Tag: ಕರ್ನಾಟಕ ಬಂದ್

  • ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಬೆಂಗಳೂರು: ಹೈಕೋರ್ಟ್ ಹಿಜಬ್‌ಗೆ ಸಂಬಂಧ ಪಟ್ಟಂತೆ ನೀಡಿರುವ ತೀರ್ಪು ಮುಸ್ಲಿಂ ಬಾಂಧವರಿಗೆ ನೋವು ತಂದಿದೆ. ಈ ನೋವನ್ನು ನಾವು ನಾಳೆ ತೋರಿಸಲಿದ್ದೇವೆ. ಮುಸ್ಲಿಂ ಸಂಘಟನೆಗಳು ಗುರುವಾರ ಬಂದ್‌ಗೆ ಕರೆ ಕೊಟ್ಟಿದೆ ಎಂದು ಮುಸ್ಲಿಂ ಮುಖಂಡ ಮೌಲಾನಾ ಮುಸ್ಕೂದ್ ಇಬ್ರಾನ್ ರಶೀದ್ ಹೇಳಿಕೆ ನೀಡಿದ್ದಾರೆ.

    ಕಮಿಷನರ್ ಕಮಲ್ ಪಂತ್ ಜೊತೆ ನಡೆಸಿದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಶೀದ್ ನಾಳೆ ಯಾರು ಕೂಡಾ ಮನೆಯಿಂದ ಆಚೆ ಬರಬಾರದು. ಮೈದಾನಗಳಲ್ಲಿ ಸೇರಬಾರದು. ರ‍್ಯಾಲಿಗಳನ್ನು ನಡೆಸಬಾರದು. ಮುಸ್ಲಿಮ್ ವಿದ್ಯಾರ್ಥಿಗಳು ಶಾಲೆಗೆ ತೆರಳಬಾರದು. ಬದಲಿಗೆ ಮನೆಯಲ್ಲಿಯೇ ಇರಬೇಕು. ಯಾವುದೇ ಪ್ರತಿಭಟನೆ ನಡೆಸದೇ ಶಾಂತಿಯುತವಾಗಿ ನಮ್ಮ ನೋವನ್ನು ತೋರಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಅತ್ಯಗತ್ಯವಲ್ಲ ವಾದ ಬೇಸರ ತಂದಿದೆ: ಉಡುಪಿ ಮುಸ್ಲಿಮ್ ಒಕ್ಕೂಟ

    ಈ ವೇಳೆ ಮಾತನಾಡಿದ ಕಮಿಷನರ್ ಕಮಲ್ ಪಂತ್ ಗುರುವಾರ ಮುಸ್ಲಿಂ ಮುಖಂಡರು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಹಿಜಬ್ ಬಗೆಗಿನ ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಇಂದು ನಾವು ಮುಸ್ಲಿಂ ಮುಖಂಡರ ಜೊತೆ ಸಭೆ ಮಾಡಿದ್ದೇವೆ. ಗುರುವಾರ ಹೊರಗಡೆ ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದು ಹಾಗೂ ಕಚೇರಿಗೆ ತೆರಳುವವರನ್ನು ನಾವು ತಡೆಯುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಬುರ್ಕಾ ಹಾಕಬೇಕು, ನಮಾಜ್ ಮಾಡಬೇಕು, ಮುಸ್ಲಿಂ ಸಂಸ್ಕೃತಿ ಪಾಲಿಸಬೇಕೆಂದು ಒತ್ತಾಯಿಸುತ್ತಿದ್ದ: ಪತ್ನಿ ನೇರ ಆರೋಪ

    ಬಂದ್ ಅನ್ನು ಶಾಂತಿಯುತವಾಗಿ ನಡೆಸುತ್ತಿರುವುದಾದರೂ ಸಾಕಷ್ಟು ಬಂದೋಬಸ್ತ್ ಮಾಡಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೀಟ್‌ನಲ್ಲಿ ಇರುತ್ತಾರೆ. ಕೆಲವೆಡೆ ರೂಟ್ ಮಾರ್ಚ್ ಮಾಡಲಾಗುವುದು. 25 ಕೆಎಸ್‌ಆರ್‌ಪಿ ಹಾಗೂ 35 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಕಮಲ್ ಪಂತ್ ತಿಳಿಸಿದರು.

