ಚಿಕ್ಕೋಡಿ (ಬೆಳಗಾವಿ): ಕರ್ನಾಟಕ ರಾಜ್ಯೋತ್ಸವ ಹಾಗೂ ದಿವಂಗತ ಡಾ. ಪುನೀತ್ ರಾಜಕುಮಾರ್ (Dr. Puneeth Raj Kumar) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ನೌಕರರೆಲ್ಲ ಸೇರಿ ಪ್ರತಿ ಮನೆಗೆ ಕನ್ನಡ ಧ್ವಜ ನೀಡಿ ಅಪ್ಪುಗೆ ಗೌರವ ಸಲ್ಲಿಸಿದ್ದಾರೆ.
ಗ್ರಾಮದ ಪ್ರತಿ ಮನೆಗಳಿಗೂ ಕನ್ನಡ ಧ್ವಜ (Kannada Flag) ನೀಡಿ ಧ್ವಜಾರೋಹಣ ಮಾಡುವ ಕಾರ್ಯವನ್ನ ನೇರಲಿ ಗ್ರಾಮ ಪಂಚಾಯತಿ ವತಿಯಿಂದ ಮಾಡಲಾಗಿದೆ. ರಾಜ್ಯೋತ್ಸವ ದಿನದಂದು ನೇರಲಿ ಗ್ರಾಮದ ಪ್ರತಿ ಮನೆ ಮನೆಗಳಲ್ಲೂ ಕನ್ನಡ ಬಾವುಟ ರಾರಾಜಿಸುತ್ತಿತ್ತು. ಇದನ್ನೂ ಓದಿ: ನಕ್ಷತ್ರದ ಕಣ್ಣುಗಳಿರುವ ಅಪ್ಪು ದೇವರ ಮಗು ಎಂದು ಹಾಡಿ ಹೊಗಳಿದ ರಜನಿಕಾಂತ್
ಪವರ್ ಸ್ಟಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ದೊರಕಿದ್ದು, ಇಡೀ ಗ್ರಾಮಕ್ಕೆ ಅಲ್ಲದೇ ರಾಜ್ಯಕ್ಕೆ ಸಂತಸ ತಂದಿದೆ ಎಂದು ಗ್ರಾಮ ಪಂಚಾಯತಿ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹೆಸರಾಂತ ನಟ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಮರಣೋತ್ತರ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai ) ಅವರು ಪ್ರದಾನ ಮಾಡಿದರು. ಪುನೀತ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Rajkumar ) ಈ ಪ್ರಶಸ್ತಿಯನ್ನು ಸ್ವೀಕರಿಸಿ, ಭಾವುಕರಾದರು. ಸಿನಿಮಾ ರಂಗ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಪುನೀತ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿದ್ದು, ಸಿನಿಮಾ ರಂಗದಿಂದ ಇಂಥದ್ದೊಂದು ಗೌರವಕ್ಕೆ ಪಾತ್ರರಾದ ಎರಡನೇ ಗಣ್ಯವ್ಯಕ್ತಿ ಇವರಾಗಿದ್ದಾರೆ.
