ವಿಜಯಪುರ: 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ವಿಜಯಪುರಕ್ಕೆ (Vijayapura) ಬಂಪರ್ ಗಿಫ್ಟ್ ನೀಡಲಾಗಿದ್ದು, ಜಿಲ್ಲೆಯ ಬಹುನಿರೀಕ್ಷಿತ ವಿಮಾನ ನಿಲ್ದಾಣ ಈ ವರ್ಷದಿಂದ ಕಾರ್ಯಾರಂಭಿಸಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ಪಲ್ಟಿ – 18 ಮಂದಿಗೆ ಗಾಯ
ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಜಿಲ್ಲೆಯ ಜೀವನದಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತದ 3 ಅಡಿ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ತೀರ್ಪಿನ ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿ, ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕೋಲಾರ: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ ಎಂದು ಕೋಲಾರದಲ್ಲಿ (Kolar) ಕಾಂಗ್ರೆಸ್ (Congress) ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಮಾಡಿದರು. ಬಜೆಟ್‌ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು, ಕೆಜಿಎಫ್‌ನಲ್ಲಿ ಹೈಟೆಕ್ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ರಸ್ತೆ ಅಭಿವೃದ್ದಿಗೆ 300 ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 556 ಕೋಟಿ ರೂ. ನೀಡಿರುವ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್
ಕೋಲಾರಕ್ಕೆ ಯಾವುದೇ ಅನುದಾನ ನೀಡಿಲ್ಲ, ಯಾವುದೇ ಅಭಿವೃದ್ಧಿ ಮಾಡಿಲ್ಲ ಎನ್ನುವ ವಿರೋಧಿಗಳೇ ಇತ್ತ ನೋಡಿ ಎಂದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡುವ ಮೂಲಕ ಟಾಂಗ್ ನೀಡಿದರು. ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ, ಬಜೆಟ್‌ನಲ್ಲಿ ಹೆಚ್ಚು ಯೋಜನೆಗಳನ್ನ ತಂದುಕೊಟ್ಟ ಜಿಲ್ಲೆಯ ಸಚಿವರಿಗೆ, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ ಸಾಧ್ಯತೆ
ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ 16 ನೇ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಹಾಗೂ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು. ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ 200 ಹಾಗೂ ಕೊಡಗಿಗೆ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ.
ವೈದ್ಯಕ್ಷೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿವೆ?
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು
ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು. ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್
ಶಿಕ್ಷಣ ಕ್ಷೇತ್ರ:
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ, ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದನ್ನೂ ಓದಿ: ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ
ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಕೆಕೆಆರ್‌ಡಿಬಿ ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳಿಗೆ ನನ್ನ ಧನ್ಯವಾದಗಳು. ಚಿತ್ರರಂಗದ ಮೇಲೆ ಅವರಿಗೆ ಪ್ರೀತಿಯಿದೆ. ಅವರು ಕೇಳಿದ್ದೆಲ್ಲಾ ಕೊಡುತ್ತಲೇ ಬಂದಿದ್ದಾರೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು (Narasimhalu) ಕೃತಜ್ಞತೆ ಸಲ್ಲಿಸಿದರು.
ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ಟಿಕೆಟ್ ದರ ನಿಗದಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 2 ಬಾರಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಬಜೆಟ್‌ನಲ್ಲಿ ಅನೌನ್ಸ್ ಮಾಡಿದ್ದಾರೆ. ತುಂಬಾ ಸಂತೋಷವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್
1000 ರಿಂದ 1500 ರೂ. ಟಿಕೆಟ್ ದರ ಇದ್ದಾಗ ಸಾಮಾನ್ಯ ಜನ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಒಂದೇ ರೇಟ್ ಆದರೆ ಎಲ್ಲರಿಗೂ ನ್ಯಾಯ ಒದಗಿಸಿದಂತಾಗುತ್ತದೆ. ಏಕರೂಪ ಟಿಕೆಟ್ ದರ ನೆರೆ ರಾಜ್ಯಗಳಲ್ಲಿ ಈ ಮೊದಲೇ ಇತ್ತು. ನಮ್ಮ ರಾಜ್ಯದಲ್ಲಿ ಈಗ ಜಾರಿಗೆ ಬರುತ್ತಿದೆ. ಮೈಸೂರಿನಲ್ಲಿ ಫಿಲ್ಮ್ ಸಿಟಿ ಅನೌನ್ಸ್ ಮಾಡಿದ್ದಾರೆ. ಇಡೀ ಚಿತ್ರರಂಗ ಸಿಎಂಗೆ ಅಭಿನಂದನೆ ಸಲ್ಲಿಸುತ್ತದೆ ಎಂದರು. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್
ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರು: ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಇಂಡಸ್ಟ್ರಿ ಲಿಂಕೆಜ್ ಸೆಲ್ ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು 2025-26ನೇ ಬಜೆಟ್‌ನಲ್ಲಿ ತಿಳಿಸಿದರು.
ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ‘ಯುವನಿಧಿ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದರು. ಇದನ್ನೂ ಓದಿ: Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ
ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂಪಾಯಿ ಮತ್ತು ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ನೀಡಲಾಗುತ್ತದೆ. ಯುವ ನಿಧಿ ಯೋಜನೆಯಿಂದ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಗೆ 2 ವರ್ಷಗಳ ನಂತರ ಅಥವಾ 2 ವರ್ಷದೊಳಗೆ ಕೆಲಸ ಸಿಕ್ಕರೆ ತಕ್ಷಣವೇ ನಿರುದ್ಯೋಗ ಭತ್ಯೆ ನಿಲ್ಲಿಸಲಾಗುತ್ತದೆ. ಇದನ್ನೂ ಓದಿ: ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂ.ಗೆ ಸೀಮಿತ – ಕನ್ನಡ ಚಿತ್ರಗಳಿಗೆ OTT
ನಮ್ಮ ಸರ್ಕಾರದ ಹಿಂದಿನ ಆಡಳಿತಾವಧಿಯಲ್ಲಿ, ಮುಖ್ಯಮಂತ್ರಿಗಳು ಕೌಶಲ್ಯ ಕರ್ನಾಟಕ ಪ್ರಾರಂಭಿಸಲಾಗಿತ್ತು. ಯೋಜನೆಯನ್ನು (ಸಿಎಂಕೆಕೆವೈ) ಪ್ರಾರಂಭಿಸಲಾಗಿತ್ತು. ಪ್ರಸ್ತುತ, ರಾಜ್ಯದ ಯುವಕರಿಗೆ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು ಯೋಜನೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಸಿಎಂಕೆಕೆವೈ 2.0 ಅನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ಸಾಂಪ್ರದಾಯಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಈ ಕೆಳಗಿನ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು
ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು `ನನ್ನ ವೃತ್ತಿ, ನನ್ನ ಆಯ್ಕೆ’ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್
ವಿಶ್ವ ಕೌಶಲ್ಯ ಸ್ಪರ್ಧೆಯ ಪೂರ್ವಸಿದ್ಧತೆಗಾಗಿ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಇಂಡಿಯಾ ಸ್ಕಿಲ್-2026 ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುತ್ತದೆ. ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು 2,000 ಅಭ್ಯರ್ಥಿಗಳಿಗೆ ಅಗತ್ಯವಿರುವ ಟೂಲ್‌ಕಿಟ್‌ಗಳೊಂದಿಗೆ ಅಲ್ಪಾವಧಿ ತರಬೇತಿಯನ್ನು ನೀಡಲಾಗುವುದು. ಲಂಬಾಣಿ ಜನಾಂಗದ ಕಸೂತಿ ಕಲೆಯ ಬಗ್ಗೆ ತರಬೇತಿಯನ್ನು 1.000 ಅಭ್ಯರ್ಥಿಗಳಿಗೆ ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿನ ಕೌಶಲ್ಯ ತರಬೇತಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದರು. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ
ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಅಗತ್ಯತೆಗಳ ಪೂರೈಕೆ ಮತ್ತು ಭದ್ರತೆ ಒದಗಿಸಿ, ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ `ಅಕ್ಕ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪಿಸಲಾಗುವುದು. `ಗೃಹಲಕ್ಷ್ಮಿ’ ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯಮಟ್ಟದಲ್ಲಿ `ಅಕ್ಕ ಕೋ-ಆಪರೇಟಿವ್ ಸೊಸೈಟಿ’ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದರು.
