ರಾಯಚೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಆದರೆ ಲಾಕ್ ಡೌನ್ ಆಗಲು ಬಿಡಬೇಡಿ ಎಂದು ಜನರಿಗೆ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಮನವಿ ಮಾಡಿದರು.
ಸರ್ಕಾರದ ನಿರ್ಧಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಜನತೆಯ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಜನ ಸರ್ಕಾರದ ನಿಯಮಗಳನ್ನು ಪಾಲಿಸದೇ ಹೋದರೆ ಮುಂದೆ ಲಾಕ್ ಡೌನ್ ಸಹ ಆಗಬಹುದು. ಅದಕ್ಕೆ ಅವಕಾಶ ಕೊಡದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಸಂದೇಶ ನೀಡಿದರು. ಇದನ್ನೂ ಓದಿ: ದಿನದಲ್ಲಿ 50 ಸಾವಿರಕ್ಕೂ ಹೆಚ್ಚು ಕೋವಿಡ್-19 ಕೇಸ್!
ಸರ್ಕಾರದ ನಿಯಮಗಳನ್ನ ಎಲ್ಲರೂ ಪಾಲಿಸದಿದ್ದರೆ ವೈರಸ್ ಹರಡುವಿಕೆ ಹೆಚ್ಚಾಗಿ ಮತ್ತೆ ಲಾಕ್ ಡೌನ್ ಸಾಧ್ಯತೆಯಿದೆ. ಈಗಿನಿಂದಲೇ ಮುನ್ನೆಚ್ಚರಿಕೆ ತೆಗೆದುಕೊಂಡು ಜನಸಂದಣಿ, ಪ್ರಯಾಣ ಕಡಿಮೆ ಮಾಡಬೇಕು. ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜನ ಸರ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ಕೋವಿಡ್ ಕರ್ಫ್ಯೂ ಅಲ್ಲಾ, ಲಾಕ್‍ಡೌನ್ ಅಲ್ಲಾ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‍ಡೌನ್ ಇದು. ಯಾವ ಟಫ್ ರೂಲ್ಸ್ ಅಲ್ಲಾ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮದವರೊಂದಗೆ ಮಾತನಾಡಿದ ಅವರು, ರಾಜಕೀಯ ಟಫ್ ರೂಲ್ಸ್ ಇದಾಗಿದೆ. ನಾವು ರ‍್ಯಾಲಿ ಮಾಡಲ್ಲ ಸಮಾವೇಶ ಮಾಡಲ್ಲ. ನೀರಿಗಾಗಿ ನಾವು ನಡೆಯುತ್ತೇವೆ. ಸಾವಿರಾರು ಕೋವಿಡ್ ಸೋಂಕಿತರು ಇದ್ದಾರೆ ಎಂದು ಹೇಳುತ್ತಾರೆ, ಅವರು ಯಾರು? ಎಲ್ಲೆಲ್ಲಿ ಇದ್ದಾರೆ? ಅಂದ್ರೆ ನಾವು ಮಾತನಾಡುತ್ತೇವೆ. ತಾಯಿ ಕಾವೇರಿ ನೀರು ಕುಡಿಯಬೇಕು ಅಂತ ನಡೆಯುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗಲ್ಲ, ಗಂಟಲಲ್ಲಿ ಮಾತ್ರ ಇರುತ್ತೆ: ಸುಧಾಕರ್
ಸಿಎಲ್‍ಪಿ ನಾಯಕರ ಜೊತೆ ಮಾತಾಡುತ್ತೇನೆ. ನಾನು, ಸಿದ್ದರಾಮಯ್ಯ ಕೆಲವೂ ಇನ್‍ಚಾರ್ಜ್‍ಗಳ ಜೊತೆ ಮಾತುಕತೆ ನಡೆಸುತ್ತೇವೆ. ಮೊದಲು ನನ್ನ ಬ್ರದರ್ ಸುಧಾಕರ್ ಸ್ವಿಮ್ಮಿಂಗ್ ಪುಲ್‍ಲ್ಲಿ ಸ್ವಿಮ್ ಮಾಡಿದ್ನಲ್ಲ ಅವರ ಮೇಲೆ ಕೇಸು ಹಾಕಲಿ. . ಶ್ರೀರಾಮುಲು ಮೇಲೆ ಕೇಸು ಹಾಕಿ, ಮದುವೆಗೆ ಹೋದ ಯಡಿಯೂರಪ್ಪನ ಮೇಲೆ ಮೊದಲು ಕೇಸು ಹಾಕಿ. ಜನಾಶಿರ್ವಾದಯಾತ್ರೆ ಮಾಡಿದ್ರಲ್ಲ ಅವರ ಮೇಲೆ ಹಾಕಿ. (ವಾಕ್ ಫಾರ್ ವಾಟರ್) ನೀರಿಗಾಗಿ ನಡಿಗೆ, ಪಾದಯಾತ್ರೆ ಅಲ್ಲಾ ನೀರಿಗಾಗಿ ನಡೆಯುತ್ತೇವೆ ಎಂದು ಆಡಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ದಿನದಲ್ಲಿ 50 ಸಾವಿರಕ್ಕೂ ಹೆಚ್ಚು ಕೋವಿಡ್-19 ಕೇಸ್!
