ಬೆಂಗಳೂರು: ಸಿಎಂ, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಸಿಎಂ ಆಪ್ತ ಕೆಲ ಸಚಿವರು ನಾಳೆ ಡೆಲ್ಲಿಗೆ ಭೇಟಿ ನೀಡಲಿದ್ದಾರೆ. ಕರ್ನಾಟಕ ಭವನ (Karnataka Bhavana) ಉದ್ಘಾಟನೆ ನೆಪದಲ್ಲಿ ತೆರಳುತ್ತಿದ್ದು, ಉಳಿದೆಲ್ಲವೂ ರಾಜಕೀಯನಾ ಎಂಬ ಪ್ರಶ್ನೆ ಎದ್ದಿದೆ.
ಅಂದಹಾಗೆ ಎರಡೂವರೆ ತಿಂಗಳ ಬಳಿಕ ಡೆಲ್ಲಿ ಪ್ರವಾಸ ಕೈಗೊಳ್ತಿರುವ ಸಿಎಂ ಸಿದ್ದರಾಮಯ್ಯ (Siddaramaiah) ಕರ್ನಾಟಕದಲ್ಲಿ ಸರ್ಕಾರ, ಸಂಘಟನೆಯಲ್ಲಾದ ಬೆಳವಣಿಗೆಗಳ ಬಗ್ಗೆ ರಿಪೋರ್ಟ್ ನೀಡುವ ಸಾಧ್ಯತೆ ಇದೆ. ಹೈಕಮಾಂಡ್‌ಗೆ ಎರಡೂವರೆ ತಿಂಗಳ ರಿಪೋರ್ಟ್ ಕೊಡಲಿರುವ ಸಿದ್ದರಾಮಯ್ಯ, ಹೈಕಮಾಂಡ್ ಕೇಳಬಹುದಾದ ಎಲ್ಲದಕ್ಕೂ ಉತ್ತರ ಸಿದ್ಧ ಮಾಡಿದ್ದಾರೆ ಎಂಬುದು ಮೂಲಗಳ ಮಾಹಿತಿ. ಇದನ್ನೂ ಓದಿ: ಕೃಷ್ಣಾ, ಭೀಮಾ ನದಿಗೆ ನೀರು ಬಿಡುವಂತೆ ಮನವಿ: ಫಡ್ನವೀಸ್‌ಗೆ ಸಿಎಂ ಪತ್ರ
ಸರ್ಕಾರದ ಮುಂದಿನ ರೋಡ್ ಮ್ಯಾಪ್ ಕೂಡ ವರದಿಯಲ್ಲಿ ಇರುತ್ತೆ ಎನ್ನಲಾಗಿದೆ. ಪ್ರಮುಖವಾಗಿ ರನ್ಯಾರಾವ್ ಕೇಸ್, ಹನಿಟ್ರ್ಯಾಪ್ ಯತ್ನದ ವಿಚಾರಗಳಿಗೆ ಸಂಬಂಧಿಸಿದ ವರದಿ ನೀಡುವ ಸಾಧ್ಯತೆಯಿದೆ.
ಪಕ್ಷದೊಳಗೆ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆಯೂ ರಿಪೋರ್ಟ್ ನೀಡಲಿದ್ದು, ಸಿಎಂ ಎರಡೂವರೆ ತಿಂಗಳ ವರದಿಯಿಂದ ಏನು ಆಗುತ್ತೆ? ಸರ್ಕಾರ ಅಥವಾ ಪಕ್ಷದ ಮಟ್ಟದಲ್ಲಿ ಏನಾದ್ರೂ ಬದಲಾವಣೆಗಳಿಗೆ ಪೂರಕ ಆಗುತ್ತಾ ಎಂಬ ಕುತೂಹಲ ಮನೆ ಮಾಡಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ(ಕಾವೇರಿ) ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ 6:30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಭವ್ಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಘನ ಉಪಸ್ಥಿತಿ ವಹಿಸಿದ್ದಲಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೌರವ ಆಹ್ವಾನಿತರಾಗಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಅವರನ್ನ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಜಾರ್ಖಂಡ್ | ಗೂಡ್ಸ್ ರೈಲುಗಳ ನಡುವೆ ಡಿಕ್ಕಿ – ಇಬ್ಬರು ಲೋಕೋ ಪೈಲಟ್ ಸೇರಿ 3 ಸಾವು
ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತರಾಮನ್ ಅವರಿನ್ನೂ ಆಹ್ವಾನಿಸಿದೆ. ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ ಕೂಡಾ ಭಾಗಿಯಾಗಲಿದ್ದಾರೆ.
