Tag: ಕರ್ನಾಟಕ ಸಾರಿಗೆ

  • ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಸಾರಿಗೆ ಬಸ್ ಅಪಘಾತ – 9 ಮಂದಿಗೆ ಗಾಯ

    ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಸಾರಿಗೆ ಬಸ್ ಅಪಘಾತ – 9 ಮಂದಿಗೆ ಗಾಯ

    ಧಾರವಾಡ: ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಸಂಸ್ಥೆಯ ಬಸ್‍ವೊಂದು ರಸ್ತೆ ಪಕ್ಕಕ್ಕೆ ಇಳಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಗೊಪ್ಪ ಬಳಿ ನಡೆದಿದೆ.

    ರೋಣ ಡಿಪೋದ M-26 E-1044 ನಂಬರಿನ ಬಸ್ ಧಾರವಾಡದಿಂದ ರೋಣ ಕಡೆಗೆ ತೆರಳುತ್ತಿತ್ತು. ಈ ವೇಳೆ ನವಲಗುಂದ ಪಟ್ಟಣದ ಹೊರವಲಯದ ಕುಮಾರಗೋಪ್ಪ ಕ್ರಾಸ್ ಬಳಿ ಬೈಕ್ ಏಕಾಏಕಿ ಬಂದಿದೆ. ತಕ್ಷಣವೇ ಬೈಕ್‍ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಪೊದೆಗೆ ನುಗ್ಗಿದೆ. ಇದನ್ನೂ ಓದಿ: ಲಾರಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ: 24 ಗೋವುಗಳ ರಕ್ಷಣೆ

    ಬಸ್ ಅಪಘಾತದ ಪರಿಣಾಮ ಬಸ್‍ನಲ್ಲಿದ್ದ 19 ಪ್ರಯಾಣಿಕರಲ್ಲಿ 9 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ!

  • ಲೇಡಿ ಕಂಡಕ್ಟರ್‍ಗಳಿಗೆ ಡಿಫೆನ್ಸ್ ಟ್ರೈನಿಂಗ್ ನೀಡಲು ಮುಂದಾದ ಬಿಎಂಟಿಸಿ

    ಲೇಡಿ ಕಂಡಕ್ಟರ್‍ಗಳಿಗೆ ಡಿಫೆನ್ಸ್ ಟ್ರೈನಿಂಗ್ ನೀಡಲು ಮುಂದಾದ ಬಿಎಂಟಿಸಿ

    ಬೆಂಗಳೂರು: ಮಹಿಳಾ ಕಂಡಕ್ಟರ್ ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ. ಇನ್ನು ಮುಂದೆ ಮಾರ್ಷಲ್ ಆರ್ಟ್ಸ್, ಕರಾಟೆಯನ್ನು ಲೇಡಿ ಕಂಡಕ್ಟರ್ ಗಳು ಕಲಿಯಲಿದ್ದಾರೆ.

    ಬಿಎಂಟಿಸಿ ಲೇಡಿ ಕಂಡಕ್ಟರ್ ತಂಟೆಗೆ ಬರೋ ಮುನ್ನ ಹುಷಾರ್ ಆಗಿರಬೇಕು. ಬಸ್‍ಗಳಲ್ಲಿ ಬೇಕಾ ಬಿಟ್ಟಿಯಾಗಿ ವರ್ತಿಸುವ ಮುನ್ನ ಎಚ್ಚರಿಕೆ ವಹಿಸುವುದು ಒಳ್ಳೆಯದು. ಯಾಕೆಂದರೆ ಮಾರ್ಷಲ್ ಆರ್ಟ್ಸ್, ಕರಾಟೆ, ಸಮರ ಕಲೆಗಳಲ್ಲಿ ಬಿಎಂಟಿಸಿಯ ಲೇಡಿ ಕಂಡಕ್ಟರ್  ಎಕ್ಸ್ ಪರ್ಟ್ಸ್ ಆಗಲಿದ್ದಾರೆ.

    ಮಹಿಳಾ ಕಂಡಕ್ಟರ್ ಗಳಿಗೆ ಸ್ವರಕ್ಷಣೆ ತರಬೇತಿ ನೀಡಲು ಮುಂದಾಗಿದೆ. ಕೆಲಸದ ವೇಳೆ ಹಾಗೂ ಕಚೇರಿಗಳಲ್ಲಿ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳ ಬಗ್ಗೆ ಆಗಾಗ ದೂರು ದಾಖಲಾಗುತ್ತಿತ್ತು. ಮಹಿಳೆಯರ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವ ತರಬೇತಿ ನೀಡಲು ಬಿಎಂಟಿಸಿ ಮುಂದಾಗುತ್ತಿದೆ.