ಅಂತ ಯಾಕೆ ಎನ್ನುತ್ತೀರಾ ನೀರಿಗಾಗಿ ನಡಿಗೆ ಎಂದು ಹೇಳಿ. ಡ್ರೈವರ್, ಬೀದಿ ವ್ಯಾಪಾರ ಮಾಡುವವರ ಕೊಲೆ ಮಾಡುತ್ತಿದ್ದಾರೆ. ನನ್ನ ಮೇಲೆ ಸಿಎಲ್‍ಪಿ ನಾಯಕರ ಮೇಲೆ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಕೇಸ್ ಹಾಕಿದ್ದಾರೆ. ಇವರೇನು ಮನುಷ್ಯರಾ? ಇವರಿಗೆ ಬೇರೆ ರೂಲ್ಸ್, ನಮಗೆ ಬೇರೆ ರೂಲ್ಸ್, ಮೋದಿ ಅವರು ರ‍್ಯಾಲಿ ಮಾಡಿದ್ರು? ಇಡೀ ರಾಜ್ಯದಲ್ಲಿ ಯಾರು ಓಡಾಡಲ್ವ? ಇವರ ಕಡೆಯವರು ಓಡಾಡಲ್ವ? ನಾವು ನೀರಿಗೋಸ್ಕರ ನೆಡೆಯುತ್ತೇವೆ ಎಂದು ವಾಗ್ದಾಳಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಕೆ ಕಾಣುತ್ತಿರುವ ಹಿನ್ನೆಲೆ ಹೊಸ ಬೆಂಗಳೂರಿನಲ್ಲಿ ಗುರುವಾರದಿಂದ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೋವಿಡ್-19 ಜೊತೆ ಸಭೆಯ ಬಳಿಕ ಮಾಧ್ಯಮಗಳ ಜೊತೆ ಸಚಿವ ಆರ್. ಅಶೋಕ್ ಮತ್ತು ಡಾ.ಕೆ ಸುಧಾಕರ್ ಮಾತನಾಡಿ, ಮುಂದಿನ ಶುಕ್ರವಾರದಿಂದ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತದೆ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಹೊಸ ಮಾರ್ಗಸೂಚಿ ಜನವರಿ 5 ರ ರಾತ್ರಿ 10ರಿಂದ ಜನವರಿ 19 ರ ಬೆಳಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ ಎಂದರು.
ವೀಕೆಂಡ್ ಕರ್ಫ್ಯೂ ವೇಳೆ ತರಕಾರಿ, ದಿನಸಿ, ಮಾಂಸದ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಹೋಟೆಲ್‍ಗಳಲ್ಲಿ ಪಾರ್ಸೆಲ್‍ಗಳಿಗೆ ಮಾತ್ರ ಅನುಮತಿ. ಕೋವಿಡ್ 2 ಲಸಿಕೆ ಹಾಕಿದವರಿಗೆ ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ.