ಕರ್ನಾಟಕ ಭವನದ ವಿಶೇಷತೆಗಳು
ದೆಹಲಿಯ ಪ್ರತಿಷ್ಠಿತ ಪ್ರದೇಶವಾದ ಚಾಣಕ್ಯಪುರಿಯಲ್ಲಿ (Chanakyapuri) ನಿರ್ಮಾಣವಾಗಿರುವ ಈ ಕಟ್ಟಡವು 3,532 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಒಟ್ಟು 12,212 ಚದರ ಮೀಟರ್ (1,31,450 ಚದರ ಅಡಿ) ನಿರ್ಮಾಣ ಪ್ರದೇಶವನ್ನು ಒಳಗೊಂಡಿರುವ ಈ ಭವನವು 2ಬಿ+ಜಿ+6ಯು ರಚನೆಯಲ್ಲಿ 9 ಅಂತಸ್ತುಗಳನ್ನು ಹೊಂದಿದೆ.
ಈ ಕಟ್ಟಡದಲ್ಲಿ ಒಟ್ಟು 52 ಕೊಠಡಿಗಳಿದ್ದು, ಅದರಲ್ಲಿ 2 ವಿವಿಐಪಿ ಸೂಟ್‌ಗಳು, 32 ಸೂಟ್ ರೂಂಗಳು ಮತ್ತು 18 ಸಿಂಗಲ್ ರೂಂಗಳು ಸೇರಿವೆ. ಇದರ ಜೊತೆಗೆ 86 ಶೌಚಾಲಯಗಳು ಮತ್ತು ಬೇಸ್‌ಮೆಂಟ್‌ನಲ್ಲಿ 10 ಕಾರ್ ಪಾರ್ಕಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಯೋಜನೆಯು 2018ರಲ್ಲಿ ಆರಂಭವಾಗಿದ್ದು, ಇದಕ್ಕಾಗಿ 81.00 ಕೋಟಿ ರೂ. ಮೀಸಲಿಟ್ಟಿತ್ತು. ಆದರೆ ಕಾಮಗಾರಿ ಅಂತ್ಯದ ವೇಳೆಗೆ ಯೋಜನೆಯ ವೆಚ್ಚ 138 ಕೋಟಿ ರೂ. ತಲುಪಿದೆ. ಇದನ್ನೂ ಓದಿ: ಇಂದಿನಿಂದ ಹಾಲಿನ ದರ ಏರಿಕೆ – ಬೆಳಗ್ಗೆ ಸಪ್ಲೈ ಆದ ಹಾಲಿನಲ್ಲಿ ಪರಿಷ್ಕೃತ ದರ ಜಾರಿ ಆಗಿಲ್ಲ
ಕಟ್ಟಡದ ಒಟ್ಟು 10 ಮಹಡಿಗಳಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ:
ಕೆಳಗಿನ ಬೇಸ್‌ಮೆಂಟ್ (2335 ಚ.ಮೀ.): ಲಿಫ್ಟ್ ಲಾಬಿ, ಸ್ಟೇರ್‌ಕೇಸ್, ಡ್ರೈವರ್ ಲಾಂಡ್ರಿ, ಸೆಕ್ಯುರಿಟಿ ರೂಂ, ಬಿಎಂಎಸ್ ರೂಂ, 50 ಕಾರ್ ಪಾರ್ಕಿಂಗ್ ಸ್ಥಳವಿದೆ.
