Tag: ಕರ್ನಾಟಕ ಲೋಕಾಯುಕ್ತ

  • ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ; 1 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಕೇಂದ್ರ ಸಚಿವ ಹೆಚ್‌ಡಿಕೆ

    ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ; 1 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಕೇಂದ್ರ ಸಚಿವ ಹೆಚ್‌ಡಿಕೆ

    – ರಾಜ್ಯ ಸರ್ಕಾರ V/S ರಾಜಭವನದ ಸಂಘರ್ಷ ತಾರಕಕ್ಕೆ

    ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಾದ ಹೊತ್ತಲ್ಲೇ, ಕಾಕತಾಳಿಯ ಎಂಬಂತೆ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ (Gangenahalli Denotification Case) ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು (HD Kumaraswamy) ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ರು.

    ಲೋಕಾಯುಕ್ತ (Karnataka lokayukta) ನೊಟೀಸ್ ಹಿನ್ನೆಲೆಯಲ್ಲಿ ದೆಹಲಿಯಿಂದ ಸಂಜೆ ಬೆಂಗಳೂರಿಗೆ ಬಂದಿಳಿದ ಕೇಂದ್ರ ಸಚಿವರು, ನೇರವಾಗಿ ಲೋಕಾಯುಕ್ತ ಕಚೇರಿಗೆ ತೆರಳಿ 1 ಗಂಟೆ ವಿಚಾರಣೆ ಎದುರಿಸಿದ್ರು. ಇದನ್ನೂ ಓದಿ: Bengaluru | ಬಿಎಂಟಿಸಿ ಬಸ್‌ಗೆ ಮತ್ತೊಂದು ಜೀವ ಬಲಿ – ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಸಾವು!

    ನಾನು ಅಧಿಕಾರದಲ್ಲಿದ್ದಾಗ ಯಾವುದೇ ತಪ್ಪುಮಾಡಿಲ್ಲ. ಸ್ವಯಂಪ್ರೇರಣೆಯಿಂದಲೇ ವಿಚಾರಣೆಗೆ ಹಾಜರಾಗಿದ್ದೇನೆ. ಮತ್ತೆ ವಿಚಾರಣೆಗೆ ಕರೆದಿಲ್ಲ ಅಂದ್ರು. ಕಳೆದ ವಾರವಷ್ಟೇ ಇದೇ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ರು. ಬಿಎಸ್‌ವೈ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿದ್ದರು.

    ರಾಜ್ಯ ಸರ್ಕಾರ V/S ರಾಜಭವನ ಸಂಘರ್ಷ ಜೋರು:
    ರಾಜ್ಯ ಸರ್ಕಾರ ಹಾಗೂ ರಾಜಭವನದ ನಡುವಿನ ಸಂಘರ್ಷ ತಾರಕಕ್ಕೇರಿದೆ. ಮಾಹಿತಿ ಸೋರಿಕೆ ವಿಚಾರವಾಗಿ ರಾಜಭವನದ ಮೇಲೆಯೇ ಸಂಶಯ ವ್ಯಕ್ತಪಡಿಸಿದೆ. ಈ ಹೊತ್ತಲ್ಲೇ, ರಾಜಭವನದ ಅಧಿಕಾರಿಗಳ ವಿರುದ್ಧ ತನಿಖೆ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಐಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರಿದ್ದ ವಿಮಾನ ಟೇಕಾಫ್ ಆಗ್ತಿದ್ದಂತೆಯೇ ಸೆಕ್ಸ್ ಶುರು ಹಚ್ಕೊಂಡ ಜೋಡಿಗೆ ಕೋರ್ಟ್ ಶಿಕ್ಷೆ