ಬೆಂಗಳೂರು: ಮಲ್ಟಿಪ್ಲೆಕ್ಸ್‌ಗಳ ಬೇಕಾಬಿಟ್ಟಿ ಟಿಕೆಟ್ ದರ ಏರಿಕೆಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದೆ. ರಾಜ್ಯ ಸರ್ಕಾರ ನುಡಿದಂತೆ ನಡೆದರೆ ಇನ್ನು ಮುಂದೆ ಮಲ್ಟಿಪ್ಲೆಕ್ಸ್‌ನಲ್ಲಿ ನೀವು 200 ರೂಪಾಯಿಗೆ ಸಿನೆಮಾ ನೋಡಬಹುದು. ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ (Multiplex) ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು 2025-26ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಹಿಂದಿನಿಂದಲೂ ಟಿಕೆಟ್ ದರ ನಿಗದಿ ಪಡಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಅನ್ಯ ಭಾಷೆಗಳ ಚಿತ್ರ ರಿಲೀಸ್ ಆದಾಗಂತೂ ಬೇಕಾಬಿಟ್ಟಿಯಾಗಿ ಟಿಕೆಟ್ ದರ ಏರಿಕೆ ಮಾಡುತ್ತಿದ್ದರು. ಈಗ ಕರ್ನಾಟಕ ಸರ್ಕಾರ 200 ರೂ. ದರ ನಿಗದಿ ಮಾಡಲು ಮುಂದಾಗಿದೆ. ಇದನ್ನೂ ಓದಿ: Karnataka Budget 2025 LIVE: ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ
ಚಲನಚಿತ್ರ ಭಂಡಾರ: ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯಗಳನ್ನು ಸಿನಿಮಾ ಕ್ಷೇತ್ರಕ್ಕೆ ಸರ್ಕಾರ ಒದಗಿಸಲಿದೆ. ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್-ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಷ್ಟಿಸಲು ಕ್ರಮಕೈಗೊಳ್ಳಲಾಗುವುದು. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು 150 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಚಿತ್ರನಗರಿಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ. ಜೊತೆಗೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಛಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.
ಪತ್ರಕರ್ತರಿಗೆ ಸಿಎಂ ಮಾಧ್ಯಮ ಸಂಜೀವಿನಿ: ಸಂಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ 12,000 ರೂ. ಸಂಬಳವನ್ನು 15,000 ರೂ.ಗಳಿಗೆ ಹಾಗೂ ಕುಟುಂಬಕ್ಕೆ ನೀಡುವ ಸಂಬಳವನ್ನು 6,000 ರೂ.ಗಳಿಂದ 7,500 ಹೆಚ್ಚಿಸಲಾಗುವುದು. ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು (Siddaramaiah) ಬಜೆಟ್ ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಹೇಳಿದ್ದೇನು?
15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ ತೆರಿಗೆ ಹಂಚಿಕೆಯಲ್ಲಿ ಅತಿ ಹೆಚ್ಚು ನಷ್ಟವನ್ನು ಅನುಭವಿಸಿದ ರಾಜ್ಯ ಕರ್ನಾಟಕ. 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ಶಿಫಾರಸ್ಸು ಮಾಡಿದ್ದ ತೆರಿಗೆ ಪಾಲು ಶೇ. 