ಬೆಂಗಳೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ (Education Department) ಜಿಲ್ಲಾಧಿಕಾರಿಗೆ ನೀಡಿದೆ.
ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ (Holiday) ಘೋಷಣೆ ಇಲ್ಲ. ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇದನ್ನೂ ಓದಿ: ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್
ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಶಾಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ಒಕ್ಕೂಟ ನೀಡಿದೆ.
ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳು ರಜೆ ನೀಡಬಹುದು. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ.
ಕಾವೇರಿ ನದಿ ನೀರಿನ ವಿಚಾರವಾಗಿ ಮೌನ ವಹಿಸುವ ನಟ ರಜನಿಕಾಂತ್ (Rajinikanth) ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ರಜನಿಕಾಂತ್ ಕರ್ನಾಟಕಕ್ಕೆ ಬರಬಾರದು. ಅವರ ಚಿತ್ರಗಳನ್ನು ರಿಲೀಸ್ ಮಾಡಬಾರದು ಎಂದರು. ರಜನಿಕಾಂತ್ ಕನ್ನಡದವರಾಗಿ ಕನ್ನಡಿಗರ ಪರವಾಗಿ ಹೋರಾಟ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಕಾವೇರಿ ಹೋರಾಟ ಅಥವಾ ಕನ್ನಡ ಪರ ಹೋರಾಟಗಳು ನಡೆದಾಗೊಮ್ಮೆ ರಜನಿಕಾಂತ್ ಹೆಸರು ಪ್ರಸ್ತಾಪವಾಗುತ್ತದೆ. ಈ ಹಿಂದೆ ರಜನಿಕಾಂತ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ರಿಲೀಸ್ ಆಗಬಾರದು ಎಂದು ದೊಡ್ಡ ಮಟ್ಟದಲ್ಲೇ ಹೋರಾಟ ನಡೆದಿತ್ತು. ಸಿನಿಮಾಗಳ ಪ್ರದರ್ಶನವನ್ನೂ ತಡೆದಿದ್ದರು. ಇದೀಗ ಮತ್ತೆ ಅಂಥದ್ದೊಂದು ಚರ್ಚೆ ಮುನ್ನೆಲೆಗೆ ಬಂದಿದೆ. ಅದರಲ್ಲೂ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಾಜ್ಯದಲ್ಲಿ ಐವತ್ತು ಕೋಟಿಗೂ ಅಧಿಕ ಹಣ ಗಳಿಕೆ ಮಾಡಿದೆ. ಹೀಗಾಗಿ ಮತ್ತೆ ರಜನಿ ವಿರುದ್ಧ ಗುಡುಗುವಂತಾಗಿದೆ.
ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ
ಕನ್ನಡ ಪರ ಹೋರಾಟಗಾರರು ನಾಳೆ ಕರ್ನಾಟಕ ಬಂದ್ (Karnataka Band)ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧ ಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.
ಇಂದು ಜಗ್ಗೇಶ್ ನಟನೆಯ ತೋತಾಪುರಿ 2 ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ಗಣೇಶ್ ನಟನೆಯ ಬಾನದಾರಿಯಲ್ಲಿ ಚಿತ್ರ ಬಿಡುಗಡೆ ಆಗಬೇಕಿತ್ತು. ಅಲ್ಲದೇ, ಇನ್ನೂ ಹಲವು ಚಿತ್ರಗಳು ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದ್ದವು. ಬಂದ್ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶನಿವಾರ ಸಿನಿಮಾಗಳನ್ನು ರಿಲೀಸ್ ಮಾಡಲು ಹೊರಟಿದ್ದಾರೆ ನಿರ್ಮಾಪಕರು.
ನಾಳೆ ಸ್ಯಾಂಡಲ್ ವುಡ್ (Sandalwood) ಕೂಡ ತನ್ನ ಕೆಲಸ ನಿಲ್ಲಿಸಲಿದೆ. ಕಲಾವಿದರು ಕೂಡ ಬೀದಿಗೆ ಇಳಿದು ಹೋರಾಟ ಮಾಡಲಿದ್ದಾರೆ. ಬಹುತೇಕ ಶೂಟಿಂಗ್ ನಿಲ್ಲಿಸಲಾಗಿದೆ. ಸಿನಿಮಾ ಸಂಬಂಧಿ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿ, ಬಂದ್ ನಲ್ಲಿ ಭಾಗಿಯಾಗಲಿದ್ದಾರೆ. ಇದರ ನೇತೃತ್ವವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ವಹಿಸಿದೆ.
