Tag: ಕಲಾಪ

  • ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ

    ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ

    ಬೆಂಗಳೂರು: ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಹಾಗೂ ಕಲಾಪವನ್ನು ಹಾಳು ಮಾಡುತ್ತಿರುವವರನ್ನು ಕೂಡಲೇ ಸದನದಿಂದ ಹೊರಹಾಕಿ ಇಲ್ಲವೇ ಕಲಾಪವನ್ನು ನಡೆಸುವ ಶಕ್ತಿ ಸರ್ಕಾರಕ್ಕೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.

    ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷರು ಮುಂದೂಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಲಾಪವನ್ನು ಹಾಳು ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ಜನರ ನಿರೀಕ್ಷೆಗಳಿಗೆ ಅವಹೇಳನ: ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ರೈತರು, ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡುವುದು ಬಿಟ್ಟು ಕೇಸರಿ ಬಾವುಟದ ವಿಷಯ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಕಾಂಗ್ರೆಸ್‍ನವರು ಹಾಳು ಮಾಡಿದರು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಗುಡುಗಿದರು.

    ಹತ್ತು ನಿಮಿಷ ಧರಣಿ ಮಾಡುವುದು, ಆಮೇಲೆ ಸದನವನ್ನು ಮುಂದಕ್ಕೆ ಹಾಕುವುದು, ಕಲಾಪ ನಡೆಸುವ ರೀತಿ ಇದಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನವನ್ನು ಕರೆದಿದ್ದೀರಿ. ಸರ್ಕಾರಕ್ಕೆ ಸದನವನ್ನು ಸಕ್ರಮವಾಗಿ ನಡೆಸುವ ಶಕ್ತಿ ಮತ್ತು ಬದ್ಧತೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ. ಸುಖಾಸುಮ್ಮನೆ ದಿನಕ್ಕೆ 1.5 ಯಿಂದ 2 ಕೋಟಿ ರೂ.ನಷ್ಟು ಜನರ ತೆರಿಗೆಯನ್ನು ಯಾಕೆ ಪೋಲು ಮಾಡುತ್ತೀರಿ. ಕೇವಲ ಟಿಎ, ಡಿಎ ಪಡೆಯಲು ಕಲಾಪ ನಡೆಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

    ಶಿಕ್ಷಣ ಸಂಸ್ಥೆಗಳಲ್ಲಿ ಸಂಘರ್ಷದ ವಾತಾವರಣ: ಹಿಜಾಬ್ ಮತ್ತು ಕೇಸರಿ ಶಾಲುಗಳ ವಿವಾದದಿಂದ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಹೊಡೆದಾಡಿಕೊಳ್ಳುವ ಸನ್ನಿವೇಶ ಉಂಟಾಗಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಬೇಕಿತ್ತು ಎಂದರು.

    ಬೇಸಿಗೆ ಬರುವುದಕ್ಕೆ ಮುನ್ನವೇ ರಾಜ್ಯದಲ್ಲಿ ದಿನಕ್ಕೆ ಎರಡೂವರೆ ಗಂಟೆ ಕಾಲ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಕಡಿತದಿಂದ ರೈತರು ಬೆಳೆಗಳಿಗೆ ರಾತ್ರಿ ಹೊತ್ತು ನೀರು ಹರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ. ಆಡಳಿತಾರೂಢ ಪಕ್ಷಕ್ಕೆ ಮತ್ತು ಅಧಿಕೃತ ವಿರೋಧ ಪಕ್ಷಕ್ಕೆ ಇದರ ಬಗ್ಗೆ ಕಾಳಜಿ ಇಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಕಲಾಪವನ್ನು ಹಾಳು ಮಾಡಿ ಜನರ ನಿರೀಕ್ಷೆಗಳನ್ನು ಕಾಲ ಕಸದಂತೆ ನೋಡುತ್ತಿವೆ. ಈ ವಿಷಯಗಳನ್ನು ಪ್ರಸ್ತಾಪ ಮಾಡಲು ಉದ್ದೇಶಿಸಿದ್ದೇನೆ. ಆದರೆ ಅವಕಾಶ ಸಿಗಲಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಲೆಮಹದೇಶ್ವರ ಜಾತ್ರಾಮಹೋತ್ಸವ – ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ

    ಕೇಸರಿ ಪವಿತ್ರ ವಸ್ತ್ರ: ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಕೂಡ ಹಾಳು ಮಾಡಬಾರದು. ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಸರ್ವಸಂಗ ಪರಿತ್ಯಾಗಿಗಳು, ಸಂತರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಪೂಜ್ಯರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಆದರೆ ಬಿಜೆಪಿ, ಆರ್‍ಎಸ್‍ಎಸ್ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.

    ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವುದು ಆ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಕೂಡ ಅದೇ. ಆ ಹಿನ್ನೆಲೆಯೊಳಗೆ ಸಚಿವ ಈಶ್ವರಪ್ಪ ಅವರು ಮುಂದೊಂದು ದಿನ ಕೆಂಪುಕೋಟೆ ಮೇಲೂ ಕೇಸರಿ ಬಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಹೇಳಿದರು.

    ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿಯೂ ಧ್ವಜ ಸ್ತಂಭಗಳನ್ನು ನೆಡುವ, ಅವುಗಳಲ್ಲಿ ತಮ್ಮ ಸಂಘಟನೆಗಳ ಬಾವುಟ ಹಾರಿಸುವುದು ಇದೆ. ನಮ್ಮಲ್ಲೂ ಕನ್ನಡ ಸಂಘಟನೆಗಳು ಕನ್ನಡ ಬಾವುಟವನ್ನು ಹಾರಿಸುತ್ತವೆ. ತಮಿಳುನಾಡಿನಲ್ಲಿಯೂ ಇಂಥ ದೃಶ್ಯಗಳನ್ನು ಕಾಣಬಹುದು. ಖಾಲಿ ಇರುವ ಧ್ವಜ ಸ್ತಂಭಗಳಲ್ಲಿ ಕೇಸರಿ ಬಾವುಟ ಹಾರಿಸುವುದನ್ನು ನೋಡಿದ್ದೇವೆ. ಈ ವಿಷಯವನ್ನು ದೊಡ್ಡದು ಮಾಡಿ ಸದನದ ಕಲಾಪವನ್ನು ಹಾಳು ಮಾಡುವುದು ಎಷ್ಟು ಸರಿ? ಎಂದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಮರೆತು ವರ್ತಿಸುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದರು.

    ಈ ಸಂದರ್ಭದಲ್ಲಿ ಪಕ್ಷದ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ವೆಂಕಟರಾವ್ ನಾಡಗೌಡ ಹಾಜರಿದ್ದರು.

