ಪುನೀತ್ ರಾಜ್ಕುಮಾರ್(Puneeth Rajkumar) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ (Karnataka Ratna Prashati) ನೀಡಿದ್ದಕ್ಕಾಗಿ ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ತಿಳಿಸುವುದರ ಜೊತೆಗೆ ಈ ಸಂದರ್ಭಕ್ಕೆ ಹೆಮ್ಮೆ ಪಡಬೇಕು ಎಂದು ಮಾತನಾಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳ ಕಾಲ ತಮ್ಮ ಸಿನಿಮಾಗಳ ಮೂಲಕ ಅಪ್ಪು ರಂಜಿಸಿದ್ದರು. ಅಷ್ಟೇ ಅಲ್ಲ, ಸಮಾಜಮುಖಿ ಕಾರ್ಯಗಳ ಮೂಲಕ ಸಾಕಷ್ಟು ಜನರಿಗೆ ಆದರ್ಶ ವ್ಯಕ್ತಿಯಾಗಿದ್ದರು. ಪುನೀತ್ ಪ್ರತಿಭೆ, ಕಲಾಸೇವೆಯನ್ನ ಗುರುತಿಸಿ ನವೆಂಬರ್ 1 ಕನ್ನಡ ಹಬ್ಬದಂದು ಪುನೀತ್ ರಾಜ್‌ಕುಮಾರ್ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನ ಪತ್ನಿ ಅಶ್ವಿನಿ ನೀಡಿ ಗೌರವಿಸಲಾಯಿತು. ಈ ಕುರಿತು ರಾಘಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂದರ್ಭಕ್ಕೆ ಹೆಮ್ಮೆ ಪಡಬೇಕು. ನಮ್ಮ ತಂದೆ ಕರ್ನಾಟಕ ರತ್ನ ಪಡೆದುಕೊಳ್ಳುವಾಗ 30 ವರ್ಷದ ಹಿಂದೆ ನಮ್ಮನ್ನು ಕರೆಸಿಕೊಂಡು ಬಂದಿದ್ದರು. ಈಗ ನನ್ನ ತಮ್ಮ ಅಪ್ಪು ಕರೆಸಿದ್ದಾನೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಶಕ್ತಿ ಇರುತ್ತದೆ ಎಂದು ಅಪ್ಪು ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:‘ಕರ್ನಾಟಕ ರತ್ನ’ದ ಅರ್ಥನೇ ಪುನೀತ್ ರಾಜ್ ಕುಮಾರ್ : ಜ್ಯೂನಿಯರ್ ಎನ್.ಟಿ.ಆರ್
`ಗಂಧದಗುಡಿ’ ಯಾಕೆ ಆ ಚಿತ್ರ ಮಾಡಿದ ಪ್ರಾಣಿ ಕಾಡಿನ ಬಗ್ಗೆ ಅವನಿಗಿದ್ದ ಕಾಳಜಿ, ಪ್ಲಾಸ್ಟಿಕ್ ಬಳಸಬೇಡಿ ಎಂಬ ಸಂದೇಶವಿತ್ತು. ಚಿಕ್ಕ ಮಕ್ಕಳಿಗೂ ಅದನ್ನ ಕಲಿಸಬೇಕು ಅದು ನಿಜವಾದ ಅವಾರ್ಡ್ ಎಂದು ರಾಘಣ್ಣ ಮಾತನಾಡಿದ್ದಾರೆ. ಅಭಿಮಾನಿ ದೇವರುಗಳು ಮಳೆಯಲ್ಲಿ ನಿಂತು ಕಾರ್ಯಕ್ರಮ ನೋಡಿದ್ದೀರ ನಿಮಗೆ ನನ್ನ ಸಾಷ್ಟಾಂಗ ನಮಸ್ಕಾರಗಳು ಎಂದು ರಾಘಣ್ಣ ಧನ್ಯವಾದಗಳನ್ನ ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕರುನಾಡಿನ ರಾಜರತ್ನ ಅಪ್ಪು ಇಂದಿನಿಂದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಆಗಲಿದ್ದಾರೆ. ರಾಜ್ಯ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನ ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಪ್ರದಾನ ಮಾಡಲಾಗುತ್ತದೆ. ವಿಧಾನಸೌಧದ ಮೆಟ್ಟಿಲುಗಳ ಕಾರ್ಯಕ್ರಮ ನಡೆಯಲಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.