ಕನ್ನಡ ಪರ ಹೋರಾಟಗಾರರು ನಾಳೆ ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧ ಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.
ಇಂದು ಜಗ್ಗೇಶ್ ನಟನೆಯ ತೋತಾಪುರಿ 2 ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ಗಣೇಶ್ ನಟನೆಯ ಬಾನದಾರಿಯಲ್ಲಿ ಚಿತ್ರ ಬಿಡುಗಡೆ ಆಗಬೇಕಿತ್ತು. ಅಲ್ಲದೇ, ಇನ್ನೂ ಹಲವು ಚಿತ್ರಗಳು ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದ್ದವು. ಬಂದ್ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶನಿವಾರ ಸಿನಿಮಾಗಳನ್ನು ರಿಲೀಸ್ ಮಾಡಲು ಹೊರಟಿದ್ದಾರೆ ನಿರ್ಮಾಪಕರು.
ನಾಳೆ ಸ್ಯಾಂಡಲ್ ವುಡ್ (Sandalwood) ಕೂಡ ತನ್ನ ಕೆಲಸ ನಿಲ್ಲಿಸಲಿದೆ. ಕಲಾವಿದರು ಕೂಡ ಬೀದಿಗೆ ಇಳಿದು ಹೋರಾಟ ಮಾಡಲಿದ್ದಾರೆ. ಬಹುತೇಕ ಶೂಟಿಂಗ್ ನಿಲ್ಲಿಸಲಾಗಿದೆ. ಸಿನಿಮಾ ಸಂಬಂಧಿ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿ, ಬಂದ್ ನಲ್ಲಿ ಭಾಗಿಯಾಗಲಿದ್ದಾರೆ. ಇದರ ನೇತೃತ್ವವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ವಹಿಸಿದೆ.
ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ (Karnatak Bandh) ಆಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ತಮಿಳುನಾಡು ಸಾರಿಗೆ ಬಸ್ ಗಳ ಸಂಚಾರ ಬಂದ್ ಮಾಡಲಾಗುತ್ತದೆ.
ಬೆಂಗಳೂರು ಟು ತಮಿಳುನಾಡು (Tamilnadu) ಸಂಚಾರ ಮಾಡುವ ತಮಿಳುನಾಡು ಸಾರಿಗೆಯ 350ಕ್ಕೂ ಹೆಚ್ಚು ಬಸ್‍ಗಳು ನಾಳೆ ಸ್ಥಗಿತವಾಗಲಿವೆ. ತಮಿಳುನಾಡು ಸಾರಿಗೆ ಬಸ್ ಗಳು ರಾತ್ರಿ 10 ಗಂಟೆಗೆ ಸಂಪೂರ್ಣ ಓಡಾಟ ನಿಲ್ಲಿಸಲಿವೆ. ಇದನ್ನೂ ಓದಿ: ಡೈರಿ ಉತ್ಪನ್ನ ಬೇಡ – ಕೂಲ್ ಕೂಲ್ ಗ್ರೇಪ್ ಐಸ್ ಟ್ರೈ ಮಾಡಿ
ತಮಿಳುನಾಡಿನಿಂದ ಆಗಮಿಸುವ ಬಸ್‍ಗಳು ರಾತ್ರಿ 10 ಗಂಟೆ ವೇಳೆಗೆ ಕರ್ನಾಟಕ ಗಡಿ ಪ್ರವೇಶಿಸಿ ಮತ್ತೆ ವಾಪಸ್ ಆಗಲಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಸ್ಯಾಟಲೈಟ್, ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡಿನ ವಿವಿಧ ಭಾಗಗಳಿಗೆ ಸಂಚಾರ ಮಾಡುವ ತಮಿಳುನಾಡು ಸಾರಿಗೆ ಬಸ್ ಸಂಚಾರ ನಿಲ್ಲಿಸಿವೆ.
ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ (Karnataka Bandh) ಗೆ ಸ್ಯಾಂಡಲ್ ವುಡ್ ಬೆಂಬಲ ವ್ಯಕ್ತ ಪಡಿಸಿದೆ. ಅಂದು ಚಿತ್ರೋದ್ಯಮ ಬಂದ್ ಮಾಡಿ ಹೋರಾಟದಲ್ಲಿ ನಟ ನಟಿಯರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಅಧ್ಯಕ್ಷ ಎನ್.ಎಮ್. ಸುರೇಶ್ (NM Suresh) ತಿಳಿಸಿದ್ದಾರೆ. ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಸಾ.ರಾ ಗೋವಿಂದ್ ಹೇಳಿದ್ದೇನೆ
ಕರ್ನಾಟಕದಲ್ಲಿ ಕಾವೇರಿದ ಕಾವೇರಿ ಹೋರಾಟ (Cauvery Protest) ಈ ಬೆನ್ನಲ್ಲೇ ಸೆ.29ರ ಬಂದ್ ಚರ್ಚಿಸಲು ಫಿಲ್ಮ್ ಚೇಂಬರ್‌ಗೆ ಕನ್ನಡ ಪರ ಹೋರಾಟಗಾರ ಸಾ ರಾ ಗೋವಿಂದು (Sa Ra Govindu) ಆಗಮಿಸಿ, ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ಯೋಜನೆಗಾಗಿ ಹಿಂದಿನಿಂದಲೂ ದೊಡ್ಡ ಹೋರಾಟ ಮಾಡಿದ್ದೇವೆ. ಅಕ್ಟೋಬರ್, ನವೆಂಬರ್ ಬಂದರೆ ಸಾಕು ಬರೀ ಹೋರಾಟದ ಕೆಲಸ ಆಗಿದೆ. ಈ ವರ್ಷ ಮಳೆಗಾಲ ಇಲ್ಲ ಅಂತ ತಮಿಳುನಾಡಿನವರು ಅರ್ಥ ಮಾಡಿಕೊಳ್ಳಬೇಕು ಎಂದು ಸಾ ರಾ ಗೋವಿಂದು ಮಾತನಾಡಿದರು. ನಮ್ಮ ಸರ್ಕಾರ ಕೂಡ ತಮಿಳುನಾಡಿಗೆ ನೀರು ಬಿಟ್ಟು ರೈತರಿಗೆ ಅನ್ಯಾಯ ಮಾಡ್ತಿದ್ದಾರೆ ಎಂದು ಗೋವಿಂದು ಖಡಕ್ ಆಗಿ ಮಾತನಾಡಿದರು. ಇದು ನಮ್ಮ ನಾಡಿನ ಪ್ರಶ್ನೆ ಮತ್ತು ರೈತರ ಪ್ರಶ್ನೆಯಾಗಿದೆ. ಕರ್ನಾಟಕದವರು ಸತ್ತಿಲ್ಲ ಇನ್ನೂ ಬದುಕಿದ್ದೇವೆ.
ಮೋದಿಯವರು ಕಾವೇರಿ ವಿಚಾರದಲ್ಲಿ ಸೇರಿಕೊಂಡಿದ್ದಾರೆ. ಕಾವೇರಿ ಪ್ರಾಧಿಕಾರಕ್ಕೆ ನೀರು ಬಿಡಿ ಅಂತ ಹೇಳಿದ್ದಾರೆ ಎಂದು ನೇರವಾಗಿ ಕುಟುಕಿದ್ದಾರೆ. ಹಾಗಾಗಿಯೇ ಈ ರಾಜ್ಯದ ಜನ ಈ ಬಾರಿ ಬಿಜೆಪಿ ಕೈ ಹಿಡಿದಿಲ್ಲ ಅನ್ಮೋದು. ಈಗ ಕಾವೇರಿ ಪ್ರಾಧಿಕಾರವನ್ನ ಕರ್ನಾಟಕದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಈ ವಿಚಾರದಲ್ಲಿ ಮೋದಿ, ಅಮಿತ್ ಶಾ ಎಲ್ಲರೂ ಇದ್ದಾರೆ ಎಂದು ಗೋವಿಂದು ವಿರೋಧಿಸಿದ್ದಾರೆ.
ರಾಜಕೀಯ ಅಧಿಕಾರಕ್ಕಾಗಿ ಇಂತಹ ಕೆಲಸ ಮಾಡಬೇಡಿ. ಮೋದಿಯವರೇ ನೀವು ಇದೇ ತರ ಆಟ ಆಡಿದರೆ, ನಿಮ್ಮ ಪಕ್ಷ ನಾಶ ಆಗುತ್ತೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಇದು ರೈತರ ಕನ್ನಡಿಗರ ಶಾಪ ನೆನಪಿಟ್ಟುಕೊಳ್ಳಿ ಎಂದು ಮಾತನಾಡಿದ್ದಾರೆ.
