Tag: ಕರ್ನಾಟಕ ಬಜೆಟ್ 2023

  • ಸದನದಲ್ಲಿ ಭದ್ರತಾ ಲೋಪ – ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಖಾಸಗಿ ವ್ಯಕ್ತಿ

    ಸದನದಲ್ಲಿ ಭದ್ರತಾ ಲೋಪ – ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಖಾಸಗಿ ವ್ಯಕ್ತಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬಹುನಿರೀಕ್ಷಿತ ಬಜೆಟ್ (Karnataka Budget 2023) ಮಂಡನೆಯ ವೇಳೆ ಭದ್ರತಾ ಲೋಪ ಎದುರಾದ ಘಟನೆ ನಡೆದಿದೆ.

    ಹೌದು. ಸಿಎಂ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಶಾಸಕರ ಸೀಟ್‍ನಲ್ಲಿ ಕುಳಿತುಕೊಂಡಿದ್ದರು. ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ಸಂದರ್ಭದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿರುವ ಆಸನದಲ್ಲಿ ವ್ಯಕ್ತಿ ಸುಮಾರು 15 ನಿಮಿಷಗಳ ಕಾಲ ಕುಳಿತಿದ್ದರು. ಕರೆಮ್ಮ ಬಂದ ಬಳಿಕ ವ್ಯಕ್ತಿ ಎದ್ದು ಹೋಗಿದ್ದಾನೆ.

    ಈ ಸಂಬಂಧ ಗುರುಮಿಠಕಲ್ ಶಾಸಕ ಶರಣ ಗೌಡ ಕಂದಕೂರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಯಾರೋ ಒಬ್ಬ ಖಾಸಗಿ ವ್ಯಕ್ತಿ ಬಂದು ಸದನದ ಆಸನದಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ನಾನು ಪಕ್ಕದಲ್ಲಿದ್ದ ಜಿಟಿ ದೇವೇಗೌಡ ಅವರ ಬಳಿ ಕೇಳಿದೆ. ಅವರು ಯಾರೋ ಗೊತ್ತಿಲ್ಲ ಅಂದ್ರು. ಆಗ ನಾನು ಆ ವ್ಯಕ್ತಿಯನ್ನು ಕೇಳಿದಾಗ ಮೊಳಕಾಲ್ಮೂರು ಎಂಎಲ್‍ಎ ಅಂದಿದ್ದಾರೆ. ಅವರು ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತಿದ್ರು. ಇದೊಂದು ಭದ್ರತಾ ಲೋಪ ಎಂದರೆ ತಪ್ಪಾಗಲಾರದು ಎಂದರು.

    ಶಾಸಕರಲ್ಲದೇ ಇರುವವರು  ಹೀಗೆ ಬಂದು ಕುಳಿತುಕೊಳ್ಳುತ್ತಾರೆ ಎಂದರೆ ನಿಜಕ್ಕೂ ಶಾಕ್ ಆಯಿತು. ಸದನದ ಒಳಗಡೆ ಯಾರನ್ನೂ ಒಳಗಡೆ ಬಿಡಲ್ಲ. ಅಂಥದ್ದರಲ್ಲಿ ಈ ವ್ಯಕ್ತಿ ಒಳಗೆ ಬರುತ್ತಾರೆ ಅಂದರೆ ನಿಜಕ್ಕೂ ಅಚ್ಚರಿಯೇ ಸರಿ. ವ್ಯಕ್ತಿ 15 ನಿಮಿಷ ಕುಳಿತುಕೊಂಡಿದ್ದಲ್ಲದೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಬಳಿ ತೆರಳಿ ಹ್ಯಾಂಡ್ ಶೇಕ್ ಕೂಡ ಮಾಡಿದ್ದಾರೆ. ಆದರೆ ಡಿಸಿಎಂ ಅವರು ಬಜೆಟ್ ಬ್ಯುಸಿಯಲ್ಲಿ ಇದ್ದ ಕಾರಣ ವ್ಯಕ್ತಿ ಕಡೆ ಹೆಚ್ಚಿನ ಗಮನ ಕೊಡಲಿಲ್ಲ ಎಂದರು.

