ಕೀನ್ಯಾ: ಹೂಸು ವಾಸನೆ ತಾಳಲಾರದೆ ಕಲಾಪ ಮುಂದೂಡಿದ ವಿಚಿತ್ರ ಪ್ರಸಂಗವೊಂದು ಕಿನ್ಯಾದಲ್ಲಿ ನಡೆದಿದೆ.
ಕೀನ್ಯಾದ ಹೇಮಾ ಬೇ ಕೌಂಟಿ ಅಸೆಂಬ್ಲಿಯಲ್ಲಿ ಬುಧವಾರ ಕಲಾಪ ನಡೆದಿತ್ತು. ಈ ವೇಳೆ ಸದಸ್ಯರೊಬ್ಬರು ಹೂಸು ಬಿಟ್ಟಿದ್ದರಿಂದ ಭಾರೀ ದುರ್ವಾಸನೆ ಉಂಟಾಗಿತ್ತು. ಪರಿಣಾಮ ಕಲಾಪದಲ್ಲಿದ್ದ ಸದಸ್ಯರು ಹಾಗೂ ಸಿಬ್ಬಂದಿ ಪರದಾಡುವಂತಾಗಿತ್ತು. ಇದನ್ನೂ ಓದಿ: ಹೂಸಿನ ದುರ್ವಾಸನೆಯನ್ನು ಸುವಾಸನೆಯಾಗಿ ಮಾಡೋ ಮಾತ್ರೆ ಮಾರುಕಟ್ಟೆಗೆ ಎಂಟ್ರಿ
ಅಸೆಂಬ್ಲಿಯಲ್ಲಿ ದುರ್ವಾಸನೆ ಹರಡುತ್ತಿದ್ದಂತೆ ಅಸಮಾಧಾನ ಹೊರ ಹಾಕಿದ ಸ್ಪೀಕರ್ ಎಡ್ವಿನ್ ಕಾಕಾಚ್ ಅವರು, ನಮ್ಮ ಸದಸ್ಯದಲ್ಲಿ ಒಬ್ಬರು ಹೂಸು ಬಿಟ್ಟಿದ್ದಾರೆ. ಅವರು ಯಾರು ಅಂತ ನನಗೆ ಗೊತ್ತಿದೆ ಎಂದು ಹೇಳಿದರು.
ತಕ್ಷಣವೇ ಆರೋಪ ಎದುರಿಸಿದ ಸದಸ್ಯರೊಬ್ಬರು ಎದ್ದು ನಿಂತು, ನಾನು ಹೂಸು ಬಿಟ್ಟಿಲ್ಲ. ಸಹೋದ್ಯೋಗಿಗಳ ಮುಂದೆ ಅಂತಹ ಕೆಟ್ಟ ಕೆಲಸ ಮಾಡುವವನು ನಾನಲ್ಲ ಎಂದು ಸ್ಪಷ್ಟನೆ ನೀಡಿದರು.
ಸ್ಪೀಕರ್ ಎಡ್ವಿನ್ ಕಾಕಾಚ್ ಅವರು ಸಿಬ್ಬಂದಿಯನ್ನು ಕರೆದು ಏರ್ ಫ್ರೆಶನರ್, ವೆನಿಲ್ಲಾ ಅಥವಾ ಸ್ಟ್ರಾಬೆರಿ ಸುಗಂಧವನ್ನು ತಂದು ರೂಮ್‍ಗೆ ಸ್ಪೇಪ್ರೆ ಮಾಡಿ ಎಂದು ಸೂಚನೆ ನೀಡಿದರು. ಇದೇ ವೇಳೆ, ಇಂತಹ ದುರ್ವಾಸನೆಯಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿ, ಸದನವನ್ನು ಕೆಲ ಸಮಯ ಮುಂದೂದರು ಎಂದು ವರದಿಯಾಗಿದೆ.
ಹೂಸು ವಾಸನೆಗೆ ಕಲಾಪ ಮುಂದೂಡಿದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ಕಿನ್ಯಾ ಸಂಸತ್‍ಗೆ ಮಹಿಳಾ ಸದಸ್ಯರೊಬ್ಬರು ಮಗುವನ್ನು ಹೊತ್ತುಕೊಂಡು ಬಂದಿದ್ದರು. ಮಗುವನ್ನು ನೋಡಿದ ಸ್ಪೀಕರ್ ಅವರು ಮಗುವನ್ನು ಎತ್ತಿಕೊಂಡು ಕಲಾಪದಿಂದ ಹೊರ ಹೋಗುವಂತೆ ಸೂಚನೆ ನೀಡಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು.
ಬೆಂಗಳೂರು: ಟಿಪ್ಪು ಜಯಂತಿ ರದ್ದು ವಿರೋಧಿಸಿ ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸ್ಪೀಕರ್ ಕಾಗೇರಿ ಅವರು ಸದನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದ್ದಾರೆ.
ಕಲಾಪ ಆರಂಭಗೊಂಡ ಬಳಿಕ ಸಿಎಂ ಯಡಿಯೂರಪ್ಪ ಅವರು ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರ ಚುನಾವಣೆಗೆ ಪ್ರಸ್ತಾವ ಮಂಡಿಸಿದರು. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಆದರೆ ಅದನ್ನು ಲೆಕ್ಕಿಸದೇ ಬಿ.ಎಸ್.ಯಡಿಯೂರಪ್ಪ ಪ್ರಸ್ತಾವನೆ ಓದಿದರು. ಬಳಿಕ ನಾನು ಸಿದ್ಧಾರ್ಥ್ ಅವರ ಅಂತ್ಯಕ್ರಿಯೆಗೆ ಹೋಗಬೇಕಿದೆ. ಸದನದಿಂದ ಹೊರಡುತ್ತೇನೆ ಎಂದು ಸಿಎಂ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಲ್ಲಿ ಕೇಳಿಕೊಂಡರು.
ಬಿಎಸ್ ಯಡಿಯೂರಪ್ಪ ಅವರನ್ನು ಎದ್ದು ಹೋಗಲು ಬಿಡದ ಮಾಜಿ ಸಿಎಂ, ನಾನು ಮಾತನಾಡೋ ತನಕ ಹೋಗಬೇಡಿ. ಐದು ನಿಮಿಷ ಕುಳಿತುಕೊಳ್ಳಿ ಆಮೇಲೆ ಎದ್ದು ಹೋಗಿ ಎಂದು ಪಟ್ಟು ಹಿಡಿದರು. ಈ ವೇಳೆ ಬಿಜೆಪಿ ಸರ್ಕಾರದಿಂದ ಟಿಪ್ಪು ಜಯಂತಿ ರದ್ದು ವಿಚಾರವಾಗಿ ಸದನದಲ್ಲಿ ಗಲಾಟೆ ಆರಂಭವಾಯಿತು. ಮಾಜಿ ಸಿಎಂ ಮಾತು ಆರಂಭಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪ ಅವರು ಸದನದಿಂದ ಹೊರ ನಡೆದರು.