  • ಜನವರಿ 22ರ ಕರ್ನಾಟಕ ಬಂದ್ ಮುಂದೂಡಿಕೆ: ಕನ್ನಡ ಸಂಘಟನೆಗಳ ಒಕ್ಕೂಟ

    ಜನವರಿ 22ರ ಕರ್ನಾಟಕ ಬಂದ್ ಮುಂದೂಡಿಕೆ: ಕನ್ನಡ ಸಂಘಟನೆಗಳ ಒಕ್ಕೂಟ

    ಬೆಂಗಳೂರು: ಸದ್ಯಕ್ಕೆ ಕರ್ನಾಟಕ ಬಂದ್ ಮುಂದೂಡಿದ್ದೇವೆ. ಲಾಕ್‍ಡೌನ್ ಇಲ್ಲದಿದ್ದರೆ ಜನವರಿ 22ಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡಲು ತೀರ್ಮಾನಿಸಲಾಗಿತ್ತು. ಇಂದಿನ ಕನ್ನಡ ಸಂಘಟನೆಗಳ ಸಭೆಯ ನಿರ್ಣಯದಂತೆ ಬಂದ್ ಬದಲು ಮೆರವಣಿಗೆ ಮಾಡುತ್ತೇವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ರಾಜ್ಯ ಬಂದ್ ಹಿಂಪಡೆದ ಬಳಿಕ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಕನ್ನಡ ಪರ ಹೋರಾಟಗಾರರ ಸಭೆ ಕರೆಯಲಾಗಿತ್ತು. ಕನ್ನಡ ಒಕ್ಕೂಟದ ರಾಜ್ಯಾದ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವುಡ್‍ಲ್ಯಾಂಡ್ಸ್ ಹೊಟೇಲ್‍ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಾಟಳ್ ನಾಗರಾಜ್ ಮಾತನಾಡಿ, ಕೊರೊನಾ ಮತ್ತು ಸರ್ಕಾರದ ಟಫ್ ರೂಲ್ಸ್ ಜಾರಿ ಹಿನ್ನೆಲೆ, ಜ.22 ರಂದು ಕರೆ ನೀಡಿದ್ದ ರಾಜ್ಯ ಬಂದ್ ಹಿಂಪಡೆದಿದ್ದೇವೆ. ಮುಂದಿನ ದಿನದಲ್ಲಿ ಲಾಕ್ ಡೌನ್ ಇಲ್ಲದಿದ್ದರೆ ಜ. 22 ರಂದೇ ಬೆಂಗಳೂರಲ್ಲಿ ಹಿಂದೆಂದು ನಡೆಯದ ರೀತಿಯಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ: ಭದ್ರತಾ ಲೋಪ – ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

    ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಹೋರಾಟದ ಕುರಿತು ಒಗ್ಗೂಡಿಸುತ್ತೇವೆ. 22ರ ಶನಿವಾರ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್‍ನಿಂದ ಬೃಹತ್ ಮೆರವಣಿಗೆ ಆರಂಭವಾಗುತ್ತದೆ, ಮೇಕೆದಾಟು, ಮಹದಾಯಿ, ಎಂಇಎಸ್ ಮೂರು ವಿಚಾರಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತೇವೆ. ಟೌನ್‍ಹಾಲ್‍ನಿಂದ ಸ್ವಾತಂತ್ರ್ಯ ಉದ್ಯಾನವನದ ವರೆಗೆ ದೊಡ್ಡ ಮೆರವಣಿಗೆ ಮಾಡುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನೆಡೆಸುವಂತೆ ಸಂಘಟನೆಗಳಿಗೆ ಕರೆ ನೀಡುತ್ತೇವೆ ಎಂದರು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

    ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯ ಮುಖಂಡರು ಭಾಗಿಯಾಗಿದ್ದರು.

  • ಇಂದು ಬಂದ್‌ ಬದಲಿಗೆ ಬೃಹತ್‌ ರ‍್ಯಾಲಿ – MES ನಿಷೇಧಕ್ಕೆ ಸರ್ಕಾರಕ್ಕೆ ಗಡುವು

    ಇಂದು ಬಂದ್‌ ಬದಲಿಗೆ ಬೃಹತ್‌ ರ‍್ಯಾಲಿ – MES ನಿಷೇಧಕ್ಕೆ ಸರ್ಕಾರಕ್ಕೆ ಗಡುವು

    ಬೆಂಗಳೂರು: ರಾಜ್ಯದಲ್ಲಿ ನಡೆಯಬೇಕಿದ್ದ ಕರ್ನಾಟಕ ಬಂದ್ ಹಿಂಪಡೆದ ಕನ್ನಡಪರ ಸಂಘಟನೆಗಳು ಬದಲಾಗಿ ಇಂದು ಬೃಹತ್ ರ್‍ಯಾಲಿ ನಡೆಸಲಿವೆ.

    ರಾಜ್ಯದಲ್ಲಿ ಎಂಇಎಸ್ ನಿಷೇಧಗೊಳಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದ್ದರು. ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದರು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಎಂಇಎಸ್ ನಿಷೇಧಗೊಳಿಸುವುದಾಗಿ ಭರವಸೆ ನೀಡಿರುವುದರಿಂದ ಕನ್ನಡಪರ ಸಂಘಟನೆಗಳು ಬಂದ್ ಕರೆಯನ್ನು ಹಿಂಪಡೆದಿದೆ. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

    ಗುರುವಾರ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿದ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬಂದ್ ಬೇಡ ಎಂದು ಸಿಎಂ ಎರಡು ಬಾರಿ ಮಾತಾಡಿದರು. ಎಂಇಎಸ್ ನಿಷೇಧ ಮಾಡುವ ಭರವಸೆ ನೀಡಿದರು. ಕಾನೂನು ಪ್ರಕಾರ ನಿಷೇಧ ಮಾಡಲು ಪ್ರಯತ್ನ ಮಾಡ್ತೀವಿ. ಬಂದ್ ಹಿಂಪಡೆಯಲು ಸಿಎಂ ಮನವಿ ಮಾಡಿದರು. ಅವರ ಮಾತಿಗೆ ಗೌರವ ಕೊಟ್ಟು ಬಂದ್ ವಾಪಸ್ ಪಡೆಯುವುದಾಗಿ ತಿಳಿಸಿದ್ದರು.