4.713 ರಿಂದ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.3.647ಕ್ಕೆ ಇಳಿಕೆಯಾಯಿತು. ಇದರಿಂದಾಗಿ ರಾಜ್ಯದ ತೆರಿಗೆ ಹಂಚಿಕೆಯು ಶೇ.23ರಷ್ಟು ಕುಸಿತವಾಗಿ, ರಾಜ್ಯವು ವಾರ್ಷಿಕ ಅಂದಾಜು 12 ಸಾವಿರ ಕೋಟಿ ರೂ. ನಷ್ಟ ಅನುಭವಿಸಬೇಕಾಯಿತು. ಅಲ್ಲದೇ, 15ನೇ ಹಣಕಾಸು ಆಯೋಗವು ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ 5,495 ಕೋಟಿ ರೂ.ಗಳ ವಿಶೇಷ ಅನುದಾನ, ಬೆಂಗಳೂರಿನಲ್ಲಿ ಕೆರೆಗಳ ಸಂರಕ್ಷಣೆಗಾಗಿ 3,000 ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿಗೆ 3,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ.ಗಳನ್ನು ತನ್ನ ವರದಿಯಲ್ಲಿ ಶಿಫಾರಸ್ಸು ಮಾಡಿತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಬಿಡುಗಡೆ ಮಾಡಿರುವುದಿಲ್ಲ. 2023-24ನೇ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಭಾಷಣದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಘೋಷಿಸಿತ್ತು. ಆದರೆ, ಕೇಂದ್ರ ಸರ್ಕಾರವು ಈವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿರುವುದಿಲ್ಲ. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್
ರಾಜ್ಯಗಳಿಗೆ ತೆರಿಗೆ ಹಂಚಿಕೆಯನ್ನು ಹೆಚ್ಚಿಸುವ ಬಗ್ಗೆ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯವು ಪ್ರಬಲವಾಗಿ ತನ್ನ ವಾದವನ್ನು ಪ್ರತಿಪಾದಿಸಿದೆ. ಆರೋಗ್ಯಕರ ಮತ್ತು ಸಾಮರಸ್ಯದ ಆರ್ಥಿಕ ಒಕ್ಕೂಟ ರೂಪಿಸಲು ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ಸಮಾನತೆ ಮತ್ತು ದಕ್ಷತೆಯನ್ನು ಆಧರಿಸಿ ಹಂಚಿಕೆ ಮಾಡುವಂತೆ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿದೆ. ಬಲಿಷ್ಠ ಆರ್ಥಿಕತೆ ಹೊಂದಿರುವ ರಾಜ್ಯಗಳು ಬಡ ರಾಜ್ಯಗಳಿಗೆ ನೆರವಾಗಲು ಬದ್ಧರಾಗಿದ್ದರೂ, ಅದು ತನ್ನ ನಾಗರೀಕರ ಹಿತ ಕಾಯುವಲ್ಲಿ ಅಥವಾ ಆರ್ಥಿಕ ಪ್ರಗತಿಗೆ ಕುಂದುಂಟು ಮಾಡುವಂತಿರಬಾರದು. ಆದಾಯ-ಅಂತರ ಮತ್ತು ತಲಾ ಆದಾಯ ನಿರ್ಧರಿಸುವ ಮಾನದಂಡಗಳಲ್ಲಿಯೂ ಲೋಪಗಳಿರುವ ಹಿನ್ನೆಲೆಯಲ್ಲಿ, ಈ ಮಾನದಂಡಗಳಿಗೆ ಕಡಿಮೆ ಅಂಕ ನೀಡುವಂತೆ ಮನವಿ ಮಾಡಿದ್ದೇವೆ. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ
ಕರ್ನಾಟಕ ರಾಜ್ಯವು, ಸುಸ್ಥಿರ ಋಣ ನಿರ್ವಹಣೆ ಮತ್ತು ವಿತ್ತೀಯ ಶಿಸ್ತು ಪಾಲಿಸುವ ಮೂಲಕ ವಿತ್ತೀಯ ಹೊಣೆಗಾರಿಕೆಯನ್ನು ಉತ್ತಮವಾಗಿ ನಿಭಾಯಿಸಿದೆ. ನಮ್ಮ ರಾಜ್ಯದಲ್ಲಿ ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನು ಕೇಂದ್ರ ಸರ್ಕಾರವು ಅನುಷ್ಠಾನಕ್ಕೆ ತರುವ ಮುನ್ನವೇ ಜಾರಿಗೆ ತರಲಾಯಿತು. ಅಲ್ಲದೆ, ರಾಜ್ಯದ ಒಟ್ಟು ಹೊಣೆಗಾರಿಕೆಗಳಲ್ಲಿ ಆಯವ್ಯಯದ ಹೊರಗಿನ ಸಾಲಗಳನ್ನು ಪರಿಗಣಿಸಿದ ಮೊದಲ ರಾಜ್ಯ ಕರ್ನಾಟಕ. ಆದಾಗ್ಯೂ, ಜಿ.ಎಸ್.