Tag: ಕಲಾಪ

  • ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಿ: ಯತೀಂದ್ರ

    ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಿ: ಯತೀಂದ್ರ

    ಬೆಂಗಳೂರು: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah)  ಮನವಿ ಮಾಡಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಚರ್ಚಿಸಿದ ಅವರು, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮತ್ತೆ ಜಾರಿ ಮಾಡಬೇಕು. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಯೋಜನೆಯಡಿ 1 ಲಕ್ಷ ರೂ.ನಲ್ಲಿ 20 ಕುರಿ ಅಥವಾ ಮೇಕೆ ತೆಗೆದುಕೊಳ್ಳುವ ಯೋಜನೆ ಇದಾಗಿದೆ. 20 ಕುರಿ, ಮೇಕೆಗೆ ಹಣ ಕೊಡಲು ಆಗದೇ ಹೋದರೆ 10 ಕುರಿ ಅಥವಾ ಮೇಕೆಗೆ ಆದರೂ ರಾಜ್ಯ ಸರ್ಕಾರವೇ ಹಣ ಕೊಟ್ಟು ಯೋಜನೆ ಪ್ರಾರಂಭ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಗಂಗಾ ಕಲ್ಯಾಣ ಗದ್ದಲ – ಡಿಕೆಶಿ ಕರ್ಮ ಕಳೆಯಲು ಗಂಗಾಸ್ನಾನ: ಅಶೋಕ್

    ಇದಕ್ಕೆ ಸಚಿವ ವೆಂಕಟೇಶ್ ಪ್ರತಿಕ್ರಿಯಿಸಿ, ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಲ್ಲಿ ಫಲಾನುಭವಿಗಳು ಹಣ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ ಆರ್ಥಿಕ ಇಲಾಖೆ ಯೋಜನೆ ಸ್ಥಗಿತ ಮಾಡಲು ಸೂಚನೆ ಕೊಟ್ಟಿತ್ತು. ಹೀಗಾಗಿ ಯೋಜನೆ ರದ್ದು ಮಾಡಿದ್ದೇವೆ. ಯೋಜನೆ ಮತ್ತೆ ಪ್ರಾರಂಭ ಮಾಡಲು ಸಿಎಂ ಅವರಿಗೆ ಮನವಿ ಮಾಡಿದ್ದೇವೆ. ಸಿಎಂ ಒಪ್ಪಿಗೆ ಕೊಟ್ಟರೆ ಯೋಜನೆ ಮತ್ತೆ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 40 ಬಾರಿ ದುಬೈಗೆ ಹೋಗಿದ್ದ ರನ್ಯಾ ಅಧಿಕಾರಿಗಳ ಬಲೆಗೆ ಬಿದ್ದಿದ್ದೆ ರೋಚಕ

  • Don’t Allow him to Speak ಎಂದ ಸಿಎಂ: ಪ್ಲೀಸ್ ಸೇರಿಸಿ Kill Him ಎನ್ನಬಹುದಾ ಎಂದ ಸುರೇಶ್ ಕುಮಾರ್

    Don’t Allow him to Speak ಎಂದ ಸಿಎಂ: ಪ್ಲೀಸ್ ಸೇರಿಸಿ Kill Him ಎನ್ನಬಹುದಾ ಎಂದ ಸುರೇಶ್ ಕುಮಾರ್

    ಬೆಂಗಳೂರು: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah)‌ Don’t Allow him to Speak ಹೇಳಿಕೆ ಬಗ್ಗೆ ವಾಗ್ವಾದ ನಡೆದಿದೆ.

    ಶಾಸಕ ಶಿವಲಿಂಗೇಗೌಡ ಹಾಗೂ ಶಾಸಕ ಅಶ್ವತ್ಥನಾರಾಯಣ್ ಮಾತನಾಡುವ ವೇಳೆ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದಾರೆ. ಈ ವೇಳೆ ಡಿಸಿಎಂ ಆಗಿದ್ದವರು, ಮಂತ್ರಿ ಆಗಿದ್ದವರು, ಬೇರೆಯವರು ಮಾತನಾಡುವಾಗ ಅವಕಾಶ ಮಾಡಿಕೊಡಬೇಕು. ನಿಮ್ಮ ಮಾತುಗಳು ಏನಾದರೂ ಇದ್ದರೆ ಪಾಯಿಂಟ್ ಆಫ್ ಆರ್ಡರ್ ರೈಸ್ ಮಾಡಬೇಕು ಎಂದು ಅಶ್ವತ್ಥನಾರಾಯಣ್ ಅವರಿಗೆ ಹೇಳಿದ್ದಾರೆ. ಇದನ್ನೂ ಓದಿ: ಹಿರೇಕೋಡಿ ಜೈನಮುನಿಗಳ ಮೃತದೇಹ ಸಾಗಿಸಿದ್ದ ಬೈಕ್ ಜಪ್ತಿ

    ಇದಕ್ಕೆ ಪ್ರತಿಯಾಗಿ ನಾವು ವಿಷಯಾಂತರ ಮಾಡಿದಾಗ ಅವಕಾಶ ಕೊಡಲಿಲ್ಲ. ಈಗ ಅವರು ಮಾತಾಡಿದ್ರೆ ಸುಮ್ನೆ ಇರಬೇಕಾ ಎಂದು ಅಶ್ವತ್ಥನಾರಾಯಣ್ ತಿರುಗೇಟು ಕೊಟ್ಟಿದ್ದಾರೆ. ಈ ವೇಳೆ ಗರಂ ಆದ ಸಿಎಂ Don’t Allow him to Speak ಎಂದಿದ್ದಾರೆ. ಇದಕ್ಕೆ ಶಾಸಕ ಸಿ.ಸಿ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಕಡತದಿಂದ ಪದ ತೆಗೆಯವಂತೆ ಆಗ್ರಹಿಸಿದ್ದಾರೆ.

    ನಾನು ಮಾತಾಡಿರುವುದು ಅಸಂಸದೀಯ ಪದನಾ? ನಾನು ಸೂಚನೆ ಕೊಟ್ಟಿದ್ದಲ್ಲ. ಪ್ಲೀಸ್ ಡೋಂಟ್ ಅಲೋ ಹಿಮ್ ಟು ಸ್ಪೀಕ್ ಎಂದಿದ್ದೇನೆ ಎಂದು ಸಿಎಂ ಸಮರ್ಥನೆ ಮಾಡಿಕೊಂಡಿದ್ದಾರೆ. ಇದಕ್ಕೆ ಶಾಸಕ ಸುರೇಶ್ ಕುಮಾರ್, ಹಾಗಾದ್ರೆ ಪ್ಲೀಸ್ Kill Him ಎಂದು ಹೇಳಲು ಆಗುತ್ತದೆಯೇ? ಪ್ಲೀಸ್ ಸೇರಿಸಿ ಏನು ಬೇಕಾದರೂ ಹೇಳಬಹುದಾ? ಎಂದು ಟಾಂಗ್ ಕೊಟ್ಟಿದ್ದಾರೆ.