    ಒಟ್ಟಿನಲ್ಲಿ ಈ ರೀತಿಯಾಗಿ ಖಾಸಗಿ ವ್ಯಕ್ತಿ ಸದನದ ಒಳಗಡೆ ಬಂದಿದ್ದು, ಸದನ ಹಾಗೂ ಶಾಸಕರಿಗೂ ಅಗೌರವ ತೋರಿದಂತಾಗಿದೆ. ಅಲ್ಲದೆ ಹೀಗೆ ಒಳಗಡೆ ಬಂದು ಯಾರಿಗಾದರೂ ಏನಾದರೂ ಅನಾಹುತ ಆದರೆ ಯರು ಜವಾಬ್ದಾರಿ ಎಂದು ಶಾಸಕರು ಪ್ರಶ್ನಿಸಿದರು.

    ಸದ್ಯ ಈ ಸಂಬಂಧ ಸ್ಪೀಕರಿಗೆ ಶರಣ ಗೌಡ ಕಂದಕೂರು ದೂರು ನೀಡಿದ್ದು, ವ್ಯಕ್ತಿಯನ್ನು ವಿಧಾನಸೌಧ ಠಾಣೆಯ ಪೊಲೀಸರು (Vidhanasoudha Police Station) ವಶಕ್ಕೆ ಪಡೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023- ಕೃಷಿ, ತೋಟಗಾರಿಕಾ ಇಲಾಖೆ ಉತ್ತೇಜನಕ್ಕೆ ಸಿಕ್ಕಿದ್ದೇನು?

    Karnataka Budget 2023- ಕೃಷಿ, ತೋಟಗಾರಿಕಾ ಇಲಾಖೆ ಉತ್ತೇಜನಕ್ಕೆ ಸಿಕ್ಕಿದ್ದೇನು?

    ಬೆಂಗಳೂರು: ಬಹುನಿರೀಕ್ಷಿತ ಬಜೆಟ್ (Karnataka Budget 2023) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದು, ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 5,860 ಕೋಟಿ ರೂ. ಘೋಷಿಸಿದ್ದಾರೆ.

    ಕೃಷಿ (Agriculture) ಉದ್ಯಮಿಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಅನುದಾನ ನೀಡಲಾಗುವುದು. ರೈತರು ಬೆಳೆದ ಉತ್ಪನ್ನಗಳನ್ನ ಮಾರಾಟ ಮಾಡಲು ನಂದಿನಿ ಮಾದರಿಯಲ್ಲಿ ರೈತರ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ನೀಡಲಾಗುವುದು ಎಂದರು.

    ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ 8 ಶೀತಲ ಘಟಕಗಳ ನಿರ್ಮಾಣ ಮಾಡಲಾಗುವುದು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ವಿದ್ಯಾರ್ಥಿಗಳಿಗಾಗಿ ತೋಟಗಾರಿಕೆ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಹೇಳಿದರು. ಇದನ್ನೂ ಓದಿ: Karnataka Budget 2023: ಬೆಂಗ್ಳೂರು ಅಭಿವೃದ್ಧಿಗೆ ಸಿಕ್ಕಿದ್ದೇನು?

    ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆಯನ್ನ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಗೊಳಿಸಲಾಗುವುದು. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು 5 ಲಕ್ಷವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು ಎಂದರು.

    ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣಿಗೆ ಅನುಗ್ರಹ ಯೋಜನೆ ಪುನರ್ ಸ್ಥಾಪಿಸಿ ಕುರಿ ಮತ್ತು ಮೇಕೆಗಳಿಗೆ 5000 ರೂ. ಹಾಗೂ ಹಸು, ಎಮ್ಮೆ ಮತ್ತು ಎತ್ತುಗಳಿಗೆ 10 ಸಾವಿರ ಪರಿಹಾರ ನೀಡಲಾಗುವುದು ಎಂದು ಸಿದರಾಮಯ್ಯ ಘೋಷಿಸಿದರು.

    ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬ್ಯಾಂಕ್‍ಗಳಲ್ಲಿ ಕೊಡುವ ಬಡ್ಡಿರಹಿತ ಸಾಲದ ಮಿತಿ 50 ಸಾವಿರದಿಂದ 3 ಲಕ್ಷ ರೂಗಳಿಗೆ ಹೆಚ್ಚಳ ಮಾಡಲಾಗುವುದು. ಮೀನುಗಾರರ ದೋಣಿಗಳಿಗೆ ರಿಯಾಯ್ತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನ ಒಂದೂವರೆ ಲಕ್ಷ ಕಿ.ಮೀನಿಂದ 2 ಲಕ್ಷ ಕಿ.ಮೀವರೆಗೆ ಹೆಚ್ಚಳ ಮಾಡಲಾಗುವುದು. ಹಾಗೆಯೇ ಮೀನುಗಾರರ ದೋಣಿಗಳಲ್ಲಿ ಸೀಮೆಎಣ್ಣೆ ಇಂಜಿನ್‍ಗಳನ್ನ ಪೆಟ್ರೋಲ್/ಡೀಸೆಲ್ ಇಂಜಿನ್‍ಗಳಾಗಿ ಬದಲಾಯಿಸಲು ತಲಾ 50 ಸಾವಿರ ಸಹಾಯಧನ ನೀಡಲಾಗುವುದು ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರೋಗ್ಯ ಇಲಾಖೆಗೆ 14 ಸಾವಿರ ಕೋಟಿ ಮೀಸಲು- ಏನೇನು ಹೊಸ ಯೋಜನೆಗಳಿವೆ?

    ಆರೋಗ್ಯ ಇಲಾಖೆಗೆ 14 ಸಾವಿರ ಕೋಟಿ ಮೀಸಲು- ಏನೇನು ಹೊಸ ಯೋಜನೆಗಳಿವೆ?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಮಂಡಿಸಿರುವ ಬಜೆಟ್‍ನಲ್ಲಿ (Karnataka Budget 2023) ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ 14 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ.

    ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್ ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

    ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 ಮೇಲ್ದರ್ಜೆಗೇರಿಸಲಾಗಿದೆ. ಪಿಹೆಚ್‍ಸಿ ಗಳನ್ನು ಈ ಸಿಹೆಚ್‍ಸಿಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು. ಇದನ್ನೂ ಓದಿ: Karnataka Budget 2023: ಸಿನಿಮಾ ರಂಗಕ್ಕೆ ಸಿಕ್ಕಿದ್ದೇನು? ಸಂಪೂರ್ಣ ಮಾಹಿತಿ

    ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 25 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿಎಂ ಹೇಳಿದರು.

    ರಾಜ್ಯವು ಕಳೆದ ವರ್ಷ ನಿಮ್ಹಾನ್ಸ್ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ‘ಬ್ರೈನ್ ಹೆಲ್ತ್ ಇನಿಶಿಯೇಟಿವ್’ (Brain Health Initiative) ಎಂಬ ವಿಶಿಷ್ಟ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ 25 ಕೋಟಿ ರೂ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

    “ಆಶಾಕಿರಣ” ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದರು.

    ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು ಎಂದು ಸಿಎಂ ಘೋಷಿಸಿದರು.

    ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದರು.

    ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್‍ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

    ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್ ಮತ್ತು ಆರು ಎಂ.ಆರ್.ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು. ಹಾಗೂ ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು ಎಂದು ನುಡಿದರು.

    ರಾಜ್ಯದಲ್ಲಿ ಆಯುಷ್ಮಾನ್ ಭಾರತ್ (Ayushman bharat) ಡಿಜಿಟಲ್ ಮಿಷನ್ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ಸಿನಿಮಾ ರಂಗಕ್ಕೆ ಸಿಕ್ಕಿದ್ದೇನು? ಸಂಪೂರ್ಣ ಮಾಹಿತಿ

    Karnataka Budget 2023: ಸಿನಿಮಾ ರಂಗಕ್ಕೆ ಸಿಕ್ಕಿದ್ದೇನು? ಸಂಪೂರ್ಣ ಮಾಹಿತಿ

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 14ನೇ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಚಿತ್ರರಂಗಕ್ಕೂ (Sandalwood) ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಿಎಂ ಸಿನಿಮಾ ರಂಗದ ಪರವಾಗಿ ನಿಂತುಕೊಂಡಿದ್ದಾರೆ. ಚಿತ್ರರಂಗದ ಬಗ್ಗೆ ಇನ್ನೂ ಹಲವು ಬೇಡಿಕೆಗಳು ಅವರ ಮುಂದಿದ್ದರೂ ಕಳೆದ ಬಾರಿಯ ಬಜೆಟ್ ಗೆ ಹೋಲಿಸಿದರೆ, ಈ ಬಾರಿ ಚಿತ್ರರಂಗಕ್ಕೆ ಹೆಚ್ಚಿನ ಮಹತ್ವ ಸಿಕ್ಕಿದೆ.