ಗ್ರೌಂಡ್ ಫ್ಲೋರ್ (1050 ಚ.ಮೀ.): ರಿಸೆಪ್ಷನ್, ವೇಟಿಂಗ್ ರೂಂ, ಬೋರ್ಡ್ ರೂಂ, ಪ್ಯಾಂಟ್ರಿ, ಮೀಡಿಯಾ ಬ್ರೀಫಿಂಗ್, ವಿಐಪಿ ಲಾಂಜ್, ಟಾಯ್ಲೆಟ್, ಫೈರ್ ಕಂಟ್ರೋಲ್ ರೂಂ, ಟೂರಿಸಂ ಇನ್ಫೊ ಡೆಸ್ಕ್, ಸೆಕ್ಯುರಿಟಿ ರೂಂ ಇದೆ.
ಮೊದಲನೇ ಮಹಡಿ (1005 ಚ.ಮೀ.): ಆರ್‌ಸಿ ಚೇಂಬರ್, ಡಿಆರ್‌ಸಿ, ಪಿಎ ರೂಂ, ಸ್ಟಾಫ್ ರೂಂ, ಆಡಳಿತಾತ್ಮಕ ದಾಖಲೆ ಕೊಠಡಿ, ಸರ್ವರ್ ರೂಂ, ಪ್ಯಾಂಟ್ರಿ, ಲಿಯಾಸನ್ ಆಫೀಸರ್ ರೂಂ, ಕಾನ್ಫರೆನ್ಸ್ ರೂಂ ಇದೆ.
ಎರಡನೇ ಮಹಡಿ (1050 ಚ.ಮೀ.): 3 ಸೂಟ್ ರೂಂಗಳು, 4 ಸಿಂಗಲ್ ರೂಂಗಳು, ಎಡ್ ಸ್ಪೆಷಲ್ ರಿಪ್ರೆಸೆಂಟೇಟಿವ್, ಪಿಎ ರೂಂ, ಲೀಗಲ್ ರೆಕಾರ್ಡ್ ರೂಂ ಇದೆ.
ಕರ್ನಾಟಕ ಭವನ (ಕಾವೇರಿ) ದೆಹಲಿಗೆ ಭೇಟಿ ನೀಡುವ ಕರ್ನಾಟಕದ ಸರ್ಕಾರಿ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರಿಗೆ ಆರಾಮದಾಯಕ ಆತಿಥ್ಯ ಸೌಲಭ್ಯವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಭವನವು ಕರ್ನಾಟಕದ ಸಂಸ್ಕೃತಿ, ಪರಂಪರೆ ಮತ್ತು ಆತಿಥ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾಗಿದೆ. ಇದರ ಜೊತೆಗೆ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಕಾರ್ಯಕ್ರಮಗಳು, ಸಭೆ-ಸಮಾರಂಭಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದು ಪ್ರಮುಖ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.
ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ (Delhi Karnataka Bhavan) ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಹೊರವಲಯದಲ್ಲಿ ಪತ್ತೆಯಾಗಿದೆ.
ಪತ್ನಿ ಹಾಗೂ ಮಕ್ಕಳನ್ನು ಪತ್ನಿಯ ತವರು ಮನೆಗೆ ಬಿಟ್ಟು ತಂದೆ, ತಾಯಿಯನ್ನು ನೋಡಿಕೊಂಡು ಬರುವೆ ಎಂದು ಮಾರುತಿ ಮೂರು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮ ಅಯ್ಯನಹಳ್ಳಿಗೆ ಬಂದಿದ್ದರು.
ಮಂಗಳವಾರ ಸಂಜೆ ಕಾನಾಹೊಸಳ್ಳಿ ಹೊರವಲಯದ ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ.
ಬೆಂಗಳೂರು: ಅಧಿಕಾರ ದುರ್ಬಳಕೆ ಮಾಡಿ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಸರ್ಕಾರದ ಪ್ರಭಾವಿ ವ್ಯಕ್ತಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದೂರು ದಾಖಲಾಗಿದೆ.