    ಆಗಸ್ಟ್ 20ರಂದು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪತ್ರ ಬರೆದಿದ್ದ ರಾಜ್ಯಪಾಲರು, ಮಾಹಿತಿ ಸೋರಿಕೆ ಬಗ್ಗೆ ವರದಿ ಕೇಳಿದ್ದರು. ಹೀಗಾಗಿ ಈ ಬಗ್ಗೆ ಆಂತರಿಕ ತನಿಖೆ ನಡೆಸಿದ್ದ ಲೋಕಾಯುಕ್ತ ಸಂಸ್ಥೆ, ಮಾಹಿತಿ ಸೋರಿಕೆಯಲ್ಲಿ ಎಸ್‌ಐಟಿ ಪಾತ್ರ ಇಲ್ಲ ಎಂದು ವರದಿ ನೀಡಿದೆ. ಜೊತೆಗೆ, ರಾಜಭವನದ ಸಿಬ್ಬಂದಿಯ ತನಿಖೆ ನಡೆಸಲು ಅನುಮತಿ ನೀಡುವಂತೆ ಕೋರಿದೆ. ಇದು ಚರ್ಚೆಗೆ ಗ್ರಾಸವಾಗಿದೆ. ರಾಜಭವನದ ಮೇಲೆ ಸಮರ ಸಾರಿರೋ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಆದ್ರೆ, ರಾಜಭವನದಿಂದಲೇ ಮಾಹಿತಿ ಸೋರಿಕೆ ಆಗಿರಬಹುದು ಎಂದು ಗೃಹ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಾರತ-ಬಾಂಗ್ಲಾ 2ನೇ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ – ಮೊದಲ ದಿನದಂತ್ಯಕ್ಕೆ ಬಾಂಗ್ಲಾದೇಶ 107ಕ್ಕೆ 3 ವಿಕೆಟ್‌

  • ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ 18 ಸಾವಿರಕ್ಕೂ ಹೆಚ್ಚು ಕೇಸ್‌

    ಲೋಕಾಯುಕ್ತದಲ್ಲಿ ವಿಚಾರಣೆಗೆ ಬಾಕಿ ಉಳಿದಿವೆ 18 ಸಾವಿರಕ್ಕೂ ಹೆಚ್ಚು ಕೇಸ್‌

    ಬೆಂಗಳೂರು: ರಾಜ್ಯ ಲೋಕಾಯುಕ್ತ (Karnataka Lokayukta) ಸಂಸ್ಥೆಯಲ್ಲಿ ಸಾವಿರಾರು ಕೇಸ್‌ಗಳು ಬಾಕಿ ಉಳಿದಿರುವುದು ಕಂಡುಬಂದಿದೆ. ಸುಮಾರು 18 ಸಾವಿರಕ್ಕೂ ಹೆಚ್ಚು ಕೇಸ್‌ಗಳು (Lokayukta Case File) ವಿಚಾರಣೆ ಆಗದೇ, ಕಡತಗಳು ಮೂಲೆ ಸೇರಿವೆ.

    ಕಳೆದ ಜುಲೈ ತಿಂಗಳ ಅಂತ್ಯದ ವರೆಗೆ 18 ಸಾವಿರ ಕೇಸ್‌ಗಳು ಲೋಕಾಯುಕ್ತದದಲ್ಲಿ ಬಾಕಿಯಿವೆ ಎಂದು ಕೇಸ್‌ ಡಿಟೇಲ್ಸ್‌ನಲ್ಲಿ ತಿಳಿದುಬಂದಿದೆ. ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯೇ ಕೊಟ್ಟಿರುವ ಕೇಸ್ ಡಿಟೇಲ್ಸ್‌ ಪ್ರತಿ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಾಟಕ ಕಂಪನಿಯನ್ನು ತಂದು ನಾಟಕ ತೋರಿಸಿ ಹೋಗಿದ್ದಾರೆ: ಛಲವಾದಿ ಲೇವಡಿ