ಟಿಪ್ಪು ಜಯಂತಿ ರದ್ದು ವಿಚಾರವಾಗಿ ಕಾಂಗ್ರೆಸ್ ಸದಸ್ಯರಿಂದ ಆಕ್ಷೇಪ ಹಾಗೂ ವಿರೋಧದ ಮಧ್ಯೆಯೇ ಸಿಎಂ ಕಲಾಪದಿಂದ ಹೊರ ನಡೆದರು. ಈ ಮೂಲಕ ಉದ್ಯಮಿ ಸಿದ್ಧಾರ್ಥ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಚಿಕ್ಕಮಗಳೂರಿಗೆ ಹೊರಟರು. ಸಿಎಂ ಏಕಾಏಕಿ ಹೊರ ನಡೆದಿದ್ದರಿಂದ ಸದನದಲ್ಲಿ ಗದ್ದಲ ಆರಂಭವಾಯಿತು. ಆಗ ಸ್ಪೀಕರ್ ಅವರು ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದರು.
ಬೆಂಗಳೂರು: ನಿಮ್ಮ ಸರ್ಕಾರವನ್ನು ಬೀಳಿಸಲ್ಲ. ಹೀಗಾಗಿ ಯಾವುದೇ ಶಾಸಕರನ್ನು ರಾಜೀನಾಮೆ ಕೊಡಿಸಿ ಅವರನ್ನು ಬೀದಿಗೆ ತಂದು ನಿಲ್ಲಿಸಬೇಡಿ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಬಹುಮತ ಸಾಬೀತು ನಡೆಸುವುದಕ್ಕೂ ಮುನ್ನ ಮಾತನಾಡಿದ ಅವರು, ನೀವು ಇನ್ನು ತುಂಬಾ ಶಾಸಕರನ್ನು ರಾಜೀನಾಮೆ ಕೊಡಿಸುವುದಕ್ಕೆ ಸಿದ್ಧರಾಗಿದ್ದೀರಿ ಎನ್ನುವುದು ಗೊತ್ತಿದೆ. ನಮಗೆ ಮಾಹಿತಿ ಇದೆ. ಅದನ್ನು ದಯವಿಟ್ಟು ಸ್ವಲ್ಪ ಸಮಯ ನಿಲ್ಲಿಸಿ. ಅವರನ್ನು ಸ್ಥಾನ ಪಲ್ಲಟ ಮಾಡಿಸಿ ಬೀದಿಗೆ ನಿಲ್ಲಿಸಬೇಡಿ ಎಂದು ಬಿಜೆಪಿ ನಾಯಕರ ವಿರುದ್ಧ ಚಾಟಿ ಬೀಸಿದರು.
ರೈತರ ಸಾಲಮನ್ನಾ ವಿಚಾರವಾಗಿ ನೀವು ಬಾಯಿಗೆ ಬಂದಂತೆ ಮಾತನಾಡಿದರು. ಈಗ ಅಧಿಕಾರ ನಿಮ್ಮ ಕೈಯಲ್ಲಿದೆ. ದಾಖಲೆ ಸಮೇತ ಮಾಹಿತಿಯನ್ನು ಮುಂದಿನ ಅಧಿವೇಶನದಲ್ಲಿ ಇಡಿ. ಎಲ್ಲಿ ಲೋಪ ಆಗಿದೆ ಎನ್ನುವುದನ್ನು ಮೊದಲು ಹೇಳಿ. ಬಾಯಿ ಚಪಲಕ್ಕೆ ಮಾತಾನಾಡಬೇಡಿ ಎಂದು ಕಿಡಿಕಾರಿದರು.
ನಾನು ಹದಿನಾಲ್ಕು ತಿಂಗಳಲ್ಲಿ ಜನರಿಗೆ ಸ್ಪಂದನೆ ಕೊಟ್ಟಿದ್ದೇನೆ. ಸಾಲ ಮನ್ನಾದ ವಿಚಾರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮೈತ್ರಿ ಸರ್ಕಾರದ ಅಂತಿಮ ಹಂತದಲ್ಲಿ ಋಣಮುಕ್ತ ಕಾಯ್ದೆಗೆ ರಾಷ್ಟ್ರಪತಿಗಳಿಂದ ಅಂಕಿತ ಪಡೆದಿದ್ದೇವೆ. ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದು 5 ಗಂಟೆಯ ನಂತರ ಸಿಎಂ ಕಲಾಪದಲ್ಲಿ ಭಾಗಿಯಾಗಿದ್ದಾರೆ.
ಇಂದು ಸಂಜೆ 6 ಗಂಟೆಗೆ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಮುಗಿಸಬೇಕೆಂದು ಸ್ಪೀಕರ್ ರಮೇಶ್ ಕುಮಾರ್ ಈಗಾಗಲೇ ಸಮಯ ನಿಗದಿ ಮಾಡಿದ್ದಾರೆ. ಆದರೆ ಸಿಎಂ ಮಧ್ಯಾಹ್ನದವರೆಗೆ ವಿಧಾನಸೌಧಕ್ಕೆ ಬಂದಿರಲಿಲ್ಲ.
ಸ್ಪೀಕರ್ ರಮೇಶ್ ಕುಮಾರ್ ಅವರು ಭೋಜನ ವಿರಾಮ ನೀಡದೇ ಕಲಾಪ ನಡೆಸುತ್ತಿದ್ದರು. ಊಟಕ್ಕೆ ಹೋಗುಗುವರು ಹೋಗಿ. ಆದರೆ ಕಲಾಪ ಮಾತ್ರ ಯಾವುದೇ ಕಾರಣಕ್ಕೆ ಮುಂದೂಡುವುದಿಲ್ಲ ಎಂದು ಹೇಳಿದ್ದರು. ನಿರಂತರ ಚರ್ಚೆ ನಡೆಯುತ್ತಿದ್ದಾಗ ಮಧ್ಯಾಹ್ನ 3.15ರ ವೇಳೆಗೆ ಸಿಎಂ ವಿಧಾನಸೌಧಕ್ಕೆ ಆಗಮಿಸಿದರು.
ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸಭೆ ಕಲಾಪ ಶುರುವಾದಾಗ ಸಿಎಂ ತಾಜ್ ವೆಸ್ಟೆಂಡ್ ಹೋಟೆಲಿಗೆ ಹೋಗಿದ್ದರು. ಹೀಗಾಗಿ ವೆಸ್ಟೆಂಡ್ ಹೋಟೆಲಿಗೆ ಸದನದಿಂದ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. ಸ್ವಲ್ಪ ಸಮಯದವರೆಗೂ ಮಾತನಾಡಿ ಅವರು ಸದನಕ್ಕೆ ಮರಳಿದರು. ನಂತರ ಎಂ.ಬಿ ಪಾಟೀಲ್ ಕೂಡ ಸಿಎಂ ಭೇಟಿ ಮಾಡಿ 15 ನಿಮಿಷದಲ್ಲಿ ವಿಧಾನಸೌಧಕ್ಕೆ ಮರಳಿದ್ದರು.