ದೂರು ನೀಡಿದ ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ದೇನೆ. ಸಂತೃಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ ಮಾಡಲು ಯುವತಿ ಬಯಸಿದ್ದರು. ಆದರೆ ಈ ಯುವತಿಯನ್ನು ರಮೇಶ್ ಜಾರಕಿಹೊಳಿ ತನ್ನ ಕಾಮ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಸಚಿವ ರಮೇಶ್ ಜಾರಕಿಹೊಳಿಯ ರಾಸಲೀಲೆಯ ವೀಡಿಯೊ ಚಿತ್ರೀಕರಣವನ್ನು ದೆಹಲಿಯ ಕರ್ನಾಟಕ ಭವನದಲ್ಲಿ ಚಿತ್ರೀಕರಿಸಲಾಗಿದೆ. ಸಚಿವರ ಈ ನಡತೆ ಕಂಡು ದೆಹಲಿ ಭವನದಿಂದ ಕೆಲ ಸಚಿವರು ಹೊರ ಹೋಗಿದ್ದರು ಎಂಬ ವಿಚಾರ ಈಗ ಲಭ್ಯವಾಗಿದೆ.
ನವದೆಹಲಿ: ಕರ್ನಾಟಕ ಭವನದ ಕಾನೂನು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಮಿಳುನಾಡು ಮೂಲದ ಪಿ.ಎನ್.ರಾಮನಾಥನ್‍ಗೆ (ರಾಜ) ಅಕ್ರಮ ಬಡ್ತಿ ಮತ್ತು ನಿಯಮ ಮೀರಿ ಸೇವಾವಧಿ ವಿಸ್ತರಿಸಲು ಶಿಫಾರಸು ಮಾಡಿರುವ ಆರೋಪ ಕೇಳಿ ಬಂದಿದೆ.
ಸೇವಾ ಹಿರಿತನದಲ್ಲಿ 9ನೇ ಸ್ಥಾನದಲ್ಲಿರುವ ಪಿ.ಎನ್.ರಾಮನಾಥನ್ ನಿಯಮ ಮೀರಿ ಬಡ್ತಿ ನೀಡುವ ಪ್ರಕ್ರಿಯೆ ನಡೆದಿದ್ದು, ಇಲ್ಲಿ ಗೋಲ್‍ಮಾಲ್ ನಡೆದಿರುವುದಾಗಿ ಕರ್ನಾಟಕ ಭವನದ ಹಲವು ಸಿಬ್ಬಂದಿ ಆರೋಪಿಸಿದ್ದಾರೆ.
ಪಿ.ಎನ್.ರಾಮನಾಥ್‍ಗೂ ಮುನ್ನ ಸೇನಾ ಹಿರಿತನದಲ್ಲಿ ಎಂಟು ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ಅವರೆಲ್ಲರನ್ನು ನಿರ್ಲಕ್ಷಿಸಿ ರಾಮನಾಥನ್‍ಗೆ ಮಣೆ ಹಾಕಲಾಗಿದೆ ಅಲ್ಲದೇ ಬಡ್ತಿ ಜೊತೆಗೆ ಸೇವಾವಧಿ ಅವಧಿ ವಿಸ್ತರಣೆ ಮಾಡಿ ನಿವಾಸಿ ಆಯುಕ್ತರು ಶಿಫಾರಸು ಮಾಡಿದ್ದಾರೆ. ಈ ಹಿಂದೆ ನಿವಾಸಿ ಆಯುಕ್ತರಾಗಿದ್ದ ನಿಲಯ್ ಮಿತಾಶ್ ಅವರ ಮೇಲೆ ರಾಮನಾಥ್ ರಾಜಕೀಯ ಪ್ರಭಾವ ಬೀರಿದ್ದು, ಅವರು ತಮ್ಮ ವರ್ಗಾವಣೆಗೂ ಮುನ್ನ ರಾಮನಾಥನ್ ಸೇವಾ ಅವಧಿ ವಿಸ್ತರಣೆಗೆ ಶಿಫಾರಸು ಮಾಡಿದ್ದರು.