    ಎಸಿಬಿ ರದ್ದಾದ ಬಳಿಕ ಎಲ್ಲಾ ಕೇಸ್‌ಗಳು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿತ್ತು. ಹಾಗಾಗಿ ಎಸಿಬಿ + ಲೋಕಾಯುಕ್ತದಲ್ಲಿ ದಾಖಲಾದ ಕೇಸ್‌ಗಳ ಪೈಕಿ ಸುಮಾರು 18 ಸಾವಿರ ಕೇಸ್‌ಗಳು ವಿಚಾರಣೆಯಾಗದೇ ಬಾಕಿ ಉಳಿದಿದೆ. ದೂರು ದಾಖಲಾಗಿದ್ದರೂ ಕೆಲವು ಕಾರಣಗಳಿಂದ ವಿಚಾರಣೆ ಬಾಕಿ ಉಳಿದಿದೆ ಅಂತ ಲೋಕಾಯುಕ್ತ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಿಜ್ಬುಲ್ಲಾ ಮೇಲೆ ಫಿಲ್ಮಿ ಸ್ಟೈಲ್‌ ದಾಳಿ – ಒಂದೇ ಸಮಯದಲ್ಲಿ 2 ಸಾವಿರ+ ಪೇಜರ್‌ಗಳು ಸ್ಫೋಟಗೊಂಡಿದ್ದು ಹೇಗೆ?

    ಲೋಕಾಯುಕ್ತರ ಮುಂದೆ ಎಷ್ಟು ಕೇಸ್ ಬಾಕಿ!?
    ಮಾನ್ಯ ಲೋಕಾಯುಕ್ತರು- 5495 ಕೇಸ್ ಬಾಕಿ.
    ಉಪ ಲೋಕಾಯುಕ್ತ 1- 7028 ಕೇಸ್ ಬಾಕಿ.
    ಉಪ ಲೋಕಾಯುಕ್ತ 2- 6363 ಕೇಸ್ ಬಾಕಿ.
    ಒಟ್ಟು – 18,886 ಕೇಸ್‌ ಬಾಕಿ

  • ಮುಡಾ ನಿವೇಶನ ಹಂಚಿಕೆ ಪ್ರಕರಣ – ಲೋಕಾಯುಕ್ತಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ದೂರು

    ಮುಡಾ ನಿವೇಶನ ಹಂಚಿಕೆ ಪ್ರಕರಣ – ಲೋಕಾಯುಕ್ತಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ದೂರು

    – ಮುಡಾ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ದೂರು

    ಬೆಂಗಳೂರು: ನಿವೇಶನ ಅಕ್ರಮ ಆರೋಪ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತರ ವಿರುದ್ಧ ಬಿಜೆಪಿ ಲೋಕಾಯುಕ್ತ (Lokayukta) ಮೆಟ್ಟಿಲೇರಿದೆ. ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಿರುವ ಹಿಂದಿನ ಆಯುಕ್ತರುಗಳಾದ ನಟೇಶ್ ಮತ್ತು ಜಿ.ಟಿ ದಿನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಬಂಧಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ (TS Srivatsa) ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

    ಪ್ರಾಧಿಕಾರದ ನಿವೇಶನಗಳನ್ನು (MUDA Site) ಕಾನೂನು ಬಾಹಿರವಾಗಿ ಹಾಗೂ ಅಕ್ರಮವಾಗಿ 50:50 ಅನುಪಾತದಲ್ಲಿ ಸರಿ ಸುಮಾರು 5.00 ಲಕ್ಷ ಚದರ ಅಡಿಗೂ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದು ಕಂಡುಬಂದಿದೆ. ಇಂತಹ ಅಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 5 ಸಾವಿರ ಕೋಟಿ ರೂ. ನಷ್ಟ ಉಂಟಾಗಿದೆ. ಇದನ್ನೂ ಓದಿ: MUDA Scam | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ – ಕೋವಿಡ್ ಹಗರಣ ವರದಿಗೆ ಉತ್ತರ ಕೊಡ್ತೇವೆ: ಬೊಮ್ಮಾಯಿ

    ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವಂತಹ ಪ್ರಾಧಿಕಾರದ ಈ ಹಿಂದಿನ ಆಯುಕ್ತರಗಳಾದ ನಟೇಶ್ ಮತ್ತು ಜಿ.ಟಿ. ದಿನೇಶ್ ಕುಮಾರ್ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವಂತಹ ಇತರೆ ಅಧಿಕಾರಿಗಳ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಶಾಸಕ ಟಿ.ಎಸ್ ಶ್ರೀವತ್ಸ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಾ ಮಳೆಗೆ ಅವಾಂತರ – ಸೋಮವಾರ ಬೀದರ್‌ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

    ಜತೆಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧವೂ ಕ್ರಮಕ್ಕೆ ಶಾಸಕ ಶ್ರೀವತ್ಸ ದೂರಿನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜಲ ಜೀವನ್ ಮಿಷನ್‌ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡ‌ರ್ ಹಣ ಮುಟ್ಟುಗೋಲು

  • ಅಕ್ರಮ ಕಾಮಗಾರಿ – ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ!