    ಶಿವಲಿಂಗೇಗೌಡ ಮಾತನಾಡುವಾಗ ಮಧ್ಯಪ್ರವೇಶ ಮಾಡಿದ ಸವದಿ, ಕೇಂದ್ರದ ಬಗ್ಗೆ ಮಾತಾಡಿದರೆ ಅವರು ಸುಮ್ಮನೆ ಕೂರಲು ಆಗುತ್ತದೆಯೇ? ಎಲ್ಲ ಪೈಪೋಟಿಯಲ್ಲಿ ಮಾತನಾಡುತ್ತಿದ್ದಾರೆ. ಎಲ್ಲರಿಗೂ ಮಾತಾಡಿದ ತಕ್ಷಣ ಮಾರ್ಕ್ಸ್ ಬರುತ್ತಿದೆ. ವಿರೋಧ ಪಕ್ಷದ ನಾಯಕನ ಆಯ್ಕೆಯ ಮಾರ್ಕ್ಸ್ ಪ್ರಿಂಟ್ ಆಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಇದಕ್ಕೆ ಅಶ್ವತ್ಥನಾರಾಯಣ್, ಅಯ್ಯೋ ತಾವು ಇಲ್ಲಿದ್ದೇ ಹೋಗಿದ್ದಲ್ಲವೇ? ಯಾವ ನೈತಿಕತೆ ಇದೆ ನಮ್ಮ ಬಗ್ಗೆ ಮಾತಾನಾಡಲು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸವದಿ, ಸ್ವಾಭಿಮಾನಕ್ಕೆ ಧಕ್ಕೆ ಆದಾಗ ಹೊರಗೆ ಬಂದಿದ್ದೀನೆ. ನಿಮ್ಮ ರೀತಿ ಮುದುಡಿಕೊಂಡು ಕುಳಿತಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಅಕ್ಕಿ, ಅನುದಾನ ಜಟಾಪಟಿ – ಶಿವಲಿಂಗೇಗೌಡ ವರ್ಸಸ್ ಬಿಜೆಪಿ ಶಾಸಕರ ವಾಕ್ಸಮರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ: ಪರಮೇಶ್ವರ್

    ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ: ಪರಮೇಶ್ವರ್

    ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ (Jail) ಕೈದಿಗಳಿಗೆ ಸ್ಥಳಾವಕಾಶದ ಕೊರತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ಹೇಳಿದ್ದಾರೆ.

    ವಿಧಾನ ಪರಿಷತ್ ಕಲಾಪದ (Session) ವೇಳೆ ಬಿಜೆಪಿಯ (BJP) ಪ್ರತಾಪ್ ಸಿಂಹ ನಾಯಕ್ ಕಾರಾಗೃಹಗಳ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವರು ಕಾರಾಗೃಹಗಳಲ್ಲಿ ಸ್ಥಳಾವಕಾಶಕ್ಕಿಂತ ಹೆಚ್ಚು ಕೈದಿಗಳಿದ್ದಾರೆ. ರಾಜ್ಯದಲ್ಲಿ 54 ವಿವಿಧ ಮಾದರಿಯ ಕಾರಾಗೃಹಗಳಿವೆ. ಇದರಲ್ಲಿ 28 ಕಾರಾಗೃಹಗಳಲ್ಲಿ ಸ್ಥಳಾವಕಾಶಕ್ಕಿಂತ ಹೆಚ್ಚು ಕೈದಿಗಳನ್ನು ಇರಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ವೀಸಾ ಮುಗಿದ ವಿದೇಶಿಗರನ್ನು ವಾಪಸ್ ಕಳುಹಿಸಲು ಕ್ರಮ ತೆಗೆದುಕೊಳ್ತೀವಿ: ಪರಮೇಶ್ವರ್

    ರಾಜ್ಯದ ಕಾರಾಗೃಹಗಳಲ್ಲಿ 14,237 ಕೈದಿಗಳಿಗೆ ಅಧಿಕೃತ ಸ್ಥಳಾವಕಾಶವಿದೆ. ಆದರೆ ಇದರಲ್ಲಿ 16,053 ಕೈದಿಗಳನ್ನು ಇರಿಸಲಾಗಿದೆ. ಸ್ಥಳದ ಕೊರತೆ ಇರುವುದರಿಂದ 6 ಹೊಸ ಕಾರಾಗೃಹ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೇ 8 ಕಾರಾಗೃಹಗಳಲ್ಲಿ ಹೆಚ್ಚುವರಿ ಬ್ಯಾರಕ್ ನಿರ್ಮಿಸಲಾಗುತ್ತಿದೆ. ಇದರಲ್ಲಿ ಸುಮಾರು 3,700 ಕೈದಿಗಳನ್ನು ಇರಿಸಲು ಅವಕಾಶ ಆಗಲಿದೆ. ಇಷ್ಟಾದರೂ ನಮಗೆ ಸ್ಥಳದ ಕೊರತೆ ಇರಲಿದೆ. ಹೀಗಾಗಿ ಹೆಚ್ಚು ಕಾರಾಗೃಹ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಸನ್ನಡತೆ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ. ಕೈದಿಗಳಲ್ಲಿ ಮನಸ್ಸು ಬದಲಾವಣೆಗೆ ಕ್ರಮವಹಿಸಲಾಗಿದೆ.ಕೌನ್ಸಿಲರ್‌ಗಳ ನೇಮಕ ಮಾಡಲಾಗುತ್ತಿದೆ. ಕೈದಿಗಳಿಗೆ ಜೈಲಿನಲ್ಲಿ ಅನೇಕ ವೃತ್ತಿಗಳಿಗೆ ತರಬೇತಿ ಕೊಡಲಾಗುತ್ತದೆ. ವಿದ್ಯಾವಂತರು ಇವತ್ತು ಬೇರೆ ಬೇರೆ ಕಾರಣಕ್ಕೆ ಜೈಲಿನಲ್ಲಿ ಇದ್ದಾರೆ. ಅವರಿಗೆ ತಂತ್ರಜ್ಞಾನಾ ಆಧಾರಿತ ತರಬೇತಿ ಕೊಡುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ವಿಧಾನಸಭೆಯಲ್ಲಿ 15 ಲಕ್ಷದ ಜಟಾಪಟಿ – ಕಾಂಗ್ರೆಸ್, ಬಿಜೆಪಿ ವಾಕ್ಸಮರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪುನಿತ್ ಕೆರೆಹಳ್ಳಿಗೆ ನೋಟಿಸ್ – ವಿಧಾನ ಪರಿಷತ್ ಕಲಾಪದಲ್ಲಿ ಗದ್ದಲ

    ಪುನಿತ್ ಕೆರೆಹಳ್ಳಿಗೆ ನೋಟಿಸ್ – ವಿಧಾನ ಪರಿಷತ್ ಕಲಾಪದಲ್ಲಿ ಗದ್ದಲ

    ಬೆಂಗಳೂರು: ನಾಗರಕಟ್ಟೆ ಪೂಜೆಗೆ ಅನುಮತಿ ಪಡೆಯಬೇಕು ಎಂದು ಪುನಿತ್ ಕೆರೆಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ (Session) ದೊಡ್ಡ ಗದ್ದಲಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ವಿಪಕ್ಷ ಬಿಜೆಪಿ (BJP) ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದೆ.

    ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ವೈ.ಎ ನಾರಾಯಣಸ್ವಾಮಿ, ಉಪ್ಪಾರಪೇಟೆ ಪೊಲೀಸ್ ಠಾಣೆಯ ಬಳಿ ಇರುವ ತುಳಸಿ ವನದಲ್ಲಿ ಜೀರ್ಣೋದ್ಧಾರವಾಗಿದ್ದ ನಾಗರಕಟ್ಟೆ ಪೂಜೆಗೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮುಂದಾಗಿದ್ದರು. ಇದಕ್ಕೆ ಪೊಲೀಸರು ನೋಟಿಸ್ ನೀಡಿ ಪೂಜೆ ಮಾಡಲು ಅನುಮತಿ ಪಡೆದಿದ್ದೀರಾ? ಪಡೆದಿದ್ದರೆ ಪತ್ರ ಕೊಡಿ ಎಂದಿದ್ದಾರೆ. ಅಲ್ಲದೇ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು ಎಂದು ನೋಟಿಸ್ ನೀಡಿದ್ದಾರೆ. ಇದರಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಕೂಡಲೇ ನೋಟಿಸ್ ವಾಪಸ್ ಪಡೆಯಬೇಕು. ನೋಟಿಸ್ ಕೊಟ್ಟ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಆವತ್ತು ರೆಬೆಲ್ ವಾರ್, ಇವತ್ತು ಕೂಲ್ ಅಟ್ಯಾಕ್- ವರ್ಗಾವಣೆ ದಂಧೆ ವಿರುದ್ಧ ಬದಲಾಯ್ತಾ HDK ಧೋರಣೆ?

    ನಾರಾಯಣಸ್ವಾಮಿ ಪ್ರಸ್ತಾಪಕ್ಕೆ ಬೆಂಬಲಿಸಿ ಎದ್ದು ನಿಂತ ಬಿಜೆಪಿ ಸದಸ್ಯರು ಪೊಲೀಸರ (Police) ವಿರುದ್ಧ ಕಿಡಿಕಾರಿದ್ದಾರೆ. ಪೂಜೆ ಮಾಡಲು ಇವರಿಗೆ ಅನುಮತಿ ಕೇಳಬೇಕಾ? ಹಿಂದೂಗಳಿಗೆ ಕೇಳಿದ ಹಾಗೆ ನಮಾಜ್, ಮಸೀದಿಯಲ್ಲಿ, ಚರ್ಚ್‍ನಲ್ಲಿ ಪೂಜೆ ಮಾಡಲಿ ಆಗ ಅನುಮತಿಬೇಕು ಎಂದು ಕೇಳುತ್ತೀರಾ? ಕೂಡಲೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಬಿಜೆಪಿ ಹಿರಿಯ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

    ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಪ್ರಶ್ನೆ ಕೇಳಿದ್ದೀರಿ, ಉತ್ತರ ನೀಡಿದ ನಂತರ ಪ್ರಶ್ನೆ ಕೇಳಬೇಕು. ನಿಯಮಗಳ ಪ್ರಕಾರ ಹೋಗಬೇಕು ತಿಳಿದವರಾಗಿ ನೀವೆಲ್ಲಾ ಹೀಗೆ ಮಾಡಿದರೆ ಹೇಗೆ? ಎಂದು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಆದರೂ ಇದನ್ನು ಒಪ್ಪದ ಕೋಟಾ ಶ್ರೀನಿವಾಸ ಪೂಜಾರಿಯವರು ಈಗಲೇ ಉತ್ತರ ಬೇಕು, ಇದರಲ್ಲಿ ರಾಜೀ ಇಲ್ಲ ಎಂದು ಪಟ್ಟು ಹಿಡಿದರು.

    ಈ ವೇಳೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ವಾಸ್ತವವಾಗಿ ಏನು ನಡೆದಿದೆ ಎಂದು ವರದಿ ತರಿಸಿಕೊಳ್ಳಬೇಕು. ಪ್ರತಿಪಕ್ಷ ಸದಸ್ಯರ ಭಾವನೆಗೆ ಗೌರವ ಕೊಡಬೇಕು. ಇದನ್ನು ಗೃಹ ಸಚಿವರ ಗಮನಕ್ಕೆ ತಂದು ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡು ಉತ್ತರ ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಸರ್ಕಾರದ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿದ ಕೋಟಾ ಶ್ರೀನಿವಾಸ ಪೂಜಾರಿ, ದೇವಸ್ಥಾನದಲ್ಲಿ ಕೈ ಮುಗಿಯಲು ಅನುಮತಿ ಪಡೆಯಬೇಕು ಎಂದರೆ ಜನ ಹೇಗೆ ಬದುಕಬೇಕು ಹಾಗಾಗಿ ಈಗಲೇ ಉತ್ತರಿಸಬೇಕು ಎಂದು ಪಟ್ಟು ಸಡಿಲಿಸಲು ನಿರಾಕರಿಸಿದರು. ಈ ವೇಳೆ ಮತ್ತೊಮ್ಮೆ ಪೀಠದಿಂದ ಎದ್ದು ನಿಂತ ಸಭಾಪತಿ ಹೊರಟ್ಟಿ, ಈಗಲೇ ಉತ್ತರ ಬೇಕು ಎಂದರೆ ಹೇಗೆ? ನೀವು ಹಾಗೆಯೇ ಉತ್ತರ ಕೊಟ್ಟಿದ್ದಿರಾ? ನಿಯಮ ಇದೆ ಅದರಂತೆ ಸದನ ನಡೆಸಬೇಕು ಸಹಕಾರ ಕೊಡಿ ಎಂದು ಗರಂ ಆದರು.