    ಇಂದು ಕರ್ನಾಟಕ ಬಂದ್ ಇದೆ ಎಂದು ಗೊಂದಲಗೊಂಡಿದ್ದ ಜನರಿಗೆ ಬಂದ್ ಇಲ್ಲ ಎಂಬ ವಿಚಾರ ಇದೀಗ ರಿಲೀಫ್ ನೀಡಿದೆ. ಅಲ್ಲದೇ ರಾಜ್ಯದಲ್ಲಿ ಎಂದಿನಂತೆ ಬಸ್ ಸಂಚಾರ, ವ್ಯಾಪಾರ ವಹಿವಾಟುಗಳು ನಡೆಯಲಿವೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ವರುಣನ ಆರ್ಭಟಕ್ಕೆ 3 ಬಲಿ – ರಾಜಧಾನಿ ಜಲಾವೃತ

    ರಾಜ್ಯದಲ್ಲಿ ಬಂದ್ ಹಿಂಪಡೆದ ಕನ್ನಡ ಸಂಘಟನೆಗಳು ಇಂದು ಬೆಳಗ್ಗೆ 10.30ಕ್ಕೆ ಟೌನ್‍ಹಾಲ್‍ನಿಂದ ಫ್ರೀಡಂಪಾರ್ಕ್‍ವರೆಗೆ ಬೃಹತ್ ರ್‍ಯಾಲಿ ನಡೆಸಲಿದೆ. ಮೈಸೂರು ಬ್ಯಾಂಕ್ ಸಿಗ್ನಲ್ ಮೂಲಕ ತೆರಳಲಿರುವ ಈ ರ್‍ಯಾಲಿಯಲ್ಲಿ ಸುಮಾರು 500 ಮಂದಿ ಭಾಗಿಯಾಗುವ ನಿರೀಕ್ಷೆಯಿದೆ ಮತ್ತು ಜನವರಿ 22ರೊಳಗೆ ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕು. ಇಲ್ಲವಾದರಲ್ಲಿ ಜನವರಿ 22ಕ್ಕೆ ಮತ್ತೆ ಬಂದ್ ಮಾಡುವುದಾಗಿ ಕನ್ನಡ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

  • ನಾಳೆಯ ಕರ್ನಾಟಕ ಬಂದ್ ವಾಪಸ್

    ನಾಳೆಯ ಕರ್ನಾಟಕ ಬಂದ್ ವಾಪಸ್

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿ ಮೇರೆಗೆ ನಾಳೆಯ ಕರ್ನಾಟಕ ಬಂದ್ ಅನ್ನು ಕೈ ಬಿಡಲಾಗಿದೆ.

    ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಗಳ ಮುಂದೆ ಮಾತನಾಡಿದ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಬಂದ್ ಬೇಡ ಎಂದು ಸಿಎಂ ಎರಡು ಬಾರಿ ಮಾತಾಡಿದರು. ಎಂಇಎಸ್ ನಿಷೇಧ ಮಾಡುವ ಭರವಸೆ ನೀಡಿದರು. ಕಾನೂನು ಪ್ರಕಾರ ನಿಷೇಧ ಮಾಡಲು ಪ್ರಯತ್ನ ಮಾಡ್ತೀವಿ. ಬಂದ್ ಹಿಂಪಡೆಯಲು ಸಿಎಂ ಮನವಿ ಮಾಡಿದರು. ಅವರ ಮಾತಿಗೆ ಗೌರವ ಕೊಟ್ಟು ಬಂದ್ ವಾಪಸ್ ಪಡೆಯುವುದಾಗಿ ಹೇಳಿದರು.

    ಇದೇ ವೇಳೆ ನನ್ನ ಜೀವನದಲ್ಲಿ ಈ ಬಾರಿಯ ಬಂದ್ ಮಾಡಲು ಹೋದಾಗ ತುಂಬಾ ಒತ್ತಡಗಳು ಬಂತು. ನಾಳೆ ರಾಜ್ಯದಲ್ಲಿ ಯಾವುದೇ ಬಂದ್ ಇರಲ್ಲ. ಎಂದಿನಂತೆ ನೀವು ನಿಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬಹುದು. ಬಸ್ ಸಂಚಾರ ಸೇರಿ ಎಲ್ಲವೂ ಎಂದಿನಂತೆ ಇರಲಿದೆ ಎಂದು ವಾಟಾಳ್ ಹೇಳಿದರು. ಇದನ್ನೂ ಓದಿ: ಜನವರಿ 1 ರಿಂದ ಜಿಎಸ್‍ಟಿ ನಿಯಮಗಳ ಬದಲಾವಣೆ – ಹೀಗಿದೆ ಮುಖ್ಯ ಬೆಲೆ ಏರಿಕೆಗಳ ಪಟ್ಟಿ