    ಅಕ್ರಮ ಕಾಮಗಾರಿ – ಲೋಕಾಯುಕ್ತಕ್ಕೆ ದೂರು ನೀಡಿದ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ!

    ಬೆಂಗಳೂರು: ಅಕ್ರಮ ಕಾಮಗಾರಿ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರೊಬ್ಬರಿಗೆ ಅಧಿಕಾರಿಗಳು ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

    ಕರ್ನಾಟಕ ಇನ್ಫ್ರಾಸ್ಟ್ರಕ್ಚರ್‌ ರೂರಲ್ ಡವಲಪ್ಮೆಂಟ್ ಇಲಾಖೆಯಲ್ಲಿ ಅಕ್ರಮ ಕಾಮಗಾರಿ ನಡೆದಿದೆ ಅಂತಾ ಗುತ್ತಿಗೆದಾರ ಮೋಹನ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ವಿಚಾರ ತಿಳಿದ ಅಧಿಕಾರಿಗಳು ಮೋಹನ್ ಕುಮಾರ್‌ಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಮಾಲ್ಡೀವ್ಸ್‌ನಿಂದ ಭಾರತೀಯ ಸೇನೆಯನ್ನ ಹಿಂತೆಗೆದುಕೊಳ್ಳಿ: ಭಾರತಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷ ಕರೆ

    ಈ ಸಂಬಂಧ ಮೋಹನ್ ಕುಮಾರ್ ಕೋರ್ಟ್ನಲ್ಲಿ ಪಿಸಿಆರ್ ದಾಖಲಿಸಿದ್ದಾರೆ. ಕೋರ್ಟ್ ಸೂಚನೆ ಮೇರೆಗೆ ನಗರದ ಅನ್ನಪೋರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಬ್ಲೂ ಫ್ಲ್ಯಾಗ್ ಖ್ಯಾತಿಯ ಶುಭ್ರ, ಸುಂದರ ಉಡುಪಿಯ ಪಡುಬಿದ್ರೆ ಬೀಚ್‌!

  • ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ; ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್‌

    ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ; ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್‌

    ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರು (Mysuru) ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ (Lokayukta Raid) ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ.

    ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ (Government College Lecturer) ಮಹದೇವಸ್ವಾಮಿ ವಿರುದ್ಧ ಕುಟುಂಬದ ಹೆಸರಿನಲ್ಲಿ MS Group ಕಂಪನಿ ನಡೆಸುತ್ತಿದ್ದು, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆಸ್ತಿ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: Lokayukta Raid: ತಿಮ್ಮರಾಜಪ್ಪ ಒಡೆತನದ ಬಂಗಲೆಗಳನ್ನು ನೋಡಿ ಅಧಿಕಾರಿಗಳೇ ದಂಗಾದ್ರು!

    ಲೋಕಾಯುಕ್ತ ADGP ಪ್ರಶಾಂತ್ ಕುಮಾರ್ ಹಾಗೂ IGP ಸುಬ್ರಮಣ್ಣೀಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಡಿಎಸ್‌ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.

    ಹೆಸರಿಗೆ ಮಾತ್ರ ಸರ್ಕಾರಿ ಕಾಲೇಜು ಉಪನ್ಯಾಸಕ:
    ನಂಜನಗೂಡಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕನಾಗಿರುವ ಮಹದೇವಸ್ವಾಮಿ ಹೆಸರಿಗಷ್ಟೆ ಉಪನ್ಯಾಸಕ, ಮಾಡೊದೆಲ್ಲ ಬೇರೆ ವ್ಯವಹಾರ ಎಂಬುದು ಸ್ಪಷ್ಟವಾಗಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ಮಹದೇವಸ್ವಾಮಿಗೆ ಸೇರಿದ ಮನೆ, ಕಚೇರಿ, ಶಾಲೆ, ವಾಣಿಜ್ಯ ಕಟ್ಟಡ‌ದ ಮೇಲೆ ದಾಳಿ ನಡೆಸಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ

    ಮೈಸೂರಿನ ಜೆ.ಪಿ ನಗರಲ್ಲಿ ವಾಸವಿದ್ದ ಮಹದೇವಸ್ವಾಮಿಗೆ ಸೇರಿದ ಮೈಸೂರಿನ ಗುರುಕುಲ ವಿದ್ಯಾಸಂಸ್ಥೆ, ಸ್ಟೀಲ್ ಅಂಗಡಿಗಳು ಹಾಗೂ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿಯಾಗಿದೆ. ಮೈಸೂರಿನಲ್ಲಿ ಸ್ಟೀಲ್ ಹಾಗೂ ಬಟ್ಟೆ ಅಂಗಡಿ, ನಂಜನಗೂಡು ಸ್ಟೀಲ್ ಅಂಗಡಿ, ಕೆ.ಆರ್.ನಗರದ ಸ್ಟೀಲ್ ಅಂಗಡಿ ಮೇಲೆ ದಾಳಿಯಾಗಿದೆ. ಅಲ್ಲದೇ ಈತ ತನ್ನ ಕಾರುಗಳನ್ನ ನಿಲ್ಲಿಸೋದಕ್ಕೆ 100*100 ಜಾಗ ಮಾಡಿಕೊಂಡಿದ್ದ ಅನ್ನೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

  • ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ

    ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ

    -ಗ್ರೇಡ್-1 ನಿಂದ ಗ್ರೇಡ್-2ಗೆ ಹಿಂಬಡ್ತಿ

    ರಾಯಚೂರು/ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ (Lokayukta Police) ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ (Ajit Rai) ಅವರನ್ನ ಬೆಂಗಳೂರು ಕೆ.ಆರ್ ಪುರಂನಿಂದ ರಾಯಚೂರು ಸಿರಿವಾರ ತಾಲೂಕಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಬೆಂಗಳೂರಿನ ಕೆ.ಆರ್ ಪುರಂನಲ್ಲಿ (KR Puram) ಗ್ರೇಡ್-1 ತಹಶೀಲ್ದಾರ್ ಆಗಿದ್ದ ಅಜಿತ್ ರೈ ಅವರಿಗೆ ಗ್ರೇಡ್-2 ಹಿಂಬಡ್ತಿ ನೀಡಿ ಸಿರಿವಾರಕ್ಕೆ (Raichur Siriwara) ವರ್ಗಾವಣೆ ಮಾಡಿ ರಾಜ್ಯಪಾಲರ ಸೂಚನೆ ಮೇರೆಗೆ ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಜೂನ್ 28ರಿಂದ ಅಮಾನತ್ತಿನಲ್ಲಿರುವ ಅಜಿತ್ ರೈ ಆದಾಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಅಡಿ ಲೋಕಾಯುಕ್ತ ಪೊಲೀಸರ ದಾಳಿಗೆ ಒಳಗಾಗಿದ್ದಾರೆ. ಆದ್ರೆ ವಿಚಾರಣೆಯಲ್ಲಿರುವ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ. ಹಿಂದುಳಿದ ನೂತನ ತಾಲೂಕು ಸಿರವಾರ ಅಭಿವೃದ್ಧಿಗೆ ದಕ್ಷ ಅಧಿಕಾರಿಯನ್ನ ನೇಮಿಸುವಂತೆ ಜನ ಆಗ್ರಹಿಸಿದ್ದಾರೆ.

    ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಮಲ್ಲಿಗೆ ಮುಡಿಯುವ ಮಹಿಳೆಯರಿಗೆ ಶಾಕ್ – ಹೂವುಗಳ ಬೆಲೆ ಈಗ ಇನ್ನಷ್ಟು ದುಬಾರಿ!