    ಈ ವೇಳೆ ನಿಯಮಾವಳಿ ಪ್ರಸ್ತಾಪಿಸಿದ ಸಚಿವ ಕೃಷ್ಣಭೈರೇಗೌಡ, ಶೂನ್ಯ ವೇಳೆ ಪ್ರಸ್ತಾಪಗಳಿಗೆ ಆದಷ್ಟು ತಕ್ಷಣದಲ್ಲಿ ಅಥವಾ ಎರಡು ದಿನದ ಒಳಗೆ ಉತ್ತರ ನೀಡುವ ಅವಕಾಶ ನಿಯಮಾವಳಿಯಲ್ಲಿದೆ. ಅದರಂತೆ ನಾವು ಉತ್ತರ ಒದಗಿಸಿಕೊಡುತ್ತೇವೆ. ನಾವು ಹೇಳಿದಂತೆ ನಡೆಯಬೇಕು ನಾವು ಹೇಳಿದ್ದೇ ಕಾನೂನು ಎಂದರೆ ಹೇಗೆ? ಎಂದು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು.

    ಈ ವೇಳೆ ಸಚಿವರ ವರ್ತನೆ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಗದ್ದಲ ಹೆಚ್ಚಾಗಿ ಸದನ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಿದರು. ಈ ದಿನ (ಬುಧವಾರ) ಸದನ ಮುಗಿಯುವುದರೊಳಗೆ ಗೃಹ ಸಚಿವರಿಂದ ಉತ್ತರ ಕೊಡಿಸಲು ಸಭಾ ನಾಯಕರು ಒಪ್ಪಿದ ಬಳಿಕ ಬಿಜೆಪಿ ನಾಯಕರು ಧರಣಿ ವಾಪಸ್ ಪಡೆದರು. ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ ವಿರುದ್ಧ ಬಿಜೆಪಿ ಪ್ರತಿಭಟನೆ – ರಾಜ್ಯಪಾಲರಿಗೆ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಂದ್ರಾಕ ಶುಲ್ಕ ಹೆಚ್ಚಳ ಇಲ್ಲ, ಜಮೀನು ಮೌಲ್ಯ ಪರಿಷ್ಕರಣೆ: ಕೃಷ್ಣಭೈರೇಗೌಡ

    ಮುಂದ್ರಾಕ ಶುಲ್ಕ ಹೆಚ್ಚಳ ಇಲ್ಲ, ಜಮೀನು ಮೌಲ್ಯ ಪರಿಷ್ಕರಣೆ: ಕೃಷ್ಣಭೈರೇಗೌಡ

    ಬೆಂಗಳೂರು: ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ ರೈತರಿಗಾಗುತ್ತಿರುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಹೇಳಿದ್ದಾರೆ.

    ವಿಧಾನ ಪರಿಷತ್ ಕಲಾಪದ (Session) ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ (BJP) ತುಳಿಸಿ ಮುನಿರಾಜುಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಜಮೀನಿನ ಮೌಲ್ಯ ಪರಿಷ್ಕರಣೆ ನಡೆಸಿ ಕನಿಷ್ಟ ನಾಲ್ಕು ವರ್ಷವಾಗಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಜಮೀನು ಮೌಲ್ಯ ಪರಿಷ್ಕರಣೆ ನಡೆಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ತಪ್ಪಿದ ಭಾರೀ ದುರಂತ – ಖಾಸಗಿ ವಿಮಾನ ತುರ್ತು ಭೂಸ್ಪರ್ಶ

    ಜಮೀನಿನ ಮೌಲ್ಯ ಪರಿಷ್ಕರಣೆಯ ಆಧಾರದಲ್ಲಿ ರೈತರ ಭೂಮಿಗಳಿಗೆ ಮಾರುಕಟ್ಟೆ ಮೌಲ್ಯ ನಿಗದಿಯಾಗುತ್ತದೆ. ಆದರೆ ರೈತರು ಜಮೀನು ಮಾರಾಟಕ್ಕೆ ಮುಂದಾಗುವಾಗ ಅವರಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಅಲ್ಲದೆ ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಹಣ ವಹಿವಾಟು ಅಧಿಕವಾಗಿದ್ದು ಕಪ್ಪು ಹಣ ಪರಿವರ್ತನೆಗೂ ಕಾರಣವಾಗಿದೆ. ಹೀಗಾಗಿ ಜಮೀನಿನ ಮೌಲ್ಯವನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.

    ಸಬ್ ರಿಜಿಸ್ಟ್ರಾರ್ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ಮುನಿರಾಜುಗೌಡ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವರು, ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಅಧಿಕ ಸಂಖ್ಯೆಯಲ್ಲಿ ಜನ ಬರುವ ಕಾರಣ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ವಹಣೆ ಸವಾಲಿನ ಕೆಲಸವಾಗಿದೆ. ಆದರೆ ಮುಂದಿನ ಒಂದು ವರ್ಷದಲ್ಲಿ ಎಲ್ಲಾ ಕಚೇರಿಗಳಲ್ಲೂ ಉತ್ತಮ ಜನಸ್ನೇಹಿ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಪಾಸ್‍ಪೋರ್ಟ್ ಕಚೇರಿಗಳ ಮಾದರಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲೂ ಉತ್ತಮ ಮೂಲಭೂತ ಸೌಲಭ್ಯ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ್ಮೇಲೂ ಸಾಬ್ರಿಗೆ ರಕ್ಷಣೆ ಇಲ್ಲ: ರೇವಣ್ಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

    ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

    ಬೆಂಗಳೂರು: 16ನೇ ವಿಧಾನಸಭೆಗೆ (Assembly) ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26 ರಿಂದ ಜೂ.28ರವರೆಗೆ 3 ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ (U.T Khader) ಅವರು ತಿಳಿಸಿದ್ದಾರೆ.

    ಬುಧವಾರ ವಿಧಾನಸೌಧದದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ (Session) ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಯುವಜನರ ಆಲೋಚನೆಗಳು, ದೂರದೃಷ್ಟಿ, ಪ್ರತಿಭೆಯನ್ನು ಬಿಂಬಿಸಲು ಪ್ರಕೃತಿಯ ಜೊತೆಗೆ ತರಬೇತಿ ಆಯೋಜಿಸಲಾಗಿದೆ. ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಈ ಶಿಬಿರ ನಡೆಯಲಿದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳಬೆಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಕ್ರಮ ಮುಚ್ಚಲು ಕಾಂಗ್ರೆಸ್‌ನಿಂದಲೇ ಸ್ತ್ರೀ ಶಕ್ತಿ ಸಂಘಗಳ ಪ್ರತಿಭಟನೆ: ಎಚ್‌ಡಿಕೆ ಬಾಂಬ್

    ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

    ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಕುರಿತಾಗಿ ಚರ್ಚೆ ನಡೆಯಲಿದೆ. ವಿಧಾನಮಂಡಲದ ಕಾರ್ಯ ಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ. ದೈಹಿಕ, ಮಾನಸಿಕ ಆರೋಗ್ಯ, ಸದೃಢತೆ ಜೊತೆಗೆ ಅತ್ಯಂತ ಆತ್ಮವಿಶ್ವಾಸದಿಂದ ಸದನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸದಸ್ಯರಿಗೆ ತರಬೇತಿ ಅಗತ್ಯ ಎಂದು ಅವರು ಹೇಳಿದ್ದಾರೆ.

