Tag: ಕರ್ನಾಟಕ ರತ್ನ

  • ಅಪ್ಪುಗೆ ನಾಳೆ ‘ಕರ್ನಾಟಕ ರತ್ನ’ ಪ್ರದಾನ: ಕಾರ್ಯಕ್ರಮದ ಫುಲ್ ಡಿಟೇಲ್ಸ್

    ಅಪ್ಪುಗೆ ನಾಳೆ ‘ಕರ್ನಾಟಕ ರತ್ನ’ ಪ್ರದಾನ: ಕಾರ್ಯಕ್ರಮದ ಫುಲ್ ಡಿಟೇಲ್ಸ್

    ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ಕರ್ನಾಟಕ ರತ್ನ  (Karnataka Ratna) ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು  ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

    ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಇಂದು ಪುನೀತ್ ಮನೆಗೆ ಆಗಮಿಸಿದ್ದ ಸಚಿವ ಆರ್. ಅಶೋಕ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೆರೆ ಅವರು ಗೌರವ ಉಪಸ್ಥಿತಿ ಇರಲಿದೆ. ಸಚಿವರಾದ ಆರ್. ಅಶೋಕ್ ಹಾಗೂ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಗೆಸ್ಟ್ : ಸಿಎಂ ಘೋಷಣೆ

    ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಗೆಸ್ಟ್ : ಸಿಎಂ ಘೋಷಣೆ

    ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ದಕ್ಷಿಣ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ತಿಳಿಸಿದರು. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಇಬ್ಬರಿಗೂ ಕರ್ನಾಟಕದ ನಂಟಿರುವುದು ಮತ್ತೊಂದು ವಿಶೇಷ.

    ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ (Jr.N.T.R.) ಅವರಿಗೆ ಕರ್ನಾಟಕ ಸರಕಾರವು ಆಹ್ವಾನ ನೀಡಿದ್ದು, ಜ್ಯೂನಿಯರ್ ಎನ್.ಟಿ.ಆರ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ. ಈ ಕಾರ್ಯಕ್ರವನ್ನು ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದು, ಡಾ.ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ. ಇದನ್ನೂ ಓದಿ:ಕಾಂತಾರ ‘ವರಾಹ ರೂಪಂ’ ಹಾಡಿಗೆ ಕೊಯಿಕ್ಕೋಡು ಕೋರ್ಟ್ ತಡೆಯಾಜ್ಞೆ

    ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಸರಕಾರವು ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಬೆಂಗಳೂರಿನಲ್ಲಿ ಅಪ್ಪು ಹೆಸರಿನಲ್ಲಿ ನಿರಂತರ ಕಾರ್ಯಕ್ರಮಗಳು ನಡೆಯುವಂತೆ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ. ಅಲ್ಲದೇ ಅಪ್ಪು ಹೆಸರಿನಲ್ಲಿ ಸಾರ್ಥಕ ಕೆಲಸಗಳನ್ನು ಮಾಡಲು ಸರಕಾರ ಮುಂದಾಗಿರುವುದಾಗಿಯೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಒಂದಷ್ಟು ಕಾರ್ಯಕ್ರಮಗಳನ್ನು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಘೋಷಿಸುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರದಾನ ಸಮಾರಂಭಕ್ಕೆ ರಜನಿಕಾಂತ್ ಗೆ ಆಹ್ವಾನ

    ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರದಾನ ಸಮಾರಂಭಕ್ಕೆ ರಜನಿಕಾಂತ್ ಗೆ ಆಹ್ವಾನ

    ವೆಂಬರ್ 1ರಂದು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ತಮಿಳು ಸಿನಿಮಾ ರಂಗದ ಖ್ಯಾತ ನಟ, ಕನ್ನಡಿಗ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅತಿಥಿಗಳಾಗಿ ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಇಬ್ಬರೂ ನಟರಿಗೆ ಆಹ್ವಾನ ನೀಡಲಾಗಿದೆಯಂತೆ.

    ರಜನಿಕಾಂತ್ (Rajinikanth) ಬೆಂಗಳೂರಿನಲ್ಲಿ ಹುಟ್ಟು ಬೆಳೆದವರು. ತಮಿಳು ಸಿನಿಮಾ ರಂಗದಲ್ಲಿ ಹೆಸರು ಮಾಡಿದರೂ, ಇವತ್ತಿಗೂ ಕರ್ನಾಟಕದೊಂದಿಗೆ ನಂಟು ಇಟ್ಟುಕೊಂಡಿದ್ದಾರೆ. ಆಗಾಗ್ಗೆ ಬೆಂಗಳೂರಿಗೂ ಬಂದು ಹೋಗುತ್ತಾರೆ. ಜ್ಯೂನಿಯರ್ ಎನ್.ಟಿ.ಆರ್  (Jr. N.T.R) ತಾಯಿ ಕೂಡ ಕರ್ನಾಟಕದವರು. ಹಾಗಾಗಿ ಈ ಇಬ್ಬರನ್ನೂ ಅತಿಥಿಯಾಗಿ ಕರೆದಿದ್ದಾರಂತೆ. ಬರುವ ಕುರಿತು ಈಗಲೇ ಖಚಿತತೆ ಇಲ್ಲದಿದ್ದರೂ, ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇದನ್ನೂ ಓದಿʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

    ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದ್ದು, ಇಂಥದ್ದೊಂದು ಗೌರವಕ್ಕೆ ಈ ಮೊದಲು ಡಾ.ರಾಜ್ ಕುಮಾರ್ ಕೂಡ ಪಾತ್ರರಾಗಿದ್ದಾರೆ. ಕನ್ನಡ ಸಿನಿಮಾ ರಂಗದ ಸೇವೆಗಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ತಂದೆ-ಮಗ ಎಂಬ ಖ್ಯಾತಿಗೂ ಈ ಇಬ್ಬರೂ ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

    ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

    ಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾಟಕ ಸರಕಾರವು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ತಮ್ಮ ನೆಚ್ಚಿನ ನಟನಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಯಾವಾಗ ಪ್ರದಾನ ಮಾಡಲಾಗುತ್ತದೆ ಎಂದು ಅಭಿಮಾನಿಗಳು ಕಾದಿದ್ದರು. ಕೊನೆಗೂ ಆ ದಿನಾಂಕ ಘೋಷಣೆಯಾಗಿದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

    ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆದ ಫಲ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಅಪ್ಪುಗೆ ಘೋಷಣೆ ಮಾಡಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಇಡೀ ಕುಟುಂಬ ಹಾಜರಿತ್ತು. ಇದನ್ನೂ ಓದಿ:ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಸಾಂದರ್ಭಿಕ ಚಿತ್ರ

    ಇಂದು ಉದ್ಘಾಟನೆಗೊಂಡ ಫಲ ಪುಷ್ಪ ಪ್ರದರ್ಶನದಲ್ಲಿ ಡಾ.ರಾಜ್ ಕುಮಾರ್ ಮತ್ತು ಅಪ್ಪು ನೆನಪಿನಲ್ಲಿ ವಿಶೇಷ ಪ್ರದರ್ಶನ ಆಯೋಜನೆಗೊಂಡಿದೆ. ಪುನೀತ್ ಮತ್ತು ಡಾ.ರಾಜ್ ಪುತ್ಥಳಿಗಳನ್ನು ಲಾಲ್ ಬಾಗ್ ನಲ್ಲಿ ಪ್ರತಿಷ್ಠಾಪಿಸಲಾಗಿದೆ. ಈ ಮೂಲಕ ಮೇರು ನಟರಿಗೆ ಸರಕಾರವು ಗೌರವ ಸಲ್ಲಿಸಿದೆ. ಇಂದಿನಿಂದ ಹತ್ತು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ನೆಚ್ಚಿನ ನಟರ ವಿವಿಧ ಕಲಾಕೃತಿಗಳನ್ನೂ ಅಲ್ಲಿ ನೋಡಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಾಮಫಲಕದಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಅಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

    ನಾಮಫಲಕದಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಅಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

    – ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದ ಅಪ್ಪು ಅಭಿಮಾನಿಗಳು

    ಶಿವಮೊಗ್ಗ: ನಾಮಫಲಕದಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಅಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

    ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಗ್ರಾಮದ ರಸ್ತೆಗೆ ಗ್ರಾಮಸ್ಥರು, ಅಪ್ಪು ಅಭಿಮಾನಿಗಳು ಹಾಗೂ ಕನ್ನಡಪರ ಸಂಘಟನೆಯವರು ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಿದ್ದರು.

    ಗುರುವಾರ ರಾತ್ರಿ ಕಿಡಿಗೇಡಿಗಳು ಅಪ್ಪು ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ನಾಮಫಲಕದಲ್ಲಿ ಬರೆದಿರುವ ಪುನೀತ್ ರಾಜ್‍ಕುಮಾರ್ ರಸ್ತೆಯ ಹೆಸರನ್ನು ಅಳಿಸಿ ಅವಮಾನ ಎಸಗಿದ್ದಾರೆ. ಇದನ್ನೂ ಓದಿ:  ಮಕ್ಕಳಿಗೆ ಐಸ್ ಕ್ರೀಂ ನೀಡದ್ದಕ್ಕೆ ಅಂಗಡಿ ಮೇಲೆ ದಾಳಿ ಮಾಡಿದ ತಂದೆ

    ಪುನೀತ್ ರಾಜ್‍ಕುಮಾರ್ ಅವರ ನಾಮಫಲಕಕ್ಕೆ ಬಿಳಿ ಬಣ್ಣ ಹಚ್ಚುವ ಮೂಲಕ ಅವರ ಹೆಸರನ್ನು ಅಳಿಸಿ ಅವಮಾನ ಮಾಡಿರುವವರ ವಿರುದ್ಧ ಪೊಲೀಸರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು, ಅಪ್ಪು ಅಭಿಮಾನಿಗಳು ಮತ್ತು ಕನ್ನಡಪರ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.