ಬೆಳಗ್ಗೆ 10 ಗಂಟೆಗೆ ಸದನ ಆರಂಭಗೊಂಡಾಗ ಬಿಜೆಪಿ ಶಾಸಕರು ಸದನಕ್ಕೆ ಆಗಮಿಸಿದ್ದರೆ, ದೋಸ್ತಿ ಪಕ್ಷದ ಕೇವಲ 4 ಮಂದಿ ಶಾಸಕರು ಮಾತ್ರ ಹಾಜರಾಗಿದ್ದರು. ಇದನ್ನು ನೋಡಿ ಬಿಜೆಪಿ ಶಾಸಕರು ದೋಸ್ತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಬಿಜೆಪಿಯ ಈಶ್ವರಪ್ಪ ಮಾತನಾಡಿ, ವಿಶ್ವಾಸಮತಯಾಚನೆಗೆ ಸಿಎಂ ಅವರೇ ಇನ್ನೂ ಬಂದಿಲ್ಲ ಎಂದ ಮೇಲೆ ಬೇರೆ ಶಾಸಕರು ಯಾಕೆ ಬರುತ್ತಾರೆ? ಯಥಾ ರಾಜ ತಥಾ ಪ್ರಜಾ ಎನ್ನುವ ಹಾಗಿದೆ ಪರಿಸ್ಥಿತಿ. ನಾನು ಉಳಿದ ವಿಚಾರದ ಬಗ್ಗೆ ಮಾತನಾಡಲ್ಲ. ಈ ಸದನದ ಪಾವಿತ್ರ್ಯತೆಯನ್ನು ಕಾಪಾಡುವುದು ಎಲ್ಲರ ಕರ್ತವ್ಯ. ತಾವು ಸೂಚನೆ ಕೊಟ್ಟ ಸಮಯಕ್ಕೆ ಶಾಸಕರು ಇಲ್ಲಿ ಬಂದು ಕೂರಬೇಕಿತ್ತು. ಅದನ್ನು ಬಿಟ್ಟು ಮಧ್ಯಾಹ್ನ 3, 4 ಗಂಟೆ ಹೊತ್ತಿಗೆ ನಾವೇನು ಮಾತನಾಡಿಲ್ಲ, ನಮಗೆ ಅವಕಾಶ ಕೊಡಿ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ರಾಜ್ಯಪಾಲರು ನೀಡಿದ ಡೆಡ್‍ಲೈನ್ ಪಾಲಿಸದ ಸರ್ಕಾರ ಈಗ ಸ್ಪೀಕರ್ ನೀಡಿದ ಆದೇಶಕ್ಕೂ ಕ್ಯಾರೇ ಅಂದಿಲ್ಲ. ಬೆಳಗ್ಗೆ 10 ಗಂಟೆಗೆ ಕಲಾಪ ಆರಂಭಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದರೂ ದೋಸ್ತಿ ಶಾಸಕರು ಸರಿಯಾದ ಸಮಯಕ್ಕೆ ಹಾಜರಾಗದೇ ಸದನಕ್ಕೆ ಅಗೌರವ ತೋರಿಸಿದ್ದಾರೆ.
ಸ್ಪೀಕರ್ ನಿಗದಿಯಂತೆ ಬೆಳಗ್ಗೆ 10 ಗಂಟೆಗೆ ಸದನ ಆರಂಭಿಸಿದಾಗ ಬಿಜೆಪಿ ಶಾಸಕರು ಹಾಜರಾಗಿದ್ದರೆ ದೋಸ್ತಿ ಪಕ್ಷದ 6 ಮಂದಿ ಶಾಸಕರು ಮಾತ್ರ ಹಾಜರಾಗಿದ್ದರು. ಗೈರಾಗಿದ್ದನ್ನು ನೋಡಿ ಸ್ಪೀಕರ್ ಆಡಳಿತ ಪಕ್ಷದವರು ಈ ರೀತಿಯ ವರ್ತನೆ ತೋರುವುದು ಸರಿಯಲ್ಲ ಎಂದು ಕುಟುಕಿದರು.
10 ಗಂಟೆಯ ವೇಳೆಗೆ ಜೆಡಿಎಸ್, ಕಾಂಗ್ರೆಸ್ ಬಸ್ಸುಗಳು ರೆಸಾರ್ಟ್, ಹೋಟೆಲಿನಿಂದಲೇ ಹೊರಡಿರಲಿಲ್ಲ. ದೋಸ್ತಿ ನಾಯಕರು ಕಲಾಪಕ್ಕೆ ಹಾಜರಾಗದ ಕಾರಣ ಇದೂವರೆಗಿನ ಕಲಾಪದಲ್ಲಿ ಮೌನಕ್ಕೆ ಶರಣಾಗಿದ್ದ ಬಿಜೆಪಿ ನಾಯಕ ಈಶ್ವರಪ್ಪ ಗರಂ ಆಗಿ ಮಾತನಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಸ್ಪೀಕರ್ ರಮೇಶ್ ಕುಮಾರ್ ರೂಲಿಂಗ್ ಪಾರ್ಟಿಯವರೆ ಹೀಗೆ ಮಾಡಿದ್ರೆ ಹೇಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ನಿಮ್ಮವರಿಗೆ ಬರೋಕೆ ಹೇಳಿ ಎಂದು ಪ್ರಿಯಾಂಕ ಖರ್ಗೆಗೆ ಸೂಚಿಸಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೀವು ಈಗ ಸದನದಲ್ಲಿ ಬೆತ್ತಲಾಗಿದ್ದಿರಾ? ಸಿಎಂ ಎಲ್ಲಿ? ನಿಮಗೆ ಬಹುಮತ ಸಾಬೀತು ಮಾಡೋಕು ಆಗಲ್ಲ. ಕನಿಷ್ಟ ಸದನಕ್ಕಾದರೂ ಗೌರವ ನೀಡಿ ಎಂದು ಹೇಳಿ ಮೈತ್ರಿ ನಾಯಕರ ವಿರುದ್ಧ ಕಿಡಿಕಾರಿದರು.