    ಹಲವು ಕನ್ನಡ ಪರ ಸಂಘಟನೆಗಳು ಸೇರಿದಂತೆ ಉದ್ಯಮ ವಲಯದ ಸಂಘಟನೆಗಳು, ನಿತ್ಯದ ದುಡಿಮೆಯನ್ನೇ ಆಧರಿಸಿದ ವಲಯಗಳ ಸಂಘಟನೆಗಳು ಬಂದ್ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಜೊತೆಗೆ ಈ ಸಂದರ್ಭದಲ್ಲಿ ಬಂದ್‍ಗೆ ಅವಕಾಶ ನೀಡೋದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದ ಸರ್ಕಾರ, ಕಡೆ ಕ್ಷಣದಲ್ಲಿ ಹೋರಾಟಗಾರರ ಜೊತೆ ಸಂಧಾನ ನಡೆಸಿತು. ಖುದ್ದು ಮುಖ್ಯಮಂತ್ರಿಗಳೇ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಸೇರಿ ಹಲವರ ಜೊತೆ ಸಭೆ ನಡೆಸಿದ್ದು, ಇದೀಗ ಸಭೆ ಯಶಸ್ವಿಯಾಗಿದೆ. ಇದನ್ನೂ ಓದಿ: ವೈಯಕ್ತಿಕ, ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ: ಜಗದೀಶ್ ಶೆಟ್ಟರ್

  • ಕನ್ನಡ ಸಿನಿಮಾಗಳನ್ನು ಕಿಲ್ ಮಾಡಲು ಉದ್ದೇಶಪೂರ್ವಕವಾಗಿ ಪೈರಸಿ ಮಾಡಿದ್ದಾರೆ: ನಿಖಿಲ್

    ಕನ್ನಡ ಸಿನಿಮಾಗಳನ್ನು ಕಿಲ್ ಮಾಡಲು ಉದ್ದೇಶಪೂರ್ವಕವಾಗಿ ಪೈರಸಿ ಮಾಡಿದ್ದಾರೆ: ನಿಖಿಲ್

    ಹಾಸನ: ರೈಡರ್ ಚಿತ್ರ ಬಿಡುಗಡೆಯಾದ 9 ಗಂಟೆಯಲ್ಲಿ 25 ಲಕ್ಷ ಜನ ವೆಬ್ ಸೈಟ್‍ಗಳಲ್ಲಿ ಪೈರಸಿ ಚಿತ್ರ ವೀಕ್ಷಿಸಿದ್ದಾರೆ. ಪೈರಸಿಯಾಗದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೆವು. ಆದರೂ ಒಂದಿಷ್ಟು ಜನ ಕನ್ನಡ ಸಿನಿಮಾಗಳನ್ನು ಹಾಳು ಮಾಡಲು, ಉದ್ದೇಶಪೂರ್ವಕವಾಗಿ ಪೈರಸಿ ಮಾಡಿದ್ದಾರೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

    ಎಲ್ಲರೂ ಕಷ್ಟಪಟ್ಟು ಉತ್ತಮ ಕಥೆ ಆಯ್ಕೆ ಮಾಡಿ ಹೈಕ್ವಾಲಿಟಿ ಸಿನಿಮಾ ಮಾಡಿರುತ್ತೇವೆ. ಅದನ್ನು ಮೊಬೈಲ್‍ನಲ್ಲಿ ನೋಡುವುದು ಅಷ್ಟು ಚೆನ್ನಾಗಿ ಇರುವುದಿಲ್ಲ ಎಂದು ನಿಖಿಲ್ ಹೇಳಿದರು.

    ಇದೇ ವೇಳೆ ಡಿಸೆಂಬರ್ 31ರ ರಾಜ್ಯ ಬಂದ್ ಕರೆಯ ಹಿನ್ನೆಲೆಯಲ್ಲಿ ಮಾತನಾಡಿದ ನಿಖಿಲ್, ಎರಡು ವರ್ಷಗಳ ಕೊರೊನಾ ಸಂಕಷ್ಟದ ನಂತರ ಸಾಕಷ್ಟು ಚಿತ್ರಗಳು ಬಿಡುಗಡೆಯಾಗಿವೆ. ಹಲವು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಬಂದ್ ಮಾಡುವುದರಿಂದ ಕನ್ನಡ ಚಿತ್ರಗಳಿಗೆ, ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ ಎಂದರು. ಇದನ್ನೂ ಓದಿ: ರೈಡರ್‌ ಸಿನಿಮಾ ಪೈರಸಿ – ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು

    ಮಾಧ್ಯಮದಲ್ಲಿ ಪ್ರಚಾರ ಪಡೆಯುವುದಕ್ಕಾಗಿ ಬಂದ್ ಸೀಮಿತವಾಗಬಾರದು. ಅಂತಹ ಬಂದ್ ನಮಗೆ ಅವಶ್ಯಕತೆ ಇಲ್ಲ. ಬಂದ್‍ಗೆ ಕರೆ ಕೊಟ್ಟಿರುವವರು ಇನ್ನೊಮ್ಮೆ ಯೋಚನೆ ಮಾಡಲಿ ಎಂದು ಮನವಿ ಮಾಡಿದರು.