  • ಅತ್ಯಾಚಾರ ಘೋರ ಅಪರಾಧ, ಅದಕ್ಕೆ ಪೂರ್ಣ ವಿರಾಮ ಹಾಕಿ – ರಮೇಶ್ ಕುಮಾರ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

    ಅತ್ಯಾಚಾರ ಘೋರ ಅಪರಾಧ, ಅದಕ್ಕೆ ಪೂರ್ಣ ವಿರಾಮ ಹಾಕಿ – ರಮೇಶ್ ಕುಮಾರ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

    ನವದೆಹಲಿ: ಅತ್ಯಾಚಾರದ ವಿಚಾರವಾಗಿ ಶಾಸಕ ರಮೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದು, ಅವು ಅಸಮರ್ಥನೀಯ ಎಂದು ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ರಮೇಶ್ ಕುಮಾರ್ ಅವರು ನೀಡಿರುವ ಹೇಳಿಕೆಯನ್ನು ನಾನು ಮನಃಪೂರ್ವಕವಾಗಿ ಖಂಡಿಸುತ್ತೇನೆ. ರಮೇಶ್ ಕುಮಾರ್ ಅಂತಹ ಪದಗಳನ್ನು ಯಾರಾದರೂ ಹೇಗೆ ಹೇಳಲು ಸಾಧ್ಯ ಎಂಬುವುದನ್ನು ವಿವರಿಸಲಾಗದು. ಅವು ಅಸಮರ್ಥನೀಯವಾಗಿದೆ. ಅತ್ಯಾಚಾರ ಒಂದು ಘೋರ ಅಪರಾಧ. ಅದಕ್ಕೆ ಪೂರ್ಣ ವಿರಾಮ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೆಣ್ಣು ಕುಲಕ್ಕೆ ಕ್ಷಮೆ ಕೇಳಿದ ರಮೇಶ್ ಕುಮಾರ್ – ಮುಂದುವರಿಸೋದು ಬೇಡ ಎಂದ ಸ್ಪೀಕರ್ ಕಾಗೇರಿ

    ಗುರುವಾರ ವಿಧಾನಸಭೆಯಲ್ಲಿ ಮಾತನಾಡುತ್ತಾ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಆಗದಿದ್ರೆ ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಹೇಳಿಕೆ ನೀಡಿದ್ದರು. ರಮೇಶ್ ಕುಮಾರ್ ಈ ರೀತಿ ಹೇಳುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮಂದಿ ಸದಸ್ಯರು ಇದನ್ನು ತಮಾಷೆಯಾಗಿ ತೆಗೆದುಕೊಂಡರು. ಆದರೆ ಈ ಹೇಳಿಕೆಗೆ ಇದೀಗ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ರಮೇಶ್ ಕುಮಾರ್ ಮುಖವಾಡ ಹಾಕಿಕೊಂಡು ಬದುಕುತ್ತಿದ್ದಾರೆ: ಸುಧಾಕರ್

    ಈ ಹೇಳಿಕೆ ಕುರಿತಂತೆ ರಮೇಶ್ ಕುಮಾರ್ ಅವರು, ಅತ್ಯಾಚಾರ ಸಂಬಂಧ ಅಧಿವೇಶನದಲ್ಲಿ ನೀಡಿರುವ ನನ್ನ ಹೇಳಿಕೆ ಕುರಿತು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸುವುದು ನನ್ನ ಉದ್ದೇವಾಗಿರಲಿಲ್ಲ. ಮಾತಿನ ಭರದಲ್ಲಿ ಆ ಮಾತು ಬಂದಿದೆ. ಇನ್ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸುತ್ತೇನೆಂದು ಟ್ವೀಟ್ ಮೂಲಕ ಕ್ಷಮೆಯಾಚಿಸಿದ್ದರು. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಕಲಾಪ ನಡೆಯುವ ವೇಳೆ ಪ್ರಶ್ನೆ ಕೇಳುವವರ ಸಂಖ್ಯೆ ಹೆಚ್ಚಾಗಿತ್ತು. ನಾನೂ ಕೂಡ ಇದನ್ನು ಅನುಭವಿಸ್ತಿದ್ದೇನೆ ಎಂದು ನೋವು ತೋಡಿಕೊಂಡೆ ನಾನು ಇಂಗ್ಲಿಷ್ ಭಾಷೆಯಲ್ಲಿರುವ ಒಂದು ಮಾತು ಉಲ್ಲೇಖ ಮಾಡಿದೆ ಅಷ್ಟೇ. ಹೆಣ್ಣಿಗೆ ಅಪಮಾನ ಮಾಡೋದು ಅಥವಾ ಸದನದ ಗೌರವ ಕಡಿಮೆ ಮಾಡೋದು, ಲಘುವಾಗಿ ವರ್ತಿಸಬೇಕು ಎನ್ನುವ ಯಾವುದೇ ದುರುದ್ದೇಶ ಇಲ್ಲ. ಯಾವ ಸನ್ನಿವೇಶದಲ್ಲಿ ಹೇಗೆ ಹೇಳ್ತೀವಿ ಅನ್ನೋದು ನಿರ್ಧಾರವಾಗಲಿದೆ. ಸಂದರ್ಭದಲ್ಲಿ ಕಲಾಪ ನಡೆಯುವಾಗ, ನಾನು ಇಲ್ಲಿ ಉಲ್ಲೇಖ ಮಾಡಿದ ಮಾತು. ಯಾರ ಮೇಲೂ ಚಾಲೆಂಜ್ ಮಾಡುವ ಉದ್ದೇಶ ಇಲ್ಲ. ಸ್ಪೀಕರ್ ಅವರೇ ತಮ್ಮನ್ನೂ ಸಹ ಅಪರಾಧಿ ಮಾಡಿದ್ದಾರೆ. ಚಿಂತಕ ಕನ್ಫೂಶಿಯಸ್ ಒಂದು ಮಾತು ಹೇಳ್ತಾನೆ. One mistake, ends up in a single mistake.. To Deny mistake, about multiple mistakes ಅಂತಾ ಹೇಳ್ತಾನೆ. ನನ್ನಿಂದ ಅಪರಾಧ ಆಗಿದೆ ಅಂತಾ ತೀರ್ಪನ್ನೇ ಕೊಟ್ಟಿರೋದ್ರಿಂದ, ನಾನು ಕ್ಷಮೆ ಕೇಳುತ್ತೇನೆ. ಇದಕ್ಕೆ ಇಲ್ಲೇ ಸುಖಾಂತ್ಯವನ್ನು ಹಾಡಿ, ಕಲಾಪ ಮುಂದುವರೆಸೋಣ. ಗ್ರಹಚಾರಕ್ಕೆ, ನೀವು ಹೇಳಿದ ಹಾಗೆ ನಾನು ಪ್ರತಿಕ್ರಿಯಿಸಿದೆ ಎಂದು ಕಲಾಪದಲ್ಲಿ ಕೂಡ ಎಲ್ಲರ ಸಮ್ಮುಖ ಕ್ಷಮೆ ಕೇಳಿದರು.

  • ಸಿದ್ದರಾಮಯ್ಯ ದೆಹಲಿಗೆ ಹೋಗಬೇಕು – ಸದನದಲ್ಲಿ ಸ್ವಾರಸ್ಯಕರ ಚರ್ಚೆ

    ಸಿದ್ದರಾಮಯ್ಯ ದೆಹಲಿಗೆ ಹೋಗಬೇಕು – ಸದನದಲ್ಲಿ ಸ್ವಾರಸ್ಯಕರ ಚರ್ಚೆ

    ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೋಗುವ ವಿಚಾರದಲ್ಲಿ ಸ್ವಾರಸ್ಯಕರ ಚರ್ಚೆಯೊಂದು ನಡೆಯಿತು.

    ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ಹೋಗಬೇಕು. ಅಲ್ಲಿ ಕರ್ನಾಟಕದ ಕಹಳೆ ಮೊಳಗಿಸಬೇಕು ಎಂದು ಸಚಿವ ಮಾಧುಸ್ವಾಮಿ ಚರ್ಚೆ ಆರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಆರ್ ಅಶೋಕ್ ಇಲ್ಲ, ಇಲ್ಲ ಸಿದ್ದರಾಮಯ್ಯ ನಮಗೆ ಇಲ್ಲಿಯೇ ಇರಬೇಕು. ನಮಗೆ ಮಾರ್ಗದರ್ಶನ ಕೊಡಬೇಕು. ಹೀಗಾಗಿ ನಾವು ಅವರನ್ನು ದೆಹಲಿಗೆ ಕಳುಹಿಸಲು ಇಷ್ಟಪಡುವುದಿಲ್ಲ ಅಂದರು. ಇದನ್ನು ಕೇಳಿಸಿಕೊಂಡ ಸಿದ್ದರಾಮಯ್ಯ ಆಶೋಕ್ ಮತ್ತು ಮಾಧುಸ್ವಾಮಿ ಇಬ್ಬರೂ ಕೂಡ ನನ್ನ ಉತ್ತಮ ಸ್ನೇಹಿತರು ಎಂದು ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದರು.

    ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ತೆರಳುವ ಬಗ್ಗೆ ಈಶ್ವರಪ್ಪ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸುವ ಮೂಲಕ ಅವರನ್ನು ಚರ್ಚೆಗೆ ಎಳೆದರು. ಇದಕ್ಕೆ ಸಿದ್ದರಾಮಯ್ಯ, ಅವರನ್ನು ಕೇಳಬೇಡಿ. ಇಲ್ಲೂ ಬೇಡ ಅಲ್ಲೂ ಬೇಡ ಎನ್ನುತ್ತಾರೆ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ – ಚರ್ಚೆಗೆ ಆಗ್ರಹಿಸಿ ಸಾರಾ ಮಹೇಶ್ ಪ್ರತಿಭಟನೆ

    ಈ ವೇಳೆ ನಿಮ್ಮ ಹೃದಯ ಮುಟ್ಟಿಕೊಂಡು ಹೇಳಿ ನಾನು ಆ ರೀತಿ ಹೇಳ್ತೀನಾ ಎಂದು ಈಶ್ವರಪ್ಪ, ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದರು. ನಾನು ಆಂತರಿಕವಾಗಿಯೂ ಹೇಳಲ್ಲ. ಬಹಿರಂಗವಾಗಿಯೂ ಹೇಳಲ್ಲ ಎಂದು ಸಿದ್ದರಾಮಯ್ಯ ಮತ್ತೆ ಈಶ್ವರಪ್ಪನವರ ಕಾಲೆಳೆದರು. ಇದನ್ನು ಕೇಳಿಸಿಕೊಂಡ ಈಶ್ವರಪ್ಪ ನೋಡಿ ಇದೊಂದು ನಿಜ ಹೇಳಿದ್ದೀರಿ ಎಂದರು. ರಾಜಕಾರಣಿ ಆದ ಮೇಲೆ ಸುಳ್ಳು ಹೇಳುವ ಅನಿವಾರ್ಯತೆ ಬರುತ್ತೆ. ಹೇಳಿರಬಹುದು ಆದರೆ ಸುಳ್ಳು ಹೇಳಿಲ್ಲ ಎನ್ನುವುದು ಆತ್ಮವಂಚನೆ ಆಗುತ್ತದೆ ಎಂದು ಸಿದ್ದರಾಮಯ್ಯ ನುಡಿದರು.

    ನಾನು ಸಂಸತ್ ಗೆ ಹೋಗಲು ಯೋಚನೆ ಮಾಡಿದ್ದೆ. ಎರಡು ಸಲ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಆದರೆ ಎರಡು ಸಲ ಕೂಡ ಸೋತು ಹೋದೆ. 1991 ರಲ್ಲಿ ಕೊಪ್ಪಳದಿಂದ ನಿಂತು ಸೋತೆ, ಇನ್ನೊಮ್ಮೆಯೂ ಸ್ಪರ್ಧಿಸಿ ಸೋತೆ. ಆಗಿನಿಂದ ಮತ್ತೆ ಸಂಸತ್‍ಗೆ ಹೋಗಲು ಯೋಚನೆ ಮಾಡಿಲ್ಲ ಎಂದರು. ಇದನ್ನೂ ಓದಿ: 10-14 ವಾರಗಳ ಅಂತರದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆಯುವುದು ಉತ್ತಮ- ಅಧ್ಯಯನ ವರದಿ

  • ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

    ಕಲಾಪಕ್ಕೆ ಸಚಿವರ ಹಾಜರಿ ಕಡ್ಡಾಯ- ಸಿಎಂಗೆ ಪತ್ರ ಬರೆದ ಸಭಾಪತಿ ಹೊರಟ್ಟಿ

    ಹುಬ್ಬಳ್ಳಿ: ಸಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದ ಕಲಾಪಗಳಿಗೆ ಸಚಿವರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರದಿದ್ದಾರೆ.

    ಈ ಕುರಿತು ಪತ್ರ ಬರೆದಿರುವ ಬಸವರಾಜ ಹೊರಟ್ಟಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಮಂಡಲ ಅಧಿವೇಶನ ಬಹು ಮುಖ್ಯವಾಗಿದೆ. ನಾಡಿನ ಜ್ವಲಂತ ಸಮಸ್ಯೆ, ಸಾರ್ವಜನಿಕ ಸಂಕಷ್ಟಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅಧಿವೇಶನ ಸೂಕ್ತ ವೇದಿಕೆಯಾಗಿದೆ. ಹೀಗಾಗಿ ಶಾಸನ ಸಭೆಯ ಕಲಾಪಗಳು ನಡೆಯುವಾಗ ಸಚಿವರು ಸದನದಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡುವಂತೆ ಮುಖ್ಯಮಂತ್ರಿಗೆ, ಸಭಾಪತಿ ಕೋರಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಬೂಟಿನ ರುಚಿಗಾಗಿ ಹಪಹಪಿಸುವ ಪ್ರಶಾಂತ್ ಸಂಬರ್ಗಿ ಕನ್ನಡ ವಿರೋಧಿ: ಚಂದ್ರಚೂಡ್