ಕರ್ನಾಟಕ ರತ್ನ ಪ್ರಶಸ್ತಿ ಪ್ರಾರಂಭವಾದಾಗ ಮೊದಲ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಮತ್ತು ಡಾ.ರಾಜ್ ಕುಮಾರ್ ಅವರಿಗೆ ದೊರೆತಿತ್ತು. ಮೂವತ್ತು ವರ್ಷಗಳ ನಂತರ ಮತ್ತೆ ಸಿನಿಮಾ ರಂಗಕ್ಕೆ ಅದರಲ್ಲೂ ಡಾ.ರಾಜ್ ಕುಟುಂಬಕ್ಕೆ ಈ ಗೌರವ ದೊರೆತಿದೆ. ಹಾಗಾಗಿಯೇ ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಹಾಜರಿದ್ದರು. ಡಾ.ರಾಜ್ ಕುಮಾರ್ ಅವರ ಅಷ್ಟೂ ಮಕ್ಕಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ವಿಶೇಷ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
ಈ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಪುನೀತ್ ಅವರ ನೆಚ್ಚಿನ ನಟರಾಗಿದ್ದ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) , ಹಾಗೂ ಗೆಳೆಯ ಮತ್ತು ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Jr.NTR), ಸುಧಾಮೂರ್ತಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಸಚಿವರಾದ ವಿ.ಸುನೀಲ್ ಕುಮಾರ್, ಆರ್.ಅಶೋಕ್, ಮುನಿರತ್ನ, ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪ್ರಶಸ್ತಿ ಪ್ರದಾನಕ್ಕೂ ಮುನ್ನ ಕನ್ನಡದ ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದಿಂದ ಕನ್ನಡದ ಗೀತೆಗಳು ಮತ್ತು ಪುನೀತ್ ರಾಜ್ ಕುಮಾರ್ ನಟನೆಯ ಹಾಡುಗಳನ್ನು ಹೇಳಲಾಯಿತು. ಪುನೀತ್ ಹಾಡಿದ ಹಾಡುಗಳಿಗೂ ಕಲಾವಿದರು ದನಿಯಾಗಿದ್ದು ವಿಶೇಷವಾಗಿತ್ತು.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಕರ್ನಾಟಕ ರತ್ನ (Karnataka Ratna) ಕ್ಕೆ ಪುನೀತ್ ಅರ್ಹನಾದ ವ್ಯಕ್ತಿಯಾಗಿರುವವರು. ಮುಂದೆ ಎಲ್ಲಾ ಕಲಾವಿದರಿಗೂ ಇವರು ಸ್ಫೂರ್ತಿಯಾಗಿರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Dr. Veerendra Heggade) ಹೇಳಿದರು.
ದಿವಂಗತ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಗೌರವಕ್ಕೆ ಧರ್ಮಸ್ಥಳ (Dharmasthala) ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹರ್ಷ ವ್ಯಕ್ತಪಡಿಸಿದರು. ಬಳಿಕ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗ್ತಿದೆ. ಇಂದು ಆ ಯುವಕನನ್ನು ನಾನು ಸ್ಮರಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯೋತ್ಸವದಂದು ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಹೀರೋ
ಪುನೀತ್ ಅವರ ತಂದೆ ಡಾ.ರಾಜ್ ಕುಮಾರ್ ನನಗೆ ಅತ್ಯಂತ ಪ್ರೀತಿಯವರು ಮತ್ತು ಕ್ಷೇತ್ರದ ಬಗ್ಗೆ ಅಪಾರ ಗೌರವವಿತ್ತು. ಅವರ ಪುತ್ರ ಪುನೀತ್ ತನ್ನ ವೈಯಕ್ತಿಕ ವ್ಯಕ್ತಿತ್ವ, ನಟನೆ ಮತ್ತು ಸ್ವಭಾವದಿಂದ ಪ್ರೀತಿ ಪಾತ್ರರಾಗಿದ್ದರು. ಅವರ ಸಾವು ಇನ್ನೂ ನಮಗೆ ಅರಗಿಸಿಕೊಳ್ಳಲಾಗ್ತಿಲ್ಲ. ಇಂತಹ ಸಾವು ಅಂತ ದೊಡ್ಡ ಮತ್ತು ಭವಿಷ್ಯವಿದ್ದ ಕಲಾವಿದನಿಗೆ ಬರಬಾರದಿತ್ತು. ಭಗವಂತದ ಪಾದ ಸೇರಿದ ಪುನೀತ್ ನನ್ನ ಇವತ್ತು ಸ್ಮರಿಸುತ್ತೇವೆ ಎಂದರು.