ಎಲ್ಲಾ ಪಬ್, ಬಾರ್, ಜಿಮ್ ಥಿಯೇಟರ್‌ಗಳಿಗೆ 50:50 ರೂಲ್ಸ್ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಸಭೆ ಸಮಾರಂಭಗಳಿಗೆ 200 ಮಂದಿಗೆ ಗಷ್ಟೇ ಅವಕಾಶ ನೀಡಲಾಗಿದ್ದು, ಮದುವೆ ಹೋರಾಂಗಣದಲ್ಲಿ 200 ಜನರಿಗೆ ಮತ್ತು ಒಳಾಂಗಣ ಕಾರ್ಯಕ್ರಮಕ್ಕೆ 100 ಮಂದಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ದೇವಸ್ಥಾನಗಳಿಗೆ 50 ಮಂದಿಗಷ್ಟೇ ಅವಕಾಶ ನೀಡಲಾಗಿದೆ. ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ. ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ಎಂದು ಸರ್ಕಾರ ತಿಳಿಸಿದೆ.
ನವದೆಹಲಿ: ಕೊರೊನಾ, ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ.
ದೆಹಲಿಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ, ಭಾನುವಾರ ಕಂಪ್ಲಿಟ್ ಬಂದ್ ಇರಲಿದೆ. ವಾಣಿಜ್ಯ ಚಟುವಟಿಕೆಗಳಿಗೆ ಶೇ. 50 ರಷ್ಟು ಮಾತ್ರ ಅವಕಾಶವನ್ನು ನೀಡಲಾಗಿದೆ. ಕೋವಿಡ್ ನಿಂದಾಗಿ ಕೇಂದ್ರದ ಶೇ. 50 ರಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ. ಕಾರ್ಯದರ್ಶಿ ರ‍್ಯಾಂಕ್‌ಗಿಂತ ಕೆಳಗಿನ ಶೇ.50 ರಷ್ಟು ಮಂದಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಪ್ರಕಾರ ದಿವ್ಯಾಂಗರು, ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.
ಕಂಟೈನ್ಮೆಂಟ್ ವಲಯದ ಸಿಬ್ಬಂದಿ ಆ ವಲಯಗಳನ್ನು ಕೋವಿಡ್ ಕಂಟೈನ್ಮೆಂಟ್ ಮುಕ್ತವಾಗಿಸುವವರೆಗೆ ಕಚೇರಿಗೆ ಬರುವಂತಿಲ್ಲ. ಕಚೇರಿಯಲ್ಲಿ ಹೆಚ್ಚಿನ ಜನದಟ್ಟಣೆ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕಚೇರಿಯ ಒಟ್ಟಾರೆ ಸಂಖ್ಯೆಯ ಶೆ. 50 ರಷ್ಟು ಮಂದಿಗೆ ಮಾತ್ರವೇ ಕಚೇರಿಯಲ್ಲಿರಬೇಕು. ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ
ಕಳೆದ 24 ಗಂಟೆಗಳಲ್ಲಿ 4,099 ಹೊಸ ಕೇಸ್‍ಗಳು ಪತ್ತೆಯಾಗಿದೆ. ದೆಹಲಿಯ ಪಾಸಿಟಿವ್ ರೆಟ್ ಶೇ.6.46ಕ್ಕೆ ಏರಿದೆ. 6,288 ಕೊರೊನಾ ಸೋಂಕಿತರು ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದವರು ಹೋಂ ಐಸೋಲೇಶನ್‍ಲ್ಲಿ ಇದ್ದಾರೆ. ದೆಹಲಿಯಲ್ಲಿ ನಿನ್ನೆ ದಾಖಲೆ ಮಟ್ಟದಲ್ಲಿ ಕೊರೊನಾ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂವನ್ನು ಸರ್ಕಾರ ಜಾರಿ ಮಾಡಿದೆ. ಇದನ್ನೂ ಓದಿ: ಕೇಂದ್ರದ ಶೆ.50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಂ
Delhi Govt likely to impose weekend curfew to curb COVID surge: Sources https://t.co/5n6ghjiHPz