ರಾಮನಾಥನ್ ಬಡ್ತಿ ಮತ್ತು ಸೇವಾವಧಿ ವಿಸ್ತರಣೆಗೆ ಈಗ ತಕರಾರು ಕೇಳಿ ಬಂದ ಹಿನ್ನೆಲೆ ರಾಜ್ಯ ಸಚಿವ ಸಂಪುಟದ ಅನುಮೋದನೆ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯ ರಾಜಕಾರಣಿಗಳ ಮೇಲೂ ಪ್ರಭಾವ ಬೀರುವ ಶಕ್ತಿ ಇರುವ ಈ ತಮಿಳು ಅಧಿಕಾರಿ ಸಚಿವ ಸಂಪುಟ ಒಪ್ಪಿಗೆ ಪಡೆಯಲಿದ್ದು ಅಕ್ರಮವಾಗಿ ಬಡ್ತಿ ಹಾಗೂ ಸೇವಾವಧಿ ವಿಸ್ತರಣೆ ಮಾಡಿಸಿಕೊಳ್ಳಲಿದ್ದಾರೆ ಎಂದು ಹಲವು ಕರ್ನಾಟಕ ಭವನದ ನೌಕರರು ಆರೋಪಿಸಿದ್ದಾರೆ.
ನವದೆಹಲಿ: ಇಲ್ಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ-1ರಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ರೂಂ ಬಾಯ್ ಕೆಲಸ ಮಾಡುತ್ತಿದ್ದ 25 ವರ್ಷ ವಯಸ್ಸಿನ, ದೆಹಲಿ ಮೂಲದ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕಿರುವುದು ಧೃಡಪಟ್ಟಿದೆ. ಜೂನ್ 8ರ ವರೆಗೆ ಕೆಲಸಕ್ಕೆ ಬಂದಿದ್ದ ಈ ಯುವಕ ಜ್ವರದಿಂದ ಬಳಲಿದ್ದರು. ಈ ಹಿನ್ನೆಲೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆ ಬಳಿಕ ಇಂದು ಸೋಂಕು ಇರುವುದು ದೃಢಪಟ್ಟಿದೆ.
ಸೋಂಕಿತ ವ್ಯಕ್ತಿಯಲ್ಲಿ ಅಲ್ಪ ಪ್ರಮಾಣದ ರೋಗ ಲಕ್ಷಣ ಗೋಚರಿಸಿದ್ದರಿಂದ ಮನೆಯಲ್ಲೇ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಿ ಚಿಕಿತ್ಸೆ ನೀಡಲು ದೆಹಲಿ ಸರ್ಕಾರ ನಿರ್ಧರಿಸಿದೆ. ಕರ್ನಾಟಕ ಭವನ-1ರಲ್ಲಿ ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿದ್ದ ಕೊರೊನಾ ಧೃಡಪಟ್ಟ ಬಳಿಕ ಇವರ ಸಂಪರ್ಕಕ್ಕೆ ಬಂದಿದ್ದ ಇತರ ಸಿಬ್ಬಂದಿ ಯಾರು ಎಂಬ ಕುರಿತು ಪತ್ತೆ ಮಾಡುವ ಕಾರ್ಯ ಆರಂಭಿಸಲಾಗುವುದು ಎಂದು ಭವನದ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಇಲ್ಲಿ ಹೊಂದಿರುವ ಮೂರು ಭವನಗಳಲ್ಲೂ ಅಟೊಮೆಟಿಕ್ ಸ್ಯಾನಿಟೈಸರ್ ಸಾಧನ ಇರಿಸಲಾಗಿದ್ದು, ಕೊರೊನಾ ಸೋಂಕು ತಡೆಗೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇತರ ಸಿಬ್ಬಂದಿಯ ಆರೋಗ್ಯ ತಪಾಸಣೆಗೂ ಕ್ರಮ ಕೈಗೊಳ್ಳಲು ನಿರ್ಧರಿಸಬಹುದು ಎಂದು ತಿಳಿದುಬಂದಿದೆ.
