Tag: ಕರ್ನಾಟಕ ಮಾಧ್ಯಮ ಅಕಾಡೆಮಿ

  • `ಪಬ್ಲಿಕ್ ಟಿವಿ’ಯ ರವೀಶ್ ಹೆಚ್‌ಎಸ್‌ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

    `ಪಬ್ಲಿಕ್ ಟಿವಿ’ಯ ರವೀಶ್ ಹೆಚ್‌ಎಸ್‌ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

    ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2023-24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು `ಪಬ್ಲಿಕ್ ಟಿವಿ’ಯ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ರವೀಶ್ ಹೆಚ್‌ಎಸ್ (Ravish HS) ಅವರಿಗೆ ಪ್ರದಾನ ಮಾಡಲಾಯಿತು.ಇದನ್ನೂ ಓದಿ: ಕುಂಭಮೇಳದಲ್ಲಿ ಕಾಲ್ತುಳಿತ – ತಪ್ಪಿತಸ್ಥರ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

     
    ಸೋಮವಾರ ಬೆಂಗಳೂರಿನ ಐಐಎಸಿಯಲ್ಲಿರುವ ಜೆಎನ್ ಟಾಟಾ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಿ ಪ್ರಶಸ್ತಿ ಪ್ರದಾನ ಮಾಡಿದರು.

    ಕಳೆದ ತಿಂಗಳ 2ರಂದು ಕರ್ನಾಟಕ ಮಾಧ್ಯಮ ಅಕಾಡೆಮಿಯು 2023-24ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಗೊಳಿಸಿತ್ತು. ಇಂದು ಒಟ್ಟು 60 ಮಂದಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಇದನ್ನೂ ಓದಿ:ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಭಾರತದಲ್ಲಿ ಕಸ್ಟಮ್ಸ್ ಸುಂಕ ಇಳಿಕೆ!

     

  • ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ

    ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ

    ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ (Karnataka Media Academy) ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಬೆಂಗಳೂರಿನಲ್ಲಿ (Bengaluru) ನಡೆಯಿತು.

    ಬೆಂಗಳೂರು ವರದಿಗಾರರ ಕೂಟ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ವಿಜೇತರನ್ನು ಸಚಿವ ಗೋಪಾಲಯ್ಯ ಗೌರವಿಸಿ ಪುರಸ್ಕರಿಸಿದರು. ಅಕಾಡೆಮಿಯ ಪ್ರಶಸ್ತಿಗೆ ಭಾಜನರಾದ ಬೆಂಗಳೂರು ವರದಿಗಾರರ ಕೂಟದ ಸದಸ್ಯರನ್ನು ಗೌರವಿಸಲಾಯಿತು. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಪ್ರಶಸ್ತಿ ವಿಜೇತರಾದ ಎಸ್‌.ರಾಜಶೇಖರ್‌, ಅ.ಮ.ಸುರೇಶ್‌, ಸೋಮಸುಂದರ್‌ ರೆಡ್ಡಿ, ಕೆ.ಎನ್.ಪಂಕಜಾ, ಕೆಂಚೇಗೌಡ, ಹೆಚ್‌.ವಿ.ಕಿರಣ್‌, ಎ.ಎಂ.ಸುರೇಶ್‌, ಆರ್‌.ಹೆಚ್‌.ಜಯಪ್ರಕಾಶ್‌, ವಿ.ಎಸ್‌.ಸುಬ್ರಹ್ಮಣ್ಯ, ವಿಜಯ್‌ ಜೊನ್ನಹಳ್ಳಿ, ಶಿವಣ್ಣ, ಚಿದಾನಂದ ಪಟೇಲ್‌, ಬೇಲೂರು ಹರೀಶ್‌, ರವಿಶಂಕರ್‌, ಶಿವರಾಮ್‌, ರಾಮನಾಥ ಶೆಣೈ, ಎಂ.ಚಂದ್ರಶೇಖರ್‌, ಆರ್‌.ಶ್ರೀಧರ್ ಇವರಿಗೆ ಸಚಿವರು ಗೌರವ ಸಮರ್ಪಣೆ ಮಾಡಿದರು.

    ಇದೇ ವೇಳೆ ರಂಜಾನ್‌ ಸಾಬ್‌ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಬೆಲಗೂರು ಸಮೀವುಲ್ಲಾ ಅವರನ್ನೂ ಗೌರವಿಸಲಾಯಿತು.‌ ಇದನ್ನೂ ಓದಿ: ಇತಿಹಾಸದ ಪುಟ ತೆರೆದು ನೋಡಿದ್ರೆ ಉರಿಗೌಡ, ನಂಜೇಗೌಡನ ಹೆಸರಿದೆ: ಶೋಭಾ ಕರಂದ್ಲಾಜೆ