    ಜುಲೈ 3ರಿಂದ ಅಧಿವೇಶನ ಆರಂಭ:
    16ನೇ ವಿಧಾನಸಭೆಯ 1ನೇ ಅಧಿವೇಶನದ ಮುಂದುವರಿದ ಉಪವೇಶನ ಇದೇ ಜು.3ರಿಂದ ಆರಂಭವಾಗಲಿದೆ. ಜು.14 ರವರೆಗೆ 10 ದಿನಗಳ ಕಾಲ ನಡೆಯಲಿದೆ. ಜು.3ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಅಧಿವೇಶನದಲ್ಲಿ ಮುಖ್ಯವಾಗಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದೆ. ಇದಾದ ನಂತರ ನಿರ್ಣಯ ಅಂಗೀಕಾರವಾಗಲಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆದ ನಂತರ ಅನುದಾನದ ಬೇಡಿಕೆಗಳನ್ನು ಅಂಗೀಕರಿಸಲಾಗುತ್ತದೆ.

    ಈ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾದ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಒಟ್ಟು 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳು ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದು ಸತ್ಯ, ಈಗ ಮಾತಾಡಿದರೆ ಬೆಂಕಿ ಹಚ್ಚಿದಂತೆ: ಸಿ.ಪಿ ಯೋಗೇಶ್ವರ್

  • ವಕ್ಫ್ ಆಸ್ತಿ ವರದಿ, 40% ಸರ್ಕಾರ ಹಗರಣ ಗಲಾಟೆ ನಡುವೆ ಮಳೆಗಾಲದ ಅಧಿವೇಶನ ಬಲಿ

    ವಕ್ಫ್ ಆಸ್ತಿ ವರದಿ, 40% ಸರ್ಕಾರ ಹಗರಣ ಗಲಾಟೆ ನಡುವೆ ಮಳೆಗಾಲದ ಅಧಿವೇಶನ ಬಲಿ

    ಬೆಂಗಳೂರು: ವಿಧಾನ ಪರಿಷತ್ (Vidhana Parishad) ಕಲಾಪದ (Session) ಕೊನೆ ದಿನವೂ ಗದ್ದಲ ಗಲಾಟೆಗೆ ಕಾರಣವಾಯ್ತು. 40% ಸರ್ಕಾರ, ವಕ್ಫ್ ಆಸ್ತಿ (Wakf Property) , BMS ಟ್ರಸ್ಟ್‌ ಹಗರಣದ ಗಲಾಟೆ ಸದನದಲ್ಲಿ ಸದ್ದು ಮಾಡಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸಭಾಪತಿಗಳು ಮುಂದೂಡಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಿದರು. ಚರ್ಚೆಗೆ ಅವಕಾಶ ಕಲ್ಪಿಸಲು ಆಗ್ರಹಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.

    ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ, ಕಾಂಗ್ರೆಸ್ ನಿಲುವಳಿ ಸೂಚನೆ ಪರಿಶೀಲಿಸಿದ್ದೇನೆ. ಮಾಣಪ್ಪಾಡಿ ವರದಿ ಸ್ಥಾಯಿ ಸಮಿತಿ ನೀಡಿದ ವರದಿಯಲ್ಲ. ಅಲ್ಪಸಂಖ್ಯಾತ ಆಯೋಗದ‌ ಕಾಯ್ದೆಯಂತೆ ಮಂಡಿಸಿದ್ದಾರೆ. ಇದು ಇತ್ತೀಚೆಗೆ ನಡೆದ ಘಟನೆಯಲ್ಲ. ಹಾಗಾಗಿ ನಿಯಮ‌ 59ರ ನಿಲುವಳಿ ಸೂಚನೆ ತಿರಸ್ಕಾರ ಮಾಡುತ್ತೇನೆ ಎಂದು ರೂಲಿಂಗ್ ನೀಡಿದರು. ವರದಿಯನ್ನು ಸದಸ್ಯರಿಗೆ ನೀಡುವಂತೆ ಸೂಚಿಸಿದರು. ಸಭಾಪತಿಗಳ ನಿರ್ಧಾರಕ್ಕೆ ಕಾಂಗ್ರೆಸ್ ಸದಸ್ಯರು ಅಸಮಧಾನ ವ್ಯಕ್ತಪಡಿಸಿದರು.

    ಈ ವೇಳೆ ಬಿಎಂಎಸ್ ಟ್ರಸ್ಟ್ ಅನ್ನು ಖಾಸಗಿಗೆ ಕೊಡಲಾಗಿದೆ ಎನ್ನುವ ವಿಷಯದ ಮೇಲೆ ಚರ್ಚೆಗೆ ಜೆಡಿಎಸ್ (JDS) ಆಗ್ರಹಿಸಿತು. ನಿಯಮ 72ರ ಅಡಿ ಚರ್ಚೆಗೆ ಅವಕಾಶ ಕೋರಿ ಜೆಡಿಎಸ್ ನಾಯಕ ಭೋಜೇಗೌಡ ಮನವಿ ಮಾಡಿದರು. ಆದರೆ ಇದಕ್ಕೆ ಅವಕಾಶ ನೀಡದ ಕಾರಣ ಸದನದಲ್ಲಿ ಗದ್ದಲ ಸೃಷ್ಟಿಯಾಯಿತು. ಗದ್ದಲದ ನಡುವೆ ಶಾಸನ ರಚನೆ ಕಲಾಪ ಆರಂಭಿಸಲಾಯಿತು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ತಮ್ಮ ಬೇಡಿಕೆಗಳ ಚರ್ಚೆಗೆ ಅವಕಾಶ ನೀಡದೆ ಶಾಸನ ರಚನೆ ಕಲಾಪ ಕೈಗೆತ್ತಿಕೊಂಡಿದ್ದನ್ನು ವಿರೋಧಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ಭಿತ್ತಿಪತ್ರ ಪ್ರದರ್ಶನ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    ಕಾಂಗ್ರೆಸ್ (Congress) ಜೆಡಿಎಸ್ ಸದಸ್ಯರ ಧರಣಿ ನಡುವೆ ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕ, ಕರ್ನಾಟಕ ಸ್ಟಾಂಪು ಮೂರನೇ ತಿದ್ದುಪಡಿ ವಿಧೇಯಕ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿದ್ದುಪಡಿ ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕಗಳನ್ನು ಧ್ವನಿಮತದ ಮೂಲಕ ವಿಧಾನ ಪರಿಷತ್ ಅಂಗೀಕರಿಸಲಾಯಿತು.