ಆಗ ಸ್ಪೀಕರ್ ನಾನು ನಾನು 10.01ಕ್ಕೆ ಕುರ್ಚಿಯಲ್ಲಿ ಕುಳಿತಿದ್ದೇನೆ ಎಂದಾಗ ಪ್ರಿಯಾಂಕ್ ಖರ್ಗೆ ಕಲಾಪವನ್ನು 15 ನಿಮಿಷ ಮುಂದೆ ಹಾಕಿ ಎಂದು ಕೇಳಿಕೊಂಡರು. ಇದಕ್ಕೆ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮಾತನಾಡಿ, ನಿನ್ನೆ ರಾತ್ರಿ ತಡವಾಗಿ ಹೋಗಿದ್ದಾರೆ. ಪ್ರತಿ ಬಾರಿಯೂ 11 ಗಂಟೆಗೆ ಸದನ ಆರಂಭಗೊಳ್ಳುತಿತ್ತು. ಹೀಗಾಗಿ ಇಂದೂ 11 ಗಂಟೆಗೆ ಆರಂಭವಾಗಬಹುದು ಎಂದು ತಿಳಿದು ಗೈರಾಗಿದ್ದಾರೆ. ಎಲ್ಲ ಶಾಸಕರು ಈಗ ಹೊರಟಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸದನಕ್ಕೆ ಹಾಜರಾಗಲಿದ್ದಾರೆ ಎಂದು ವಿತ್ತಂಡವಾದವನ್ನು ಮುಂದಿಟ್ಟರು.
ಶುಕ್ರವಾರ ಕಲಾಪದಲ್ಲಿ ಸಿಎಂ ಮತ್ತು ಸಿದ್ದರಾಮಯ ಸೋಮವಾರ ವಿಶ್ವಾಸ ಮತಯಾಚನೆ ಮಾಡುವುದಾಗಿ ಹೇಳಿ ಈಗ ವಚನಭ್ರಷ್ಟರಾಗಿದ್ದಕ್ಕೆ ಈಗಾಗಲೇ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಈಗ ಸರಿಯಾದ ಸಮಯಕ್ಕೆ ಕಲಾಪಕ್ಕೆ ಬಾರದೇ ಗೈರಾಗುವ ಮೂಲಕ ದೋಸ್ತಿಗಳ ನಡೆ ಮತ್ತೆ ಟೀಕೆಗೆ ಗುರಿಯಾಗಿದೆ.
ಬೆಂಗಳೂರು: ವಿಶ್ವಾಸ ಮತಯಾಚನೆ ನಿರ್ಣಯದ ಮೇಲಿನ ಚರ್ಚೆ ನೆಪದಲ್ಲಿ ದೋಸ್ತಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ಹಾಗೂ ಕಾಲಹರಣ ತಂತ್ರ ಮುಂದುವರಿದಿದೆ. ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಾಪ ನಡೆದಿದೆ.
ವಿಶ್ವಾಸ ಮತಯಾಚನೆ ಮಾಡದೆ ಶುರುವಾದ ಕಲಾಪ ಬರೀ ಗದ್ದಲ, ಗಲಾಟೆಯಲ್ಲೇ ನಡೆದಿದೆ. ಸೋಮವಾರ ಬೆಳಗ್ಗೆ 11.30ಕ್ಕೆ ವಿಶ್ವಾಸಮತದ ಭರವಸೆ, ಮಧ್ಯಾಹ್ನ 12ಕ್ಕೆ ಆಪರೇಷನ್ ಕಮಲ, ಮಧ್ಯಾಹ್ನ 1 ಗಂಟೆ ಐಎಂಎ ಬಿರಿಯಾನಿ ಹೀಗೆ ಹಲವು ವಿಚಾರಗಳ ಚರ್ಚೆ ನಡೆಯುತ್ತಲೇ ಇತ್ತು. ಮಧ್ಯಾಹ್ನ 3.30ಕ್ಕೆ ಕಲಾಪ ಮುಂದೂಡಿಕೆಯ ತಂತ್ರ ಶುರುವಾಗಿದ್ದು, 5 ಗಂಟೆಯಾಗುತ್ತಿದ್ದಂತೆ ಬಿಜೆಪಿಯ ಜೆ.ಸಿ. ಮಾಧುಸ್ವಾಮಿ, ಸಭಾಧ್ಯಕ್ಷರು ನೀಡಿದ ಭರವಸೆಯನ್ನು ಇಂದಾದರೂ ಈಡೇರಿಸಿ ಎಂದು ಮನವಿ ಮಾಡಿದರು.
ಚರ್ಚೆ ಮಾಡಲು ಸಾಕಷ್ಟು ವಿಷಯಗಳಿವೆ, ಮೊದಲ ಬಾರಿಗೆ ಆಯ್ಕೆಯಾದ ನಮಗೂ ಅವಕಾಶ ಕೊಡಿ ಎಂದು ಪಟ್ಟು ಹಿಡಿದ ಕಾಂಗ್ರೆಸ್-ಜೆಡಿಎಸ್‍ನ ಶಾಸಕರು ಗದ್ದಲ ಎಬ್ಬಿಸಿದ್ದರು. ಅಲ್ಲದೇ ತಮ್ಮ ಆಸನಗಳನ್ನು ಬಿಟ್ಟು, ವಿಧಾನಸಭೆಯ ಸಭಾಂಗಣದ ಮೊದಲ ಆಸನಗಳ ಬಳಿ ಗಲಾಟೆ ಮಾಡತೊಡಗಿದರು. ಇದರಿಂದಾಗಿ ಸದನದಲ್ಲಿ ಕೋಲಾಹಲ ಉಂಟಾಗಿತ್ತು.
ಈ ವೇಳೆ ಸಭಾಧ್ಯಕ್ಷರ ಕೊಠಡಿಗೆ ತೆರಳಿದ ಸಿಎಂ, ಸಿದ್ದರಾಮಯ್ಯ ಹಾಗೂ ಸಚಿವರು ಕಲಾಪವನ್ನು ಮಂಗಳವಾರಕ್ಕೆ ಮುಂದೂಡುವಂತೆ ಮನವಿ ಮಾಡಿದರು. ಆದರೆ ಅದಕ್ಕೆ ಸಭಾಧ್ಯಕ್ಷರು ಒಪ್ಪಲಿಲ್ಲ. ಬದಲಿಗೆ 9 ಗಂಟೆಯ ಒಳಗಡೆ ನಾನೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಕೆವೊಡ್ಡಿದ್ದರು. ಮತ್ತೆ ಕಲಾಪ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರು ಮತ್ತೆ ಗಲಾಟೆ ಮಾಡಿದರು. ಆಗ ಎದ್ದು ನಿಂತ ಸಿಎಂ, ಮೈತ್ರಿ ಸದಸ್ಯರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಯಾರೊಬ್ಬರೂ ಅದಕ್ಕೆ ಸೊಪ್ಪು ಹಾಕಲಿಲ್ಲ. ಬಳಿಕ ಮಧ್ಯ ಪ್ರವೇಶಿಸಿದ ಸಿದ್ದರಾಮಯ್ಯ, ಎಲ್ಲರನ್ನೂ ಗದರಿ ತಮ್ಮ ಆಸನಗಳಲ್ಲಿ ಕೂರುವಂತೆ ಮಾಡಿದರು.