ದೆಹಲಿಯ ನಿವಾಸಿಯಾಗಿರುವ ಈ ವ್ಯಕ್ತಿಗೆ ಭವನದ ಸಿಬ್ಬಂದಿ ಅಲ್ಲದೇ, ಇತರರ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕ ಭವನ ನಿರ್ಮಿಸಲು ರಾಜ್ಯ ಸರ್ಕಾರ ಉತ್ಸಾಹ ತೋರಿದೆ. ಈ ಸಂಬಂಧ ಜಮ್ಮು-ಕಾಶ್ಮೀರ ಅಧಿಕಾರಿಗಳ ಜೊತೆ ರಾಜ್ಯ ಸರ್ಕಾರದ ಅಧಿಕಾರಿಗಳು ನಿರಂತರ ಮಾತುಕತೆ ನಡೆಯುತ್ತಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಕೇಂದ್ರವು ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೂಡಲೇ ರಾಜ್ಯ ಸರ್ಕಾರವು ಜಮ್ಮು-ಕಾಶ್ಮೀರದಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣ ಮಾಡಲು ಪ್ರಸ್ತಾಪಿಸಿತ್ತು. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಂದಿನ ಜಮ್ಮು-ಕಾಶ್ಮೀರ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ಪತ್ರ ಬರೆದು ರಾಜ್ಯ ಸರ್ಕಾರದ ಆಶಯವನ್ನು ವಿವರಿಸಿದ್ದರು.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ಭವನ ನಿರ್ಮಿಸಲು ಚಿಂತಿಸಿದ್ದು 10ರಿಂದ 15 ಎಕರೆ ಭೂಮಿಯನ್ನು ಖರೀದಿಸಲು ಸರ್ಕಾರ ಯೋಚಿಸಿದೆ. ಅಮರನಾಥ ಯಾತ್ರೆಯಂತಹ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಪದೇಪದೇ ತೆರಳುವ ಕರ್ನಾಟಕ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲು ಕರ್ನಾಟಕ ಭವನ ನಿರ್ಮಿಸಲು ಚಿಂತಿಸಲಾಗುತ್ತಿದ್ದು. ವಾಣಿಜ್ಯ ಉದ್ದೇಶಕ್ಕಿಂತ ಹೆಚ್ಚಾಗಿ, ಸಾರ್ವಜನಿಕರ ಸೇವೆ ಉದ್ದೇಶದಿಂದ ಭವನ ನಿರ್ಮಿಸಲಾಗುತ್ತಿದೆ. ಇಲ್ಲಿ ಗಣ್ಯರು ಸೇರಿದಂತೆ ರಾಜ್ಯಪಾಲರಿಗೂ ಕೊಠಡಿ ನಿರ್ಮಿಸುವ ಚಿಂತನೆಯಲ್ಲಿ ಪ್ರವಾಸೋದ್ಯಮ ಇಲಾಖೆ ಚಿಂತಿಸಿದೆ.
ಜಮ್ಮು-ಕಾಶ್ಮೀರದಲ್ಲಿ ಕೆಲ ತಿಂಗಳ ಕಾಲ ಇಂಟರ್‌ನೆಟ್ ಸ್ಥಗಿತಗೊಳಿಸಿದ ಹಿನ್ನೆಲೆ ಅಧಿಕಾರಿಗಳನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ಪಸ್ತಾಪ ನೆನೆಗುದಿಗೆ ಬಿದ್ದಿದ್ದೆ. ಮಾಹಿತಿಗಳ ಪ್ರಕಾರ ರಾಜ್ಯ ಸರ್ಕಾರದ ಪ್ರಸ್ತಾವನೆ ರಾಜ್ಯಪಾಲರ ಕಚೇರಿ ತಲುಪಿದ್ದು, ಆ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಹೀಗಾಗಿ ಪ್ರವಾಸೋದ್ಯಮ ಇಲಾಖೆ ಅಧಿಕಾರಗಳ ತಂಡ ಜಮ್ಮು-ಕಾಶ್ಮೀರಕ್ಕೆ ಭೇಟಿ ಮಾಡಲು ಚಿಂತಿಸಿದ್ದು ಕೇಂದ್ರಾಡಳಿತ ಪ್ರದೇಶವಾಗಿ ಬದಲಾದ ಹಿನ್ನೆಲೆ ಹೊಸ ಪತ್ರವನ್ನು ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ನವದೆಹಲಿ: ಯಾರು ಎಕ್ಸ್ ಎಂಎಲ್‍ಎ? ನಾನು ಮಾಜಿ ಶಾಸಕನಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮೇಲೆ ಗುಡುಗಿದ್ದಾರೆ.