ಕನ್ನಡದ ಸೇವೆ, ಸ್ವಭಾವತ ಸ್ನೇಹಪರರಾಗಿದ್ದರೆ ಜನ ಮತ್ತು ಸರ್ಕಾರ ಹೇಗೆ ನಮ್ಮನ್ನ ಸ್ಮರಿಸಿಕೊಳ್ಳುತ್ತೆ ಅನ್ನೋದು ಎಲ್ಲಾ ಕಲಾವಿದರಿಗೂ ಗೊತ್ತಾಗಲಿ. ಪುನೀತ್ ರ ಪುಣ್ಯದಿಂದ ಮತ್ತಷ್ಟು ಉತ್ತಮ ಕಲಾವಿದರು ಮೂಡಿ ಬರಲಿ ಅಂತ ಹಾರೈಸುತ್ತೇನೆ ಎಂದು ಅವರು ಹೇಳಿದರು.
ಬೆಂಗಳೂರಿನ ವಿಧಾನ ಸೌಧದ ಮುಂದೆ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ರಜನಿಕಾಂತ್ ಸೇರಿದಂತೆ ಹಲವರನ್ನು ಅತಿಥಿಯಾಗಿ ಆಹ್ವಾನ ನೀಡಲಾಗಿದೆ. ಪ್ರಶಸ್ತಿ ಪ್ರದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಹಿಸಿಕೊಳ್ಳಲಿದ್ದಾರೆ. ಹಾಗೆಯೇ ಮಾಜಿ ಮುಖ್ಯಮಂತ್ರಿಗಳಾ ಸಿದ್ಧರಾಮಯ್ಯ ಹೆಸರು ಕೂಡ ಆಮಂತ್ರಣ ಪತ್ರಿಕೆಯಲ್ಲಿದೆ.
ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ (Siddaramaiah) ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲಿದ್ದರೂ, ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಶಿಷ್ಟಾಚಾರದಂತೆ ಅವರು ನನಗೆ ಆಹ್ವಾನ ನೀಡಬೇಕಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದರೆ ಹೇಗೆ ಹೋಗುವುದಕ್ಕೆ ಸಾಧ್ಯ? ಅವರು ನನಗೆ ಆಹ್ವಾನ ನೀಡಿಲ್ಲ. ಹಾಗಾಗಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದಾರೆ ಸಿದ್ಧರಾಮಯ್ಯ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಂದು ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲೆಂದು ಅಪ್ಪು ಅವರ ಜೀವದ ಗೆಳೆಯ ಜ್ಯೂನಿಯರ್ ಎನ್.ಟಿ.ಆರ್ ಇದೀಗ ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರಿಗೆ ಎಚ್.ಎ.ಎಲ್ ಏರ್ಪೋಟಿಗೆ ಬಂದಿಳಿದ ಜ್ಯೂನಿಯರ್ ಎನ್.ಟಿ. ಆರ್ (Junior NTR) ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಮತ್ತು ಸಚಿವ ಮುನಿರತ್ನ ಅವರು ಬರಮಾಡಿಕೊಂಡರು. ಸರಕಾರದ ಕೆಲ ಪ್ರತಿನಿಧಿಗಳು ಕೂಡ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಇಂದು ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ನಿನ್ನೆಯಷ್ಟೇ ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಸ್ವಾಗತ ಕೋರಿದರು.
Live Tv
[brid partner=56869869 player=32851 video=960834 autoplay=true]
ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಇಂದು ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸುತ್ತಿದ್ದಾರೆ. ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಬೆಂಗಳೂರಿಗೆ (Bangalore) ಬಂದಿಳಿದಿದ್ದು, ಎಚ್.ಎ.ಎಲ್ ಏರ್ಪೋಟಿಗೆ ಬಂದಿಳಿದ ರಜನಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬರಮಾಡಿಕೊಂಡರು. ಕೆ.ಸುಧಾಕರ್ (K. Sudhakar) ಮತ್ತು ಸರಕಾರದ ಪ್ರತಿನಿಧಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹೂಗುಚ್ಛ ನೀಡುವ ಮೂಲಕ ತಲೈವಾರನ್ನು ಸ್ವಾಗತ ಕೋರಿದರು. ಸಚಿವ ಮುನಿರತ್ನ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ರಜನಿಕಾಂತ್ ಅವರನ್ನು ಬರಮಾಡಿಕೊಂಡರು. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
ಇಂದು ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ನಿನ್ನೆಯಷ್ಟೇ ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ.
ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಿದ್ದು 1992ರಲ್ಲಿ. ದೇಶದಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವಾದರೆ, ಕರ್ನಾಟಕದಲ್ಲೂ ಅಂಥದ್ದೊಂದು ಗೌರವವನ್ನು ಸಲ್ಲಿಸಬೇಕು ಎನ್ನುವ ಕಾರಣಕ್ಕಾಗಿ ಹುಟ್ಟಿಕೊಂಡಿದ್ದು ‘ಕರ್ನಾಟಕ ರತ್ನ’. ಈ ಪ್ರಶಸ್ತಿಯನ್ನು ಶುರು ಮಾಡಿದ್ದು ಆಗಿನ ಮುಖ್ಯಮಂತ್ರಿ ಎಸ್.ಬಂಗಾರಪ್ಪ (S. Bangarappa). ಇಂಥದ್ದೊಂದು ಪ್ರಶಸ್ತಿಯನ್ನು ಶುರು ಮಾಡಿದಾಗ ಮೊದಲ ಬಾರಿಗೆ ಅದನ್ನು ಡಾ.ರಾಜ್ ಕುಮಾರ್ ಅವರಿಗೆ ನೀಡಬೇಕು ಎಂದು ನಿರ್ಧರಿಸಲಾಯಿತು.
ಸಿನಿಮಾ ರಂಗದ ಸಾಧನೆಗಾಗಿ ಡಾ.ರಾಜ್ ಕುಮಾರ್ (Raj Kumar) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಸರಕಾರ ನಿರ್ಧರಿಸಿದಾಗ ಡಾ.ರಾಜ್ ಅದನ್ನು ಮೊದಲು ನಿರಾಕರಿಸುತ್ತಾರೆ. ತಮಗಿಂತಲೂ ಅರ್ಹರಾಗಿರುವ ಶ್ರೇಷ್ಠರು ನಾಡಿನಲ್ಲಿ ಇದ್ದಾರೆ. ಅವರಿಗೆ ಆ ಗೌರವವನ್ನು ಕೊಡಿ ಎಂದು ನಯವಾಗಿಯೇ ನಿರಾಕರಿಸುತ್ತಾರೆ. ಆದರೆ, ಸಾಂಸ್ಕೃತಿಕ ವಲಯವು ಡಾ.ರಾಜ್ ಕುಮಾರ್ ಹೇಳುವುದು ಸರಿಯಿದೆ. ಆದರೂ, ಅವರೂ ಕೂಡ ಅರ್ಹ ವ್ಯಕ್ತಿ. ಹಾಗಾಗಿ ಡಾ.ರಾಜ್ ಗೆ ಪ್ರಶಸ್ತಿ ನೀಡಿದರೆ ಯಾವುದೇ ತಪ್ಪಿಲ್ಲ ಎಂದು ಚರ್ಚೆಯಾಗುತ್ತದೆ. ಇದನ್ನೂ ಓದಿ:ದಆಮೀರ್ ಖಾನ್ ತಾಯಿಗೆ ಹೃದಯಾಘಾತ
ಡಾ.ರಾಜ್ ಕುಮಾರ್ ಕೊನೆಗೆ ಪ್ರಶಸ್ತಿಯನ್ನು ಸ್ವೀಕರಿಸಲು ಒಪ್ಪಿಕೊಳ್ಳುತ್ತಾರೆ. ಆದರೆ, ಒಂದು ಷರತ್ತನ್ನೂ ಅವರು ವಿಧಿಸುತ್ತಾರೆ. ರಾಷ್ಟ್ರಕವಿ ಕುವೆಂಪು ಅವರಿಗೆ ಈ ಪ್ರಶಸ್ತಿಯನ್ನು ಮೊದಲು ಕೊಡಿ, ಆನಂತರ ನಾನು ಸ್ವೀಕರಿಸುತ್ತೇನೆ ಎನ್ನುತ್ತಾರೆ. ಆಗ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಮತ್ತು ತಂಡವು ಡಾ.ರಾಜ್ ಮತ್ತು ಕುವೆಂಪು ಇಬ್ಬರಿಗೂ ಈ ಪ್ರಶಸ್ತಿಯನ್ನು ಘೋಷಣೆ ಮಾಡುತ್ತದೆ.