ಇಡೀ ರಾಜ್ಯದ ಜನರು ನಮ್ಮ ನಡವಳಿಕೆಗಳನ್ನು ನೋಡುತ್ತಿದ್ದಾರೆ. ಇನ್ನೂ ವಿಳಂಬ ಮಾಡುವುದು ಸರಿಯಲ್ಲ. ನಾನು ರಾತ್ರಿ 11 ಗಂಟೆಗೆಯವರೆಗೂ ಇಲ್ಲಿಯೇ ಕೂರುತ್ತೇನೆ. ಯಾರು ಬೇಕಾದರೂ ಚರ್ಚೆ ಮಾಡಿ. ಇವತ್ತೇ ವಿಶ್ವಾಸಮತದ ನಿರ್ಣಯದ ಪ್ರಕ್ರಿಯೆಯನ್ನು ಮುಗಿಸೋಣ ಎಂದು ಸ್ಪೀಕರ್ ಹೇಳಿದರು. ಸಿದ್ದರಾಮಯ್ಯನವರು ಎದ್ದು ನಿಂತು ಮಂಗಳವಾರ ಎಲ್ಲದ್ದಕ್ಕೂ ಅಂತ್ಯ ಹಾಡೋಣ ಎಂದಾಗ ಸ್ಪೀಕರ್ ಎಷ್ಟು ಗಂಟೆಯ ಒಳಗಡೆ ಮುಗಿಸುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಸಿದ್ದರಾಮಯ್ಯ ರಾತ್ರಿ 8 ಗಂಟೆ ಎಂದಾಗ ಸ್ಪೀಕರ್ ಇಷ್ಟು ಸಮಯ ನೀಡುವುದಿಲ್ಲ. ಸಂಜೆ 4 ಗಂಟೆಗೆ ಚರ್ಚೆ ಮುಗಿಯಬೇಕು ನಂತರ ಸಿಎಂ ಮಾತನಾಡಿ 6 ಗಂಟೆಗೆ ಎಲ್ಲ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿ ಕಲಾಪವನ್ನು ಮುಂದೂಡಿದರು.
ಒಟ್ಟಿನಲ್ಲಿ ಬೆಳಗ್ಗೆಯೂ ಭಾಷಣ, ಮಧ್ಯಾಹ್ನವೂ ಭಾಷಣ, ಮಧ್ಯರಾತ್ರಿಯವರೆಗೂ ಬರೀ ಭಾಷಣ ನಡೆದಿದ್ದು, ಮಿಡ್‍ನೈಟ್‍ವರೆಗೂ ಬರೀ ಮಾತಿನ ಸಮರದಲ್ಲಿ ಕಲಾಪ ಮುಗಿದು ಹೋಯಿತು.
ಬೆಂಗಳೂರು: ಪಕ್ಷದ ಎಲ್ಲಾ ಶಾಸಕರು ಫೆಬ್ರವರಿ 13 ಹಾಗೂ 14ರಂದು ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ.
ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರು ಇರಲೆಬೇಕು ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಅವರು ವಿಪ್‍ನಲ್ಲಿ ಜಾರಿಗೊಳಿಸಿದ್ದಾರೆ.
ಈ ಮೂಲಕ ಹಣಕಾಸು ವಿಧೇಯಕ ಮಂಡನೆ ವೇಳೆ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ಅತೃಪ್ತ ಶಾಸಕರು ಕಲಾಪಕ್ಕೆ ಹಾಜರಾಗದೇ ದೂರ ಉಳಿಯುತ್ತಿದ್ದಾರೆ. ಇದನ್ನೆ ಅಸ್ತ್ರವಾಗಿ ಪ್ರಯೋಗಿಸಿ ಹಣಕಾಸು ವಿಧೇಯಕಕ್ಕೆ ಬೆಂಬಲ ಸಿಗದಂತೆ ನೋಡಿಕೊಳ್ಳಲು ಬಿಜೆಪಿಯಿಂದ ಸಿದ್ಧತೆ ನಡೆದಿದೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಆಪರೇಷನ್ ಕಮಲ ಆಡಿಯೋ ಪ್ರಕರಣ ವಿಚಾರಣೆಯ ಕುರಿತು ಕಲಾಪದಲ್ಲಿ ಇಂದು ಆಡಳಿತ ಪಕ್ಷ ಹಾಗೂ ವಿಪಕ್ಷದ ಶಾಸಕರ ಮಧ್ಯೆ ವಾಗ್ದಾಳಿಯೇ ನಡೆಯಿತು. ಹೀಗಾಗಿ ಸದನವು ಸಂಜೆ 6.45ರವರೆಗೆ ನಡೆಯಬೇಕಾಯಿತು. ಆದರೂ ತನಿಖೆಯನ್ನು ಎಸ್‍ಐಟಿಗೆ ಒಪ್ಪಿಸಬೇಕೋ? ಅಥವಾ ಸದನ ಸಮಿತಿಗೆ ನೀಡಬೇಕು ಎನ್ನುವುದು ನಿರ್ಧಾರವಾಗಲಿಲ್ಲ. ಇದರಿಂದಾಗಿ ಕಲಾಪವನ್ನು ಬುಧವಾರ ಬೆಳಗ್ಗೆ 10.30ಕ್ಕೆ ಮುಂದೂಡಿದರು.
ಬೆಂಗಳೂರು: ನಾವು ಕೂಡ ಸನ್ಯಾಸಿಗಳಲ್ಲ ಎಂದು ತೋರಿಸಿಕೊಳ್ಳಲು ಮತ್ತು ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎದು ವಿಧಾನಸಭೆಯಲ್ಲಿ ಬಿಜೆಪಿ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಸದನದಲ್ಲಿ ಇಂದು ಬಿಜೆಪಿ ನಾಯಕರು ಆಡಿಯೋ ಬಗ್ಗೆ ಎಸ್‍ಐಟಿ ತನಿಖೆಗೆ ಒಪ್ಪಿಸುವುದನ್ನು ವಿರೋಧಿಸಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಂತದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿ ಸ್ಪೀಕರ್ ಅವರನ್ನು ಬೀದಿಗೆ ತಂದಿದ್ದಾರೆ ಎಂದು ಆರೋಪಿಸಿದರು. ಶೆಟ್ಟರ್ ಅವರ ಆರೋಪಕ್ಕೆ ತಕ್ಷಣ ತಿರುಗೇಟು ನೀಡಿದ ಸಿಎಂ ಅವರು, ಬಿಜೆಪಿ ನಾಯಕರು ಪದೇ ಪದೇ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದರು. ಅಲ್ಲದೇ ಸರ್ಕಾರ ಉರುಳಿದರೆ ನಾವೇನು ಸುಮ್ಮನೆ ಕೂರಲು ಸನ್ಯಾಸಿಗಳಲ್ಲ ಎಂದು ಹೇಳುತ್ತಿದ್ದರು. ಹಾಗೆಯೇ ನಾವು ಕೂಡ ಸನ್ಯಾಸಿಗಳು ಅಲ್ಲ. ನಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ನಾವು ಪ್ರತಿಕಾಗೋಷ್ಠಿ ನಡೆಸಿ ಈ ಆಡಿಯೋ ರೆಕಾರ್ಡ್ ಬಿಡುಗಡೆ ಮಾಡಿದ್ದೇವೆ ಅಷ್ಟೇ ಎಂದು ಎಚ್‍ಡಿಕೆ ಟಾಂಗ್ ನೀಡಿದರು.