    ಫಿಲ್ಮ್ ಸಿಟಿ  (Film City) : 

    ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.  2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಘೋಷಿಸಿದ್ದಾರೆ.

    ಈ ಹಿಂದೆ ಸಿದ್ದರಾಮಯ್ಯನವರ ಸರಕಾರವೇ ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಆ ಘೋಷಣೆಯಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಮತ್ತೆ ಮುಂದಾಗಿದೆ. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದೆ. ಇದನ್ನೂ ಓದಿ:ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಭೂರಿ ಭೋಜನ, ಭರ್ಜರಿ ತಯಾರಿ

    ಹಲವಾರು ಬಾರಿ ಚಿತ್ರನಗರಿಯ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವಾಗಿದೆ. ಕಾಂಗ್ರೆಸ್ ಸರಕಾರ ಮೈಸೂರಿನಲ್ಲಿ ಚಿತ್ರನಗರಿ ಎಂದಿದ್ದರೆ, ಜೆಡಿಎಸ್ ಸರಕಾರ ರಾಮನಗರದಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಬಿಜೆಪಿ ಸರಕಾರವು ಅದನ್ನು ಬೆಂಗಳೂರಿನಲ್ಲೇ ಮಾಡುವುದಾಗಿ ಘೋಷಣೆ ಮಾಡಿತ್ತು. ಇದೀಗ ಮತ್ತೆ ಚಿತ್ರನಗರಿ ಮೈಸೂರು ಪಾಲಾಗಿದೆ.

    ಸಿನಿಮಾ ವಸ್ತು ಸಂಗ್ರಹಾಲಯ (Cinema Museum) :

    ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದು, ಹಲವು ವರ್ಷಗಳ ಒಂದು ಬೇಡಿಕೆಯನ್ನು ಈಡೇರಿಸಿದ್ದಾರೆ. ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಿದ್ದಾರೆ.

    ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸುವುದಾಗಿ ಈ ಬಾರಿಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಳವಣಿಗೆ ಇತಿಹಾಸ ಪರಿಚಯಿಸಲು ಮುಂದಾಗಿದ್ದಾರೆ.

    ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

    ಸಬ್ಸಿಡಿಗೆ ಮರುಜೀವ (Reviving subsidy) :

    ಕರ್ನಾಟಕ ಸರಕಾರ ಕನ್ನಡದ ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

    ‘ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಬಜೆಟ್ ಘೋಷಣೆ ಮಾಡಿದ್ದಾರೆ ಮುಖ್ಯಮಂತ್ರಿಗಳು. ಈ ಮೂಲಕ ಗುಣಾತ್ಮಕ ಕನ್ನಡ ಚಿತ್ರಗಳ ನಿರ್ಮಾಪಕರ ಸಹಾಯಕ್ಕೆ ನಿಂತಿದ್ದಾರೆ.

    ಮೊನ್ನೆಯಷ್ಟೇ ಸಿನಿಮಾ ಸಬ್ಸಡಿ ಮತ್ತು ಸಿನಿಮಾ ಪ್ರಶಸ್ತಿಗೆ ಸಂಬಂಧಿಸಿದಂತೆ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು. 2018 ರಿಂದ ಸಿನಿಮಾ ಪ್ರಶಸ್ತಿಯನ್ನು ನೀಡಿಲ್ಲ ಮತ್ತು ಸಬ್ಸಿಡಿ ಕೂಡ ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ ನಲ್ಲಿ ಸಬ್ಸಿಡಿ ಕುರಿತಾಗಿ ಉಲ್ಲೇಖಿಸಿದ್ದಾರೆ. ಪ್ರಶಸ್ತಿಯ ಮನವಿಯನ್ನು ಪುರಸ್ಕರಿಸಿಲ್ಲ.