ಬೆಂಗಳೂರು: ಕಾವೇರಿ ನೀರನ್ನ ತಮಿಳುನಾಡಿಗೆ (Tamilnadu) ಹರಿಸುತ್ತಿರೋದನ್ನ ಖಂಡಿಸಿ ಕರೆ ಕೊಟ್ಟಿದ್ದ ಬೆಂಗಳೂರು ಬಂದ್ ಭಾಗಶಃ ಯಶಸ್ಸಾಗಿದೆ. ಇದರ ಜೊತೆಗೆ ಶುಕ್ರವಾರ ನಡೆಯುವ ಬಂದ್ ಕಥೆ ಏನಾಗುತ್ತೆ..!? ನಿನ್ನೆಯ ಬೆಂಗಳೂರು ಬಂದ್ ಗೆ ಬೆಂಬಲ ನೀಡಿದ ಸಂಘಟನೆಗಳು ಶುಕ್ರವಾರದ ಬಂದ್ಗೆ ಬೆಂಬಲ ನೀಡ್ತಾವಾ..!? ಹೇಗಿರಲಿದೆ ಕರ್ನಾಟಕ ಬಂದ್ (Karnataka Bandh) ಎಂಬುದನ್ನು ನೋಡೋಣ.
ಮಂಗಳವಾರದ ಬೆಂಗಳೂರು ಬಂದ್ (Bengaluru Bandh) ಮಾಡಿದ ಮೇಲೆ ಶುಕ್ರವಾರ ಮತ್ತೆ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ರಾಜ್ಯದ ಹಿತಕ್ಕಾಗಿ ಸೆಪ್ಟೆಂಬರ್ 29 ಶುಕ್ರವಾರ ಕರ್ನಾಟಕ ಬಂದ್ ಮಾಡಲು ತೀರ್ಮಾನಿಸಲಾಗಿದೆ ಅಂತಾ ಈಗಾಗಲೇ ಕನ್ನಡ ಒಕ್ಕೂಟ ಸಂಘಟನೆಗಳು ಘೋಷಿಸಿಕೊಂಡಿವೆ. ನಿರೀಕ್ಷೆಗೂ ಮೀರಿ ಬೆಂಗಳೂರು ಬಂದ್‍ಗೆ ಬೆಂಗಳೂರಿಗರು ಜೈ ಎಂದಿದ್ರು. ಇದೇ ರೀತಿ ಅಥವಾ ಇದಕ್ಕೂ ಹೆಚ್ಚಿನ ಯಶಸ್ಸು ಕರ್ನಾಟಕ ಬಂದ್‍ಗೆ ಸಿಗಬೇಕು ಎನ್ನುವ ಲೆಕ್ಕಾಚಾರದಲ್ಲಿ ಕನ್ನಡ ಒಕ್ಕೂಟದ ಪ್ರಮುಖರು ಅಖಾಡಕ್ಕಿಳಿದಿದ್ದಾರೆ.
ಹೀಗಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಮಂಗಳವಾರ ಬೆಂಗಳೂರು ಬಂದ್ ಆಯ್ತು ಈಗ ಶುಕ್ರವಾರ ಕರ್ನಾಟಕ ಬಂದ್ ಆಗೋದು ನಿಶ್ಚಿತವಾಗಿದೆ. ಒಂದೇ ವಾರದಲ್ಲಿ ಎರಡೆರಡು ದಿನ ಬಂದ್ ಮಾಡೋದಕ್ಕೆ ಈ ಹಿಂದೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಮಂಗಳವಾರವೇ ಕರ್ನಾಟಕ ಬಂದ್ ಕೂಡಾ ಮಾಡಬಹುದಲ್ಲವೇ ಎಂಬ ವಾದಗಳೂ ಇದ್ದವು. ಆದರೆ ಮಂಗಳವಾರ ಬೆಂಗಳೂರು ಬಂದ್ ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಾತ್ರ ಬಂದ್ ವಾತಾವರಣ ಕಂಡುಬಂದಿತ್ತು. ಇನ್ನು ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ಇದನ್ನೂ ಓದಿ: ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯ
ಬೆಂಗಳೂರು ಬಂದ್ಗೆ ಬೆಂಬಲ ನೀಡಿದ್ದ ಕೆಲವು ಸಂಘಟನೆಗಳು ಕಡೆ ಕ್ಷಣದಲ್ಲಿ ವಾಪಾಸ್ ಪಡೆದು ಕನ್ನಡ ಒಕ್ಕೂಟ ಕರೆ ಕೊಟ್ಟಿರುವ ಕರ್ನಾಟಕ ಬಂದ್‍ಗೆ ಬೆಂಬಲವನ್ನ ಘೋಷಿಸಿದ್ವು. ಪ್ರಮುಖವಾಗಿ ಹೋಟೆಲ್ ಅಸೋಸಿಯೇಷನ್, ಖಾಸಗಿ ವಾಹನ ಮಾಲೀಕರ ಸಂಘಟನೆಗಳು, ಒಲಾ ಊಬರ್ ಸಂಘಟನೆಗಳು ಕರ್ನಾಟಕ ಬಂದ್ ಗೆ ಸಪೋರ್ಟ್ ಮಾಡಿದ್ರು. ಈ ಸಂಘಟನೆಗಳ ಜೊತೆಗೆ ಬೇರೆ ಯಾವೇಲ್ಲ ಸಂಘಟನೆಗಳು ಕರ್ನಾಟಕ ಬಂದ್ಗೆ ಬೆಂಬಲ ನೀಡಿವೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈಗಾಗಲೇ 104 ಸಂಘಟನೆಗಳು ಬೆಂಬಲ ಘೋಷಿಸಿಕೊಂಡಿವೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಯಾರ ಬೆಂಬಲ..!?: ಓಲಾ ಉಬರ್ ಚಾಲಕರ ಸಂಘ, ಆದರ್ಶ ಆಟೋ ಯೂನಿಯನ್, ಕರ್ನಾಟಕ ಕೈಗಾರಿಕೆಗಳ ಸಂಘ, ಕರ್ನಾಟಕ ರಸ್ತೆ ಸಾರಿಗೆ ಕ್ರಿಯಾ ಸಮಿತಿ, ವಿದ್ಯಾರ್ಥಿ ಸಂಘಟನೆಗಳು, ಮಾರುಕಟ್ಟೆ ಸಂಘ, ಚಲನಚಿತ್ರ ವಾಣಿಜ್ಯ ಮಂಡಳಿ..?, ಜಲಮಂಡಳಿ ನೌಕರರ ಸಂಘ, ಲಾರಿ ಮಾಲೀಕರ ಸಂಘ, ಹೋಟೆಲ್ ಅಸೋಸಿಯೇಷನ್ ಬೆಂಬಲ ಘೋಷಿಸಿವೆ. ಒಟ್ಟಿನಲ್ಲಿ ಅಖಂಡ ಕರ್ನಾಟಕ ಬಂದ್ ಗೆ ಸಾಕಷ್ಟು ಸಂಘಟನೆಗಳು ಸಾಥ್ ನೀಡಲಿವೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಗೆ ತಯಾರಿ ನಡೆಸುತ್ತಿದ್ದು, ಸದ್ಯ 80 ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್ ಗೆ ಸಂಪೂರ್ಣ ಬೆಂಬಲ ಸಿಕ್ಕಿದೆ.
ಯಾವ್ಯಾವ ಹೆದ್ದಾರಿಗಳು ಬಂದ್?