    ಇದೇ ಸಮಯದಲ್ಲಿ ತಂದೆ ಹೆಚ್‍ಡಿ ಕುಮಾರಸ್ವಾಮಿ, ನಿಖಿಲ್ ಸಿನಿಮಾದಲ್ಲಿ ಮುಂದುವರಿಯಲಿ ಎಂಬ ಹೇಳಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದ ನಿಖಿಲ್, ಅವರ ಮಾತಿನ ಉದ್ದೇಶ ಅದಲ್ಲ. ನನ್ನನ್ನು ಒಬ್ಬ ಕಲಾವಿದನಾಗಿ ಜನರು ಗುರುತಿಸುತ್ತಿದ್ದಾರೆ. ಅದು ನನಗೆ ಹೆಮ್ಮೆ ಇದೆ. ಇದರ ಹಿನ್ನೆಲೆಯಲ್ಲಿ ನನ್ನ ತಂದೆ ಸಿನಿಮಾ ಮಾಡಬೇಕು, ಬಿಡಬಾರದು ಎಂದು ಕಿವಿಮಾತು ಹೇಳಿದ್ದಾರೆ. ನನ್ನ ವೃತ್ತಿ ಸಿನಿಮಾ. ರಾಜಕೀಯದ ವಿಚಾರ ಬಂದಾಗ ಅದರ ಬಗ್ಗೆ ನಾನು ಪ್ರತಿಕ್ರಿಯಿಸುತ್ತೇನೆ ಎಂದರು. ಇದನ್ನೂ ಓದಿ: ಅಪ್ಪು ಸಿನಿಮಾಗಳು ಈಗ ಲೆಕ್ಕಕ್ಕೆ ಬರೋದಿಲ್ಲ, ಅವನ ಸಮಾಜಸೇವೆ ಎಲ್ಲವನ್ನೂ ಪಕ್ಕಕ್ಕಿಟ್ಟಿದೆ: ರಾಘಣ್ಣ

  • ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕೈಬಿಡಲು ಬೊಮ್ಮಾಯಿ ಮನವಿ

    ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕೈಬಿಡಲು ಬೊಮ್ಮಾಯಿ ಮನವಿ

    ಬೆಂಗಳೂರು: ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿಕೊಂಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕಾನೂನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ದೇಶದಲ್ಲಿ 800 ರ ಆಸುಪಾಸಿನಲ್ಲಿ ಓಮಿಕ್ರಾನ್ – ದೆಹಲಿಯಲ್ಲಿ ದಾಖಲೆಯ 238 ಕೇಸ್

    ಕರ್ನಾಟಕ ಬಂದ್‍ಗೆ ಕರೆ ಕೊಡುವುದು ಸೂಕ್ತವಲ್ಲ, ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದನ್ನೂ ಓದಿ: ಹೊಟ್ಟೆಯಲ್ಲಿ 1 ಕೆ.ಜಿ ಕೊಕೇನ್ ಬಚ್ಚಿಟ್ಟು ಪ್ರಯಾಣ – ವಿದೇಶಿ ಮಹಿಳೆ ಅರೆಸ್ಟ್

  • ಒತ್ತಾಯಪೂರ್ವಕ ಬಂದ್ ಮಾಡೋರಿಗೆ ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ

    ಒತ್ತಾಯಪೂರ್ವಕ ಬಂದ್ ಮಾಡೋರಿಗೆ ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ

    ಹುಬ್ಬಳ್ಳಿ: ಒತ್ತಾಯಪೂರ್ವಕವಾಗಿ ಕರ್ನಾಟಕ ಬಂದ್ ಮಾಡುವವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಡಿಸೆಂಬರ್ 30ಕ್ಕೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂದ್ ಮಾಡುವ ಪರಸ್ಥತಿ ರಾಜ್ಯದಲ್ಲಿಲ್ಲ. ರಾಜ್ಯ ಸರ್ಕಾರ ಈಗಾಗಲೇ ದಿಟ್ಟ ಕ್ರಮ ಕೈಗೊಂಡಿದೆ. ಈಗಾಗಲೇ ಕೊರೊನಾದಿಂದ ಬೀದಿ ಬದಿ ವ್ಯಾಪಾರಸ್ಥರು, ಕೂಲಿ ಕಾರ್ಮಿಕರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಂದ್ ಮಾಡಬಾರದು. ಕನ್ನಡಪರ ಚಳುವಳಿಗಾರರು ಎನಿಸಿಕೊಂಡವರು ಹತ್ತತ್ತು ಬಾರಿ ಯೋಚನೆ ಮಾಡಲಿ. ಒತ್ತಾಯ ಮಾಡಿ ಬಂದ್ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರು, ಪತ್ರಕರ್ತರ ಸಂಘದ ಕೊಡುಗೆ ಅನನ್ಯ: ವೇದವ್ಯಾಸ ಕಾಮತ್

