ಆತಂಕ ಎದುರಾಗಿದೆ.

    ಇನ್ನೂ 18 ದಿನಗಳ ಕಾಲ KRSನಿಂದ ತಮಿಳುನಾಡಿಗೆ (TamilNadu) ನೀರು ಹರಿಸುವಂತೆ ಆದೇಶ ಬಂದ ಹಿನ್ನೆಲೆಯಲ್ಲಿ ಕೆಆರ್‌ಎಸ್‌ಗೆ ಹೇಮಾವತಿ ನದಿಯಿಂದ ಪ್ರತಿದಿನ 1,300 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದರಿಂದ ಹೇಮಾವತಿ ನದಿಯ ಒಡಲು ಬರಿದಾಗುತ್ತಿದೆ.

    ಕಳೆದ ಎರಡು ತಿಂಗಳ ಕಾಲ ನಾಲೆಗೆ ನೀರು ಹರಿಸಿದ್ದರಿಂದ ಲಕ್ಷಾಂತರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿದೆ. ಸದ್ಯ ನಾಲೆಯಲ್ಲಿ ನೀರು ನಿಲ್ಲಿಸಲಾಗಿದ್ದು, ಇನ್ನೂ ಮೂರ‍್ನಾಲ್ಕು ತಿಂಗಳ ಕಾಲ ಭತ್ತಕ್ಕೆ ನೀರಿನ ಅವಶ್ಯಕತೆ ಇದೆ. ಆದರೆ ಹೇಮಾವತಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ 2ನೇ ಹಂತದಲ್ಲಿ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ ಕಡಿಮೆ ಇದೆ. ಇದನ್ನೂ ಓದಿ: ಪ್ಲಾಟ್‍ಫಾರ್ಮ್ ಮೇಲೆ ರೈಲು ಏರಿದ ಪ್ರಕರಣಕ್ಕೆ ಟ್ವಿಸ್ಟ್ – ಕುಡಿದ ಮತ್ತಿನಲ್ಲಿ ಸಹಾಯಕನ ಎಡವಟ್ಟು

    18 TMC ನೀರಿನಲ್ಲಿ 12 ಟಿಎಂಸಿ ನೀರನ್ನು ಬಳಸಬಹುದಾಗಿದೆ. ಹಾಸನ ನಗರಕ್ಕೆ (Hassan City) ಇನ್ನೂ 7-8 ತಿಂಗಳ ಕಾಲ ಕುಡಿಯುವ ನೀರು ಪೂರೈಕೆ ಮಾಡಬೇಕಾಗಿದ್ದು ಮಳೆ ಸಂಪೂರ್ಣ ಕ್ಷೀಣಿಸಿರುವುದರಿಂದ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಆತಂಕ ಉಂಟಾಗಿದೆ. ಇದನ್ನೂ ಓದಿ: Asian Games 2023: ಈಕ್ವೆಸ್ಟ್ರೀಯನ್‌ನಲ್ಲಿ ಭಾರತಕ್ಕೆ ಕಂಚು – ಇತಿಹಾಸ ನಿರ್ಮಿಸಿದ ಅನುಷ್‌

    ಸೆಪ್ಟೆಂಬರ್ 29 ರಂದು (ಶುಕ್ರವಾರ) ಕಾವೇರಿ ನೀರಿಗಾಗಿ ಕರ್ನಾಟಕ ಬಂದ್‌ಗೆ (Karnataka Bandh) ಕರೆ ಕೊಟ್ಟಿದ್ದು ಹಾಸನ ಜಿಲ್ಲೆಯಲ್ಲೂ ಬಂದ್ ಮಾಡಲು ಹಲವು ಸಂಘಟನೆಗಳು ನಿರ್ಧರಿಸಿವೆ. ಜೊತೆಗೆ ಹೇಮಾವತಿ ನದಿಯಿಂದ ಕೆಆರ್‌ಎಸ್‌ಗೆ ಹರಿಸಲಾಗುತ್ತಿರುವ ನೀರು ನಿಲ್ಲಿಸುವಂತೆಯೂ ಆಗ್ರಹಗಳು ಕೇಳಿಬಂದಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಂದ್‌ ಇದ್ದರೂ ಬಸ್ಸುಗಳು ರಸ್ತೆಯಲ್ಲಿ ಸಂಚರಿಸುತ್ತೆ: ರಾಮಲಿಂಗಾ ರೆಡ್ಡಿ

