Tag: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ

  • ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರ ದಂಡು – ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೇ ಪರದಾಟ

    ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರ ದಂಡು – ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೇ ಪರದಾಟ

    ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ (Nandi Hills) ಪ್ರವಾಸಿಗರು ದಂಡು ಹರಿದು ಬಂದಿದ್ದು, ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೇ ಪ್ರವಾಸಿಗರು ಪರದಾಡಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ನಂದಿಗಿರಿಧಾಮಕ್ಕೆ ವೀಕೆಂಡ್ ಹಿನ್ನೆಲೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು (Tourists) ಆಗಮಿಸಿದ್ದರು. ಈ ಹಿನ್ನೆಲೆ ವಾಹನ ದಟ್ಟನೆಯಿಂದಾಗಿ ಗಿರಿಧಾಮ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ಪ್ರವಾಸಿಗರು ಪರದಾಡುವಂತಾಗಿತ್ತು. ಇದನ್ನೂ ಓದಿ: PUBLiC TV Impact – ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

    ಅಲ್ಲದೇ ಪ್ರವೇಶ ಟಿಕೆಟ್ ವಿತರಿಸುವಲ್ಲಿ ಅವ್ಯವಸ್ಥೆ ಉಂಟಾಗಿ, ಟಿಕೆಟ್ ಪಡೆಯಲು ಪ್ರವಾಸಿಗರು ಮುಗಿಬಿದ್ದರು. ಸಾವಿರಾರು ಜನ ಪ್ರವಾಸಿಗರಿಗೆ 2 ಕೌಂಟರ್‌ನಲ್ಲಿ ಮಾತ್ರ ಟಿಕೆಟ್ ವಿತರಿಸಲಾಗಿತ್ತು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಈ ಅವ್ಯವಸ್ಥೆಯ ವಿರುದ್ಧ ಪ್ರವಾಸಿಗರು ಆಕ್ರೋಶ ಹಾಕಿದ್ದಾರೆ.

    ಸುರಿಯುವ ಮಳೆಯನ್ನೂ ಲೆಕ್ಕಿಸದೇ ಟಿಕೆಟ್‌ಗಾಗಿ ಮಹಿಳೆಯರು, ಮಕ್ಕಳು, ಯುವಕ-ಯುವತಿಯರೆನ್ನದೇ ಪ್ರವಾಸಿಗರು ಸಾಲುಗಟ್ಟಿ ನಿಂತಿದ್ದರು.

  • ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ವೈರಮುಡಿ ಉತ್ಸವಕ್ಕೆ ವಿಶೇಷ ಸಾರಿಗೆ ಸೌಲಭ್ಯ

    ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ವೈರಮುಡಿ ಉತ್ಸವಕ್ಕೆ ವಿಶೇಷ ಸಾರಿಗೆ ಸೌಲಭ್ಯ

    ಬೆಂಗಳೂರು: ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಉತ್ಸವಕ್ಕೆ ಆಗಮಿಸುವ ಭಕ್ತರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ.

    ಮಾರ್ಚ್ 26 ರಿಂದ ಆರಂಭವಾಲಿರುವ ಉತ್ಸವಕ್ಕೆ ಬೇರೆ ಬೇರೆ ಪ್ರದೇಶಗಳಿಂದ ಭಕ್ತರು, ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ  ಬೆಂಗಳೂರಿನಿಂದ ಮೇಲುಕೋಟೆಗೆ ಪ್ರಯಾಣಿಸಲು ನಿಗಮದಿಂದ ಎಸಿ ಡಿಲಕ್ಸ್ ವಾಹನ ಸೌಲಭ್ಯದೊಂದಿಗೆ, ಒಂದು ದಿನದ ವ್ಯವಸ್ಥಿತ ಪ್ರವಾಸವನ್ನ ಏರ್ಪಡಿಸಿದೆ.

    ಈ ಕುರಿತು ನಿಗಮ ಪತ್ರಿಕಾ ಪ್ರಕಟಣೆಯನ್ನು ನೀಡಿದ್ದು, ಪ್ರವಾಸ ಕೈಗೊಳ್ಳಲು ಇಚ್ಚಿಸುವವರಿಗೆ ಮುಂಗಡವಾಗಿ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ನಿಗಮದ ಪ್ರಧಾನ ಕಚೇರಿ ಯಶವಂತಪುರ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದ ಕೌಂಟರ್ ಸಂಪರ್ಕಿಸಲು ಕೋರಿದೆ.

    ಟಿಕೆಟ್ ಮುಂಗಡವಾಗಿ ಕಾಯ್ದಿರಿಸಲು ನಿಗಮದ ಏಜೆಂಟ್ ಅವರ ಸಂಪರ್ಕಿಸಿ ಸಹಕಾರ ಪಡೆಯಬಹುದು. ಅಲ್ಲದೇ ನಿಗಮದ ಆನ್ ಲೈನ್ ತಾಣದಲ್ಲೂ ಮುಂಗಡ ಬುಕಿಂಗ್ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದೆ. ಪ್ರತಿ ಪ್ರಯಾಣಿಕರಿಗೆ 765 ರೂ. ದರ ನಿಗದಿ ಪಡಿಸಿದೆ. ಆನ್‍ಲೈನ್ ನಲ್ಲಿ  kstdc.co  ವೆಬ್‍ಸೈಟಿಗೆ ತೆರಳಿ ಟಿಕೆಟ್ ಬುಕ್ ಮಾಡಬಹುದು.