    ಕಾನೂನು ಇದೆ, ಆ ಕಾನೂನು ಕ್ರಮ ಕೈಗೊಳ್ಳುತ್ತದೆ. ಎಂಇಎಸ್ ಬ್ಯಾನ್ ಮಾಡುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ. ಬ್ಯಾನ್ ಅನ್ನೋದಕ್ಕಿಂತ ನಮ್ಮವರು ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ಬ್ಯಾನ್ ಮಾಡಿ ತೋರಿಸಿದ್ದಾರೆ. ಯಾರೋ ಪುಂಡರು ಮಾಡಿದ ಕೆಲಸ ಅದು. ಈಗಲೇ ಮಾಡಿ, ಇವತ್ತೇ ಮಾಡಿ ಅಂತಾ ಡೆಡ್ ಲೈನ್ ಕೊಟ್ಟರೆ ಹೇಗೆ? ಈಗಾಗಲೇ ಮಹಾರಾಷ್ಟ್ರದ ಜೊತೆಗೂ ಮಾತನಾಡಿದ್ದೇವೆ. ಬಂದ್ ಕುರಿತು ಚರ್ಚೆ ಮಾಡಲು ಕನ್ನಡ ಪರ ಹೋರಾಟಗಾರರು ಬಂದರೆ ಸಿಎಂ ಅವರ ಜೊತೆ ಮಾತನಾಡೋಕೆ ಸಿದ್ಧ ಇದ್ದಾರೆ ಎಂದು ನಾಳೆ ಕರ್ನಾಟಕ ಬಂದ್ ಕೈ ಬಿಡಲು ಮನವಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‍ನದ್ದು ದೇಶದಲ್ಲಿ ಹಾರದ ಬಾವುಟ: ಆರ್. ಅಶೋಕ್ ವ್ಯಂಗ್ಯ

  • ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ

    ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ

    ಬೆಂಗಳೂರು: ಕನ್ನಡ ಧ್ವಜಕ್ಕೆ, ನಾಡು-ನುಡಿಯನ್ನು ಅವಮಾನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.31 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಆದರೆ ಬಂದ್‌ನ ದಿನಾಂಕವನ್ನು ಮುಂದೂಡಲು ಕನ್ನಡ ಪರ ಸಂಘಟನೆಗಳ ಅಧ್ಯಕ್ಷ ವಾಟಳ್ ನಾಗರಾಜ್‌ಗೆ ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮನವಿ ಪತ್ರ ಸಲ್ಲಿಸಿದ್ದಾರೆ.

    ಪತ್ರದಲ್ಲಿ ಏನಿದೆ?: ಕನ್ನಡದ, ಕನ್ನಡಿಗರ, ಕನ್ನಡಪರ ಹೋರಾಟಗಾರರ ಪ್ರಶ್ನಾತೀತ ನಾಯಕರೇ, ತಮ್ಮಲ್ಲಿ ವಿನಮ್ರತೆಯಿಂದ ನಿವೇದಿಸಿಕೊಳ್ಳುವುದೇನೆಂದರೆ ಡಿ.22 ರಂದು ನಾವೆಲ್ಲರೂ ಒಮ್ಮತದಿಂದ ದಿನಾಂಕ 31ರ ಶುಕ್ರವಾರ ರಾಜ್ಯ ಬಂದ್‌ಗೆ ಕರೆ ನೀಡಿದ್ದೆವು. ಆದರೆ ನಂತರ ನಡೆದ ಹಲವಾರು ಬೆಳವಣಿಗೆಗಳಿಂದ ನಮ್ಮ ಈ ನಿರ್ಧಾರ ಪ್ರಸ್ತುತ ಸರಿ ಇಲ್ಲವೆಂಬ ಭಾವನೆ ಮೂಡುತ್ತಿದೆ.

    ಕಾರಣ ಓಮಿಕ್ರಾನ್ ಈಗಾಗಲೇ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ತತ್ಪರಿಣಾಮವಾಗಿ ಸೆಕ್ಷನ್ 144 ಹಾಗೂ ರಾತ್ರಿ ಕರ್ಫ್ಯೂ ಕೂಡ ಜಾರಿ ಮಾಡಲಾಗಿದೆ. ಈಗಾಗಲೇ ಕೋವಿಡ್ ಕಾರಣದಿಂದ ಸಾಕಷ್ಟು ಸಂಕಷ್ಟದಲ್ಲಿರುವ ವರ್ತಕರು ವಾಣಿಜ್ಯೋದ್ಯಮಿಗಳು ಹೋಟೆಲ್ ಮಾಲೀಕರು ನಮ್ಮ ಈ ನಿರ್ಧಾರದಿಂದ ಸಾಕಷ್ಟು ಆತಂಕದಲ್ಲಿದ್ದಾರೆ. ಹಿಂದಿನ ವರ್ಷದ ಕೊನೆಯಲ್ಲಿ ಹೊಸ ವರ್ಷದ ಆರಂಭದಲ್ಲಿ ಒಳ್ಳೆಯ ವ್ಯಾಪಾರ ವಹಿವಾಟಿನ ನಿರೀಕ್ಷೆಯಲ್ಲಿದ್ದ, ವ್ಯಾಪಾರಸ್ಥರು ಬಹಳ ನಷ್ಟವನ್ನು ಅನುಭವಿಸಿದ್ದಾರೆ.