    ಬಂದ್‌ ಇದ್ದರೂ ಬಸ್ಸುಗಳು ರಸ್ತೆಯಲ್ಲಿ ಸಂಚರಿಸುತ್ತೆ: ರಾಮಲಿಂಗಾ ರೆಡ್ಡಿ

    ಬೆಂಗಳೂರು: ನಾಳೆ ಕರ್ನಾಟಕ ಬಂದ್‌ (Karnataka Bandh) ಇದ್ದರೂ ಬಸ್‌ಗಳ ಸಂಚಾರ ಇರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ವಿಮಾನ ನಿಲ್ದಾಣ (Airport) ಸೇರಿದಂತೆ ಎಲ್ಲಾ ಎಲ್ಲಾ ಭಾಗಕ್ಕೂ ಕಡಿಮೆ ಪ್ರಮಾಣದಲ್ಲಿ ಬಸ್ ಸಂಚಾರ ಇರಲಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಬಸ್ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

    ಬಂದ್ ಮಾಡುವವರು ಶಾಂತಿಯುತವಾಗಿ ಬಂದ್ ಮಾಡಲಿ. ಇವತ್ತಿನ ಕಾವೇರಿ ಸಮಸ್ಯೆಗೆ (Cauvery Problem) ಬಿಜೆಪಿಯೇ (BJP) ಕಾರಣ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಮಸ್ಯೆ ಪರಿಹಾರ ಮಾಡಲು ಮುಂದಾಗಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು.

    ಬಿಎಂಟಿಸಿ ನೌಕರರ ಸಂಘ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಬೆಂಗಳೂರು ಬಂದ್‌ಗೆ ಬೆಂಬಲ ಕೊಟ್ಟಿದ್ದರೈ ಬಿಎಂಟಿಸಿ ರಸ್ತೆಗೆ ಇಳಿದಿದ್ದವು. ಹೀಗಾಗಿ ಗೊಂದಲ ಆಗದೇ ಇರಲು ನೈತಿಕ ಬೆಂಬಲ ನೀಡಲು ಸಂಘ ಮುಂದಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಬಂದ್ ಕುರಿತು ನಿಖಿಲ್ ಕುಮಾರ್ ಜೊತೆ ಫಿಲ್ಮ್ ಚೇಂಬರ್ ಚರ್ಚೆ

    ಕರ್ನಾಟಕ ಬಂದ್ ಕುರಿತು ನಿಖಿಲ್ ಕುಮಾರ್ ಜೊತೆ ಫಿಲ್ಮ್ ಚೇಂಬರ್ ಚರ್ಚೆ

    ನಾಳೆ ರಾಜ್ಯಾದ್ಯಂತ ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೆಂಬಲ ಸೂಚಿಸಿದ್ದು, ಕಲಾವಿದರೊಂದಿಗೆ ನಾಳೆ ಬೀದಿಗೆ ಇಳಿದು ಹೋರಾಟ ಮಾಡಲಿದೆ. ಬೆಳಗ್ಗೆಯಷ್ಟೇ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತೆ ಮತ್ತು ಮುಂದಾಳತ್ವ ವಹಿಸಿಕೊಳ್ಳುವಂತೆ ಶಿವರಾಜ್ ಕುಮಾರ್ ಅವರಿಗೆ ಫಿಲ್ಮ್ ಚೇಂಬರ್ ಮನವಿ ಮಾಡಿತ್ತು. ನಂತರ ನಿಖಿಲ್ ಕುಮಾರಸ್ವಾಮಿ (Nikhil Kumar) ಅವರನ್ನು ಭೇಟಿ ಮಾಡಿ, ಬಂದ್ ನಲ್ಲಿ ಭಾಗಿಯಾಗುವಂತೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚರ್ಚಿಸಿದ್ದಾರೆ.