ಇದೇ ವೇಳೆ ಏನೂ ತಪ್ಪು ಮಾಡಿಲ್ಲ ಅಂದರೆ ಬಿಜೆಪಿಯವರಿಗೆ ಭಯ ಏಕೆ ಎಂದು ಪ್ರಶ್ನಿಸಿದ ಸಿಎಂ ಕುಮಾರಸ್ವಾಮಿ ಅವರು, ಸತ್ಯವನ್ನ ಜನರಿಗೆ ತೋರಿಸಬೇಕಿತ್ತಲ್ವಾ? ಅದಕ್ಕೆ ಆಡಿಯೋ ನೀಡಿದೆ. ಸ್ಪೀಕರ್ ಹೆಸರನ್ನು ಬೀದಿಗೆ ತಂದಿದ್ದು ಯಾರು? ಎನ್ನುವುದನ್ನು ಅವರೇ ಯೋಚನೆ ಮಾಡಲಿ ಎಂದರು. ಅಲ್ಲದೇ ಶೆಟ್ಟರ್ ಅವರು ಫೋನ್ ಕದ್ದಾಲಿಕೆ ಆರೋಪ ನಿರಾಕರಿಸಿ, ನಾನು ಯಾರ ಫೋನ್ ಕದ್ದಾಲಿಕೆ ಮಾಡಿಲ್ಲ ಎಂದರು.
ಎರಡು ಪಕ್ಷಗಳ ನಾಯಕರಿಗೆ ತಿಳಿ ಹೇಳಿದ ಸ್ಪೀಕರ್ ಅವರು, ಸಿಎಂ ಕುಮಾರಸ್ವಾಮಿ ಅವರಿಗೆ ನಾಗನಗೌಡ ಮಗ ಕೇಳಿದ್ದರು. ಅದಕ್ಕೆ ಹೋಗು ಎಂದು ಹೇಳಿ, ರೆಕಾರ್ಡ್ ಮಾಡಿ ತಂದಿದ್ದಾರೆ. ರೆಕಾರ್ಡ್ ಕೈಗೆ ಬಂದು, ಸ್ಪೀಕರ್ ಅವರ ಹೆಸರು ಪ್ರಸ್ತಾಪ ಆದಾಗ ಅವರು ಹೇಳಲೇ ಬೇಕಾಗಿತ್ತು. ಒಂದೊಮ್ಮೆ ಅವರು ಸುಮ್ಮನಾಗಿ 3ನೇ ವ್ಯಕ್ತಿಯಿಂದ ನನಗೆ ಆಗ ವಿಚಾರ ತಿಳಿದಿದ್ದರೆ ಏನಾಗುತಿತ್ತು? ಆಗ ಸಿಎಂ ಕುಮಾರಸ್ವಾಮಿ ಅವರು ಅಪರಾಧಿ ಆಗುತ್ತಿದ್ದರು. ಆದ್ದರಿಂದ ಅವರು ನನಗೆ ಮಾಹಿತಿ ನೀಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಸಿಎಂ ಕುಮಾರಸ್ವಾಮಿ ಅವರ ಮಾತಿಗೆ ಮತ್ತೆ ಮಧ್ಯಪ್ರವೇಶ ಮಾಡಿದ ಶೆಟ್ಟರ್ ಅವರು, ಸಭಾಧ್ಯಕ್ಷರನ್ನೇ ಈಗ ಸನ್ಯಾಸಿ ಮಾಡಿದ್ದಾರೆ. ಸಭಾಧ್ಯಕ್ಷರ ಹೆಸರು ಬಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ. ಅವರು ಸುದ್ದಿಗೋಷ್ಠಿ ಮಾಡಿದ್ದೆ ಇಷ್ಟೆಲ್ಲಾ ನಡೆಯಲು ಕಾರಣ ಎಂದು ಆರೋಪಿಸಿದರು.
ಶೆಟ್ಟರ್ ಆರೋಪ: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಮಾಡಿರುವ ಕುರಿತು ಸಿಎಂ ಕುಮಾರಸ್ವಾಮಿ ಮೇಲೆಯೇ ಆರೋಪಗಳನ್ನು ಮಾಡಿದ ಶೆಟ್ಟರ್ ಅವರು, ಸಿಎಂ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ಆಡಿಯೋ ರೆಕಾರ್ಡ್ ಮಾಡಿಸಿಕೊಳ್ಳಲು ಕಳುಹಿಸಿದ್ದು ಅವರ ಮೊದಲನೇ ಅಪರಾಧ ಹಾಗೂ ಕಾನ್ಫರೆನ್ಸ್ ಕುಳಿತು ಕೇಳಿಸಿಕೊಂಡಿದ್ದು 2ನೇ ಅಪರಾಧ. ಈ ಬಗ್ಗೆ ನೇರ ಸ್ಪೀಕರ್ ಅವರಿಗೆ ದೂರು ನೀಡದೇ ಸುದ್ದಿಗೋಷ್ಠಿ ನಡೆಸಿದ್ದು ಮತ್ತೊಂದು ತಪ್ಪು. ಸ್ವತಃ ಸಿಎಂ ಅವರೇ ಶಾಸಕರೊಬ್ಬರಿಗೆ ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ಹೇಳಿ ಆರೋಪಗಳ ಸುರಿಮಳೆಗೈದರು.