    ಸದಾಕಾಲ ನಮ್ಮ ಜೊತೆ ನಿಲ್ಲುತ್ತಿದ್ದ ಚಿತ್ರೋದ್ಯಮ ಕೆಲವು ಸಂಘಟನೆಗಳು ತಮ್ಮ ಅಸಮಾಧಾನವನ್ನು ಹೊರ ಹಾಕಿವೆ. ಸಾರ್ವಜನಿಕ ವಲಯ ಹಾಗೂ ಬಹಳ ಪ್ರಮುಖವಾಗಿ ಬೆಳಗಾವಿಯ ಕ್ರಿಯ ಸಮಿತಿ ಕೂಡ ನಮ್ಮ ಬಂದ್‌ಗೆ ಬೆಂಬಲ ನೀಡುತ್ತಿಲ್ಲ. ನಮ್ಮ ಸಂಘಟನೆಯ ಪದಾಧಿಕಾರಿಗಳಲ್ಲೂ ಬಂದ್ ಬಗ್ಗೆ ಒಮ್ಮತ ಸಾಧ್ಯವಾಗಿಲ್ಲ. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಈ ಎಲ್ಲಾ ಕಾರಣಗಳನ್ನು ಗಮನಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ನಾವು ಬಂದ್ ದಿನಾಂಕವನ್ನು ಮೂಂದೂಡುವುದು ಸೂಕ್ತ. ಮುಂದಿನ ಸಭೆಯಲ್ಲಿ ಚರ್ಚಿಸಿ ದಿನಾಂಕ ನಿಗದಿಗೊಳಿಸೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ 

  • ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಬೆಂಗಳೂರು: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ ಉಳಿದಿದ್ದು, ಹಲವು ವಲಯಗಳಿಂದ ಇನ್ನೂ ಪರಿಪೂರ್ಣ ಬೆಂಬಲ ಸಿಕ್ಕಿಲ್ಲ. ಈ ಪರಿಣಾಮ ಬಂದ್ ಯಶಸ್ವಿಗೊಳಿಸೋಕೆ ಕನ್ನಡಪರ ಸಂಘಟನೆಗಳು ಹರಸಾಹಸ ಪಡುತ್ತಿವೆ.

    ಡಿ.31ರ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಆದರೆ ಅದಕ್ಕೆ ಎಲ್ಲ ಕಡೆಯಿಂದ ಸಂಪೂರ್ಣ ಬೆಂಬಲ ಸಿಕ್ಕಿಲ್ಲ. ಪರಿಣಾಮ ಕನ್ನಡಪರ ಸಂಘಟನೆಗಳು ಬಂದ್ ಯಶಸ್ವಿಗೊಳಿಸೋಕೆ ಪಣತೊಟ್ಟಿವೆ. ಬಂದ್ ಗೆ ಬೆಂಬಲ ಕೋರಿ ಕೆಲ ಸಂಘಟನೆಗಳಿಂದ ರ‍್ಯಾಲಿ ಮಾಡುತ್ತಿವೆ. ಮತ್ತೆ ಕೆಲ ಸಂಘಟನೆಗಳಿಂದ ಬಂದ್ ಗೆ ಬೆಂಬಲ ಬೇಡ ಎಂದು ತೀರ್ಮಾನಿಸಲು ಇಂದು ಸಭೆ ಕರೆಯಲಾಗಿದೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ 

    ಬಂದ್ ಗೆ ಬೆಂಬಲ ಬೇಡ ಎಂದು ಸರ್ವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳಿಂದ ಡಿ.30ಕ್ಕೆ ನಗರದಲ್ಲಿ ರ‍್ಯಾಲಿ ಮಾಡಲು ನಿರ್ಧರಿಸಲಾಗಿದೆ. ಇನ್ನು ಹಲವು ಸಂಘಟನೆಗಳು ನೈತಿಕ ಬೆಂಬಲ ನೀಡುವುದಾಗಿ ಘೋಷಿಸಿವೆ. ನೈತಿಕ ಬೆಂಬಲ ಬೇಡ ಸಂಪೂರ್ಣ ಬೆಂಬಲ ಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

    ಹೋಟೆಲ್, ಪಬ್, ಬಾರ್ ಮಾಲೀಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಾವು ನೈತಿಕ ಬೆಂಬಲ ನೀಡುತ್ತೇವೆ ಎಂದು ತಿಳಿಸಿವೆ. ಹೀಗಾಗಿ ಕನ್ನಡಪರ ಸಂಘಟನೆಗಳು ನೈತಿಕ ಬೆಂಬಲಕ್ಕೆ ಅಸಮಾಧಾನ ವ್ಯಕ್ತಪಡಿಸಿವೆ.

    ಹಲವು ಗೊಂದಲಗಳ ನಡುವೆ ಬಂದ್ ನ್ನು ಯಶಸ್ವಿಗೊಳಿಸಲೇಬೇಕಾದ ಒತ್ತಡದಲ್ಲಿ ಕನ್ನಡಪರ ಸಂಘಟನೆಗಳು ಇದ್ದು, ರಾಜ್ಯದಲ್ಲಿ ತಮ್ಮ ಶಕ್ತಿ ಸಾಬೀತಾಗಬೇಕಾದರೆ ಬಂದ್ ಯಶಸ್ವಿಯಾಗಲೇಬೇಕು ಎಂದು ಪಣತೊಟ್ಟಿವೆ. ಇದನ್ನೂ ಓದಿ: ಗ್ರಾಪಂ ಸದಸ್ಯ 15 ಲಕ್ಷ ಲಂಚ ಪಡೆಯುವುದು ಭ್ರಷ್ಟಾಚಾರವಲ್ಲ: ಬಿಜೆಪಿ ಸಂಸದ