    ಈ ಹಿಂದೆ ನಡೆದ ಅಧಿವೇಶನಗಳಲ್ಲಿ ಸಚಿವರು ಗೈರು ಆಗಿದ್ದರು. ಮುಂದೆ ನಡೆಯುವ ಸದನದಲ್ಲಿ ಎಲ್ಲರೂ ಭಾಗಿಯಾಗಬೇಕು. ಸಚಿವರ ಅನುಪಸ್ಥಿತಿಯು ಆಡಳಿತಾರೂಢ ಸರ್ಕಾರದಿಂದ ಉತ್ತರ ಪಡೆಯುವ ಸದಸ್ಯರ ಹಕ್ಕು ಮತ್ತು ಅವಕಾಶ ವಂಚಿಸಿದಂತಾಗುತ್ತದೆ. ಕಾರಣ ಸಚಿವರು ಸದನದಲ್ಲಿ ಹಾಜರಿರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಅಧಿವೇಶನ ವೇಳೆ ತಮ್ಮ ಕ್ಷೇತ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕಲಾಪದಿಂದ ವಿನಾಯಿತಿ ಕೋರಿ ಮನವಿ ಸಲ್ಲಿಸಬೇಡಿ. ಅಧಿವೇಶನದಲ್ಲಿ ಇಲಾಖೆ ಅಧಿಕಾರಿಗಳ ಪಾಲ್ಗೊಳ್ಳುವಿಕೆಯೂ ಅಷ್ಟೇ ಪ್ರಮುಖವಾಗಿದೆ. ಹೀಗಾಗಿ ಚರ್ಚೆ ವೇಳೆ ಸದನದಲ್ಲಿ ಅಧಿಕಾರಿಗಳ ಉಪಸ್ಥಿತಿ ಕುರಿತು ಮುಖ್ಯ ಕಾರ್ಯದರ್ಶಿಗಳು ಗಮನಹರಿಸಬೇಕೆಂದು ಹೊರಟ್ಟಿ ಸೂಚಿಸಿದ್ದಾರೆ.

    ಕಲಾಪದಲ್ಲಿ ಆಯಾ ದಿನದಲ್ಲಿ ಹಾಜರಾಗುವ ಸಚಿವರ ಹಾಗೂ ಅಧಿಕಾರಿಗಳ ಹೆಸರನ್ನು ಆಯಾ ಸದನ ಆರಂಭಗೊಳ್ಳುವಾಗಲೇ ಪ್ರಕಟಿಸಲಾಗುವುದು ಹಾಗೂ ಗೈರು ಹಾಜರಾದವರ ಮಾಹಿತಿಯನ್ನು ಸಂಬಂಧಿಸಿದವರಿಗೆ ಕಳುಹಿಸಿ ಕ್ರಮಕ್ಕೆ ಸೂಚಿಸಲಾಗುವುದು ಎಂದು ಹೊರಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಗುಹೆಯೊಳಗೆ ನೆಲೆಸಿರೋ ಕಲ್ಲು ಗಣಪತಿಗಿದೆ ನಾಲ್ಕು ಕೈ!

  • ಮೋದಿ, ಶಾ, ರಾಜ್ಯದ ಜನತೆ ಆಶೀರ್ವಾದ ಇರೋವರೆಗೆ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ: ಬಿಎಸ್‍ವೈ

    ಮೋದಿ, ಶಾ, ರಾಜ್ಯದ ಜನತೆ ಆಶೀರ್ವಾದ ಇರೋವರೆಗೆ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ: ಬಿಎಸ್‍ವೈ

    – ಸದನದಲ್ಲೇ ಯತ್ನಾಳ್‍ಗೆ ‘ರಾಜಾಹುಲಿ’ ಟಾಂಗ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

    ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ, ಕಳೆದ 6 ತಿಂಗಳಿನಿಂದ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ ಅಂತ ಬೆಳಗ್ಗೆ ಎದ್ದಾಗಿನಿಂದ ಹೇಳ್ತಿದ್ದೀರಿ. ಆದರೆ ಎಲ್ಲಿವರೆಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವರ ಶಾ ಅವರ ಬೆಂಬಲ ಹಾಗೂ ರಾಜ್ಯದ ಜನರ ಆಶೀರ್ವಾದ ಇದೆಯೋ ಅಲ್ಲಿಯವರೆಗೆ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

    ಈ ಇಬ್ಬರು ಇರುವವರೆಗೆ ನನ್ನ ಮೇಲೆ 100 ಕೇಸ್ ಹಾಕಿದರು ಕೂಡ ನಾನು ಹೆದರಲ್ಲ. ನಾನು ಪ್ರಾಮಾಣಿಕ ಅನ್ನೋದನ್ನ ಸಾಬೀತು ಮಾಡ್ತೀನಿ. ದಾರಿಯಲ್ಲಿ ಹೋಗುವವರೆಲ್ಲ ಆರ್‍ಟಿಐ ನಲ್ಲಿ ಅರ್ಜಿ ಹಾಕಿ ಕೇಸ್ ಹಾಕ್ತಾರೆ. ನಾವು ಮನಸ್ಸು ಮಾಡಿದರೆ ಎಷ್ಟು ಕೇಸ್ ಬೇಕಾದರು ಹಾಕಬಹುದು. ಆದರೆ ನಾವು ಹಾಗೆ ಮಾಡಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನ 150 ಸ್ಥಾನಗಳಲ್ಲಿ ಗೆಲ್ಲಿಸಿ ನಿಮ್ಮನ್ನ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿಕಾರಿದರು.

    ದೇವರ ದಯೆಯಿಂದ ಮುಂದೆ ಒಳ್ಳೆ ಕಾಲ ಬರುತ್ತೆ. ಎಲ್ಲರು ಸೇರಿ ರಾಜ್ಯದ ಅಭಿವೃದ್ಧಿ ಮಾಡಲು ಶ್ರಮ ವಹಿಸೋಣ. ಬರುವಂತ ದಿನಗಳಲ್ಲಿ ತೆರಿಗೆ ಸುಧಾರಣೆ ಕಾಣಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.

    ಇತ್ತ ಸಿಎಂ ಮಾತು ಮುಗಿಯುತ್ತಿದ್ದಂತೆ ಎದ್ದು ನಿಂತ ಯತ್ನಾಳ್, ಸಿಎಂ ವಿರುದ್ಧ ಮಾತನಾಡಲು ಆರಂಭಿಸಿದರು. ಸಿಎಂ ಅವರು ಹೋರಾಟಗಳ ಬಗ್ಗೆ ಹೇಳಿಕೆ ಕೊಡಲಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ಪಂಚಮಸಾಲಿ, ಹಾಲುಮತ ಸಮಾಜದ ಬಗ್ಗೆ ಏನ್ ಮಾಡ್ತೀರಿ. ಮಾತಾಡೋಕೆ ಅವಕಾಶ ನೀಡಲ್ಲ, ಆಮೇಲೆ ಸಭೆ ಮುಂದೂಡಿಕೆ ಮಾಡ್ತೀರಾ ಎಂದು ಯತ್ನಾಳ್ ಗರಂ ಆದರು. ಈ ವೇಳೆ ಸಿಎಂ, ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಜೊತೆ ಮಾತನಾಡಿ ತೀರ್ಮಾನ ಮಾಡಬೇಕು. 25 ಜನ ಸಂಸದರನ್ನ ಕರೆದುಕೊಂಡು ಹೋಗಿ ಕೇಂದ್ರ ನಾಯಕರ ಜೊತೆ ನೀವು ಮಾತಾಡಿ ಎಂದು ಯತ್ನಾಳ್‍ಗೆ ತಿರುಗೇಟು ನೀಡಿದರು.