    ಹಿರಿಯ ಬಿಜೆಪಿ ಮುಖಂಡ ಕೆ.ಎನ್.ಚಕ್ರಪಾಣಿ, ಪ್ರೆಸ್‌ಕ್ಲಬ್‌ ಪ್ರಧಾನ ಕಾರ್ಯದರ್ಶಿ ಪಿ.ಬಿ.ಮಲ್ಲಪ್ಪ, ವರದಿಗಾರರ ಕೂಟದ ಉಪಾಧ್ಯಕ್ಷ ಆರ್‌.ಟಿ.ವಿಠಲಮೂರ್ತಿ, ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ.ಎಂ.ಶಿವರಾಜು, ಲಕ್ಷ್ಮೀ ನಾರಾಯಣ್‌, ಬದ್ರುದ್ದೀನ್‌ ಕೆ.ಮಾಣಿ, ಹಿರಿಯ ಪತ್ರಕರ್ತ ಸೋಮಣ್ಣ, ದೊಡ್ಡಬೊಮ್ಮಯ್ಯ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಈ ಸರಳ ಸಮಾರಂಭಕ್ಕೆ ಸಾಕ್ಷಿಯಾದರು.

    ಕರ್ನಾಟಕ ಮಾಧ್ಯಮ ಅಕಾಡೆಮಿ ಮಾರ್ಚ್‌ 13 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2019, 2020, 2021 ಹಾಗೂ 2022 ಸಾಲಿನ ಪ್ರಶಸ್ತಿಗಳನ್ನು ನೀಡಿ ಗೌರವಿಸಿತ್ತು. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಸಿನಿಮಾ : ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಿಡಿ

  • ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ – ಪಬ್ಲಿಕ್‌ ಟಿವಿಗೆ 5 ಪ್ರಶಸ್ತಿಗಳ ಗರಿ

    ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ – ಪಬ್ಲಿಕ್‌ ಟಿವಿಗೆ 5 ಪ್ರಶಸ್ತಿಗಳ ಗರಿ

    ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆ ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿ (Karnataka Media Academy) ಪ್ರಶಸ್ತಿ ಪ್ರಕಟವಾಗಿದೆ. ಪಬ್ಲಿಕ್‌ ಟಿವಿಯ ಐವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಪಬ್ಲಿಕ್‌ ಟಿವಿ ಸಂಪಾದಕರಾದ ಸಿ.ದಿವಾಕರ್‌, ಕಾರ್ಯನಿರ್ವಾಹಕ ಸಂಪಾದಕರಾದ ವಿ.ಆನಂದ್‌, ಮೈಸೂರು ಜಿಲ್ಲಾ ವರದಿಗಾರ ಕೆ.ಪಿ.ನಾಗರಾಜ್‌, ಬೆಳಗಾವಿ ಜಿಲ್ಲಾ ವರದಿಗಾರ ದಿಲೀಪ್‌ ಕುರಂದವಾಡೆ ಅವರು ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಆದಿಯೋಗಿ ಪ್ರತಿಮೆ ವಿವಾದ – ಪಿಐಎಲ್‌ ವಜಾ, ಇಶಾ ಫೌಂಡೇಷನ್‌ಗೆ ಬಿಗ್‌ ರಿಲೀಫ್‌

    ಅತ್ಯುತ್ತಮ ಸಿನಿಮಾ ಪತ್ರಕರ್ತರಿಗೆ ನೀಡುವ ʼಅರಗಿಣಿ ಪ್ರಶಸ್ತಿʼಗೆ ಪಬ್ಲಿಕ್‌ ಟಿವಿಯ ಡಿಜಿಟಲ್‌ ಸಿನಿಮಾ ವಿಭಾಗದ ಶರಣು ಹುಲ್ಲೂರು ಅವರು ಭಾಜನರಾಗಿದ್ದಾರೆ.

    ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

    ನಾಲ್ಕು ವರ್ಷಗಳ ಸಾಲಿನ (2019, 2020, 2021, 2022ನೇ ಸಾಲು) ನಾಡಿನ ವಿವಿಧ ಪತ್ರಕರ್ತರನ್ನು ʼಮಾಧ್ಯಮ ವಾರ್ಷಿಕ ಪ್ರಶಸ್ತಿʼ ಮತ್ತು ʼದತ್ತಿ ಪ್ರಶಸ್ತಿʼಗೆ ಆಯ್ಕೆ ಮಾಡಲಾಗಿದೆ.

    ಜೀವಮಾನ ಸಾಧನೆ ವಿಶೇಷ ಪ್ರಶಸ್ತಿಗೆ 50,000 ರೂ. ನಗದು, ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25,000 ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ನಾಲ್ಕು ವರ್ಷಗಳು ಸೇರಿ 124 ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಒಟ್ಟು 21 ಮಂದಿ ಪತ್ರಕರ್ತರು ʼದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