    ವಿಧೇಯಕಗಳು ಅಂಗೀಕಾರದ ವೇಳೆ ಸಭಾಪತಿ ಪೀಠದ ಮುಂದೆ ಕಾಂಗ್ರೆಸ್ ಸದಸ್ಯರು ಜಮಾವಣೆಗೊಂಡು ಹಗರಣಗಳ ಆರೋಪದ ಭಿತ್ತಿಪತ್ರ ಪ್ರದರ್ಶನ ಮಾಡಿದರು. ಇದಕ್ಕೆ ಪ್ರತಿಯಾಗಿ ಬಿಜೆಪಿ (BJP) ಸದಸ್ಯರೂ ಭಿತ್ತಿಪತ್ರ ಪ್ರದರ್ಶನ ಮಾಡಿದರು. ಈ ವೇಳೆ ಪ್ರತಿಭಟನಾನಿರತ ಸದಸ್ಯರು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ಘೋಷಣೆ ಪೈಪೋಟಿ ನಡೆಯಿತು. ಸದನದಲ್ಲಿ ಗದ್ದಲ ಹೆಚ್ಚಾದ ನಡುವೆಯೇ ಸಭಾಪತಿಗಳು 10 ದಿನಗಳ ಕಲಾಪದ ಸಾರಾಂಶವನ್ನು ಸದನದಲ್ಲಿ ಮಂಡಿಸಿದರು. ನಂತರ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಇದನ್ನೂ ಓದಿ: ಬಿಜೆಪಿಯವರು ನೆಪ ಹೇಳೋ ಬದಲು PFIಯನ್ನು ನಿಷೇಧಿಸಲಿ: ದಿನೇಶ್ ಗುಂಡೂರಾವ್

    ನಂತರ ಕಲಾಪವನ್ನು ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಅನಿರ್ಧಿಷ್ಟಾವದಿಗೆ ಮುಂದೂಡಿಕೆ ಮಾಡಿದರು. ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯಗೊಂಡಿತು. ಕಲಾಪ ಮುಗಿದ ನಂತರವೂ ಸದನದಲ್ಲಿ ಭಾರತ್ ಮಾತಾಕಿ ಜೈ, ಒಂದೇ ಮಾತರಂ ಘೊಷಣೆಗಳು ಮೊಳಗಿದವು. ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಪೈಪೋಟಿಯಲ್ಲಿ ಘೋಷಣೆ ಮೊಳಗಿಸಿದರು. ಇದನ್ನೂ ಓದಿ: BJPಗೆ ದೇಶದ ಅಭಿವೃದ್ಧಿಗಿಂತ ಬೇರೆ ಪಕ್ಷ ಮುಗಿಸೋದೇ ಮುಖ್ಯ – ರಾಹುಲ್ ಪರ ಖರ್ಗೆ ಬ್ಯಾಟಿಂಗ್

    Live Tv
    [brid partner=56869869 player=32851 video=960834 autoplay=true]

  • ತೃತೀಯ ಲಿಂಗಿಗಳಿಗೆ ಸೌಲಭ್ಯ ಕಲ್ಪಿಸಲು ಸಮಿತಿ ರಚನೆ: ಹಾಲಪ್ಪ ಆಚಾರ್

    ತೃತೀಯ ಲಿಂಗಿಗಳಿಗೆ ಸೌಲಭ್ಯ ಕಲ್ಪಿಸಲು ಸಮಿತಿ ರಚನೆ: ಹಾಲಪ್ಪ ಆಚಾರ್

    ಬೆಂಗಳೂರು: ತೃತೀಯ ಲಿಂಗಿಗಳಿಗೆ ಸಮರ್ಪಕ ಸೌಲಭ್ಯ ಸಿಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲು ತೃತೀಯ ಲಿಂಗಿಗಳು ಒಳಗೊಂಡ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಭರವಸೆ ನೀಡಿದರು.

    ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ತೃತೀಯ ಲಿಂಗಿಗಳಿಗೆ ಸೌಲಭ್ಯ ನೀಡುವ ವಿಚಾರವಾಗಿ ಸರ್ಕಾರದ ಗಮನ ಸೆಳೆದರು. ರಾಜ್ಯದಲ್ಲಿ ತೃತೀಯ ಲಿಂಗಿಗಳಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ. ತೃತೀಯ ಲಿಂಗಿಗಳನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಒಂದು ಸಮಿತಿ ರಚನೆ ಮಾಡಬೇಕು. ಈ ಸಮಿತಿಯಲ್ಲಿ ತೃತೀಯ ಲಿಂಗಿಗಳು ಇರಬೇಕು. ತೃತೀಯ ಲಿಂಗಿಗಳ ಅಭಿವೃದ್ಧಿಗೆ ಸರ್ಕಾರ ಕ್ರಮವಹಿಸಬೇಕು ಅಂತ ಭಾರತಿ ಶೆಟ್ಟಿ ಒತ್ತಾಯ ಮಾಡಿದರು. ಅಲ್ಲದೆ ಪೊಲೀಸ್ ಪೇದೆ, ಅಂಗನವಾಡಿ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

    ಇದಕ್ಕೆ ಉತ್ತರ ನೀಡಿದ ಸಚಿವ ಹಾಲಪ್ಪ ಆಚಾರ್ ಅವರು, 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 20266 ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. ತೃತೀಯ ಲಿಂಗಿಗಳ ಅಂಕಿ-ಅಂಶಗಳ ಸಂಗ್ರಹಕ್ಕೆ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ

    ಎಲ್ಲಾ ಇಲಾಖೆಗಳಲ್ಲಿ ನೇಮಕಾತಿಯಲ್ಲಿ 1% ಹುದ್ದೆ ಮೀಸಲು ಇಡಲಾಗಿದೆ. ಆದರೆ ಎಲ್ಲಾ ಇಲಾಖೆಯಲ್ಲಿ ಇದು ಜಾರಿ ಆಗಿಲ್ಲ. ಎಲ್ಲಾ ಇಲಾಖೆಯಲ್ಲಿ 1% ಮೀಸಲಾತಿ ನಿಯಮ ಜಾರಿಗೆ ಕ್ರಮವಹಿಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಟಿಎಂಸಿ ಮುಖಂಡನ ಹತ್ಯೆ – ಹಲವು ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ

    ಈಗಾಗಲೇ ತೃತೀಯ ಲಿಂಗಿಗಳಿಗೆ ಮಾಶಾಸನ ನೀಡಲಾಗುತ್ತಿದೆ. ತೃತೀಯ ಲಿಂಗಿಗಳಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಒಂದು ಸಮಿತಿ ರಚನೆ ಮಾಡುತ್ತೇವೆ. ಸಮಿತಿಯಲ್ಲಿ ತೃತೀಯ ಲಿಂಗಗಳು ಇರಲಿದ್ದಾರೆ. ಸಮಿತಿ ವರದಿ ಆಧರಿಸಿ ತೃತೀಯ ಲಿಂಗಿಗಳಿಗೆ ಸೌಲಭ್ಯಗಳನ್ನ ನೀಡಲು ಅಗತ್ಯ ಕ್ರಮವಹಿಸುತ್ತೇವೆ ಎಂದರು.

  • ಸದನದಲ್ಲಿ ಸದ್ದು ಮಾಡಿದ ರೈತ ಮಹಿಳೆ ವಿಷ ಕುಡಿದ ಪ್ರಕರಣ

    ಸದನದಲ್ಲಿ ಸದ್ದು ಮಾಡಿದ ರೈತ ಮಹಿಳೆ ವಿಷ ಕುಡಿದ ಪ್ರಕರಣ

    ಬೆಂಗಳೂರು: ಮುಂಡರಗಿ ತಾಲೂಕಿನಲ್ಲಿ ರೈತ ಮಹಿಳೆಯರು ವಿಷ ಕುಡಿದ ಪ್ರಕರಣ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಅರಣ್ಯ ಇಲಾಖೆಯ ಕಿರುಕುಳದಿಂದ ವಿಷ ಕುಡಿದ ಪ್ರಕರಣವನ್ನು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಶಾಸಕ ಎಚ್‍ಕೆ ಪಾಟೀಲ್ ಪ್ರಸ್ತಾಪ ಮಾಡಿ ಗಂಭೀರತೆಯನ್ನು ವಿವರಿಸಿದರು.

    ಇದೇ ವೇಳೆ ಎಚ್.ಕೆ. ಪಾಟೀಲ್ ಬೆಂಬಲಕ್ಕೆ ಮಾಜಿ ಸಿಎಂ ಯಡಿಯೂರಪ್ಪ ನಿಂತರು. ಇದೊಂದು ಗಂಭೀರವಾದ ಪ್ರಕರಣ. ಎಚ್.ಕೆ. ಪಾಟೀಲ್ ಹೇಳಿರುವುದು ಸತ್ಯವಾಗಿದೆ. ಸಿಎಂ ಆದಷ್ಟು ಬೇಗ ಕ್ರಮವಹಿಸಿ ಸಮಸ್ಯೆ ಕೊನೆಗಾಣಿಸಬೇಕು. ಸಮಸ್ಯೆ ಮುಂದುವರಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದಿಲ್ಲ. ಅಗತ್ಯ ಬಿದ್ದರೆ ಸದನ ಸಮಿತಿ ರಚಿಸಿ ಎಂದು ಯಡಿಯೂರಪ್ಪ ಆಗ್ರಹಿಸಿದರು.

    ಇನ್ನೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿ ಸಮಸ್ಯೆ ಪರಿಹಾರ ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯಾಧಿಕಾರಿಗಳ ಧೋರಣೆ ಸರಿಯಲ್ಲ. ಕೂಡಲೇ ಸಾಗುವಳಿ ಮಾಡಿದ ರೈತರ ಸಂಕಷ್ಟ ಪರಿಹಾರ ಮಾಡಲು ಆಗ್ರಹಿಸಿದರು.

    ಇದೇ ವೇಳೆ ಸ್ಪೀಕರ್ ಕಾಗೇರಿ ಸೇರಿದಂತೆ ಬಹುತೇಕ ಹಿರಿಯ ಸದಸ್ಯರಿಂದ ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ:  ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಇನ್ನು ಅರಣ್ಯ ಸಚಿವ ಉಮೇಶ್ ಕತ್ತಿಗೆ ಸದನದಲ್ಲಿ ಆಡಳಿತ ಪಕ್ಷದ ಶಾಸಕ ಕಳಕಪ್ಪ ಬಂಡಿ ಟಕ್ಕರ್ ಕೊಟ್ಟರು. ಅರಣ್ಯ ಇಲಾಖೆ ಬ್ರಿಟಿಷರ ಪಳೆಯುಳಿಕೆಯಾಗಿದೆ. ಅರಣ್ಯ ಸಚಿವರಿಗೆ ಇಲಾಖೆಯ ಬಗ್ಗೆ ಮಾಹಿತಿ ಇಲ್ಲ, ಅವರು ಬಯಲು ಸೀಮೆಯವರು ಅಂತಾ ಕಳಕಪ್ಪ ಬಂಡಿ ಕಿಡಿಕಾರಿದರು.

    ಆಗ ಸ್ಪೀಕರ್ ಮಧ್ಯಪ್ರವೇಶ ಮಾಡಿ ಇಲ್ಲ, ಅವರು ಖಾನಾಪುರ ಕಡೆ ಅರಣ್ಯ ನೋಡಿದ್ದಾರೆ ಎಂದರು. ಅಂತಿಮವಾಗಿ ಪ್ರಕರಣದ ಬಗ್ಗೆ ಸದನಕ್ಕೆ ಸಚಿವ ಮಾಧುಸ್ವಾಮಿ ಉತ್ತರ ಕೊಟ್ಟರು. ರೈತರಿಗೆ ಸಮಸ್ಯೆ ಆಗುತ್ತಿದೆ ನಿಜ. ಅರಣ್ಯ ಕಾಯ್ದೆಗೆ ತಿದ್ದುಪಡಿ ಕಾಯ್ದೆ ತರುವ ಕೆಲಸ ಮಾಡುತ್ತೇವೆ. ಅರಣ್ಯ ಇಲಾಖೆ ಕಟಾವು ಮಾಡಿರುವ ರೈತರ ಬೆಳೆಗೆ ಪರಿಹಾರ ಕೊಡುತ್ತೇವೆ. ಸರ್ಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದರು. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