ದೆಹಲಿ ಸರ್ಕಾರ ನಾಲ್ಕು ಬಣ್ಣಗಳಲ್ಲಿ ಕೊರೊನಾ ಅಪಾಯ ಗುರುತಿಸಿದೆ. ಸೋಂಕಿನ ಪ್ರಮಾಣ ಆಧರಿಸಿ ನಾಲ್ಕು ಹಂತಗಳಲ್ಲಿ ವಿಭಾಗವನ್ನು ಮಾಡಲಾಗಿದೆ. ಹಳದಿ, ಹಳದಿ ಮತ್ತು ಕಿತ್ತಳೆ ಮಿಶ್ರಣ, ಕಿತ್ತಳೆ ಮತ್ತು ರೆಡ್ ಝೋನ್ ಆಗಿ ವಿಂಗಡಿಸಲಾಗಿದೆ. ಸೋಂಕಿನ ಪ್ರಮಾಣ 0.5% ರಷ್ಟಿದ್ದರೇ ಹಳದಿ, 1-2 % ನಷ್ಟಿದ್ದರೇ ಹಳದಿ ಮತ್ತು ಕಿತ್ತಳೆ ಮಿಶ್ರಿತ ಬಣ್ಣ2-5% ವರೆಗೂ ಕಿತ್ತಳೆ, 5% ಹೆಚ್ಚಿದ್ದರೆ ರೆಡ್ ಝೋನ್ ಎಂದು ವಿಭಾಗಿಸಿದೆ. ಇದನ್ನೂ ಓದಿ: ಗಡಿಯೊಳಗೆ ನುಸುಳಿದ ಪಾಕ್ ಯೋಧನ ಹತ್ಯೆ – ಶವವನ್ನ ಹಿಂದಕ್ಕೆ ತೆಗೆದುಕೊಳ್ಳಿ ಎಂದ ಭಾರತೀಯ ಸೇನೆ
ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಿದೆ. ಟಫ್ ರೂಲ್ಸ್ ಜಾರಿಗೆ ರಾಜ್ಯ ಸರ್ಕಾರದ ಚಿಂತನೆ ಮಾಡುತ್ತಿದ್ದು, ಇಂದು ತಜ್ಞರ ಸಭೆ ಬಳಿಕ ಕಠಿಣ ನಿಯಮಗಳ ಜಾರಿಗೆ ತರಲು ಸರ್ಕಾರ ತಯಾರಿ ನೆಡೆಸಿದೆ. ದೆಹಲಿ, ಮಹಾರಾಷ್ಟ್ರ ಮಾಡೇಲ್ ಆಧರಿಸಿ ರಾಜ್ಯದಲ್ಲಿ ನಿಯಮಗಳು ಜಾರಿ ಸಾಧ್ಯತೆ ಇದೆ.
ಬೆಂಗಳೂರು: ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್‌ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಅಂದುಕೊಂಡವರಿಗೆ ಸರ್ಕಾರ ಶಾಕ್ ಕೊಟ್ಟಿದೆ.
ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿ.28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಇದರಿಂದ ಹೊಸ ವರ್ಷಕ್ಕೆ ತಯಾರಾಗಿದ್ದ ಬಾರ್ ರೆಸ್ಟೋರೆಂಟ್ ಹೋಟೆಲ್ ಗಳಿಗೆ ಫುಲ್ ಶಾಕ್ ಆಗಿದೆ.
ಮುಖ್ಯಮಂತ್ರಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಎಲ್ಲ ಸಂಭ್ರಮಾಚರಣೆ, ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ನಿಷೇಧವನ್ನು ಹೇರಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದಿದ್ದಾರೆ.
ಎಲ್ಲಾ ಹೋಟೆಲ್‌ಗಳಲ್ಲಿ ಶೆ.50 ಜನರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ. ಲಸಿಕೆಯ ವಿಚಾರವಾಗಿ ಹೇಳುವುದಾದರೆ ಮೊದಲ ಡೋಸ್ ಅನ್ನು ಶೇ. 97 ರಷ್ಟು ನೀಡಲಾಗಿದೆ. ಅದು ಶೇ. 100 ರಷ್ಟು ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ. 2ನೇ ಡೋಸ್ ಅನ್ನು ಶೇ. 75 ರಷ್ಟು ಮಂದಿಗೆ ನೀಡಲಾಗಿದೆ. ಇನ್ನೂ 45 ಲಕ್ಷ ಮಂದಿ 2ನೇ ಡೋಸ್ ತೆಗೆದುಕೊಳ್ಳುವವರಿದ್ದಾರೆ. ಓಮಿಕ್ರಾನ್ ಅತ್ಯಂತ ವೇಗದಲ್ಲಿ ಹರಡುತ್ತಿದೆ. ಹೀಗಾಗಿ ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕ್ಕಷ್ಟೆ ರಾತ್ರಿ 10 ಗಂಟೆ ನಂತರ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳೂರು: ಸರ್ಕಾರದ ಆದೇಶ ಹಾಗೂ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಕೆಲವು ನಿರ್ಬಂಧಗಳನ್ನು ಜಾರಿ ಮಾಡಿದ್ದಾರೆ.
ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವಂತೆ ಚಾಲ್ತಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತವಾಗಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪಾಸ್ ಎಂದು ಪರಿಗಣಿಸುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳಿಗೆ ಮಾತ್ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ, ವಿವಾಹ ಅಥವಾ ಕೌಟುಂಬಿಕ ಕಾರ್ಯಗಳನ್ನು ಗರಿಷ್ಟ 50 ಜನರ ಪರಿಮಿತಿಗೊಳಪಟ್ಟು ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿಯೊಂದಿಗೆ ಆಯೋಜಿಸಲು ಅನುಮತಿಸಿದೆ. ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಆದೇಶಿಸಲಾಗಿದೆ. ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ಎಲ್ಲಾ ವಿದ್ಯಾರ್ಥಿಗಳ 72 ಗಂಟೆಗಳಿಗಿಂತ ಮುಂಚಿತವಾಗಿ ಆರ್ ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶವಿರುತ್ತದೆ. ಈ ಮಾರ್ಗಸೂಚಿಯು ಕೇರಳದಿಂದ ಜಿಲ್ಲೆಗೆ ಉದ್ಯೋಗದ ಸಲುವಾಗಿ ಅಥವಾ ಭೇಟಿ ಕಾರಣಕ್ಕಾಗಿ ಆಗಮಿಸುವ ಪ್ರತಿಯೊಬ್ಬರಿಗೆ ಅನ್ವಯವಾಗಲಿದೆ, ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಸಂದರ್ಭದಲ್ಲಿ ಕಡ್ಡಾಯವಾಗಿ ಆರ್ ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸತಕ್ಕದ್ದು ಹಾಗೂ ತಮ್ಮ ಸಿಬ್ಬಂದಿ ಆರ್ ಟಿಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ಖಾತ್ರಿಪಡಿಸಿಕೊಳ್ಳುವ ಜವಬ್ದಾರಿಯು ಆಯಾ ಸಂಸ್ಥೆಗೆ ಸೇರಿರುತ್ತದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ರಾತ್ರಿ ಕರ್ಫ್ಯೂ ಮಾರ್ಗಸೂಚಿಗಳು
ಸಾರ್ವಜನಿಕರ ಸಂಚಾರವನ್ನು ಆ.31ರಿಂದ ಜಾರಿಯಾಗುವಂತೆ ಮುಂದಿನ ಆದೇಶದ ವರೆಗೆ ಪ್ರತಿ ದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಅತ್ಯಾವಶ್ಯಕ ಹಾಗೂ ತುರ್ತು ಸಂದರ್ಭಗಳನ್ನು ಹೊರತು ಪಡಿಸಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು ಮತ್ತು ಅವರ ಪರಿಚಾರಕರು ಅಥವಾ ವ್ಯಕ್ತಿಗಳಿಗೆ ಸಂಚರಿಸಲು ಅನುಮತಿ ಇದೆ. ರಾತ್ರಿ ವೇಳೆಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿರುವಂತಹ ಎಲ್ಲಾ ಕೈಗಾರಿಕೆಗಳು ಅಥವಾ ಕಂಪನಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ಇರುತ್ತದೆ. ಅಂತಹ ಸಂಸ್ಥೆಗಳ ನೌಕರರ ಸಂಚಾರಕ್ಕೆ, ಅವರ ಸಂಬಂಧಪಟ್ಟ ಸಂಸ್ಥೆ, ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿ ಪ್ರಯಾಣಿಸಲು ಅನುಮತಿಸಲಾಗಿದೆ. ಇದನ್ನೂ ಓದಿ: ಇನ್ಸ್‌ಪೆಕ್ಟರ್ ಮಗನ ಸೈಕಲ್ ಕದ್ದ ಗ್ಯಾಂಗ್- ಜನ್ಮ ಜಾಲಾಡಿದ ಪೊಲೀಸರು
ದೂರವಾಣಿ ಸಂಪರ್ಕ ಮತ್ತು ಅಂತರ್ಜಾಲ ಸೇವೆ ಒದಗಿಸುವ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಅವರ ಸಂಬಂಧಪಟ್ಟ ಸಂಸ್ಥೆ, ಕಂಪನಿಯು ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಹೊಂದಿ ಪ್ರಯಾಣಿಸಲು ಅನುಮತಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳ ಕಂಪನಿಗಳು, ಸಂಸ್ಥೆಯ ಅತ್ಯಾವಶ್ಯಕ ಸಿಬ್ಬಂದಿ, ನೌಕರರು ಮಾತ್ರ ಕಚೇರಿಯಿಂದ ಕಾರ್ಯನಿರ್ವಹಿಸಬೇಕು, ಉಳಿದ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸಬೇಕು.
