Tag: ಕಲಾನಿಧಿ ಮಾರನ್

  • ರಜನಿ ‘ಜೈಲರ್ ಸಕ್ಸಸ್’: ಚಿತ್ರತಂಡಕ್ಕೆ ಚಿನ್ನದ ಉಡುಗೊರೆ

    ರಜನಿ ‘ಜೈಲರ್ ಸಕ್ಸಸ್’: ಚಿತ್ರತಂಡಕ್ಕೆ ಚಿನ್ನದ ಉಡುಗೊರೆ

    ಜೈಲರ್ ಸಿನಿಮಾ ಭರ್ಜರಿ ಗೆಲುವು (Success) ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ (Gift) ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.

    ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್ (Kalanidhi Maran), ನಟ ರಜನಿಕಾಂತ್ (Rajinikanth) ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು (Car) ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ  1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

    ಜೈಲರ್ (Jailer) ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು (Success) ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು.

    ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ (Cake)ತಿನ್ನಿಸಿದ್ದರು. ಇದನ್ನೂ ಓದಿ:ಅಮೆರಿಕಾದಲ್ಲಿ ‘ಮೈ ಹೀರೋ’ ಶೂಟಿಂಗ್ : ಹಾಲಿವುಡ್ ನಟ ಎರಿಕ್ ಭಾಗಿ

    ರಜನಿಕಾಂತ್ ಮೇನಿಯಾ ನಿಲ್ಲುತ್ತಿಲ್ಲ. ಒಂದಲ್ಲ ಎರಡಲ್ಲ. ಭರ್ತಿ ಹದಿನಾರು ದಿನಗಳು ಮುಗಿದಿದೆ. ಆದರೂ ಜನರು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದಾರೆ. ನೋಡಿದವರೇ ಮತ್ತೆ ಮತ್ತೆ ನೋಡುತ್ತಿದ್ದಾರೆ. ರಜನಿ ಯುಗ ಮುಗಿಯಿತು ಎಂದವರಿಗೆ ಕಪಾಳಕ್ಕೆ ಬಾರಿಸುವಂಥ ಉತ್ತರ ಕೊಟ್ಟಿದೆ ಜೈಲರ್. ವಿಶ್ವದಾದ್ಯಂತ ಇಲ್ಲಿವರೆಗೆ 600 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.

     

    ಮೊದಲ ದಿನ ಒಟ್ಟು 500 ಪ್ರದರ್ಶನ ಕಂಡಿತ್ತು ಜೈಲರ್. ಮೊದಲ ವಾರದ ನಂತರ ಪ್ರದರ್ಶನ ಸಂಖ್ಯೆ ಕಮ್ಮಿ ಆಗಬಹುದು. ಹೀಗಂತ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಐದು ನೂರರಲ್ಲಿ ಒಂದೇ ಒಂದು ಪ್ರದರ್ಶನ ಕಮ್ಮಿಯಾಗಿಲ್ಲ. ಜನರು ಸಿನಿಮಾ ನೋಡುವುದನ್ನು ನಿಲ್ಲಿಸುತ್ತಿಲ್ಲ. ರಜನಿ ಅಷ್ಟೊಂದು ಮೋಡಿ ಮಾಡಿದ್ದಾರೆ. ಏನಾದರಾಗಲಿ  ಹಳೇ ರಜನಿಕಾಂತ್ ಮತ್ತೆ ಸಿಕ್ಕಿದ್ದಾರೆ. ಫ್ಯಾನ್ಸ್ ಕೇಕೆ ಹಾಕುತ್ತಿದ್ದಾರೆ. ನಿರ್ದೇಶಕ ನೆಲ್ಸನ್ ನಿರ್ದೇಶನಕ್ಕೆ ಭೇಷ್ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈಲರ್ ಗೆಲುವು: ರಜನಿಗೆ 100 ಕೋಟಿ ರೂ.ಚೆಕ್, ದುಬಾರಿ ಉಡುಗೊರೆ

    ಜೈಲರ್ ಗೆಲುವು: ರಜನಿಗೆ 100 ಕೋಟಿ ರೂ.ಚೆಕ್, ದುಬಾರಿ ಉಡುಗೊರೆ

    ಜೈಲರ್ ಸಿನಿಮಾ ಯಶಸ್ವಿ ಬೆನ್ನಲ್ಲೇ ನಿರ್ಮಾಪಕ ಕಲಾನಿಧಿ ಮಾರನ್ (Kalanidhi Maran), ನಟ ರಜನಿಕಾಂತ್ (Rajinikanth) ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದಾರೆ. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು (Car) ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ  1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

    ಜೈಲರ್ (Jailer) ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು (Success) ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದಾರೆ.

    ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದಾರೆ. ಸ್ವತಃ ತಾವೇ ಎಲ್ಲರಿಗೂ ಕೇಕ್ (Cake)ತಿನ್ನಿಸಿದ್ದಾರಂತೆ.

    ರಜನಿಕಾಂತ್ ಮೇನಿಯಾ ನಿಲ್ಲುತ್ತಿಲ್ಲ. ಒಂದಲ್ಲ ಎರಡಲ್ಲ. ಭರ್ತಿ ಹದಿನಾರು ದಿನಗಳು ಮುಗಿದಿದೆ. ಆದರೂ ಜನರು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದಾರೆ. ನೋಡಿದವರೇ ಮತ್ತೆ ಮತ್ತೆ ನೋಡುತ್ತಿದ್ದಾರೆ. ರಜನಿ ಯುಗ ಮುಗಿಯಿತು ಎಂದವರಿಗೆ ಕಪಾಳಕ್ಕೆ ಬಾರಿಸುವಂಥ ಉತ್ತರ ಕೊಟ್ಟಿದೆ ಜೈಲರ್. ವಿಶ್ವಾದ್ಯಂತ ಇಲ್ಲಿವರೆಗೆ 600 ಕೋಟಿ ರೂಪಾಯಿ ಗಳಿಸಿದೆ. ಹಾಗಿದ್ದರೆ ಕರ್ನಾಟಕದಲ್ಲಿ(Karnataka) ಎಷ್ಟು ಕೋಟಿ? ಉಸಿರು ಬಿಗಿ ಹಿಡಿಯಿರಿ. ಅನಾಮತ್ತು ಅರವತ್ತು ಕೋಟಿಗೂ ಅಧಿಕ ಖಜಾನೆಗೆ ಸೇರಿಸಿದೆ. ದಟ್ ಈಸ್ ತಲೈವಾ ತಾಕತ್ತು. ಇದನ್ನೂ ಓದಿ: ‘ರಾಕೆಟ್ರಿ’ ಸಿನಿಮಾದಲ್ಲಿ ಇಸ್ರೊಗೆ ಕಳಂಕ ತರುವಂತಹ ಸುಳ್ಳುಗಳನ್ನು ಹೇಳಲಾಗಿದೆ: ಮಾಜಿ ವಿಜ್ಞಾನಿಗಳ ಆರೋಪ

    ಮೊದಲ ದಿನ ಒಟ್ಟು 500 ಪ್ರದರ್ಶನ ಕಂಡಿತ್ತು ಜೈಲರ್. ಮೊದಲ ವಾರದ ನಂತರ ಪ್ರದರ್ಶನ ಸಂಖ್ಯೆ ಕಮ್ಮಿ ಆಗಬಹುದು. ಹೀಗಂತ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಐದು ನೂರರಲ್ಲಿ ಒಂದೇ ಒಂದು ಪ್ರದರ್ಶನ ಕಮ್ಮಿಯಾಗಿಲ್ಲ. ಜನರು ಸಿನಿಮಾ ನೋಡುವುದನ್ನು ನಿಲ್ಲಿಸುತ್ತಿಲ್ಲ. ರಜನಿ ಅಷ್ಟೊಂದು ಮೋಡಿ ಮಾಡಿದ್ದಾರೆ. ಏನಾದರಾಗಲಿ. ಹಳೇ ರಜನಿಕಾಂತ್ ಮತ್ತೆ ಸಿಕ್ಕಿದ್ದಾರೆ. ಫ್ಯಾನ್ಸ್ ಕೇಕೆ ಹಾಕುತ್ತಿದ್ದಾರೆ. ನಿರ್ದೇಶಕ ನೆಲ್ಸನ್ ನಿರ್ದೇಶನಕ್ಕೆ ಭೇಷ್ ಎಂದಿದ್ದಾರೆ.

