Tag: ಕಲಬುರಗಿ ಜೈಲು

  • ಬೀಡಿ, ಗುಟ್ಕಾ ಬೇಕು: ಕಲಬುರಗಿ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಂದ ಪ್ರತಿಭಟನೆ

    ಬೀಡಿ, ಗುಟ್ಕಾ ಬೇಕು: ಕಲಬುರಗಿ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಂದ ಪ್ರತಿಭಟನೆ

    ಕಲಬುರಗಿ: ಬೀಡಿ, ಗುಟ್ಕಾ ಬೇಕು ಎಂದು ಕಲಬುರಗಿ ಕೇಂದ್ರ ಕಾರಾಗೃಹದ (Kalaburagi Jail) ವಿಚಾರಣಾಧೀನ ಕೈದಿಗಳು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

    70 ಕ್ಕೂ ಹೆಚ್ಚು ಕೈದಿಗಳು ಪ್ರತಿಭಟಿಸಿದ್ದಾರೆ. ಜೈಲಿನಲ್ಲಿ ಏಕಾಏಕಿ ಎಲ್ಲವೂ ಬಂದ್ ಮಾಡಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಮುಸ್ತಾಫಾ ಎನ್ನುವ ಕೈದಿಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

    ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದಲ್ಲಿರುವ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ವಸ್ತುಗಳನ್ನು ಜೈಲಿನಲ್ಲಿ ಮಾರಾಟ ಮಾಡದಂತೆ ಕ್ರಮವಹಿಸಲಾಗಿದೆ.

    ಇದರ ಜೊತೆಗೆ ಜೈಲಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿ ಜೈಲಿನ ಮುಖ್ಯ ಅಧೀಕ್ಷಕಿ ವಿರುದ್ಧ ಲಂಚದ ಆರೋಪ ಮಾಡಿ ಕೈದಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಅನಾಮಧೇಯ ಮಹಿಳೆಯಿಂದ ದೂರು ಕೊಡಿಸಿ ಜೈಲು ಅಧೀಕ್ಷಕಿಗೆ ಬ್ಲ್ಯಾಕ್‌ಮೇಲ್ ಮಾಡಲಾಗಿದೆ. ಕೈದಿಗಳ ಬ್ಲ್ಯಾಕ್‌ಮೇಲ್ ಕುರಿತು ಅಧೀಕ್ಷಕಿ ಅನಿತಾ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

    ಹಣ ಕೊಟ್ಟರೆ ಜೈಲಿನಲ್ಲಿ ಎಲ್ಲವೂ ಲಭ್ಯ ಅಂತಾ ಜೈಲು ಅಧೀಕ್ಷಕಿ ವಿರುದ್ಧ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಧೀಶರು, ಗೃಹಸಚಿವರು, ಸಿಎಂಗೆ ಮೇಲ್ ಮಾಡಿ ದೂರಲಾಗಿತ್ತು. ನೂರ್ ಜಹಾನ್ ಶೇಖ್ ಹೆಸರಿನ ಇಮೇಲ್‌ನಿಂದ ಅನಿಸಾ ಬೇಗಂ ಎಂಬವರಿಂದ ದೂರು ನೀಡಲಾಗಿತ್ತು. ನಮ್ಮ ಸಹೋದರ ಮುಸ್ತಫಾಗೆ ಜೈಲಿನಲ್ಲಿ ಹಿಂಸಿಸಿ ಹಣದ ಬೇಡಿಕೆ ಒಡ್ಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಗುಣಮಟ್ಟದ ಆಹಾರ ಕೇಳಿದ್ದಕ್ಕೆ ದೈಹಿಕವಾಗಿ ಹಿಂಸಿಸಿ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಬೇರೆ ಜೈಲಿಗೆ ವರ್ಗಾಯಿಸುವುದಾಗಿ ಹೆದರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಖೈದಿ ಜೊತೆ ಸಹೋದರಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಆಡಿಯೋ ಹಾಗೂ ದೂರಿನ ಬಗ್ಗೆ ತನಿಖೆ ನಡೆಸಲು ಜೈಲು ಮುಖ್ಯಾಧೀಕ್ಷಕಿಯಿಂದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದೆ. ಜೈಲಿ ಅಧೀಕ್ಷಕಿ ದೂರಿನ ಬಳಿಕ ಫೋನ್ ಸ್ವಿಚ್ಚ್ ಆಫ್ ಮಾಡಿ ಅನಿಸಾ ಬೇಗಂ ಎಸ್ಕೇಪ್ ಆಗಿದ್ದಾರೆ. ಜೈಲನ್ನ ಕಟ್ಟುನಿಟ್ಟಾಗಿ ಇಟ್ಟಿದ್ದಕ್ಕೆ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ ಎಂದು ಮುಖ್ಯ ಅಧೀಕ್ಷಕಿ ದೂರಿದ್ದಾರೆ. ಮುಸ್ತಾಫಾ ಎನ್ನುವ ಕೈದಿಯನ್ನ ಇಲ್ಲಿಯವರೆಗೂ ನೋಡೇ ಇಲ್ಲ. ನಾನು ಇಲ್ಲಿಗೆ ಬಂದು ಕೇವಲ ಒಂದು ತಿಂಗಳಾಗಿದೆ. ಇವರೆಲ್ಲಾ ಸೇರಿ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ ಎಂದು ಅದೀಕ್ಷಕಿ ಆರೋಪಿಸಿದ್ದಾರೆ.