* ತಮಿಳುನಾಡು ಗಡಿ ಅತ್ತಿಬೆಲೆ ಹೆದ್ದಾರಿ ಬಂದ್
* ಆಂಧ್ರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸೋ ಹೈವೇ ಬಂದ್
* ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ
* ಮೈಸೂರು- ಬೆಂಗಳೂರು ರಸ್ತೆ ಕೆಂಗೇರಿ ಬಳಿ ಬಂದ್
* ಬೆಂಗಳೂರು- ಮಂಗಳೂರು ಹೈವೇ ನೆಲಮಂಗಲ ಜಂಕ್ಷನ್
* ಬೆಂಗಳೂರು-ತುಮಕೂರು ಹೆದ್ದಾರಿ ನವಯುಗ ಟೋಲ್
* ಕನಕಪುರ- ಬೆಂಗಳೂರು ಹೆದ್ದಾರಿ ಕೋಣನಕುಂಟೆ ಬಳಿ ಬಂದ್
* ಮೈಸೂರು, ಮಂಡ್ಯ, ರಾಮನಗರ ಸೇರಿ ಪ್ರಮುಖ ಭಾಗದಲ್ಲಿ ಹೆದ್ದಾರಿ ತಡೆಗೆ ಪ್ಲಾನ್
* ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳನ್ನ ಬಂದ್ ಮಾಡೋ ಬಗ್ಗೆ ಚಿಂತನೆ
ಒಟ್ಟಾರೆ 104 ಕ್ಕೂ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ಘೋಷಿಸಿಕೊಂಡಿವೆ. ಕಾವೇರಿ ವಿಚಾರವನ್ನ ತುಂಬಾ ಗಂಭೀರವಾಗಿ ಪರಿಗಣಿಸಿರುವ ಹಿನ್ನೆಲೆ ಶುಕ್ರವಾರವೂ ದೊಡ್ಡ ಮಟ್ಟದ ರೆಸ್ಪಾನ್ಸ್ ಸಿಗುವ ಸಾಧ್ಯತೆಯಿದೆ.
ಬೆಂಗಳೂರು: ವಿದ್ಯುತ್ ದರ (Electricity Bill) ಏರಿಕೆ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (KCCI) ಗುರುವಾರ ರಾಜ್ಯ ಬಂದ್‌ಗೆ (Karnataka Bandh) ಕರೆ ನೀಡಿದೆ. ಉತ್ತರ ಮತ್ತು ಮಧ್ಯ ಕರ್ನಾಟಕದ 11 ಜಿಲ್ಲೆಗಳಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ವಹಿವಾಟು ಬಂದ್‌ಆಗುವ ಸಾಧ್ಯತೆಯಿದೆ.
ಈ ಬಂದ್‌ಗೆ ಕರ್ನಾಟಕ ಕೈಗಾರಿಕಾ ಹಾಗೂ ವಾಣಿಜ್ಯ ಮಹಾಸಂಘ (ಎಫ್‌ಕೆಸಿಸಿಐ) ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದ ವಿವಿಧ ವಾಣಿಜ್ಯ ಸಂಘಟನೆಗಳು ಬೆಂಬಲ ನೀಡದಿರಲು ನಿರ್ಧರಿಸಿದೆ. ಈ ಕಾರಣದಿಂದ ಬೆಂಗಳೂರು ಮತ್ತು ಹಳೆ ಮೈಸೂರು ಭಾಗದಲ್ಲಿ ಎಂದಿನಂತೆ ವಾಣಿಜ್ಯ ವಹಿವಾಟು, ಕೈಗಾರಿಕೆಗಳು ಕೆಲಸ ಮಾಡಲಿವೆ.
ಯಾವ ಜಿಲ್ಲೆಗಳಲ್ಲಿ ಬಂದ್?
ಧಾರವಾಡ, ಬೀದರ್, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ, ವಿಜಯನಗರ, ಮೈಸೂರು, ಬಳ್ಳಾರಿ, ಯಾದಗಿರಿ, ಹಾವೇರಿ.
ಯಾವ ಜಿಲ್ಲೆಗಳಲ್ಲಿ ಬಂದ್ ಇಲ್ಲ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಗ್ರಾಮಾಂತರ, ಗದಗ, ರಾಮನಗರ, ಚಾಮರಾಜನಗರ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು.
ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ (Karnataka Bandh) ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೊ (KCC&I) ಕರೆ ನೀಡಿದೆ.
ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಜೂನ್ 22ರಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿವೆ. ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್‌ಗೆ ಕರೆ ನೀಡಿಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ತಬ್ಧಗೊಳಿಸಲಿವೆ. ಬಂದ್‌ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್‌ಗಳಿಂದ ಬೆಂಬಲ ದೊರಕಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೆಸಿಸಿ&ಐ, ಎಸ್ಕಾಂನ ವಿದ್ಯುತ್ ದರ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಲಾಗಿದೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು ಸರ್ಕಾರಕ್ಕೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಬಂದ್‌ಗೆ ಕರೆ ನೀಡಿದ್ದೇವೆ. ಈ ಮೂಲಕವಾದರು ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಹಂಪಿ ವಿವಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 85 ಲಕ್ಷ ರೂ. ಕರೆಂಟ್ ಬಿಲ್
ಗದಗ ಜಿಲ್ಲಾ ಚೇಂಬರ್ ವಿಜಯಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ ಕರ್ನಾಟಕ, ಹಾವೇರಿ, ಹಾಸನ ಹಾಗೂ ಬಳ್ಳಾರಿಯಲ್ಲಿನ ಸಂಘಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಗಂಡ ಜೊತೆಗೆ ಬಾರದೇ ನಮಗೆ ಭದ್ರತೆ ಇಲ್ಲ; ಫ್ರೀ ಬಸ್ ಪ್ರಯಾಣ ಯೋಜನೆಗೆ ಮಹಿಳೆ ವಿರೋಧ
ಬೆಂಗಳೂರು: ಹಿಜಬ್ ತೀರ್ಪಿನ ವಿರುದ್ಧ ಕರ್ನಾಟಕ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು ಎಂದು ಕಂದಾಯ ಸಚಿವ ಆರ್.ಆಶೋಕ್ ಹೇಳಿದರು.
ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ನೀಡಿರುವ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ಕಿಡಿಗೇಡಿಗಳು ಬಂದ್‍ಗೆ ಕರೆ ನೀಡುವ ಮೂಲಕ ಭಾರತದ ಸಂವಿಧಾನವನ್ನು ಬುಡ ಮೇಲು ಮಾಡುವ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ವಿರುದ್ಧವೇ ಇವರು ಬಂದ್‍ಗೆ ಕರೆ ನೀಡಿದ್ದಾರೆ. ಇವರು ಎಷ್ಟು ಕಾನೂನು ಪಾಲನೆ ಮಾಡುತ್ತಾರೆ ಅಂತ ಇವರನ್ನು ಬೆಂಬಲಿಸೋ ಪಕ್ಷದವರು ಅರ್ಥ ಮಾಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ
ಹಿಜಬ್ ತೀರ್ಪಿನ ಬಗ್ಗೆ ಮೇಲ್ಮನವಿ ಹೋಗಬಹುದು. ಹೈಕೋರ್ಟ್ ವಿರುದ್ಧ ತೀರುಗಿ ನಿಲ್ಲುವುದು ಸರಿಯಲ್ಲ. ಇಂತವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ತೀರ್ಪನ್ನು ದೇಶದೆಲ್ಲೆಡೆ ಸ್ವಾಗತ ಮಾಡಿದ್ದಾರೆ. ಆದರೂ ಕೆಲ ಕಿಡಿಗೇಡಿಗಳು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಸಂವಿಧಾನದವನ್ನು ಬುಡಮೇಲು ಮಾಡುವ ಕ್ರಿಯೆ ಇದು. ಕೆಲ ರಾಷ್ಟ್ರ ವಿರೋಧಿಗಳು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಕೋರ್ಟ್ ತೀರ್ಪು ಬಗ್ಗೆ ಇವರಿಗೆ ಎಷ್ಟು ಗೌರವ ಇದೆ ಅನ್ನುವುದು ಇಲ್ಲಿಯೇ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ
ತುಮಕೂರು: ಹಿಜಬ್ ವಿವಾದದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ.
ಹೈಕೋರ್ಟ್ ತೀರ್ಪು ಸಂಬಂಧಿಸಿದಂತೆ ಮುಸ್ಲಿಂ ವ್ಯಾಪಾರಸ್ಥರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಿದ್ದಾರೆ. ಕಾಲ್ ಟ್ಯಾಕ್ಸ್ ಸರ್ಕಲ್, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿ ಗೇಟ್, ಕುಣಿಗಲ್ ರಿಂಗ್ ರಸ್ತೆಗಳಲ್ಲಿನ ಪ್ರಮುಖ ಗ್ಯಾರೇಜ್, ಆಟೋ ಮೊಬೈಲ್ಸ್ ಅಂಗಡಿಗಳು ಬಂದ್ ಆಗಿದ್ದು, ಉಳಿದಂತೆ ಯಥಾಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ ಸೇನೆ
ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಎತ್ತಿ ಹಿಡಿದಿದೆ. ಹೀಗಾಗಿ ನಮಗೆ ಕಾನೂನಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮುಸಲ್ಮಾನ್ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್ ಮೇಯರ್ ಬಿಡುಗಡೆ