  • ಅರಣ್ಯಕ್ಕೆ ಪತ್ನಿ ಜೊತೆಗೆ ಹೋಗ್ತೀರಾ – ಲಿಂಬಾವಳಿಗೆ ರಮೇಶ್ ಕುಮಾರ್ ಪ್ರಶ್ನೆ

    ಅರಣ್ಯಕ್ಕೆ ಪತ್ನಿ ಜೊತೆಗೆ ಹೋಗ್ತೀರಾ – ಲಿಂಬಾವಳಿಗೆ ರಮೇಶ್ ಕುಮಾರ್ ಪ್ರಶ್ನೆ

    ಬೆಂಗಳೂರು: ಅರಣ್ಯಕ್ಕೆ ಹೋಗುವಾಗ ಪತ್ನಿ ಜೊತೆಗೆ ಹೋಗುತ್ತೀರಾ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಚಿವ ಅರವಿಂದ ಲಿಂಬಾವಳಿಯನ್ನು ಪ್ರಶ್ನಿಸಿದ್ದಾರೆ.

    ವಿಧಾನಸಭಾ ಕಲಾಪದ ಶೂನ್ಯವೇಳೆಯಲ್ಲಿ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಉತ್ತರ ಕೊಡಲು ಮುಂದಾದಾಗ ರಮೇಶ್ ಕುಮಾರ್ ಮಧ್ಯಪ್ರವೇಶ ಮಾಡಿದರು.

    ಅರಣ್ಯಕ್ಕೆ ಪತ್ನಿ ಜೊತೆಗೆ ಹೋಗ್ತೀರಾ ಅಥವಾ ಒಬ್ಬನೇ ಹೋಗುತ್ತೀರಾ ಎಂದು ಪ್ರಶ್ನಿಸುವ ಮೂಲಕ ರಮೇಶ್ ಕುಮಾರ್, ಲಿಂಬಾವಳಿ ಕಾಳೆಲೆದಿದ್ದಾರೆ. ಇದಕ್ಕೆ ಉತ್ತರಿಸಿದ ಲಿಂಬಾವಳಿ, ಪತ್ನಿ ಸಮೇತ ಹೋಗಲ್ಲ, ನಾನೊಬ್ಬನೇ ಹೋಗುತ್ತೇನೆ. ಅರಣ್ಯ ಜೊತೆಗೆ ಕನ್ನಡ ಸಂಸ್ಕೃತಿ ಇಲಾಖೆ ನೀಡಿದ್ದಾರೆ. ಇದರಿಂದ ಕಾಡಿನ ಜೊತೆಗೆ ನಾಡಿಗೂ ಬರಬೇಕಾಗುತ್ತೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

  • ಇಂದು ‘ಸಭಾಪತಿ’ ಸಂಬಂಧ ಮೇಲ್ಮನೆ ಫೈಟ್- ಪ್ರತಾಪ್‍ಚಂದ್ರ ಶೆಟ್ಟಿ ಪದಚ್ಯುತಿನಾ..?

    ಇಂದು ‘ಸಭಾಪತಿ’ ಸಂಬಂಧ ಮೇಲ್ಮನೆ ಫೈಟ್- ಪ್ರತಾಪ್‍ಚಂದ್ರ ಶೆಟ್ಟಿ ಪದಚ್ಯುತಿನಾ..?

    ಬೆಂಗಳೂರು: ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದ ನಂತರ ಇದೇ ಮೊದಲ ಬಾರಿಗೆ ಕಲಾಪವನ್ನು ಮತ್ತೆ ನಡೆಸುವ ಮೂಲಕ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸ್ತಿದೆ.

    ಇಂದು ಕಲಾಪ ಆರಂಭವಾದ ಕೂಡಲೇ ಸಭಾಪತಿ ಪೀಠದಲ್ಲಿ ಉಪಸಭಾಪತಿ ಧರ್ಮೇಗೌಡರನ್ನು ಕೂರಿಸಲು ಬಿಜೆಪಿ ಪ್ಲಾನ್ ಮಾಡಿದೆ. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊದಲೇ ಬಂದು ಪೀಠದಲ್ಲಿ ಕುಳಿತರೆ ಪಕ್ಕದಲ್ಲೇ ಮತ್ತೊಂದು ಪೀಠ ಹಾಕಿ ಧರ್ಮೇಗೌಡರನ್ನು ಕೂರಿಸಲು ಸಹ ಪ್ಲಾನ್ ಮಾಡ್ಕೊಂಡಿದೆ.

    ಅವಿಶ್ವಾಸ ನೊಟೀಸ್ ಹಿನ್ನೆಲೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿಗೆ ಪೀಠದ ಮೇಲೆ ಕೂರೋದಕ್ಕೆ ಅವಕಾಶ ಕೊಡದೇ ಬಿಜೆಪಿ ಗದ್ದಲ ನಡೆಸುವ ಸಂಭವ ಇದೆ. ಸಭಾಪತಿ ಬದಲಾದಲ್ಲಿ ಗೋಹತ್ಯೆ ತಡೆ ಬಿಲ್‍ಗೆ ಅಂಗೀಕಾರ ಪಡೆಯಲು ಚಿಂತನೆ ನಡೆಸಿದೆ. ಸಭಾಪತಿ ವಿಚಾರದಲ್ಲಿ ಜೆಡಿಎಸ್ ಬೆಂಬಲ ಸಿಗುವ ವಿಶ್ವಾಸದಲ್ಲಿ ಬಿಜೆಪಿ ಇದೆ.

    ಸಭಾಪತಿ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ, ಸುಶೀಲ್ ನಮೋಶಿ, ಮಹಾಂತೇಶ ಕವಟಗಿಮಠ, ಅರುಣ್ ಶಹಾಪೂರ ಹೆಸರು ಕೇಳಿಬರ್ತಿವೆ.

  • ಯಾರಿಗೆ ಕೊರೊನಾ ಬಂದ್ರೂ ಸರವಣಗೆ ಬರಲ್ಲ: ಹೊರಟ್ಟಿ

    ಯಾರಿಗೆ ಕೊರೊನಾ ಬಂದ್ರೂ ಸರವಣಗೆ ಬರಲ್ಲ: ಹೊರಟ್ಟಿ

    – ಸರವಣ ಅವ್ರ ಆರೋಗ್ಯ ತಪಾಸಣೆ ಆಗ್ಲೇ ಬೇಕು

    ಬೆಂಗಳೂರು: ಕಲಾಪಕ್ಕೆ ಮಂಗಳವಾರ ಮಾಸ್ಕ್ ಹಾಕಿಕೊಂಡು ಬಂದ ಉದ್ದೇಶವನ್ನು ವಿಧಾನ ಪರಿಷತ್ ಸದಸ್ಯ ಸರವಣ ರಿವೀಲ್ ಮಾಡಿದ್ದಾರೆ.