ಸಂಜೆ 4 ಗಂಟೆಗೆ ಸಮಾರಂಭ ನಡೆಯಲಿದೆ. ಸುಮಾರು 25 ಸಾವಿರ ಮಂದಿ ಭಾಗವಹಿಸುವ ಸಾಧ್ಯತೆ ಇದ್ದು, ಗಣ್ಯರಿಗೆ 5 ಸಾವಿರ ಪಾಸ್‌ಗಳನ್ನು ವಿತರಿಸಲಾಗಿದೆ. ಇನ್ನು ಡಾ.ರಾಜ್ ಕುಟುಂಬಕ್ಕೂ ರಾಜ್ಯ ಸರ್ಕಾರ ಆಹ್ವಾನ ನೀಡಿದೆ. ನಿನ್ನೆ ಅಪ್ಪು ನಿವಾಸಕ್ಕೆ ಭೇಟಿ ನೀಡಿದ ಸಚಿವ ಅಶೋಕ್, ಸುನೀಲ್ ಕುಮಾರ್ ಇಂದಿನ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್‌ರನ್ನು ಆಹ್ವಾನಿಸಿದ್ದಾರೆ. ಡಾ.ರಾಜ್‌ಕುಮಾರ್ ಕುಟುಂಬ ಸದಸ್ಯರು ಬಸ್‌ನಲ್ಲಿ ಒಟ್ಟಿಗೆ ವಿಧಾನಸೌಧಕ್ಕೆ ಬಂದಿಳಿಯಲಿದ್ದಾರೆ. ಇಡೀ ಕುಟುಂಬ ಒಟ್ಟಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ಡಾ.ರಾಜ್ ಕುಟುಂಬ ಸದಸ್ಯರು ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ. ಕರುನಾಡಿನ `ರಾಜರತ್ನ’ ಅಪ್ಪುಗೆ `ಕರ್ನಾಟಕ ರತ್ನ’ ಅಭಿಮಾನಿಗಳಲ್ಲಿ ಇನ್ನಿಲ್ಲದ ಸಂಭ್ರಮ ತಂದಿದೆ. ಆದ್ರೆ ಅಪ್ಪು ಇಲ್ಲವಲ್ಲ ಅನ್ನೋ ನೋವು ಇನ್ನಿಲ್ಲದಂತೆ ಕಾಡಿದೆ. ಇದನ್ನೂ ಓದಿ: ಅಪ್ಪುಗೆ ನಾಳೆ ‘ಕರ್ನಾಟಕ ರತ್ನ’ ಪ್ರದಾನ: ಕಾರ್ಯಕ್ರಮದ ಫುಲ್ ಡಿಟೇಲ್ಸ್
ಅಪ್ಪುಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮುಖ್ಯ ಅತಿಥಿಯಾಗಿ ಖ್ಯಾತ ನಟರಾದ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂ.ಎನ್‌ಟಿಆರ್, ಇನ್ಫೋಸಿಸ್ ಸುಧಾಮೂರ್ತಿ ಭಾಗಿಯಾಗುತ್ತಿರುವುದು ಸಂಭ್ರಮವನ್ನ ಇಮ್ಮಡಿಗೊಳಿಸಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಈ ಸಮಾರಂಭಕ್ಕೆ ರಜನಿಕಾಂತ್ ಹಾಗೂ ಜೂ.ಎನ್‌ಟಿಆರ್ ಆಗಮಿಸಲಿದ್ದಾರೆ. ಇದೇ ರಜನಿಕಾಂತ್ ದಶಕಗಳ ಹಿಂದೆ ಪುನೀತ್ ಅಭಿನಯದ 2002ರಲ್ಲಿ ತೆರೆ ಕಂಡ ಅಪ್ಪು ಚಿತ್ರದ ನೂರನೇ ದಿನ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. ಈಗ ಇವತ್ತಿನ ಕ್ಷಣಕ್ಕೂ ಸಾಕ್ಷಿಯಾಗಲಿದ್ದಾರೆ. ಅಪ್ಪುಗೆ ಚಕ್ರವ್ಯೂಹ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಹಾಡೊಂದನ್ನ ಹಾಡಿದ್ರು. ಅಪ್ಪು ನಿಧನ ಬಳಿಕ ಅಪ್ಪುವನ್ನ ನೆನೆದು ಗದ್ಗದಿತರಾಗಿದ್ರು. ಇದೀಗ ಗೆಳೆಯನಿಗೆ ಪ್ರಶಸ್ತಿ ಕೊಡಲು ಮುಖ್ಯ ಅತಿಥಿಯಾಗಿ ಜೂನಿಯರ್ ಎನ್‌ಟಿಆರ್ ಬರ್ತಿದ್ದಾರೆ.