    ಪುನೀತ್ ಸ್ಮರಣಾರ್ಥ ಯೋಜನೆ (Puneeth Memorial Project) :

    ಕನ್ನಡದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಹಠಾತ್ ನಿಧನ ಕರುನಾಡಿಗೆ ಶಾಕ್ ನೀಡಿತ್ತು. ಹೃದಯಾಘಾತದಿಂದ ಅಪ್ಪು ನಿಧನರಾದಾಗ ಆ ಸಾವಿನ ಬಗ್ಗೆ ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗಿತ್ತು. ಪುನೀತ್ ಕುಟುಂಬದ ವೈದ್ಯರ ಮೇಲೆಯೇ ಅನುಮಾನ ಪಡುವಂತಹ ಘಟನೆಗಳು ಕೂಡ ನಡೆದವು. ಪುನೀತ್ ಅವರಿಗೆ ಹಠಾತ್ ಹೃದಯಬೇನೆ ಕಾಣಿಸಿಕೊಂಡಾಗ ಯಾವ ರೀತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಬೇಕಿತ್ತು ಎಂದೆಲ್ಲ ಚರ್ಚೆ ಆಯಿತು. ಅದೆಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್ ನಲ್ಲಿ ಪುನೀತ್ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಅನುದಾನ ನೀಡಿದ್ದಾರೆ.

    ಪುನೀತ್ ರಾಜ್ ಕುಮಾರ್‌ ಅವರ  ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಯಸ್ಸಿನ ಹಂಗಿಲ್ಲದೇ ಹಠಾತ್ ಸಾವುಗಳು ಆಗುತ್ತಿವೆ. ಆರೋಗ್ಯವಂಥರು ಎನಿಸಿಕೊಂಡವರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾಗಿಯೇ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಯಲು ಆರು ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ಪುನೀತ್ ಸ್ಮರಣಾರ್ಥ ಹೃದಯ ಸಂಬಂಧಿ ಸಾವಿಗೆ ಕ್ರಮ

    Karnataka Budget 2023: ಪುನೀತ್ ಸ್ಮರಣಾರ್ಥ ಹೃದಯ ಸಂಬಂಧಿ ಸಾವಿಗೆ ಕ್ರಮ

    ನ್ನಡದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ (Puneeth Raj Kumar) ಹಠಾತ್ ನಿಧನ ಕರುನಾಡಿಗೆ ಶಾಕ್ ನೀಡಿತ್ತು. ಹೃದಯಾಘಾತದಿಂದ (Heart Attack) ಅಪ್ಪು ನಿಧನರಾದಾಗ ಆ ಸಾವಿನ ಬಗ್ಗೆ ಹಲವು ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗಿತ್ತು. ಪುನೀತ್ ಕುಟುಂಬದ ವೈದ್ಯರ ಮೇಲೆಯೇ ಅನುಮಾನ ಪಡುವಂತಹ ಘಟನೆಗಳು ಕೂಡ ನಡೆದವು. ಪುನೀತ್ ಅವರಿಗೆ ಹಠಾತ್ ಹೃದಯಬೇನೆ ಕಾಣಿಸಿಕೊಂಡಾಗ ಯಾವ ರೀತಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಬೇಕಿತ್ತು ಎಂದೆಲ್ಲ ಚರ್ಚೆ ಆಯಿತು. ಅದೆಲ್ಲವನ್ನೂ ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್  (Karnataka Budget 2023)ನಲ್ಲಿ ಪುನೀತ್ ಹೆಸರಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಒಂದಷ್ಟು ಅನುದಾನ ನೀಡಿದ್ದಾರೆ.

    ಪುನೀತ್ ರಾಜ್ ಕುಮಾರ್‌ ಅವರ  ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ:ನೀಲಿ ತಾರೆ ಮಿಯಾ ತೆಲುಗಿನ ಡೈರೆಕ್ಟರ್ ಆರ್‌ಜಿವಿ

    ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಯಸ್ಸಿನ ಹಂಗಿಲ್ಲದೇ ಹಠಾತ್ ಸಾವುಗಳು ಆಗುತ್ತಿವೆ. ಆರೋಗ್ಯವಂಥರು ಎನಿಸಿಕೊಂಡವರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾಗಿಯೇ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಯಲು ಆರು ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023- ನೀರಾವರಿಗೆ ಯೋಜನೆಗೆ ಸಿಕ್ಕಿದ್ದು ಏನು?

    Karnataka Budget 2023- ನೀರಾವರಿಗೆ ಯೋಜನೆಗೆ ಸಿಕ್ಕಿದ್ದು ಏನು?

    ಬೆಂಗಳೂರು: ಬಹುನಿರೀಕ್ಷಿತ ಬಜೆಟ್ (Karnataka Budget 2023) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದು, ಈ ಬಾರಿಯ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಒಟ್ಟು ನೀರಾವರಿ ಯೋಜನೆಗಳಿಗೆ 19 ಸಾವಿರ ಕೋಟಿ ರೂ. ಅನುದಾನವನ್ನು ಸಿದ್ದರಾಮಯ್ಯ (Siddaramaiah) ನೀಡಿದ್ದಾರೆ.

    ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.  770 ಕೋಟಿ ರೂ. ವೆಚ್ಚದಲ್ಲಿ 899  ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

    ಎತ್ತಿನಹೊಳೆ ಯೋಜನೆ (Yettina Hole Project) ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕಮ ಕೈಗೊಳ್ಳಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಬಿಡುಗಡೆಗೆ ಹಾಗೂ ಕಳಸಾ ಮತ್ತು ಬಂಡೂರಾ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಅಗತ್ಯ ತೀರುವಳಿ ಪಡೆಯಲು ಕ್ರಮವಹಿಸಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಭೂಸ್ವಾಧೀನ ಹಾಗೂ ಪುನರ್ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದರು. ಇದನ್ನೂ ಓದಿ: Karnataka Budget 2023 – NEP ರದ್ದು, ಬರಲಿದೆ ರಾಜ್ಯದ್ದೇ ಹೊಸ ಶಿಕ್ಷಣ ನೀತಿ

    ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳ ಎರಡನೇ ಹಂತದಲ್ಲಿ 529 ಕೋಟಿ ರೂ. ವೆಚ್ಚದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 296 ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದು ಸಿಎಂ ಹೇಳಿದರು.

    ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ., ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಅನುದಾನ ನೀಡಲಾಗುವುದು. ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್‍ನಲ್ಲಿ ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ಸ್ಥಗಿತಗೊಂಡಿದ್ದ ಸಿನಿಮಾ ಸಬ್ಸಿಡಿಗೆ ಮತ್ತೆ ಮರುಜೀವ

    Karnataka Budget 2023: ಸ್ಥಗಿತಗೊಂಡಿದ್ದ ಸಿನಿಮಾ ಸಬ್ಸಿಡಿಗೆ ಮತ್ತೆ ಮರುಜೀವ

    ರ್ನಾಟಕ ಸರಕಾರ ಕನ್ನಡದ (Sandalwood) ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು (Subsidy) ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ (Karnataka Budget 2023)  ತಿಳಿಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

    ‘ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ (Film) ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಬಜೆಟ್ ಘೋಷಣೆ ಮಾಡಿದ್ದಾರೆ ಮುಖ್ಯಮಂತ್ರಿಗಳು. ಈ ಮೂಲಕ ಗುಣಾತ್ಮಕ ಕನ್ನಡ ಚಿತ್ರಗಳ ನಿರ್ಮಾಪಕರ ಸಹಾಯಕ್ಕೆ ನಿಂತಿದ್ದಾರೆ. ಇದನ್ನೂ ಓದಿ:ನೀಲಿ ತಾರೆ ಮಿಯಾ ತೆಲುಗಿನ ಡೈರೆಕ್ಟರ್ ಆರ್‌ಜಿವಿ

    ಮೊನ್ನೆಯಷ್ಟೇ ಸಿನಿಮಾ ಸಬ್ಸಡಿ ಮತ್ತು ಸಿನಿಮಾ ಪ್ರಶಸ್ತಿಗೆ ಸಂಬಂಧಿಸಿದಂತೆ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು. 2018 ರಿಂದ ಸಿನಿಮಾ ಪ್ರಶಸ್ತಿಯನ್ನು ನೀಡಿಲ್ಲ ಮತ್ತು ಸಬ್ಸಿಡಿ ಕೂಡ ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ ನಲ್ಲಿ ಸಬ್ಸಿಡಿ ಕುರಿತಾಗಿ ಉಲ್ಲೇಖಿಸಿದ್ದಾರೆ. ಪ್ರಶಸ್ತಿಯ ಮನವಿಯನ್ನು ಪುರಸ್ಕರಿಸಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ

    Karnataka Budget 2023: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ

    ಬೆಂಗಳೂರು: ರಾಜ್ಯದಲ್ಲಿರುವ 40 ಸಾವಿರಕ್ಕೂ ಅಧಿಕ ವಕ್ಫ್ (Waqf Property) ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿಗೆ 50 ಕೋಟಿ ರೂ. ಹಣವನ್ನು ಸಿದ್ದರಾಮಯ್ಯ ಬಜೆಟ್‍ನಲ್ಲಿ (Karnataka Budget 2023) ಮೀಸಲಿಟ್ಟಿದ್ದಾರೆ.