  • Public TV Impact | ಕಲಬುರಗಿ ಸೆಂಟ್ರಲ್‌ ಜೈಲ್‌ನ ಇಬ್ಬರು ಅಧಿಕಾರಿಗಳು ಅಮಾನತು

    Public TV Impact | ಕಲಬುರಗಿ ಸೆಂಟ್ರಲ್‌ ಜೈಲ್‌ನ ಇಬ್ಬರು ಅಧಿಕಾರಿಗಳು ಅಮಾನತು

    ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ಕೈದಿಗಳ ಬಿಂದಾಸ್ ಲೈಫ್ ಪ್ರಕರಣವನ್ನು ಸಿಸಿಬಿಗೆ (CCB) ವರ್ಗಾಯಿಸಿದ ಬೆನ್ನಲ್ಲೇ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ.

    ಕೇಂದ್ರ ಕಾರಾಗೃಹದ ಕರ್ಮಕಾಂಡದ ಬಗ್ಗೆ ‘ಪಬ್ಲಿಕ್ ಟಿವಿ’ (Public TV) ವಿಸ್ತೃತ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದರು. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿತ್ತು. ಹೀಗಾಗಿ ಇಬ್ಬರು ಜೈಲರ್‌ಗಳನ್ನ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

    ಸಿಸಿಬಿ ಅಧಿಕಾರಿಗಳಿಂದ ಮುಂದುವರಿದ ಶೋಧ:
    ಕಲಬುರಗಿ ಸೆಂಟ್ರಲ್‌ ಜೈಲಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು 2ನೇ ದಿನವಾದ ಶನಿವಾರವೂ ಜೈಲಿನಲ್ಲಿ ಶೋಧಕಾರ್ಯ ಮುಂದುವರಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿ ಕಚೇರಿಯ ಎಸ್ಪಿ ಯಶೋಧಾ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಈಗಾಗಲೇ ಜೈಲಿನ ಅಧಿಕಾರಿಗಳ ತನಿಖೆ ನಡೆಸಿರುವ ಎಸ್ಪಿ ಯಶೋಧಾ ಅವರು, ಶನಿವಾರ ಜೈಲಿನ ವಾರ್ಡನ್ ಸೇರಿ ಹಲವರ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ತನಿಖೆ ಸಿಸಿಬಿಗೆ ವರ್ಗಾಯಿಸಿದ್ದೇಕೆ?
    ಜೈಲಿನಲ್ಲಿದ್ದುಕೊಂಡೇ ವೀಡಿಯೋ ಕಾಲ್ ಮಾಡಿದ್ದ ಕೈದಿ ಸಾಗರ್, ಸೋನು, ವಿಶಾಲ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ತ್ವರಿತ ಹಾಗೂ ಕುಲಂಕಷ ತನಿಖೆಗಾಗಿ ಸಿಸಿಬಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಗಳಿಬ್ಬರು ಕೆಲ ಕೈದಿಗಳನ್ನು ವೀಡಿಯೋ ಕಾಲ್ ನೆಪದಲ್ಲಿ ಹನಿಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

  • ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

    ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

    ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

    ಕೇಂದ್ರ ಕಾರಾಗೃಹದ ಕರ್ಮಕಾಂಡದ ಬಗ್ಗೆ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

    ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.

    ಜೈಲಿನಲ್ಲಿದ್ದು ವೀಡಿಯೋ ಕಾಲ್ ಮಾಡಿದ್ದ ಸಾಗರ್, ಸೋನು, ವಿಶಾಲ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ತ್ವರಿತ ಹಾಗೂ ಕುಲಂಕಷ ತನಿಖೆಗಾಗಿ ಸಿಸಿಬಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.

    ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಗಳಿಬ್ಬರು ಕೆಲ ಕೈದಿಗಳನ್ನು ವೀಡಿಯೋ ಕಾಲ್ ನೆಪದಲ್ಲಿ ಹನಿಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಹೈಫೈ ಆತಿಥ್ಯ