ಔಷಧ ಮಳಿಗೆಗಳು ಸೇರಿದಂತೆ ವೈದ್ಯಕೀಯ, ತುರ್ತು ಮತ್ತು ಅತ್ಯಾವಶ್ಯಕ ಸೇವೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ, ಉಳಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಖಾಲಿ ವಾಹನಗಳು ಸೇರಿದಂತೆ, ಟ್ರಕ್‍ಗಳು, ಸರಕು ಸಾಗಣೆ ವಾಹನಗಳು ಅಥವಾ ಯಾವುದೇ ಸರಕು ಸಾಗಣೆ ವಾಹನಗಳ ಮೂಲಕ ಎಲ್ಲಾ ಬಗೆಯ ಸರಕುಗಳನ್ನು ಸಾಗಿಸುವುದಕ್ಕೆ ಯಾವುದೇ ನಿಬರ್ಂಧವಿಲ್ಲ. ಇ-ವಾಣಿಜ್ಯ ಕಂಪನಿಗಳಿಂದ ಸರಕುಗಳ ಹೋಮ್ ಡೆಲಿವರಿಗೆ ಮತ್ತು ಅವುಗಳ ಕಾರ್ಯಾಚರಣೆಗಳಿಗೆ ಅನುಮತಿ ನೀಡಲಾಗಿದೆ. ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಲಾಗಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲು ವಿಮಾನ ನಿಲ್ದಾಣಗಳಿಗೆ, ಬಸ್ ಟರ್ಮಿನಲ್, ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಅಧೀಕೃತ ಪ್ರಯಾಣ ದಾಖಲೆ ಅಥವಾ ಟಿಕೆಟ್ ಅನ್ನು ಪ್ರದರ್ಶಿಸಿದ ನಂತರವೇ ಅಂತಹ ಸಂಚಾರಕ್ಕೆ ಅನುಮತಿ ನೀಡಲಾಗುವುದು.
ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿಗಳು:
ಅತ್ಯಾವಶ್ಯಕ ಮತ್ತು ತುರ್ತು ಕಾರ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ಸಂಜೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ತುರ್ತು, ಅತ್ಯವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ ಅಥವಾ ಸಿಬ್ಬಂದಿಗಳಿಗೆ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಅರ್ಧ ಗಂಟೆ ಥರ್ಮಾಕೋಲ್ ಸಹಾಯದಿಂದ ಈಜು – ಬದುಕುಳಿದ ಮೀನುಗಾರ
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು ಮತ್ತು ಪ್ರಾಣಿಗಳ ಮೇವನ್ನು ಮಾರಾಟ ಮಾಡುವ ಅಂಗಡಿಗಳು, ಬೀದಿ ಬದಿ ವ್ಯಾಪಾರಸ್ಥರು, ನ್ಯಾಯಬೆಲೆ ಅಂಗಡಿಗಳು, ಮದ್ಯದಂಗಡಿಗಳು ಮತ್ತು ಮಳಿಗೆಗಳು ಪಾರ್ಸೆಲ್ ಕೊಂಡು ಹೋಗಲು ಮಾತ್ರವೇ ಅವಕಾಶ ನೀಡಲಾಗಿದೆ. ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದು, ಈ ಅವಧಿಯಲ್ಲಿ ಎಲ್ಲಾ ಸಾಮಗ್ರಿಗಳನ್ನು ಹೋಮ್ ಡೆಲಿವೆರಿ ಮಾಡಬೇಕು. ಈ ಎಲ್ಲಾ ಕಾರ್ಯಾಚರಣೆಗಳು ಕೋವಿಡ್-19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್ ಮತ್ತು ಹೊಟೇಲ್‍ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿ ನೀಡಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರವಾರ/ಪಣಜಿ: ಗೋವಾ ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ ಗಡಿ ಭಾಗದ ಕಾರವಾರದ ಮಾಜಾಳಿ-ಗೋವಾ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.