ಟಿ ಜಾರಿಯಿಂದ ರಾಜ್ಯಕ್ಕೆ ಆದ ರಾಜಸ್ವ ನಷ್ಟವನ್ನು ಸಂಪೂರ್ಣವಾಗಿ ಸರಿದೂಗಿಸಲು ಕೇಂದ್ರ ಸರ್ಕಾರ ವಿಫಲವಾದ ಕಾರಣ ಮತ್ತು ಕೇಂದ್ರ ಸರ್ಕಾರ ವಿಧಿಸುವ ಸೆಸ್‌ಗಳು ಮತ್ತು ಸರ್‌ಚಾರ್ಜ್ಗಳನ್ನು ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಪಾಲಿನಲ್ಲಿ ಪರಿಗಣಿಸದಿರುವುದರಿಂದ ಹಾಗೂ 15ನೇ ಹಣಕಾಸು ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ ರಾಜ್ಯವು ವಿತ್ತೀಯ ಸವಾಲುಗಳನ್ನು ಎದುರಿಸುವಂತಾಯಿತು. ಇದನ್ನೂ ಓದಿ: ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ
ಕರ್ನಾಟಕದ ಆರ್ಥಿಕತೆಯಲ್ಲಿ ಸೇವಾ ವಲಯದ ಕೊಡುಗೆಯೂ ಪ್ರಮುಖವಾಗಿದ್ದು, ಒಟ್ಟು ಮೌಲ್ಯವರ್ಧನೆಯಲ್ಲಿ ಸೇವಾ ವಲಯಗಳ ಪಾಲು ಶೇ.66 ರಷ್ಟಿದೆ. 2024-25ನೇ ಸಾಲಿಗೆ ರಾಜ್ಯದಲ್ಲಿ ಸೇವಾ ವಲಯವು ಗಣನೀಯವಾಗಿ ಬೆಳವಣಿಗೆಯಾಗಿದ್ದು, ಶೇ.8.9ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ದೇಶದ ಆರ್ಥಿಕತೆಯಲ್ಲಿನ ಸೇವಾ ವಲಯದ ಬೆಳವಣಿಗೆ ಶೇ.7.2ಕ್ಕಿಂತ ಹೆಚ್ಚಾಗಿದೆ.
ಆರ್ಥಿಕ ಬೆಳವಣಿಗೆ ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಜಿಸಲು ಸರ್ಕಾರವು ಮಾಹಿತಿ ತಂತ್ರಜ್ಞಾನ, ಪ್ರವಾಸೋದ್ಯಮ, ಜೈವಿಕ ತಂತ್ರಜ್ಞಾನ ಸೇರಿದಂತೆ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಹಲವು ನೀತಿಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ಮಾನವ ಸಂಪನ್ಮೂಲವನ್ನು ಸಮರ್ಥವಾಗಿ ಬಳಸುವುದರ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಗಳನ್ನು ಉತ್ತೇಜಿಸಲಿವೆ. ಸರ್ಕಾರವು ಜಾರಿಗೆ ತಂದಿರುವ ಈ ನೀತಿಗಳಿಂದ ರಾಜ್ಯದಲ್ಲಿ ಅಂದಾಜು 1 ಲಕ್ಷ ಕೋಟಿ ರೂ. ಹೂಡಿಕೆಯನ್ನು ನಿರೀಕ್ಷಿಸಲಾಗಿದೆ. ಈ ಉದ್ದೇಶಕ್ಕೆ ಸರ್ಕಾರವು 13,500 ಕೋಟಿ ರೂ. ಸಹಾಯಧನ ಮತ್ತು ಆರ್ಥಿಕ ನೆರವು ನೀಡಲು ಸಹಮತಿಸಿದೆ. ಇದನ್ನೂ ಓದಿ: ಪ್ರಾಜೆಕ್ಟ್ ಮೆಜೆಸ್ಟಿಕ್ – ಹೈಟೆಕ್ ಆಗಲಿದೆ ಬಸ್ ನಿಲ್ದಾಣ
ನಮ್ಮ ಸರ್ಕಾರವು ಆರ್ಥಿಕತೆಯ ಬೆಳವಣಿಗೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು, 2024-25ರ ಡಿಸೆಂಬರ್ ಅಂತ್ಯದವರೆಗೆ 4.4 ಬಿಲಿಯನ್ ಡಾಲರ್ ಮೌಲ್ಯದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿದೆ.
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಯಲವನ್ನು ಡಾ.ಮನಮೋಹನ್ ಸಿಂಗ್ (Manmohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ (CM Siddaramaiah) 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು. ಇದನ್ನೂ ಓದಿ: Karnataka Budget 2025 LIVE: ಆಯುಷ್ಮಾನ್ ಭಾರತದಡಿ 5 ಲಕ್ಷ ಚಿಕಿತ್ಸಾ ವೆಚ್ಚ
ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದರು.ಇದನ್ನೂ ಓದಿ: ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