    ಮಹಿಳಾ ಕಂಡಕ್ಟರ್ ಹಾಗೂ ಮಹಿಳಾ ಸಿಬ್ಬಂದಿಗಳಿಗೆ ಡಿಫೆನ್ಸ್ ಟ್ರೈನಿಂಗ್ ಕರಾಟೆ, ಜೂಡೋ, ಸಮರ ಕಲೆ, ಸ್ವಯಂ ದೃಢೀಕರಣ, ಕಾನೂನು ಜ್ಞಾನ, ಸಾರ್ವಜನಿಕ ಭಾಷಣದ ಬಗ್ಗೆ ತರಬೇತಿಯನ್ನು ನೀಡಲು ಬಿಎಂಟಿಸಿ ಮುಂದಾಗಿದೆ. 21 ದಿನಗಳ ಕೋರ್ಸ್ ಇದಾಗಿದ್ದು, 42 ಗಂಟೆಗಳ ತರಬೇತಿ ಹಾಗೂ 120 ನಿಮಿಷಗಳ ಸೆಷನ್ ನಡೆಸಲಾಗುತ್ತದೆ.

  • ಸಾರಿಗೆ ಬಸ್ ಪ್ರಯಾಣ ದರ ಏರಿಕೆ – ಎಷ್ಟಿದ್ದ ದರ ಎಷ್ಟು ಆಗಲಿದೆ?

    ಸಾರಿಗೆ ಬಸ್ ಪ್ರಯಾಣ ದರ ಏರಿಕೆ – ಎಷ್ಟಿದ್ದ ದರ ಎಷ್ಟು ಆಗಲಿದೆ?

    ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆಯಾಗಿದೆ. ಶೇ.12 ರಷ್ಟು ದರವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ.

    ಬಸ್ ಪ್ರಯಾಣ ದರ ಪರಿಷ್ಕರಿಸುವ ಸಂಬಂಧ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಶೇ.12 ರಷ್ಟು ಪ್ರಯಾಣ ದರವನ್ನು ಏರಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಸಾರಿಗೆ ಇಲಾಖೆಯ ಆಧೀನ ಕಾರ್ಯದರ್ಶಿ ಸತ್ಯವತಿ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    ಲೋಕಸಭಾ ಚುನಾವಣೆಯ ನಂತರ ಪ್ರಯಾಣ ದರ ಏರಿಕೆ ಮಾಡಲು ಸಮ್ಮಿಶ್ರ ಸರ್ಕಾರ ಮುಂದಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಸರ್ಕಾರವೇ ಪತನ ಹೊಂದಿದ ಪರಿಣಾಮ ಅಧಿಕರಕ್ಕೆ ಏರಿದ ಬಿಜೆಪಿ ಸರ್ಕಾರ ಕೂಡಲೇ ದರ ಏರಿಸಿರಲಿಲ್ಲ. ಈಗ ಉಪ ಚುನಾವಣೆ ನಡೆದ ನಂತರ ದರವನ್ನು ಸರ್ಕಾರ ಏರಿಕೆ ಮಾಡಲು ಒಪ್ಪಿಗೆ ನೀಡಿದೆ.

    ಎಷ್ಟು ಏರಿಕೆ ಆಗುತ್ತದೆ?
    ಈಗ 100 ರೂಪಾಯಿ ಟಿಕೆಟ್ ದರ 12 ರೂ. ಏರಿಕೆ ಆಗಿದ್ದರೆ 300 ರೂ. ಟಿಕೆಟ್ ದರ ಇದ್ದರೆ ಇನ್ನು ಮುಂದೆ ನೀವು 36 ರೂ. ಹೆಚ್ಚು ನೀಡಿ ಒಟ್ಟು 336 ರೂ. ನೀಡಬೇಕಾಗುತ್ತದೆ. 500 ರೂ. ಟಿಕೆಟ್ ದರ ಇದ್ದರೆ ನೀವು 60 ರೂ. ಹೆಚ್ಚಿಗೆ ನೀಡಬೇಕಾಗುತ್ತದೆ. 1000 ರೂ. ಟಿಕೆಟಿಗೆ ಇನ್ನು ಮುಂದೆ ಒಟ್ಟು 1120 ರೂ. ನೀಡಬೇಕಾಗುತ್ತದೆ.