ಗೋವಾದ ಚಿತ್ರಮಂದಿರಗಳಲ್ಲಿ ಶೇ.50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಮೂಲಕ ಚಿತ್ರಮಂದಿರ ತೆರೆಯಲು ಅನುಮತಿ ನೀಡಲಾಗಿದೆ. ಗೋವಾ ರಾಜ್ಯದಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ವನ್ನು ಹಂತ ಹಂತವಾಗಿ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ಗೋವಾದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ನಾಸಾದ ಪ್ರಶಸ್ತಿಗೆ ಸಿದ್ದಾಪುರದ ವಿದ್ಯಾರ್ಥಿ ದಿನೇಶ್ ವಸಂತ ಹೆಗಡೆ ಆಯ್ಕೆ
ಕೇರಳದಿಂದ ಆಗಮಿಸುವ ಪ್ರವಾಸಿಗರಿಗೆ ಗೋವಾ ರಾಜ್ಯ ಪ್ರವೇಶಿಸಲು ಆರ್ ಟಿಪಿಆರ್ ನೆಗೆಟಿವ್ ವರದಿ ಖಡ್ಡಾಯಗೊಳಿಸಲಾಗಿದ್ದು, ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಖಡ್ಡಾಯವಾಗಿದೆ.
ಬೆಂಗಳೂರು: ನಗರದಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಕೂಡ ಕ್ಯಾರೆ ಇಲ್ಲದೆ ಶಿವಾಜಿನಗರದ ಫಿಶ್ ಮಾರ್ಕೆಟ್ ನಲ್ಲಿ ಜನ ಮೈ ಮರೆತು ಮಾಂಸ ಖರೀದಿಯಲ್ಲಿ ತೊಡಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವ ಹೊತ್ತಿನಲ್ಲಿ ಸಾರ್ವಜನಿಕರು ಕೊರೊನಾ ನಿಯಮವನ್ನು ಮರೆತಂತಿದೆ.
ವೀಕೆಂಡ್ ಕರ್ಫ್ಯೂ ಹಾಗೂ ಭಾನುವಾರ ಇರುವುದರಿಂದ ಜನ ಮಾಂಸ ಖರೀದಿಗೆ ಮುಗಿಬಿದ್ದಿದ್ದಾರೆ. ಮಾಂಸದಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿರುವ ಜನ ಸಾಮಾಜಿಕ ಅಂತರವಿಲ್ಲದೆ, ನೂರಾರು ಜನ ಮಾಂಸ ಖರೀದಿ ಭರಾಟೆಯಲ್ಲಿ ಕೊರೊನಾ ನಿಯಮಗಳನ್ನ ಉಲ್ಲಂಘಿಸಿದ್ದಾರೆ. ಇದನ್ನೂ ಓದಿ: 16 ಜಿಲ್ಲೆಗಳಲ್ಲಿ ಸಂಜೆ 5ರವರೆಗೆ ಅನ್‍ಲಾಕ್- ನಿಯಮಗಳೇನು?
ಸಾರ್ವಜನಿಕರು ಸರಿಯಾಗಿ ಮಾಸ್ಕ್ ಗಳನ್ನು ಧರಿಸದೇ ಒಬ್ಬರಿಗೊಬ್ಬರು ಅಂಟಿಕೊಂಡು, ಗ್ರಾಹಕರು ವ್ಯಾಪಾರ ಮಾಡುತ್ತಿದ್ದಾರೆ. ಜನರ ಗುಂಪು ನಿಯಂತ್ರಿಸಲು, ಪೊಲೀಸರು, ಮಾರ್ಷಲ್ ಗಳು ಕೂಡ ಸ್ಥಳದಲ್ಲಿ ಇಲ್ಲ. ಸೋಂಕು ಇಳಿಕೆಯಾಗುತ್ತಿರುವ ಹೊತ್ತಲ್ಲೇ, ಜನ ಮತ್ತೆ ನಿರ್ಲಕ್ಷ್ಯ ತೋರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜನರ ಬೇಜವಾಬ್ದಾರಿ ಹೀಗೆ ಮುಂದುವರೆದರೆ ಮುಂದಿನ ದಿನಗಳು ಆಪಾಯಕ್ಕೆ ದಾರಿಮಾಡಿಕೊಟ್ಟಂತಾಗಲಿದೆ.