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುತ್ತದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದನ್ನು ಮನಗಂಡು ಈ ಯೋಜನೆಯನ್ನು ಮುಂದುವರಿಸಲು 60 ಕೋಟಿ ರೂ. ಅನುದಾನವನ್ನು ಒದಗಿಸಲಿದೆ ಎಂದು ಸಿಎಂ ಹೇಳಿದರು.

    ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಇಇ, ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ 2 ವರ್ಷಗಳ ತರಬೇತಿಯನ್ನು ನೀಡಲು 8 ಕೋಟಿ ರೂ. ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?

    ಬೆಂಗಳೂರು ನಗರದಲ್ಲಿರುವ ಹಜ್ ಭವನದಲ್ಲಿ (Haj Bhavan) ಐಎಎಸ್ (IAS) ಹಾಗೂ ಕೆಎಎಸ್ (KAS) ಮತ್ತು ಇತರೆ ಸ್ಪರ್ದಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭ ಮಾಡಲಾಗುವುದು. ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿಯಲ್ಲಿ 20 ಲಕ್ಷ ಸಾಲ ನೀಡಲಾಗುವುದಾಗಿ ಇದೇ ವೇಳೆ ತಿಳಿಸಿದರು.

    126 ಶಾದಿ ಮಹಲ್ (Shaadi Mahal) ಮತ್ತು ಸಮುದಾಯ ಭವನ ನಿರ್ಮಾಣಕ್ಕೆ 54 ಕೋಟಿ ಮೀಸಲಿಡಲಾಗುವುದು. ಅಲ್ಪಸಂಖ್ಯಾತ 10 ಸಾವಿರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಸಲುವಾಗಿ 20% ರಷ್ಟು ಅಥವಾ ಗರಿಷ್ಠ 1 ಲಕ್ಷದವರೆಗೆ ಸಹಾಯಧನ ನೀಡಲಾಗುವುದು ಎಂದು ಸಿಎಂ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ಡಾ.ರಾಜ್ ಸ್ಮಾರಕದ ಬಳಿ ಸಿನಿ ವಸ್ತು ಸಂಗ್ರಹಾಲಯ

    Karnataka Budget 2023: ಡಾ.ರಾಜ್ ಸ್ಮಾರಕದ ಬಳಿ ಸಿನಿ ವಸ್ತು ಸಂಗ್ರಹಾಲಯ

    ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಹಲವು ವರ್ಷಗಳ ಒಂದು ಬೇಡಿಕೆಯನ್ನು ಈಡೇರಿಸಿದ್ದಾರೆ. ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ (Museum) ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಿದ್ದಾರೆ.

    ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕದ (Dr. Raj Kumar) ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸುವುದಾಗಿ ಈ ಬಾರಿಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಳವಣಿಗೆ ಇತಿಹಾಸ ಪರಿಚಯಿಸಲು ಮುಂದಾಗಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್ ಭೇಟಿಗಾಗಿ ಮಲೇಷ್ಯಾಗೆ ಹೊರಟು ನಿಂತ ರಾಕಿಭಾಯ್ ಯಶ್

    ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023:  ಖಾಸಗಿ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ

    Karnataka Budget 2023: ಖಾಸಗಿ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ

    ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಚಿತ್ರರಂಗಕ್ಕೂ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ. ಅದರಲ್ಲೂ ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ (Film City) ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಮೈಸೂರಿನಲ್ಲಿ (Mysore) ಚಿತ್ರನಗರಿ ಮಾಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ.

    2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿ ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ, ಇಲ್ಲಿವರೆಗೂ ಅನುಷ್ಠಾನಗೊಂಡಿಲ್ಲ. ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ:ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಭೂರಿ ಭೋಜನ, ಭರ್ಜರಿ ತಯಾರಿ

    ಈ ಹಿಂದೆ ಸಿದ್ದರಾಮಯ್ಯನವರ ಸರಕಾರವೇ ಮೈಸೂರಿನಲ್ಲಿ ಚಿತ್ರನಗರಿ ಮಾಡುವುದಾಗಿ ತಿಳಿಸಿತ್ತು. ಆ ಘೋಷಣೆಯಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಮತ್ತೆ ಮುಂದಾಗಿದೆ. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಘೋಷಣೆ ಮಾಡಿದೆ.