ಸುಪ್ರೀಂಕೋರ್ಟ್ ಬುಧವಾರ ಅನರ್ಹ ಶಾಸಕರ ಪ್ರಕರಣದ ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಶಿವರಾಮ್ ಹೆಬ್ಬಾರ್ ಮಂಗಳವಾರ ರಾತ್ರಿ ಕರ್ನಾಟಕ ಭವನಕ್ಕೆ ಆಗಮಿಸಿದರು. ಈ ವೇಳೆ ರೂಮ್ ನೀಡುವಂತೆ ಕೆ.ಬಿ 1ನ ಸಿಬ್ಬಂದಿಗೆ ಕೇಳಿದರು. ಆದರೆ ರೂಮ್ ನೀಡಲು ನಿರಾಕರಿಸಿದ ಸಿಬ್ಬಂದಿ, ರೂಮ್ ಖಾಲಿ ಇಲ್ಲ. ಇಲ್ಲಿ ಕೇವಲ ಹಾಲಿ ಮತ್ತು ಮಾಜಿ ಸಚಿವರಿಗೆ ಮಾತ್ರ ರೂಮ್ ಕೊಡಲಾಗುತ್ತದೆ. ಶಾಸಕರು ಮತ್ತು ಮಾಜಿ ಶಾಸಕರಿಗೆ ಕೆಬಿ 2ನಲ್ಲಿ ರೂಂ ಸಿಗುತ್ತದೆ ಎಂದು ಹೇಳಿದ.
ಕರ್ನಾಟಕ ಭವನ ಸಿಬ್ಬಂದಿಯ ಮಾತಿನಿಂದ ಫುಲ್ ಗರಂ ಆದ ಅನರ್ಹ ಶಾಸಕರು, ಯಾರಪ್ಪಾ ಎಕ್ಸ್ ಎಂಎಲ್‍ಎ? ಒಬ್ಬರಿಗೊಂದು ಇನ್ನೊಬ್ಬರಿಗೊಂದು ಯಾಕ್ ಮಾಡ್ತಿರಿ ಎಂದು ಗುಡುಗಿದರು. ಆಗ ಕರ್ನಾಟಕ ಭವನದ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಕರೆ ಮಾಡಿ, ವಿಚಾರಿಸಿದರು. ಈ ಮಧ್ಯೆ ಶಿವರಾಮ್ ಹೆಬ್ಬಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಲು ಹಿಂದೇಟು ಹಾಕಿದರು.
ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಧೀಶ ಎನ್.ವಿ.ರಮಣ ಪೀಠ ಪ್ರಕರಣದ ವಾದವನ್ನು ಆಲಿಸಿ ತೀರ್ಪನ್ನು ಬುಧವಾರಕ್ಕೆ ಕಾಯ್ದರಿಸಿತ್ತು. ಈ ನಡುವೆ ಕಾಂಗ್ರೆಸ್ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹುಬ್ಬಳ್ಳಿಯ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಬೇಕೆಂದು ಮನವಿ ಮಾಡಿಕೊಂಡಿತ್ತು. ಕಾಂಗ್ರೆಸ್ ಪರ ವಕೀಲ ವಾದವನ್ನು ಆಲಿಸಿದ ಪೀಠ ತೀರ್ಪು ನೀಡುವ ಸಂದರ್ಭದಲ್ಲಿ ಆಡಿಯೋವನ್ನ ಸಾಕ್ಷ್ಯವನ್ನಾಗಿ ಪರಿಗಣಿಸಲಾಗುತ್ತದೆ ಎಂದು ಸೂಚಿಸಿತ್ತು.
ತೀರ್ಪು ವಿಳಂಬವಾದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೊಹ್ಟಗಿ, ಕರ್ನಾಟಕದಲ್ಲಿ ಘೋಷಣೆಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ರೊಹ್ಟಗಿಯವರ ವಾದ ಆಲಿಸಿದ್ದ ನ್ಯಾಯಾಲಯ, ಅನರ್ಹ ಶಾಸಕರಿಗಾಗಿ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ಹೇಳಿತ್ತು.