ಇಂದು ಡಾ.ರಾಜ್ ಪುತ್ರ ಪುನೀತ್ ರಾಜ್ ಕುಮಾರ್ ಅವರಿಗೆ ಯಾವ ಜಾಗದಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೋ, ಅದೇ ಜಾಗದಲ್ಲೇ ಡಾ.ರಾಜ್ ಕುಮಾರ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಗಿನ ರಾಜ್ಯಪಾಲರಾದ ಖುರ್ಷಿದ್ ಅಲಂ ಖಾನ್ (Khurshid Alam Khan) ಅವರು ಈ ಪ್ರಶಸ್ತಿಯನ್ನು ಡಾ.ರಾಜ್ ಗೆ ಪ್ರದಾನ ಮಾಡುತ್ತಾರೆ. ಮುಖ್ಯಮಂತ್ರಿಯಾಗಿದ ಎಸ್.ಬಂಗಾರಪ್ಪ, ಹಿರಿಯ ನಾಯಕರಾದ ಎಸ್.ಎಂ. ಕೃಷ್ಣ (S.M Krishna) ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಇದೇ ವೇದಿಕೆಯ ಮೇಲೆಯೇ ಮುಖ್ಯಮಂತ್ರಿಯಾಗಿದ್ದ ಎಸ್. ಬಂಗಾರಪ್ಪನವರು, ಡಾ.ರಾಜ್ ಕುಮಾರ್ ಅಭಿನಯದ ಅದ್ಭುತ ಗೀತೆ ‘ಯಾರೇ ಕೂಗಾಡಲಿ, ಊರೇ ಹೋರಾಡಲಿ.. ಎಮ್ಮೆ ನಿನಗೆ ಸಾಟಿಯಿಲ್ಲ’ ಎನ್ನುವ ಗೀತೆಯನ್ನು ಹಾಡಿ ರಂಜಿಸುತ್ತಾರೆ. ಈ ಹಾಡು ಅಂದು ನಾನಾ ರೀತಿಯ ಅರ್ಥಗಳನ್ನು ನೀಡಿತ್ತು ಎಂದು ಈಗಲೂ ವಿಶ್ಲೇಷಿಸಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
ಕರ್ನಾಟಕ ರತ್ನ ಪ್ರಶಸ್ತಿಯನ್ನು (Award) ನೀಡಲು ಹಲವು ಮಾನದಂಡಗಳನ್ನು (Criterion) ಸರಕಾರ ರೂಪಿಸಿದೆ. ಆ ಮಾನದಂಡದ ಆಧಾರದ ಮೇಲೆಯೇ ಈ ಪ್ರಶಸ್ತಿಯ ಆಯ್ಕೆಯ ಪ್ರಕ್ರಿಯೆ ನಡೆಯುತ್ತದೆ. ಆದರೆ, ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗಾಗಿ ಮಾನದಂಡದಲ್ಲಿ ಕೆಲ ತಿದ್ದುಪಡಿ ಮಾಡಿ ಸರಕಾರ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಇದು ಮಹಾನ್ ನಟನಿಗೆ ಸಲ್ಲಿಸಿದ ಗೌರವವೂ ಆಗಿದೆ. ತಿದ್ದುಪಡಿ (Amendment) ವಿಷಯವನ್ನು ಸರಕಾರ ಕೂಡ ಒಪ್ಪಿಕೊಂಡಿದೆ.