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶ ಬ್ರ‍್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

    ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ (Lokayukta Police) ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ (Ajit Rai) ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ (KR Puram Tahsildar) ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಇದನ್ನೂ ಓದಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಬೆಂಗಳೂರಿಗರೇ ಮುಂದು – ಸರಾಸರಿ ಖರೀದಿಯಲ್ಲಿ ಮುಂಬೈ ಫಸ್ಟ್

    ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಹಿಂದೂಗಳ ಪವಿತ್ರ ‘ಅಮರನಾಥ ಯಾತ್ರೆ’ ಆರಂಭ

    ಆರೋಪಿಯನ್ನು 7 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್‌ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್‌ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ

    ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಮಾಡಾಳ್‌ ವಿರೂಪಾಕ್ಷಪ್ಪನನ್ನ ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು (Lokayukta Police) 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದಿದ್ದರು. ಪೊಲೀಸ್‌ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಮಾಡಾಳ್‍ನ ಮೈಂಟೇನ್ ಮಾಡೋದೇ ‘ಲೋಕಾ’ಗೆ ಸವಾಲು- ರಾತ್ರಿಪೂರ್ತಿ ಕಣ್ಣೀರಿಡ್ತಿರೋ ಭ್ರಷ್ಟ ಮಾಡಾಳ್

    ಈ ವೇಳೆ ಮಾಡಾಳ್‌ ಪರ ವಕೀಲರು ಅವರಿಗೆ ಮನೆಯ ಊಟವನ್ನೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಅನುಮತಿ ನೀಡದ ಕೋರ್ಟ್‌ (Court) ಜೈಲಿನ ಪ್ರಕಾರವೇ ಊಟ ನೀಡುವಂತೆ ಸೂಚಿಸಿದೆ. ಅಲ್ಲದೇ ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅಂದು ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಸೂಚನೆ ನೀಡಿದೆ.

    ವಿಚಾರಣೆ ವೇಳೆ ಮಾಡಾಳ್‌ ವಿರೂಪಾಕ್ಷಪ್ಪ ಆರೋಗ್ಯ ಸಮಸ್ಯೆ ಬಗ್ಗೆ ನ್ಯಾಯಾಧೀಶರ ಮುಂದೆ ಹೇಳಿಕೊಂಡರು. ನಿನ್ನೆ ಆರೋಗ್ಯ ತಪಾಸಣೆ ನಡೆಸಿದ್ದಾರೆ ಅದರ ವರದಿ ನೋಡುವಂತೆಯೂ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌ ಅನಾರೋಗ್ಯ ಸಮಸ್ಯೆ ಬಂದರೆ, ಜೈಲಿನಲ್ಲೇ ಆಸ್ಪತ್ರೆ ಇದೆ ಎಂದು ತಿಳಿಸಿತು. ಇದನ್ನೂ ಓದಿ: ಲೋಕಾಯುಕ್ತ ಕಚೇರಿಯಲ್ಲಿ ಕೋಟಿ ಕುಬೇರ ಮಾಡಾಳ್‍ ವಾಸ್ತವ್ಯ!

    ಕಳೆದ ಐದು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದರು. ಮರುದಿನ ಕೋರ್ಟ್‌ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

    ನಂತರ ಲೋಕಾಯುಕ್ತ ಪೊಲೀಸರು 10ದಿನ ಕಸ್ಟಡಿಗೆ ಕೇಳಿದ್ದರು. ಆದರೆ ಮಾಡಾಳ್ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಬಂದಿದ್ದಾರೆ. ಈಗ ಮತ್ತೆ 10 ದಿನ ಅವಶ್ಯಕತೆ ಇಲ್ಲ ಎಂದು ವಾದ ಮಂಡಿಸಿದ್ದರು. 10 ದಿನ ಕಸ್ಟಡಿ ಅತ್ಯವಶ್ಯಕವಾಗಿದೆ. ಇದುವರೆಗೆ ವಿಚಾರಣೆಗೆ ಸಹಕರಿಸಿಲ್ಲ ಎಂದು ಲೋಕಾಯುಕ್ತ ಮರು ಮನವಿ ಮಾಡಿದ್ದರು. ಇಬ್ಬರ ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು.