ನವದೆಹಲಿ: ರಾಜಕೀಯ ಬದ್ಧ ವೈರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕೈ ಹಿಡಿದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪೂಜೆ ಮಾಡಿದ್ದಾರೆ.
ದೆಹಲಿಯ ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ಕಾರ್ಯಕ್ರಮ ಇಂದು ಬೆಳಗ್ಗೆ ನಡೆದಿತ್ತು. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಭವನದ ಹೊರ ಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು. ಇದನ್ನು ನೋಡಿದ ಸಚಿವರು, ನೇರವಾಗಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಬಂದು ಕೈ ಹಿಡಿದು ಕರೆತಂದು ಅಡಿಗಲ್ಲು ಹಾಕಿದರು.
ಈ ಕಾರ್ಯಕ್ರಮಕ್ಕೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನವಿರಲಿಲ್ಲ. ಆದರೆ ಕನ್ನಡ ಭವನದ ಮುಂದೆ ವಾಕಿಂಗ್ ಹೊರಟಿದ್ದ ಅವರನ್ನು ಸಚಿವ ರೇವಣ್ಣ ಕರೆತಂದಿದ್ದಾರೆ. ಬಳಿಕ ಒಟ್ಟಾಗಿ ಪೂಜೆ ಮಾಡಿ, ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಿದರು.
ನವದೆಹಲಿ: ಮೂರು ದಿನಗಳ ಅಧಿಕೃತ ಭೇಟಿಗಾಗಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯದ ಸಂಸದರ ಜೊತೆ ಸಭೆ ನಡೆಸಲಿದ್ದಾರೆ.
ಇಂದು ಸಂಜೆ ಏಳು ಗಂಟೆಗೆ ಕರ್ನಾಟಕ ಭವನದ ಸಭಾಂಗಣದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ರಾಜ್ಯದ ಹಿತಾಸಕ್ತಿ ರಕ್ಷಣೆ ಹೇಗೆ? ಸದ್ಯದಲ್ಲೇ ಹೊರಬೀಳಲಿರುವ ಮಹದಾಯಿ ನ್ಯಾಯಾಧೀಕರಣದ ತೀರ್ಪು ಇನ್ನಿತರ ವಿಚಾರಗಳ ಕುರಿತಂತೆ ಸಂಸದರ ಜೊತೆ ಮಾತನಾಡಲಿದ್ದಾರೆ.
ನೀರಿನ ಬಳಕೆ ಹಾಗೂ ಬೆಳೆ ಪದ್ಧತಿ ಸೇರಿದಂತೆ ಹಲವು ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದೆ. ಪ್ರಾಧಿಕಾರ ಅಸ್ತಿತ್ವಕ್ಕೆ ತಂದಿರುವುದನ್ನು ಸಂಸತ್ತಿನಲ್ಲಿ ಒಕ್ಕೊರಲಿನಿಂದ ಪ್ರಶ್ನಿಸುವಂತೆ ಎಚ್‍ಡಿಕೆ ಸಂಸದರಿಗೆ ಮನವಿ ಮಾಡುವ ಸಾಧ್ಯತೆಯಿದೆ.
ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಮಂಗಳವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ರಾಜ್ಯದ ಹೆದ್ದಾರಿ ಯೋಜನೆಗಳಿಗೆ ಅನುದಾನ ಒದಗಿಸುವ ಬಗ್ಗೆ ಚರ್ಚಿಸಿದರು.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ರಾಜ್ಯದ ಹೆದ್ದಾರಿ ಯೋಜನೆಗಳಿಗೆ ಅನುದಾನ ಒದಗಿಸುವ ಬಗ್ಗೆ ಚರ್ಚಿಸಿದರು. pic.twitter.com/q8E9c6Hlcb
CM HD Kumaraswamy met Union Minister of Consumer Affairs, Food and Public Distribution, Ram Vilas Paswan today at NewDelhi, and discussed issues pertaining to Karnataka's food storage and warehouses. pic.twitter.com/YauWUJkcGh