  • ರಾಜ್ಯದ ನೀರಿನ ಪಾಲು ಹಂಚಿಕೆ ಆಗದ ಹೊರತು ಯಾವುದೇ ಯೋಜನೆ ಕೈಗೆತ್ತಿಕೊಳ್ಳಬಾರದು: ಕಾರಜೋಳ

    ರಾಜ್ಯದ ನೀರಿನ ಪಾಲು ಹಂಚಿಕೆ ಆಗದ ಹೊರತು ಯಾವುದೇ ಯೋಜನೆ ಕೈಗೆತ್ತಿಕೊಳ್ಳಬಾರದು: ಕಾರಜೋಳ

    ಬಾಗಲಕೋಟೆ: ನಮ್ಮ ರಾಜ್ಯದ ನೀರಿನ ಪಾಲು ಹಂಚಿಕೆ ಆಗದ ಹೊರತು ಯಾವುದೇ ಯೋಜನೆ ಕೈಗೆತ್ತಿಕೊಳ್ಳಬಾರದು. ಇದು ರಾಜ್ಯದ ಸ್ಪಷ್ಟ ನಿಲುವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‍ನಲ್ಲಿ ನದಿಗಳ ಜೋಡಣೆ ವಿಚಾರವಾಗಿ ಕೇಂದ್ರ ಜಲಶಕ್ತಿ ಮಂತ್ರಾಲಯದ ಅಧಿಕಾರಿಗಳಿಗೆ ರಾಜ್ಯದ ನಿಲುವು ಸ್ಪಷ್ಟಪಡಿಸಿದ್ದೇವೆ. ನಿನ್ನೆ ಕೇಂದ್ರದ ಜಲಶಕ್ತಿ ಮಂತ್ರಿಗಳು ಅಧಿಕಾರಿಗಳು ಮತ್ತು ನಮ್ಮ ರಾಜ್ಯದ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ರಾಜ್ಯದ ಸ್ಪಷ್ಟ ನಿಲುವು ತಿಳಿಸಿದ್ದೇವೆ ಎಂದರು.

    ನದಿಗಳ ಜೋಡಣೆ ವಿಚಾರದಲ್ಲಿ ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ. ನದಿ ಜೋಡಣೆ ಪ್ರಕ್ರಿಯೆ ಆರಂಭ ಆಗುವ ಮೊದಲೇ ನೀರಿನ ಹಂಚಿಕೆ ಆಗಬೇಕು. ಮುಂದಿನ 50 ವರ್ಷಗಳವರೆಗೆ ನೀರಿನ ಹಂಚಿಕೆ ಯಾವ ರೀತಿಯಲ್ಲಿ ಆಗಬೇಕು. ಈಗಾಗಲೇ ಇರುವ ಕಾನೂನು ಪ್ರಕಾರ ಹಂಚಿಕೆಯಾಗಿ ನಮ್ಮ ಪಾಲಿಗೆ ಎಷ್ಟು ನೀರು ಬರುತ್ತದೆ ಎಂದು ಸ್ಪಷ್ಟ ತೀರ್ಮಾನ ಆಗಬೇಕು. ಅಲ್ಲಿಯವರೆಗೂ ಯಾವುದೇ ಕಾರಣಕ್ಕೂ ನಾವು ಒಪ್ಪಿಗೆ ಕೊಡಲ್ಲ. ಇದನ್ನು ಈಗಾಗಲೇ ನಾವು ಸ್ಪಷ್ಟಪಡಿಸಿದ್ದೇವೆ ಎಂದು ತಿಳಿಸಿದರು.

    ಕಲಾಪದಲ್ಲಿ ಸಚಿವ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್‍ನವರು ಯಾವುದೇ ಜನರ ಸಮಸ್ಯೆಗಳಿಗಾಗಿ ಹೋರಾಟ ಮಾಡುತ್ತಿಲ್ಲ. ಕಾಂಗ್ರೆಸ್‍ನವರು ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರದ್ದು ಸರಿಯಾದ ವಿಚಾರವಲ್ಲ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್‍ನವರು ಗೊಂದಲ ಮಾಡಿಕೊಡರು. ಇದರಿಂದ ಕಾಂಗ್ರೆಸ್‍ಗೆ ನಷ್ಟವಾಗಿದೆ. ಅದನ್ನು ತುಂಬಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಆಂಬ್ಯುಲೆನ್ಸ್ ಸೇವೆಗೆ ಹೊಸ ರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಆಡಳಿತಾತ್ಮಕ ಅನುಮೋದನೆ: ಡಾ.ಕೆ.ಸುಧಾಕರ್

    ವಿಧಾನಸಭಾ ಕಲಾಪದಲ್ಲಿ ಜನರ ಸಮಸ್ಯೆ, ನಾಡಿನ ಸಮಸ್ಯೆ ಹಾಗೂ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿ. ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈ ಹೋರಾಟ ಆಗಬಾರದು ಎಂದು ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ

    ಹಿಜಬ್ ವಿವಾದ ಸರ್ಕಾರದ ಕುತಂತ್ರ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ವಿಚಾರ ಸಂಬಂಧ ಮಾತನಾಡಿದ ಅವರು, ಆರ್‌ಎಸ್‍ಎಸ್‍ನಲ್ಲಿ ದೇಶಭಕ್ತರಿದ್ದಾರೆ. ಅವರು ಭಾರತಮಾತೆಗಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಆರ್‌ಎಸ್‍ಎಸ್ ಬಗ್ಗೆ ಸಿದ್ದರಾಮಯ್ಯ ಅವರ ಆರೋಪ ಹುರುಳಿಲ್ಲದ್ದು ಎಂದು ಟೀಕಿಸಿದರು.

    ಮಾರ್ಚ್ ಮೊದಲ ವಾರದಲ್ಲಿ ನಮ್ಮ ಬಜೆಟ್ ಅಧಿವೇಶನ ಪ್ರಾರಂಭವಾಗಬಹುದು. ಸಿಎಂ ಈ ಬಗ್ಗೆ ಇನ್ನೂ ಸ್ಪಷ್ಟವಾಗಿ ತಿಳಿಸಿಲ್ಲ. ನಾನು ಈಗಾಗಲೇ ಸಿಎಂ ಜೊತೆ ಚರ್ಚೆ ಮಾಡಿದ್ದೀನಿ. ಯುಕೆಪಿ ಯೋಜನೆಗೆ ಹೆಚ್ಚಿನ ಅನುದಾನಕ್ಕಾಗಿ ಮನವಿ ಮಾಡಿದ್ದೇನೆ. ಸಿಎಂ ಅವರು ಸಹ ಆಸಕ್ತರಾಗಿದ್ದಾರೆ. ಕೃಷ್ಣಾ, ಮಹಾದಾಯಿ, ಮೇಕೆದಾಟು ಯೋಜನೆ ಎಲ್ಲಾ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲು ಸಿಎಂ ಗಮನ ಹರಿಸಿದ್ದಾರೆ ಎಂದರು.