Tag: ಕಲಾ ಕಾಲೇಜು

  • ಉಚಿತ ಲ್ಯಾಪ್‍ಟಾಪ್‍ಗಾಗಿ ನೂಕುನುಗ್ಗಲು – ಕಂಬಿ ಮುರಿದು ಕೆಳಗೆ ಬಿದ್ದ ವಿದ್ಯಾರ್ಥಿಗಳು

    ಉಚಿತ ಲ್ಯಾಪ್‍ಟಾಪ್‍ಗಾಗಿ ನೂಕುನುಗ್ಗಲು – ಕಂಬಿ ಮುರಿದು ಕೆಳಗೆ ಬಿದ್ದ ವಿದ್ಯಾರ್ಥಿಗಳು

    ಹಾಸನ: ಉಚಿತ ಲ್ಯಾಪ್‍ಟಾಪ್ ನೀಡುತ್ತಾರೆ ಎಂದು ವಿದ್ಯಾರ್ಥಿಗಳು ಆಗಮಿಸಿ, ನೂಕುನುಗ್ಗಲು ಉಂಟಾದ ಕಾರಣ ಸ್ಟೀಲ್ ಕಂಬಿ ಮುರಿದು ವಿದ್ಯಾರ್ಥಿಗಳು ಒಬ್ಬರ ಮೇಲೊಬ್ಬರು ಬಿದ್ದ ಘಟನೆ ಹಾಸನದ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದಿದೆ.

    ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಲ್ಯಾಪ್‍ಟಾಪ್ ಬಂದಿದೆ ಎಂದು ವಿದ್ಯಾರ್ಥಿಗಳು ಕಾಲೇಜಿನ ಬಳಿ ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಗಿದೆ. ಹಾಸನದಲ್ಲಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು ಇಂದು ಕೂಡ ಸುಮಾರು 325 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂತಹ ಸಮಯದಲ್ಲಿ ಕಾಲೇಜು ಆಡಳಿತ ಮಂಡಳಿ ಸಾಮಾಜಿಕ ಅಂತರದ ಬಗ್ಗೆ ಗಮನಹರಿಸದೇ ಇರುವುದು ಸಾರ್ವಜನಿಜರ ಟೀಕೆಗೆ ಕಾರಣವಾಗಿದೆ.

    ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದೆ ಲ್ಯಾಪ್‍ಟಾಪ್ ಹಂಚದಂತೆ ಸೂಚಿಸಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗಿದ್ದು ಅಲ್ಲಿಯೂ ಕಾಲೇಜು ಆಡಳಿತ ಮಂಡಳಿ ಸಾಮಾಜಿಕ ಅಂತರದ ಬಗ್ಗೆ ಗಮನ ಹರಿಸಿಲ್ಲ. ಪರಿಣಾಮ ವಿದ್ಯಾರ್ಥಿಗಳು ಒತ್ತೊತ್ತಾಗಿ ನಿಂತು ದಾಖಲಾತಿಗೆ ಮುಗಿಬಿದ್ದಿದ್ದಾರೆ.

  • ಹುಡುಗಿ ವಿಚಾರಕ್ಕೆ ಆರ್‍ಸಿ ಕಾಲೇಜಲ್ಲಿ ವಿದ್ಯಾರ್ಥಿಗಳ ಮಾರಾಮಾರಿ

    ಹುಡುಗಿ ವಿಚಾರಕ್ಕೆ ಆರ್‍ಸಿ ಕಾಲೇಜಲ್ಲಿ ವಿದ್ಯಾರ್ಥಿಗಳ ಮಾರಾಮಾರಿ

    ಬೆಂಗಳೂರು: ಹುಡುಗಿ ವಿಚಾರಕ್ಕೆ ನಗರದ ಚಾಲುಕ್ಯ ಸರ್ಕಲ್‍ನಲ್ಲಿರೋ ಆರ್.ಸಿ ಕಾಲೇಜ್‍ನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಜಗಳ ನಡೆದಿದೆ.

    ನಮ್ಮ ಕಾಲೇಜಿನ ಹುಡುಗಿಯನ್ನ ಚುಡಾಯಿಸಿದ್ದಾರೆ ಎಂದು ಆರೋಪಿಸಿ ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ಆರ್.ಸಿ ಕಾಲೇಜಿಗೆ ಬಂದಿದ್ದಾರೆ. ಈ ವೇಳೆ  ಕಲಾ ಕಾಲೇಜಿನ ವಿದ್ಯಾರ್ಥಿಗಳು ಆರ್‍ಸಿ ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಮುಂದಾಗಿದ್ರು. ಈ ವೇಳೆ ಮಾತಿಗೆ ಮಾತು ಬೆಳೆದು ಎರಡೂ ಕಾಲೇಜಿನ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.

    ಈ ಘಟನೆಯಲ್ಲಿ ಕಲಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು ಓರ್ವನ ತಲೆಗೆ ಗಂಭೀರ ಗಾಯವಾಗಿದೆ. ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.