    ಕಲಾಪದಲ್ಲಿ ಮಾತನಾಡಿದ ಅವರು, ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಿನ್ನೆ ಮಾಸ್ಕ್ ಹಾಕಿಕೊಂಡು ಕಲಾಪಕ್ಕೆ ಬಂದಿದ್ದೆ. ಆದರೆ ಕೆಲವರು ನಿಮಗೆ ಕೊರೊನಾ ಬಂದಿದೆಯಾ ಅಂತ ವಿಧಾನ ಪರಿಷತ್‍ನ ಕೆಲ ಸದಸ್ಯರು ರೇಗಿಸಿದರು ಎಂದು ಹೇಳಿದರು. ಆಗ ಬಸವರಾಜ ಹೊರಟ್ಟಿ ಅವರು, ಯಾರಿಗೆ ಕೊರೊನಾ ಬಂದರೂ ಸರವಣಗೆ ಬರಲ್ಲ ಬಿಡಿ ಎಂದು ಗೇಲಿ ಮಾಡಿದರು.

    ಈ ಮಧ್ಯೆ ಧ್ವನಿಗೂಡಿಸಿದ ತೇಜಸ್ವಿನಿ ರಮೇಶ್, ಸರವಣ ಅವರ ಆರೋಗ್ಯ ತಪಾಸಣೆ ಆಗಲೇ ಬೇಕು. ಅನುಮಾನ ನಿವಾರಣೆಯಾಗಲು ತಪಾಸಣೆ ಅಗತ್ಯ ಎಂದು ಹೇಳಿದರು. ಆಗ ಸರವಣ, ನಾನು ಆರೋಗ್ಯವಾಗಿದ್ದೇನೆ. ನೀವು ಕುಳಿತುಕೊಳ್ಳಿ ಎಂದರು.

    ರಾಜ್ಯದ ಜನರು ಕೊರೊನಾ ಬಗ್ಗೆ ಆತಂಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ ಎನ್ನುವುದನ್ನು ಚರ್ಚಿಸಲು ಮಾಸ್ಕ್ ಹಾಕಿಕೊಂಡು ಬಂದಿದ್ದೆ. ಆದರೆ ಸದನವನ್ನು ಗಲಾಟೆಗೆ ತಳ್ಳಿದ್ರಿ ಎಂದು ಹೇಳಿದರು.

    ಇದಕ್ಕೂ ಮುನ್ನ ಕೃಷಿ ಸಚಿವ ಬಿ.ಸಿ.ಪಾಟೀಲ್, ಕೊರೊನಾ ವೈರಸ್ ವಿವಿಧ ದೇಶಗಳಿಗೆ ಹರಡಿ ಆತಂಕ ಹೆಚ್ಚಿಸಿದೆ. ಅದು ವಿರೋಧ ಪಕ್ಷ, ಆಡಳಿತ ಪಕ್ಷ ಎಂದು ಭೇದಭಾವ ಮಾಡುವುದಿಲ್ಲ. ನಿಮಗೆ ಸ್ವಲ್ಪ ಜಾಸ್ತಿ ಇದೆ ಎಂದು ವಿಪಕ್ಷ ನಾಯಕ ಕಾಲೆಳೆದಿದ್ದರು.

    ಈ ಮಧ್ಯೆ ಎದ್ದು ನಿಂತ ಸಿ.ಸಿ.ಪಾಟೀಲ್ ಅವರು, ನಿನ್ನೆ ಪ್ರಭಾಕರ್ ಕೋರೆ ಅವರು ಸಿಕ್ಕಿದ್ರು. ಅವರಿಗೆ ಶೇಕ್‍ಹ್ಯಾಂಡ್ ಮಾಡೋದಕ್ಕೆ ಹೋದ್ರೆ ಅವರು, ಬೇಡ ಬೇಡ ಎಂದು ಹೋಗಿ ಬಿಟ್ಟರು. ಅದಕ್ಕೆ ನಾನು, ಯಾಕ್ರಿ ಎಂದು ಪ್ರಶ್ನಿಸಿದೆ. ಆಗ ಕೋರೆ, ಕೊರೊನಾ ಬಂದ್ರೆ ಏನ್ ಮಾಡ್ಲಿ ಅಂತ ಹೇಳಿದರು. ಹೀಗಾಗಿ ನಿಮಗೆ ಕೊರೊನಾ ಆಂತಕ ಹೆಚ್ಚಾಗಿದೆ ಎಂದು ಬಿ.ಸಿ.ಪಾಟೀಲ್ ಅವರಿಗೆ ಟಾಂಗ್ ಕೊಟ್ಟಿದ್ದರು.

  • ‘ಕೈ’ ಪಕ್ಷ ಬಿಟ್ಟೇವಿ, ಹಾಗಾಗಿ ಯಾರಿಗೂ ಕೈ ಕೊಡಲ್ಲ: ಬಿ.ಸಿ.ಪಾಟೀಲ್

    ‘ಕೈ’ ಪಕ್ಷ ಬಿಟ್ಟೇವಿ, ಹಾಗಾಗಿ ಯಾರಿಗೂ ಕೈ ಕೊಡಲ್ಲ: ಬಿ.ಸಿ.ಪಾಟೀಲ್

    – ಪರಿಷತ್ ಕಲಾಪದಲ್ಲೂ ಕೊರೊನಾ ಬಗ್ಗೆ ಬಿಸಿ ಬಿಸಿ ಚರ್ಚೆ

    ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಕೊರೊನಾ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯಿತು. ಈ ವಿಚಾರದಲ್ಲಿಯೂ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಪರಸ್ಪರ ಕಾಲೆಳೆದುಕೊಳ್ಳುವ ಕೆಲಸ ಮಾಡಿದರು.

    ಮಾತು ಆರಂಭಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಕೊರೊನಾ ವೈರಸ್ ವಿವಿಧ ದೇಶಗಳಿಗೆ ಹರಡಿ ಆತಂಕ ಹೆಚ್ಚಿಸಿದೆ. ಅದು ವಿರೋಧ ಪಕ್ಷ, ಆಡಳಿತ ಪಕ್ಷ ಎಂದು ಭೇದಭಾವ ಮಾಡುವುದಿಲ್ಲ. ಆದರೆ ನಿಮಗೆ ಸ್ವಲ್ಪ ಜಾಸ್ತಿ ಆತಂಕ ಇದೆ ಎಂದು ವಿಪಕ್ಷ ನಾಯಕರ ಕಾಲೆಳೆದರು.

    ಈ ಮಧ್ಯೆ ಎದ್ದು ನಿಂತ ಎಸ್.ಆರ್.ಪಾಟೀಲ್ ಅವರು, ನಿನ್ನೆ ಪ್ರಭಾಕರ್ ಕೋರೆ ಅವರು ಸಿಕ್ಕಿದ್ರು. ಅವರಿಗೆ ಶೇಕ್‍ಹ್ಯಾಂಡ್ ಮಾಡೋದಕ್ಕೆ ಹೋದ್ರೆ ಅವರು, ಬೇಡ ಬೇಡ ಎಂದು ಹೋಗಿ ಬಿಟ್ಟರು. ಅದಕ್ಕೆ ನಾನು, ಯಾಕ್ರಿ ಎಂದು ಪ್ರಶ್ನಿಸಿದೆ. ಆಗ ಕೋರೆ, ಕೊರೊನಾ ಬಂದ್ರೆ ಏನ್ ಮಾಡ್ಲಿ ಅಂತ ಹೇಳಿದರು. ಹೀಗಾಗಿ ನಿಮಗೆ ಕೊರೊನಾ ಆಂತಕ ಹೆಚ್ಚಾಗಿದೆ ಎಂದು ಬಿ.ಸಿ.ಪಾಟೀಲ್ ಅವರಿಗೆ ಟಾಂಗ್ ಕೊಟ್ಟರು.