– ನಮಗೆ ಗೌರವವಿಟ್ಟು, ಸದನ ಸಮಿತಿಗೆ ತನಿಖೆ ಒಪ್ಪಿಸಿ
– ಸ್ಪೀಕರ್‌ಗೆ ಹಣ ಕೊಡುವ ವಿಚಾರದ ಮಾತುಕತೆಯಲ್ಲಿ ನಾನಿಲ್ಲ
– ಬೇಕಾದಂತೆ ಆಡಿಯೋವನ್ನು ಸೃಷ್ಟಿಸಿದ್ದಾರೆ
ಬೆಂಗಳೂರು: ಬಿಜೆಪಿಯ 104 ಶಾಸಕರು ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆಗೆ ನೀಡುವುದನ್ನು ಒಪ್ಪುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ನಮಗೆ ಗೌರವ ನೀಡಿ ಸದನ ಸಮಿತಿಗೆ ತನಿಖೆ ಒಪ್ಪಿಸಬೇಕು ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ಸದನದಲ್ಲಿ ಮಾತನಾಡಿದ ಅವರು, ಯಾರೋ ಪಕ್ಷಕ್ಕೆ ಬರುವಂತೆ ಕರೆಯುತ್ತಿದ್ದಾರೆಂದು ಶರಣಗೌಡ ಹೇಳಿದಾಗ ಸಿಎಂ ಕುಮಾರಸ್ವಾಮಿ ಅವರು ಬೇಡವೆಂದು ಹೇಳಬೇಕಿತ್ತು. ಅದನ್ನು ಬಿಟ್ಟು ಶರಣಗೌಡನನ್ನು ಕಳುಹಿಸಿಕೊಟ್ಟು ರೆಕಾರ್ಡ್ ಮಾಡಿಸಿ, ಬೇಕಾದನ್ನು ತಿರುಚಿ ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿ.ಎಸ್.ಯಡಿಯೂರಪ್ಪ ಅವರ ಮಾತಿಗೆ ಆಡಳಿತ ಪಕ್ಷಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಹೊತ್ತು ಬಿಜೆಪಿ ಹಾಗೂ ಮೈತ್ರಿ ಸರ್ಕಾರದ ಶಾಸಕರು ವಾಗ್ದಾಳಿ ನಡೆಸಿದರು. ಬಳಿಕ ಮಾತು ಮುಂದುವರಿಸಿದ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಘಟಾನುಘಟಿಗಳ ಬಗ್ಗೆ ಹೇಳುತ್ತ ಪ್ರತಿಪಕ್ಷದ ಸದಸ್ಯರು ಇದ್ದರೆಂದು ಹೇಳಿದ್ದಾರೆ. ನಾನು ಇದ್ದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಅಂತ ಹೇಳಿದ್ದೆ. ಈಗಲೂ ನಾನು ಅದಕ್ಕೆ ಬದ್ಧನಾಗಿದ್ದೇನೆ. ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಹಣ ನೀಡುವ ವಿಚಾರವಾಗಿ ಮಾತನಾಡುವಾಗ ನಾನು ಇರಲಿಲ್ಲ. ಒಂದು ವೇಳೆ ಇದ್ದಿದ್ದರೆ ಈ ಕ್ಷಣವೇ ರಾಜೀನಾಮೆ ಕೊಡುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.
ನನಗೆ ಮೋಸ ಮಾಡಲು ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ನನ್ನ ಹತ್ತಿರ ಇರುವುದು ನಕಲಿ ಅಥವಾ ನಿಜವಾದ ಆಡಿಯೋ ಎನ್ನುವುದನ್ನು ತಿಳಿಯದೇ ಬಿಡುಗಡೆ ಮಾಡಿದ್ದು ಅಪರಾಧ. ಧ್ವನಿ ಸುರಳಿ 35 ನಿಮಿಷವಿದೆ. ಅದನ್ನು 2 ನಿಮಿಷಕ್ಕೆ ಇಳಿಸಿ ತಮಗೆ ಅನುಕೂಲವಾಗುವಂತೆ ಮಾಡಿ ರಾಜಕೀಯ ಷಡ್ಯಂತ್ರ ಮಾಡಿದ್ದಾರೆ. 50 ಕೋಟಿ ರೂ. ಕೊಡುವ ಸುದ್ದಿ ತಿಳಿದಾಗ ನೀವು ನೇರವಾಗಿ ಸ್ಪೀಕರ್ ಬಳಿ ಹೋಗಬೇಕಾಗಿತ್ತು. ಆ ರೀತಿ ಮಾಡಿದ್ದರೆ ದೇಶಾದ್ಯಂತ ಸುದ್ದಿಯಾಗುತ್ತಿರಲಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಅಸಮಾಧಾನವನ್ನು ಹೊರಹಾಕಿದರು.
ನಿಮ್ಮ ಉದ್ದೇಶವೇ ದುರುದ್ದೇಶದಿಂದ ಕೂಡಿದೆ. ನೀವು ಪ್ರಮಾಣಿಕವಾಗಿದ್ದರೆ ಸಂಪೂರ್ಣ ಆಡಿಯೋ ಬಿಡುಗಡೆ ಮಾಡಬೇಕಿತ್ತು. ಒಬ್ಬ ಸಿಎಂ ಆಗಿ, ರಾಜಕೀಯ ಕುತಂತ್ರ ಮಾಡುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಕುಮಾರಸ್ವಾಮಿ ವಿರುದ್ಧ ಗುಡುಗಿದರು.
ನಾನು 40 ವರ್ಷದಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಸಾಮಾನ್ಯ ಕುಟುಂಬದಿಂದ ಬಂದ ನಾನು ಸಿಎಂ, ಉಪಮುಖ್ಯಮಂತ್ರಿಯಾಗಿದ್ದೇನೆ ಎಂದ ಅವರು, ಮುಖ್ಯಮಂತ್ರಿ ಸ್ಥಾನವನ್ನು ಸ್ವಾರ್ಥಕ್ಕೆ ಬಳಸಿಕೊಂಡು, ದುರುದ್ದೇಶದಿಂದ ನಡೆದುಕೊಂಡಿದ್ದೀರಿ. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಕುಟುಕಿದರು.
ವಿಧಾನಸಭಾ ಚುನಾವಣೆ ಬಳಿಕ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚಿಸುವಾಗ ಕುಮಾರಸ್ವಾಮಿ ಅವರು ಸಿಎಂ ಆಗುವುದು ಬೇಡವೆಂದು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರೆಸಾರ್ಟ್ ನಲ್ಲಿ ಪಟ್ಟು ಹಿಡಿದಿದ್ದರು. ಈಗ ಅವರು ನಿಮ್ಮ ಆಡಳಿತಕ್ಕೆ ಬೇಸತ್ತು ಹೋಗಿದ್ದಾರೆ. ಇದಕ್ಕೆ ನಾವು ಜವಾಬ್ದಾರರಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಚಾಟಿ ಬೀಸಿದರು.