  • 40 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PSI

    40 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PSI

    ಹಾವೇರಿ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರಾಣೇಬೆನ್ನೂರು (Ranebennur) ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಪಿಎಸ್‌ಐ ವಾಹನ ಚಾಲಕ ಇಬ್ಬರೂ ಲೋಕಾಯುಕ್ತ (Karnataka Lokayukta) ಬಲೆ ಬಿದ್ದಿದ್ದಾರೆ.

    ರಾಣೆಬೆನ್ನೂರು ಶಹರ ಠಾಣೆಯ (Ranebennur Police Station) ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಸಚಿನ್ ಆರೋಪಿಗಳಾಗಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ

    ರಾಣೇಬೆನ್ನೂರು ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು 50 ಸಾವಿರ ರೂ. ಬೇಡಿಕೆಯಿಟ್ಟಿದ್ದರು. ಫೀರೋಜಾ ಎಂಬ ವ್ಯಕ್ತಿ 40 ಸಾವಿರ ರೂ. ಹಣವನ್ನ ಟೀ ಸ್ಟಾಲ್‌ನಲ್ಲಿ ಕೊಟ್ಟು ಹೋಗಿದ್ದರು. ಈ ಹಣವನ್ನ ಚಾಲಕ ತೆಗೆದುಕೊಂಡು ಪಿಎಸ್‌ಐಗೆ ಕೊಡುತ್ತಿದ್ದ ವೇಳೆ ರೇಡ್ ಹ್ಯಾಂಡ್‌ಆಗಿ ಸಿಕ್ಕಿ ಬಿದ್ದಿದ್ದಾರೆ.

    ಹಾವೇರಿ ಲೋಕಾಯುಕ್ತ ಅಧಿಕಾರಿಗಳ ನೇತ್ರತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

  • ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK

    ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK

    ಬೆಂಗಳೂರು: ಡಬಲ್ ಎಂಜಿನ್ ಬಿಜೆಪಿ (BJP) ಸರ್ಕಾರ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಅಮಿತ್ ಶಾ (Amit Shah) ಅವರಿಗೆ ಕುಟುಕಿದ್ದಾರೆ.

    ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Maadal Virupakshappa) ಅವರ ಪುತ್ರನ ಮನೆಯಲ್ಲಿ 7.62 ಕೋಟಿ ರೂ. ನಗದು ಪತ್ತೆಯಾದ ವಿಚಾರಕ್ಕೆ ಸಿಡಿಮಿಡಿಗೊಂಡ ಹೆಚ್‌ಡಿಕೆ ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ. ಇದನ್ನೂ ಓದಿ: 40 ಲಕ್ಷ ಲಂಚ ಪ್ರಕರಣ – ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

    ಹೆಚ್‌ಡಿಕೆ ಟ್ವೀಟ್‌ನಲ್ಲಿ ಏನಿದೆ?
    ರಾಜ್ಯಕ್ಕೆ ಮತ್ತೆ ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಭರ್ತಿ 40 ಪರ್ಸೆಂಟ್ ಕಮಿಷನ್ ಉಡಾಯಿಸುತ್ತಿದೆ ಎನ್ನುವುದಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ.

    ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹಾಗೂ ಸರ್ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ `ಸ್ವಚ್ಚ ಭಾರತ್’ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್ ಶಾ ಅವರೇ!! ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಸಿಕ್ಕಿದ್ದು ಬರೋಬ್ಬರಿ 6 ಕೋಟಿ!

    ಅಮಿತ್ ಶಾ ಅವರೇ ಈಗ ಹೇಳಿ.. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ-ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗುಂಡಾಂತರ ಮಾಡುವುದಾ?

    ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40 ಪರ್ಸೆಂಟ್ ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಪಕ್ಷದ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?

    ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40 ಪರ್ಸೆಂಟ್ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು `ಕಮಿಷನ್ ರಾಜ್ಯ’ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?

    ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸೆಂಟ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರ್ಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ.

    ಕಾಂಗ್ರೆಸ್ (Congress) 20 ಪರ್ಸೆಂಟ್, ಬಿಜೆಪಿ 40 ಪರ್ಸೆಂಟ್. ಕರ್ನಾಟಕವನ್ನು `ಕಮಿಷನ್ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್’ಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ `ಕಮಿಷನ್ ರಾಜ್ಯ’ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ.

    ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ.

    ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.