    ಸಚಿವನಾದ ಬಳಿಕ ನಾನು ಸ್ವಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ಜನರು ಕೈಕುಲುಕಿ ಅಭಿನಂದನೆ ಸಲ್ಲಿಸಲು ಬರುತ್ತಿದ್ದರು. ಆದರೆ ನಾನು ಕೈಮುಗಿದು ಅವರನ್ನು ಮಾತನಾಡಿಸುತ್ತಿದ್ದೆ. ನನಗೆ ಕೊರೊನಾ ಭೀತಿ ಇತ್ತು. ಹೀಗಾಗಿ ಜನರು ತಪ್ಪು ತಿಳಿಯಬಾರದು ಎನ್ನುವ ಕಾರಣಕ್ಕೆ, ನಾನು ‘ಕೈ’ ಪಕ್ಷ ಬಿಟ್ಟಿದ್ದೇನೆ. ಹೀಗಾಗಿ ಕೈ ಕೊಡುವುದಿಲ್ಲ ಅಂತ ಹೇಳಿದ್ದೆ ಎಂದು ಸದನದಲ್ಲಿ ನಗೆ ಹರಿಸಿದರು.

    ಈ ವೇಳೆ ವಿಪಕ್ಷದ ಸದಸ್ಯರೊಬ್ಬರು ‘ಕೈ’ ಪಕ್ಷಕ್ಕೆ ಕೈಕೊಟ್ಟು ಹೋದೆ ಅಂತ ಹೇಳಿ ಎಂದು ಕಾಲೆಳೆದರು. ಆಗ ಬಿ.ಸಿ.ಪಾಟೀಲ್, ನಾನು ಕೈಕೊಟ್ಟು ಹೋಗಿಲ್ಲ. ರಾಜೀನಾಮೆ ಕೊಟ್ಟು, ಜನಾದೇಶ ಪಡೆದು ಬಂದಿದ್ದೇವೆ ಎಂದರು. ಈ ಮಧ್ಯೆ ಧ್ವನಿಗೂಡಿಸಿದ ತೇಜಸ್ವಿನಿ ರಮೇಶ್, ಕೈ ಬಿಟ್ಟವರು ಯಾಕೆ ಕೈ ಕೊಟ್ಟಿದ್ದರ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ಹೇಳಿದರು. ತಕ್ಷಣವೇ ಧ್ವನಿ ಏರಿಸಿದ ಬಿ.ಸಿ.ಪಾಟೀಲ್, ನೀವು ಯಾರಿಗೆ ಹೇಗೆ ಕೈಕೊಟ್ರಿ ಅಂತ ಯೋಚನೆ ಮಾಡಿ ಎಂದರು.

  • ವಿಧಾನಸಭೆಯಲ್ಲಿ ಪೌರತ್ವ, ಮಂಗ್ಳೂರು ಗದ್ದಲ- ಕಾಂಗ್ರೆಸ್, ಬಿಜೆಪಿ ಮಧ್ಯೆ ತುಕ್ಡೇ ತುಕ್ಡೇ ಗ್ಯಾಂಗ್ ವಾರ್

    ವಿಧಾನಸಭೆಯಲ್ಲಿ ಪೌರತ್ವ, ಮಂಗ್ಳೂರು ಗದ್ದಲ- ಕಾಂಗ್ರೆಸ್, ಬಿಜೆಪಿ ಮಧ್ಯೆ ತುಕ್ಡೇ ತುಕ್ಡೇ ಗ್ಯಾಂಗ್ ವಾರ್

    – ಹೌದೋ ಹುಲಿಯಾ-ರಾಜಾಹುಲಿ ಮಧ್ಯೆ ಬಿಗ್ ಫೈಟ್

    ಬೆಂಗಳೂರು: ಇಂದಿನ ವಿಧಾನಸಭೆ ಕಲಾಪದಲ್ಲಿ ನಿರೀಕ್ಷೆಯಂತೆಯೇ ಸಿಎಎ ವಿಚಾರ ಪ್ರತಿಧ್ವನಿಸಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ನಿಲುವಳಿ ಸೂಚನೆ ಮಂಡಿಸಿದರು. ಮಂಗಳೂರು ಗೋಲಿಬಾರ್ ಪ್ರಕರಣ, ಬೀದರ್‍ನ ಶಾಹೀನ್ ಪ್ರಕರಣ, ಮೈಸೂರಿನ ನಳಿನಿ ಪ್ರಕರಣ ಪ್ರಸ್ತಾಪಿಸಿದರು. ನೌಶೀನ್, ಜಲೀಲ್‍ನನ್ನು ಕೊಂದಿದ್ದು ಏಕೆ ಎಂದು ಪ್ರಶ್ನೆ ಮಾಡಿದರು.

    ಸಿಎಎ ವಿರೋಧಿಸಿದವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗುತ್ತಿದೆ, ಎಫ್‍ಐಆರ್ ದಾಖಲಿಸಲಾಗುತ್ತದೆ. ಪೊಲೀಸರು ಸರ್ಕಾರದ ಕೈಗೊಂಬೆ ಆಗಿದ್ದಾರೆ. ಸಿಎಎ ಸಂವಿಧಾನ ವಿರೋಧಿಯಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇದಕ್ಕೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನದ ವಿರುದ್ಧ ನಡೆದುಕೊಂಡವರು ನೀವು ಎಂದು ಗೃಹ ಸಚಿವ ಬೊಮ್ಮಾಯಿ ತಿರುಗೇಟು ನೀಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಅಂತ ಆರೋಪಿಸಿದರು.

    ಮೇಲ್ಮನೆಯಲ್ಲೂ ಮಂಗಳೂರು ಗೋಲಿಬಾರ್ ಸಂಬಂಧ ಗದ್ದಲ ನಡೆಯಿತು. ಗೋಲಿಬಾರ್ ನಲ್ಲಿ ಸತ್ತವರ ಮನೆಗೆ ಯಾಕೆ ಹೋಗಿಲ್ಲ ಎಂಬ ಐವಾನ್ ಡಿಸೋಜಾ ಪ್ರಶ್ನೆಗೆ ಉಗ್ರರ ಮನೆಗೆ ಹೋಗುವುಕ್ಕೆ ಆಗುತ್ತಾ ಅಂತ ರವಿಕುಮಾರ್ ಕೇಳಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಆಕ್ರೋಶ ಹೊರಹಾಕಿದರು. ಕ್ಷಮೆಗೆ ಪಟ್ಟು ಹಿಡಿದರು. ಇದಕ್ಕೆ ಮಣಿದ ರವಿಕುಮಾರ್, ನಾನು ಉಗ್ರ ಅಂದಿಲ್ಲ ಆದ್ರೂ ಕ್ಷಮೆ ಕೇಳ್ತೀನಿ ಎಂದರು.