    ನಾಲ್ಕು ವರ್ಷಗಳ ದತ್ತಿ ಪ್ರಶಸ್ತಿಗಳು: ಆಂದೋಲನ ಸಂಸ್ಥೆಯವರು ಸ್ಥಾಪನೆ ಮಾಡಿರುವ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ ʼಆಂದೋಲನ ಪ್ರಶಸ್ತಿʼ, ಅಭಿಮಾನಿ ಸಂಸ್ಥೆಯವರು ಸ್ಥಾಪನೆ ಮಾಡಿರುವ ʼಅಭಿಮಾನಿʼ ಮತ್ತು ʼಅರಗಿಣಿʼ ಪ್ರಶಸ್ತಿಗಳು, ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ ʼಮೈಸೂರು ದಿಗಂತʼ ಪ್ರಶಸ್ತಿ ಹಾಗೂ ಪತ್ರಕರ್ತ ಕೆ.ಶಿವಕುಮಾರ್‌ ಸ್ಥಾಪಿಸಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ʼಮೂಕನಾಯಕ ಪ್ರಶಸ್ತಿʼಗೂ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳ ಮೊತ್ತ ತಲಾ 10,000 ರೂ. ನಗದು ಬಹುಮಾನ ಒಳಗೊಂಡಿದೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರು ಪ್ರಶಸ್ತಿ ಪುರಸ್ಕೃತರಿಗೆ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಿಳಾ ಉದ್ದೇಶಿತ ಆಯವ್ಯಯದಡಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ

    ಮಹಿಳಾ ಉದ್ದೇಶಿತ ಆಯವ್ಯಯದಡಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ, ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

    ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ತಿಂಗಳಿಗೆ ರೂ.15,000/- ಗಳ ಸ್ಟೈಫಂಡ್ ನೀಡಲಾಗುವುದು. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ

    ಮಹಿಳಾ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು(PDF) ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ wbkma2022@gmail.com ಮೂಲಕ ಅಥವಾ ಅಂಚೆ ಮೂಲಕ ಜನವರಿ 29ರ ಒಳಗೆ ತಲುಪುವಂತೆ ಕಳುಹಿಸಬೇಕು. ದಿನಾಂಕ ಮುಗಿದ ಮೇಲೆ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ಹೂಡಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ.

  • ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ʼಪಬ್ಲಿಕ್‌ ಟಿವಿʼಯ ಬದ್ರುದ್ದೀನ್‌ ಕೆ.ಮಾಣಿ ಸೇರಿ ಮೂವರ ನೇಮಕ

    ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ʼಪಬ್ಲಿಕ್‌ ಟಿವಿʼಯ ಬದ್ರುದ್ದೀನ್‌ ಕೆ.ಮಾಣಿ ಸೇರಿ ಮೂವರ ನೇಮಕ

    ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರನ್ನಾಗಿ ʼಪಬ್ಲಿಕ್‌ ಟಿವಿʼ ಸುದ್ದಿವಾಹಿನಿಯ ವಿದ್ಯುನ್ಮಾನ ಮಾಧ್ಯಮದ ರಾಜಕೀಯ ವಿಭಾಗದ ಮುಖ್ಯಸ್ಥರಾದ ಬದ್ರುದ್ದೀನ್‌ ಕೆ.ಮಾಣಿ ಸೇರಿದಂತೆ ಮೂವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಅವರು ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಬೆಂಗಳೂರು ವರದಿಗಾರರ ಕೂಟದ ವತಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಮೂವರು ಸದಸ್ಯರನ್ನು ನೇಮಿಸಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ: ಸಿಎಂ ವಿಶ್ವಾಸ

    ಉದಯವಾಣಿ ಪತ್ರಿಕೆಯ ಉಪ ಮುಖ್ಯ ವರದಿಗಾರ ಎಸ್.ಲಕ್ಷ್ಮೀನಾರಾಯಣ, ಸಣ್ಣ ಮತ್ತು ಮಧ್ಯಮ ವರ್ಗಗಳ ಪತ್ರಿಕಾ ವಿಭಾಗದ ಮೈಸೂರು ಮಿತ್ರ ಮತ್ತು ಸ್ಟಾರ್‌ ಆಫ್‌ ಮೈಸೂರು ಪತ್ರಿಕೆಯ ವಿಶೇಷ ವರದಿಗಾರ ಕೆ.ಎಂ.ಶಿವರಾಜು ಅವರು ಸಹ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಇದನ್ನೂ ಓದಿ: ಸಿಎಂಎಸ್‍ಆರ್ ಮೋರೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ

  • ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

    ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

    ಮಂಗಳೂರು: ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆಯಾಗಿದ್ದಾರೆ.

    ಪತ್ರಿಕೋದ್ಯಮದಲ್ಲಿ ಕಳೆದ 33 ವರ್ಷಗಳಿಂದ ದುಡಿಯುತ್ತಿರುವ ಬಾಳ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿದ್ದಾರೆ. 2017 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, 2008ರಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಅಬುದಾಭಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಪ್ರಶಸ್ತಿ ಪಡೆದಿದ್ದು, 2011ರ ಸಾಲಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

    ಕರ್ನಾಟಕ ಮಾಧ್ಯಮ ಅಕಾಡಮಿಯ ಅಧ್ಯಕ್ಷರಾಗಿ ಕೆ.ಸದಾಶಿವ ಶಣೈ. ಇತರ ಸದಸ್ಯರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ.ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್, ಸಿ.ಕೆ.ಮಹೇಂದ್ರ, ದೇವೇಂದ್ರಪ್ಪ ಕಪನೂರು, ಕೆ.ವಿ.ಶಿವಕುಮಾರ್ ಆಯ್ಕೆಯಾಗಿದ್ದಾರೆ.