ವಿಧಾನಸೌಧದ ಪೂರ್ವದ್ವಾರದ ಗ್ರ್ಯಾಂಡ್ ಸ್ಟೆಪ್ ಮೇಲೆ ಹಂಪಿ ಮಾದರಿಯ ಬೃಹತ್ ಮಂಟಪ ನಿರ್ಮಾಣ ಮಾಡಲಾಗಿದೆ. ಅದ್ದೂರಿ ವೇದಿಕೆ ಸಿದ್ಧಗೊಂಡಿದೆ. ಅವಿಸ್ಮರಣೀಯ ಕಾರ್ಯಕ್ರಮಕ್ಕೆ ನಟ ರಜನಿಕಾಂತ್, ಜೂನಿಯರ್ ಎನ್‌ಟಿಆರ್ ಬರ್ತಿದ್ದಾರೆ. ವೇದಿಕೆ ಮೇಲೆ 30 ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿಐಪಿಗಳಿಗೆ ಗ್ರ್ಯಾಂಡ್ ಸ್ಟೆಪ್ ವೇದಿಕೆಯ ಮುಂಭಾಗದಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 7000 ವಿಐಪಿ ಪಾಸ್‌ಗಳ ವಿತರಣೆ ಮಾಡಲಾಗಿದ್ದು, ಆಸನಗಳನ್ನ ಹಾಕಲಾಗಿದೆ. ಇನ್ನು ಅಪ್ಪು ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇನ್ನು ಪೊಲೀಸ್ ಇಲಾಖೆ ಕಾರ್ಯಕ್ರಮದ ಬಂದೋಬಸ್ತ್‌ಗೆ 1,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದೆ. ಇವತ್ತಿನ ಕಾರ್ಯಕ್ರಮಕ್ಕೆ ಸಂಚಾರಿ ಪೊಲೀಸರು ಕೂಡ ಸರ್ವ ಸನ್ನದ್ಧರಾಗಿದ್ದು, ಅಂಬೇಡ್ಕರ್ ರೋಡ್ ಸೇರಿದಂತೆ ಹಲವು ರಸ್ತೆ ಮಾರ್ಗಗಳನ್ನ ಬದಲಿಸಿದ್ದಾರೆ. ಇದನ್ನೂ ಓದಿ: ‘ಕಾಂತಾರ’ ಸಿನಿಮಾ ಹಾಸ್ಯಾಸ್ಪದ ಮತ್ತು ಕಳಪೆಯಾಗಿದೆ : ನಿರ್ದೇಶಕ ಅಭಿರೂಪ್ ಬಸು
7,000 ವಿಐಪಿಗಳಿಗೆ ಪಾಸ್ ವಿತರಣೆ
ಚಿತ್ರರಂಗದ ಗಣ್ಯರು, ಸರ್ಕಾರಿ ಅಧಿಕಾರಿಗಳು ಸೇರಿದಂತೆ 7,000 ವಿಐಪಿಗಳಿಗೆ ಪಾಸ್ ವಿತರಣೆ ಮಾಡಲಾಗಿದೆ. ಪಾಸ್ ಇದ್ದರಷ್ಟೆ ವಿಧಾನಸೌಧದ ಒಳಗೆ ಪ್ರವೇಶವಿರುತ್ತದೆ. 20 ರಿಂದ 30 ಸಾವಿರ ಸಾರ್ವಜನಿಕರು ಭಾಗಿಯಾಗುವ ನಿರೀಕ್ಷೆ ಇದೆ. ವೀಕ್ಷಣೆಗಾಗಿ 10 ಕಡೆ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ಮೂವರು ಡಿಸಿಪಿ, 10 ಎಸಿಪಿಗಳ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ವಿವಿಐಪಿ, ವಿಐಪಿ, ಸಾರ್ವಜನಿಕರಿಗೆ ಮಾರ್ಗ ಪ್ರತ್ಯೇಕವಾಗಿದೆ. ವಿವಿಐಪಿ ವಾಹನಗಳಿಗಷ್ಟೆ ವಿಧಾನಸೌಧದ ಒಳಗೆ ಪ್ರವೇಶ ಇರುತ್ತದೆ.
ಯಾವೆಲ್ಲ ಮಾರ್ಗ ಬಂದ್?