ನಾವು ಮಾತ್ರ ಸತ್ಯಹರಿಶ್ಚಂದ್ರರು ಎಂದು ಪೋಸ್ ಕೊಡುವುದಕ್ಕೆ ನಿಮಗೆ ಯಾವ ನೈತಿಕ ಹಕ್ಕಿದೆ? ಒಬ್ಬರನ್ನು ವಿಧಾನದ ಪರಿಷತ್ ಸದಸ್ಯನಾಗಿ ಮಾಡಲು ಕೋಟ್ಯಂತರ ರೂಪಾಯಿ ಕೇಳಿದ್ರಿ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ನಮ್ಮನ್ನ ನೀವು ಕೊಠಡಿಗೆ ಕರೆದು ಚರ್ಚೆ ಮಾಡಿದ್ದರೆ ಸದನದಲ್ಲಿ ಚರ್ಚೆ ಮಾಡುವ ಅವಕಾಶ ಇರುತ್ತಿರಲಿಲ್ಲ. ಈಗಲೂ ಕಾಲ ಮಿಂಚಿಲ್ಲ. ಮುಂದೆ ಏನು ಮಾಡಬೇಕೆಂದು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರನ್ನು ಕೊಠಡಿಗೆ ಕರೆದು ಚರ್ಚೆ ಮಾಡಿ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಲ್ಲಿ ಬಿಎಸ್‍ವೈ ಮನವಿ ಮಾಡಿಕೊಂಡರು.
ಬೆಂಗಳೂರು: ನನ್ನ ವಿರುದ್ಧ ಆರೋಪ ಬಂದರೆ ನಾನು ತನಿಖೆಗೆ ಸಹಕಾರ ಮಾಡುತ್ತೇನೆಯೇ ಹೊರತು ನಿಮ್ಮಂತೆ ಪಲಾಯನವಾದ ಮಾಡಲ್ಲ ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ಇಂದು ಕಲಾಪದಲ್ಲಿ ಮಾತನಾಡಿದ ಸಿಎಂ, ನಮ್ಮ ಶಾಸಕರನ್ನು ಬಿಜೆಪಿ ಸೇರುವಂತೆ ಕೇಳಿದ್ದು ಯಾಕೆ? ಶಾಸಕರನ್ನು ಕರೆದಿದ್ದಕ್ಕೆ ಹೋಗುವಂತೆ ಹೇಳಿದ್ದೆ. ಆದರೆ ಶಾಸಕರ ಪುತ್ರ ಬರುತ್ತಾರೆಂದು ಬಾಗಿಲು ತೆರೆದು ಕಾದಿದ್ದೇಕೆ ಎಂದು ಕುಟುಕಿದರು.
ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎನ್ನುತ್ತಾರೆ. ನಾನು ಎಂದೂ ದ್ವೇಷ ರಾಜಕಾರಣ ಮಾಡಿಲ್ಲ. ಸರ್ಕಾರದ ಮೇಲೆ ನಂಬಿಕೆಯಿಲ್ಲ, ವಿಶ್ವಾಸವಿಲ್ಲ ಎನ್ನುತ್ತಿದ್ದಾರೆ. ಈ ಹಿಂದೆ ಬಿಜೆಪಿಯವರ ಜತೆ ಸೇರಿ ಸರ್ಕಾರ ಮಾಡಿದ್ದೇನೆ. ಕೇವಲ 2 ತಿಂಗಳಲ್ಲಿ ನನ್ನ ವಿರುದ್ಧ 150 ಕೋಟಿ ರೂ. ಆರೋಪ ಮಾಡಿದ್ದರು. ಆಗಲೂ ನಾನು ಚಕಾರ ಎತ್ತಲಿಲ್ಲ. ಈಗ ನಮ್ಮ ಶಾಸಕರನ್ನು ಖರೀದಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯ ವಿಜುಗೌಡ ಪಾಟೀಲ್ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ನನ್ನ ಮನೆಯೊಳಗೆ ಪಕ್ಷದ ಕಾರ್ಯಕರ್ತರ ಜೊತೆ ನಡೆದಿದ್ದ ಚರ್ಚೆ ಅದು. ನನಗೆ ಹಣ ನೀಡಬೇಕೆಂದು ಕೇಳಿಕೊಂಡಿಲ್ಲ. ಆಪರೇಷನ್ ಕಮಲ ಆಡಿಯೋವನ್ನು ಸಿಡಿಗೆ ಯಾಕೆ ಹೋಲಿಕೆ ಮಾಡುತ್ತೀರಿ. 2014ರಿಂದ ಯಾಕೆ ತನಿಖೆ ಮಾಡಲಿಲ್ಲ. ಸಿಡಿ ಬಗ್ಗೆ ಚರ್ಚೆ ಮಾಡುವುದಾದರೆ ನಾನು ಸಿದ್ಧ, ತನಿಖೆಗೂ ಸಹಕಾರ ನೀಡುತ್ತೇನೆ ಎಂದು ಗುಡುಗಿದರು.
ಶಾಸಕರನ್ನು ಖರೀದಿ ಮಾಡಲು ಆರಂಭಿಸಿದ್ದು ಯಾರು? ಸಂಕ್ರಾಂತಿ, ಯುಗಾದಿ ಎಂದು ಗಡುವು ಕೊಟ್ಟಿದ್ದರು ಯಾರು ಎಂದು ಪ್ರಶ್ನಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಕುಟುಕಿದರು.
ನನ್ನ ಮೇಲೆ ನಂಬಿಕೆ ಇಲ್ಲವೆನ್ನುತ್ತಾರೆ. ನಮ್ಮ ಪಕ್ಷದ ಶಾಸಕರು ಮುಂಬೈನಲ್ಲಿದ್ದಾರೆ. ಅವರ ಪರಿಸ್ಥಿತಿ ಏನಾಗಿದೆ ಎನ್ನುವುದು ನನಗೆ ಗೊತ್ತಾಗಿದೆ. ಆದರೂ ನಾನು ಚರ್ಚೆ ಮಾಡಿಲ್ಲ. ನೀವು ಈ ದೇಶದ ವ್ಯವಸ್ಥೆಯನ್ನು ಹೇಗೆ ತೆಗೆದುಕೊಂಡು ಹೋಗುತ್ತಿದ್ದೀರಿ? ನೀವು ಇಷ್ಟ ಬಂದ ಹಾಗೆ ಮಾತನಾಡಬಹುದು. ನಾವು ಮಾತನಾಡುವ ಹಾಗಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಗುಡುಗಿದರು.
ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರನ್ನು ನಾನು ಬಿಜೆಪಿಯವರ ಬಳಿ ಕಳಿಸಿಲ್ಲ. ಬಿಜೆಪಿಯವರೇ 25 ಬಾರಿ ಶರಣಗೌಡ ಅವರಿಗೆ ಫೋನ್ ಮಾಡಿ ಒತ್ತಡ ಹಾಕಿ ಪಕ್ಷಕ್ಕೆ ಬರುವಂತೆ ಕೇಳಿದ್ದಾರೆ. ಈ ಕುರಿತು ಶರಣಗೌಡ ಅವರು ನನಗೆ ಫೋನ್ ಮಾಡಿ ತಿಳಿಸಿದ್ದಾರೆ. ಅದಕ್ಕೆ ನಾನು ಹೋಗಿ ಬಾ ಅಂತ ಹೇಳಿ ಕಳುಹಿಸಿದ್ದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.