    ಮೊನ್ನೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸತ್ಯಾಗ್ರಹ, ಕಾಲ್ನಡಿಗೆ ಜಾಥಾದ ಮೂಲಕ ಸಾರ್ವಜನಿಕರಲ್ಲಿ ಮನವಿ, ಮಾಲ್ ಗಳಲ್ಲಿ ರ‍್ಯಾಲಿ, ಮಲ್ಲೇಶ್ವರಂನಲ್ಲಿ ಉರುಳು ಸೇವೆ ಮಾಡಿ ಬಂದ್ ಗೆ ಕನ್ನಡಪರ ಸಂಘಟನೆಗಳು ಬೆಂಬಲ ಕೋರಿವೆ. ಈ ವೇಳೆ 100 ಕ್ಕೂ ಹೆಚ್ಚು ಹೋರಾಟಗಾರರಿಂದ ಉರುಳು ಸೇವೆ ಮೂಲಕ ಮನವಿ ಮಾಡಲಾಯಿತು. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಯಾಗಿರುವುದರಿಂದ ಬಂದ್ ಮಾಡಲೇಬೇಕು ಎಂದು ಸಂಘಟನೆಗಳು ಪಣತೊಟ್ಟಿವೆ.

  • ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್

    ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ: ಸುನಿಲ್ ಕುಮಾರ್

    ಚಿತ್ರದುರ್ಗ: ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ. ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆಗಳನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ. ನಮ್ಮ ಸಾಹಿತ್ಯ, ಭಾಷೆ, ಸಂಸ್ಕೃತಿಗೆ ಪ್ರಥಮ ಆದ್ಯತೆ ನೀಡುತ್ತೇವೆ. ಇದರ ವಿರುದ್ಧ ಮಾತನಾಡುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಘಟನೆ ಬಗ್ಗೆ ಸರ್ಕಾರ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಗೃಹ ಇಲಾಖೆ ಎಚ್ಚರಿಕೆ ವಹಿಸಿದೆ ಎಂದ ಅವರು, ಕನ್ನಡ ಸಂಘಟನೆ, ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಪ್ರತಿ ಬಾರಿ ಇಂತಹ ಘಟನೆ ಆದಾಗ ಬಂದ್ ಮಾಡುವುದು ಸರಿಯಲ್ಲ. ಬಂದ್ ಕೈಬಿಡಿ ಎಂದು ಮನವಿ ಮಾಡಿದರು.

    ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ಕಾಯ್ದೆ ವಾಪಸ್ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಅವರು, ಸರ್ಕಾರ ಬರುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಅದಕ್ಕೆ ಮತಾಂತರ ಕಾಯ್ದೆ, ಗೋಹತ್ಯೆ ಕಾನೂನು, ಟಿಪ್ಪು ಜಯಂತಿ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಓಬವ್ವ ಜಯಂತಿ ಮಾಡುವ ಬೊಮ್ಮಾಯಿ ಬೇಕೋ? ಟಿಪ್ಪು ಜಯಂತಿ ಮಾಡುವ ಸಿದ್ದರಾಮಯ್ಯ ಬೇಕೋ? ಎನ್ನುವುದನ್ನು ಜನರೇ ನಿರ್ಧರಿಸುತ್ತಾರೆ. ಇದೆಲ್ಲವನ್ನು ಕೂಡಾ ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗೋದು: ಮಹಾಂತೇಶ್ ಕವಟಗಿಮಠ

    ಮತಾಂತರ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಸೆ, ಆಮೀಷ ಒಡ್ಡಿ ಮತಾಂತರ ಮಾಡಬಾರದು ಎಂಬುದು ಕಾನೂನಿನಲ್ಲಿದೆ. ಈ ಕಾನೂನಿನಲ್ಲಿ ತಪ್ಪೇನಿಲ್ಲ. ಈ ಬಗ್ಗೆ ರಾಜ್ಯದ ಜನತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೆಟ್ಟ ಸಂದೇಶ ಕೊಡುತ್ತಿದ್ದಾರೆ. ಟಿಪ್ಪು ಜಯಂತಿ, ಮತಾಂತರ ಕಾಯ್ದೆ ತರುವೆ ಎಂದು ಪ್ರತ್ಯೇಕ ಸಂದೇಶ ನೀಡುತ್ತಾರೆ. ನಾವು ಇದನ್ನು ದೊಡ್ಡ ಪ್ರಮಾಣದಲ್ಲಿ ಎದುರಿಸುತ್ತೇವೆ, ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ವಚನಗಳಲ್ಲಿ ‘ಲಿಂಗದೇವ’ ಬದಲಾಗಿ ‘ಕೂಡಲಸಂಗಮದೇವ’ ವಚನಾಂಕಿತ ಬಳಸಲು ನಿರ್ಧಾರ: ಗಂಗಾದೇವಿ

    ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಸಿಎಂ ಬದಲಾವಣೆ ನೂರಕ್ಕೆ ನೂರು ಊಹಾಪೂಹವಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರೇ ದಾವಣಗೆರೆಗೆ ಬಂದಾಗ ಸ್ಪಷ್ಟಪಡಿಸಿದ್ದರು. ನಿನ್ನೆ ಅರುಣ್ ಸಿಂಗ್ ಅವರು ಕೂಡಾ ಹೇಳಿದ್ದಾರೆ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಅಭಿಪ್ರಾಯಪಟ್ಟರು.