ವಿಧಾನಸೌಧದ ಪೂರ್ವ ಹಾಗೂ ಅಂಬೇಡ್ಕರ್ ರಸ್ತೆ, ತಿಮ್ಮಯ್ಯ ಕಾರ್ನರ್‌ನಿಂದ ಕೆ.ಆರ್ ಸರ್ಕಲ್‌ವರೆಗೆ, ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಮಾರ್ಗ ಬದಲಾವಣೆ, ಅಂಬೇಡ್ಕರ್ ರಸ್ತೆ, ಇನ್ಫೆಂಟ್ರಿ ರಸ್ತೆ, ಅಲಿ ಅಸ್ಕರ್ ರಸ್ತೆ, ಅರಮನೆ ರಸ್ತೆ, ರಾಜಭವನ ರಸ್ತೆ, ಕಬ್ಬನ್ ಪಾರ್ಕ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಕನ್ನಿಂಗ್ ಹಾಮ್ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿಷೇಧ ಇರಲಿದೆ. ಕಾರ್ಯಕ್ರಮಕ್ಕೆ ಬರುವವರಿಗೆ ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಇರಲಿದೆ.
ಕರ್ನಾಟಕ ರತ್ನ ಪ್ರಶಸ್ತಿಯನ್ನು 1992ರಿಂದ ಈವರೆಗೂ 9 ಮಂದಿ ಗಣ್ಯರಿಗಷ್ಟೇ ನೀಡಲಾಗಿದೆ. ರಾಷ್ಟ್ರಕವಿ ಕುವೆಂಪು, ಡಾ.ರಾಜ್‌ಕುಮಾರ್, ಎಸ್.ನಿಜಲಿಂಗಪ್ಪ, ಪ್ರೊ.ಸಿಎನ್‌ಆರ್ ರಾವ್, ಡಾ.ದೇವಿಶೆಟ್ಟಿ, ಪಂಡಿತ್ ಭೀಮಸೇನ್ ಜೋಷಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮೀಜಿ, ದೇ. ಜವರೇಗೌಡರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಸಾಲಿನಲ್ಲಿ ಇಂದಿನಿಂದ ಪುನೀತ್‌ರಾಜಕುಮಾರ್ ರಾರಾಜಿಸಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಇಂದು ದಿ. ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ರಿಲೀಸ್ ಆಗಿದೆ. ಹೀಗಾಗಿ ಇಮದು ಅಪ್ಪು ಅಭಿಮಾನಿಗಳು ಹಬ್ಬವನ್ನೇ ಆಚರಿಸುತ್ತಿದ್ದಾರೆ. ಈ ನಡುವೆ ಶೀಘ್ರವೇ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಈಗಾಗಲೇ ತೀರ್ಮಾನ ಆಗಿದೆ. ಪ್ರಶಸ್ತಿ ಪ್ರದಾನ ಮಾಡುವ ಸಂಬಂಧ ಡಾ.ರಾಜ್ ಕುಟುಂಬದ ಜತೆ ಚರ್ಚೆ ನಡೆಸುತ್ತೇನೆ. ಈ ಸಂಬಂಧ ಒಂದು ಸಮಿತಿ ಕೂಡ ರಚಿಸಲಾಗುವುದು. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕ ನಿಗದಿ ಬಗ್ಗೆಯೂ ಆದಷ್ಟು ಬೇಗ ನಿರ್ಧಾರ ಮಾಡಲಾಗುವುದು ಎಂದರು. ಇದನ್ನೂ ಓದಿ: ಡಾ.ಪುನೀತ್ ರಾಜ್‍ಕುಮಾರ್ ನೆನೆದು ಗುಣಗಾನ ಮಾಡಿದ ಪ್ರಿಯಾಂಕ್ ಖರ್ಗೆ
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಯಾವ ರೀತಿ ಮಾಡಬೇಕೆಂಬ ಬಗ್ಗೆ ಕುಟುಂಬದ ಜೊತೆ ಚರ್ಚಿಸಲಾಗುವುದು. ಡಾ.ರಾಜ್ ಹಾಗೂ ಪುನೀತ್ ರಿಗೆ ಗೌರವ ಬರುವ ಹಾಗೆ ಕಾರ್ಯಕ್ರಮ ನಡೆಸಲಾಗುವುದು. ಒಟ್ಟಿನಲ್ಲಿ ಆದಷ್ಟು ಬೇಗ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ತಿಳಿಸಿದರು.