ಹೈದರಾಬಾದ್: ಕೋವಿಡ್-19 ಪ್ರಕರಣಗಳ ಸಂಖ್ಯೆಯನ್ನು ತಡೆಗಟ್ಟಲು ಮೇ 5 ರಿಂದ ಎರಡು ವಾರಗಳವರೆಗೂ ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಿಧಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಮಧ್ಯಾಹ್ನ 12 ರಿಂದ 6 ರವರೆಗೆ ಲಾಕ್‍ಡೌನ್ ನಿರ್ಬಂಧಗಳು ಜಾರಿಯಲ್ಲಿರುತ್ತದೆ.
144 ಸೆಕ್ಷನ್ ಸಿಆರ್ಪಿಸಿ ಅಡಿಯಲ್ಲಿ ಜಾರಿಯಿರಲಿದ್ದು, ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 12 ಗಂಟೆಯ ಬಳಿಕ ಕರ್ಫ್ಯೂ ಪ್ರಾರಂಭವಾಗುತ್ತದೆ ಮತ್ತು ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಮವಾರ ಉನ್ನತ ಮಟ್ಟದ ಕೋವಿಡ್ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಕೋವಿಡ್-19 ಇರುವುದರಿಂದ ಕಳೆದ ಕೆಲವು ದಿನಗಳಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು. ಆದರೆ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕೊರೊನಾವನ್ನು ಹೊಗಲಾಡಿಸಲು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಿರ್ಧರಿಸಿದ್ದಾರೆ.
ಮಡಿಕೇರಿ: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಕಫ್ರ್ಯೂ ಜಾರಿಗೊಳಿಸಿ ನಾಲ್ಕು ದಿನ ಕಳೆಯುತ್ತಿದೆ. ಈ ನಿಟ್ಟಿನಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ಮಾಡುತ್ತಿರುವ ಪೊಲೀಸರು. ಸುಡು ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸುತಿರುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ. ಹೀಗಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಸಿಬ್ಬಂದಿಗೆ ಹಣ್ಣು ಹಾಗೂ ತಂಪು ಪಾನೀಯ ವಿತರಿಸಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಂಕಿತ್ ಪೊನ್ನಪ್ಪ ನೇತೃತ್ವದಲ್ಲಿ ಇಂದು ಪೊಲೀಸರಿಗೆ ಹಣ್ಣು ಮತ್ತು ತಂಪು ಪಾನೀಯಗಳನ್ನು ವಿತರಿಸಲಾಯಿತು. ಕೊರೊನಾ ಮಹಾಮಾರಿ ತಡೆಗಟ್ಟಲು ಹಗಲು ರಾತ್ರಿ ಸಾರ್ವಜನಿಕರಿಗಾಗಿ ಕೆಲಸ ಮಾಡುವ ಪೊಲೀಸ್ ಇಲಾಖೆಯ ಕಾರ್ಯವನ್ನು ಮನಗಂಡು ತಿತಿಮತಿ ಗಡಿಬಾಗದಿಂದ ಗೋಣಿಕೊಪ್ಪಲು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಪೊಲೀಸ್ ಸಿಬ್ಬಂದಿಗೆ ಹಣ್ಣು ಹಾಗೂ ತಂಪು ಪಾನೀಯಗಳ ಕಿಟ್ ವಿತರಿಸಿದರು.
ಕಫ್ರ್ಯೂ ಹಿನ್ನೆಲೆಯಲ್ಲಿ ಪೊಲೀಸರಿಗೆ ಸರಿಯಾದ ಸಮಯಕ್ಕೆ ಊಟ, ಕಾಫಿ, ತಂಪು ಪಾನಿಯಗಳು ಸಿಗುತ್ತಿಲ್ಲ. ಸದಾ ಸಾರ್ವಜನಿಕರಿಗಾಗಿ ದುಡಿಯುವ ಪೊಲೀಸರ ಕಷ್ಟವನ್ನರಿತ ಯುವ ಕಾಂಗ್ರೆಸ್ ಕಾರ್ಯಕರ್ತರು ಹಣ್ಣು ಹಾಗೂ ತಂಪು ಪಾನೀಯ ವಿತರಿಸಿದ್ದಾರೆ.