ಹಾಗಾದರೆ, ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಗೆ ಆಯ್ಕೆಯಾಗಲು ಮಾನದಂಡಗಳೇನು ಮತ್ತು ಪುನೀತ್ ಗಾಗಿ ತಿದ್ದುಪಡಿ ಮಾಡಿರುವ ನಿಯಮವೇನು ಎನ್ನುವುದು ಸದ್ಯಕ್ಕಿರುವ ಕುತೂಹಲ. ಈ ಹಿಂದೆ ವಿಧಾನ ಪರಿಷತ್ತಿನ ಮಾನ್ಯ ಸದಸ್ಯರಾದ ಎಂ.ಸಿ. ವೇಣುಗೋಪಾಲ್ ಅವರು ನಿಯಮ 330ರಡಿ ಪ್ರಶ್ನೆಯೊಂದನ್ನು ಕೇಳಿ, ರಾಷ್ಟ್ರಕವಿ, ಕರ್ನಾಟಕ ರತ್ನ ಮುಂತಾದ ಬಿರುದುಗಳನ್ನು ನೀಡಲು ಇರುವ ಮಾನದಂಡಗಳು ಏನು? ಎಂದು ಪ್ರಶ್ನೆ ನೀಡಿದ್ದರು. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ
ಎಂ.ಸಿ. ವೇಣುಗೋಪಾಲ್ ಕೇಳಿದ ಪ್ರಶ್ನೆಗೆ 2020ರಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರು ಆಗಿದ್ದ ಗೋವಿಂದ ಎಂ ಕಾರಜೋಳ ಅವರ ಲಿಖಿತ ಉತ್ತರ ನೀಡಿ, ‘ಈ ಪ್ರಶಸ್ತಿಯನ್ನು ಕರ್ನಾಟಕದಲ್ಲಿ ಜನಿಸಿ, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಂದರೆ, ಸಾಂಸ್ಕೃತಿಕ, ವೈಜ್ಞಾನಿಕ, ಮಾನವಿಕ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಅತ್ಯಂತ ಗಣನೀಯ ಸೇವೆಯನ್ನು ಸಲ್ಲಿಸಿದ ಕನಿಷ್ಠ 60 ವರ್ಷ ತುಂಬಿದ ಮಹಿನೀಯರನ್ನು ಗುರುತಿಸಿ, ಸರಕಾರವು ಪ್ರಶಸ್ತಿಯನ್ನು ನೀಡಲು ತೀಮಾರ್ನಿಸುತ್ತದೆ’ ಎಂದು ಉತ್ತರ ನೀಡಿದ್ದಾರೆ.
ಮಾನ್ಯ ಸಚಿವರು ಕೊಟ್ಟ ಉತ್ತರವನ್ನು ಗಮನಿಸಿದಾಗ ಪುನೀತ್ ಅವರು ಜನಿಸಿದ್ದು ಚೆನ್ನೈನ ಕಲ್ಯಾಣಿ ಆಸ್ಪತ್ರೆಯಲ್ಲಿ. ಹಾಗಾಗಿ ಬಹುಶಃ ಕರ್ನಾಟಕದಲ್ಲಿ ಜನಿಸಿದ ಎನ್ನುವ ಮಾನದಂಡವನ್ನು ತಿದ್ದುಪಡಿ ಮಾಡಿರಬಹುದು. ಅಲ್ಲದೇ, ಕನಿಷ್ಠ 60 ವರ್ಷ ತುಂಬಿದ ಮಹನೀಯರನ್ನು ಗುರುತಿಸಿ ಅಂತಿದೆ. ವಯಸ್ಸನ್ನು ಕೂಡ ತಿದ್ದುಪಡಿ ಮಾಡಿರಬಹುದು.
Live Tv
[brid partner=56869869 player=32851 video=960834 autoplay=true]
ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರಕಾರ ಇಂದು ಪ್ರದಾನ ಮಾಡಲಾಗುತ್ತಿದೆ. ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದ್ದು, ಈವರೆಗೂ ಕರ್ನಾಟಕದಲ್ಲಿ ಎಂಟು ಜನರಿಗೆ ನೀಡಲಾಗಿದೆ. ಈ ಗೌರವಕ್ಕೆ ಪಾತ್ರರಾಗುತ್ತಿರುವ 9ನೇ ರತ್ನ ಪುನೀತ್ ರಾಜ್ ಕುಮಾರ್ ಎನ್ನುವುದು ವಿಶೇಷ. ಅಲ್ಲದೇ ಮರಣೋತ್ತರ ಪ್ರಶಸ್ತಿ ಪಡೆಯುತ್ತಿರುವ ಮೊದಲ ರತ್ನ ಇವರಾಗಿದ್ದಾರೆ.
ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರಕಾರ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ (Award) ಇದಾಗಿದ್ದು, ಪುನೀತ್ ಅವರಿಗೆ ಸಿನಿಮಾ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಸಿನಿಮಾ ರಂಗಕ್ಕೆ ಈವರೆಗೂ ಎರಡು ಪ್ರಶಸ್ತಿಗಳು ಬಂದಿದ್ದು, 1992ರಲ್ಲಿ ಮೊದಲ ಬಾರಿಗೆ ಡಾ.ರಾಜ್ ಕುಮಾರ್ ಪಡೆದರೆ, 2022ರಲ್ಲಿ ಡಾ.ರಾಜ್ ಪುತ್ರ ಪುನೀತ್ ರಾಜ್ ಕುಮಾರ್ ಕರ್ನಾಟಕ ರತ್ನಕ್ಕೆ ಆಯ್ಕೆಯಾಗಿದ್ದರು. ಇದನ್ನೂ ಓದಿ:ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್
ದೇಶದಲ್ಲಿ ಭಾರತ ರತ್ನವು ಅತ್ಯುನ್ನತ ನಾಗರಿಕ ಪ್ರಶಸ್ತಿಯಾದರೆ, ಕರ್ನಾಟಕ ಸರಕಾರವು ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂದು 1992ರಲ್ಲಿ ಘೋಷಣೆ ಮಾಡಿತು. ಈ ಪ್ರಶಸ್ತಿಯು 50 ಗ್ರಾಮ್ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರವು ಇಂತಹ ಗೌರವವನ್ನು 16 ನವೆಂಬರ್ 2021ರಲ್ಲಿ ಘೋಷಣೆ ಮಾಡಲಾಯಿತು.
ಈವರೆಗೂ ಸಾಹಿತ್ಯ ಸೇವೆಗಾಗಿ ಕುವೆಂಪು, ಸಿನಿಮಾಗಾಗಿ ಡಾ.ರಾಜ್ ಕುಮಾರ್ (Rajkumar), ರಾಜಕೀಯ ಕ್ಷೇತ್ರದಲ್ಲಿಯ ಸಾಧನೆಗಾಗಿ ಎಸ್.ನಿಜಲಿಂಗಪ್ಪ, ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ಸಿ.ಎನ್.ಆರ್.ರಾವ್, ಸಂಗೀತ ಸಾಧನೆಗಾಗಿ ಭೀಮಸೇನ್ ಜೋಷಿ, ಸಮಾಜಸೇವೆಗಾಗಿ ಸಿದ್ಧಗಂಗಾ ಮಠದ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಈ ಗೌರವವನ್ನು ಪಡೆದುಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ನಾಳೆ ಬೆಂಗಳೂರಿನಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಸರಕಾರವು ಅಧಿಕೃತವಾಗಿ ಪುನೀತ್ ಕುಟುಂಬಕ್ಕೆ ಆಹ್ವಾನ ನೀಡಿದೆ. ಪುನೀತ್ ಮನೆಗೆ ಆಗಮಿಸಿದ್ದ ಸಚಿವರಾದ ಆರ್.ಅಶೋಕ್ ಮತ್ತು ಸುನೀಲ್ ಕುಮಾರ್ ಆಗಮಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರನ್ನು ಗೌರವಿಸುವ ಮೂಲಕ ಆಹ್ವಾನ ನೀಡಲಾಯಿತು.
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದನ್ನೂ ಓದಿ:ದಆಮೀರ್ ಖಾನ್ ತಾಯಿಗೆ ಹೃದಯಾಘಾತ
ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಇಂದು ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ.
ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೆರೆ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]