Tag: ಕಲಮಶ್ಯೇರಿ

  • ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

    ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು IED ಬ್ಲಾಸ್ಟ್: ದೃಢಪಡಿಸಿದ ಪೊಲೀಸರು

    ತಿರುವನಂತಪುರಂ: ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ (Kalamassery)  ನಡೆದಿರುವುದು ಐಇಡಿ ಬ್ಲಾಸ್ಟ್ (IED Blast) ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

    ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಶೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.

    ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್‍ಎಸ್‍ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್‍ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

    ಘಟನೆಯಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ಉಮೇಶ್ ಇದೇ ವೇಳೆ ತಿಳಿಸಿದರು.

     Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ತಿರುವನಂತಪುರಂ: ಕೇರಳದ ಕಲಮಶ್ಯೇರಿಯಲ್ಲಿ (Kalamassery, Kerala) ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

    ಈ ವೇಳೆ ಅಮಿತ್ ಶಾ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಸಮಾವೇಶ ಕೇಂದ್ರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಷ್ಟ್ರೀಯ ತನಿಖಾ ದಳ (NIA) ಮತ್ತು ರಾಷ್ಟ್ರೀಯ ಭದ್ರತಾ ಪಡೆ (NSG) ಸ್ಥಳಕ್ಕಾಗಮಿಸಿ ಘಟನೆಯ ಕುರಿತು ತನಿಖೆ ಆರಂಭಿಸುವಂತೆ ಸೂಚನೆ ನೀಡಿದರು.

    ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಶವಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 2,500 ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈಗಾಗಲೇ 36 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 10 ಮಂದಿಗೆ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

    ಘಟನೆ ನಡೆಯುತ್ತಿದ್ದಂತೆಯೇ ಬೆದರಿ ಜನ ದಿಕ್ಕಾಪಾಲಾಗಿ ಓಡಿ ಹೋದರು. ಸದ್ಯ 4 ಸದಸ್ಯರ ಎನ್‍ಐಎ ತಂಡವು ಸ್ಥಳೀಯ ಪೊಲೀಸರೊಂದಿಗೆ ಸ್ಥಳದಲ್ಲಿ ಬೀಡುಬಿಟ್ಟಿದೆ. ಪ್ರಾಥಮಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಎನ್‍ಐಎ, ಬಾಂಬ್ ಬ್ಲಾಸ್ಟ್ ಹಿಂದಿನ ಸೂತ್ರಧಾರಿಗಳು ಯಾರು ಅನ್ನೋದರ ಬಗ್ಗೆ ತನಿಖೆ ಆರಂಭಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ-  ಓರ್ವ ದುರ್ಮರಣ

    ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

    ತಿರುವನಂತಪುರಂ: ಕೇರಳದ ಎರ್ನಾಕುಲಂನ (Ernakulam, Kerala) ಕಲಮಶ್ಶೇರಿಯಲ್ಲಿ‌ (Kalamassery) ಬಾಂಬ್ ಸ್ಫೋಟವೊಂದು ನಡೆದಿದ್ದು, ಓರ್ವ ದುರ್ಮರಣಕ್ಕೀಡಾಗಿದ್ದಾರೆ.

    ಮೂರು ಪ್ರಬಲ  ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಇದನ್ನೂ ಓದಿ: ವೃದ್ಧ ತಾಯಿ ಮೇಲೆ ಮನಬಂದಂತೆ ಥಳಿಸಿದ ವಕೀಲ – ಪಾಪಿ ಮಗ ಅಂದರ್

    ಭಾನುವಾರದ ಪ್ರೇಯರ್ ಗಾಗಿ ಸುಮಾರು 2,500 ಮಂದಿ ಸೇರಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಭಾರೀ ಸ್ಪೋಟಗೊಂಡಿದೆ. ಘಟನೆಯಿಂದ ಗಾಬರಿಗೊಂಡು ಜನ ದಿಕ್ಕಾಪಾಲಾಗಿದ್ದರು. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು  ಹಾಗೂ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯ ಶಂಕೆ ಇದೆ.

    ಈ ಸಂಬಂಧ ಕೇರಳ ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ಕಲಮಶ್ಯೆರಿಯಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದ ವೇಳೆ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಎಲ್ಲ ಅಂಶಗಳನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]