    ನಾಳೆ ನಡೆಯಲಿರುವ ಕರ್ನಾಟಕ ಬಂದ್ (Karnataka Band) ಹೋರಾಟಕ್ಕೆ ಚಿತ್ರಮಂದಿರಗಳ ಮಾಲೀಕರು ಕೂಡ ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆಯಿಂದಲೇ ಕರ್ನಾಟಕದ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಸಂಜೆ ಹೋರಾಟ ಮುಗಿದ ಬಳಿಕ ಮತ್ತೆ ಚಿತ್ರ ಪ್ರದರ್ಶನಗಳನ್ನು ಆರಂಭಿಸಲಿವೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ತಿಳಿಸಿದ್ದಾರೆ.

    ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಎಲ್ಲ ಚಿತ್ರಮಂದಿರಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಾ, ಸಂಜೆವರೆಗೆ ಪ್ರದರ್ಶನಗಳನ್ನು ಸ್ಥಗಿತಗೊಳಿಸಿ ಸಂಜೆ ನಂತರ ಪ್ರದರ್ಶನಗಳು ಮಾಮೂಲಿನಂತೆ ಪ್ರದರ್ಶನಗೊಳ್ಳುತ್ತವೆ. ಕಾವೇರಿ ನಮ್ಮದು. ರಾಜ್ಯ ಭಾಷೆ, ನೀರು ಮತ್ತು ನೆಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೇ ಸರ್ಕಾರ, ರೈತರ ಮತ್ತು ಹೋರಾಟಗಾರರ ಬೆಂಬಲಕ್ಕೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಅಧ್ಯಕ್ಷರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಬಂದ್‌ – ವಿಜಯನಗರ ವಿವಿ ಪರೀಕ್ಷೆ ಮುಂದೂಡಿಕೆ

    ಕರ್ನಾಟಕ ಬಂದ್‌ – ವಿಜಯನಗರ ವಿವಿ ಪರೀಕ್ಷೆ ಮುಂದೂಡಿಕೆ

    ಬಳ್ಳಾರಿ: ಕರ್ನಾಟಕ ಬಂದ್‌ (Karnataka Bandh) ಹಿನ್ನೆಲೆಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಿಕೆ (Exam Postponed) ಮಾಡಲಾಗಿದೆ.

    ಸ್ನಾತಕೋತ್ತರ ಮತ್ತು ಡಿಗ್ರಿ ಸೆಮಿಸ್ಟರ್‌ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದಿನ ತಿಂಗಳ 8 ರಂದು ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆ ಕರ್ನಾಟಕ ಬಂದ್: ಸಂಜೆ ನಂತರ ಚಿತ್ರಮಂದಿರ ಓಪನ್

    ನಾಳೆ ಕರ್ನಾಟಕ ಬಂದ್: ಸಂಜೆ ನಂತರ ಚಿತ್ರಮಂದಿರ ಓಪನ್

    ನಾಳೆ ನಡೆಯಲಿರುವ ಕರ್ನಾಟಕ ಬಂದ್ (Karnataka Band) ಹೋರಾಟಕ್ಕೆ ಚಿತ್ರಮಂದಿರಗಳ (Theatre) ಮಾಲೀಕರು ಕೂಡ ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆಯಿಂದಲೇ ಕರ್ನಾಟಕದ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಸಂಜೆ ಹೋರಾಟ ಮುಗಿದ ಬಳಿಕ ಮತ್ತೆ ಚಿತ್ರ ಪ್ರದರ್ಶನಗಳನ್ನು ಆರಂಭಿಸಲಿವೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ (KV Chandrasekhar) ತಿಳಿಸಿದ್ದಾರೆ.

    ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಎಲ್ಲ ಚಿತ್ರಮಂದಿರಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಾ, ಸಂಜೆವರೆಗೆ ಪ್ರದರ್ಶನಗಳನ್ನು ಸ್ಥಗಿತಗೊಳಿಸಿ ಸಂಜೆ ನಂತರ ಪ್ರದರ್ಶನಗಳು ಮಾಮೂಲಿನಂತೆ ಪ್ರದರ್ಶನಗೊಳ್ಳುತ್ತವೆ. ಕಾವೇರಿ ನಮ್ಮದು. ರಾಜ್ಯ ಭಾಷೆ, ನೀರು ಮತ್ತು ನೆಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೇ ಸರ್ಕಾರ, ರೈತರ ಮತ್ತು ಹೋರಾಟಗಾರರ ಬೆಂಬಲಕ್ಕೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಅಧ್ಯಕ್ಷರು.

    ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹೀಗಾಗಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ. ಇದನ್ನೂ ಓದಿ:ಸಮಂತಾ ಔಟ್‌, ರಶ್ಮಿಕಾ ಮಂದಣ್ಣಗೆ ಸಿಕ್ತು ಬಿಗ್‌ ಚಾನ್ಸ್

    ಸಾಕಷ್ಟು ವರ್ಷಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆ.29ರಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಮೂಲಕ ಚಿತ್ರೋದ್ಯಮ ಸಾಥ್ ನೀಡುತ್ತಿದೆ.

    ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

    ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

    ಬೆಂಗಳೂರು: ಕರ್ನಾಟಕ ಬಂದ್ (Karnataka Bandh) ಕರೆ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ (Section 144) ಜಾರಿ ಮಾಡಲಾಗಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು (Bengaluru) ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

    144 ಸೆಕ್ಷನ್ ಜಾರಿ ವೇಳೆ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಗುಂಪು ಸೇರುವಂತೆ ಇಲ್ಲ. ಬಂದ್‌ಗಳನ್ನು ಕರೆಯುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಬಂದ್ ವೇಳೆ ಆಸ್ತಿ ಪಾಸ್ತಿ ನಾಶ ಮತ್ತು ಸಾವು ನೋವಿಗೆ ಸಂಘಟಕರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

    ವಾಹನಗಳನ್ನು ತಡೆಯುವುದು, ಡ್ಯಾಮೇಜ್ ಮಾಡುವುದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ನಗರದಲ್ಲಿ ವ್ಯಾಪಕ ರಕ್ಷಣಾ ಕ್ರಮ ಜರುಗಿಸಲಾಗುತ್ತದೆ. ಪ್ರತಿಭಟನೆ, ಮೆರವಣಿಗೆಗೆ ಯಾವುದೇ ಅವಕಾಶವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

    ಬಲವಂತವಾಗಿ ಬಂದ್ ಮಾಡಿದರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ನ ಆದೇಶ ಉಲ್ಲಂಘನೆಯಾಗುತ್ತದೆ. ಈ ಹಿನ್ನೆಲೆ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೆ ಬಂದೋಬಸ್ತ್ ಇರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

    ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

    ಹುಬ್ಬಳ್ಳಿ: ಕಾವೇರಿ ಅಷ್ಟೇ ಅಲ್ಲ, ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ ವಿಚಾರದಲ್ಲಿ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಶುಕ್ರವಾರದ ಬಂದ್‌ಗೆ (Karnataka Bandh) ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ 3,000 ಕ್ಯೂಸೆಕ್ ಆದೇಶ ಬಂದಿದೆ. 10,000 ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ. ಜನ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು (Tamil Nadu) ಟ್ರಿಬ್ಯುನಲ್ ಆದೇಶವನ್ನು ಉಲ್ಲಂಘನೆ ಮಾಡಿದೆ. ಇದನ್ನೂ ಓದಿ: ಟಿಕೆಟ್ ಸಿಗದೆ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹೋಗೋರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ

    ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಗಾಗಿ (Cauveri Water) ಎಲ್ಲಿಯವರೆಗೂ ಹೋರಾಟ ಇರುತ್ತೋ ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು. ಇದನ್ನೂ ಓದಿ: ಡ್ರಗ್ಸ್ ಕೇಸ್- ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖಯರಾ ಬಂಧನ