    ತುಕ್ಡೇ ಗ್ಯಾಂಗ್:
    ಕಲಾಪದಲ್ಲಿ ಆಡಳಿತ-ವಿಪಕ್ಷಗಳ ನಡುವೆ ತುಕ್ಡೇ ತುಕ್ಡೇ ಫೈಟ್ ಸಖತ್ ಜೋರಾಗಿತ್ತು. ಸಿದ್ದರಾಮಯ್ಯ ಮಾತನಾಡುತ್ತಾ, ಭಾರತ ಮಾತೆಯನ್ನು ಬಿಜೆಪಿಯವರಿಗೆ ಗುತ್ತಿಗೆ ಕೊಟ್ಟಿಲ್ಲ. ದೇಶದ 135 ಕೋಟಿ ಜನ ಭಾರತ ಮಾತೆಯ ಮಕ್ಕಳು ಎಂದರು. ಇದಕ್ಕೆ ಕೂಡ್ಲೇ ತಿರುಗೇಟು ನೀಡಿದ ಸಚಿವ ಬಸವರಾಜ ಬೊಮ್ಮಾಯಿ, ನೀವು ತುಕ್ಡೇ ಗ್ಯಾಂಗ್ ಮಾಲೀಕರು ಎಂದು ಜರೆದರು. ಇದರಿಂದ ಸಿಟ್ಟಾದ ಕಾಂಗ್ರೆಸ್‍ನ ಪ್ರಿಯಾಂಕ್ ಖರ್ಗೆ, ನಾವ್ ತುಕ್ಡೇ ಗ್ಯಾಂಗ್ ಆಗಿದ್ದರೆ ನಮ್ಮನ್ನು ಬಂಧಿಸಿ ಅಂತ ಸವಾಲು ಹಾಕಿದರು. ಆಡಳಿತ ಮಾಡಿ ಅಂದ್ರೆ ಪಾಕಿಸ್ತಾನ ಅಂತೀರಿ. ನಿಮ್ಮ ಪ್ರಧಾನಿ ಪಾಕಿಸ್ತಾನದಲ್ಲಿ ಪುಗ್ಸಟ್ಟೆ ಬಿರಿಯಾನಿ ತಿಂದು ಬಂದವರು ಅಂತ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಸಹ ಸಿಟ್ಟಾದರು. ಮಸೂದ್ ಅಜರ್‍ನನ್ನು ಕಂದಹಾರ್‍ಗೆ ಬಿಟ್ಟು ಬಂದವರು ನೀವು. ನಿಮ್ಮಿಂದ ನಾವು ದೇಶ ಪ್ರೇಮದ ಪಾಠ ಕಲಿಯಬೇಕಾಗಿಲ್ಲ ಅಂತ ತಿವಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಸ್ಪೀಕರ್ ಕಾಗೇರಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

    ಸದನದಲ್ಲಿ ಹುಲಿಯಾ-ರಾಜಾಹುಲಿ ನಡುವಿನ ವಾಕ್ಸಮರ ಜೋರಾಗಿತ್ತು. ಕಾನೂನು ಸುವ್ಯವಸ್ಥೆ ಕುರಿತ ನಿಲುವಳಿ ಸೂಚನೆ ಮೇಲೆ ಚರ್ಚೆಗೆ ಈಗಲೇ ಅವಕಾಶ ಮಾಡಿಕೊಡಿ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಆದರೆ ನಾಳೆ ಮಧ್ಯಾಹ್ಮ 3 ಗಂಟೆಗೆ ನಿಯಮ 69ರ ಅಡಿ ಚರ್ಚೆ ನಡೆಸಲು ಸ್ಪೀಕರ್ ಅವಕಾಶ ನೀಡುವುದಾಗಿ ತಿಳಿಸಿದರು. ಇದಕ್ಕೆ ಸಿದ್ದರಾಮಯ್ಯ ಅವರು ಒಪ್ಪದೇ ಈ ರೀತಿಯಾದರೆ ನಾವು ಸದನಕ್ಕೆ ಯಾಕೆ ಬರ್ಬೇಕು. ನಿಮಗೆ ಇಷ್ಟ ಬಂದ ಹಾಗೆ ಮಾಡಿಕೊಳ್ಳಿ. ನಮ್ಮನ್ನು ಕರೆಯಲೇಬೇಡಿ ಅಂತ ಕೋಪದಿಂದ ನುಡಿದರು.

    ಈ ವೇಳೆ ಸಿಎಂ ಯಡಿಯೂರಪ್ಪ ಫುಲ್ ಗರಂ ಆದರು. ಸ್ಪೀಕರ್ ಕಾಗೇರಿ ಅವರಿಗೆ ನೀವು ಹೀಗೆ ಆದೇಶ ನೀಡಿ ಎಂದು ಸೂಚಿಸವಂತಿಲ್ಲ ಎಂದರು. ಇದೇ ವಿಚಾರವಾಗಿ ಅರ್ಧ ಗಂಟೆಕಾಲ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿ ನಡೆಯಿತು. ಆದರೆ ಚರ್ಚೆ ನಡೆಸಲು ಸ್ಪೀಕರ್ ಅವಕಾಶ ನೀಡಲಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿದರು. ಮಧ್ಯಾಹ್ನದ ಬಳಿಕ ಸ್ಪೀಕರ್ ಕೊಠಡಿಯಲ್ಲಿ ಸಂಧಾನ ನಡೆಯಿತು. ಬಳಿಕ ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಪಾಲ್ಗೊಂಡರು.

    ಬಳ್ಳಾರಿಯ ಮರಿಯಮ್ಮನ ಬಳಿ ನಡೆದ ಅಪಘಾತ ಪ್ರಕರಣ ಮೇಲ್ಮನೆಯಲ್ಲಿ ಸದ್ದು ಮಾಡಿದೆ. ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಎಸ್‍ಆರ್ ಪಾಟೀಲ್, ನಲ್ಪಾಡ್ ಕಾರು ಅಪಘಾತ ಪ್ರಕರಣದಲ್ಲಿ ಯಾವುದೇ ಜೀವ ಹಾನಿ ಆಗದಿದ್ರೂ, ಅದನ್ನು ವೈಭವೀಕರಣ ಮಾಡಲಾಯ್ತು. ಆದ್ರೆ, ಮಂತ್ರಿ ಮಗನೊಬ್ಬ ಅಪಘಾತ ಮಾಡಿ 2 ಸಾವುಗಳಿಗೆ ಕಾರಣನಾಗಿದ್ದಾನೆ. ಆದ್ರೂ ಮಂತ್ರಿಮಗನ ವಿರುದ್ಧ ಕೇಸ್ ದಾಖಲಿಸಿಲ್ಲ. ಇದು ದಪ್ಪ ಚರ್ಮದ ಸರ್ಕಾರ. ಇಂತಹ ಭಂಡ ಸರ್ಕಾರವನ್ನು ನನ್ನ ಜೀವನದಲ್ಲಿ ನೋಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.