     

    ಸಿನಿಮಾರಂಗದ ಆರಾಧ್ಯ ದೈವ ರಜನಿಕಾಂತ್ ಅವರನ್ನ ಜೈಲರ್ (Jailer) ಸಿನಿಮಾ ಮೂಲಕ ಮತ್ತೆ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ತಲೈವಾ ಮತ್ತೆ ತೆರೆಯ ಮೇಲೆ ಮಿಂಚೋದಕ್ಕೆ ಸೂಕ್ತ ಸಿನಿಮಾ ಅಂತಿದ್ದಾರೆ. ಈಗ ಅವರ ಮುಂದಿನ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರೆಂಜ್ ಜೆರ್ಸಿಯಲ್ಲಿ ರೈಸರ್ಸ್‍ಗೆ ಚೀಯರ್ ಮಾಡುತ್ತಿರುವ ಚೆಲುವೆ – ಯಾರೂ ಈ ಕಾವ್ಯ?

    ಆರೆಂಜ್ ಜೆರ್ಸಿಯಲ್ಲಿ ರೈಸರ್ಸ್‍ಗೆ ಚೀಯರ್ ಮಾಡುತ್ತಿರುವ ಚೆಲುವೆ – ಯಾರೂ ಈ ಕಾವ್ಯ?

    ಅಬುಧಾಬಿ: ಐಪಿಎಲ್ ಕ್ರಿಕೆಟ್ ಹಬ್ಬ ದಿನೇ ದಿನೇ ರಂಗೇರುತ್ತಿದೆ. ಈಗ ಸನ್ ರೈಸರ್ಸ್ ಹೈದರಾಬಾದ್ ತಂಡ ಫ್ಯಾನ್ ಸ್ಟ್ಯಾಂಡಿನಲ್ಲಿ ಓರ್ವ ಚೆಲುವೆ ಕಾಣಿಸಿಕೊಂಡಿದ್ದು, ಈಕೆ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

    ಹೌದು ವಾರ್ನರ್ ಪಡೆಗೆ ಪ್ರತಿ ಪಂದ್ಯದಲ್ಲೂ ಚೀಯರ್ ಮಾಡಲು ಆರೆಂಜ್ ಜೆರ್ಸಿ, ಕಣ್ಣಿಗೆ ಕಪ್ಪು ಕನ್ನಡಕ ತೊಟ್ಟ ಯುವತಿಯೊಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಅವರು ಯಾರು ಎಂಬ ಚರ್ಚೆ ನಡೆಯುತ್ತಿದೆ. ಇದಕ್ಕೆ ಈಗ ಉತ್ತರ ಸಿಕ್ಕಿದ್ದು, ಅವರು ಹೈದರಾಬಾದ್ ತಂಡ ಮಾಲೀಕ ಕಲಾನಿಧಿ ಮಾರನ್ ಅವರ ಪುತ್ರಿ 28 ವರ್ಷದ ಕಾವ್ಯ ಮಾರನ್ ಎಂದು ತಿಳಿದು ಬಂದಿದೆ.

    ಕೊರೊನಾ ಕಾರಣದಿಂದ ಐಪಿಎಲ್ ಆರು ತಿಂಗಳು ತಡವಾಗಿ ಯುಎಇಯಲ್ಲಿ ಆರಂಭವಾಗಿದೆ. ಈ ಬಾರಿ ಯಾವುದೇ ಪ್ರೇಕ್ಷಕನಿಲ್ಲದೇ ಖಾಲಿ ಮೈದಾನದಲ್ಲಿ ಐಪಿಎಲ್ ಆರಂಭವಾಗಿದೆ. ತಂಡದ ಆಟಗಾರರು, ಸಿಬ್ಬಂದಿಗಳು ಬಿಟ್ಟರೆ ಕೇವಲ ತಂಡದ ಮಾಲೀಕರು ಮತ್ತು ಅವರ ಕುಟುಂಬದವರು ಮಾತ್ರ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂತೆಯೇ ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಮಾಲೀಕ ಕಲಾನಿತಿ ಮಾರನ್ ಅವರ ಪುತ್ರಿ ಕಾವ್ಯ ಮಾರನ್ ಅವರು ಮೈದಾನದಲ್ಲಿ ಮಿಂಚುತ್ತಿದ್ದಾರೆ.