ಇತ್ತೀಚೆಗಷ್ಟೇ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನದ ಫೋಷಣೆಯನ್ನು ನಿನ್ನೆ ಮಾಡಲಾಗಿದ್ದು, ಈ ಹಿಂದೆಯೇ ಇವರಿಗೆ ಪದ್ಮಶ್ರೀಗೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ.
ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆ ಮುಂದಿನ ವಾರ ನವೆಂಬರ್ 26 ರಂದು ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಬಗ್ಗೆ ಮಹತ್ವದ ಚರ್ಚೆ ಮಾಡಲಾಗುವುದು. ಇದರ ಜೊತೆಗೆ ಪದ್ಮಶ್ರೀ ನೀಡಲು ಸಹ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗುತ್ತೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ- ಸಿಎಂ ಘೋಷಣೆ
ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ಸಹೋದ್ಯೋಗಿಗಳ ಜತೆ ಚರ್ಚಿಸಿ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಪಡೆಸುತ್ತಾರೆ. ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನಕ್ಕೆ ಅರ್ಥವತ್ತಾದ, ಅಚ್ಚುಕಟ್ಟು ಕಾರ್ಯಕ್ರಮ ಆಯೋಜಿಸಲೂ ಚರ್ಚಿಸಲಿದ್ದಾರೆ. ಅದು ಅಲ್ಲದೇ ನವೆಂಬರ್ 17 ರ ಸಂಪುಟ ಸಭೆಯಲ್ಲಿ ಅಪ್ಪುಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಬಗ್ಗೆಯೂ ಚರ್ಚೆ ಮಾಡಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಅಭಿಮಾನಿಗಳಿಂದ ಪದ್ಮಶ್ರೀ ಪ್ರಶಸ್ತಿಗೂ ಒತ್ತಾಯ ಬರುತ್ತಿರುವ ಹಿನ್ನೆಲೆ ಕೇಂದ್ರಕ್ಕೆ ಪದ್ಮಶ್ರೀ ಶಿಫಾರಸ್ಸು ಮಾಡುವ ಬಗ್ಗೆ ಚರ್ಚಿಸಿ ನಿರ್ಧಾರ ಸಾಧ್ಯತೆ ಇದೆ. ಇದರ ಜೊತೆಗೆ ಪುನೀತ್ ಸ್ಮರಣಾರ್ಥಕ್ಕೆ ಮತ್ತೊಂದಷ್ಟು ಕಾರ್ಯಕ್ರಮ, ಯೋಜನೆಗಳ ಬಗ್ಗೆಯೂ ಬೊಮ್ಮಾಯಿ ಅವರು ಚರ್ಚಿಸಲಿದ್ದಾರೆ.
ಪ್ರಸ್ತುತ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ತಾತ್ಕಾಲಿಕವಾಗಿ ಮೂರು ಮುಹೂರ್ತಗಳನ್ನು ನಿಗದಿ ಮಾಡಿಕೊಂಡಿದೆ ಎನ್ನಲಾಗಿದೆ. ಚಳಿಗಾಲದ ಅಧಿವೇಶನದ ಬಳಿಕ ಪ್ರಶಸ್ತಿ ಪ್ರದಾನಕ್ಕೆ ಮುಹೂರ್ತ ನಿಗದಿ ಮಾಡುವ ಚಿಂತನೆ ಇದೆ. ಹೊಸ ವರ್ಷದ ಜನವರಿಯಲ್ಲಿ ಪ್ರಶಸ್ತಿ ಕೊಡುವ ಬಗ್ಗೆಯೂ ಚಿಂತನೆ ಇದೆ. ಪುನೀತ್ ಜನ್ಮದಿನವಾದ ಮಾರ್ಚ್ 17 ರಂದು ಪ್ರಶಸ್ತಿ ಪ್ರದಾನ ಮಾಡುವ ಸಾಧ್ಯತೆಯೂ ಇದೆ. ಈ ಮೂರು ಸಂದರ್ಭಗಳ ಪೈಕಿ ಸರ್ಕಾರ ಒಂದು ದಿನಾಂಕ ನಿಗದಿ ಮಾಡಲಿದೆ. ಇದನ್ನೂ ಓದಿ: ʼಅಪ್ಪುʼಗೆ ನನ್ನ ದೃಷ್ಟಿಯೇ ತಾಗಿತೇನೊ ಅನಿಸುತ್ತೆ: ತಮ್ಮನ ನೆನೆದು ಶಿವಣ್ಣ ಕಣ್ಣೀರು