    ಕಾವ್ಯ ಮಾರನ್ ಅವರ ತಂದೆ ಕಲಾನಿಧಿ ಮಾರನ್ ಅವರು ಸನ್ ಟಿವಿ ನೆಟ್‍ವರ್ಕ್ ನ ಮಾಲೀಕರಾಗಿದ್ದು, 31 ಟಿವಿ ಚಾನೆಲ್ ಮತ್ತು 45 ಎಫ್‍ಎಂ ಚಾನೆಲ್ ಹೊಂದಿದ್ದಾರೆ. ಕಾವ್ಯ ಮಾರನ್ ಚೆನ್ನೈನ ಸ್ಟೆಲಿಯಾ ಮಾರಿಸ್ ಕಾಲೇಜಿನಲ್ಲಿ ಬಿಕಾಂ ಓದಿದ್ದಾರೆ. ನಂತರ ನ್ಯೂಯಾರ್ಕ್ ಯುನಿವರ್ಸಿಟಿಯಲ್ಲಿ ಎಂಬಿಎ ಓದಿ ಮುಗಿಸಿದ್ದಾರೆ. ಓದಿನ ನಂತರ ತಮ್ಮ ಸನ್ ಟಿವಿಯಲ್ಲೇ ಒಂದು ವರ್ಷ ಕೆಲಸ ಮಾಡಿ, ಕಳೆದ ವರ್ಷದಿಂದ ಸನ್ ಟಿವಿ ನೆಟ್‍ವರ್ಕ್ ಬೋರ್ಡಿನ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ 2019ರಲ್ಲಿ ನಡೆದ ಐಪಿಎಲ್ ಬೀಡಿಂಗ್ ಕಾರ್ಯಕ್ರಮದಲ್ಲಿ ಕೂಡ ಕಾವ್ಯ ಕಾಣಿಸಿಕೊಂಡಿದ್ದರು.

    ಓದಿನ ನಂತರ ಅಪ್ಪನ ಉದ್ಯಮದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿರುವ ಕಾವ್ಯ ಮಾರನ್ ಅವರು, ಸನ್ ಟಿವಿ ಗ್ರೂಪಿನ ಡಿಜಿಟೆಲ್ ಮಾರ್ಕೆಟಿಂಗ್‍ನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಸದ್ಯ ಕಾವ್ಯ ಸನ್ ಟಿವಿ ಗ್ರೂಪಿನ ಸನ್ ಎನ್‍ಎಕ್ಸ್‍ಟಿ ಎಂಬ ಒಟಿಟಿ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಇದರ ಜೊತೆಗೆ ತಮ್ಮ ಮಾಲೀಕತ್ವದ ಸನ್‍ರೈಸರ್ಸ್ ಹೈದರಾಬಾದ್ ತಂಡವನ್ನು ಹುರಿದುಂಬಿಸಲು ಪ್ರತಿ ಪಂದ್ಯಕ್ಕೂ ಮೈದಾನಕ್ಕೆ ಬಂದು ಚೀಯರ್ ಮಾಡುತ್ತಿದ್ದಾರೆ.

    ಹಲವಾರು ಉದ್ಯಮಿಗಳು ಮತ್ತು ಚಿತ್ರರಂಗದವರು ಐಪಿಎಲ್ ತಂಡವನ್ನು ಖರೀದಿ ಮಾಡಿದ್ದು, ತಮ್ಮ ತಂಡವನ್ನು ಪ್ರೋತ್ಸಾಹಿಸಲು ಮೈದಾನಕ್ಕೆ ಬರುತ್ತಿದ್ದಾರೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಾಲೀಕ ಶಾರುಖ್ ಖಾನ್ ಮತ್ತು ಮಗಳು ಸುಹಾನ ಖಾನ್ ಮತ್ತು ಕುಟುಂಬದವರು ಬಂದಿದ್ದರು. ಜೊತೆಗೆ ತಮ್ಮ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಚೀಯರ್ ಮಾಡಲು ನಟಿ ಪ್ರೀತಿ ಜಿಂಟಾ ಬರುತ್ತಾರೆ. ಮುಂಬೈ ಇಂಡಿಯನ್ಸ್ ತಂಡ ಮಾಲೀಕ ಮುಖೇಶ್ ಅಂಬಾನಿಯವರ ಪುತ್ರ ಆಕಾಶ್ ಅಂಬಾನಿ ಕೂಡ ಐಪಿಎಲ್ ಪಂದ್ಯದ ವೇಲೆ ಕಾಣಿಸಿಕೊಳ್ಳುತ್ತಾರೆ.